Tag: nitin gadkari

  • ಬಿಜೆಪಿಯಲ್ಲೂ ʻನವೆಂಬರ್‌ ಕ್ರಾಂತಿʼ ಇದೆ – ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ: ಸಂತೋಷ್‌ ಲಾಡ್‌ ಬಾಂಬ್‌

    ಬಿಜೆಪಿಯಲ್ಲೂ ʻನವೆಂಬರ್‌ ಕ್ರಾಂತಿʼ ಇದೆ – ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ: ಸಂತೋಷ್‌ ಲಾಡ್‌ ಬಾಂಬ್‌

    – ಸಚಿವ ಸಂಪುಟ ಪುನಾರಚನೆ ಮಾಡುವುದಾದ್ರೆ ಸಿಎಂ-ಡಿಸಿಎಂಗೆ ಪೂರ್ಣ ಅಧಿಕಾರ
    – 145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ, RSSಗೆ ವಿಶೇಷವಾಗಿ ದೇಶ ಪ್ರೇಮ ಇಲ್ಲ; ಲೇವಡಿ

    ಬೀದರ್‌: ಕೇಂದ್ರ ಬಿಜೆಪಿಯಲ್ಲೂ ʻನವೆಂಬರ್‌ ಕ್ರಾಂತಿʼ ಇದೆ. ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಸಚಿವ ಸಂತೋಷ್‌ ಲಾಡ್‌ (Santosh Lad) ಹೊಸ ಬಾಂಬ್‌ ಸಿಡಿಸಿದ್ದಾರೆ.

    ಬೀದರ್‌ನಲ್ಲಿ (Bidar) ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿನ್ನರ್‌ ಮೀಟಿಂಗ್‌ನಲ್ಲಿ ಸಂಪುಟ ಪುನರ್‌ ರಚನೆ (Cabinet reshuffle) ಬಗ್ಗೆ ಮಾತನಾಡಿಲ್ಲ. ಸಂಪುಟ ಪುನರ್‌ರಚನೆ ಮಾಡುವುದಾದ್ರೆ ಸಿಎಂ ಡಿಸಿಎಂಗೆ ಪೂರ್ಣ ಅಧಿಕಾರ ಇದೆ, ಮಾಡಲಿ. ಅಲ್ಲದೇ ನಮಗೂ ಕೇಂದ್ರದ ʻನವಂಬರ್ ಕಾಂತ್ರಿʼ ಬಗ್ಗೆ ಕುತೂಹಲವಿದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಹೇಳಿದ್ದಾರೆ.

    RSSಗೆ ವಿಶೇಷ ದೇಶಪ್ರೇಮ ಇಲ್ಲ:
    ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಆರ್‌ಎಸ್‌ಎಸ್‌ ಬ್ಯಾನ್‌ ಬಗ್ಗೆ ಮಾತನಾಡಿ, 145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ ಆರ್‌ಎಸ್‌ಎಸ್‌ಗೆ ವಿಶೇಷವಾಗಿ ದೇಶ ಪ್ರೇಮ ಇಲ್ಲ. ಈ ಹಿಂದೇ 3 ಸಾವಿರ ಕೋಟಿ ಖರ್ಚು ಮಾಡಿ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆ ನಿರ್ಮಾಣ ಮಾಡಿದ್ದು ಅವರು ಕಾಂಗ್ರೆಸ್‌ನಲ್ಲಿ ಇದ್ದಾಗ ಪ್ರತಿಮೆ ಮಾಡಲು ಬಿಜೆಪಿ ವಿರೋಧ ಮಾಡಿದ್ರು ಎಂದು ಕುಟುಕಿದರು.

    ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಗ್ಯಾರೆಂಟಿ ಹೊರೆಯಿಂದ ಅಭಿವೃದ್ಧಿ ಕುಂಟಿತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಲಾಡ್, ನಮ್ಮ ಗ್ಯಾರಂಟಿಗಳನ್ನ ಹಿಡಿದುಕೊಂಡು ಮೋದಿ ಓಡಾಡುತ್ತಿದ್ದಾರೆ. ಬಿಹಾರ್ ಎಲೆಕ್ಷನ್‌ನಲ್ಲಿ ಮಹಿಳೆಯರಿಗೆ ಒಂದು ಮತಕ್ಕೆ 10 ಸಾವಿರ ರೂ. ಕೊಡುತ್ತಿದ್ದಾರೆ. ಮೋದಿ ಸಾಹೇಬ್ರು ನಮ್ಮ ಗ್ಯಾರಂಟಿಗಳನ್ನ ಬಿಹಾರ ಚುನಾವಣೆಯಲ್ಲಿ ಬಳಸುತ್ತಿದ್ದಾರೆ ಎಂದು ಕಿಡಿ ಕಾರಿದರು.

  • ಮುಂದಿನ 4-6 ತಿಂಗಳಿನಲ್ಲಿ ಪೆಟ್ರೋಲ್‌ ಕಾರು ದರದಲ್ಲಿ ಇವಿ ಸಿಗುತ್ತೆ: ಗಡ್ಕರಿ

    ಮುಂದಿನ 4-6 ತಿಂಗಳಿನಲ್ಲಿ ಪೆಟ್ರೋಲ್‌ ಕಾರು ದರದಲ್ಲಿ ಇವಿ ಸಿಗುತ್ತೆ: ಗಡ್ಕರಿ

    ನವದೆಹಲಿ: ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬೆಲೆ ಪೆಟ್ರೋಲ್-ಡೀಸೆಲ್ ಬೆಲೆಗೆ ಸಮನಾಗಿರುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ.

    ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ (FICCI) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಎಲೆಕ್ಟ್ರಿಕ್ ವಾಹನಗಳನ್ನು (Electric Vehilce) ಬಿಡುಗಡೆ ಮಾಡಿದಾಗ, ಬ್ಯಾಟರಿ ಬೆಲೆ ಪ್ರತಿ ಕಿಲೋವ್ಯಾಟ್ ಗಂಟೆಗೆ 150 ಡಾಲರ್‌ ಆಗಿತ್ತು. ಇಂದು ಅದು ಪ್ರತಿ ಕಿಲೋವ್ಯಾಟ್ ಗಂಟೆಗೆ 55 ಡಾಲರ್‌ನಿಂದ 65 ಡಾಲರ್‌ಗೆ ಇಳಿಕೆಯಾಗಿದೆ. ಮುಂಬರುವ ನಾಲ್ಕರಿಂದ ಆರು ತಿಂಗಳಲ್ಲಿ, ಎಲೆಕ್ಟ್ರಿಕ್ ಸ್ಕೂಟರ್‌ಗಳು, ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ಬಸ್‌ಗಳು ಪೆಟ್ರೋಲ್-ಡೀಸೆಲ್ ಬೆಲೆಗೆ ಸಮಾನವಾಗುತ್ತವೆ ಎಂದು ನಾನು ಭಾವಿಸುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.

     

    ಪಳೆಯುಳಿಕೆ ಇಂಧನಗಳ ಮೇಲೆ ಅವಲಂಬನೆ ಮಾಡುವುದು ಆರ್ಥಿಕತೆ ದೃಷ್ಟಿಯಿಂದ ಹಾನಿಕಾರಕ. ಭಾರತವು ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯು ಆರ್ಥಿಕ ಹೊರೆಯಾಗಿದೆ. ಇಂಧನ ಆಮದಿಗೆ ವಾರ್ಷಿಕವಾಗಿ 22 ಲಕ್ಷ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಹೀಗಾಗಿ ಎಥೆನಾಲ್, ಸಿಎನ್‌ಜಿ ಅಥವಾ ಐಸೊಬುಟನಾಲ್‌ನಲ್ಲಿ ಚಲಿಸುವ ಎಲೆಕ್ಟ್ರಿಕ್ ಟ್ರಾಕ್ಟರ್‌ಗಳು ಮತ್ತು ಎಂಜಿನ್‌ಗಳನ್ನು ಅಭಿವೃದ್ಧಿಪಡಿಸಲು ಟ್ರಾಕ್ಟರ್ ತಯಾರಕರು ಮತ್ತು ಕೃಷಿ ಸಂಶೋಧಕರಿಗೆ ಸಭೆಯಲ್ಲಿ ಹೇಳಿದ್ದೇನೆ ಎಂದರು.  ಇದನ್ನೂ ಓದಿ:  ಕಾರುಗಳ ಬೆಲೆ ಭಾರೀ ಇಳಿಕೆ- ಯಾವ ಕಾರುಗಳ ಬೆಲೆ ಎಷ್ಟು ಇಳಿಕೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

    ಈ ನಾವೀನ್ಯತೆಗಳು ಡೀಸೆಲ್ ಆಮದು ಮತ್ತು ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಗ್ರಾಮೀಣ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡಲಿದೆ ಎಂದು ತಿಳಿಸಿದರು.

    ನಾನು ಸಾರಿಗೆ ಸಚಿವನಾಗಿ ಅಧಿಕಾರ ವಹಿಸಿಕೊಂಡಾಗ ಭಾರತೀಯ ಆಟೋಮೊಬೈಲ್ (Indian Automobile) ಉದ್ಯಮದ ಗಾತ್ರ 14 ಲಕ್ಷ ಕೋಟಿ ರೂ. ಇತ್ತು. ಈಗ ಭಾರತೀಯ ಆಟೋಮೊಬೈಲ್ ಉದ್ಯಮದ ಗಾತ್ರ 22 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಹೇಳಿದರು.

    ಪ್ರಸ್ತುತ ಅಮೆರಿಕದ ಆಟೋಮೊಬೈಲ್ ಉದ್ಯಮದ ಗಾತ್ರ 78 ಲಕ್ಷ ಕೋಟಿ ರೂ. ಇದ್ದರೆ ಚೀನಾ 47 ಲಕ್ಷ ಕೋಟಿ ರೂ. ಹೊಂದಿದ್ದು, ಭಾರತ ಮೂರನೇ ಸ್ಥಾನದಲ್ಲಿದೆ.

  • ಮೀಸಲಾತಿ ತೆಗೆದುಕೊಳ್ಳದಿರುವುದೇ ಬ್ರಾಹ್ಮಣನಾದ ನನಗೆ ದೇವರು ಮಾಡಿದ ದೊಡ್ಡ ಆಶೀರ್ವಾದ: ನಿತಿನ್‌ ಗಡ್ಕರಿ

    ಮೀಸಲಾತಿ ತೆಗೆದುಕೊಳ್ಳದಿರುವುದೇ ಬ್ರಾಹ್ಮಣನಾದ ನನಗೆ ದೇವರು ಮಾಡಿದ ದೊಡ್ಡ ಆಶೀರ್ವಾದ: ನಿತಿನ್‌ ಗಡ್ಕರಿ

    ನವದೆಹಲಿ: ಮೀಸಲಾತಿ ಪಡೆದುಕೊಳ್ಳದೆ ಇರುವುದೇ ಬ್ರಾಹ್ಮಣನಾದ ನನಗೆ ದೇವರು ಮಾಡಿದ ದೊಡ್ಡ ಆಶೀರ್ವಾದ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಮಾತನಾಡಿದ್ದಾರೆ.

    ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ಶ್ರೇಣೀಕೃತ ಜಾತಿ ವ್ಯವಸ್ಥೆಯನ್ನು ಒಪ್ಪುವುದಿಲ್ಲ. ಯಾವುದೇ ವ್ಯಕ್ತಿ ಜಾತಿ, ಧರ್ಮ ಅಥವಾ ಭಾಷೆಯಿಂದ ದೊಡ್ಡವನಲ್ಲ. ತನ್ನ ಗುಣಗಳಿಂದ ಮಾತ್ರ ದೊಡ್ಡವನಾಗುತ್ತಾನೆ. ನಾನು ಆಗಾಗ್ಗೆ ಒಂದು ತಮಾಷೆ ಮಾಡುತ್ತೇನೆ. ಅದೇನೆಂದರೆ, ದೇವರು ನನಗೆ ಮಾಡಿದ ದೊಡ್ಡ ಉಪಕಾರವೆಂದರೆ ನನಗೆ ಮೀಸಲಾತಿ ನೀಡದಿರುವುದು ಎಂದು ತಿಳಿಸಿದ್ದಾರೆ.

    ಭಾರತದಲ್ಲಿನ ವಿವಿಧ ಪ್ರದೇಶಗಳಲ್ಲಿ ಬ್ರಾಹ್ಮಣರ ವಿಭಿನ್ನ ಸಾಮಾಜಿಕ ಪ್ರಭಾವದ ಬಗ್ಗೆ ಗಡ್ಕರಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಬ್ರಾಹ್ಮಣ ಸಮುದಾಯವು ಹೆಚ್ಚಿನ ಪ್ರಾಮುಖ್ಯತೆ ಅಥವಾ ಪ್ರಾಬಲ್ಯವನ್ನು ಹೊಂದಿಲ್ಲ. ಆದರೆ, ಉತ್ತರ ಪ್ರದೇಶ ಮತ್ತು ಬಿಹಾರದಂತಹ ಉತ್ತರ ರಾಜ್ಯಗಳಲ್ಲಿ ಅವರ ಉಪಸ್ಥಿತಿಯು ಗಮನಾರ್ಹವಾಗಿದೆ. ನಾನು ಅಲ್ಲಿಗೆ ಹೋದಾಗಲೆಲ್ಲಾ, ದುಬೆಗಳು, ಮಿಶ್ರಾಗಳು ಮತ್ತು ತ್ರಿಪಾಠಿಗಳು ಗಣನೀಯ ಸಾಮರ್ಥ್ಯ ಮತ್ತು ಪ್ರಭಾವ ಹೊಂದಿದ್ದಾರೆಂದು ನಾನು ನೋಡುತ್ತೇನೆ ಎಂದು ತಿಳಿಸಿದ್ದಾರೆ.

    ನನ್ನ ತವರು ರಾಜ್ಯದಲ್ಲಿ ಮರಾಠರು ಪ್ರಬಲ ಸಾಮಾಜಿಕ ಮತ್ತು ರಾಜಕೀಯ ಪ್ರಾಮುಖ್ಯತೆಯನ್ನು ಹೊಂದಿದ್ದರೆ, ಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಬ್ರಾಹ್ಮಣರು ಇದೇ ರೀತಿಯ ಸ್ಥಾನಮಾನವನ್ನು ಹೊಂದಿದ್ದಾರೆ ಎಂದು ಗಡ್ಕರಿ ಹೇಳಿದ್ದಾರೆ.

  • ನನ್ನ ಮಿದುಳು 200 ಕೋಟಿ ಬೆಲೆಬಾಳುತ್ತೆ, ಪ್ರಾಮಾಣಿಕವಾಗಿಯೇ ಹಣ ಗಳಿಸ್ತೀನಿ: ನಿತಿನ್ ಗಡ್ಕರಿ

    ನನ್ನ ಮಿದುಳು 200 ಕೋಟಿ ಬೆಲೆಬಾಳುತ್ತೆ, ಪ್ರಾಮಾಣಿಕವಾಗಿಯೇ ಹಣ ಗಳಿಸ್ತೀನಿ: ನಿತಿನ್ ಗಡ್ಕರಿ

    ನಾಗ್ಪುರ: ನನ್ನ ಮಿದುಳು ತಿಂಗಳಿಗೆ 200 ಕೋಟಿ ರೂ. ಬೆಲೆಬಾಳುತ್ತೆ. ನನಗೆ ಹಣದ ಕೊರತೆ ಇಲ್ಲ. ವಂಚನೆ ಮಾಡದೇ ಪ್ರಾಮಾಣಿಕವಾಗಿ ಹಣ ಗಳಿಸುವುದು ಹೇಗೆ ಎಂದು ನನಗೆ ತಿಳಿದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ.

    ಸರ್ಕಾರವು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ (E20) ಒತ್ತು ನೀಡುವ ಕುರಿತಾದ ವಿವಾದ, ವೈಯಕ್ತಿಕ ಲಾಭದ ಆರೋಪ ಬೆನ್ನಲ್ಲೇ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿತಿನ್ ಗಡ್ಕರಿ ಈ ಮಾತುಗಳನ್ನಾಡಿದ್ದಾರೆ. ಇದರಲ್ಲಿ ನನಗೆ ಯಾವುದೇ ವೈಯಕ್ತಿಕ ಲಾಭವಿಲ್ಲ, ರೈತರಿಗೆ ಪ್ರಯೋಜನವನ್ನು ನೀಡುವ ಸಲುವಾಗಿ ಪ್ರಯೋಗ ಮಾಡುತ್ತಿದ್ದೇನೆ. ರೈತರು ಸಮೃದ್ಧಿಯನ್ನು ಸಾಧಿಸುವವರೆಗೆ ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಗಡ್ಕರಿ ಹೇಳಿದ್ದಾರೆ. ಇದನ್ನೂ ಓದಿ: ಜಾತಿಗಣತಿ ಕಾಲಂನಲ್ಲಿ ಮತಾಂತರ ಜಾತಿಗೂ ಜಾಗ – ಸರ್ಕಾರದ ವಿರುದ್ಧ ಬಿಜೆಪಿ, ಕನಕ ಶ್ರೀ ಕಿಡಿ

    ಇದಕ್ಕೂ ಮುನ್ನ ಈ ತಿಂಗಳ ಆರಂಭದಲ್ಲಿ ಇ20 ಬಿಡುಗಡೆಯನ್ನು ನಿಲ್ಲಿಸಲು ಮತ್ತು ಪಂಪ್‌ಗಳಲ್ಲಿ ಎಥನಾಲ್-ಮುಕ್ತ ಪೆಟ್ರೋಲ್ ಅನ್ನು ಕಡ್ಡಾಯಗೊಳಿಸಲು ಪ್ರಯತ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು. ಸಾಂಪ್ರದಾಯಿಕ ಇಂಧನದೊಂದಿಗೆ ಶೇ. 20ರಷ್ಟು ಎಥೆನಾಲ್ ಅನ್ನು ಬೆರೆಸುವ ಇ20 ಪೆಟ್ರೋಲ್ ಬಗ್ಗೆ  ಟೀಕಿಸಲಾಗುತ್ತಿದೆ. ಆ ಇಂಧನ ಸುರಕ್ಷಿತವಾಗಿದೆ, ನಿಯಂತ್ರಕರು ಮತ್ತು ವಾಹನ ತಯಾರಕರು ಇಬ್ಬರೂ ಅದನ್ನು ಬೆಂಬಲಿಸುತ್ತಾರೆ ಎಂದು ಗಡ್ಕರಿ ಪ್ರತಿಪಾದಿಸಿದ್ದರು. ಇದನ್ನೂ ಓದಿ: ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ – ಇಬ್ಬರು ಸಾವು

    ಎಥನಾಲ್ ಮಿಶ್ರಣವು ತೈಲ ಆಮದುಗಳನ್ನು ಕಡಿಮೆ ಮಾಡುತ್ತದೆ. ನಾವು ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಇದರ ಪರಿಣಾಮವಾಗಿ, ಉತ್ತರ ಪ್ರದೇಶ, ಬಿಹಾರ ಮತ್ತು ದೇಶಾದ್ಯಂತ ಮೆಕ್ಕೆಜೋಳದ ಕೃಷಿ 3 ಪಟ್ಟು ಹೆಚ್ಚಾಗಿದೆ. ಭಾರತದ ಕೃಷಿ ಬೆಳವಣಿಗೆಯ ದರ ಸಾಂಪ್ರದಾಯಿಕವಾಗಿ ಕಡಿಮೆಯಾಗಿದೆ. ಇಂಧನ ಮತ್ತು ವಿದ್ಯುತ್ ವಲಯಕ್ಕೆ ಕೃಷಿಯ ಈ ವೈವಿಧ್ಯೀಕರಣವು ರೈತರಿಗೆ ನೇರವಾಗಿ ಪ್ರಯೋಜನವನ್ನು ನೀಡುತ್ತದೆ ಮತ್ತು ಆರ್ಥಿಕತೆಯನ್ನು ಬಲಪಡಿಸುತ್ತದೆ, ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

  • ವಾರ್ಷಿಕ ಫಾಸ್ಟ್ಯಾಗ್ ಪಾಸ್ ಪಡೆಯುವುದು ಹೇಗೆ? ಯಾರೆಲ್ಲಾ ಅರ್ಹರು?

    ವಾರ್ಷಿಕ ಫಾಸ್ಟ್ಯಾಗ್ ಪಾಸ್ ಪಡೆಯುವುದು ಹೇಗೆ? ಯಾರೆಲ್ಲಾ ಅರ್ಹರು?

    ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಇತಿಹಾಸದಲ್ಲಿ ಕ್ರಾಂತಿಕಾರಕ ಯೋಜನೆಯಾಗಿರುವ ಫಾಸ್ಟ್ಯಾಗ್‌ ವಾರ್ಷಿಕ ಪಾಸ್‌ ಅನ್ನು (Fastag Annual Pass) ಆಗಸ್ಟ್‌ 15ರಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಹೌದು, ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು ಕೆಲ ದಿನಗಳ ಹಿಂದೆ ಫಾಸ್ಟ್‌ಟ್ಯಾಗ್‌ ವಾರ್ಷಿಕ ಪಾಸ್‌ ಯೋಜನೆಯನ್ನು ಘೋಷಿಸಿದ್ದರು. ಅದು ಆಗಸ್ಟ್‌ 15ರಿಂದ ಶುರುವಾಗಿದ್ದು, ಇನ್ನು ಮುಂದೆ ವರ್ಷಕ್ಕೊಮ್ಮೆ ಹಣ ಪಾವತಿಸಿ, ಚಿಂತೆಯಿಲ್ಲದೆ ಹೆದ್ದಾರಿಯಲ್ಲಿ ಪ್ರಯಾಣಿಸಬಹುದಾಗಿದೆ.

    ಹಾಗಿದ್ರೆ ಏನಿದು ವಾರ್ಷಿಕ ಪಾಸ್‌ ಯೋಜನೆ? ದುಡ್ಡು ಎಷ್ಟು? ಟ್ರಿಪ್‌ಗಳನ್ನು ಹೇಗೆ ಲೆಕ್ಕ ಹಾಕುತ್ತಾರೆ? ಯಾವೆಲ್ಲಾ ರಸ್ತೆಯಲ್ಲಿ ವಾಹನ ಸವಾರರು ಓಡಾಡಬಹುದು? ವಾರ್ಷಿಕ ಪಾಸ್‌ ಪಡೆಯುವುದು ಹೇಗೆ? ಯಾರೆಲ್ಲ ಅರ್ಹರು ಎಂಬ ಗೊಂದಲಗಳಿಗೆ ಇಲ್ಲಿ ಉತ್ತರ ನೀಡಲಾಗಿದೆ.

    ಏನಿದು ಫಾಸ್ಟ್ಯಾಗ್‌ ವಾರ್ಷಿಕ ಪಾಸ್‌ ಯೋಜನೆ?
    ಆಗಸ್ಟ್ 15 ರಿಂದ ದೇಶಾದ್ಯಂತ ಸುಮಾರು 1,150 ಟೋಲ್ ಪ್ಲಾಜಾಗಳಲ್ಲಿ ಈ ಯೋಜನೆ ಜಾರಿಗೆ ಬಂತು. ಹಿಂದೆ ವಾಹನ ಚಾಲಕರು ಪ್ರತಿ ಟೋಲ್ ಗೇಟ್‌ನಲ್ಲಿ ನಿಲ್ಲಿಸಿ ಟೋಲ್‌ ಪಾವತಿಸಬೇಕಾಗಿತ್ತು. ಆದರೆ ಫಾಸ್ಟ್ಯಾಗ್‌ ಬಂದ ಮೇಲೆ ಇದು ಡಿಜಿಟಲ್ ಆಗಿ ಮಾರ್ಪಟ್ಟಿದೆ. ಇದೀಗ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್‌ ಮೂಲಕ ಟೋಲ್‌ ಪಾವತಿ ಇನ್ನೂ ಸುಲಭವಾಗಲಿದೆ.

    ವಾರ್ಷಿಕ ಪಾಸ್ ಪಡೆಯುವುದು ಹೇಗೆ?
    ನಿಮ್ಮ ವಾಹನವು ಮಾನ್ಯವಾದ ಫಾಸ್ಟ್ಯಾಗ್‌ ಹೊಂದಿರಬೇಕು. ನಂತರ ನೀವು ರಾಜಮಾರ್ಗಯಾತ್ರೆ ಅಪ್ಲಿಕೇಶನ್‌ನಲ್ಲಿ ಅಥವಾ NHAIನ ಅಧಿಕೃತ ವೆಬ್‌ಸೈಟ್‌ನಲ್ಲಿ 3,000 ರೂ. ಪಾವತಿಸುವ ಮೂಲಕ ಪಾಸ್ ಅನ್ನು ಖರೀದಿಸಬಹುದು. ಪಾವತಿ ಮಾಡಿದ 2 ಗಂಟೆಗಳ ಒಳಗೆ ಪಾಸ್ ಅನ್ನು ಸಕ್ರಿಯಗೊಳಿಸಲಾಗುತ್ತದೆ.

    ವಾರ್ಷಿಕ ಪಾಸ್‌ನ ಪ್ರಯೋಜನಗಳೇನು?
    ವಾರ್ಷಿಕ ಪಾಸ್‌ನೊಂದಿಗೆ, ಪ್ರತಿ ಬಾರಿಯೂ ರೀಚಾರ್ಜ್ ಮಾಡುವ ಮತ್ತು ಹಣವನ್ನು ಪಾವತಿಸುವ ತೊಂದರೆ ಇರುವುದಿಲ್ಲ. ನೀವು ಒಂದು ವರ್ಷದಲ್ಲಿ ಸುಮಾರು 200 ಟ್ರಿಪ್‌ಗಳಿಗೆ ನಿಲ್ಲದೆ ಪ್ರಯಾಣಿಸಬಹುದು. ವಾರ್ಷಿಕವಾಗಿ ಅದನ್ನು ತೆಗೆದುಕೊಳ್ಳುವುದರಿಂದ ಬಹಳಷ್ಟು ಹಣ ಉಳಿತಾಯವಾಗುತ್ತದೆ.

    ಭಾರತದಲ್ಲಿ ಪ್ರಸ್ತುತ 8 ಕೋಟಿಗೂ ಹೆಚ್ಚು ಫಾಸ್ಟ್ಯಾಗ್‌ ಬಳಕೆದಾರರಿದ್ದಾರೆ. ಟೋಲ್‌ಗಳಲ್ಲಿ 98%ರಷ್ಟು ವಹಿವಾಟುಗಳನ್ನು ಡಿಜಿಟಲ್ ರೂಪದಲ್ಲಿ ಮಾಡಲಾಗುತ್ತಿದೆ. ಈ ವ್ಯವಸ್ಥೆಯು ಟೋಲ್‌ಗೇಟ್‌ಗಳಲ್ಲಿ ವಾಹನಗಳು ವೇಗವಾಗಿ ಚಲಿಸಲು ಸಹಾಯ ಮಾಡುತ್ತದೆ. ಈ ವಾರ್ಷಿಕ ಪಾಸ್ ಒಂದು ವರ್ಷ ಅಥವಾ 200 ಟೋಲ್ ಪ್ಲಾಜಾ ಕ್ರಾಸಿಂಗ್‌ಗಳಿಗೆ ಮಾನ್ಯವಾಗಿರುತ್ತದೆ. ಮಾನ್ಯ ಫಾಸ್ಟ್ಯಾಗ್ ಹೊಂದಿರುವ ಎಲ್ಲಾ ವಾಣಿಜ್ಯೇತರ ವಾಹನಗಳಿಗೆ ಇದು ಅನ್ವಯಿಸುತ್ತದೆ.

    ವಾರ್ಷಿಕ ಪಾಸ್ ಅನ್ನು ಎಲ್ಲಿ ಬಳಸಬಹುದು?
    ಇದು ರಾಷ್ಟ್ರೀಯ ಹೆದ್ದಾರಿ (NH) ಮತ್ತು ರಾಷ್ಟ್ರೀಯ ಎಕ್ಸ್‌ಪ್ರೆಸ್‌ವೇ (NE) ಟೋಲ್ ಫ್ಲಾಜಾಗಳಲ್ಲಿ ಮಾತ್ರ ಮಾನ್ಯವಾಗಿರುತ್ತದೆ. ಹೆದ್ದಾರಿ ಅಥವಾ ಎಕ್ಸ್‌ಪ್ರೆಸ್‌ವೇ ರಾಜ್ಯ ಅಥವಾ ಖಾಸಗಿಯಾಗಿದ್ದರೆ, ವಾರ್ಷಿಕ ಫಾಸ್ಟ್ಯಾಗ್ ಪಾಸ್‌ನೊಂದಿಗೆ ಉಚಿತ ಪ್ರವೇಶಕ್ಕೆ ಅವಕಾಶ ದೊರೆಯುವುದಿಲ್ಲ.

    ಪಾಸ್ ಅನ್ನು ಎಲ್ಲಿ ಖರೀದಿಸಬಹುದು?
    ಫಾಸ್ಟ್ಯಾಗ್ ವಾರ್ಷಿಕ ಪಾಸ್ ಗಾಗಿ ಮೀಸಲಾದ ಲಿಂಕ್ ರಾಜಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಲಭ್ಯವಿದೆ. ಈ ಲಿಂಕ್ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ (MoRTH) ಅಧಿಕೃತ ವೆಬ್‌ಸೈಟ್‌ಗಳಲ್ಲಿಯೂ ಲಭ್ಯವಿರುತ್ತದೆ.

    ಪಾಸ್ ಅನ್ನು ಆಕ್ಟಿವೇಟ್‌ ಮಾಡುವುದು ಹೇಗೆ?
    ಪಾಸ್ ಅನ್ನು ಆಕ್ಟಿವೇಟ್ ಮಾಡಲು ನಿಮ್ಮ ವಾಹನ ಮತ್ತು ಫಾಸ್ಟ್‌ಟ್ಯಾಗ್ ಅನ್ನು ಪರಿಶೀಲಿಸಬೇಕಾಗುತ್ತದೆ. ತದನಂತರ 3,000 ರೂ. ಪಾವತಿಸಬೇಕಾಗುತ್ತದೆ. ಪೇಮೆಂಟ್ ಮಾಡಿದ ಎರಡು ಗಂಟೆಗಳಲ್ಲಿ ಅದು ಆಕ್ಟಿವೇಟ್‌ ಆಗುತ್ತದೆ. ತದನಂತರ ಪಾಸ್ ಅನ್ನು ಒಂದು ವರ್ಷದವರೆಗೆ ಬಳಸಬಹುದು. ರಾಜ್ಯ ಸರ್ಕಾರಗಳು ಅಥವಾ ಸ್ಥಳೀಯ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಎಕ್ಸ್‌ಪ್ರೆಸ್‌ವೇಗಳು, ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ಯಾಗ್ ನಿಯಮಿತವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಬಳಕೆದಾರರ ಶುಲ್ಕಗಳು ಅನ್ವಯಿಸಬಹುದು.

    ಫಾಸ್ಟ್ಯಾಗ್ ಹೊಂದಿರುವವರು ಮತ್ತೆ ಹೊಸದಾಗಿ ಖರೀದಿಸಬೇಕಾ?
    ಈಗಾಗಲೇ ತಮ್ಮ ವಾಹನಗಳಲ್ಲಿ ಫಾಸ್ಟ್ಯಾಗ್ ಹೊಂದಿರುವವರು ಹೊಸ ಫಾಸ್ಟ್ಯಾಗ್ ಖರೀದಿಸುವ ಅಗತ್ಯವಿಲ್ಲ. ನಿಮ್ಮ ಬಳಿ ಇರುವ ಪಾಸ್‌ನಲ್ಲಿಯೇ ಈ ಪಾಸ್ ಅನ್ನು ಆಕ್ಟಿವೇಟ್ ಮಾಡಿಕೊಳ್ಳಬಹುದು. ವಾರ್ಷಿಕ ಪಾಸ್ ಪಡೆಯಲು ಫಾಸ್ಟ್ಯಾಗ್‌ನ KYC ಅತ್ಯಗತ್ಯವಾಗಿರುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ತಿಳಿಸಿದೆ.

    ವಾರ್ಷಿಕ ಪಾಸ್ ಬಳಸಿ ಎಷ್ಟು ಬಾರಿ ಪ್ರಯಾಣಿಸಹುದು:
    ಫಾಸ್ಟ್ಯಾಗ್ ವಾರ್ಷಿಕ ಪಾಸ್ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ ಅಥವಾ 200 ಟ್ರಿಪ್‌ಗಳಿಗೆ ಅನುಮತಿ ನೀಡುತ್ತದೆ. ಒಂದು ವರ್ಷ ಅಥವಾ 200 ಟ್ರಿಪ್‌ಗಳು ಪೂರ್ಣಗೊಂಡ ನಂತರ, ಇದು ಮೊದಲಿನಂತೆ ಕೆಲಸ ಮಾಡಲು ಪ್ರಾರಂಭಿಸುತ್ತದೆ.

    ವಾರ್ಷಿಕ ಫಾಸ್ಟ್ಯಾಗ್ ಪಾಸ್‌ ಪಡೆಯಲು ಯಾರು ಅರ್ಹರಲ್ಲ?
    ನಿಮ್ಮ ಫಾಸ್ಟ್ಯಾಗ್ ಅನ್ನು ಚಾಸಿಸ್ ಸಂಖ್ಯೆಯನ್ನು ಬಳಸಿಕೊಂಡು ನೋಂದಾಯಿಸಿದ್ದರೆ ನಿಮಗೆ ಪಾಸ್ ಪಡೆಯಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ, ನೀವು ವಾಹನ ನೋಂದಣಿ ಸಂಖ್ಯೆಯನ್ನು (VRN) ನವೀಕರಿಸಬೇಕಾಗುತ್ತದೆ. ಅಲ್ಲದೆ, ಮೊಬೈಲ್ ಸಂಖ್ಯೆಯನ್ನು ನವೀಕರಿಸಬೇಕು.

    ವಾರ್ಷಿಕ ಪಾಸ್ ಖರೀದಿಯಿಂದ ಆಗುವ ಪ್ರಯೋಜನಗಳೇನು?
    ವಾರ್ಷಿಕ ಫಾಸ್ಟ್ಯಾಗ್ ಪಾಸ್‌ನಿಂದ ಟೋಲ್ ತೆರಿಗೆಯಲ್ಲಿ ರೂ. 5,000 ರಿಂದ 7,000 ರೂ.ವರೆಗೆ ಉಳಿಸಬಹುದು. ಇದಲ್ಲದೆ, ಪ್ರವಾಸದ ಮಧ್ಯದಲ್ಲಿ ರೀಚಾರ್ಜ್ ಖಾಲಿಯಾದರೂ ಚಿಂತಿಸಬೇಕಾದ ಅಗತ್ಯ ಇರಲ್ಲ.

    ವಾರ್ಷಿಕ ಫಾಸ್ಟ್ ಟ್ಯಾಗ್ ಪಾಸ್ ಅನ್ನು ಮತ್ತೊಂದು ವಾಹನಕ್ಕೆ ವರ್ಗಾಯಿಸಬಹುದೇ?
    ಇಲ್ಲ. ಹಾಗೆ ಮಾಡುವುದರಿಂದ ನಿಮ್ಮ ಪಾಸ್ ಅನ್ನು ಕಪ್ಪುಪಟ್ಟಿಗೆ ಸೇರಿಸಬಹುದು.

    ಫಾಸ್ಟ್ಯಾಗ್ ವಾರ್ಷಿಕ ಪಾಸ್ ಅನ್ನು ಖರೀದಿಸಿದ ನಂತರ, ಅದು ನಿಮ್ಮ ಅಸ್ತಿತ್ವದಲ್ಲಿರುವ ಫಾಸ್ಟ್ಯಾಗ್ ಖಾತೆ ಮತ್ತು ವಾಹನ ನೋಂದಣಿ ಸಂಖ್ಯೆಗೆ ಲಿಂಕ್ ಆಗುತ್ತದೆ. ಪಾಸ್ 200 ಟೋಲ್ ವಹಿವಾಟುಗಳನ್ನು ಅನುಮತಿಸುತ್ತದೆ. ಅಥವಾ ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ಇದು ಮಾನ್ಯವಾಗಿರುತ್ತದೆ. ನೀವು ಪ್ರತಿ ಬಾರಿ NHAI ಅಥವಾ MoRTH ನಿರ್ವಹಿಸುವ ಅರ್ಹ ಟೋಲ್ ಪ್ಲಾಜಾದ ಮೂಲಕ ಹಾದು ಹೋದಾಗ, ನಿಮ್ಮ ವಾರ್ಷಿಕ ಮಿತಿಯಿಂದ ಒಂದು ಟ್ರಿಪ್ ಅನ್ನು ಕಡಿತಗೊಳಿಸಲಾಗುತ್ತದೆ.

    200-ಟ್ರಿಪ್ ಮಿತಿ ಅಥವಾ ಒಂದು ವರ್ಷದ ಅವಧಿಯನ್ನು ತಲುಪಿದ ನಂತರ, ನಿಮ್ಮ ಫಾಸ್ಟ್ಯಾಗ್ ಖಾತೆಯು ಸ್ವಯಂಚಾಲಿತವಾಗಿ ನಿಯಮಿತ ಪೇ-ಪರ್-ಯೂಸ್ ಮಾದರಿಗೆ ಹಿಂತಿರುಗುತ್ತದೆ. ಪಾಸ್ ಅನ್ನು ವರ್ಗಾಯಿಸಲಾಗುವುದಿಲ್ಲ, ಮರುಪಾವತಿಸಲಾಗುವುದಿಲ್ಲ ಮತ್ತು ರಾಷ್ಟ್ರೀಯ ಹೆದ್ದಾರಿ ಅಥವಾ ಯೋಜನೆಯಿಂದ ಒಳಗೊಳ್ಳಲ್ಪಟ್ಟ ಎಕ್ಸ್‌ಪ್ರೆಸ್‌ವೇ ನೆಟ್‌ವರ್ಕ್‌ನ ಹೊರಗಿನ ಟೋಲ್‌ಗಳಲ್ಲಿ ಬಳಸಲಾಗುವುದಿಲ್ಲ. 200 ಟ್ರಿಪ್ ಅಥವಾ 1 ವರ್ಷದ ಅವಧಿ ಮುಗಿದ ಬಳಿಕ ಮತ್ತೆ ಚಾಲಕ ಅದನ್ನು ನವೀಕರಿಸಬೇಕಾಗುತ್ತದೆ. ಇದಕ್ಕಾಗಿ ಆತ ಮತ್ತೆ 3000 ರೂ. ಪಾವತಿಸಿ ಫಾಸ್ಟ್ಯಾಗ್ ವಾರ್ಷಿಕ ಪಾಸ್ ನವೀಕರಿಸಬೇಕಾಗುತ್ತದೆ.

    ಒಂದೊಂದು ಟೋಲ್ ಗೆ ಒಂದೊಂದು ಟ್ರಿಪ್ ಎಂದು ಲೆಕ್ಕ ಹಾಕಲಾಗುತ್ತದೆ. ಒಂದು ಸ್ಥಾನದಿಂದ ಮತ್ತೊಂದು ಗಮ್ಯ ಸ್ಥಾನದ ನಡುವೆ 4 ಟೋಲ್ ಗಳು ಬಂದರೆ ಆಗ ಅದನ್ನು 4 ಟ್ರಿಪ್ ಎಂದು ಪರಿಗಣಿಸಲಾಗುತ್ತದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.‌

    ಖಾಸಗಿ ಟೋಲ್‌ಗೆ ಅನ್ವಯವಾಗಲ್ಲ:
    ವಾರ್ಷಿಕ ಟೋಲ್‌ ಫಾಸ್ಟ್ಯಾಗ್‌ ಪಾಸ್‌ ಕೇವಲ ರಾಷ್ಟ್ರೀಯ ಹೆದ್ದಾರಿಗಳಿಗೆ ಅನ್ವಯವಾಗುತ್ತದೆ. ರಾಜ್ಯ ಹೆದ್ದಾರಿಗಳಿಗೆ ಹಾಗೂ ಬೆಂಗಳೂರಿನ ನೈಸ್‌ನಂಥ ಖಾಸಗಿ ಹೆದ್ದಾರಿಗೆ ಅನ್ವಯವಾಗಲ್ಲ. ರಾಜ್ಯ ಹೆದ್ದಾರಿ ಹಾಗೂ ಖಾಸಗಿ ಹೆದ್ದಾರಿಗಳಲ್ಲಿ ಸಂಚರಿಸುವವರು ಎಂದಿನ ಟೋಲ್‌ ದರವನ್ನೇ ಪಾವತಿಸಬೇಕು ಎಂದು ಹೇಳಲಾಗಿದೆ. ಈ ಯೋಜನೆಗೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

    ಯಾವ ರಾಜ್ಯದಲ್ಲಿ ಹೆಚ್ಚು ಪಾಸ್‌ ಮಾರಾಟ?
    ಹೊಸದಾಗಿ ಪರಿಚಯಿಸಲಾದ ಫಾಸ್ಟ್ಯಾಗ್‌ ವಾರ್ಷಿಕ ಪಾಸ್ ಯೋಜನೆ ಆರಂಭಗೊಂಡ ಮೊದಲ ನಾಲ್ಕು ದಿನಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಮಂದಿ ಈ ಪಾಸ್‌ ಅನ್ನು ಪಡೆದುಕೊಂಡಿದ್ದಾರೆ ಎಂದು NHAI ತಿಳಿಸಿದೆ. ತಮಿಳುನಾಡಿನಲ್ಲಿ ಅತಿಹೆಚ್ಚು ವಾರ್ಷಿಕ ಪಾಸ್‌ ಖರೀಸಿಲಾಗಿದೆ. ತಮಿಳುನಾಡು ಬಳಿಕ ಕರ್ನಾಟಕ ಮತ್ತು ಹರಿಯಾಣದಲ್ಲಿ ಹೆಚ್ಚು ಫಾಸ್ಟ್ಯಾಗ್‌ ವಾರ್ಷಿಕ ಪಾಸ್ ಮಾರಾಟವಾಗಿದೆ. ಈ ಮೂಲಕ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದ ಟೋಲ್ ಪ್ಲಾಜಾಗಳಲ್ಲಿ ಗರಿಷ್ಠ ವಹಿವಾಟುಗಳು ದಾಖಲಾಗಿವೆ ಎಂದು NHAI ದೃಢಪಡಿಸಿದೆ.

  • ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಹೆಚ್‌ಡಿಕೆ

    ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಹೆಚ್‌ಡಿಕೆ

    – ಮಂಡ್ಯ ಜಿಲ್ಲೆ ಸೇರಿ ರಾಜ್ಯದ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

    ನವದೆಹಲಿ: ಮಂಡ್ಯ ಲೋಕಸಭೆ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

    ಗಡ್ಕರಿ ಅವರ ದೆಹಲಿ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜೊತೆ ತೆರಳಿ ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತ ಆಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ ಕೇಸ್ – ಆರೋಪಿಯನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

    ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಹೆದ್ದಾರಿ ಸಚಿವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಸಚಿವರು ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿದರು. ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆ – 12%, 28% ಸ್ಲ್ಯಾಬ್‌ ತೆಗೆಯಲು ಸಚಿವರ ಸಮಿತಿ ಒಪ್ಪಿಗೆ

    ಇದೇ ವೇಳೆ ಪಾಂಡವಪುರ ಸಕ್ಕರೆ ಕಾರ್ಖಾನೆ ಸಮೀಪದ ಸಿಡಿಎಸ್ ಕಾಲುವೆಯಿಂದ ದಸರಗುಪ್ಪೆ ನೀರು ಸಂಸ್ಕರಣ ಘಟಕದವರೆಗೂ ನಾಲ್ಕು ಪಥದ ಹೆದ್ದಾರಿಯ ಅಭಿವೃದ್ಧಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದರು.  ಇದನ್ನೂ ಓದಿ: ಎಎಸ್ಪಿ ಕಾರಿಗೆ ಡಿಕ್ಕಿ – ತಿಮರೋಡಿಯ ಮೂವರು ಬೆಂಬಲಿಗರು ಅರೆಸ್ಟ್

  • ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿ ಶೀಘ್ರ ಕಾಮಗಾರಿ ಆರಂಭಿಸಲು ಗಡ್ಕರಿಗೆ ಸಂಸದ ಬೊಮ್ಮಾಯಿ ಮನವಿ

    ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿ ಶೀಘ್ರ ಕಾಮಗಾರಿ ಆರಂಭಿಸಲು ಗಡ್ಕರಿಗೆ ಸಂಸದ ಬೊಮ್ಮಾಯಿ ಮನವಿ

    ನವದೆಹಲಿ: ಹಾವೇರಿ ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು (Karwar-Ilakal National Highway) ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಮನವಿ ಮಾಡಿದ್ದಾರೆ.

    ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಮಾಡಿರುವ ಅವರು, ಕಾರವಾರ, ಕೈಗಾ, ಮುಂಡಗೋಡ, ಸವಣೂರು, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ ತಲುಪುವ ಸುಮಾರು 318 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಿದ್ದು, ಯೋಜನೆಯ ಡಿಪಿಆರ್ ಸಲ್ಲಿಕೆಯಾಗಿದೆ ಹಾಗೂ ಭೂ ಸ್ವಾಧೀನ ಪಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ ಸಿಎಂ

    ಪ್ರಸ್ತುತ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದರಿಂದ ರಾಜ್ಯ ಸರ್ಕಾರದ ಸರಿಯಾದ ನಿರ್ವಹಣೆ ಇಲ್ಲದ ಕಾರಣ ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇನ್ನೊಂದೆಡೆ ಯೋಜನೆಗೆ ಅಧಿಕೃತ ಅನುಮತಿ ನೀಡದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೂ ಯಾವುದೇ ಕೆಲಸ ಮಾಡುತ್ತಿಲ್ಲ. ಹೀಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ ಕಾಮಗಾರಿ ಆರಂಭಿಸುವಂತೆ ವಿನಂತಿಸಿಕೊಂಡಿದ್ದಾರೆ. ಇದನ್ನೂ ಓದಿ: 2-3 ದಿನಗಳಲ್ಲಿ SEP ವರದಿ ಸಿಎಂಗೆ ಸಲ್ಲಿಕೆ – ಡಾ.ಸುಧಾಕರ್

    ಅಲ್ಲದೇ ಇದಕ್ಕೆ ಹೊಂದಿಕೊಂಡ ಸಂಚರಿಸಲು ಸಾಧ್ಯವಾಗದಿರುವಂತಹ ಇತರ ಸಿಆರ್‌ಎಫ್ ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ತಮ್ಮ ಅನುಭವದ ಆಧಾರದಲ್ಲಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೊಪ್ಪಳದ ಗವಿಸಿದ್ದಪ್ಪ ಕೊಲೆ ಕೇಸನ್ನ NIAಗೆ ವಹಿಸಿ – ಛಲವಾದಿ ನಾರಾಯಣಸ್ವಾಮಿ

  • ಸಂಸತ್‌ ಕಚೇರಿಯಲ್ಲಿ ನಿತಿನ್‌ ಗಡ್ಕರಿ ಭೇಟಿಯಾದ ಕ್ಯಾ.ಬ್ರಿಜೇಶ್‌ ಚೌಟ

    ಸಂಸತ್‌ ಕಚೇರಿಯಲ್ಲಿ ನಿತಿನ್‌ ಗಡ್ಕರಿ ಭೇಟಿಯಾದ ಕ್ಯಾ.ಬ್ರಿಜೇಶ್‌ ಚೌಟ

    ಮಂಗಳೂರು/ನವದೆಹಲಿ: ಸಂಸತ್ತಿನ ಕಚೇರಿಯಲ್ಲಿ ಗುರುವಾರ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿದ್ದಾರೆ.

    ಬಿ.ಸಿ. ರೋಡ್ – ಸುರತ್ಕಲ್‌ ನಡುವಿನ ಬಂದರು ಸಂಪರ್ಕಿಸುವ ಹೆದ್ದಾರಿ ಹದಗೆಟ್ಟಿರುವುದು ಹಾಗೂ ಅದರ ಶಾಶ್ವತ ನಿರ್ವಹಣೆಗೆ ಎದುರಾಗಿರುವ ಅಡಚಣೆ, ಸಮಸ್ಯೆ – ಸವಾಲುಗಳ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದಿದ್ದಾರೆ.

    ಈ ಪ್ರಮುಖ ರಸ್ತೆಯು ಪ್ರಸ್ತುತ NHLML ವ್ಯಾಪ್ತಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರ ನಿರ್ವಹಣೆಗೆ ಸೂಕ್ತವಾದ ಏಜೆನ್ಸಿ ಇಲ್ಲದ ಕಾರಣ ಹಾಗೂ ನಿಧಿಯ ಕೊರತೆಯ ಕಾರಣ ಕಾಲ ಕಾಲಕ್ಕೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮನವರಿಕೆ ಮಾಡಿದ್ದಾರೆ.

    ಅದರಲ್ಲೂ ಮಳೆಗಾಲದಲ್ಲಿ ಈ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಈ ಹಿನ್ನೆಲೆಯಲ್ಲಿ ಬಿ.ಸಿ. ರೋಡ್ – ಸುರತ್ಕಲ್‌ ಹೆದ್ದಾರಿಯನ್ನು NHAI ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದಕ್ಕೆ ಖುದ್ದಾಗಿ ಗಮನಹರಿಸಿ ಈ ಗಂಭೀರ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಸಚಿವರಲ್ಲಿ ಮನವಿ ಮಾಡಿದ್ದಾರೆ.

    ಸಂಸದರು ಕೂಡಾ ನಿರಂತರವಾಗಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಅಗತ್ಯ ಕ್ರಮ ಜರುಗಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಭೇಟಿ ವೇಳೆ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಅಗತ್ಯ ಕ್ರಮದ ಭರವಸೆ ನೀಡಿದ್ದಾರೆ.

    ಮಂಗಳೂರು ನಗರ ಭಾಗದ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು NH-66 ಮತ್ತು NH-75 ಅನ್ನು ಸಂಪರ್ಕಿಸುವ ರಿಂಗ್ ರೋಡ್ ನಿರ್ಮಿಸುವಂತೆ ಇದೇ ಸಂದರ್ಭದಲ್ಲಿ ಸಂಸದರು ಮನವಿ ಮಾಡಿದ್ದಾರೆ.

  • ಸಿಎಂಗೆ ಆಹ್ವಾನ ಕೊಡೋ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ನಿತಿನ್ ಗಡ್ಕರಿ

    ಸಿಎಂಗೆ ಆಹ್ವಾನ ಕೊಡೋ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ನಿತಿನ್ ಗಡ್ಕರಿ

    ಬೆಂಗಳೂರು: ಸಿಗಂಧೂರು ಸೇತುವೆ (Sigandur Bridge) ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ಕೊಡುವ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿದೆ ಅನ್ನೋ ಆರೋಪವನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅಲ್ಲಗಳೆದಿದ್ದಾರೆ.

    ಈ ಕುರಿತು‌ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಆಹ್ವಾನಿಸುವ ವಿಚಾರದಲ್ಲಿ ಶಿಷ್ಟಾಚಾರ (Protocols) ಉಲ್ಲಂಘನೆ ಆಗಿಲ್ಲ. ಜುಲೈ 11ರಂದೇ ಅಧಿಕೃತ ಆಹ್ವಾನ ನೀಡಲಾಗಿತ್ತು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಲು ಅವರನ್ನ ಆಹ್ವಾನಿಸಲಾಗಿತ್ತು. ಖುದ್ದು ಹಾಜರಾಗಲು ಸಾಧ್ಯವಾಗದಿದ್ರೆ ವರ್ಚುವಲ್ ಮೂಲಕ ಭಾಗಿಯಾಗುವಂತೆ ಪತ್ರದ ಮೂಲಕ ಕೋರಲಾಗಿತ್ತು ಎಂದು ಪತ್ರ ಸಹಿತ ತಿಳಿಸಿದ್ದಾರೆ. ಇದನ್ನೂ ಓದಿ: ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

    ಕೇಂದ್ರ ಸರ್ಕಾರವು ಸ್ಥಾಪಿತ ಶಿಷ್ಟಾಚಾರಗಳನ್ನು ಕೇಂದ್ರ ಸದಾ ಎತ್ತಿ ಹಿಡಿಯುತ್ತೆ. ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿಯವರ ಕೊಡುಗೆಗಳು ಮತ್ತು ಸಹಕಾರ ಶ್ಲಾಘಿಸ್ತೇವೆ. ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲಾ ರಾಜ್ಯಗಳೊಂದಿಗೆ ನಿಕಟ ಸಮನ್ವಯಕ್ಕೆ ಕೇಂದ್ರ ಸದಾ ಬದ್ಧವಾಗಿರುತ್ತದೆ ಎಂದು ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: Sigandur Bridge | ಯಾವುದೇ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ, ಸಿಎಂಗೆ ಆಹ್ವಾನ ನೀಡಲಾಗಿದೆ: ರಾಘವೇಂದ್ರ ತಿರುಗೇಟು

    ಸೇತುವೆ ಉದ್ಘಾಟನೆ ಕಾರ್ಯಕ್ರಮದ ಕರಡು ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರಿದೆ. ಆದ್ರೆ ಹೆದ್ದಾರಿ ಸಚಿವಾಲಯದಿಂದ ತಮಗೆ ಯಾವುದೇ ಮಾಹಿತಿ ನೀಡಿಲ್ಲ. ಸಾಧ್ಯವಾದ್ರೆ ಕಾರ್ಯಕ್ರಮ ಮುಂದೂಡಿ. ಇಂತಹ ಕಾರ್ಯಕ್ರಮಗಳ ವಿಚಾರದಲ್ಲಿ ರಾಜ್ಯ ಸರ್ಕಾರದ ಜತೆ ಸೂಕ್ತವಾಗಿ ವ್ಯವಹರಿಸುವಂತೆ ನಿಮ್ಮ ಸಚಿವಾಲಯಕ್ಕೆ ನಿರ್ದೇಶನ ನೀಡಿ ಎಂದು ಸಿದ್ದರಾಮಯ್ಯ ಅವರು ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸಿಗಂದೂರು ಸೇತುವೆ ಉದ್ಘಾಟನೆ| ಕೇಂದ್ರದಿಂದ ಶಿಷ್ಟಾಚಾರ ಉಲ್ಲಂಘನೆ: ಸಿದ್ದರಾಮಯ್ಯ ಆಕ್ರೋಶ

  • ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

    – ಸಿಗಂದೂರು ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ

    ಶಿವಮೊಗ್ಗ: ಸಾಗರದ (Sagar) ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ 2ನೇ ಅತಿ ಉದ್ದದ ಕೇಬಲ್ ಸೇತುವೆಯಾದ ಸಿಗಂದೂರು ಸೇತುವೆಯನ್ನು (Sigandur Bridge) ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು (Nitin Gadkari) ಲೋಕಾರ್ಪಣೆ ಮಾಡಿದರು.

    ಸೇತುವೆ ಲೋಕಾರ್ಪಣೆ ವೇಳೆ ನಡೆದ ಹೋಮದಲ್ಲಿ ಸಚಿವರು ಪಾಲ್ಗೊಂಡರು. ಲೋಕಾರ್ಪಣೆ ನಂತರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ಬಿ.ವೈ ರಾಘವೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಸಾಥ್ ನೀಡಿದರು. ಇದನ್ನೂ ಓದಿ: 60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್‌ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ


    ದೇವಸ್ಥಾನದಲ್ಲಿ ನವಚಂಡಿಕಾ ಹೋಮದ ಪೂರ್ಣಾವತಿ ನೆರವೇರಿಸಲಾಯಿತು. ಧರ್ಮದರ್ಶಿ ರಾಮಪ್ಪನವರು ಕೇಂದ್ರ ಸಚಿವರಿಗೆ ಸೇತುವೆಯ ಪ್ರತಿಕೃತಿ ನೀಡಿ ಗೌರವಿಸಿದರು.

    ಸೇತುವೆ ಲೋಕಾರ್ಪಣೆ ಜೊತೆಗೆ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳ 2,056 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಸಚಿವರು ಚಾಲನೆ ನೀಡಲಿದ್ದಾರೆ.

    ಸಿಗಂದೂರು ಸೇತುವೆ, 2019ರ ಡಿಸೆಂಬರ್‍ನಲ್ಲಿ ಕಾಮಗಾರಿ ಪ್ರಾರಂಭಗೊಂಡಿತು. 2.44 ಕಿಲೋಮೀಟರ್ ಉದ್ದದ ಕೇಬಲ್ ಸೇತುವೆ ಇದಾಗಿದ್ದು, ಅಗಲ 16 ಮೀಟರ್, ಸೇತುವೆ ಫುಟ್‍ಪಾತ್ 2*1.5 ಮೀಟರ್ ಇದೆ. ಸಂಪರ್ಕ ರಸ್ತೆ 1.05 ಕೀಮೀ ನಿಂದ 3 ಕೀಮಿ ಇದ್ದು, ಉಕ್ಕಿನ ಕೇಬಲ್ ಉದ್ದ 470 ಮೀಟರ್, ಕೇಬಲ್ ಎತ್ತರ 38.50 ಮೀಟರ್ ಇದೆ. 473 ಕೋಟಿ ರೂ. ವೆಚ್ಚವಾಗಿದೆ. ದಿಲೀಪ್ ಬಿಲ್ಡ್ ಕಾನ್ ಎಂಬ ಕಂಪನಿಯಿಂದ ಸೇತುವೆ ನಿರ್ಮಾಣವಾಗಿದೆ.

    ಕೋವಿಡ್ ಕಾರಣದಿಂದ ಮೂರು ವರ್ಷದಲ್ಲಿ ಮುಗಿಯಬೇಕಾದ ಸೇತುವೆ ಐದು ವರ್ಷ ತೆಗೆದುಕೊಂಡಿತು. 100 ಟನ್ ತೂಕ ತಡೆದುಕೊಳ್ಳುವ ಸಾಮಥ್ರ್ಯ ಹೊಂದಿದೆ. ಗುಜರಾತ್‍ನ ಓಖಾ ಬಳಿ ನರ್ಮದಾ ನದಿಗೆ ನಿರ್ಮಿಸಿದ ತೂಗು ಸೇತುವೆ ಬಳಿಕ ದೇಶದಲ್ಲಿ ನಿರ್ಮಾಣಗೊಂಡ ದೇಶದ ಎರಡನೇ ಅತೀ ದೊಡ್ಡ ಕೇಬಲ್ ಸೇತುವೆ ಇದಾಗಿದೆ. ಇದನ್ನೂ ಓದಿ: ಈಡೇರಿದ ಶರಾವತಿ ಮಡಿಲ ಮಕ್ಕಳ 6 ದಶಕಗಳ ಕನಸು!