ಗಾಂಧೀನಗರ: ‘ಹರ್ ಘರ್ ತಿರಂಗ’ ಯಾತ್ರೆಯ ರ‍್ಯಾಲಿ ವೇಳೆ ಗುಜರಾತ್‍ನ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಮೇಲೆ ರಸ್ತೆಯಲ್ಲಿ ಬಿಡಾಡುತ್ತಿದ್ದ ಹಸುಗಳು ದಾಳಿ ನಡೆಸಿರುವ ಘಟನೆ ಮೆಹ್ಸಾನಾ ಜಿಲ್ಲೆಯ ಕಡಿ ಪ್ರದೇಶದಲ್ಲಿ ನಡೆದಿದೆ.
ಕಡಿಯಲ್ಲಿ ನಡೆದ ತ್ರಿವರ್ಣ ಧ್ವಜಾರೋಹಣದ ವೇಳೆ ಈ ಘಟನೆ ನಡೆದಿದೆ. ಕಾರನ್‍ಪುರ ತರಕಾರಿ ಮಾರುಕಟ್ಟೆಯಲ್ಲಿ ಓಡಾಡುತ್ತಿದ್ದ ಹಸು ನಿತಿನ್ ಪಟೇಲ್ ಅವರಿಗೆ ತಿವಿದಿದೆ. ಇದರಿಂದಾಗಿ ನಿತಿನ್ ಪಟೇಲ್ ಅವರ ಕಾಲಿಗೆ ಗಾಯವಾಗಿದ್ದು, ನಂತರ ಅವರನ್ನು ಸ್ಥಳೀಯರ ನೆರವಿನಿಂದ ತಕ್ಷಣ ಭಾಗ್ಯೋದಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಇದನ್ನೂ ಓದಿ: ಎಣ್ಣೆ ಏಟಲ್ಲಿ ರೆಸ್ಟೋರೆಂಟ್‍ನಲ್ಲಿ ರಂಪಾಟ – ಗಗನಸಖಿ ಸೇರಿ ಮೂವರು ಅರೆಸ್ಟ್
ಚಿಕಿತ್ಸೆ ನಂತರ ನಿತಿನ್ ಪಟೇಲ್ ಅವರು ಅಹಮದಾಬಾದ್‍ನಲ್ಲಿರುವ ತಮ್ಮ ನಿವಾಸಕ್ಕೆ ತೆರಳಲಿದ್ದಾರೆ. ಇದೀಗ ನಿತಿನ್ ಪಟೇಲ್ ಅವರು ವೀಲ್ ಚೇರ್ ಮೇಲೆ ಕುಳಿತುಕೊಂಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಜೈಲಿನ ಕೈದಿಗೆ ಚಿಕನ್ ಪೀಸ್‍ನಲ್ಲಿ ಗಾಂಜಾ ಸಾಗಾಟ- ಪೊಲೀಸರಿಂದ ಜಪ್ತಿ
Live Tv
[brid partner=56869869 player=32851 video=960834 autoplay=true]
ಗಾಂಧಿನಗರ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೂತನ ಸಿಎಂ ಯಾರಾಗಲಿದ್ದಾರೆ ಎಂಬುದು ಕೂತುಹಲ ಮೂಡಿಸಿದೆ.
ಕರ್ನಾಟಕದಂತೆ ಗುಜರಾತ್‍ನಲ್ಲೂ ನಾಯಕತ್ವ ಬದಲಾವಣೆಯಾಗಿದ್ದು, ಇಂದು ಅಥವಾ ನಾಳೆ ನೂತನ ಸಿಎಂ ಆಯ್ಕೆ ಮಾಡವ ಸಾಧ್ಯತೆ ಇದೆ. ಮುಂದಿನ ಸಿಎಂ ಆಯ್ಕೆ ಮಾಡುವ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದ್ದು, ಪಟೇಲ್ ಸಮುದಾಯಕ್ಕೆ ಮಣೆ ಹಾಕಲು ಚಿಂತನೆ ನಡೆಸಲಾಗಿದೆ ಎಂದು ಅವರದಿಯಾಗಿದೆ. ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ರಾಜ್ಯ ಕೃಷಿ ಸಚಿವರಾದ ಆರ್.ಸಿ ಫಾಲ್ಡು, ಕೇಂದ್ರ ಸಚಿವರಾದ ಪುರುಷೋತ್ತಮ್ ರೂಪಾಲ, ಮನ್ಸುಖ್ ಮಾಂಡವೀಯ ಸೇರಿದಂತೆ ಕೆಲ ನಾಯಕರ ಹೆಸರುಗಳು ನೂತನ ಸಿಎಂ ಸ್ಥಾನಕ್ಕೆ ಕೇಳಿಬರುತ್ತಿದೆ. ಇದನ್ನೂ ಓದಿ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ
ಗುಜರಾತ್‍ನಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಒಂದು ವರ್ಷವಷ್ಟೇ ಬಾಕಿ ಇದೆ. ಈ ನಡುವೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ಯಾವುದೇ ಕಾರಣವನ್ನೂ ತಿಳಿಸದೇ ಸಿಎಂ ಬದಲಾವಣೆ ಮಾಡಿರುವುದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಮಧ್ಯೆ ರಾಜೀನಾಮೆ ಬಳಿಕ ಮಾತನಾಡಿದ ವಿಜಯ್ ರೂಪಾನಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ನಾಯಕರಿಗೆ ಧನ್ಯವಾದ ತಿಳಿಸುತ್ತೇನೆ. ಗುಜರಾತ್ ಪ್ರಗತಿಗೆ ಹೊಸ ನಾಯಕತ್ವ ಬರಬೇಕೆಂದು ನಾನು ನಂಬುತ್ತೇನೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ನೈಟ್ ಕರ್ಫ್ಯೂ ಹೊತ್ತಲ್ಲಿ ಯುವಜನತೆಯ ಮೋಜು ಮಸ್ತಿ – ಪೊಲೀಸರ ಮುಂದೆಯೇ ಬಿಂದಾಸ್ ಸುತ್ತಾಟ
ಇದೀಗ ಹೊಸ ನಾಯಕರ ರೇಸ್ ನಲ್ಲಿ ಪಟೇಲ್, ಫಾಲ್ಡು, ರೂಪಾಲ, ಮಾಂಡವೀಯ ಹೆಸರುಗಳು ಹೆಚ್ಚಾಗಿ ಕೇಳಿಬರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬುದನ್ನು ನಿರ್ಧರಿಸಿದ್ದಾರೆ ಹಾಗಾಗಿ ಅಚ್ಚರಿಯ ಹೆಸರು ಸೇರ್ಪಡೆಗೊಂಡರು ಕೂಡ ಆಶ್ಚರ್ಯ ಪಡಬೇಕಾಗಿಲ್ಲ ಎಂಬ ಅಭಿಪ್ರಾಯವು ಕೇಳಿಬರುತ್ತಿದೆ.
2016 ರಲ್ಲಿ ಆನಂದಿ ಬೆನ್ ಪಟೇಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗ, ನಿತಿನ್ ಪಟೇಲ್ ಮುಂದಿನ ಸಿಎಂ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಅಂತಿಮ ಕ್ಷಣದಲ್ಲಿ ರೂಪಾನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ನಿತಿನ್ ಪಟೇಲ್ ಅವರನ್ನೇ ಸಿಎಂ ಮಾಡಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಕೇಂದ್ರ ಹೈಕಮಾಂಡ್ ಯಾವುದೇ ಗುಟ್ಟು ಬಿಟ್ಟುಕೊಡುತ್ತಿಲ್ಲ. ಇದನ್ನೂ ಓದಿ: ಚುನಾವಣೆ ಸಂದರ್ಭ ಮಾತ್ರವಲ್ಲ, ನಿರಂತರವಾಗಿ ಜನರ ಯೋಗಕ್ಷೇಮ ವಿಚಾರಿಸಬೇಕು: ಆರ್.ಅಶೋಕ್
ಅಹಮದಾಬಾದ್: ಸತತ ಆರನೇ ಬಾರಿಗೆ ಗುಜರಾತಿನಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿಯಲ್ಲಿ ಆರಂಭದ ದಿನಗಳಲ್ಲಿಯೇ ಭಿನ್ನಮತ ಕಂಡು ಬರುತ್ತಿದೆ. ಸಿಎಂ ವಿಜಯ್ ರೂಪಾನಿ ಮತ್ತು ಡಿಸಿಎಂ ನಿತಿನ್ ಪಟೇಲ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
ಗುಜರಾತ್ ಸಂಪುಟ ವಿಸ್ತರಣೆಯಿಂದ ಉಪ ಮುಖ್ಯಮಂತ್ರಿಯಾಗಿರುವ ನಿತಿನ್ ಪಟೇಲ್ ಅಸಮಧಾನಗೊಂಡಿದ್ದಾರೆ ಅಂತಾ ಹೇಳಲಾಗುತ್ತಿದೆ. ಈ ಹಿಂದೆಯೂ ಡಿಸಿಎಂ ಆಗಿ ಕಾರ್ಯ ನಿರ್ವಹಿಸಿದ್ದ ನಿತಿನ್ ಪಟೇಲರ ಬಳಿ ಹಣಕಾಸು ಸಚಿವಾಲಯ, ನಗರಾಭಿವೃದ್ಧಿ, ಉದ್ಯಮ ಮತ್ತು ಆದಾಯ ಖಾತೆಗಳಿದ್ದವು. ಆದರೆ ಈ ಬಾರಿ ಪಟೇಲರಿಗಿಂತ ಕಿರಿಯರಾಗಿರುವ ಸೌರಭ್ ಪಟೇಲ್ ಅವರಿಗೆ ಇಂಧನ ಹಾಗೂ ಹಣಕಾಸು ಸಚಿವಾಲಯ ಜವಬ್ದಾರಿಯನ್ನು ನೀಡಲಾಗಿದೆ. ಇನ್ನು ಸಿಎಂ ರೂಪಾನಿ ಗೃಹ ಖಾತೆ ಹಾಗೂ ನಗರಾಭಿವೃದ್ಧಿ ಖಾತೆಯನ್ನ ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.
ಸಂಪುಟ ವಿಸ್ತರಣೆಯಿಂದಾಗಿ ಅಸಮಧಾನಗೊಂಡಿರುವ ನಿತಿನ್ ಪಟೇಲ್, ಗುರುವಾರ ನಡೆದ ಕ್ಯಾಬಿನೆಟ್ ಸಭೆಗೆ ತಡವಾಗಿ ಆಗಿಮಿಸಿದ್ದರು. ಸಿಎಂ ರೂಪಾನಿ ಖುದ್ದು ನಿತಿನ್ ಪಟೇಲ್ ಅವರ ಮನೆಗೆ ತೆರಳಿ ಸುದೀರ್ಘ ಮಾತುಕತೆಯ ಬಳಿಕ ಕ್ಯಾಬಿನೆಟ್ ಮೀಟಿಂಗ್‍ನಲ್ಲಿ ಭಾಗಿಯಾದರು. ಹೀಗಾಗಿ ಸಂಜೆ 5 ಗಂಟೆಗೆ ಆರಂಭವಾಗಬೇಕಿದ್ದ ಸಭೆ ರಾತ್ರಿ 9 ಗಂಟೆಗೆ ನಡೆಸಲಾಯಿತು.
ಎರಡು ಮೂರು ದಿನಗಳಲ್ಲಿ ನಿತಿನ್ ಪಟೇಲ್ ಅವರಿಗೆ ಹಣಕಾಸು ಸಚಿವಾಲಯದ ಜವಾಬ್ದಾರಿ ನೀಡದೇ ಇದ್ದಲ್ಲಿ, ಆತ್ಮಗೌರವಕ್ಕಾಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಈ ಹಿಂದೆ ಆನಂದಿಬೆನ್ ಮತ್ತು ವಿಜಯ್ ರೂಪಾನಿ ಮುಖ್ಯಮಂತ್ರಿಯಾಗಿದ್ದಾಗ ನಿತಿನ್ ಪಟೇಲ್ ಅವರೇ ಹಣಕಾಸು ಸಚಿವಾಲಯವನ್ನು ನಿರ್ವಹಿಸುತ್ತಿದ್ದರು. ಈ ಬಾರಿ ನಿತಿನ್ ಪಟೇಲ್ ಗೃಹ ಇಲಾಖೆ ಮತ್ತು ಹಣಕಾಸು ಸಚಿವಾಲಯದ ಮೇಲೆ ಕಣ್ಣಿಟ್ಟಿದ್ದಾರೆ. ಸದ್ಯ ನಿತಿನ್ ಪಟೇಲರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ , ರಸ್ತೆ ಮತ್ತು ಕಟ್ಟಡ ಹಾಗೂ ನರ್ಮದಾ, ಕಲ್ಪರ್ಸ್ ಯೋಜನೆಯ ಜವಾಬ್ದಾರಿ ನೀಡಲಾಗಿದೆ.
ಅಹಮದಾಬಾದ್: ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಪುತ್ರನನ್ನ ಕತಾರ್ ಏರ್‍ವೇಸ್ ವಿಮಾನ ಏರದಂತೆ ಅಧಿಕಾರಿಗಳು ತಡೆದ ಘಟನೆ ಸೋಮವಾರದಂದು ನಡೆದಿದೆ.
ನಿತಿನ್ ಪಟೇಲ್ ಅವರ ಪುತ್ರ ಜೈಮನ್ ಪಟೇಲ್ ತಮ್ಮ ಹೆಂಡತಿ ಮಗಳೊಂದಿಗೆ ಗ್ರೀಸ್‍ಗೆ ಪ್ರವಾಸಕ್ಕೆಂದು ಹೊರಟಿದ್ದರು. ಸೋಮವಾರ ಬೆಳಿಗ್ಗೆ 4 ಗಂಟೆಗೆ ವಿಮಾನ ಹೊರಡಬೇಕಿತ್ತು. ಈ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿದ್ದ ಜೈಮನ್ ಪಟೇಲ್ ಪಾನಮತ್ತರಾಗಿದ್ದು, ನಡೆಯುವುದಕ್ಕೂ ಕಷ್ಟಪಡುತ್ತಿದ್ರು ಎಂದು ವರದಿಯಾಗಿದೆ.
ಇಂತಹ ಸ್ಥಿತಿಯಲ್ಲಿದ್ದ ಜೈಮನ್, ವಿಮಾನ ನಿಲ್ದಾಣದಲ್ಲಿ ವೀಲ್‍ಚೇರ್‍ನಲ್ಲಿ ಕುಳಿತೇ ತಪಾಸಣೆ ಮುಗಿಸಿದ್ದಾಗಿ ವಿಮಾನ ನಲ್ದಾಣದ ಅಧಿಕಾರಿಗಳು ಹೇಳಿದ್ದಾರೆ. ಜೈಮನ್ ಅವರನ್ನ ವಿಮಾನ ಏರದಂತೆ ತಡೆಯಲಾಯ್ತು. ಜೈಮನ್ ಮತ್ತು ಏರ್‍ವೇಸ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರೋ ನಿತಿನ್ ಪಟೇಲ್, ನನಗೆ ಅವಮಾನ ಮಾಡಲೆಂದು ಈ ರೀತಿ ಮಾಡಿದ್ದಾರೆ. ನನ್ನ ಮಗ, ಸೊಸೆ ಮತ್ತು ಮೊಮ್ಮಗಳು ಪ್ರವಾಸಕ್ಕೆ ಹೋಗುತ್ತಿದ್ರು. ಮಗನ ಆರೋಗ್ಯ ಚೆನ್ನಾಗಿರಲಿಲ್ಲ. ನಂತರ ನನ್ನ ಸೊಸೆ ಮನೆಗೆ ಫೋನ್ ಮಾಡಿ, ಪ್ರವಾಸಕ್ಕೆ ಹೋಗದೆ ಮನೆಗೆ ಹಿಂದಿರುಗಿದ್ರು. ನಮ್ಮ ವಿರೋಧಿಗಳು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.