Tag: nithin raju

  • ಮಗುವಿನ ಫೇಸ್ ರಿವೀಲ್ ಮಾಡಿದ ನಟಿ ಪ್ರಣಿತಾ

    ಮಗುವಿನ ಫೇಸ್ ರಿವೀಲ್ ಮಾಡಿದ ನಟಿ ಪ್ರಣಿತಾ

    ಸ್ಯಾಂಡಲ್‌ವುಡ್ ಬ್ಯೂಟಿ ಪ್ರಣಿತಾ ಈಗಾಗಲೇ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೆಣ್ಣು ಮಗವಿಗೆ ಪ್ರಣಿತಾ ಜನ್ಮ ನೀಡಿದ್ದಾರೆ. ಶುಕ್ರವಾರದಂದು ಮನೆಗೆ ಪುಟ್ಟ ಮಹಾಲಕ್ಷ್ಮಿಯ ಆಗಮನವಾಗಿದೆ. ಈ ಬೆನ್ನಲ್ಲೇ ಪ್ರಣಿತಾ, ತಮ್ಮ ಹೆರಿಗೆಯ ವೀಡಿಯೋ ಜೊತೆ ಮಗುವಿನ ಫೇಸ್ ರಿವೀಲ್ ಮಾಡಿದ್ದಾರೆ.

    `ಪೊರ್ಕಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿ ಬಹುಭಾಷಾ ನಟಿಯಾಗಿ ಮಿಂಚ್ತಿರುವ ಪ್ರತಿಭಾವಂತ ನಟಿ ಪ್ರಣಿತಾ. ಬೇಡಿಕೆಯಿರುವಾಗಲೇ ಕಳೆದ ವರ್ಷ ಲಾಕ್‌ಡೌನ್‌ನಲ್ಲಿ ಉದ್ಯಮಿ ನಿತಿನ್ ಜೊತೆ ಹಸೆಮಣೆ ಏರಿದ್ದರು. ಈಗ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ಶುಭ ಶುಕ್ರವಾರ (ಜೂ.10)ದಂದು ಮನೆಗೆ ಹೊಸ ಅತಿಥಿ ಮಹಾಲಕ್ಷ್ಮಿಯ ಆಗಮನವಾಗಿದೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಈ ಬೆನ್ನಲ್ಲೇ ತಮ್ಮ ಹೆರಿಗೆಯ ವೀಡಿಯೋ ಶೇರ್ ಮಾಡುವುದರ ಜೊತೆ ಮಗುವಿನ ಫೇಸ್ ಕೂಡ ರಿವೀಲ್ ಮಾಡಿದ್ದಾರೆ.

    ನಟಿ ಪ್ರಣಿತಾ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. ಇದೇ ಖುಷಿಯಲ್ಲಿ ಮಗುವಿನ ಮುಖ ಕೂಡ ರಿವೀಲ್ ಮಾಡಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಪ್ರಣಿತಾ ಕಡೆಯದಾಗಿ ನಟಿಸಿದ ಸಿನಿಮಾ ಬಾಲಿವುಡ್‌ನ ʻಹಂಗಾಮ 2ʼ, ಮತ್ತು ʻಭುಜ್ ದಿ ಪ್ರೈಡ್‌ʼ ಮೂಲಕ ಗಮನ ಸೆಳೆದಿದ್ದರು. ಕನ್ನಡದ `ರಾಮನ ಅವತಾರ’ ಸದ್ಯದಲ್ಲೇ ತೆರೆಗೆ ಬರಲಿದೆ. ಮುಂದಿನ ದಿನಗಳಲ್ಲಿ ಚಾಲೆಂಜಿಂಗ್ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಪ್ರಣಿತಾ ಮಿಂಚಲಿದ್ದಾರೆ. ಪವರ್‌ಫುಲ್ ಪಾತ್ರದ ಮೂಲಕ ಕಮ್‌ಬ್ಯಾಕ್ ಆಗಲಿದ್ದಾರೆ.

  • ಹಳದಿ ಬಣ್ಣದ ಸೀರೆ ಉಟ್ಟು ಸೀಮಂತ ಸಂಭ್ರಮದಲ್ಲಿ ಮಿಂಚಿದ ಪ್ರಣಿತಾ ಸುಭಾಷ್

    ಹಳದಿ ಬಣ್ಣದ ಸೀರೆ ಉಟ್ಟು ಸೀಮಂತ ಸಂಭ್ರಮದಲ್ಲಿ ಮಿಂಚಿದ ಪ್ರಣಿತಾ ಸುಭಾಷ್

    ಸ್ಯಾಂಡಲ್‌ವುಡ್ ನಟಿ ಪ್ರಣಿತಾ ಸುಭಾಷ್ ಸೀಮಂತದ ಸಂಭ್ರಮದ ಖುಷಿಯಲ್ಲಿದ್ದಾರೆ. ಈ ವೇಳೆ ತಮ್ಮ ಸೀಮಂತ ಶಾಸ್ತ್ರದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಪ್ರಣಿತಾ ಸೀಮಂತದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

    ನಟಿ ಪ್ರಣಿತಾ `ಪೊರ್ಕಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪರಿಚಿತರಾದ್ರು. ನಂತರ ಕನ್ನಡ ಜತೆ ತೆಲುಗು, ಹಿಂದಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ್ರು. ಕಳೆದ ವರ್ಷ ಲಾಕ್‌ಡೌನ್‌ನಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಉದ್ಯಮಿ ನಿತಿನ್ ರಾಜು ಜತೆ ಹಸೆಮಣೆ ಏರಿದ್ರು.ಇತ್ತೀಚೆಗಷ್ಟೇ ತಾವು ತಾಯಿಯಾಗುತ್ತಿರುವ ಕುರಿತು ವಿಶೇಷ ಫೋಟೋಶೂಟ್ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ತಿಳಿಸಿದ್ರು. ಈಗ ಸೀಮಂತದ ಫೋಟೋಗಳನ್ನು ನಟಿ ಪ್ರಣಿತಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ನಟಿ ಪ್ರಣಿತಾ ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲೂ ಆಕ್ಟೀವ್ ಆಗಿದ್ರು. ಬೇಡಿಕೆಯಲ್ಲಿರುವಾಗಲೇ ಕಳೆದ ವರ್ಷ ಮೇನಲ್ಲಿ ನಿತಿನ್ ರಾಜು ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರು ಪರಸ್ಪರ ಪ್ರೀತಿಸಿ ಗುರು ಹಿರಿಯರ ಒಪ್ಪಿಗೆಯ ಮೇರೆಗೆ ಹಸೆಮಣೆ ಏರಿದ್ದಾರೆ. ಇದೀಗ ಹಳದಿ ಬಣ್ಣದ ಸೀರೆಯುಟ್ಟು ಮಿರ ಮಿರ ಅಂತಾ ಸೀಮಂತದ ಶಾಸ್ತ್ರದಲ್ಲಿ ಪ್ರಣಿತಾ ಮಿಂಚಿದ್ದಾರೆ.

    ಕುಟುಂಬಸ್ಥರ ಮತ್ತು ಆಪ್ತರ ಸಮ್ಮುಖದಲ್ಲಿ ಸೀಮಂತ ಶಾಸ್ತ್ರ ನೆರವೇರಿದ್ದು, ಪ್ರಣಿತಾ ಕೆಂಪು ಕಲರ್ ಬ್ಲೋಸ್ ಜತೆ ಹಳದಿ ಬಣ್ಣದ ಸೀರೆಯುಟ್ಟು ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ನೆಚ್ಚಿನ ನಟಿಯ ಸೀಮಂತದ ಸಂಭ್ರಮದ ಖುಷಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಸದ್ಯ ಈ ಫೋಟೋಗಳು ಭಾರೀ ವೈರಲ್ ಆಗುತ್ತಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರಣಿತಾ ಸುಭಾಷ್- ನಿತಿನ್ ರಾಜ್ ಯಾರು..?

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರಣಿತಾ ಸುಭಾಷ್- ನಿತಿನ್ ರಾಜ್ ಯಾರು..?

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಅವರು ನಿತಿನ್ ರಾಜು ಜೊತೆ ಭಾನುವಾರ ಸಪ್ತಪದಿ ತುಳಿದಿದ್ದಾರೆ. ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮದುವೆ ತುಂಬಾ ಸರಳವಾಗಿ ನಡೆದಿದ್ದು, ಕಾರ್ಯಕ್ರಮಕ್ಕೆ ವಧು-ವರರ ಕುಟುಂಬಸ್ಥರನ್ನು ಮಾತ್ರ ಆಹ್ವಾನಿಸಲಾಗಿತ್ತು.

    ಸ್ನೇಹಿತರೊಬ್ಬರು ನೂತನ ವಧು-ವರರ ಜೊತೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರಿಂದ ಪ್ರಣಿತಾ ಮದುವೆಯಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ನಟಿ ಅಭಿಮಾನಿಗಳು ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ. ಮೂಲತಃ ಬೆಂಗಳೂರು ನಿವಾಸಿಯಾಗಿರುವ ಪ್ರಣಿತಾ ಪತಿ ನಿತಿನ್, ಮಾಲ್‍ವೊಂದರ ಓನರ್ ಎಂಬುದು ಸದ್ಯದ ಮಾಹಿತಿ.

    ಮೂಲಗಳ ಪ್ರಕಾರ ನಟಿ ಮದುವೆಯಲ್ಲಿ ತುಂಬಾ ಹತ್ತಿರದ ಸಂಬಂಧಿಕರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಿದ್ದರು ಎನ್ನಲಾಗಿದೆ. ಅಲ್ಲದೆ ಪ್ರಣಿತಾ ದಂಪತಿ ತಮ್ಮ ಮದುವೆಯನ್ನು ಅದ್ಧೂರಿಯಾಗಿ ಮಾಡಲು ನಿರ್ಧರಿಸಿದ್ದರು. ಆದರೆ ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದು, ಮದುವೆ ಸಮಾರಂಭಗಳಿಗೆ ಇಂತಿಷ್ಟೇ ಜನ ಸೇರಬೇಕೆಂಬ ನಿಯಮ ತರಲಾಗಿದೆ. ಹೀಗಾಗಿ ಅತ್ಯಾಪ್ತರ ಸಮ್ಮುಖದಲ್ಲಿ ಸರಳವಾಗಿ ಪ್ರಣಿತಾ ಮದುವೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ.

    ನವಜೋಡಿ ಇಲ್ಲಿಯವರೆಗೆ ತಮ್ಮ ಮದುವೆಯ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ನಟಿ ಪ್ರಣೀತಾ ಇತ್ತೀಚಿನ ದಿನಗಳಲ್ಲಿ ತಮ್ಮ ಸಿನಿಮಾ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಬ್ಯುಸಿ ಆಗಿದ್ರು. ಹಂಗಾಮಾ 2 ಹಾಗೂ ಭುಜ್ ಸಿನಿಮಾಗಳ ಮೂಲಕ ನಟಿ ಕೆಲ ದಿನಗಳಲ್ಲೇ ಬಾಲಿವುಡ್ ಅಂಗಳಕ್ಕೂ ಪಾದಾರ್ಪಣೆ ಮಾಡಲಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ರಾಮನ ಅವತಾರ ಎಂಬ ಸಿನಿಮಾದಲ್ಲಿ ರಿಷಿ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ಇವರು ಈಗಾಗಲೇ ತಮಿಳು, ತೆಲುಗಿನಲ್ಲಿಯೂ ನಟಿಸುವ ಮೂಲಕ ಮನೆ ಮಾತಾಗಿದ್ದಾರೆ.