Tag: nithish kumar

  • ಬಿಹಾರ ಸಿಎಂ ನಿತೀಶ್‌ಕುಮಾರ್‌ಗೆ ಜೆಡಿಯು ಸಾರಥ್ಯ

    ಬಿಹಾರ ಸಿಎಂ ನಿತೀಶ್‌ಕುಮಾರ್‌ಗೆ ಜೆಡಿಯು ಸಾರಥ್ಯ

    ನವದೆಹಲಿ: ಲೋಕಸಭಾ ಚುನಾವಣೆಗೆ (Loksabha Election) ತಿಂಗಳುಗಳು ಬಾಕಿ ಇರುವಾಗಲೇ ಜನತಾ ದಳ (ಯುನೈಟೆಡ್) ಅಧ್ಯಕ್ಷ ಸ್ಥಾನಕ್ಕೆ ರಾಜೀವ್ ರಂಜನ್ ಅಕಾ ಲಲನ್ ಸಿಂಗ್ ರಾಜೀನಾಮೆ ನೀಡಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಇದೀಗ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

    ಇಂದು ದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಜೆಡಿಯು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಕೆ.ಸಿ ತ್ಯಾಗಿ ತಿಳಿಸಿದ್ದಾರೆ. ಈ ಮೂಲಕ ಲಲನ್‌ ಸಿಂಗ್‌ (Lalan Singh) ಅವರು ಹುದ್ದೆಯಿಂದ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ನಿತೀಶ್‌ ಅವರನ್ನು ಪಕ್ಷದ ಉನ್ನತ ಹುದ್ದೆಗೆ ನೇಮಿಸಲಾಯಿತು.

    ಲಲನ್ ಸಿಂಗ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಮುಂಬರುವ ಚುನಾವಣೆಗಳಲ್ಲಿ ಹೆಚ್ಚು ಗಮನಹರಿಸಲು ಮತ್ತು ಸಕ್ರಿಯವಾಗಿ ಭಾಗವಹಿಸಲು ಬಯಸುವುದು ರಾಜೀನಾಮೆಗೆ ಕಾರಣ ಎಂದು ಉಲ್ಲೇಖಿಸಿದ್ದರು. ನಂತರ ಅವರು ನಿತೀಶ್ ಕುಮಾರ್ ಅವರನ್ನು ಪಕ್ಷದ ಉನ್ನತ ಪಾತ್ರಕ್ಕೆ ತಮ್ಮ ಉತ್ತರಾಧಿಕಾರಿಯಾಗಿ ಪ್ರಸ್ತಾಪಿಸಿದರು.

    ಮಾಹಿತಿ ಪ್ರಕಾರ, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯೇ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಅಧ್ಯಕ್ಷರಾಗಿ ಲಲನ್ ಸಿಂಗ್ ಅವರ ಎರಡು ವರ್ಷಗಳ ಅವಧಿಯೂ ಪೂರ್ಣಗೊಂಡಿದೆ. ಇದೀಗ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಪಕ್ಷದ ರಾಷ್ಟ್ರೀಯ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ಅನುಮೋದಿಸಲಾಗಿದೆ.

    ಒಟ್ಟಿನಲ್ಲಿ ಕಳೆದ ಒಂದು ವಾರದಿಂದ ಜೆಡಿಯುನಲ್ಲಿ ಅಧ್ಯಕ್ಷರ ರಾಜೀನಾಮೆ ಸುದ್ದಿ ಭಾರೀ ಹರಿದಾಡುತ್ತಿದ್ದು, ಇಂದು ಎಲ್ಲದಕ್ಕೂ ತೆರೆಬಿದ್ದಿದೆ.

  • JDU ಮುಖ್ಯಸ್ಥರನ್ನು ಕಿತ್ತೆಸೆದು ತಾವೇ ಹುದ್ದೆ ಅಲಂಕರಿಸುತ್ತಾರಾ ಬಿಹಾರ ಸಿಎಂ?

    JDU ಮುಖ್ಯಸ್ಥರನ್ನು ಕಿತ್ತೆಸೆದು ತಾವೇ ಹುದ್ದೆ ಅಲಂಕರಿಸುತ್ತಾರಾ ಬಿಹಾರ ಸಿಎಂ?

    ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜನತಾ ದಳದ (JDU) ಮುಖ್ಯಸ್ಥನ ಸ್ಥಾನದಿಂದ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್ (Laln Singh) ಅವರನ್ನು ತೆಗೆದುಹಾಕುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ನಿತೀಶ್ ಕುಮಾರ್ ಅವರೇ ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಈ ಕುರಿತು ಡಿಸೆಂಬರ್ 29ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

    ಲಾಲನ್ ಸಿಂಗ್ ಅವರು ಕಾರ್ಯನಿರ್ವಹಿಸುತ್ತಿರುವ ರೀತಿ ಮತ್ತು ವಿಶೇಷವಾಗಿ ಆರ್‍ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejaswi Yadav) ಅವರೊಂದಿಗಿನ ಸಾಮೀಪ್ಯದಿಂದ ನಿತೀಶ್ ಕುಮಾರ್ (Nitish Kumar) ಅಸಮಾಧಾನಗೊಂಡಿದ್ದಾರೆ. ಅಲ್ಲದೆ ತಮ್ಮ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲು ಇಂಡಿಯಾ ಒಕ್ಕೂಟದೊಂದಿಗೆ (I.N.D.I.A) ಉತ್ತಮವಾಗಿ ಸಹಕರಿಸುವಲ್ಲಿಯೂ ಲಾಲನ್ ಸಿಂಗ್ ವಿಫಲರಾಗಿದ್ದಾರೆ ಎಂದು ನಿತೀಶ್ ಅಸಮಾಧಾನಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಒಂದು ವೇಳೆ ಪಕ್ಷದ ಮುಖ್ಯಸ್ಥನ ಸ್ಥಾನದಿಂದ ತೆಗೆದುಹಾಕಲ್ಪಟ್ಟರೆ, ಲಾಲನ್ ಸಿಂಗ್ ಅವರು ನಿತೀಶ್ ಕುಮಾರ್ ಅವರಿಗೆ ಅತ್ಯಂತ ನಿಕಟವಾಗಿದ್ದರೂ, ಜಾರ್ಜ್ ಫರ್ನಾಂಡಿಸ್, ಶರದ್ ಯಾದವ್, ಆರ್ ಸಿಪಿ ಸಿಂಗ್, ಉಪೇಂದ್ರ ಕುಶ್ವಾಹ ಮತ್ತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರಂತಹ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಸೇರುತ್ತಾರೆ ಎನ್ನಲಾಗಿದೆ.

    2024 ರ ಲೋಕಸಭೆ ಚುನಾವಣೆಯಲ್ಲಿ ಮುಂಗರ್ ಕ್ಷೇತ್ರದಿಂದ (Munger Constituency) ಮತ್ತೊಮ್ಮೆ ಸ್ಪರ್ಧಿಸಲು ಲಾಲನ್ ಸಿಂಗ್ ಉತ್ಸುಕರಾಗಿದ್ದಾರೆ. ಇವರು ಆರ್‌ಜೆಡಿ ಪಕ್ಷದಿಂದ ಟಿಕೆಟ್‌ನಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂಬುದಾಗಿ ವರದಿಯಾಗಿದೆ.

  • ನಿತೀಶ್ ಕುಮಾರ್‌ಗೆ ಅನಾರೋಗ್ಯ- ಇಂದಿನ ಎಲ್ಲಾ ಕಾರ್ಯಕ್ರಮಗಳ ಭೇಟಿ ಕ್ಯಾನ್ಸಲ್

    ನಿತೀಶ್ ಕುಮಾರ್‌ಗೆ ಅನಾರೋಗ್ಯ- ಇಂದಿನ ಎಲ್ಲಾ ಕಾರ್ಯಕ್ರಮಗಳ ಭೇಟಿ ಕ್ಯಾನ್ಸಲ್

    ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nithish Kumar) ಅವರಿಗೆ ಅನಾರೋಗ್ಯ ಕಾಡಿದ್ದು, ಈ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಅವರ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

    74 ವರ್ಷದ ನಿತೀಶ್ ಕುಮಾರ್ ಅವರಿಗೆ ವೈರಲ್ ಜ್ವರ (Viral Fever) , ಶೀತ ಹಾಗೂ ಕೆಮ್ಮು ಇರುವುದರಿಂದ ಇಂದಿನ ಯಾವುದೇ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳಲ್ಲ ಎಂದು ಮುಖ್ಯಮಂತ್ರಿಗಳ ನಿವಾಸದಿಂದ ಮೂಲಗಳು ತಿಳಿಸಿವೆ.

    ನಳಂದದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಜ್ಗಿರಿ ಮಹೋತ್ಸವವನ್ನು ನಿತೀಶ್ ಅವರು ಉದ್ಘಾಟನೆ ಮಾಡಬೇಕಿತ್ತು. ಆದರೆ ಅನಾರೋಗ್ಯದಿಂದಾಗಿ ಅವರಿಗೆ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಸಿಎಂ ಅವರ ಆಡಳಿತ ಕಚೇರಿಯಿಂದ ಸಂದೇಶ ರವಾನಿಸಲಾಗಿದೆ.

    ಸದ್ಯ ಸಿಎಂ ಅವರು ತಮ್ಮ ನಿವಾಸದಲ್ಲಿಯೇ ರೆಸ್ಟ್ ಮಾಡುತ್ತಿದ್ದಾರೆ. ಮನೆಯಲ್ಲಿಯೇ ವೈದ್ಯರ ತಂಡವಿದ್ದು, ನಿತೀಶ್ ಕುಮಾರ್ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್‌ನವ್ರು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ತಾರೆ: ಡಿಕೆಶಿ ಅಸಮಾಧಾನ

    ಸೋಮವಾರವಷ್ಟೇ ಮುಖ್ಯಮಂತ್ರಿಗಳು ದರ್ಭಾಂಗ್ ತೆರಳಿದ್ದು, ಅಲ್ಲಿ ದರ್ಭಾಂಗ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ್ದರು. ಅದೇ ದಿನ ಸಂಜೆ ಪಟ್ನಾದಲ್ಲಿ ಅನುಗ್ರಹ ನಾರಾಯಣ ಕಾಲೇಜಿನ ಹೊಸ ಕಟ್ಟಡವನ್ನು ಕೂಡ ಉದ್ಘಾಟನೆ ಮಾಡಿದ್ದರು. ಆ ಬಳಿಕದಿಂದ ಅವರು ಸಾರ್ವಜನಿಕ ಸಭೆಗಳಿಗೆ ಹಾಜರಾಗುತ್ತಿರಲಿಲ್ಲ. ಸದ್ಯ ಇಂದಿನ ರಾಜ್ಗಿರಿ ಮಹೋತ್ಸವವನ್ನು ಉಪಮುಖ್ಯಮಂತ್ರಿ ಹಾಗೂ ಪ್ರವಾಸೋದ್ಯಮ ಸಚಿವ ತೇಜಸ್ವಿ ಯಾದವ್ ಉದ್ಘಾಟನೆ ಮಾಡಲಿದ್ದಾರೆ.

  • ಮಹಿಳೆಯರ ವಿರುದ್ಧದ ಹೇಳಿಕೆಗಳು ದೇಶವನ್ನೇ ಅವಮಾನಿಸುವಂತಿದೆ: ಮೋದಿ ವಾಗ್ದಾಳಿ

    ಮಹಿಳೆಯರ ವಿರುದ್ಧದ ಹೇಳಿಕೆಗಳು ದೇಶವನ್ನೇ ಅವಮಾನಿಸುವಂತಿದೆ: ಮೋದಿ ವಾಗ್ದಾಳಿ

    ಭೋಪಾಲ್: ಜನಸಂಖ್ಯಾ ನಿಯಂತ್ರಣದ ಕುರಿತು ಮಾತನಾಡುವ ವೇಳೆ ಮಹಿಳೆಯರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್ (Nitish Kumar) ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಗುಡುಗಿದ್ದಾರೆ.

    ಮಧ್ಯಪ್ರದೇಶ (Madhya Pradesh) ಗುಣ ಎಂಬಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ, ಮಹಿಳೆಯರ ವಿರುದ್ಧ ನೀಡುವ ಹೇಳಿಕೆಗಳು ದೇಶವನ್ನೇ ಅವಮಾನಿಸುವಂತಿದೆ ಎಂದು ಕಿಡಿಕಾರಿದ್ದಾರೆ. ಭಾರತೀಯ ಮೈತ್ರಿಕೂಟದ ದೊಡ್ಡ ನಾಯಕರೊಬ್ಬರು ಮಂಗಳವಾರ ಬಿಹಾರ ವಿಧಾನಸಭೆಯೊಳಗೆ ಮಹಿಳೆಯರಿಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ. ಇಂಡಿಯಾ ಒಕ್ಕೂಟದ ಯಾವೊಬ್ಬ ನಾಯಕನೂ ಇದರ ವಿರುದ್ಧ ಒಂದೇ ಒಂದು ಮಾತನ್ನೂ ಆಡಲಿಲ್ಲ. ಅವರಿಗೆ ನಾಚಿಕೆಯಾಗಬೇಕು. ಮಹಿಳೆಯರ ಬಗ್ಗೆ ಈ ರೀತಿ ಯೋಚಿಸುವರು ನಿಮಗೆ ಏನಾದರೂ ಒಳ್ಳೆಯದನ್ನು ಮಾಡುವುದು ಸಾಧ್ಯವೇ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದರು.

    ತಾಯಂದಿರು ಮತ್ತು ಸಹೋದರಿಯರ ಬಗ್ಗೆ ಕೆಟ್ಟ ಮನೋಭಾವವನ್ನು ಹೊಂದಿರುವವರು ಇಂದು ನಮ್ಮ ದೇಶವನ್ನು ಅವಮಾನಿಸುತ್ತಿದ್ದಾರೆ. ಇದರಿಂದಲೇ ಗೊತ್ತಾಗುತ್ತೇ ನೀವು ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದೀರಿ ಎಂದು ಅವರು ಹೇಳಿದರು. ಇದನ್ನೂ ಓದಿ: ಮಹಿಳೆಯರ ಕುರಿತು ವಿವಾದಿತ ಹೇಳಿಕೆ – ಕ್ಷಮೆ ಕೇಳಿದ ನಿತೀಶ್ ಕುಮಾರ್

    ನಿತೀಶ್ ಕುಮಾರ್ ಹೇಳಿದ್ದೇನು..?: ಜಾತಿ ಸಮೀಕ್ಷೆಯ ಸಂಪೂರ್ಣ ವರದಿಯನ್ನು ಬಿಡುಗಡೆ ಮಾಡಿದ ನಂತರ ಬಿಹಾರ ಸಿಎಂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಮಾತನಾಡುತ್ತಾ ವೀಡಿಯೋವೊಂದರಲ್ಲಿ, ಈ ಹಿಂದೆ ಶೇ.4.3 ರಷ್ಟಿದ್ದ ಫಲವತ್ತತೆ ದರವು ಕಳೆದ ವರ್ಷ ಶೇ.2.9ಕ್ಕೆ ಇಳಿದಿದೆ ಎಂದು ಹೇಳಿದ್ದರು. ಈ ಹೇಳಿಕೆ ನಂತರ ಬಿಹಾರದ ಬಿಜೆಪಿ ಘಟಕವು ಭಾರೀ ಟೀಕೆ ವ್ಯಕ್ತಪಡಿಸಿತ್ತು. ಮಹಿಳಾ ಶಾಸಕರೂ ಅಸಮಾಧಾನ ಹೊರಹಾಕಿದ್ದಾರೆ. ಆದರೆ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಮುಖ್ಯಮಂತ್ರಿಗಳ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

  • ಬ್ಯಾಲೆನ್ಸ್ ಕಳೆದುಕೊಂಡು ಬಿದ್ರೂ ನಗುತ್ತಲೇ ಎದ್ದು ನಡೆದ ಬಿಹಾರ ಸಿಎಂ

    ಬ್ಯಾಲೆನ್ಸ್ ಕಳೆದುಕೊಂಡು ಬಿದ್ರೂ ನಗುತ್ತಲೇ ಎದ್ದು ನಡೆದ ಬಿಹಾರ ಸಿಎಂ

    ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಬ್ಯಾಲೆನ್ಸ್ ಕಳೆದುಕೊಂಡು ಬಿದ್ದರೂ ನಗುತ್ತಲೇ ಎದ್ದು ನಡೆದ ಪ್ರಸಂಗವೊಂದು ನಡೆದಿದೆ.

    ಶಿಕ್ಷಕರ ದಿನಾಚರಣೆಯ (Teachers Day) ಹಿನ್ನೆಲೆಯಲ್ಲಿ ಪಾಟ್ನಾ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಅವರನ್ನು ಆಹ್ವಾನಿಸಲಾಗಿತ್ತು. ಅಂತೆಯೇ ಯೂನಿರ್ವಸಿಟಿಗೆ ಬಂದಿದ್ದ ಬಿಹಾರ ಸಿಎಂ, ಗವರ್ನರ್ ರಾಜೇಂದ್ರ ಅರ್ಲೇಕರ್ ಅನಾವರಣಗೊಳಿಸಿದ ಫಲಕದ ಕಡೆಗೆ ಸಾಗುತ್ತಿದ್ದಾಗ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ.

    ಸಿಎಂ ಬೀಳುತ್ತಿದ್ದಂತೆಯೇ ಅವರ ಭದ್ರತಾ ಸಿಬ್ಬಂದಿ ಕೈ ಹಿಡಿದುಕೊಂಡಿದ್ದಾರೆ. ಈ ವೇಳೆ ಸಿಎಂ ಬಿದ್ದ ಜಾಗವನ್ನು ನೋಡಿ ನಗುತ್ತಲೇ ಎದ್ದು ನಡೆದಿದ್ದಾರೆ. ಬಳಿಕ ಕುಂಟುತ್ತಲೇ ವೇದಿಕೆ ಮೇಲೆ ಏರಿದ ಸಿಎಂ ಅವರು, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಇದನ್ನೂ ಓದಿ: 2.5 ಕೋಟಿ ರೂ.ಗೆ ಬೇಡಿಕೆ, ಕೊಡದಿದ್ದರೆ ಎನ್‍ಕೌಂಟರ್ ಬೆದರಿಕೆ – 9 ಪೊಲೀಸರು ಅರೆಸ್ಟ್

    ಘಟನೆಯಿಂದ ನಿತೀಶ್ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಅವರು ಹೇಗೆ ಬ್ಯಾಲೆನ್ಸ್ ಕಳೆದುಕೊಂಡು ಬಿದ್ದರು ಎಂಬುದು ತಿಳಿದುಬಂದಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವುದಕ್ಕಿಂತ ಸಾಯುತ್ತೇನೆ: ನಿತೀಶ್ ಕುಮಾರ್

    ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವುದಕ್ಕಿಂತ ಸಾಯುತ್ತೇನೆ: ನಿತೀಶ್ ಕುಮಾರ್

    ನವದೆಹಲಿ: ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವುದಕ್ಕಿಂತ ನಾನು ಸಾಯುತ್ತೇನೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಹೇಳುವ ಮೂಲಕ ಯಾವುದೇ ಕಾರಣಕ್ಕೂ ಬಿಜೆಪಿ (Bharatiya Janata Party) ಪಕ್ಷ ಸೇರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ನಾನು ಸಾಯುವವರೆಗೆ ಬಿಜೆಪಿ ಸೇರಲ್ಲ. ನನ್ನ ಸಾವನ್ನು ಬೇಕಿದ್ರೆ ಸ್ವೀಕರಿಸುತ್ತೇನೆ ಆದರೆ ಬಿಜೆಪಿ ಪಕ್ಷ ಮಾತ್ರ ಸೇರ್ಪಡೆಯಾಗಲ್ಲ. ನನಗೆ ಮುಖ್ಯಮಂತ್ರಿಯಾಗಲು ಇಷ್ಟವಿರಲಿಲ್ಲ. ಆದರೆ ಬಿಜೆಪಿಯವರು ನನ್ನನ್ನು ಒತ್ತಾಯಪೂರ್ವಕವಾಗಿ ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಚುನಾವಣೆ ನಡೆಯಲಿ, ಆಗ ಯಾರಿಗೆ ಎಷ್ಟು ಸೀಟು ಬರುತ್ತದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ಟಿಕೆಟ್ ಕೊಡಲು ‘ತ್ರೀ’ ಸೂತ್ರಕ್ಕೆ ಬಿಜೆಪಿ ಮೊರೆ

    ಒಟ್ಟಿನಲ್ಲಿ ಬಿಹಾರ ಸಿಎಂ (Bihar Chief Minister) ಇಂತಹ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಬಿಜೆಪಿಯೊಂದಿಗಿನ ಮೈತ್ರಿ ಮುರಿದು ಮಹಾಘಟಬಂಧನ್‍ನೊಂದಿಗೆ ಕೈಜೋಡಿಸಿದ ನಂತರ ನಿತೀಶ್ ಕುಮಾರ್, ನನ್ನ ಜೀವನದುದ್ದಕ್ಕೂ ನಾನು ಈ ಜನರೊಂದಿಗೆ ಯಾವುದೇ ರೀತಿಯಲ್ಲಿ ಹೋಗುವುದಿಲ್ಲ. ನಾವೆಲ್ಲರೂ ಸಮಾಜವಾದಿಗಳು ಒಟ್ಟಿಗೆ ಇರುತ್ತೇವೆ, ನಾವು ಬಿಹಾರದಲ್ಲಿ ನಾವು ಪ್ರಗತಿ ಸಾಧಿಸುತ್ತೇವೆ ದೇಶದ ಉನ್ನತಿಗೆ ಶ್ರಮಿಸುತ್ತೇನೆ ಎಂದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಎಂ ನಿತೀಶ್ ಕುಮಾರ್ ಮೇಲೆ ದಾಳಿಗೆ ಯತ್ನಿಸಿದ ಯುವಕ

    ಸಿಎಂ ನಿತೀಶ್ ಕುಮಾರ್ ಮೇಲೆ ದಾಳಿಗೆ ಯತ್ನಿಸಿದ ಯುವಕ

    ಪಾಟ್ನಾ: ಯುವಕನೊಬ್ಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ದಾಳಿ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.

    ಭಕ್ತಿಯಾರ್‍ಪುರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳಿಗೆ ಭಾನುವಾರ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ನಿತೀಶ್ ಕುಮಾರ್ ಬಂದಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

    ಯುವಕ ಹಲ್ಲೆಗೆ ಮುಂದಾಗುತ್ತಿರುವ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೀಡಿಯೋದಲ್ಲಿ, ಸುಮಾರು 30 ವರ್ಷದೊಳಗಿನ ಯುವಕ ಹಿಂಬದಿಯಿಂದ ಬಂದು ನಿತೀಶ್ ಕುಮಾರ್ ಮುಂದೆ ನಿಂತುಕೊಳ್ಳುತ್ತಿರುವುದನ್ನು ನೊಡಬಹುದಾಗಿದೆ. ಕೂಡಲೇ ಸಿಎಂ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಯುವಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನೊಬ್ಬ ದುಬಾರಿ ಗಿಫ್ಟ್ ನೀಡುವುದಾಗಿ ಮಹಿಳೆಗೆ 5.10ಲಕ್ಷ ರೂ. ವಂಚಿಸಿದ

    ಯುವಕನನ್ನು ಶಂಕರ್ ಕುಮಾರ್ ವರ್ಮಾ ಅಲಿಯಾಸ್ ಚೋಟು (32) ಎಂದು ಗುರುತಿಸಲಾಗಿದೆ. ಈತ ಭಕ್ತಿಯಾರ್ ಪುರ್ ಪ್ರದೇಶದ ಮೊಹಮ್ಮದ್ ಪುರ ನಿವಾಸಿಯಾಗಿದ್ದು, ಪುಟ್ಟ ಜ್ಯವೆಲ್ಲರಿ ಶಾಪ್ ನಡೆಸುತ್ತಿದ್ದಾನೆ. ಯುವಕನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದಾಗ, ಶಂಕರ್ ಮಾನಸಿಕ ಅಸ್ವಸ್ಥ ಎಂಬುದು ತಿಳಿದುಬಂದಿದೆ. ಅಲ್ಲದೆ ಅವನು ಈ ಹಿಂದೆ ಎರಡು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿರುವುದಾಗಿ ಶಂಕರ್ ಕುಟುಂಬಸ್ಥರು ತಿಳಿಸಿದ್ದಾರೆ.

    ಇತ್ತ ಸಿಎಂ ಮೇಲಿನ ದಾಳಿಯನ್ನು ಖಂಡಿಸಿರುವ ಬಿಜೆಪಿ ವಕ್ತಾರ ಅರವಿಂದ್ ಕುಮಾರ್ ಸಿಂಗ್, ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಇತ್ತ ರಾಷ್ಟ್ರೀಯ ಜನತಾ ದಳ ಕೂಡ ದಾಳಿಯನ್ನು ಖಂಡಿಸಿದೆ.

  • ನಿತೀಶ್ ಮತ್ತೆ ಸಿಎಂ – 4ನೇ ಬೆರಳು ಕಟ್ ಮಾಡ್ಕೊಂಡ ಅಪ್ಪಟ ಅಭಿಮಾನಿ

    ನಿತೀಶ್ ಮತ್ತೆ ಸಿಎಂ – 4ನೇ ಬೆರಳು ಕಟ್ ಮಾಡ್ಕೊಂಡ ಅಪ್ಪಟ ಅಭಿಮಾನಿ

    ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಪ್ಪಟ ಅಭಿಮಾನಿಯೊಬ್ಬ ತನ್ನ ನಾಲ್ಕನೇಯ ಕೈಬೆರಳನ್ನು ಕತ್ತರಿಸಿಕೊಂಡಿದ್ದಾನೆ. ನಿತೀಶ್ ಕುಮಾರ್ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಗದ್ದುಗೆ ಏರುವ ಹಿನ್ನೆಲೆಯಲ್ಲಿ ತನ್ನ 4ನೇ ಬೆರಳನ್ನು ಕಟ್ ಮಾಡಿಕೊಂಡಿದ್ದಾನೆ. ಅಲ್ಲದೆ ಅದನ್ನು ದೇವರಿಗೆ ಅರ್ಪಿಸಿದ್ದಾನೆ.

    ವ್ಯಕ್ತಿಯನ್ನು ಅನಿಲ್ ಶರ್ಮಾ ಅಲಿಯಾಸ್ ಅಲಿಯಾ ಬಾಬಾ(45) ಎಂದು ಗುರುತಿಸಲಾಗಿದೆ. ಈತ ಬಿಹಾರದ ಜೆಹಾನಾಬಾದ್ ಜಿಲ್ಲೆಯ ಘೋಸಿ ಪೊಲೀಸ್ ಠಾಣಾ ವ್ಯಾಪ್ತಿಯ ವೈನಾ ಗ್ರಾಮದ ನಿವಾಸಿ. ಅನಿಲ್ ಸುಮಾರು 15 ವರ್ಷಗಳಿಂದ ಈ ವಿಲಕ್ಷಣ ಆಚರಣೆಯನ್ನು ನಡೆಸುತ್ತಿದ್ದಾನೆ. ಪ್ರತಿ ಬಾರಿ ನಿತೀಶ್ ಕುಮಾರ್ ಸಿಎಂ ಆಗುವಾಗಲೂ ಅನಿಲ್ ತಮ್ಮ ಎಡಗೈಯ ಒಂದು ಬೆರಳನ್ನು ಕತ್ತರಿಸಿ ದೇವರಿಗೆ ಅರ್ಪಿಸುತ್ತಾ ಬಂದಿದ್ದಾನೆ. ಇದೀಗ ಮತ್ತೆ ನಿತೀಶ್ ಸಿಎಂ ಆಗಿದ್ದರಿಂದ 4 ನೇ ಬೆರಳನ್ನು ಕಟ್ ಮಾಡಿ ದೇವರಿಗೆ ಒಪ್ಪಿಸಿದ್ದಾನೆ.

    ನಿತೀಶ್ ಕುಮಾರ್ ಅವರು 2005ರಲ್ಲಿಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗಿನಿಂದ ಅನಿಲ್ ಈ ಆಚರಣೆಯನ್ನು ಪ್ರಾರಂಭಿಸಿದ್ದಾನೆ. 2010 ಹಾಗೂ 2015ರಲ್ಲಿ ಸಿಎಂ ಆಗಿ ಆಯ್ಕೆಯಾದಾಗಲೂ ಒಂದೊಂದು ಬೆರಳನ್ನು ಕತ್ತರಿಸಿಕೊಂಡಿದ್ದನು. ಇದೀಗ ಇತ್ತೀಚೆಗಷ್ಟೇ ಮತ್ತೆ ನಿತೀಶ್ ಸಿಎಂ ಅಧಿಕಾರದ ಗದ್ದುಗೆ ಏರುವಾಗಲೂ ಈತ ಅನಿಲ್ ತನ್ನ ಆಚರಣೆ ಮುಂದುವರಿಸಿ ಸುದ್ದಿಯಾಗಿದ್ದಾನೆ.

    ಈ ಸಂಬಂಧ ಮಧ್ಯಮದವರು ಅನಿಲ್ ನನ್ನು ಪ್ರಶ್ನಿಸಿದರೆ, ನಿತೀಶ್ ಕುಮಾರ್ ಅವರ ವಿಜಯವನ್ನು ಆಚರಿಸಲು ತನ್ನದೇ ಆದ ಮಾರ್ಗವಿದೆ. ನಾನು ಅವರ ಬಹುದೊಡ್ಡ ಅಭಿಮಾನಿಯಾಗಿದ್ದು, ಸಿಎಂ ನನ್ನನ್ನು ಭೇಟಿಯಾಗಲು ಬರುವುದಿಲ್ಲ ಎಂದು ನನಗೆ ತಿಳಿದಿತ್ತು. ಆದರೂ ಅವರ ಮೇಲೆ ಇರುವ ಗೌರವ ಕಿಂಚಿತ್ತೂ ಕಡಿಮೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

    ಇನ್ನು ಘೋಸಿ ಪೊಲೀಸ್ ಠಾಣೆಯ ಎಸ್‍ಎಚ್‍ಒ ಸತ್ಯೇಂದ್ರ ಕುಮಾರ್ ಪ್ರತಿಕ್ರಿಯಿಸಿ, ನಾವು ಈ ಘಟನೆಯ ಬಗ್ಗೆ ಮೊದಲ ಬಾರಿಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇವೆ ಮತ್ತು ತಕ್ಷಣ ತಂಡವನ್ನು ತನಿಖೆಗೆ ಗ್ರಾಮಕ್ಕೆ ಕಳುಹಿಸಿದ್ದೇವೆ. ನಾವು ಅವರ ಹೇಳಿಕೆಯನ್ನು ದಾಖಲಿಸುತ್ತೇವೆ ಮತ್ತು ಮುಂದಿನ ಕ್ರಮಕ್ಕಾಗಿ ನಮ್ಮ ಹಿರಿಯರನ್ನು ಸಂಪರ್ಕಿಸುತ್ತೇವೆ ಎಂದು ತಿಳಿಸಿದ್ದಾರೆ.

    ಕೈ ಬೆರಳು ಕಟ್ ಮಾಡಿಕೊಂಡ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದ್ದಂತೆಯೇ ಅನಿಲ್ ಮನೆ ಮುಂದೆ ಸ್ಥಳೀಯರು ಜಮಾಯಿಸಿದ್ದಾರೆ. ಅಲ್ಲದೆ ಅನಿಲ್ ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

  • ಎನ್‍ಡಿಎ ಮೈತ್ರಿಕೂಟಕ್ಕೆ ಮತ್ತೆ ಬಿಹಾರ – ನಿತೀಶ್‍ಗೆ ಒಲಿದ ಸಿಎಂ ಪಟ್ಟ

    ಎನ್‍ಡಿಎ ಮೈತ್ರಿಕೂಟಕ್ಕೆ ಮತ್ತೆ ಬಿಹಾರ – ನಿತೀಶ್‍ಗೆ ಒಲಿದ ಸಿಎಂ ಪಟ್ಟ

    – ಮಧ್ಯರಾತ್ರಿ ಪ್ರಕಟವಾಯ್ತು ಫಲಿತಾಂಶ

    ಪಾಟ್ನಾ: ರಾಷ್ಟ್ರ ರಾಜಕಾರಣದಲ್ಲಿ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾರೀ ಕುತೂಹಲ ಕೆರಳಿಸಿತು. ಸಾಮಾನ್ಯವಾಗಿ ಬೇಗನೆ ಪ್ರಕಟವಾಗುತ್ತಿದ್ದ ಫಲಿತಾಂಶ ಈ ಬಾರಿ ರೋಚಕ ಟ್ವಿಸ್ಟ್ ಕಂಡು ಕೊನೆಗೂ ಎನ್‍ಡಿಎ ಮೈತ್ರಿಕೂಟ ಭರ್ಜರಿಯಾಗಿ ಗೆಲುವು ಕಂಡಿತು.

    ಎಲ್ಲಾ ಸಮೀಕ್ಷೆಗಳನ್ನು ತಲೆಕೆಳಗಾಗಿಸಿ ಎನ್‍ಡಿಎ ಮೈತ್ರಿಕೂಟ ಬಿಹಾರದಲ್ಲಿ ಗೆಲುವಿನ ಹಾರವನ್ನ ತನ್ನ ಕೊರಳಿಗೆ ಹಾಕಿಕೊಂಡಿದೆ. ಮಂಗಳವಾರ ಬೆಳಗ್ಗಿನಿಂದ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾರೀ ಕುತೂಹಲಕ್ಕೆ ಕಾರಣವಾಗಿ ಕೊನೆಗೆ ಮಧ್ಯರಾತ್ರಿ 2 ಗಂಟೆ ವೇಳೆಗೆ ಎನ್‍ಡಿಎ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮತಎಣಿಕೆ ಆರಂಭವಾದಾಗಿನಿಂದಲೂ ತೂಗುಯ್ಯಾಲೆಯಲ್ಲಿ ಕುಳಿತಿದ್ದ ವಿಜಯಲಕ್ಷ್ಮೀ ಕೊನೆಗೂ ಎನ್‍ಡಿಎ ಕಡೆ ಒಲಿದಿದ್ದಾಳೆ.

    243 ವಿಧಾನಸಭಾ ಕ್ಷೇತ್ರದಲ್ಲಿ ಎನ್‍ಡಿಎ ಮ್ಯಾಜಿಕ್ ನಂಬರ್ 122ನ್ನು ದಾಟಿ 125 ಕ್ಷೇತ್ರಗಳಲ್ಲಿ ಸ್ಪಷ್ಟ ಬಹುಮತವನ್ನು ಪಡೆದಿದೆ. ಮಹಾಘಟಬಂಧನ್ 110 ಸ್ಥಾನಗಳಲ್ಲಿ ಗೆದ್ದಿದ್ದು, ಇತರರು 8ರಲ್ಲಿ ವಿಜಯದ ನಗೆ ಬೀರಿದ್ದಾರೆ. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಯ ಏಕಾಂಗಿ ಹೋರಾಟದ ಹೊರತಾಗಿಯೂ ಮಹಾಘಟಬಂಧನ್ ಅಧಿಕಾರ ವಂಚಿತವಾಗಿದೆ.

    ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಆರ್‌ಜೆಡಿ:
    ಬಿಹಾರದಲ್ಲಿ ಮತದಾರ ಮೋದಿ-ನಿತೀಶ್ ಜೋಡಿಗೆ ಜೈ ಅಂದಿದ್ದಾನೆ. ಯಾವ್ಯಾವ ಪಕ್ಷದ ಎಷ್ಟೆಷ್ಟು ಸಾಧನೆ ಅಂತ ನೋಡೋದಾದ್ರೆ, ಬಿಜೆಪಿ 74 ಕ್ಷೇತ್ರಗಳಲ್ಲಿ ವಿಜಯದ ನಗೆ ಬೀರುವ ಮೂಲಕ ಎನ್‍ಡಿಎ ಮೈತ್ರಿಕೂಟದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

    ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು, ಲೋಕ ಜನಶಕ್ತಿ ಪಾರ್ಟಿಯ ಚಿರಾಗ್ ಪಾಸ್ವಾನ್ ನೀಡಿದ ಏಟಿನಿಂದಾಗಿ ಮೂರನೇ ಸ್ಥಾನಕ್ಕೆ ಕುಸಿದಿದ್ದು 43 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ತೇಜಸ್ವಿ ಯಾದವ್ ನೇತೃತ್ವದ ಆರ್‍ಜೆಡಿ 75 ಕ್ಷೇತ್ರದಲ್ಲಿ ಗೆದ್ದು ಬಿಹಾರದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

    70 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್‍ನಿಂದ ನಿರೀಕ್ಷಿತ ಬೆಂಬಲ ಸಿಗದೇ ಅಧಿಕಾರದಿಂದ ದೂರ ಉಳಿಯಬೇಕಾಗಿದೆ. ಇನ್ನು ಇನ್ನು, ವಿಕಾಸಶೀಲ ಇನ್ಸಾನ್ ಪಾರ್ಟಿ ಮತ್ತು ಜೀತನ್ ರಾಮ್ ಮಾಂಝಿ ಅವರ ಎಚ್‍ಎಎಂ ತಲಾ 4 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಹೀಗಾಗಿ ಜೆಡಿಯು ಕಳಪೆ ಸಾಧನೆಯ ಹೊರತಾಗಿಯೂ ಎಚ್‍ಎಎಂ ಮತ್ತು ವಿಐಪಿ ಉತ್ತಮ ಪ್ರದರ್ಶನದಿಂದ ಎನ್‍ಡಿಎ ತನ್ನಲ್ಲಿಯೇ ಅಧಿಕಾರ ಉಳಿಸಿಕೊಂಡಿದೆ.

    ಸಾಮಾನ್ಯವಾಗಿ ಬೇಗನೆ ಪ್ರಕಟವಾಗುತ್ತಿದ್ದ ಫಲಿತಾಂಶ ಈ ಬಾರಿ ವಿಳಂಬವಾಗಿದ್ದಂತೆ ಪ್ರಕ್ಷಗಳ ನಡುವೆ ಟೀಕೆಗಳು ಶುರುವಾದವು. ಈ ಟೀಕೆಗಳಿಗೆ ಚುನಾವಣಾ ಆಯೋಗ ಸ್ಪಷ್ಟ ಎಚ್ಚರಿಕೆಯನ್ನು ನೀಡಿತು. ಮರು ಮತ ಎಣಿಕೆಯ ಬಗ್ಗೆ ಭರವಸೆ ನೀಡಿತು. ಒಟ್ಟಿನಲ್ಲಿ ಭಾರೀ ಕುತೂಹಲಕ್ಕೆ ಕಾರಣವಾದ ಮ್ಯಾರಥಾನ್ ಚುನಾವಣಾ ಫಲಿತಾಂಶ ಎನ್‍ಡಿಎ ಮೈತ್ರಿಕೂಟ ಪಾಲಾಗಿದೆ. ಕೊರೊನಾ ಸಂಕಷ್ಟದ ನಡುವೆ ಬಿಹಾರ ಚುನಾವಣೆ ಹಿಂದೆಂದೂ ಕಾಣದ ಜಿದ್ದಾಜಿದ್ದಿಗೆ ಸಾಕ್ಷಿಯಾಯ್ತು.

  • ಎಲ್‍ಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ನಿತೀಶ್ ವಿರುದ್ಧ ತನಿಖೆ: ಚಿರಾಗ್ ಪಾಸ್ವಾನ್

    ಎಲ್‍ಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ನಿತೀಶ್ ವಿರುದ್ಧ ತನಿಖೆ: ಚಿರಾಗ್ ಪಾಸ್ವಾನ್

    ಪಾಟ್ನಾ: ಬಿಹಾರದಲ್ಲಿ ಲೋಕ ಜನಶಕ್ತಿ ಪಕ್ಷ(ಎಲ್‍ಜೆಪಿ) ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ‘7 ನಿಶ್ಚಿಯ’ ಯೋಜನೆಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಲಾಗುವುದು. ಅಲ್ಲದೆ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಸಿಎಂ ನಿತೀಶ್ ಕುಮಾರ್ ವಿರುದ್ಧ ಚಿರಾಗ್ ಪಾಸ್ವಾನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

    ಬಕ್ಸಾರ್‍ನ ಡುಮ್ರಾನ್‍ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ದೊಡ್ಡ ಪ್ರಮಾಣದ ಹಗರಣ ಮತ್ತು ಭ್ರಷ್ಟಾಚಾರದ ಬಗ್ಗೆ ಸಿಎಂಗೆ ತಿಳಿದಿಲ್ಲ ಎಂದು ಹೇಳಲು ಹೇಗೆ ಸಾಧ್ಯ?. ಸಿಎಂ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ. ಅವರು ತಪ್ಪಿತಸ್ಥರಾಗಿದ್ದರೆ, ತನಿಖೆಯ ನಂತರ ಅವರನ್ನು ಜೈಲಿಗೆ ಕಳುಹಿಸಲಾಗುತ್ತೆ ಎಂದರು.

    ಮದ್ಯ ನಿಷೇಧವನ್ನು ಆದೇಶವನ್ನು ಏಕೆ ಪರಿಶೀಲಿಸಲಾಗುತ್ತಿಲ್ಲ, ರಾಜ್ಯದಲ್ಲಿ ಮದ್ಯ ಕಳ್ಳಸಾಗಣೆ ನಡೆಯುತ್ತಿಲ್ಲವೇ?. ಪ್ರತಿಯೊಬ್ಬರೂ ರಾಜ್ಯದಲ್ಲಿ ಮದ್ಯವನ್ನು ಪಡೆಯುತ್ತಿದ್ದಾರೆ. ಸರ್ಕಾರ ಮತ್ತು ಅಧಿಕಾರಿಗಳು ಒಟ್ಟಾಗಿ ಈ ಅವ್ಯವಹಾರ ಮಾಡುತ್ತಿದ್ದಾರೆ. ಬಿಹಾರ ಸರ್ಕಾರದಲ್ಲಿ ಒಬ್ಬ ಮಂತ್ರಿ ಕೂಡ ಇಲ್ಲಿ ಭಾಗಿಯಾಗಿಲ್ಲ ಎಂದಾದರೇ ಸರ್ಕಾರ ಈ ಬಗ್ಗೆ ಪರಿಶೀಲಿಸಬೇಕು. ಅವರು ಪರಿಶೀಲಿಸಲು ಬಯಸದಿದ್ದರೆ ಸರ್ಕಾರವೇ ಇಲ್ಲಿ ಭಾಗಿಯಾಗಿದೆ ಎಂದರ್ಥ ಎಂದು ಆರೋಪಿಸಿದರು.

    ಮದ್ಯ ಕಳ್ಳ ಸಾಗಾಣಿಕೆ ಹಣ, 7 ನಿಶ್ವಯ ಯೋಜನೆಯ ಅಕ್ರಮ ಹಣ ಎಲ್ಲಿಗೆ ಹೋಗುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಇವೆಲ್ಲವೂ ತನಿಖೆಯ ವಿಷಯವಾಗಿದೆ. ಇದನ್ನು ನಮ್ಮ ಸರ್ಕಾರದಿಂದ ತನಿಖೆ ಮಾಡಲಾಗುವುದು ಎಂದು ಎಲ್‍ಜೆಪಿ ನಾಯಕ ಚಿರಾಗ್ ಪಾಸ್ವಾನ್ ಜನರಿಗೆ ಭರವಸೆ ನೀಡಿದರು.