Tag: Nithin Gadkari

  • ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ – ಸೋಮವಾರ ಸಿಗಂದೂರು ಸೇತುವೆ ಲೋಕಾರ್ಪಣೆ

    ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ – ಸೋಮವಾರ ಸಿಗಂದೂರು ಸೇತುವೆ ಲೋಕಾರ್ಪಣೆ

    – ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ

    ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ (Shivamogga) ಜಿಲ್ಲೆಗೆ ಮತ್ತೊಂದು ಪ್ರವಾಸಿ ತಾಣದ ಮುಕಟವೊಂದು ಸೇರ್ಪಡೆಯಾಗಲಿದ್ದು, ಸೋಮವಾರ (ಜು. 14) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ (Nithin Gadkari) ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಲಿದ್ದಾರೆ.

     ಶಿವಮೊಗ್ಗ ಎಂದಾಕ್ಷಣ ಥಟ್ಟನೆ ನೆನಪಾಗೋದು ವಿಶ್ವ ವಿಖ್ಯಾತ ಜೋಗ ಜಲಪಾತ, ಕುವೆಂಪು ಕವಿ ಮನೆ, ಸಕ್ರೈಬೈಲು ಆನೆ ಬಿಡಾರ, ನಿಸರ್ಗ ತಾಣ ಆಗುಂಬೆ. ಹೀಗೆ ಹತ್ತಾರು ಪ್ರವಾಸಿ ತಾಣಗಳನ್ನ ತನ್ನ ಮಡಿಲಿನಲ್ಲಿ ಇಟ್ಟುಕೊಂಡಿರುವ ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ ಸೇರ್ಪಡೆಗೊಳ್ಳುತ್ತಿದೆ. ಅದೇ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣ ಆಗಿರುವ ಸಿಗಂದೂರಿನ ಹೊಸ ಸೇತುವೆ (Sigandur Bridge). ಇದನ್ನೂ ಓದಿ: ಲೈಂಗಿಕ ಬಯಕೆ ತೀರಿಸುವಂತೆ ಕಾಲೇಜು HODಯಿಂದ ಕಿರುಕುಳ – ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

    ಶರಾವತಿ ಹಿನ್ನೀರು ಪ್ರದೇಶಗಳಾದ ಕರೂರು ಬಾರಂಗಿ ಹೋಬಳಿಯ ನಾಲ್ಕು ಗ್ರಾಮ ಪಂಚಾತಿ ವ್ಯಾಪ್ತಿಯ ಜನರಿಗೆ ಹಾಗೂ ಪ್ರಸಿದ್ಧ ಸಿಗಂದೂರು, ಕೊಲ್ಲೂರು ದೇವಾಲಯಕ್ಕೆ ಸಂಪರ್ಕಕ್ಕಾಗಿ ಲಾಂಚ್ ಒಂದೇ ಆಧಾರವಾಗಿತ್ತು. ಹೀಗಾಗಿ ಕಳೆದ ಹಲವು ದಶಕಗಳಿಂದ ಈ ಭಾಗದ ಜನರು ಕಳಸವಳ್ಳಿ- ಅಂಬಾರಗೋಡ್ಲು- ಸಿಗಂದೂರು ಸೇತುವೆ ಮಾಡುವಂತೆ ಒತ್ತಾಯಿಸುತ್ತಿದ್ದರು. ಇದನ್ನೂ ಓದಿ: ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಸೇಲ್ಸ್ ಎಕ್ಸಿಕ್ಯೂಟಿವ್ ಸಾವು

    ಹೀಗಾಗಿ 2019ರಲ್ಲಿ ಕೇಬಲ್ ಸೇತುವೆ ಕಾಮಗಾರಿ ಪ್ರಾರಂಭವಾಗಿತ್ತು. ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು 450 ಕೋಟಿ ರೂ. ವೆಚ್ಚದ ಕಾಮಗಾರಿಯ ಉದ್ಘಾಟನೆಯನ್ನು ಮಾಡಿದ್ದರು. 2020ರ ಡಿಸೆಂಬರ್‌ನಲ್ಲಿ ಪ್ರಾರಂಭವಾಗಿದ್ದ ಕಾಮಗಾರಿಯು ಅಂತ್ಯಗೊAಡಿದ್ದು, ನಾಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

    ಈ ಸೇತುವೆಯು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರು ಮತ್ತು ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸಲಿದೆ. 2.24 ಕಿ.ಮೀ ಉದ್ದದ ದೇಶದಲ್ಲೇ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಇದಾಗಿದೆ. ಈ ಸೇತುವೆಯ ಸುಮಾರು 2.24ಕಿ.ಮೀ. ಉದ್ದ ಹಾಗೂ 16 ಮೀಟರ್ ಅಗಲವನ್ನು ಹೊಂದಿದೆ. 740 ಮೀ. ಕೇಬಲ್‌ನ ಆಧಾರದ ಮೇಲೆ ನಿಂತಿರುವ ಸೇತುವೆ ಇದಾಗಿದೆ.

    ಶರಾವತಿ ಹಿನ್ನೀರು ಭಾಗದ ಜನರ ಕನಸು ಒಂದೆಡೆ ನನಸಾದ್ರೆ, ಮತ್ತೊಂದೆಡೆ ಮಲೆನಾಡು ಶಿವಮೊಗ್ಗ ಪ್ರವಾಸೋದ್ಯಮಕ್ಕೆ ಈ ಕೇಬಲ್ ಆಧಾರಿತ ಸೇತುವೆ ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ.

  • 900 ಕೋಟಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರದ ಸಮ್ಮತಿ

    900 ಕೋಟಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರದ ಸಮ್ಮತಿ

    -ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ

    ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಆದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumarswamy) ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

    ಸಂಸತ್ ಭವನದಲ್ಲಿರುವ ಗಡ್ಕರಿ ಅವರ ಕಚೇರಿಗೆ ತೆರಳಿ ಭೇಟಿಯಾದ ಕುಮಾರಸ್ವಾಮಿ ಅವರು, ಈಗಾಗಲೇ ಮಂಡ್ಯ (Mandya) ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ. ಆದರೆ ಪ್ರಾಧಿಕಾರದ ಅಂದಾಜು ವೆಚ್ಚ ಯೋಜನೆಗೆ ಸಾಕಾಗುವುದಿಲ್ಲ. 900 ಕೋಟಿ ರೂ. ವೆಚ್ಚದ ಪರಿಷ್ಕೃತ ಯೋಜನೆಗೆ ಒಪ್ಪಿಗೆ ಕೊಟ್ಟು ಅನುಷ್ಠಾನಗೊಳಿಸಬೇಕು ಎಂಬ ಮನವಿಗೆ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.ಇದನ್ನೂ ಓದಿ: ಮೈಸೂರು ಪೊಲೀಸರೇ ದಂಧೆ ನಡೆಸುತ್ತಿದ್ದಾರೆ, ಇದಕ್ಕೆ ಕಡಿವಾಣ ಹಾಕಿ: ಗೃಹ ಇಲಾಖೆಗೆ ಹೆಚ್.ವಿಶ್ವನಾಥ್ ಒತ್ತಾಯ

    ಈ ಬಗ್ಗೆ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕುಮಾರಸ್ವಾಮಿ ಅವರು, ಭೂಸ್ವಾಧೀನಕ್ಕೆ 550 ಕೋಟಿ ರೂ. ಹಾಗೂ ನಿರ್ಮಾಣ ಕಾರ್ಯಕ್ಕೆ 350 ಕೋಟಿ ರೂ. ಬೇಕಾಗುತ್ತದೆ. ಹೀಗಾಗಿ ಯೋಜನೆಗೆ 900 ಕೋಟಿ ರೂ. ಅಗತ್ಯವಿದೆ ಎಂಬುದನ್ನು ಮನವರಿಕೆ ಮಾಡಿದರು. ವರ್ತುಲ ರಸ್ತೆ ಯೋಜನೆ ಅನುಷ್ಠಾನಗೊಂಡರೆ ಮಂಡ್ಯ ನಗರದ ಬೆಳವಣಿಗೆ, ಅಭಿವೃದ್ಧಿಗೆ ಬಹಳ ಅನುಕೂಲ ಆಗುತ್ತದೆ ಎಂಬುದನ್ನು ವಿವರವಾಗಿ ತಿಳಿಸಿದರು.

    ಪಾಂಡವಪುರ ನಾಲ್ಕು ಪಥ ಹೆದ್ದಾರಿ ಅಭಿವೃದ್ಧಿ:
    ಜೇವರ್ಗಿ-ಚಾಮರಾಜನಗರ (Chamarajanagar) ನಡುವೆ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥದಿಂದ ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿ ಮಾಡುವ ಬಗ್ಗೆಯು ಚರ್ಚೆ ನಡೆಸಿದರು.

    ಜೇವರ್ಗಿ- ಚಾಮರಾಜನಗರ ನಡುವೆ ಪಾಂಡವಪುರದ ಹೆದ್ದಾರಿ 150ಎ ದ್ವಿಪಥ ಹೆದ್ದಾರಿಯನ್ನು 597-560 ಕಿ.ಮೀನಿಂದ 606-670 ಕಿ.ಮೀ. ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿಪಡಿಸಲು ಒಪ್ಪಿಗೆ ಕೊಡಬೇಕು ಹಾಗೂ ಪಾಂಡವಪುರ (Pandavapura)  ರೈಲು ನಿಲ್ದಾಣದ ಬಳಿ ಇರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುವ ರೈತರ ಅನುಕೂಲಕ್ಕಾಗಿ ಹೆದ್ದಾರಿ ಪಕ್ಕದಲ್ಲಿಯೇ ಟ್ರಕ್ ವೇ ನಿರ್ಮಾಣ ಮಾಡಬೇಕು. ಇತ್ತೀಚೆಗೆ ತಾವು ಯೋಜನೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದಾಗ ಸ್ಥಳೀಯ ಜನರು ಈ ಬಗ್ಗೆ ಮನವಿ ಮಾಡಿದ್ದರು. ಅಲ್ಲದೆ, ಖುದ್ದು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದೇನೆ. ಹೀಗಾಗಿ ಟ್ರಕ್ ವೇ ನಿರ್ಮಾಣ ಅಗತ್ಯವಾಗಿ ಆಗಬೇಕಿದೆ ಎಂದು ಮನವಿ ಮಾಡಿದರು.

    ಹೆದ್ದಾರಿಯನ್ನು ನಾಲ್ಕು ಪಥಕ್ಕೆ ಅಭಿವೃದ್ಧಿ ಮಾಡುವುದರಿಂದ ಈ ಭಾಗದ ಅಭಿವೃದ್ಧಿ, ಸರಕು ಸಾಗಣೆಗೆ ಅನುಕೂಲ ಆಗುತ್ತದೆ. ವ್ಯಾಪಾರ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ದೊರೆಯುತ್ತದೆ. ಅಲ್ಲದೆ, ಕೋಲಾರ ಲೋಕಸಭೆ ಕ್ಷೇತ್ರವೂ ಸೇರಿ ಕರ್ನಾಟಕದ ಹಲವಾರು ಹೆದ್ದಾರಿ ಯೋಜನೆಗಳ ಮಂಜೂರಾತಿ ಹಾಗೂ ಚಾಲ್ತಿಯಲ್ಲಿರುವ ಯೋಜನೆಗಳನ್ನು ವೇಗಗತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಮಾತುಕತೆ ನಡೆಸಿದರು.ಇದನ್ನೂ ಓದಿ: ಲೋಕಸಭೆಯಲ್ಲಿ ಡಿಎಂಕೆ ಸಂಸದರ ಟಿ-ಶರ್ಟ್ ಪ್ರತಿಭಟನೆ: ಸದನದಲ್ಲಿ ಗದ್ದಲ

     

  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ ಟಾಯ್ಸ್ ಪಾರ್ಕ್ ನಿರ್ಮಾಣಕ್ಕೆ ಡಾ.ಮಂಜುನಾಥ್ ಮನವಿ

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ ಟಾಯ್ಸ್ ಪಾರ್ಕ್ ನಿರ್ಮಾಣಕ್ಕೆ ಡಾ.ಮಂಜುನಾಥ್ ಮನವಿ

    ನವದೆಹಲಿ: ಭೇಟಿಯಾಗಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ ಟಾಯ್ಸ್ ಪಾರ್ಕ್ ನಿರ್ಮಾಣ ಮಾಡುವಂತೆ ಸಂಸದ ಡಾ.ಸಿ.ಎನ್.ಮಂಜುನಾಥ್ (Dr C N Manjunath) ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ (Nithin Gadkari) ಅವರಿಗೆ ಮನವಿ ಮಾಡಿದರು.

    ದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿ ಅವರನ್ನು ಡಾ. ಮಂಜುನಾಥ್ ಬುಧವಾರ ಭೇಟಿಯಾದರು. ಈ ವೇಳೆ ಅವರು, ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ `ಚನ್ನಪಟ್ಟಣ ಬೊಂಬೆಗಳನ್ನು’ ಉತ್ತೇಜಿಸುವ ನಿಟ್ಟಿನಲ್ಲಿ ಟಾಯ್ಸ್ ಪಾರ್ಕ್ ನಿರ್ಮಿಸಿ ಸ್ಥಳೀಯ ಬೊಂಬೆ ತಯಾರಿಕರಿಗೆ ಮತ್ತು ಪ್ರವಾಸಿಗರಿಗೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಕೆಂಪು ಟೆಸ್ಲಾ ಕಾರು ಖರೀದಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

    ಚನ್ನಪಟ್ಟಣ ಬೊಂಬೆಗಳಿಗೆ ಐತಿಹಾಸಿಕ ಹಿನ್ನಲೆಯಿದ್ದು, ಬೊಂಬೆಗಳ ನಾಡು ಎಂದೇ ಪ್ರಸಿದ್ಧವಾಗಿದೆ. ಸಾವಿರಾರು ಕುಟುಂಬಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೊಂಬೆ ಉದ್ಯಮದ ಮೇಲೆ ಅವಲಂಬಿತವಾಗಿವೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್ ನಿರ್ಮಾಣದ ನಂತರ ಚನ್ನಪಟ್ಟಣ ನಗರಕ್ಕೆ ಆಗಮಿಸುವ ಪ್ರಯಾಣಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ರಾಹುಲ್-ಅಥಿಯಾ – ಬೇಬಿ ಬಂಪ್ ಫೋಟೋ ಶೂಟ್

    ಇದರಿಂದಾಗಿ ಈ ಉದ್ಯಮದ ಮೇಲೆ ಅವಲಂಬಿತರಾಗಿರುವವರ ಸ್ಥಿತಿ ಶೋಚನೀಯವಾಗಿದೆ. ಈ ಹಿನ್ನೆಲೆ ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ ಚನ್ನಪಟ್ಟಣ ಸಮೀಪ ಟಾಯ್ಸ್ ಪಾರ್ಕ್ ನಿರ್ಮಿಸುವುದರಿಂದ ಸ್ಥಳೀಯವಾಗಿ ಬೊಂಬೆ ತಯಾರಿಕೆಯ ಮೇಲೆ ಅವಲಂಬಿತರಾಗಿರುವವರಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ. ಅಲ್ಲದೇ ಬೊಂಬೆಗಳ ನಾಡು ಎಂಬ ಚನ್ನಪಟ್ಟಣದ ಹಿರಿಮೆಯನ್ನು ಹೆಚ್ಚಿಸದಂತಾಗುತ್ತದೆ. ಈ ವಿಷಯವಾಗಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಆದಷ್ಟು ಬೇಗ ನಿರ್ಮಾಣ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

  • ಮೋದಿ ಬದಲು ನೀವೇ ಪ್ರಧಾನಿಯಾಗಿ- ಲೋಕಸಭೆ ಚುನಾವಣೆಗೆ ಮೊದಲು ಗಡ್ಕರಿಗೆ ಆಫರ್‌ ನೀಡಿದ್ದ ವಿಪಕ್ಷಗಳು

    ಮೋದಿ ಬದಲು ನೀವೇ ಪ್ರಧಾನಿಯಾಗಿ- ಲೋಕಸಭೆ ಚುನಾವಣೆಗೆ ಮೊದಲು ಗಡ್ಕರಿಗೆ ಆಫರ್‌ ನೀಡಿದ್ದ ವಿಪಕ್ಷಗಳು

    ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election) ಮುನ್ನ ಮತ್ತು ನಂತರ ಬಿಜೆಪಿ (BJP) ವಿರುದ್ಧ ವಿಪಕ್ಷಗಳು ನಡೆಸಿದ್ದ ಸಂಚನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅನಾವರಣ ಮಾಡಿದ್ದಾರೆ.

    ಮೋದಿ (Narendra Modi) ಬದಲು ನೀವೇ ಪ್ರಧಾನಿ ಆಗಿ. ನಮ್ಮ ಬೆಂಬಲ ನಿಮಗೆ ಇರುತ್ತದೆ ಎಂದು ಲೋಕಸಭೆ ಚುನಾವಣೆಗೆ ಮೊದಲು ಮತ್ತು ನಂತರ ವಿಪಕ್ಷಗಳು ತಮಗೆ ಆಫರ್ ನೀಡಿದ್ದವು. ಆದರೆ ಪಕ್ಷದ ಹಿತದೃಷ್ಟಿಯಿಂದ ನಾನು ಇದಕ್ಕೆ ಒಪ್ಪಲಿಲ್ಲ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.  ಇದನ್ನೂ ಓದಿ: MUDA Case| ರಾಜಧರ್ಮ ಪಾಲಿಸದಿದ್ದರೆ ಅದು ರಾವಣ ರಾಜ್ಯ ಆಗಲಿದೆ: ಕೋರ್ಟ್ ಆದೇಶದಲ್ಲಿ ಏನಿದೆ?

    ಮೋದಿ ಬದಲು ನಾನು ಪ್ರಧಾನಿ ಅಭ್ಯರ್ಥಿ ಆಗಿದ್ದರೆ ಬಿಜೆಪಿಯಲ್ಲಿ (BJP) ಬಿರುಕು ಮೂಡುತ್ತಿತ್ತು. ಇದುವೇ ವಿಪಕ್ಷಗಳ ಉದ್ದೇಶ ಆಗಿತ್ತು. ಆದರೆ ಇದಕ್ಕೆ ನಾನು ಅವಕಾಶ ನೀಡಬಾರದು ಎನ್ನುವ ದೃಷ್ಟಿಯಿಂದ ವಿಪಕ್ಷಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ವಿರುದ್ಧ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಕೇಸ್‌ – RTI ಕಾರ್ಯಕರ್ತ ಸ್ಪಷ್ಟನೆ

    ಮೋದಿ ಆಡಳಿತದಲ್ಲಿ ನನಗೆ ನೀಡಲಾದ ಜವಾಬ್ದಾರಿಗಳ ಬಗ್ಗೆ ನಾನು ಸಂತೃಪ್ತನಾಗಿದ್ದೇನೆ. ನನಗೆ ಪ್ರಧಾನಿ ಹುದ್ದೆ ಮೇಲೆ ಆಸೆ ಇಲ್ಲ. ನಾನು ಮೊದಲು ಸಂಘದ ಸದಸ್ಯ. ನಂತರ ಪಕ್ಷದ ಕಾರ್ಯಕರ್ತ. ನನಗೆ ಅಧಿಕಾರ ಇದ್ದರೂ ಒಂದೇ ಇಲ್ಲದಿದ್ದರೂ ಒಂದೇ. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡಿರುತ್ತೇನೆ ಎಂದು ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ನಿತಿನ್ ಗಡ್ಕರಿ ಮಾತುಗಳು ಈಗ ಚರ್ಚೆಗೆ ಗ್ರಾಸವಾಗಿವೆ.

     

  • ನಿತಿನ್ ಗಡ್ಕರಿ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ- ಶಿವಮೊಗ್ಗ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ಒತ್ತಾಯ

    ನಿತಿನ್ ಗಡ್ಕರಿ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ- ಶಿವಮೊಗ್ಗ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ಒತ್ತಾಯ

    ನವದೆಹಲಿ: ಶಿವಮೊಗ್ಗ ನಗರ ಉತ್ತರ ಭಾಗದ ಬೈಪಾಸ್ ರಸ್ತೆ ಸೇರಿದಂತೆ ಕ್ಷೇತ್ರದ ಪ್ರಮುಖ ರಸ್ತೆಗಳ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಸಂಸದ ಬಿ.ವೈ ರಾಘವೇಂದ್ರ (B Y Raghavendra) ಚರ್ಚಿಸಿದ್ದಾರೆ.

    ಮಂತ್ರಾಲಯಕ್ಕೆ ಶಿವಮೊಗ್ಗ (Shivamogga) ನಗರದ ಉತ್ತರ ಭಾಗದ ಬೈಪಾಸ್ ರಸ್ತೆ ನಿರ್ಮಾಣದ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಿ ಬೈಪಾಸ್ ರಸ್ತೆಯ ಅಗತ್ಯತೆಯನ್ನು ವಿವರಿಸಿದ ಅವರು, ಭೂಸ್ವಾದೀನ ವೆಚ್ಚದ ಪಾಲುದಾರಿಕೆ, ಮಂಜೂರಾತಿಗೆ ಇದ್ದ ಸಮಸ್ಯೆಗಳನ್ನು ವಿವರಿಸಿದ್ದಾರೆ.

    ಶಿವಮೊಗ್ಗ ನಗರದಿಂದ ಹೊನ್ನಾಳಿ, ಹರಿಹರ ಮೂಲಕ ಮರಿಯಮ್ಮನ ಹಳ್ಳಿವರೆಗಿನ ರಾಜ್ಯ ಹೆದ್ದಾರಿ 25 ಅನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದಜೆಗೇರಿಸಿ 4 ಪಥದ ರಸ್ತೆ ನಿಮಾಣ ಮಾಡಲು ಸಹ ಮನವಿ ಮಾಡಿದ್ದು, ಇದೇ ವೇಳೆ ಸಿಗಂಧೂರು ಸೇತುವೆ ಮತ್ತು ವಿದ್ಯಾನಗರ ರೈಲ್ವೇ ಮೇಲ್ಸೇತುವೆಯ ನಿರ್ಮಾಣದ ಪ್ರಗತಿ ಹಾಗೂ ರಾಷ್ಟ್ರೀಯ ಹೆದ್ದಾರಿ 766ಸಿ ನ ಮಾವಿನಕೊಪ್ಪ ವೃತ್ತದಿಂದ ಆಡುಗೋಡಿವರೆಗಿನ 13.80ಕಿ.ಮೀ ಉದ್ದದ ರಸ್ತೆ ಹಾಗೂ ಬೆಕ್ಕೋಡಿ ಮತ್ತು ಹೊಸನಗರ ಸೇತುವೆಗಳ ಬಗ್ಗೆ ದಾಖಲೆಗಳೊಂದಿಗೆ ವಿವರಣೆ ನೀಡಿ ಕಾಮಗಾರಿ ಪರಿಶೀಲನೆಗೆ ಮನವಿ ಮಾಡಿದರು. ಇದನ್ನೂ ಓದಿ: ತಿಂಗಳಿಗೆ 2.28 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಬೇಕು, ಕೇಂದ್ರ ಕೊಡಲ್ಲ ಅಂತಾ ಹೇಳ್ತಿದೆ – ಸಿಎಂ ಕಿಡಿ

    ಸಂಸದರ ಮನವಿಗೆ ಪೂರಕವಾಗಿ ಸ್ಪಂದಿಸಿರುವ ಗಡ್ಕರಿ, ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳ ಜೊತೆಗೆ ಚರ್ಚಿಸಿ ಮಂಜೂರಾತಿಗೆ ಇರುವ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ ತಕ್ಷಣ ಮಂಜೂರಾತಿ ನೀಡಬೇಕೆಂದು ಸ್ಪಷ್ಟ ನಿರ್ದೇಶನ ನೀಡಿದ್ದರು. ರಾಜ್ಯ ಹೆದ್ದಾರಿ 25 ಅನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದಜೆಗೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಆದ್ಯತೆಯ ಮೇಲೆ ಸದರಿ ರಾಜ್ಯ ಹೆದ್ದಾರಿಯನ್ನು ಮೇಲ್ದಜೆಗೇರಿಸಿ ಅಭಿವೃದ್ಧಿಗೊಳಿಸಿಕೊಡುವ ಭರವಸೆ ನೀಡಿದ್ದಾರೆ. ಇನ್ನು ಪ್ರಗತಿಯಲ್ಲಿರುವ ಕಾಮಗಾರಿಗಳ ವೀಕ್ಷಣೆಗೂ ಬರುವುದಾಗಿ ಅವರು ತಿಳಿಸಿದ್ದಾರೆ.

     

  • ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ

    ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ

    ಬೆಳಗಾವಿ: ಭಾರತದ ರಸ್ತೆ ಜಾಲವನ್ನು 2024ರ ವೇಳೆಗೆ ಅಮೆರಿಕಕ್ಕೆ ಸರಿಸಮನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದೇನೆ. ಪ್ರತಿಯೊಂದು ಅಭಿವೃದ್ಧಿಯು ರಸ್ತೆ ಸಂಪರ್ಕವನ್ನು ಅವಲಂಬಿಸಿದೆ. ಆದ್ದರಿಂದ ರಸ್ತೆ ಸಂಪರ್ಕ ಜಾಲವನ್ನು ಸದೃಢಗೊಳಿಸಲು ಸರಕಾರ ಬದ್ಧವಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು.

    ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಭಾರತ ಮಾಲಾ-2 ಯೋಜನೆಯಲ್ಲಿ ಈ ಭಾಗದ ಇನ್ನಷ್ಟು ಯೋಜನೆಗಳನ್ನು ಸೇರ್ಪಡೆ ಮಾಡಲಾಗುವುದು. ಹೊಸ ಮೇಲ್ಸೆತುವೆ ಪ್ರಸ್ತಾವವನ್ನು ಅಭಯ್ ಪಾಟೀಲ ನೀಡಿದ್ದರು. ಆದರೆ, ಸ್ಥಳೀಯ ಕಾರಣಗಳಿಂದ ಅದು ಸಾಧ್ಯವಾಗಿರುವುದಿಲ್ಲ. ಸ್ಥಳೀಯವಾಗಿ ಅಗತ್ಯ ಸಹಕಾರ ನೀಡಿದರೆ ಮುಂದುವರಿಸಲಾಗುವುದು ಎಂದರು.

    ಈ ಭಾಗದ ಸಂಸದರು, ಶಾಸಕರು ವಿವಿಧ ರಸ್ತೆಗಳ ಅಭಿವೃದ್ಧಿ ಮಾಡಲು ಹಾಗೂ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದ್ದು, ಈ ಎಲ್ಲ ಪ್ರಸ್ತಾವನೆಗಳಿಗೆ ತಕ್ಷಣವೇ ಮಂಜೂರಾತಿ ನೀಡಲಾಗುವುದು. 9 ಸಾವಿರ ಕಿ.ಮೀ. ಉದ್ದದ ಗ್ರೀನಫೀಲ್ಡ್ ಹಾಗೂ ಹೆದ್ದಾರಿ ಕಾರಿಡಾರ್ ಯೋಜನೆಯನ್ನು 3ಲಕ್ಷ ಕೋಟಿಗೂ ಅಧಿಕ ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದೆ. ಇದರಲ್ಲಿ ಬೆಂಗಳೂರು-ಚೆನೈ ಯೋಜನೆ ಕೂಡ ಒಳಗೊಂಡಿದೆ. ದೆಹಲಿ-ಮುಂಬೈ ಹೆದ್ದಾರಿಯಲ್ಲಿ 120 ಕಿ.ಮೀ.ವೇಗದಲ್ಲಿ ವಾಹನ ಚಲಾಯಿಸಬಹುದು. ಇದರಿಂದ ಎರಡು ನಗರಗಳ ನಡುವಿನ ಪ್ರಯಾಣ ಅವಧಿ 12ಗಂಟೆಯಾಗಲಿದೆ. ಇದನ್ನೂ ಓದಿ: ವಿದ್ಯುತ್ ಪೂರೈಕೆ ಉಚಿತವಲ್ಲ, ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್ : ನಿತಿನ್ ರಾವತ್

    Nitin Gadkari

    ಬೆಂಗಳೂರು ಟ್ರಾಫಿಕ್ ಹಾಗೂ ನಗರೀಕರಣ ಒತ್ತಡವನ್ನು ನಿಯಂತ್ರಿಸುವ ದೃಷ್ಟಿಯಿಂದ ಹೆದ್ದಾರಿಗಳ ಪಕ್ಕದಲ್ಲಿ ಭೂಸ್ವಾಧೀನ ಮಾಡಿಕೊಂಡು ಸ್ಮಾರ್ಟ್ ವಿಲೇಜ್ ಹಾಗೂ ಕೈಗಾರಿಕೆ ಸ್ಥಾಪಿಸುವ ಮೂಲಕ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬಹುದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದರೆ ಕೇಂದ್ರ ಸರಕಾರದ ವತಿಯಿಂದ ಎಲ್ಲ ರೀತಿಯ ನೆರವು ನೀಡಲಾಗುವುದು.ಇದರಜೊತೆಗೆ ರಾಜ್ಯ ಸರಕಾರವು ಅಗತ್ಯ ರಸ್ತೆ ಯೋಜನೆಗಳಿಗೆ ಭೂಸ್ವಾಧೀನವನ್ನು ಮಾಡಿಕೊಟ್ಟರೆ ರಾಜ್ಯದಲ್ಲಿ ಪ್ರವಾಸೋದ್ಯಮ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ : ಕೋಟಾ ಶ್ರೀನಿವಾಸ್ ಪೂಜಾರಿ

    ಪುಣೆ-ಬೆಂಗಳೂರು ಹೆದ್ದಾರಿ ಅಂತರ ಕಡಿಮೆಗೊಳಿಸಲಿದೆ. ಭಾರತ ಮಾಲಾ-2 ಯೋಜನೆಯಲ್ಲಿರುವ ಪುಣೆ-ಬೆಂಗಳೂರು ರಸ್ತೆಯ ಈಗಿನ ಅಂತರವನ್ನು 100 ಕಿ.ಮೀ. ಕಡಿಮೆಗೊಳಿಸುವ ಯೋಜನೆ ರೂಪಿಸಲಾಗಿದೆ. ಮುಂದೆ ಇದು ಬೆಂಗಳೂರು-ಚೆನೈ ಹೆದ್ದಾರಿಗೆ ಸಂಪರ್ಕ ಕಲ್ಪಿಸಲಿದೆ ಎಂದು ವಿವರಿಸಿದರು. ಇದೇ ವೇಳೆ ಬೆಳಗಾವಿ-ಸಂಕೇಶ್ವರ ಬೈಪಾಸ್, ಸಂಕೇಶ್ವರ ಬೈಪಾಸ್-ಮಹಾರಾಷ್ಟ್ರ ಗಡಿಯವರೆಗೆ ಷಟ್ಪಥ ನಿರ್ಮಾಣ ಕಾಮಗಾರಿ; ಚೋರ್ಲಾ-ಜಾಂಬೋಟಿ-ಬೆಳಗಾವಿ ನಡುವಿನ ದ್ವಿಪಥ ಕಾಮಗಾರಿಗಳು ಚಾಲನೆ ನೀಡಲಾಗಿದೆ. ಇದರ ಜೊತೆಗೆ ವಿಜಯಪುರ-ಮುರಗುಂಡಿ(ಎನ್.ಎಚ್.548ಬಿ) ಹಾಗೂ ಸಿದ್ದಾಪುರ-ವಿಜಯಪುರ(ಎನ್.ಎಚ್.561ಎ) ಕಾಮಗಾರಿಗಳಿಗೆ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ: ಯುದ್ಧ ಭೂಮಿಯಿಂದ ಇನ್ನೂ ಬಾರದ ಮಗಳ ನೆನೆದೆ ಇಡೀ ಕುಟುಂಬ ಕಣ್ಣೀರು

  • ಭಾರತೀಯರ ಮೂತ್ರವನ್ನು ಸಂಗ್ರಹಿಸಿದರೆ ದೇಶ ಯೂರಿಯಾ ಆಮದನ್ನು ನಿಲ್ಲಿಸಬಹುದು: ಗಡ್ಕರಿ

    ಭಾರತೀಯರ ಮೂತ್ರವನ್ನು ಸಂಗ್ರಹಿಸಿದರೆ ದೇಶ ಯೂರಿಯಾ ಆಮದನ್ನು ನಿಲ್ಲಿಸಬಹುದು: ಗಡ್ಕರಿ

    ನಾಗ್ಪುರ: ಭಾರತೀಯರ ಮೂತ್ರ ಪೂರ್ಣ ಪ್ರಮಾಣದಲ್ಲಿ ಸಂಗ್ರಹವಾದರೆ ನಾವು ವಿದೇಶದಿಂದ ರಸಗೊಬ್ಬರ ಆಮದನ್ನು ತರುವ ಅಗತ್ಯವೇ ಇಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಕಾರ್ಯಕ್ರಮಲ್ಲಿ ಮಾತನಾಡಿದ ಅವರು, ಈಗ ಹೇಗೆ ಜೈವಿಕ ತ್ಯಾಜ್ಯಗಳನ್ನು ಬಳಸಿ ಇಂಧನವನ್ನು ಉತ್ಪಾದಿಸಲಾಗುತ್ತದೋ ಅದೇ ರೀತಿಯಾಗಿ ಮಾನವನ ಮೂತ್ರವನ್ನು ಬಳಸಿ ಜೈವಿಕ ಇಂಧನವನ್ನು ತಯಾರಿಸಬಹುದು. ಯೂರಿಯಾ ರಸಗೊಬ್ಬರವನ್ನು ತಯಾರಿಸಬಹುದು ಎಂದು ಸಲಹೆ ನೀಡಿದರು.

     

    ನಾನು ವಿಮಾನ ನಿಲ್ದಾಣದಲ್ಲಿ ಮೂತ್ರವನ್ನು ಸಂಗ್ರಹಿಸಬೇಕು ಎಂದು ಹೇಳಿದ್ದೆ. ಆದರೆ ಈ ಮಾತನ್ನು ಯಾರು ಕೇಳಿಸಿಕೊಳ್ಳಲಿಲ್ಲ. ಮೂತ್ರದಲ್ಲಿ ಒಂದು ವಿಶೇಷ ಶಕ್ತಿ ಇದ್ದು ಸಂಗ್ರಹಿಸಿದರೆ ವ್ಯರ್ಥವಾಗುವುದನ್ನು ತಡೆಯಬಹುದು. ದೇಶದಲ್ಲಿರುವ ಅಷ್ಟೂ ಭಾರತೀಯರ ಮೂತ್ರವನ್ನು ಸಂಗ್ರಹಿಸಿದರೆ ನಾವು ಯೂರಿಯಾವನ್ನು ಆಮದು ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನನ್ನ ಕಲ್ಪನೆಗಳು ಅದ್ಭುತವಾಗಿರುತ್ತದೆ. ಆದರೆ ಉಳಿದ ಜನಗಳು ಕಲ್ಪನೆಯ ಜಾರಿಗೆ ಸಹಕಾರ ನೀಡುವುದಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದರು.

    ಈ ವೇಳೆ ಮಾನವನ ತಲೆಕೂದಲು ಬಳಸಿ ಅಮೈನೊ ಆ್ಯಸಿಡ್ ಉತ್ಪಾದನೆಯ ವಿಚಾರವನ್ನು ಪ್ರಸ್ತಾಪಿಸಿದರು. ನಾಗ್ಪುರದಲ್ಲಿ ಜಾಸ್ತಿ ಪ್ರಮಾಣದಲ್ಲಿ ತಲೆಕೂದಲು ಸಿಗದ ಕಾರಣ ನಾವು ಪ್ರತಿ ತಿಂಗಳು ತಿರುಪತಿಯಿಂದ 5 ಟ್ರಕ್ ತಲೆಕೂದಲನ್ನು ತರುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ:5 ಪೈಸೆಗೆ 1 ಲೀಟರ್ ಕುಡಿಯುವ ನೀರು: ಗಡ್ಕರಿ

    ತಲೆಕೂದಲಿನ ಪ್ರಯೋಗ ಯಶಸ್ವಿಯಾದ ಬಳಿಕ ಅಮೈನೊ ಆ್ಯಸಿಡ್ ಉತ್ಪಾದನೆ ಶೇ.25 ರಷ್ಟು ಹೆಚ್ಚಾಗಿದೆ. ನಾವು ಈಗ ವಿದೇಶಕ್ಕೆ ಅಮೈನೊ ಆ್ಯಸಿಡ್ ಮಾರಾಟ ಮಾಡುತ್ತೇವೆ. ದುಬೈ ಸರ್ಕಾರ 180 ಕಂಟೈನರ್ ಬಯೋ ಗೊಬ್ಬರಕ್ಕೆ ಆರ್ಡರ್ ಮಾಡಿದೆ ಎಂದು ತಿಳಿಸಿದರು.

    ಈ ಹಿಂದೆ ಗಡ್ಕರಿ ದೆಹಲಿಯ ನಿವಾಸದಲ್ಲಿ ಗಿಡಗಳಿಗೆ ಹಾಕಲು ತಮ್ಮ ಮೂತ್ರವನ್ನು ತೆಗೆದು ಇರಿಸುತ್ತಿದ್ದೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಚುನಾವಣೆಯಲ್ಲಿ ಪಕ್ಷ ಸೋತರೆ ಹೊಣೆ ಯಾರದ್ದು – ಗಡ್ಕರಿ ಖಡಕ್ ಮಾತು

    ಚುನಾವಣೆಯಲ್ಲಿ ಪಕ್ಷ ಸೋತರೆ ಹೊಣೆ ಯಾರದ್ದು – ಗಡ್ಕರಿ ಖಡಕ್ ಮಾತು

    ನವದೆಹಲಿ: ಸಂಸದರು ಹಾಗೂ ಶಾಸಕರ ಕಾರ್ಯವೈಖರಿ ಸರಿ ಇಲ್ಲದಿದ್ದರೆ ಅದಕ್ಕೆ ನೇರವಾಗಿ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಇತ್ತೀಚೆಗೆ ನಡೆದ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರವಾಗಿ ಮುಖಭಂಗ ಅನುಭವಿಸಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಗಡ್ಕರಿಯವರು, ಚುನಾವಣೆಯಲ್ಲಿ ಸೋತರೆ ಪಕ್ಷದ ನಾಯಕರೇ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ. ಅಲ್ಲದೇ ಸೋಲಿನ ಹೊಣೆಯನ್ನು ಹೊರುವುದು ಸಹ ನಾಯಕತ್ವದ ಭಾಗ ಎಂದಿದ್ದಾರೆ.

    ತಮ್ಮ ಹೇಳಿಕೆಯನ್ನು ದೆಹಲಿಯ ವಿಜ್ಞಾನ್ ಭವನದಲ್ಲಿ ನಡೆದ 31ನೇ ಗುಪ್ತಚರ ಇಲಾಖಾ ಅಧಿಕಾರಿಗಳ ಎಂಡೋಮೆಂಟ್ ಉಪನ್ಯಾಸ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಸಮರ್ಥಿಸಿಕೊಂಡು ಮಾತನಾಡಿದ ಅವರು, ಗೃಹ ಸಚಿವಾಲಯದ ಯಶಸ್ಸಿಗೆ ತರಬೇತಿ ಹಾಗೂ ನೈಪುಣ್ಯತೆಯನ್ನು ಪಡೆದ ಐಪಿಎಸ್ ಅಧಿಕಾರಿಗಳು ಕಾರಣರಾಗುತ್ತಾರೆ. ಏಕೆಂದರೆ ಈ ಎಲ್ಲಾ ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸಿದ್ದರಿಂದ ಯಶಸ್ಸು ಕಂಡಿದೆ. ಆದರೆ ನಾನು ಪಕ್ಷದ ಅಧ್ಯಕ್ಷನಾಗಿದ್ದುಕೊಂಡು ಸಂಸದರು ಹಾಗೂ ಶಾಸಕರು ಸರಿಯಾಗಿ ಕಾರ್ಯ ನಿರ್ವಹಿಸದೇ ಇದ್ದರೆ ಯಾರು ಜವಾಬ್ದಾರರು ಎಂದು ಪ್ರಶ್ನಿಸಿದ್ದಾರೆ.

    ಈ ಕಾರಣಕ್ಕಾಗಿ ಸಂಸದರು ಹಾಗೂ ಶಾಸಕರು ಆಯಾ ರಾಜ್ಯಗಳಲ್ಲಿ ಸರಿಯಾಗಿ ಕೆಲಸ ನಿರ್ವಹಿಸದೇ ಇದ್ದರೆ, ಅದಕ್ಕೆ ನೇರವಾಗಿ ಪಕ್ಷದ ಮುಖ್ಯಸ್ಥರೇ ಹೊಣೆಗಾರರನ್ನಾಗಿ ಮಾಡಬೇಕೆಂದು ಹೇಳಿದ್ದಾರೆ.

    ತಮ್ಮ ಹೇಳಿಕೆ ಸಂಬಂಧ ಇಲ್ಲಸಲ್ಲದ ಮಾಹಿತಿಗಳನ್ನು ಹರಡುವ ಮೂಲಕ ಪಕ್ಷ ಹಾಗೂ ತಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಯತ್ನಿಸುತ್ತಿದ್ದಾರೆಂದು ತಮ್ಮ ಟ್ವಿಟ್ಟರ್ ನಲ್ಲಿ ಗಡ್ಕರಿ ಬರೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಹೊಟ್ಟೆಯಿಂದ ಪ್ರಧಾನಿ ಹುಟ್ಟುತ್ತಿದ್ದ ವಂಶಾವಳಿ ಪದ್ಧತಿಯನ್ನು ನಾವು ಕಿತ್ತುಹಾಕಿದ್ದೇವೆ: ನಿತಿನ್ ಗಡ್ಕರಿ

    ಪ್ರಧಾನಿ ಹೊಟ್ಟೆಯಿಂದ ಪ್ರಧಾನಿ ಹುಟ್ಟುತ್ತಿದ್ದ ವಂಶಾವಳಿ ಪದ್ಧತಿಯನ್ನು ನಾವು ಕಿತ್ತುಹಾಕಿದ್ದೇವೆ: ನಿತಿನ್ ಗಡ್ಕರಿ

    ಹೈದರಾಬಾದ್: ಪ್ರಧಾನಿ ಹೊಟ್ಟೆಯಿಂದ ಪ್ರಧಾನಿ ಹುಟ್ಟುತ್ತಿದ್ದ ವಂಶವಾಹಿ ರಾಜಕಾರಣಾ ಪದ್ಧತಿಯನ್ನು ನಾವು ಕಿತ್ತುಹಾಕಿದ್ದೇವೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ತೆಲಂಗಾಣ ರಾಜಧಾನಿಯ ಬಿಜೆಪಿ ಯುವ ಮೋರ್ಚಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಗಿದ್ದಾಗಿನಿಂದ ಪ್ರಧಾನಿ ಹೊಟ್ಟೆಯಿಂದ ಪ್ರಧಾನಿಯ ಹುಟ್ಟು, ಮುಖ್ಯಮಂತ್ರಿಯ ಹೊಟ್ಟೆಯಿಂದ ಮುಖ್ಯಮಂತ್ರಿ ಹಾಗೂ ಸಂಸದನ ಹೊಟ್ಟೆಯಿಂದ ಸಂಸದ ಹುಟ್ಟುತ್ತಿದ್ದ ವಂಶವಾಹಿ ಪರಂಪರೆಯಿಂದ ಭಾರತದ ಪ್ರಜಾಪ್ರಭುತ್ವ ಇಲ್ಲವಾಗುವ ಹಂತಕ್ಕೆ ತಲುಪಿತ್ತು. ಆದರೆ ನಾವೀಗ ಅದನ್ನು ಕಿತ್ತುಹಾಕುವ ಮೂಲಕ ವಂಶ ರಾಜಕಾರಣಕ್ಕೆ ಅಂತ್ಯ ಹಾಡಿದ್ದೇವೆ ಎನ್ನುವ ಮೂಲಕ ವಂಶವಾಹಿ ರಾಜಕಾರಣವನ್ನು ಮುಂದುವರಿಸಿಕೊಂಡು ಬಂದಿದ್ದ ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.

    ಬಿಜೆಪಿ ಪಕ್ಷವು ಯಾವುದೇ ಒಂದು ಪರಿವಾರಕ್ಕೆ ಸೇರಿಲ್ಲ. ಜಾತಿ, ಧರ್ಮ ಹಾಗೂ ಭಾಷೆಯ ಆಧಾರದ ಮೇಲೆ ರಾಜಕಾರಣ ನಡೆಸುವ ಪಕ್ಷ ನಮ್ಮದಲ್ಲ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಎಂದೆಂದಿಗೂ ನಮ್ಮ ವರಿಷ್ಠ ನಾಯಕರು. ಅಲ್ಲದೇ ಎಲ್.ಕೆ.ಅಡ್ವಾಣಿಯವರು ಸಹ ನಮ್ಮ ವರಿಷ್ಠರೇ ಆದರೆ ಕೇವಲ ಅವರ ಹೆಸರಿನಿಂದ ನಮ್ಮ ಪಕ್ಷವನ್ನು ಯಾರು ಗುರುತಿಸಿಲ್ಲ. ಪ್ರಸ್ತುತ ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅಮಿತ್ ಶಾ ರವರು ನೇಮಕಗೊಂಡಿದ್ದಾರೆ. ಆದರೆ ಇವುಗಳ ನೇತೃತ್ವ ಎಂದಿಗೂ ಬದಲಾಗುತ್ತಲೇ ಇರುತ್ತದೆ. ನಮ್ಮ ಪಕ್ಷ ಯಾವುದೇ ವ್ಯಕ್ತಿಯ ಹೆಸರಲ್ಲಿ ನಡೆಯುವುದಿಲ್ಲ. ನಮ್ಮ ಪಕ್ಷ ಕೇವಲ ಸಿದ್ಧಾಂತ ಮತ್ತು ಉದ್ದೇಶದ ಆಧಾರದ ಮೇಲೆ ನಡೆಯುತ್ತದೆ ಎಂದು ತಿಳಿಸಿದರು.

    ಈ ಹಿಂದೆ ಸುಮಾರು 60 ವರ್ಷಗಳ ದೇಶವನ್ನಾಳಿದ ಕೆಲವರು ಕೇವಲ ತಮ್ಮ ಕುಟುಂಬವನ್ನು ಮಾತ್ರ ಉದ್ಧಾರ ಮಾಡಿಕೊಂಡರು ಎನ್ನುವ ಮೂಲಕ ಪರೋಕ್ಷವಾಗಿ ನೆಹರು ಹಾಗೂ ಗಾಂಧಿ ಕುಟುಂಬದ ವಿರುದ್ಧ ಹರಿಹಾಯ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೇಕೆದಾಟು ಯೋಜನೆಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಎಚ್‍ಡಿಕೆ

    ಮೇಕೆದಾಟು ಯೋಜನೆಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಎಚ್‍ಡಿಕೆ

    ನವದೆಹಲಿ: ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಜಲಸಂಪನ್ಮೂಲ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ಗಡ್ಕರಿ ಭೇಟಿ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಜಲಸಂಪನ್ಮೂಲ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೇ ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದಾರೆ. ಈ ಬಾರಿ 200 ಟಿಎಂಸಿ ನೀರು ಸಮುದ್ರಕ್ಕೆ ವ್ಯರ್ಥವಾಗಿ ಹರಿದಿದೆ. ಈ ನೀರನ್ನು ಸಂಗ್ರಹಿಸಿಟ್ಟುಕೊಂಡರೆ, ಬರಗಾಲದ ಸಂದರ್ಭದಲ್ಲಿ ಬಳಕೆಗೆ ಅನುಕೂಲವಾಗಿರುತ್ತದೆ. ವಾಸ್ತವಾಂಶಗಳ ಕುರಿತು ಸಚಿವರ ಗಮನಕ್ಕೆ ತಂದಿದ್ದು, ಅವರೂ ಸಹ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

    ಮೇಕೆದಾಟು ಯೋಜನೆಗೆ ಕಾನೂನಾತ್ಮಕ ಒಪ್ಪಿಗೆ ಪಡೆಯುವ ವಿಶ್ವಾಸ ಇದೆ. ನಮ್ಮ ಅಧಿಕಾರಿಗಳ ಜೊತೆ ಮಾತನಾಡಿ ಬಾಕಿ ಇರುವ ಕೆಲಸವನ್ನು ನೋಡಿಕೊಳ್ಳುತ್ತೇವೆ. ನಾವು ಅರಣ್ಯ ಮತ್ತು ಪರಿಸರ ಇಲಾಖೆಯ ಪರವಾನಿಗೆಯನ್ನೂ ಸಹ ಪಡೆಯಬೇಕಿದೆ. ಇದಲ್ಲದೇ ಮಹದಾಯಿ ತೀರ್ಪಿನಲ್ಲಿ ನೀಡಿರುವ ನೀರಿನ ಬಳಕೆಗೆ ರಾಜ್ಯಕ್ಕೆ ಅವಕಾಶ ಕೊಡಬೇಕಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಅವಕಾಶ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದೇನೆ. ಗೋವಾ ಸರ್ಕಾರ ಮಹಾದಾಯಿ ತೀರ್ಪಿನ ಬಗ್ಗೆ ಸ್ಪಷ್ಟಿಕರಣ ಅರ್ಜಿ ಸಲ್ಲಿಸಿದೆ. ಗೋವಾಕ್ಕೆ ಸ್ಪಷ್ಟೀಕರಣ ಸಿಕ್ಕ ನಂತರ ನೀರಿನ ಬಳಕೆಗೆ ಅನುಮತಿ ಕೊಡುವುದಾಗಿ ಹೇಳಿದ್ದಾರೆ. ಅದನ್ನು ಹೊರತುಪಡಿಸಿ ಹೆಚ್ಚುವರಿ ನೀರನ್ನು ಬಳಕೆ ಮಾಡಲು ಅನುಮತಿ ನೀಡುವ ಬಗ್ಗೆ ಕೇಳಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೇಕೆದಾಟಿಗೂ ತಮಿಳುನಾಡು ಕ್ಯಾತೆ ಯಾಕೆ? ಯೋಜನೆಯಿಂದ ರಾಜ್ಯಕ್ಕಾಗುವ ಲಾಭ ಏನು?

    ರಾಜ್ಯ ಅತಿವೃಷ್ಟಿ ಮತ್ತು ಅನಾವೃಷ್ಟಿಯ ಸಮಸ್ಯೆ ಎದುರಿಸುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಅವಕಾಶ ಕೇಳಲಾಗಿತ್ತು. ಆದರೆ ಪ್ರಧಾನಿ ಬೇರೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್‍ರವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ರಾಜ್ಯಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಚರ್ಚಿಸಿದ್ದೇನೆ. ವಿಶೇಷವಾಗಿ ಕಾಫಿ ಬೆಳಗಾರರ ಸಂಕಷ್ಟಕ್ಕೆ ಹೆಚ್ಚಿನ ನೆರವು ನೀಡಲು ಮನವಿ ಮಾಡಿಕೊಂಡಿದ್ದೇವೆ. ಕೇಂದ್ರ ಸಚಿವರು ನಮ್ಮ ಬೇಡಿಕೆಗೆ ಸ್ಪಂದಿಸಿದ್ದಾರೆ. ಅಲ್ಲದೇ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಈ ನಿಯೋಗದಲ್ಲಿ ಭಾಗವಹಿಸಿದ್ದು ನಮಗೆ ಸಹಾಯವಾಗಿದೆ ಎಂದು ಹೇಳಿದ್ರು.

    ಸಾಲಮನ್ನಾ ಯೋಜನೆಗೆ ಮಾಹಿತಿ ಒದಗಿಸಲು ಕಾಲ ನಿಗದಿ ಮಾಡಿಲ್ಲ. ಈಗ ಕೇವಲ ಅರ್ಜಿಗಳನ್ನು ಮಾತ್ರ ಕೊಡಲಾಗುತ್ತಿದೆ. ಇದರ ಬಗ್ಗೆ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ಕಾಲಹರಣ ಮಾಡದೇ ಮಾಹಿತಿಯನ್ನು ನಾಡ ಕಚೇರಿಗೆ ನೀಡಬಹುದು. ಆರಾಮಾಗಿ ಸರಿಯಾದ ಮಾಹಿತಿಯನ್ನು ನೀಡಬೇಕು. ಏಕೆಂದರೆ ರೈತರ ಖಾತೆಗಳಿಗೆ ನೇರವಾಗಿ ಸೌಲಭ್ಯ ಲಭ್ಯವಾಗಬೇಕು. ಇದರಲ್ಲಿ ಯಾವುದೇ ದಲ್ಲಾಳಿಗಳಿಗೆ ಲಾಭ ಆಗಬಾರದು ಎನ್ನುವ ಉದ್ದೇಶ ನಮ್ಮದು. ಯಾವುದೇ ಕಾಲಮಿತಿಯನ್ನು ಹಾಕಿಲ್ಲ. ಹೀಗಾಗಿ ಯಾವುದೇ ಸುಳ್ಳು ಸುದ್ದಿಗೆ ಕಿವಿಕೊಡಬೇಡಿ ಎಂದು ರೈತರಲ್ಲಿ ಮನವಿ ಮಾಡಿಕೊಂಡರು.

    ಇದಲ್ಲದೇ ಈಗಾಗಲೇ ಋಣಮುಕ್ತ ಕಾಯ್ದೆ ವಿಚಾರ ಗೃಹ ಸಚಿವರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಬಗ್ಗೆ ಕಾನೂನು ಇಲಾಖೆ ಸ್ಪಷ್ಟನೆ ಕೇಳಿತ್ತು. ಅದನ್ನು ಈಗ ನೀಡಲಾಗಿದೆ. ಈ ಹಿಂದೆ ರಾಷ್ಟ್ರಪತಿಗಳ ಜೊತೆ ಚರ್ಚೆ ಮಾಡಿದೆ. ಇದರಿಂದಾಗಿ ರೈತರು ಖಾಸಗಿ ಸಾಲ ಪಡೆದು ಆತ್ಮಹತ್ಯೆ ಮಾಡಿಕೊಳ್ಳುವುದು ನಿಲ್ಲುತ್ತದೆ. ಸರ್ಕಾರ ದೊಡ್ಡ ಪ್ರಮಾಣದ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಕುಟುಂಬಗಳನ್ನು ಬೀದಿಪಾಲು ಮಾಡಬೇಡಿ ಎಂದು ವಿನಂತಿಸಿಕೊಂಡರು.

    ಸಚಿವ ಸಂಪುಟ ವಿಸ್ತರಣೆ ಮಾಡಬೇಕಾಗಿದೆ. ಇದಕ್ಕೆ ಕಾಂಗ್ರೆಸ್ಸಿನಿಂದ ತೀರ್ಮಾನ ಬರಬೇಕಾಗಿದೆ. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದೇನೆ. ಭೇಟಿಗೆ ಅವಕಾಶ ಸಿಕ್ಕರೆ ಇದರ ಬಗ್ಗೆ ಚರ್ಚೆ ಮಾಡುತ್ತೇನೆ. ಇದೇ ವೇಳೆ ಜೆಡಿಎಸ್ ಉಪಮೇಯರ್ ರಮೀಳಾ ಶಂಕರ್ ನಿಧನದ ಸುದ್ದಿ ಬಗ್ಗೆ ಮಾತನಾಡಿ, ಉಪ ಮೇಯರ್ ರಮೀಳಾರ ನಿಧನ ನೋವು ತಂದಿದೆ. ಗುರುವಾರ ನಮ್ಮೊಂದಿಗೆ ಒಟ್ಟಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಇಂದು ಅವರು ನಮ್ಮ ಜೊತೆಯಲ್ಲಿ ಅವರ ನಿಧನ ಸುದ್ದಿ ಕೇಳುತ್ತಲೇ ಆಘಾತವಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅಲ್ಲದೇ ಪಾಲಿಕೆ ಆಯುಕ್ತರ ಮನವಿ ಮೇರೆಗೆ ಸರ್ಕಾರಿ ಗೌರವ ನೀಡಲು ಸೂಚಿಸಿದ್ದೇನೆ ಎಂದು ವಿಷಾದ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv