Tag: Niwari

  • ಆಟೋಗೆ ಡಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋಗಿ ನದಿ ಬಿದ್ದ ಕಾರು: ವಿಡಿಯೋ

    ಆಟೋಗೆ ಡಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋಗಿ ನದಿ ಬಿದ್ದ ಕಾರು: ವಿಡಿಯೋ

    – ತಪ್ಪಿದ ಭಾರೀ ಅನಾಹುತ, ಮಾನವೀಯತೆ ಮೆರೆದ ಸ್ಥಳೀಯರು

    ಭೋಪಾಲ್: ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಸೇತುವೆ ಮೇಲಿಂದ ನದಿಗೆ ಬಿದ್ದ ಘಟನೆ ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಓರ್ಛಾದಲ್ಲಿ ನಡೆದಿದೆ.

    ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯವು ಸೆರೆಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳೀಯರ ಸಹಾಯದಿಂದ ಕಾರಿನಲ್ಲಿದ್ದ ಎಲ್ಲರೂ ನೀರಿನಿಂದ ಹೊರ ಬಂದಿದ್ದಾರೆ.

    ವೇಗವಾಗಿ ಬರುತ್ತಿದ್ದ ಕಾರು ಚಾಲಕ ಎದುರಿಗೆ ಬಂದ ಆಟೋ ಡಿಕ್ಕಿಗೆ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ್ದ. ಈ ವೇಳೆ ಕಾರು ಸೇತುವೆಯಿಂದ ಕೆಳಗೆ ಬಿದ್ದಿದೆ. ಆದರೆ ಆಟೋ ಚಾಲಕ ಹಾಗೂ ಪ್ರಯಾಣಿಕರು ರಕ್ಷಣೆಗೆ ಬರದೆ ಅಲ್ಲಿಂದ ಪರಾರಿಯಾದರು. ಆದರೆ ಸ್ಥಳೀಯರು ತಕ್ಷಣವೇ ನದಿಗೆ ಹಾರಿ ಕಾರಿನಲ್ಲಿದ್ದ ಐವರನ್ನು ರಕ್ಷಿಸಿ, ಸಮೀಪದ ಆಸ್ಪತ್ರೆಗೆ ಸೇರಿಸಿದ್ದಾರೆ.

    ಈ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರ ರಕ್ಷಣೆಗೆ ಮುಂದಾಗಿ ಮಾನವೀಯತೆ ಮೆರೆದ ಸ್ಥಳೀಯರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.