Tag: Nitesh Patil

  • ಬೆಳಗಾವಿಗೆ ಮೂರು ದಿನ ಯಲ್ಲೋ ಅಲರ್ಟ್ – ತಹಶೀಲ್ದಾರ್ ಅಕೌಂಟ್‍ನಲ್ಲಿ ಹಣ ಇದೆ ಯಾವುದೇ ಸಮಸ್ಯೆ ಇಲ್ಲ: ಡಿ.ಸಿ ನಿತೇಶ್ ಪಾಟೀಲ್

    ಬೆಳಗಾವಿಗೆ ಮೂರು ದಿನ ಯಲ್ಲೋ ಅಲರ್ಟ್ – ತಹಶೀಲ್ದಾರ್ ಅಕೌಂಟ್‍ನಲ್ಲಿ ಹಣ ಇದೆ ಯಾವುದೇ ಸಮಸ್ಯೆ ಇಲ್ಲ: ಡಿ.ಸಿ ನಿತೇಶ್ ಪಾಟೀಲ್

    ಬೆಳಗಾವಿ: ಇನ್ನೂ ಮೂರ್ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ತಹಶೀಲ್ದಾರ್ ಅಕೌಂಟ್‍ನಲ್ಲಿ ಹಣ ಇದ್ದು ತುರ್ತು ಪರಿಹಾರಕ್ಕೂ ಯಾವುದೇ ಸಮಸ್ಯೆ ಇಲ್ಲ ಎಂದು ಡಿ.ಸಿ ನಿತೇಶ್ ಪಾಟೀಲ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಗೆ 69 ಸಾವಿರ ಕ್ಯೂಸೆಕ್‍ನಷ್ಟು ನೀರು ಹರಿದು ಬರುತ್ತಿದೆ. ಅದೇ ರೀತಿ ಆಲಮಟ್ಟಿ ಜಲಾಶಯಕ್ಕೆ ನೀರು ಹರಿದು ಹೋಗುತ್ತಿದೆ. ಮಹಾರಾಷ್ಟ್ರದ ಕೋಯ್ನಾ ಜಲಾಶಯದಲ್ಲಿ ಕೇವಲ ಶೇ. 22ರಷ್ಟು ನೀರು ಸಂಗ್ರಹವಾಗಿದೆ. ಕೋಯ್ನಾ ಅಥವಾ ಮಹಾರಾಷ್ಟ್ರದ ಯಾವುದೇ ಡ್ಯಾಂನಿಂದ ನೀರು ಬಿಡುತ್ತಿಲ್ಲ. ಮಳೆ ಎಷ್ಟು ಆಗಿದೆಯೋ ಆ ನೀರು ಮಾತ್ರ ಬರುತ್ತಿದೆ. ಹಿಡಕಲ್ ಜಲಾಶಯದಲ್ಲಿ ಕೇವಲ ಶೇ. 17.5ರಷ್ಟು ನೀರು ಸಂಗ್ರಹವಾಗಿದೆ. ನವಿಲುತೀರ್ಥ ಜಲಾಶಯದಲ್ಲಿ ಶೇ. 34ರಷ್ಟು ನೀರು ಸಂಗ್ರಹವಾಗಿದೆ. ಎಷ್ಟೇ ನೀರು ಒಳಹರಿವು ಬಂದರೂ ಡ್ಯಾಂಗಳಲ್ಲಿ ಸಂಗ್ರಹ ಸಾಮರ್ಥ್ಯ ಇದೆ. ಮಾರ್ಕಂಡೇಯ ಜಲಾಶಯದಲ್ಲೂ ಶೇ. 36ರಷ್ಟು ನೀರು ಸಂಗ್ರಹವಿದೆ. ಸದ್ಯದ ಮಟ್ಟಿಗೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲಿ ತುಂಬಾ ಮಳೆ ಬಂದ್ರೆ, ಡ್ಯಾಂನಿಂದ ನೀರು ಬಿಟ್ರೆ ಸಮಸ್ಯೆ ಆಗಬಹುದು ಎಂದರು. ಇದನ್ನೂ ಓದಿ:  ಮಳೆ ಅಬ್ಬರಕ್ಕೆ ತುಂಡಾದ ರಸ್ತೆ, ಕುಸಿಯುವ ಹಂತದಲ್ಲಿ ಮನೆ- ಮಲೆನಾಡಿಗರು ಹೈರಾಣು

    ಕರ್ನಾಟಕ, ಮಹಾರಾಷ್ಟ್ರ ನೀರಾವರಿ ಇಲಾಖೆ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 37 ಮನೆಗಳು ಭಾಗಶಃ ಹಾನಿಯಾಗಿವೆ. ಖಾನಾಪುರ ತಾಲೂಕಿನಲ್ಲಿ ಒಂದು ಶಾಲೆಗೆ ಹಾನಿಯಾಗಿದೆ. ಎರಡು ಹೆಕ್ಟೇರ್ ಪ್ರದೇಶದಲ್ಲಿ ಬಾಳೆಹಣ್ಣು, ತರಕಾರಿ ಬೆಳೆ ನಾಶವಾಗಿದೆ. ಸಿಎಂ ಸಹ ಎಲ್ಲರಿಗೂ ಅಲರ್ಟ್ ಆಗಲು ಹೇಳಿದ್ದಾರೆ. ಈಗಾಗಲೇ ಎನ್‍ಡಿಆರ್‌ಎಫ್, ಎಸ್‍ಡಿಆರ್‌ಎಫ್ ತಂಡ ನಮ್ಮಲ್ಲಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆ ಹೆಚ್ಚಾದರೆ ಸಮಸ್ಯೆ ಆಗುತ್ತದೆ. ಹೋದ ವರ್ಷಕ್ಕೆ ಹೋಲಿಸಿದರೆ ಶೇ. 50ರಷ್ಟು ಡ್ಯಾಂ ಸ್ಟೋರೇಜ್ ಇದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಅಮರನಾಥ ಮೇಘಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ, 40 ಮಂದಿ ನಾಪತ್ತೆ – ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

    Live Tv
    [brid partner=56869869 player=32851 video=960834 autoplay=true]

  • ಸುವರ್ಣಸೌಧದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆ ತಕ್ಷಣದಿಂದಲೇ ಕೆಲಸಕ್ಕೆ ಹಾಜರಾಗುವಂತೆ ಆದೇಶ

    ಸುವರ್ಣಸೌಧದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆ ತಕ್ಷಣದಿಂದಲೇ ಕೆಲಸಕ್ಕೆ ಹಾಜರಾಗುವಂತೆ ಆದೇಶ

    ಬೆಳಗಾವಿ: ಸುವರ್ಣಸೌಧ ಮುಂಭಾಗದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆಯನ್ನು ತಕ್ಷಣದಿಂದಲೇ ಕೆಲಸಕ್ಕೆ ಹಾಜರಾಗಲು ನಿರ್ದೇಶನ ನೀಡಲಾಗಿದೆ ಎಂದು ನಗರದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾವಿಗೆ ಒಣಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ವಹಣೆ ಒದಗಿಸಿಕೊಂಡಿದ್ದ ಗುತ್ತಿಗೆದಾರನಿಗೆ ನೋಟಿಸ್ ನೀಡಲಾಗಿತ್ತು. ಗುತ್ತಿಗೆದಾರ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಲ್ಲಮ್ಮ ಸುವರ್ಣಸೌಧದಲ್ಲಿ ಶಾವಿಗೆ ಒಣಹಾಕಿದ್ದರು. ಆದರೆ ಶಾವಿಗೆ ಒಣಹಾಕಿದ್ದ ಮಹಿಳೆಯನ್ನು ಕೆಲಸದಿಂದ ತೆಗೆದು ಹಾಕಿರಲಿಲ್ಲ, ಬೇರೆ ಸ್ಥಳಕ್ಕೆ ಕೆಲಸ ಮಾಡಲು ನಿಯೋಜಿಸಲಾಗಿತ್ತಷ್ಟೇ ಎಂದರು.

    ಇದಲ್ಲದೇ ನಾನು ಕೂಡ ಸುವರ್ಣಸೌಧಕ್ಕೆ ಭೇಟಿ ನೀಡಿ ಸಂಬಳ ಕಟ್ ಮಾಡಬಾರದು. ಯಾರನ್ನು ಕೆಲಸದಿಂದ ತೆಗೆದುಹಾಕಬಾರದು ಅಂತಾ ಹೇಳಿದ್ದೆ. ಇನ್ನೂ ಬೇರೆ ಸ್ಥಳಕ್ಕೆ ಕೆಲಸ ಮಾಡಲು ಮಲ್ಲಮ್ಮಗೆ ತಿಳಿಸಲಾಗಿತ್ತು. ಆದರೆ ಬೇರೆ ಸ್ಥಳದಲ್ಲಿ ಕೆಲಸ ಮಾಡೋದಕ್ಕೆ ಮಹಿಳೆಗೆ ದೂರ ಆಗುವುದರಿಂದ ಸಾಕಷ್ಟು ಸಮಸ್ಯೆ ಆಗುತ್ತೆ ಅಂತಾ ಕೆಲ ಮಾಧ್ಯಮದವರು ಗಮನಕ್ಕೆ ತಂದರು. ಹೀಗಾಗಿ ತಕ್ಷಣದಿಂದಲೇ ಸುವರ್ಣ ಸೌಧದಲ್ಲಿ ಕೆಲಸ ಮಾಡಲು ನಿರ್ದೇಶನ ನೀಡಲಾಗಿದೆ. ಇಂದು ಅಥವಾ ನಾಳೆ ಕೆಲಸಕ್ಕೆ ಹಾಜರಾಗಬಹುದು. ಅವರಿಗೆ ಯಾವುದೇ ಸಂಬಳ ಕಟ್ ಮಾಡುವುದಿಲ್ಲ ಎಂದರು.

    ಮನೆ ನಿರ್ಮಾಣ ವಿಚಾರವಾಗಿ ಮಾತನಾಡಿ, ಮೂಲತಃ ಖಾನಾಪೂರದ ತಾಲೂಕಿನ ಮಲ್ಲಮ್ಮಳಿಗೆ ಪತಿ ಮರಣ ಹೊಂದಿದ್ದಾರೆ. ಹೀಗಾಗಿ ಸದ್ಯ ತಮ್ಮ ಸಂಬಂಧಿಕರ ಮನೆಯಾಗಿರುವ ಕೊಂಡಸಕೊಪ್ಪ ಗ್ರಾಮದಲ್ಲಿ ಇದ್ದಾರೆ. ಮಲ್ಲಮ್ಮಗೆ ಮನೆ ಕೊಡೊದಕ್ಕೆ ಬೇಡಿಕೆ ಬಂದಿದೆ. ಈ ಬಗ್ಗೆ ಜಿಪಂ ಸಿಇಓ ಜೊತೆಗೆ ಚರ್ಚೆ ಮಾಡಿದ್ದೇನೆ. ಬಸ್ತವಾಡ ಗ್ರಾಮದಲ್ಲಿ ಜಾಗ ಇದೆ. ಅವರು ಒಪ್ಪಿದರೆ ಜಾಗ ಕೊಡುತ್ತೇವೆ. ಬಸವ ವಸತಿ ಇಲ್ಲವೇ ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಕೊಡುತ್ತೇವೆ ಎಂದರು.

  • ಧಾರವಾಡ ನೂತನ ಡಿಸಿಯಾಗಿ ನಿತೇಶ್ ಪಾಟೀಲ್ ಅಧಿಕಾರ ಸ್ವೀಕಾರ

    ಧಾರವಾಡ ನೂತನ ಡಿಸಿಯಾಗಿ ನಿತೇಶ್ ಪಾಟೀಲ್ ಅಧಿಕಾರ ಸ್ವೀಕಾರ

    – ಜಿಲ್ಲಾಧಿಕಾರಿ ವರ್ಗಾವಣೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

    ಧಾರವಾಡ: ಕೊರೊನಾ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ವರ್ಗಾವಣೆಯಾಗಿದೆ. ದೀಪಾ ಚೋಳನ್ ಅವರು ಕಳೆದ ಎರಡು ವರ್ಷಗಳಿಂದ ಧಾರವಾಡ ಜಿಲ್ಲಾಧಿಕಾರಿಗಳಾಗಿದ್ದರು. ರಾಜ್ಯ ಸರ್ಕಾರ ದೀಪಾ ಚೋಳನ್ ಅವರನ್ನು ಸರ್ವ ಶಿಕ್ಷಣ ಅಭಿಯಾದ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ.

    ಧಾರವಾಡ ನೂತನ ಜಿಲ್ಲಾಧಿಕಾರಿಗಳಾಗಿ ನಿತೇಶ್ ಪಾಟೀಲ್ ಅವರು ಇವತ್ತು ಅಧಿಕಾರ ವಹಿಸಿಕೊಂಡರು. ಇತ್ತ ಕೊರೊನಾ ದಿನೇ ದಿನೇ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ನಾವು ತಡೆಯುವ ಕೆಲಸ ಮಾಡಲಿದ್ದೇವೆ ಎಂದು ನೂತನ ಜಿಲ್ಲಾಧಿಕಾರಿ ಹೇಳಿದರು.

    ಧಾರವಾಡ ಜಿಲ್ಲೆಯ ಅಧಿಕಾರಿಗಳ ತಂಡ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಇಲ್ಲಿಯ ಜನರು ಕೂಡಾ ಅಧಿಕಾರಿಗಳ ಕಾರ್ಯಕ್ಕೆ ಸಹಕಾರಿಯಾಗಿದ್ದು, ಅಧಿಕಾರಿಗಳ ಜೊತೆ ಸಭೆ ಮಾಡಿ ಮಾಹಿತಿ ಪಡೆದು ಕೊರೊನಾ ತಡೆಯುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು. ಮತ್ತೊಂದು ಕಡೆ ದೀಪಾ ಚೋಳನ್ ಅವರನ್ನ ವರ್ಗಾವಣೆ ಮಾಡಿದ್ದಕ್ಕೆ ಧಾರವಾಡ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಕೂಡಾ ನಡೆಸಿದ ಘಟನೆ ನಡೆಯಿತು.ಧಾರವಾಡ, ಪಬ್ಲಿಕ್ ಟಿವಿ, ಕೊರೊನಾ, ದೀಪಾ ಚೋಳನ್, ನಿತೇಶ ಪಾಟೀಲ