Tag: Nityanand Rai

  • ಭಾರತ ತೊರೆಯುವಂತೆ 81 ಚೀನಾ ಪ್ರಜೆಗಳಿಗೆ ನೋಟಿಸ್‌: ಕೇಂದ್ರ ಸಚಿವ ನಿತ್ಯಾನಂದ ರಾಯ್‌

    ಭಾರತ ತೊರೆಯುವಂತೆ 81 ಚೀನಾ ಪ್ರಜೆಗಳಿಗೆ ನೋಟಿಸ್‌: ಕೇಂದ್ರ ಸಚಿವ ನಿತ್ಯಾನಂದ ರಾಯ್‌

    ನವದೆಹಲಿ: ಭಾರತ ತೊರೆಯುವಂತೆ 81 ಚೀನಾ ಪ್ರಜೆಗಳಿಗೆ ನೋಟಿಸ್‌ ನೀಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರಾಯ್‌ ತಿಳಿಸಿದ್ದಾರೆ.

    ಲೋಕಸಭೆಯಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಸಚಿವ ರಾಯ್‌ ಈ ಬಗ್ಗೆ ವಿವರಿಸಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ

    2019ರಿಂದ 2021ರ ಅವಧಿಯಲ್ಲಿ 81 ಚೀನಾ ಪ್ರಜೆಗಳಿಗೆ ಭಾರತ ಬಿಟ್ಟು ಹೊರಡುವಂತೆ ನೋಟಿಸ್‌ ನೀಡಲಾಗಿದೆ. ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಮತ್ತು ಇತರ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದ್ದ ಆರೋಪವಿರುವ 726 ಇತರರನ್ನು ಪ್ರತಿಕೂಲ ಪಟ್ಟಿಯಲ್ಲಿ ಇರಿಸಲಾಗಿದೆ ಎಂದು ರಾಯ್‌ ಮಾಹಿತಿ ನೀಡಿದ್ದಾರೆ.

    117 ಜನರನ್ನು ಗಡೀಪಾರು ಮಾಡಲಾಗಿದೆ ಎಂದು ನಿತ್ಯಾನಂದ ರಾಯ್‌ ಹೇಳಿದ್ದಾರೆ. ಇದನ್ನೂ ಓದಿ: ಇಂದು ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾಗಲಿರುವ ಮೋದಿ

    ಸಂಸತ್ತಿನ ಉಭಯ ಸದನಗಳಲ್ಲಿ ಮುಂಗಾರು ಅಧಿವೇಶನವನ್ನು ಪ್ರತಿಪಕ್ಷಗಳು ನಿರಂತರವಾಗಿ ಅಡ್ಡಿಪಡಿಸುತ್ತಿವೆ. ಇದರಿಂದಾಗಿ ಪಟ್ಟಿ ಮಾಡಲಾದ ವಿಷಯಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರಿ ಪಂಡಿತರ‍್ಯಾರು ಕಣಿವೆಯನ್ನು ತೊರೆದಿಲ್ಲ: ಕೇಂದ್ರ ಸಚಿವ

    ಕಾಶ್ಮೀರಿ ಪಂಡಿತರ‍್ಯಾರು ಕಣಿವೆಯನ್ನು ತೊರೆದಿಲ್ಲ: ಕೇಂದ್ರ ಸಚಿವ

    ನವದೆಹಲಿ: 2022ರ ಅವಧಿಯಲ್ಲಿ ಕಾಶ್ಮೀರಿ ಪಂಡಿತರು ಯಾರೂ ಕಣಿವೆಯನ್ನು ತೊರೆದಿಲ್ಲ ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ತಿಳಿಸಿದರು.

    ಸಂಸತ್ತಿನಲ್ಲಿ ಮಾತನಾಡಿದ ಅವರು, 2019ರ ಅಗಸ್ಟ್‌ನಲ್ಲಿ 320ನೇ ವಿಧಿಯನ್ನು ರದ್ದುಪಡಿಸಿದ ನಂತರ ಯಾವುದೇ ಕಾಶ್ಮೀರಿ ಪಂಡಿತರು ವಲಸೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಕಾಶ್ಮೀರಿ ಪಂಡಿತರ ಮೇಲೆ ಭಯೋತ್ಪಾದಕರಿಂದ ನಿರಂತರವಾಗಿ ನಡೆಯುತ್ತಿರುವ ಹತ್ಯೆಗಳ ಹಿನ್ನೆಲೆಯಲ್ಲಿ ಕಾಶ್ಮೀರಿ ಪಂಡಿತರು ಕಣಿವೆ ತೊರೆಯುತ್ತಿದ್ದೇವೆ ಎಂದು ಪಂಡಿತ ಕುಟುಂಬಗಳು ಕಾಶ್ಮೀರವನ್ನು ತೊರೆಯುತ್ತಿರುವ ವೀಡಿಯೋವೊಂದು ವೈರಲ್ ಆಗಿತ್ತು. ಜೊತೆಗೆ ಸರ್ಕಾರವು ಜನರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ದೂರಿದ್ದರು. ಅಷ್ಟೇ ಅಲ್ಲದೇ ಅನೇಕರು ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡುವುದಾಗಿಯೂ ತಿಳಿಸಿದ್ದರು. ಇದನ್ನೂ ಓದಿ: ಹತ್ಯೆಯ ದಿನವೇ ಮುಸ್ಲಿಂ ಸ್ನೇಹಿತನ ಗೃಹಪ್ರವೇಶಕ್ಕೆ ಹೋಗಿದ್ದ ಪ್ರವೀಣ್ ನೆಟ್ಟಾರ್!

    ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ಪ್ರಧಾನಿ ಅಭಿವೃದ್ಧಿ ಪ್ಯಾಕೇಜ್(ಪಿಎಂಡಿಪಿ) ಅಡಿಯಲ್ಲಿ ಕೆಲಸ ಮಾಡುವ ಯಾವುದೇ ಕಾಶ್ಮೀರಿ ಪಂಡಿತರು ರಾಜೀನಾಮೆಯನ್ನು ನೀಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸದನದಲ್ಲಿ ಕಾಗದ ಹಾರಿಸಿದ್ದ ಆಪ್ ಸಂಸದ ಅಮಾನತು

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದಿಂದ ಬಂದ ಶೇ.87 ಮಂದಿಗೆ ಭಾರತದ ಪೌರತ್ವ

    ಪಾಕಿಸ್ತಾನದಿಂದ ಬಂದ ಶೇ.87 ಮಂದಿಗೆ ಭಾರತದ ಪೌರತ್ವ

    ನವದೆಹಲಿ: ಕಳೆದ 5 ವರ್ಷಗಳಲ್ಲಿ ಭಾರತೀಯ ಪೌರತ್ವವನ್ನು ಪಡೆದಿರುವ ಶೇ.87 ರಷ್ಟು ಅರ್ಜಿದಾರರು ಪಾಕಿಸ್ತಾನದಿಂದ ಬಂದವರು ಎಂಬ ಮಾಹಿತಿಯನ್ನು ಗೃಹ ಸಚಿವಾಲಯವು ಬಹಿರಂಗಪಡಿಸಿದೆ.

    ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿ, ಕಳೆದ 5 ವರ್ಷಗಳಲ್ಲಿ 5,220 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಅವರಲ್ಲಿ 4,552 (ಶೇ.87) ಹೊಸ ನಾಗರಿಕರು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಮಾಹಿತಿ ನೀಡಿದೆ. ಇದನ್ನೂ ಓದಿ: ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿತ್ತು 28 ಕೋಟಿ ಮೌಲ್ಯದ ಕೊಕೇನ್ – ಬೆಚ್ಚಿಬಿದ್ದ ಪೊಲೀಸರು

    REPORT

    ಕಳೆದ ವರ್ಷ ನವಂಬರ್‌ನಲ್ಲಿ ಲೋಕಸಭೆಗೆ ಮಾಹಿತಿ ನೀಡಿದ್ದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಪ್ರಕಾರ, 5 ವರ್ಷಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವ ತ್ಯಜಿಸಿದ್ದಾರೆ. 2021 ರಿಂದ 2021ರ ವರೆಗೆ 6,08,162 ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಅವರು ಲೋಕಸಭೆಗೆ ತಿಳಿಸಿದ್ದರು.

    ಗೃಹ ಸಚಿವಾಲಯವು 2017 ಮತ್ತು 2022ರ ನಡುವೆ 5,220 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಪ್ರತಿವರ್ಷ ಸರಾಸರಿ 1,21,632 ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದರು ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಬೆಂಗ್ಳೂರು ಡ್ರೋನ್ ಹಾರಿಸಿ ಉತ್ಸವಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

    Passport

    ಕಳೆದ 5 ವರ್ಷಗಳಲ್ಲಿ ಕೇವಲ 71 ಅಮೆರಿಕನ್ನರು ಭಾರತೀಯ ಪೌರತ್ವ ಪಡೆದಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಪಾಕಿಸ್ತಾನ (ಶೇ.87), ಅಫ್ಘಾನಿಸ್ತಾನ (ಶೇ.8) ಮತ್ತು ಬಾಂಗ್ಲಾದೇಶ (ಶೇ.2) ಭಾರತದ ಪೌರತ್ವ ಪಡೆದುಕೊಂಡಿವೆ.

    ಯಾವ ವರ್ಷ ಎಷ್ಟು ಮಂದಿಗೆ ಪೌರತ್ವ?

    • 2017- 1,33,049
    • 2018- 1,34,561
    • 2019- 1,44,017
    • 2020- 85,248
    • 2021- 1,11,287

  • 22 ಐಪಿಎಸ್‌ ಅಧಿಕಾರಿಗಳು ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದಾರೆ- ಎಂಎಚ್‌ಒ

    22 ಐಪಿಎಸ್‌ ಅಧಿಕಾರಿಗಳು ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದಾರೆ- ಎಂಎಚ್‌ಒ

    ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಒಟ್ಟು 22 ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿಗಳ ಮೇಲೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಗೃಹ ಸಚಿವಾಲಯ ಬುಧವಾರ ತಿಳಿಸಿದೆ.

    ಕಳೆದ ಐದು ವರ್ಷಗಳಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿರುವ ಐಪಿಎಸ್ ಅಧಿಕಾರಿಗಳ ಸಂಖ್ಯೆ ಕುರಿತು ರಾಜ್ಯಸಭೆಯಲ್ಲಿ ಸಂಸದರೊಬ್ಬರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರೈ ಅವರು, 2017 ರಿಂದ 2022 ಮಾರ್ಚ್ 30 ರವರೆಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 22 ಐಪಿಎಸ್ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್‍ರನ್ನು ವಶಕ್ಕೆ ಪಡೆದ ಸಿಬಿಐ

    ಉತ್ತರ ಪ್ರದೇಶದಲ್ಲಿ ಪರಾರಿಯಾಗಿರುವ ಐಪಿಎಸ್ ಅಧಿಕಾರಿಗಳ ಸಂಖ್ಯೆ ಕುರಿತು ಕೇಳಿದಾಗ, ರಾಜ್ಯ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ ಒಬ್ಬ ಐಪಿಎಸ್ ಅಧಿಕಾರಿಯನ್ನು ಪರಾರಿ ಎಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ದೇಶದಲ್ಲಿ ಪೊಲೀಸ್ ಪಡೆಗಳ ನಡುವೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದು ಸತ್ಯವೇ? ಅಂತಹ ಪ್ರವೃತ್ತಿಗೆ ಕಾರಣಗಳನ್ನು ಕಂಡುಹಿಡಿಯಲು ಅಧ್ಯಯನ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಯನ್ನು ಸಹ ಕೇಳಲಾಯಿತು. ಇದನ್ನೂ ಓದಿ: ಮೋದಿಯನ್ನು ಭೇಟಿಯಾದ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್

    ಪೊಲೀಸ್ ಪಡೆಗಳಲ್ಲಿನ ಅಪರಾಧ ಪ್ರಕರಣಗಳನ್ನು ದಾಖಲಿಸುವುದು ಪ್ರಾಥಮಿಕವಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜವಾಬ್ದಾರಿಯಾಗಿದೆ ಎಂದು ರೈ ಸ್ಪಷ್ಟಪಡಿಸಿದ್ದಾರೆ.

  • ರಾಹುಲ್ ಗಾಂಧಿ ಟ್ವೀಟ್‍ಗಳು ಸುಳ್ಳಿನಕಂತೆ: ಕೇಂದ್ರ ಸಚಿವ

    ರಾಹುಲ್ ಗಾಂಧಿ ಟ್ವೀಟ್‍ಗಳು ಸುಳ್ಳಿನಕಂತೆ: ಕೇಂದ್ರ ಸಚಿವ

    ಪಾಟ್ನಾ: ರಾಹುಲ್ ಗಾಂಧಿ ಅವರು ಮಾಡಿದ ಟ್ವೀಟ್‍ಗೆ ಅರ್ಥವಿಲ್ಲ ಹಾಗೂ ಇದೊಂದು ಸುಳ್ಳಿನಕಂತೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಕಿಡಿಕಾರಿದರು.

    ಉಕ್ರೇನ್‍ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಕುರಿತು ರಾಹುಲ್ ಗಾಂಧಿ ಮಾಡಿದ್ದ ಟ್ವೀಟ್‍ಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿ ಅವರು ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುತ್ತಿರುವ ಕಾರ್ಯವನ್ನು ಜನರು ಮೆಚ್ಚುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎಲ್ಲರೂ ಭಾರತದತ್ತ ನೋಡುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ಹಿಂದೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಉಕ್ರೇನ್‍ನಲ್ಲಿ ನಡೆಯುತ್ತಿರುವ ರಷ್ಯಾ ದಾಳಿಯ ನಡುವೆ ಸಿಲುಕಿರುವ ಭಾರತೀಯರನ್ನು ದೇಶಕ್ಕೆ ಮರಳಿ ತರಲು ಪ್ರಾರಂಭಿಸಲಾದ ಆಪರೇಷನ್ ಗಂಗಾ ಕುರಿತು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ

    ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ. ಅಸಹಾಯಕ ವಿದ್ಯಾರ್ಥಿಗಳ ಜೊತೆಗೆ ಇಂತಹ ನಾಚಿಕೆಗೇಡಿನ ವರ್ತನೆ ಇಡೀ ದೇಶಕ್ಕೆ ಮಾಡಿದ ಅವಮಾನ. ಆಪರೇಷನ್ ಗಂಗಾದ ಈ ಕಹಿ ಸತ್ಯವು ಮೋದಿ ಸರ್ಕಾರದ ನೈಜ ಮುಖವನ್ನು ತೆರೆದಿಟ್ಟಿದೆ ಎಂದು ಟೀಕಿಸಿದ್ದರು.

    ರಷ್ಯಾ ಆಕ್ರಮಣದ ಹಿನ್ನೆಲೆಯಲ್ಲಿ ಉಕ್ರೇನ್ ವಾಯುಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಉಕ್ರೇನ್‍ನ ನೆರೆ ದೇಶಗಳಾದ ನಿಯಾ, ಹಂಗೆರಿ, ಸ್ಲೋವಾಕಿಯಾ ಮತ್ತು ಪೋಲೆಂಡ್‍ನಿಂದ ಭಾರತೀಯರನ್ನು ತೆರವುಗೊಳಿಸಲಾಗುತ್ತಿದೆ. ಈ ಕಾರ್ಯಾಚರಣೆಗೆ ಆಪರೇಷನ್ ಗಂಗಾ ಎಂದು ಹೆಸರಿಡಲಾಗಿದೆ.

    ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ರಕ್ಷಿಸಲು ಆಪರೇಷನ್ ಗಂಗಾ ಅಡಿಯಲ್ಲಿ ವಿಶೇಷ ವಿಮಾನಗಳು ಪ್ರಾರಂಭವಾದಾಗಿನಿಂದ 15,900ಕ್ಕೂ ಹೆಚ್ಚು ಭಾರತೀಯರನ್ನು ಮರಳಿ ಕರೆತರಲಾಗಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್