Tag: niveditha

  • ಬೆಳಕಿನ ಹಬ್ಬಕ್ಕೆ ‘ಫೈರ್ ಫ್ಲೈ’ ದರ್ಶನ- ಇದು ಶಿವಣ್ಣ ಪುತ್ರಿ ಹೊಸ ಪ್ರಯತ್ನ

    ಬೆಳಕಿನ ಹಬ್ಬಕ್ಕೆ ‘ಫೈರ್ ಫ್ಲೈ’ ದರ್ಶನ- ಇದು ಶಿವಣ್ಣ ಪುತ್ರಿ ಹೊಸ ಪ್ರಯತ್ನ

    ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ (Shivarajkumar) ಅವರ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್‌ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿಬಂದಿರುವ ‘ಫೈರ್ ಫ್ಲೈ’ (Fire Fly)  ಬೆಳಕಿನ ಹಬ್ಬ ದೀಪಾವಳಿಗೆ ದರ್ಶನ ಕೊಡಲಿದೆ. ಈ ಬಗ್ಗೆ ಶಿವಣ್ಣನ ನಾಗವಾರ ನಿವಾಸದಲ್ಲಿ ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ವೇಳೆ, ಮಗಳ ಹೊಸ ಪ್ರಯತ್ನಕ್ಕೆ ಜೊತೆಯಾಗಿ ಶಿವಣ್ಣ ದಂಪತಿ ಸಾಥ್ ಕೊಟ್ಟರು.

    ಬಳಿಕ ಮಾತನಾಡಿದ ನಿರ್ಮಾಪಕಿ ನಿವೇದಿತಾ ಶಿವರಾಜ್‌ಕುಮಾರ್ (Niveditha Shivarajkumar) ಮಾತನಾಡಿ, ವೆಬ್ ಸೀರಿಸ್ ಮಾಡಿದ ಮೇಲೆ ಸಿನಿಮಾ ಮಾಡಬೇಕು ಅಂತಾ ತುಂಬಾ ಆಸಕ್ತಿ ಇತ್ತು. ವಂಶಿ ಅವರು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಒಳ್ಳೆಯ ಟೆಕ್ನಿಕಲ್ ಟೀಂ ತೆಗೆದುಕೊಂಡು ಮಾಡಬೇಕು ಎಂದು ಚಿತ್ರ ಮಾಡಿದ್ದೆವೆ. ಕಥೆ ತುಂಬಾ ಸರಳವಾಗಿದ್ದರೂ, ಅವರು ಕಥೆ ಹೇಳಿದ ರೀತಿ ತುಂಬಾ ಇಷ್ಟವಾಯ್ತು. ಹೊಸ ಪ್ರಯೋಗ ಮಾಡಿದ್ದೇನೆ. ಕೊನೆಯ ಹಂತದ ಚಿತ್ರೀಕರಣ ಶುರು ಮಾಡುತ್ತಿದ್ದೇವೆ. ದೀಪಾವಳಿ ಸಿನಿಮಾ ಬಿಡುಗಡೆಯಾಗಲಿದೆ ಎಂದರು. ಇದನ್ನೂ ಓದಿ:ಉತ್ತರ ಕರ್ನಾಟಕದ ನಾನಾ ಸ್ಥಳಗಳಿಗೆ ಇಂದು ಶಿವರಾಜ್ ಕುಮಾರ್ ಭೇಟಿ

    ನಟ ಕಮ್ ನಿರ್ದೇಶಕ ವಂಶಿ ಮಾತನಾಡಿ, ಎಲ್ಲರ ಜೀವನದಲ್ಲಿಯೂ ಒಂದು ಪಾಯಿಂಟ್ ಇರುತ್ತದೆ. ನಾವು ಡೆಂಡ್ ಎಂಡ್ ಅಂದುಕೊಂಡಿರುತ್ತೇವೆ. ಒಂದು ಹೋಪ್ ಹಾಗೂ ಮೊಟಿವೇಷನ್‌ಗೆ ಕಾಯುತ್ತಾ ಇರುತ್ತೇವೆ. ಆ ಟೈಮ್‌ನಲ್ಲಿ ಹೋಪ್ ಎಂಬ ಬೆಳಕು ಎಲ್ಲಿಂದಲೋ ಬರಲ್ಲ ನಮ್ಮಿಂದಲೇ ಬರಬೇಕು ಎಂಬುದೇ ಫೈರ್ ಫ್ಲೈ. ಅದಕ್ಕೆ ಈ ಟೈಟಲ್ ಇಟ್ಟಿದ್ದೇವೆ. ನಿವೇದಿತಾ ಮೇಡಂಗೆ ಧನ್ಯವಾದ. ಇದಕ್ಕಿಂತ ಮೊದಲು ಎರಡು ಮೂರು ಕಥೆ ಚರ್ಚೆ ಮಾಡಿದ್ದೇವು. ಆದರೆ ಅವರು ರಿಜೆಕ್ಟ್ ಮಾಡಿದರು. ಈ ಕಥೆ ಒಪ್ಪಿಕೊಂಡಿದ್ದಕ್ಕೆ ನನಗೆ ಖುಷಿಯಾಯ್ತು. ಯಾಕೆಂದರೆ ನನ್ನಲ್ಲಿ ಕೆಲ ಬದಲಾವಣೆ ಆಯ್ತು. ಟೆಕ್ನಿಕಲ್ ಸ್ಟ್ರಾಂಗ್ ಹಾಗೂ ಸಿಂಪಲ್ ಸಿನಿಮಾದೊಂದಿಗೆ ಬರುತ್ತಿದ್ದೇವೆ. ಇದೇ ದೀಪಾವಳಿಗೆ ಚಿತ್ರ ಬರುತ್ತಿದೆ. ಇಡೀ ಸಿನಿಮಾದಲ್ಲಿ ನಾನು ಒಬ್ಬನೇ ಹೊಸಬ. ಆದರೆ ಆ ರೀತಿ ಫೀಲ್ ನನಗೆ ಬಂದೇ ಇಲ್ಲ. ಇಷ್ಟು ಜನ ಸಿಕ್ಕಿದ್ದು, ಶ್ರೀಮುತ್ತು ಸಿನಿ ಸರ್ವೀಸ್‌ನಿಂದ. ನಾನು ಬೇರೆ ನಿರ್ಮಾಪಕರ ಜೊತೆ ಕೈ ಜೋಡಿಸಿದ್ದರೇ ಡೇಟ್ಸ್ ಕೂಡ ಸಿಕ್ಕುತ್ತಿರಲಿಲ್ಲ ಎಂದರು.

    ಫೈರ್ ಫ್ಲೈ ಚಿತ್ರದಲ್ಲಿ ವಂಶಿ ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಪುನೀತ್ ರಾಜ್‌ಕುಮಾರ್ ಅವರ ‘ಪಿಆರ್‌ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ, ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ಅವರು ನಟಿಸಿದ್ದರು. ಈಗ ನಿವೇದಿತಾ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದಾರೆ.

    ಶಿವರಾಜ್‌ಕುಮಾರ್ ಅವರು ಯಾವಾಗಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ರೀತಿಯೇ ನಿವೇದಿತಾ ಶಿವರಾಜ್‌ಕುಮಾರ್ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಈ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ಶಿವರಾಜ್‌ಕುಮಾರ್ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆದಿದ್ದಾರೆ.

  • ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

    ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಪುತ್ರಿ ನಿವೇದಿತಾ (Niveditha) ಶಿವರಾಜ್‌ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕೊಡುಗೆ ಫೈರ್ ಫ್ಲೈ. ಪೋಸ್ಟರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಮೈಸೂರು,ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ದ್ವಿತೀಯ ಹಂತದ ಚಿತ್ರೀಕರಣ ಶುರುವಾಗಲಿದೆ.

    ಫೈರ್ ಫ್ಲೈ (Fire Fly)ಸಿನಿಮಾವನ್ನ ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಡ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಇದನ್ನೂ ಓದಿ:‘ಜವಾನ್’ ಸಕ್ಸಸ್ ಬಳಿಕ ಪ್ರಭಾಸ್ ಸಿನಿಮಾದಲ್ಲಿ ನಯನತಾರಾ

    ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್.ಕೆ ಸಂಸ್ಥೆಯ ಮಾಯಾಬಜಾರ್ (Mayabazar) ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿಯೇ ಕೆಲಸ ಮಾಡಿದ್ದರು. ಗುರು ದೇಶಪಾಂಡೆ ಅವರ ಪೆಂಟಗನ್ (Pentagan) ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ರು.

    ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗಳ ನಿರ್ಮಾಣದ ವೆಬ್ ಸೀರಿಸ್‌ನಲ್ಲಿ ಶಿವಣ್ಣ ಆಕ್ಟಿಂಗ್

    ಮಗಳ ನಿರ್ಮಾಣದ ವೆಬ್ ಸೀರಿಸ್‌ನಲ್ಲಿ ಶಿವಣ್ಣ ಆಕ್ಟಿಂಗ್

    ಸ್ಯಾಂಡಲ್‌ವುಡ್ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಸಿನಿಮಾ ಲಿಸ್ಟ್‌ನಲ್ಲಿ ಸಾಲು ಸಾಲು ಸಿನಿಮಾಗಳಿರಬೇಕಾದ್ರೆ ವೆಬ್ ಸೀರಿಸ್‌ನತ್ತ ಮುಖ ಮಾಡಿದ್ದಾರೆ. ಮಗಳು ನಿವೇದಿತಾ ಪ್ರೋಡಕ್ಷನ್‌ನಲ್ಲಿ ಮೂಡಿಬರಲಿರುವ ವೆಬ್ ಸಿರೀಸ್‌ನಲ್ಲಿ ನಟಿಸೋದಕ್ಕೆ ನಟ ಶಿವಣ್ಣ ರೆಡಿಯಾಗಿದ್ದಾರೆ.

    ಸೀರಿಯಲ್, ಸಿನಿಮಾಗಳಂತೆ ವೆಬ್‌ಸಿರೀಸ್‌ಗೂ ಒಂದು ಕಾಲ. ಒಂದರ್ಥದಲ್ಲಿ ಇದೀಗ ವೆಬ್‌ಸಿರೀಸ್ ಮೇನಿಯಾ ಅಂದ್ರೆ ತಪ್ಪಾಗಲಾರದು. ಪರಭಾಷೆಗಳಲ್ಲಿ ಟ್ರೇಂಡ್ ಆಗಿದ್ದ ವೆಬ್‌ಸಿರೀಸ್ ಈಗ ಕನ್ನಡಕ್ಕೂ ಬಂದಿದೆ. ಈಗಾಗಲೇ ಸಾಕಷ್ಟು ವೆಬ್‌ಸಿರೀಸ್ ಮೂಲಕ ಸಿನಿಪ್ರೇಕ್ಷಕರ ಗಮನ ಸೆಳೆದಿದೆ. ಒಂದು ಕಥೆಯನ್ನ ಸಿನಿಮಾ ರೂಪದಲ್ಲಿ ಹೇಳದೆ, ಸೀಸನ್ ಹಾಗೂ ಎಪಿಸೋಡ್‌ಗಳ ರೂಪದಲ್ಲಿ ತೋರಿಸಲಾಗುತ್ತಿದೆ. ಅಭಿಮಾನಿಗಳು ಕೂಡ ವೆಬ್‌ ಸಿರೀಸ್‌ನ ಇಷ್ಟಪಡ್ತಿದ್ದಾರೆ.  ಹಾಗಾಗಿನೇ ಶಿವರಾಜ್‌ಕುಮಾರ್ ವೆಬ್ ಸೀರಿಸ್‌ನತ್ತ ಮುಖ ಮಾಡಿದ್ದಾರೆ.

    ಒಟಿಟಿ ಫ್ಲಾರ್ಟ್ಫಾರ್ಮ್ ವಿಸ್ತಾರ ಹಿರಿದಾದಂತೆ ವೆಬ್ ಸೀರಿಸ್ ನಿರ್ಮಾಣದತ್ತ ಸಿನಿಮಾ ಹೆಚ್ಚು ಅಟ್ರಾಕ್ಟ್ ಆಗ್ತಿದ್ದಾರೆ. ಈಗಾಗಲೇ ಶಿವಣ್ಣ ಮಗಳು ನಿವೇದಿತಾ ಐ ಹೇಟ್ ಯು ರೋಮಿಯೋ, ಬೈ ಮಿಸ್‌ಟೆಕ್, ಹನಿಮೂನ್ ವೆಬ್ ಸೀರಿಸ್ ನಿರ್ಮಾಣ ಮಾಡಿದ್ದಾರೆ. ಶ್ರೀ ಮುತ್ತು ಸಿನಿ ಸರ್ವಿಸ್ ಪ್ರೋಡಕ್ಷನ್‌ನಲ್ಲಿ ನಿವೇದಿತಾ ನೇತೃತ್ವದಲ್ಲಿ ಈ ವೆಬ್‌ ಸಿರೀಸ್ ಮೂಡಿ ಬರಲಿದೆ. ಇದನ್ನೂ ಓದಿ: ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ ನಿಲ್ಲದ ರಾಕಿಭಾಯ್ ಆರ್ಭಟ: 400 ಕೋಟಿಯತ್ತ `ಕೆಜಿಎಫ್ 2

    ಈಗಾಗಲೇ ಏಳು ವೆಬ್ ಸೀರಿಸ್ ಕಥೆ ರೆಡಿಯಾಗಿದ್ದು, ಸದ್ಯದಲ್ಲೇ ಶೂಟಿಂಗ್ ಶುರುವಾಗಲಿದೆ. ಶಿವಣ್ಣ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ ಅದರ ಮಧ್ಯೆ ವೆಬ್ ಸೀರಿಸ್ ಮಾಡಲಾಗುತ್ತದೆ. ವಿಭಿನ್ನ ಪ್ರಯತ್ನದ ಮೂಲಕ ಅಭಿಮಾನಿಗಳನ್ನ ರಂಜಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸಜ್ಜಾಗಿದ್ದಾರೆ.