Tag: Nivedita

  • ‘ಫೈರ್ ಫ್ಲೈ ‘ನಲ್ಲಿ ಪದ್ಮಳಾದ ಸುಧಾರಾಣಿ : ಶಿವಣ್ಣ ಪುತ್ರಿ ನಿರ್ಮಾಣದ ಚೊಚ್ಚಲ ಸಿನಿಮಾ

    ‘ಫೈರ್ ಫ್ಲೈ ‘ನಲ್ಲಿ ಪದ್ಮಳಾದ ಸುಧಾರಾಣಿ : ಶಿವಣ್ಣ ಪುತ್ರಿ ನಿರ್ಮಾಣದ ಚೊಚ್ಚಲ ಸಿನಿಮಾ

    ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ತಾರಾಬಳಗದ ಮೂಲಕ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ನಟಿ ಹಾಗೂ ನಿರ್ದೇಶಕಿಯಾಗಿರುವ ಶೀತಲ್ ಶೆಟ್ಟಿ, ಹಿರಿಯ ಕಲಾವಿದ ಮೂಗು ಸುರೇಶ್ ಅವರನ್ನು ಚಿತ್ರತಂಡ ಪರಿಚಯಿಸಿತ್ತು. ಫೈರ್ ಫ್ಲೈ ಸಿನಿಮಾ ಬಳಗಕ್ಕೀಗ ಹಿರಿಯ ನಟಿ ಸುಧಾರಾಣಿ ಸೇರಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಅದ್ಭುತ ಕಲಾವಿದೆಯಾಗಿರುವ ಸುಧಾರಾಣಿ ಈಗ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾದ ಭಾಗವಾಗಿದ್ದಾರೆ. ಅವರು ಪದ್ಮಾ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನ ತಾಯಿಯಾಗಿ ಸುಧಾರಾಣಿ ಒಂದೊಳ್ಳೆ ಪಾತ್ರವನ್ನು ನಿಭಾಯಿಸಿರುವ ಖುಷಿ ಅವರಲ್ಲಿದೆ. ಈಗಾಗಲೇ ಸುಧಾರಾಣಿ ತಮ್ಮ ಭಾಗದ ಚಿತ್ರೀಕರಣ ಮುಗಿಸಿ ಡಬ್ಬಿಂಗ್ ಕೂಡ ಕಂಪ್ಲೀಟ್ ಮಾಡಿದ್ದಾರೆ.

    ತಮ್ಮ ಪಾತ್ರದ ಬಗ್ಗೆ ಮಾತಾಡಿರುವ ಸುಧಾರಾಣಿ, ‘ಅಪ್ಪಾಜಿಯವರ ಮನೆಯಿಂದ ಯಾರು ಏನೇ ಮಾಡಿದರೂ ಅದು ನನ್ನ ತವರು ಮನೆ. ಹಾಗಾಗಿ ಇವತ್ತಿಗೂ ಅವರಲ್ಲಿ ಯಾರಾದ್ರೂ ಬಂದು ಹಿಂದೆ ಬಂದು ನಿಂತು ಹೋಗು ಅಂದ್ರೆ ನಾನು ತಯಾರಿದ್ದೇನೆ. ಏಕೆಂದರೆ ಇದು ನನ್ನ ಮನೆ. ನಿವಿ ನನ್ನ ಕಣ್ಣ ಮುಂದೆ ಹುಟ್ಟಿ ಬೆಳೆದಂತ ಮಗು, ಇವತ್ತು ಅವಳು ಒಂದು ನಿರ್ಮಾಣ ಸಂಸ್ಥೆ ಶುರು ಮಾಡುತ್ತಿದ್ದಾಳೆ, ಅವಳು ನಿರ್ಮಾಪಕಿಯಾಗಿದ್ದಾಳೆ. ನನಗೆ ತುಂಬಾ ಖುಷಿ ಇದೆ. ಕಥೆಯಿಂದ ಹಿಡಿದು ಪ್ರೊಡಕ್ಷನ್ ವರೆಗೂ ಸಿನೆಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ನಮ್ಮ ಕನ್ನಡದ ಕಲಾಭಿಮಾನಿಗಳು ಈ ಚಿತ್ರಕ್ಕೆ ಬೆಂಬಲ ನೀಡಬೇಕು. ನಿರ್ದೇಶಕರಿಗೆ ಸ್ವಲ್ಪ ಮುಜುಗರ ಇತ್ತು. ನನ್ನ ಇಷ್ಟು ಚಿಕ್ಕ ಪಾತ್ರ ಕೇಳಬೇಕು ಅಂತಾ ಆದ್ರೆ ಚೊಚ್ಚಲ ನಿರ್ದೇಶಕರಾಗಿ ಅವರಲ್ಲಿದ್ದ ಹುಮ್ಮಸ್ಸು. ಆಸಕ್ತಿ ನನಗೆ ಇಷ್ಟ ಆಯಿತು. ನಿರ್ದೇಶಕರಾಗಿ ನಟನೆಯೂ ಮಾಡುತ್ತಿರುವುದರಿಂದ ಎಲ್ಲರಿಗೂ ಅವರ ಮೊದಲ ಸಿನಿಮಾ ದೊಡ್ಡ ಬಜೆಟ್, ಮಲ್ಟಿಸ್ಟಾರ್ಸ್, ಆಕ್ಷನ್ ಸಿನಿಮಾ ಆಗಿರಬೇಕು ಅಂತಾ ಬಹುತೇಕರು ಯೋಚನೆ ಮಾಡುತ್ತಾರೆ. ಆದರೆ ಈ ವಿಚಾರದಲ್ಲಿ ಅವರು ವಿಭಿನ್ನ. ಸಂಬಂಧಗಳ ಬಗ್ಗೆ ಅವರು ಫೋಕಸ್ ಮಾಡಿದ್ದಾರೆ. ಇಡೀ ಕುಟುಂಬ ಕುಳಿತುಕೊಂಡು, ನೋಡಿ ಇಷ್ಟವಾಗುವಂತ ಚಿತ್ರವನ್ನು ಮಾಡಿದ್ದಾರೆ’ ಎಂದಿದ್ದಾರೆ.

    ‘ಫೈರ್ ಫ್ಲೈ’ ಚಿತ್ರದಲ್ಲಿ ವಂಶಿ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಈಗ ನಿವೇದಿತಾ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದಾರೆ.

     

    ಶಿವರಾಜಕುಮಾರ್ ಅವರು ಯಾವಾಗಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ರೀತಿಯೇ ನಿವೇದಿತಾ ಶಿವರಾಜಕುಮಾರ್ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಈ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ‘ಫೈರ್ ಫ್ಲೈ’ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆಯುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಒಂದು ಹಾಡಿನ ಶೂಟಿಂಗ್ ಬಾಕಿ ಉಳಿಸಿಕೊಂಡಿದೆ

  • ಪುತ್ರಿ ನಿವೇದಿತಾ ನಿರ್ಮಾಣದ ಚಿತ್ರದಲ್ಲಿ ಶಿವಣ್ಣ ಅತಿಥಿ

    ಪುತ್ರಿ ನಿವೇದಿತಾ ನಿರ್ಮಾಣದ ಚಿತ್ರದಲ್ಲಿ ಶಿವಣ್ಣ ಅತಿಥಿ

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಪುತ್ರಿ ನಿವೇದಿತಾ (Niveditha) ಶಿವರಾಜ್‌ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕೊಡುಗೆ ಫೈರ್ ಫ್ಲೈ. ಈ ಸಿನಿಮಾದಲ್ಲಿ ನಟ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅತಿಥಿ ಪಾತ್ರ ಅದಾಗಿದ್ದರೂ, ಅದೊಂದು ಮಹತ್ವದ ಕ್ಯಾರೆಕ್ಟರ್ ಎಂದು ಹೇಳಲಾಗುತ್ತಿದೆ.

    ಈ ಹಿಂದೆ ಪೋಸ್ಟರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ಹಾಗೂ ದ್ವಿತೀಯ ಹಂತ ಚಿತ್ರೀಕರಣ ಮುಕ್ತಾಯಗೊಂಡಿದೆ. ಮೈಸೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಅಂದುಕೊಂಡಂತೆಯೇ ಶೂಟಿಂಗ್ ಕೆಲಸಗಳು ಮುಗಿಯುತ್ತಿವೆ ಎನ್ನುತ್ತಿದೆ ಚಿತ್ರತಂಡ.

    ಫೈರ್ ಫ್ಲೈ (Fire Fly)ಸಿನಿಮಾವನ್ನ ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಡ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

    ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್.ಕೆ ಸಂಸ್ಥೆಯ ಮಾಯಾಬಜಾರ್ (Mayabazar) ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿಯೇ ಕೆಲಸ ಮಾಡಿದ್ದರು. ಗುರು ದೇಶಪಾಂಡೆ ಅವರ ಪೆಂಟಗನ್ (Pentagan) ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ರು.

     

    ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

  • ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚಿತ್ರಕ್ಕೆ ಟೈಟಲ್ ಫಿಕ್ಸ್

    ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚಿತ್ರಕ್ಕೆ ಟೈಟಲ್ ಫಿಕ್ಸ್

    ವಿರಾಗಿ ಶುರುವಾದ ಕಥೆಗೆ ಹೆಸರೊಂದು ಮೂಡಿದೆ. ಹೆಸರ ಜೊತೆಗೆ ಬರುವೆವು ಎಂದು ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡುವುದಾಗಿ ತಿಳಿಸಿತ್ತು. ಅದರಂತೆ ಇಂದು ಟೈಟಲ್ (Title) ರಿವೀಲ್ ಮಾಡಿದೆ. ನಿವೇದಿತಾ  (Nivedita) ಮೊದಲ ಹೆಜ್ಜೆಗೆ ‘ಫೈರ್ ಫ್ಲೈ’ (Fire fly) ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಅಂದಹಾಗೇ ಈ ಚಿತ್ರಕ್ಕೆ ವಂಶಿ (Vamshi) ಹೀರೋ. ನಿರ್ದೇಶನ ಕೂಡ ಅವರದ್ದೇ.

    ‘ಪಿ.ಆರ್.ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಅವರು,  ಇತ್ತೀಚೆಗೆ ಬಂದ ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ಇದನ್ನೂ ಓದಿ:ಸುದೀಪ್ ಮನೆಯಿಂದ ಮತ್ತೊಬ್ಬ ಸ್ಟಾರ್: ಸಂಚಿತ್ ಚಿತ್ರಕ್ಕೆ ಮುಹೂರ್ತ

    ನಿವೇದಿತಾ ಬಂಡವಾಳ ಹೂಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಜರ್ನಿ ಆರಂಭಿಸುತ್ತಿದ್ದಾರೆ. ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ ಹಾಗೂ ರಘು ನಿಡುವಳ್ಳಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

    ಶಿವರಾಜ್ ಕುಮಾರ್ (Shivaraj Kumar) ಯಾವಾಗಲೂ ಹೊಸಬರಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅದೇ ರೀತಿ ಅಪ್ಪನ ಹಾದಿಯಲ್ಲೇ ನಿವೇದಿತಾ ಕೂಡ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಮತ್ತು ಹೊಸ ಆಲೋಚನೆಗಳಿಗೆ ಅವಕಾಶ ನೀಡಲು ಈ ಸಂಸ್ಥೆ ಮುಡಿಪಾಗಿದೆ.

  • ಪರಭಾಷೆಯಲ್ಲೂ ಶಿವರಾಜ್ ಕುಮಾರ್ ಬ್ಯುಸಿ : ಎರಡು ತಮಿಳು, ಒಂದು ತೆಲುಗು ಚಿತ್ರದಲ್ಲಿ ನಟನೆ

    ಪರಭಾಷೆಯಲ್ಲೂ ಶಿವರಾಜ್ ಕುಮಾರ್ ಬ್ಯುಸಿ : ಎರಡು ತಮಿಳು, ಒಂದು ತೆಲುಗು ಚಿತ್ರದಲ್ಲಿ ನಟನೆ

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivraj Kumar) ಭಾರತೀಯ ಸಿನಿಮಾ ರಂಗದಲ್ಲೇ ಹೆಚ್ಚು ಬ್ಯುಸಿ ಇರುವಂತಹ ನಟ. ಒಂದು ಅಂದಾಜಿನ ಪ್ರಕಾರ ಇನ್ನೂ ಹತ್ತು ವರ್ಷಕ್ಕೆ ಆಗುವಷ್ಟು ಸಿನಿಮಾಗಳನ್ನು ಶಿವಣ್ಣ ಒಪ್ಪಿಕೊಂಡಿದ್ದಾರೆ ಎನ್ನುವುದು ಗಾಂಧಿನಗರದ ಮಾತು. ನಿರಂತರವಾಗಿ ಕನ್ನಡ ಸಿನಿಮಾಗಳನ್ನೇ ಮಾಡುತ್ತಾ ಬಂದಿರುವ ಅವರು, ಇದೀಗ ಪರಭಾಷೆಯಲ್ಲೂ ಬ್ಯುಸಿಯಾಗುತ್ತಿದ್ದಾರೆ. ಎರಡು ತಮಿಳು (Tamil) ಮತ್ತು ಒಂದು ತೆಲುಗು ಚಿತ್ರವನ್ನು ಅವರು ಒಪ್ಪಿಕೊಂಡಿದ್ದಾರೆ.

    ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಹೊಸ ಸಿನಿಮಾದಲ್ಲಿ ಈಗಾಗಲೇ ಶಿವರಾಜ್ ಕುಮಾರ್ ನಟಿಸಿ ಬಂದಿದ್ದು, ಮತ್ತೋರ್ವ ತಮಿಳು ನಟ ಧನುಷ್ (Dhanush) ಅವರ ಚಿತ್ರಕ್ಕೂ ಅವರು  ಸಹಿ ಮಾಡಿದ್ದಾರೆ. ಎರಡೂ ಸಿನಿಮಾದಲ್ಲೂ ಅವರು ಪ್ರಮುಖ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ. ಈ ನಡುವೆ ತೆಲುಗು ಸಿನಿಮಾವನ್ನು ಒಪ್ಪಿಕೊಂಡಿರುವುದಾಗಿ ಸ್ವತಃ ಶಿವರಾಜ್ ಕುಮಾರ್ ಅವರೇ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ಈ ವಯಸ್ಸಲ್ಲೂ ಶಿವರಾಜ್ ಕುಮಾರ್ ನಿರಂತರವಾಗಿ ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಯುವ ನಟರಿಗೆ ಮಾದರಿ ಆಗುತ್ತಿದ್ದಾರೆ. ಅಲ್ಲದೇ, ಅವರು ಒಪ್ಪಿಕೊಂಡ ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳನ್ನೇ ನಿರ್ವಹಿಸುತ್ತಿದ್ದಾರೆ. ಈ ಕಾರಣದಿಂದಾಗಿಯೇ ಇನ್ನೂ ಹಲವು ವರ್ಷಗಳ ಕಾಲ ಶಿವರಾಜ್ ಕುಮಾರ್ ಬುಕ್ ಆಗಿದ್ದಾರೆ. ಈಗಾಗಲೇ 125ನೇ ಸಿನಿಮಾವನ್ನು ಪೂರೈಸಿರುವ ಶಿವರಾಜ್ ಕುಮಾರ್, ಅತೀ ವೇಗದಲ್ಲೇ ಸೆಂಚ್ಯುರಿ ಕೂಡ ಹೊಡೆದಿದ್ದರು.

    ಸಿನಿಮಾಗಳಲ್ಲಿ ನಟನೆಯ ಜೊತೆ ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆಯನ್ನೂ ಶುರು ಮಾಡಿದ್ದಾರೆ. ಈ ಸಂಸ್ಥೆಯ ಮೂಲಕ ವರ್ಷಕ್ಕೆ ಹಲವು ಸಿನಿಮಾಗಳನ್ನು ತಯಾರಿಸುವ ಗುರಿಯನ್ನೂ ಹೊಂದಿದ್ದಾರೆ. ಕೇವಲ ಸಿನಿಮಾಗಳನ್ನು ಮಾತ್ರವಲ್ಲ, ವೆಬ್ ಸೀರಿಸ್ ಅನ್ನು ನಿರ್ಮಾಣ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈ ಸಂಸ್ಥೆಯನ್ನು ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ನಿರ್ವಹಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರ‍್ಯಾಪರ್‌ ಚಂದನ್ ಶೆಟ್ಟಿಗೆ ಪತ್ನಿ ನಿವೇದಿತಾ ಕರೆಯೋ ಹೆಸರು ಕುಕ್ಕಿ

    ರ‍್ಯಾಪರ್‌ ಚಂದನ್ ಶೆಟ್ಟಿಗೆ ಪತ್ನಿ ನಿವೇದಿತಾ ಕರೆಯೋ ಹೆಸರು ಕುಕ್ಕಿ

    ಗಂಡನ ಹೆಸರನ್ನು ಯಾರು ಏನಂತ ಕರೆಯುತ್ತಾರೋ ಗೊತ್ತಿಲ್ಲ. ಆದರೆ, ಕನ್ನಡದ ರ‍್ಯಾಪರ್‌ ಚಂದನ್ ಶೆಟ್ಟಿ ಅವರ ಪತ್ನಿ, ಕಿರುತೆರೆ ಬಾರ್ಡಿ ಬಾಲ್ ನಿವೇದಿತಾ ಮಾತ್ರ ಗಂಡನನ್ನು ಡಿಫರೆಂಟ್ ಹೆಸರಿನಿಂದ ಕರೆಯುತ್ತಾರೆ. ಆ ಹೆಸರು ಮೊನ್ನೆಯಷ್ಟೇ ರಿವಿಲ್ ಆಗಿದೆ.  ಇದನ್ನು ಓದಿ: ‘ಅಣ್ಣಾವ್ರ ನಾಡು’: ಡಾ.ರಾಜ್ ಕುಮಾರ್ ನೆನೆದ ರಾಕಿಂಗ್ ಸ್ಟಾರ್ ಯಶ್

    ಸದ್ಯ ಖಾಸಗಿ ಮನರಂಜನಾ ವಾಹಿನಿಯೊಂದರ ರಿಯಾಲಿಟಿ ಶೋನಲ್ಲಿ ನಿವೇದಿತಾ ಭಾಗಿಯಾಗಿದ್ದಾರೆ. ಇದರ ಗ್ರ್ಯಾಂಡ್ ಓಪನಿಂಗ್ ವೇದಿಕೆಯ ಮೇಲೆ ನಿವೇದಿತಾ ಇದ್ದರು. ನಿಮ್ಮನ್ನು ವೆಲ್ ಕಮ್ ಮಾಡೋಕೆ ವಿಶೇಷ ಅತಿಥಿಯೊಬ್ಬರು ವೇದಿಕೆಯ ಮೇಲೆ ಬರಲಿದ್ದಾರೆ ಎಂದು ನಿರೂಪಕ ಪಾವಗಡ ಮಂಜು ಹೇಳುತ್ತಾರೆ. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಬಂದಿದ್ದು ಚಂದನ್ ಶೆಟ್ಟಿ. ಗಂಡನನ್ನು ನೋಡುತ್ತಿದ್ದಂತೆಯೇ ನಿವೇದಿತಾ ಸರ್ಪ್ರೈಸ್ ರೀತಿಯಲ್ಲಿ.. ‘ಓ.. ಕುಕ್ಕಿ..’ ಎಂದು ಕರೆಯುತ್ತಾರೆ. ಇಂಥದ್ದೊಂದು ಹೆಸರನ್ನು ಕರೆಯುತ್ತಿದ್ದಂತೆಯೇ ಆ  ಕಾರ್ಯಕ್ರಮದ ಜಡ್ಜ್ ಆಗಿದ್ದ ಸೃಜನ್ ಲೋಕೇಶ್ ಅವರು ನಿವಿಯಲ್ಲಿ ಕಾಲೆಳೆಯುತ್ತಾರೆ. ‘ಒಂದೇ ಬಾರಿ ಕುಕ್ಕಿ.. ಪದೇ ಪದೇ ಕುಕ್ಕಿಕ್ಕಿಕ್ಕಿ. ಮಾಡಬೇಡಿ’ ಎನ್ನುತ್ತಾರೆ. ಹೀಗೆ ತಮಾಷೆಯಾಗಿಯೇ ಕಾರ್ಯಕ್ರಮ ಸಾಗುತ್ತದೆ. ಇದನ್ನೂ ಓದಿ : ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ

    ಚಂದನ್ ಮತ್ತು ನಿವೇದಿತಾ ಯಾವ ರೀತಿಯಲ್ಲಿ ಅನ್ಯೋನ್ಯವಾಗಿದ್ದಾರೆ ಅಂದರೆ, ಚಂದನ್ ಸ್ವತಃ ಹೆಂಡತಿಯನ್ನೇ ಕಾಲೆಳೆಯುತ್ತಾರೆ. ಇದೇ ಸಂದರ್ಭದಲ್ಲಿ ‘ನೀವು ಕಾರ್ಯಕ್ರಮ ಮುಗಿದ ಮೇಲೆ ಮನೆಗೆ ಬರ್ತೀರಿ.. ನೆನಪಿಡಿ’ ಎಂದು ಕಣ್ಣಲ್ಲೇ ಬೆದರಿಸುತ್ತಾರೆ. ಅದನ್ನು ಪದೇ ಪದೇ ಹೇಳುವ ಮೂಲಕ ಚಂದನ್ ಅವರನ್ನು ಹೆದರಿಸುತ್ತಾರೆ. ಆಗ ನಗುತ್ತಲೇ ಚಂದನ್, ‘ಹೌದೌದು.. ಮನೆಗೆ ಹೋಗಬೇಕು’ ಎಂದು ಅವರು ತಮಾಷೆ ಮಾಡುತ್ತಾರೆ. ಇದನ್ನೂ ಓದಿ : ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ

    ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಪತಿಯನ್ನು ಇಂಥದ್ದೊಂದು ಹೆಸರಿನಿಂದ ಕರೆಯುವುದನ್ನು ನಾವು ಮೊದಲ ಬಾರಿಗೆ ನೋಡುತ್ತಿದ್ದೇವೆ’ ಎಂದು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ನಾಯಿಮರಿಗೆ ಕರೆಯುವ ಹೆಸರನ್ನು ಚಂದನ್ ಗೆ ಇಟ್ಟಿದ್ದಾರಲ್ಲ ಪಾಪ ಎಂದೂ ಕೆಲವರು ಕಾಮೆಂಟ್ ಮಾಡಿದ್ದಾರೆ.

  • ಡಾಲಿಯ ಪಾಪ್ ಕಾರ್ನ್ ಮಂಕಿ ಟೈಗರ್ ಅವತಾರ ಶುಕ್ರವಾರ ರಿವೀಲ್

    ಡಾಲಿಯ ಪಾಪ್ ಕಾರ್ನ್ ಮಂಕಿ ಟೈಗರ್ ಅವತಾರ ಶುಕ್ರವಾರ ರಿವೀಲ್

    ಸ್ಯಾಂಡಲ್‍ವುಡ್ ದಿ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ‘ಪಾಪ್ ಕಾರ್ನ್ ಮಂಕಿ ಟೈಗರ್’. ಇನ್ನೇನು ಎರಡೇ ದಿನದಲ್ಲಿ ಚಿತ್ರಮಂದಿರದ ಅಂಗಳಕ್ಕೆ ಚಿತ್ರ ಕಾಲಿಡಲಿದೆ. ಸುಕ್ಕಾ ಸೂರಿ, ಸ್ಪೆಷಲ್ ಸ್ಟಾರ್ ಧನಂಜಯ್ ಕಾಂಬಿನೇಷನ್ ಸಖತ್ ಕ್ರೇಜ್ ಹುಟ್ಟು ಹಾಕಿದೆ. ಟೀಸರ್, ಟೀಸರ್‌ನಲ್ಲಿ ಡಾಲಿ ಮಾಸ್ ಅವತಾರ ಕಂಡು ಪ್ರೇಕ್ಷಕರು ಫಿಧಾ ಆಗಿದ್ದು, ಸಿಕ್ಕಾಪಟ್ಟೆ ಕುತೂಹಲ ಹುಟ್ಟುಹಾಕಿದೆ. ಟಗರು ನಂತರ ಒಂದಾಗಿರೋ ರಾ ಡೈರೆಕ್ಟರ್ ಸೂರಿ ಹಾಗೂ ಧನಂಜಯ್ ಪಾಪ್ ಕಾರ್ನ್ ಮಂಕಿ ಟೈಗರ್ ಮೂಲಕ ಮಾಸ್ ಪ್ರಿಯರಿಗೆ ಭರ್ಜರಿ ಮನರಂಜನೆ ನೀಡಲು ಮುಂದಾಗಿದ್ದು, ಇದೇ ಶುಕ್ರವಾರ ಚಿತ್ರ ಬಿಡುಗಡೆಯಾಗುತ್ತಿದೆ.

    ಈಗಾಗಲೇ ‘ಪಾಪ್ ಕಾರ್ನ್ ಮಂಕಿ ಟೈಗರ್’ ಕ್ರೇಜ್ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದ್ದು, ಡಾಲಿ ಅಭಿಮಾನಿ ಬಳಗ ‘ಪಾಪ್ ಕಾರ್ನ್ ಮಂಕಿ ಟೈಗರ್’ ಅವತಾರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದ್ದಾರೆ. ಧನಂಜಯ್ ಚಿತ್ರದಲ್ಲಿ ವಿಶೇಷ ಅವತಾರಗಳಲ್ಲಿ ತೆರೆ ಮೇಲೆ ಮಿಂಚಲಿದ್ದು ಔಟ್ ಅಂಡ್ ಔಟ್ ಮಾಸ್ ಸಿನಿಮಾ ಜೊತೆಗೆ ಸೆಂಟಿಮೆಂಟ್ ಎಲಿಮೆಂಟ್‍ಗಳು ಚಿತ್ರದಲ್ಲಿದೆ. ಸೂರಿ ಹಾಗೂ ಧನಂಜಯ್ ಸಿನಿಮಾಗಳನ್ನು ಪ್ರೀತಿಸೋ ಭಕ್ತ ವೃಂದಕ್ಕೆ ಈ ಸಿನಿಮಾ ಭರ್ಜರಿ ಭೋಜನ ಆಗಲಿದೆ.

    ಟೀಸರ್‌ನಲ್ಲಿ ಸಂಗೀತ ನಿರ್ದೇಶಕ ಚರಣ್ ರಾಜ್ ಹಿನ್ನೆಲೆ ಸಂಗೀತ ಕಮಾಲ್ ಮಾಡಿದ್ದು, ಇಲ್ಲೂ ಕೂಡ ಟಗರು ಚಿತ್ರದಂತೆ ಮ್ಯೂಸಿಕ್‍ನಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡಲಿದ್ದಾರೆ ಚರಣ್ ರಾಜ್. ಶೇಖರ್ ಕ್ಯಾಮೆರಾ ಕಣ್ಣಲ್ಲಿ ‘ಪಾಪ್ ಕಾರ್ನ್ ಮಂಕಿ ಟೈಗರ್’ ಸೆರೆಯಾಗಿದ್ದು, ಸುಧೀರ್.ಕೆ.ಎಂ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರೋ ‘ಪಾಪ್ ಕಾರ್ನ್ ಮಂಕಿ ಟೈಗರ್’ ಯಾವ ರೀತಿ ಸದ್ಧು ಮಾಡುತ್ತೆ ಕಾದು ನೋಡಬೇಕು.

  • ಟೀಸರ್‌ನೊಂದಿಗೆ ಬಂದ ‘ಪಾಪ್ ಕಾರ್ನ್ ಮಂಕಿ ಟೈಗರ್’- ಡಾಲಿ ಅವತಾರಕ್ಕೆ ಪ್ರೇಕ್ಷಕ ಫಿದಾ!

    ಟೀಸರ್‌ನೊಂದಿಗೆ ಬಂದ ‘ಪಾಪ್ ಕಾರ್ನ್ ಮಂಕಿ ಟೈಗರ್’- ಡಾಲಿ ಅವತಾರಕ್ಕೆ ಪ್ರೇಕ್ಷಕ ಫಿದಾ!

    ಟಗರು ಖ್ಯಾತಿಯ ಡಾಲಿ ಧನಂಜಯ್ ಅಭಿನಯದ ‘ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದ ಮಾಸ್ ಟೀಸರ್ ರಿಲೀಸ್ ಆಗಿದೆ. ಸ್ಯಾಂಡಲ್‍ವುಡ್ ನಲ್ಲಿ ಬಾರಿ ನಿರೀಕ್ಷೆಯನ್ನು ಹುಟ್ಟು ಹಾಕಿರುವ ಸಿನಿಮಾಗಳಲ್ಲಿ ಈ ಚಿತ್ರವೂ ಕೂಡ ಒಂದು. ದುನಿಯಾ ಸೂರಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ್ ನಾನಾ ಅವತಾರಗಳಲ್ಲಿ ಮಾಸ್ ಲುಕ್ ನಲ್ಲಿ ಕಾಣಸಿಕೊಂಡಿದ್ದಾರೆ. ಟೀಸರ್ ಸಖತ್ ಥ್ರಿಲ್ಲ್ ಆಗಿದ್ದು, ಸುಕ್ಕಾ ಸೂರಿ ಮತ್ತೊಮ್ಮೆ ಈ ಚಿತ್ರದ ಮೂಲಕ ಸಿನಿ ಪ್ರೇಕ್ಷಕರಿಗೆ ಭರ್ಜರಿ ಬೋಜನ ನೀಡೋದು ಪಕ್ಕಾ ಅನ್ನಿಸ್ತಾಯಿದೆ.

    ಪಿಆರ್ ಕೆ ಯುಟ್ಯೂಬ್ ಚಾನೆಲ್ ನಲ್ಲಿ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಕಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಮಾಸ್ ಚಿತ್ರಗಳಿಗೆ ಹೇಳಿ ಮಾಡಿಸಿದ ಸಂಗೀತ ನಿರ್ದೇಶಕ ಚರಣ್ ರಾಜ್ ಬ್ಯಾಗ್ರೌಂಡ್ ಸ್ಕೋರ್ ಮತ್ತೊಮ್ಮೆ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಟಗರು ಚಿತ್ರದಲ್ಲಿ ಸೂರಿ ಚರಣ್ ರಾಜ್ ಕಾಂಬಿನೇಷನ್ ಸಖತ್ ಸೌಂಡ್ ಮಾಡಿತ್ತು. ಈ ಚಿತ್ರದಲ್ಲೂ ಒಂದಾಗಿರುವ ಇವ್ರ ಕಾಂಬಿನೇಷನ್ ಮತ್ತೊಂದು ಸೂಪರ್ ಹಿಟ್ ಆಲ್ಬಂ ನೀಡೋದ್ರಲ್ಲಿ ಅನುಮಾನವೇ ಇಲ್ಲ.

    ಸುದೀರ್.ಕೆ.ಎಂ ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಶೇಖರ್ ಕ್ಯಾಮೆರಾ ಕೈ ಚಳಕ ಚಿತ್ರಕ್ಕಿದೆ. ಧನಂಜಯ್ ಗೆ ಜೋಡಿಯಾಗಿ ನಿವೇದಿತಾ ಸ್ಕ್ರೀನ್ ಶೇರ್ ಮಾಡಿದ್ದು, ಅಮೃತ ಅಯ್ಯಂಗಾರ್, ಸುಧಿ, ಸಪ್ತಮಿ ಚಿತ್ರದ ತಾರಾ ಬಳಗದಲ್ಲಿದ್ದಾರೆ.

    ಪೋಸ್ಟರ್ ಹಾಗೂ ಟೈಟಲ್ ಮೂಲಕ ಕ್ಯೂರಿಯಾಸಿಟಿ ಬಿಲ್ಡ್ ಮಾಡಿದ್ದ ಪಾಪ್ ಕಾರ್ನ್ ಮಂಕಿ ಟೈಗರ್ ಟೀಸರ್ ಮೂಲಕ ಡಾಲಿ ಹಾಗೂ ನಿರ್ದೇಶಕ ಸೂರಿ ಅಭಿಮಾನಿಗಳಲ್ಲಿ ಸಂತಸ ಹೆಚ್ಚು ಮಾಡಿದೆ. ಪೋಸ್ಟ್ ಪ್ರೋಡಕ್ಷನ್ ಕೆಲಸದಲ್ಲಿ ಬ್ಯುಸಿ ಇರೋ ಚಿತ್ರತಂಡ ಸದ್ಯದಲ್ಲೇ ಚಿತ್ರಮಂದಿರಕ್ಕೆ ಬರಲಿದೆ.