Tag: NMC

  • ಯುಜಿ ನೀಟ್ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ – ಕೆಇಎ

    ಯುಜಿ ನೀಟ್ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ – ಕೆಇಎ

    ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಇದುವರೆಗೂ ಅರ್ಜಿ ಸಲ್ಲಿಸದ ಹಾಗೂ ಯುಜಿನೀಟ್-24 ರಲ್ಲಿ (UG NEET – 24) ಅರ್ಹತೆ ಪಡೆದವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬುಧವಾರ ತನ್ನ ವೆಬ್‌ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ.

    ರಾಜ್ಯ ಮತ್ತು ಹೊರ ರಾಜ್ಯದ ಅರ್ಹ ಅಭ್ಯರ್ಥಿಗಳು ಮಾತ್ರ ಆಗಸ್ಟ್ 9ರ ಒಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅದರ ನಂತರ ಬರುವವರಿಗೆ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ (H Prasanna) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಹೂರ್ತ ಫಿಕ್ಸ್: ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ

    ಕೆಇಎ ವೆಬ್‌ ಪೋರ್ಟಲ್‌ನಲ್ಲಿ (KEA Web Portal), ಯುಜಿನೀಟ್-24ಕ್ಕೆ ಹೊಸದಾಗಿ ನೋಂದಣಿ ಮಾಡುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸಬೇಕು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ತಲೆಗೂದಲು ಕಟ್‌, ರಕ್ತ ಹೊರತೆಗೆತ, ಕಠಿಣ ವ್ಯಾಯಾಮ, ಆಹಾರದಿಂದ ದೂರ – ತೂಕ ಇಳಿಸಲು ಏನೆಲ್ಲಾ ಮಾಡಿದ್ರು ವಿನೇಶ್‌?

    ಕೆಇಎ ಮೂಲಕವೇ ಹಂಚಿಕೆ:
    ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ (Ayush Courses) ಪ್ರವೇಶಕ್ಕೆ ಎಲ್ಲ ವಿಧದ (ಖಾಸಗಿ, ಎನ್‌ಆರ್‌ಐ, ಆಡಳಿತ ಮಂಡಳಿಗಳ ಸೀಟುಗಳೂ ಸೇರಿದಂತೆ) ಸೀಟುಗಳನ್ನು ಕೆಇಎ‌ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಕೊನೇ ಹಂತದಲ್ಲಿ ಬಾಕಿ ಉಳಿಯುವ ಸೀಟುಗಳನ್ನು ಕೂಡ ಕೆಇಎ ಮೂಲಕವೇ ಮಾಡಲಾಗುತ್ತದೆ. ಈ ಸಂಬಂಧ ರಾಷ್ಟ್ರೀಯ ವೈದ್ಯಕೀಯ ಮಂಡಳಿಯ (NMC) ಸ್ಪಷ್ಟ ನಿರ್ದೇಶನ ಇದೆ ಎಂದು ಪ್ರಸನ್ನ ಅವರು ತಿಳಿಸಿದರು.

  • ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್.ಗಂಗಾಧರ್ ನೇಮಕ

    ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್.ಗಂಗಾಧರ್ ನೇಮಕ

    ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ (National Medical Commission) ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್ ಗಂಗಾಧರ್ (Dr B.N.Gangadhar) ನೇಮಕಗೊಂಡಿದ್ದಾರೆ.

    ಗಂಗಾಧರ್ ಅವರು ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದು, ಪದ್ಮಶ್ರೀ ಪುರಸ್ಕೃತರೂ ಆಗಿದ್ದಾರೆ. ಇದೀಗ ರಾಷ್ಟ್ರಮಟ್ಟದ ಉನ್ನತ ವೈದ್ಯಕೀಯ ಆಯೋಗಕ್ಕೆ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರದಿಂದ ನೇಮಕಗೊಂಡಿದ್ದಾರೆ. ತಮ್ಮ ವೈದ್ಯಕೀಯ ರಂಗ ಸೇವೆಗೆ ಡಾ.ಬಿ.ಎನ್.ಗಂಗಾಧರ್ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರು. ಇದನ್ನೂ ಓದಿ: ಕೇಂದ್ರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

    ಡಾ.ಗಂಗಾಧರ್ ಪ್ರಸ್ತುತ ವೈದ್ಯಕೀಯ ಮೌಲ್ಯಮಾಪನ ಹಾಗೂ ರೇಟಿಂಗ್ ಮಂಡಳಿ ಅಧ್ಯಕ್ಷರಾಗಿದ್ದಾರೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮುಖ್ಯಸ್ಥರಾಗಿದ್ದ ಡಾ.ಎಸ್.ಸಿ ಶರ್ಮಾ ಅಧಿಕಾರ ಅವಧಿ ಕಳೆದ ಸಪ್ಟಂಬರ್‌ನಲ್ಲಿ ಮುಗಿದಿತ್ತು. ಡಾ.ಸಂಜಯ್ ಬಿಹಾರಿ ಅವರನ್ನು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಂಜಯ್ ತಿರುವನಂತಪುರದ ಶ್ರೀ ಚಿತ್ರ ತಿರುನಾಳ ವೈದ್ಯಕೀಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ಸಂಸ್ಥೆ ನಿರ್ದೇಶಕರಾಗಿದ್ದಾರೆ. ಇದನ್ನೂ ಓದಿ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ – ಐವರ ಮೃತದೇಹ ಪತ್ತೆ, ಕಾರ್ಯಾಚರಣೆ ಮುಕ್ತಾಯ

    ಇನ್ನು ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿ ಪೂರ್ಣಾವಧಿ ಸದಸ್ಯರನ್ನಾಗಿ ಡಾ.ಅನಿಲ್ ಡಿಕ್ರೂಜ್ ಅವರನ್ನು ನೇಮಕ ಮಾಡಲಾಗಿದೆ. ಡಾ.ಅನಿಲ್ ಡಿಕ್ರೂಜ್ ಮುಂಬೈನ ಅಪೊಲೊ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಾ ವಿಭಾಗದ ನಿರ್ದೇಶಕರಾಗಿದ್ದಾರೆ. ಅರೆಕಾಲಿಕ ಸದಸ್ಯರನ್ನಾಗಿ ಡಾ.ರಾಜೇಂದ್ರ ಅಚ್ಯುತ ಬಡ್ಡೆ ನೇಮಕಗೊಂಡಿದ್ದಾರೆ. ಡಾ.ರಾಜೇಂದ್ರ ಅಚ್ಯುತ ಬಡ್ಡೆ ಟಾಟಾ ಮೆಮೋರಿಯಲ್ ಸೆಂಟರ್‌ನ ವಿಶ್ರಾಂತ ಪ್ರಾಧ್ಯಾಪಕರಾಗಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಪಷ್ಟನೆ

  • ಉಕ್ರೇನ್‍ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳು ಇಂಟರ್ನ್‌ಶಿಪ್ ಮಾಡಬಹುದು: ಎನ್‍ಎಂಸಿ

    ನವದೆಹಲಿ: ಉಕ್ರೇನ್‍ನಿಂದ ಬಂದಿರುವ ವಿದೇಶಿ ವೈದ್ಯಕೀಯ ಪದವೀದರರು (Foreign Medical Graduates) ಭಾರತದಲ್ಲಿ ಇಂಟರ್ನ್‌ಶಿಪ್ (internships) ಪೂರ್ಣಗೊಳಿಸಲು ಅವಕಾಶ ನೀಡುವುದಾಗಿ  ನ್ಯಾಷನಲ್‌ ಮೆಡಿಕಲ್‌ ಕಮಿಷನ್‌  (NMC) ತಿಳಿಸಿದೆ.

    ಭಾರತದಲ್ಲಿ ಇಂಟರ್ನ್‌ಶಿಪ್ ಪೂರ್ಣಗೊಳಿಸಲು ಅರ್ಜಿ ಸಲ್ಲಿಸ ಬಹುದಾಗಿದೆ. ಅಭ್ಯರ್ಥಿಗಳು ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಗ ರಾಜ್ಯ ವೈದ್ಯಕೀಯ ಕೌನ್ಸಿಲ್‍ಗಳು ಪರಿಗಣಿಸುತ್ತದೆ. ಕೊರೊನಾ, ಯುದ್ಧ ಮುಂತಾದ ಕಾರಣಗಳಿಂದ ಇಂಟರ್ನ್‌ಶಿಪ್ ಪೂರ್ಣಗೊಳಿಸಲು ಸಾಧ್ಯವಾಗದೇ ಇರುವ ಕೆಲವು ವಿದೇಶಿ ವೈದ್ಯಕೀಯ ಪದವೀದರರು ಇದ್ದಾರೆ. ಅಂತಹ ವಿದ್ಯಾರ್ಥಿಗಳು ಇಂಟರ್ನ್‌ಶಿಪ್‍ನ್ನು ಭಾರತದಲ್ಲಿ ಪೂರ್ಣಗೊಳಿಸಲು ಕೋರಿ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲಾಗುವುದು. ಇದಕ್ಕೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಎನ್‌ಎಂಸಿ ತಿಳಿಸಿದೆ. ಇದನ್ನೂ ಓದಿ: ನಾನು ಕೀವ್‍ನಲ್ಲಿದ್ದೇನೆ, ತಪ್ಪಿಸಿಕೊಂಡು ಹೋಗಿಲ್ಲ: ಉಕ್ರೇನ್ ಅಧ್ಯಕ್ಷ

    ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಕೋರ್ಸ್‍ನ್ನು ಸ್ಥಳೀಯವಾಗಿ ಖಾಸಗಿ ಕಾಲೇಜುಗಳಲ್ಲಿ ಪೂರ್ಣಗೊಳಿಸಲು ಸಹಕಾರಿಯಾಗಲಿದೆ. ರಾಷ್ಟೀಯ ಪರೀಕ್ಷಾ ಮಂಡಳಿ ನಡೆಸುವ ವಿದೇಶಿ ವೈದ್ಯಕೀಯ ಅರ್ಹತಾ ಪರೀಕ್ಷೆ(ಎಫ್‍ಎಂಜಿಇ)ಯನ್ನು ಅಭ್ಯರ್ಥಿಗಳು ಪೂರ್ಣಗೊಳಿಸಿರುವುದನ್ನು ರಾಜ್ಯ ವೈದ್ಯಕೀಯ ಕೌನ್ಸಿಲ್‍ಗಳು ಖಾತರಿ ಪಡಿಸಿಕೊಳ್ಳಬೇಕು. ಅಭ್ಯರ್ಥಿಯು ಎಲ್ಲಾ ಮಾನದಂಡಗಳನ್ನು ಪೂರ್ಣಗೊಳಿಸಿದ್ದರೆ 12 ತಿಂಗಳ ಇಂಟರ್ನ್‌ಶಿಪ್ ಅಥವಾ ಉಳಿದ ಅವಧಿಯನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಎನ್‍ಎಂಸಿ ಹೇಳಿದೆ. ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟಿನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ

  • ಹುಬ್ಬಳ್ಳಿ ಏರ್‌ಪೋರ್ಟ್ ಖಾಸಗಿ ತೆಕ್ಕೆಗೆ – 130 ಕೋಟಿ ರೂ. ನಿರೀಕ್ಷೆ

    ಹುಬ್ಬಳ್ಳಿ ಏರ್‌ಪೋರ್ಟ್ ಖಾಸಗಿ ತೆಕ್ಕೆಗೆ – 130 ಕೋಟಿ ರೂ. ನಿರೀಕ್ಷೆ

    ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿರುವ ವಿಮಾನ ನಿಲ್ದಾಣ ಕರ್ನಾಟಕದಲ್ಲೇ ಮೂರನೇ ಅತಿ ದೊಡ್ಡ ನಿಲ್ದಾಣವಾಗಿದ್ದು, ಸರಿ ಸುಮಾರು 150 ಕೋಟಿ ರೂ.ಗಳಿಗೂ ಅಧಿಕ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ನಿಲ್ದಾಣವನ್ನಾಗಿ ಅಭಿವೃದ್ಧಿ ಪಡಿಸಲಾಗಿದೆ. ಇದೀಗ ಮೂಲಸೌಕರ್ಯ ಕ್ಷೇತ್ರಕ್ಕೆ ಆರ್ಥಿಕ ಸಂಪನ್ಮೂಲ ಹೊಂದಿಸಲು ಕೇಂದ್ರ ಸರ್ಕಾರ ರೂಪಿಸಿರುವ ನ್ಯಾಷನಲ್ ಮಾನಿಟೈಸೇಶನ್ ಪೈಪ್‍ಲೈನ್ ಎನ್‍ಎಂಪಿ (ರಾಷ್ಟ್ರೀಯ ನಗದೀಕರಣ ಯೋಜನೆ)ಯೋಜನೆಯಡಿ ಖಾಸಗಿಗೆ ವಹಿಸಿಕೊಡಲು ಹುಬ್ಬಳ್ಳಿ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವನ್ನು ಗುರುತಿಸಲಾಗಿದೆ.

    ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಉಡಾನ್ ಯೋಜನೆಯಡಿ ವಿಮಾನಗಳ ಸಂಖ್ಯೆ ಹೆಚ್ಚಿಸಿದ ಪರಿಣಾಮ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಹೀಗಾಗಿಯೇ ಕರ್ನಾಟಕದಲ್ಲಿ ಅತೀ ಹೆಚ್ಚು ಪ್ರಯಾಣಿಕರ ಸಾಂದ್ರತೆ ಹೊಂದಿರುವ ನಿಲ್ದಾಣಗಳಲ್ಲೊಂದಾಗಿದೆ. ದೇಶದ 25 ನಿಲ್ದಾಣಗಳನ್ನು ಎನ್‍ಎಂಪಿ ಯೋಜನೆಗೊಳಪಡಿಸಿದ್ದು, ರಾಜ್ಯದ ಹುಬ್ಬಳ್ಳಿ ವಿಮಾನ ನಿಲ್ದಾಣ ಖಾಸಗಿ ನಿರ್ವಹಣೆಗೆ ಆಯ್ಕೆ ಮಾಡಲಾಗಿದೆ. ನೀತಿ ಆಯೋಗ ವೆಬ್‍ಸೈಟ್‍ನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ 25 ನಿಲ್ದಾಣಗಳಿಂದ 20,782 ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಹುಬ್ಬಳ್ಳಿ ನಿಲ್ದಾಣದಿಂದ 130 ಕೋಟಿ ರೂ.ಗಳಿಗೆ ಖಾಸಗಿ ತೆಕ್ಕೆಗೆ ನೀಡುವ ಉದ್ದೇಶಿಸಲಾಗಿದೆ. ಇದನ್ನೂ ಓದಿ: 6 ಲಕ್ಷ ಕೋಟಿ ಸಂಗ್ರಹ ಗುರಿ – ಖಾಸಗಿಯವರಿಗೆ ಸಿಗಲಿದೆ ರೈಲು, ರಸ್ತೆ, ಗಣಿ

    ನಾಲ್ಕು ಹಂತಗಳಲ್ಲಿ ಏರ್‌ಪೋರ್ಟ್ ಗಳನ್ನು ಖಾಸಗಿಗೆ ವಹಿಸಿಕೊಡಲಾಗುತ್ತಿದ್ದು, ಹುಬ್ಬಳ್ಳಿ ನಿಲ್ದಾಣವನ್ನು 2023-24ನೇ ಸಾಲಿಗೆ ನಿಗದಿಪಡಿಸಲಾಗಿದೆ. ಮೊದಲ ಹಂತದಲ್ಲಿ (2021-22)ವಾರಾಣಸಿ, ನಾಗ್ಪುರ ಮತ್ತು ಭುವನೇಶ್ವರ, ಅಮೃತಸರ, ತಿರುಚಿ, ಇಂದೋರ್, ರಾಯಪುರ್ ನಿಲ್ದಾಣಗಳಿಂದ 3,600 ಕೋಟಿ ರೂ., ಹಾಗೂ 2022-23ರಲ್ಲಿ ಕ್ಯಾಲಿಕಟ್, ಕೊಯಮತ್ತೂರು, ನಾಗಪುರ್, ಪಾಟ್ನಾ, ಮಧುರೈ, ಸೂರತ್, ರಾಂಚಿ, ಜೋಧಪುರ್ ನಿಲ್ದಾಣಗಳಿಂದ 4,295 ಕೋಟಿ ರೂ, 2023-24ರಲ್ಲಿ ಚೆನ್ನೈ, ವಿಜಯವಾಡಾ, ತಿರುಪತಿ, ವಡೋದರ, ಭೋಪಾಲ್, ಹುಬ್ಬಳ್ಳಿ ನಿಲ್ದಾಣಗಳಿಂದ 4,193 ಕೋಟಿ ರೂ. ಮತ್ತು 2024-25ರಲ್ಲಿ ಇಂಪಾಲ, ಅಗರ್ತಲಾ, ಉದಯಿಪುರ್, ಡೆಹ್ರಾಡೂನ್, ರಾಜಮುದ್ರಿ ನಿಲ್ದಾಣಗಳನ್ನು ಆಯ್ಕೆ ಮಾಡಿದ್ದು ಇವುಗಳಿಂದ 1,857 ಕೋಟಿ ರೂ.ಗಳು ಸಂಗ್ರಹವಾಗುವ ನಿರೀಕ್ಷೆ ಹೊಂದಿದೆ.  ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ: ಹೆಚ್.ಡಿ. ಕುಮಾರಸ್ವಾಮಿ

    ಆದರೆ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ವಹಣೆ ಖಾಸಗಿಯವರಿಗೆ ವಹಿಸುವ ಕುರಿತು ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

  • ಖಾಸಗಿ ಆಸ್ಪತ್ರೆಗಳ ಜೊತೆ ಬೀದರ್‌ನಲ್ಲಿ ಸರ್ಕಾರಿ ಆಸ್ಪತ್ರೆಯೂ ಬಂದ್ – ರೋಗಿಗಳ ಪರದಾಟ

    ಖಾಸಗಿ ಆಸ್ಪತ್ರೆಗಳ ಜೊತೆ ಬೀದರ್‌ನಲ್ಲಿ ಸರ್ಕಾರಿ ಆಸ್ಪತ್ರೆಯೂ ಬಂದ್ – ರೋಗಿಗಳ ಪರದಾಟ

    ಬೀದರ್: ವೈದ್ಯರು ಕರೆ ನೀಡಿದ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬೀದರ್ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲದೆ, ಬೀದರ್‍ನ ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಸಹ ಬಂದ್ ಆಗಿದ್ದು, ಚಿಕಿತ್ಸೆಗಾಗಿ ರೋಗಿಗಳು ಹಾಗೂ ಗರ್ಭಿಣಿಯರು ಪರದಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ.

    ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ವಿಧೇಯಕ ವಿರೋಧಿಸಿ ಇಂದು ಖಾಸಗಿ ಆಸ್ಪತ್ರೆಗಳ ವೈದ್ಯರು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆ ಕೆಲವೆಡೆ ಖಾಸಗಿ ಆಸ್ಪತ್ರೆಗಳು ತೆರೆದಿದ್ದರೆ, ಇನ್ನೂ ಕೆಲವೆಡೆ ಆಸ್ಪತ್ರೆಗಳು ಬಂದ್ ಆಗಿವೆ. ಬೀದರ್‍ನಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಖಾಸಗಿ ಆಸ್ಪತ್ರೆಗಳ ಜೊತೆಗೆ ಸರ್ಕಾರಿ ಆಸ್ಪತ್ರೆಯನ್ನೂ ಬಂದ್ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳು ಮಾತ್ರ ಬಂದ್ ಆಗಿರುತ್ತವೆ, ಸರ್ಕಾರಿ ಆಸ್ಪತ್ರೆಗಳು ತೆರೆದಿರುತ್ತವೆ ಎಂದು ಆಗಮಿಸಿದ್ದ ರೋಗಿಗಳು ಹಾಗೂ ಗರ್ಭಿಣಿಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

    ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೀದರ್ ಬ್ರಿಮ್ಸ್ ಜಿಲ್ಲಾಸ್ಪತ್ರೆಯ ವೈದ್ಯರೂ ಸಹ ಕೆಲಸಕ್ಕೆ ಹಾಜರಾಗಿರಲಿಲ್ಲ. ಚಿಕಿತ್ಸೆಗಾಗಿ ರೋಗಿಗಳು, ಗರ್ಭಿಣಿಯರು ಕ್ಯೂನಲ್ಲಿ ನಿಂತು ಸುಸ್ತಾಗಿದ್ದಾರೆ. ಸ್ಕ್ಯಾನ್ ಮಾಡಿಸಲು ಬೆಳಗ್ಗೆ 6 ಗಂಟೆಯಿಂದಲೇ ರೋಗಿಗಳು ಸರತಿಯಲ್ಲಿ ನಿಂತ್ತಿದ್ದು, ಮಧ್ಯಾಹ್ನ 12 ಗಂಟೆಯಾದರೂ ಸಹ ವೈದ್ಯರು ಕೆಲಸಕ್ಕೆ ಹಾಜರಾಗಿಲ್ಲ. ಹೀಗಾಗಿ ವೈದ್ಯರ ವಿರುದ್ಧ ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಳಗ್ಗೆಯಿಂದಲೇ ವೈದ್ಯರಿಗಾಗಿ ಕಾದು ಗರ್ಭಿಣಿ ಮಹಿಳೆಯರು ಹಾಗೂ ರೋಗಿಗಳು ಹೈರಾಣಾಗಿದ್ದು, ಸರತಿಯಲ್ಲಿ ನಿಲ್ಲಲೂ ಸಾಧ್ಯವಾಗದೇ ನೆಲದ ಮೇಲೆಯೇ ಮಲಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆಯೇ ವೈದ್ಯರ ಮುಷ್ಕರದ ಕುರಿತು ಎಚ್ಚರಿಕೆ ನೀಡಲಾಗಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಗಳು ತೆರೆದಿರುವುದಿಲ್ಲ ಎಂದು ಸರ್ಕಾರಿ ಆಸ್ಪತ್ರೆಗೆ ರೋಗಿಗಳು ಆಗಮಿಸಿದ್ದರು.

    ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‍ಎಂಸಿ) ವಿಧೇಯಕವನ್ನು ವಿರೋಧಿಸಿ ಬುಧವಾರ ಇಂಡಿಯನ್ ಮೆಡಿಕಲ್ ಅಸೋಷಿಯೇಷನ್(ಐಎಂಎ) ದೇಶಾದ್ಯಂತ ವೈದ್ಯರ ಮುಷ್ಕರಕ್ಕೆ ಕರೆ ನಿಡಿದ್ದು, ಸುಮಾರು 24 ಗಂಟೆಗಳ ಕಾಲ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಬಹುತೇಕ ಖಾಸಗಿ ಆಸ್ಪತ್ರೆಯ ಒಪಿಡಿ ಸಾರ್ವಜನಿಕ ಸೇವೆಗೆ ಲಭ್ಯವಿಲ್ಲ. ಬುಧವಾರ ಬೆಳಗ್ಗೆ ಆರು ಗಂಟೆಯಿಂದ ಗುರುವಾರ ಬೆಳಗ್ಗೆ ಆರು ಗಂಟೆಯವರೆಗೆ ಮುಷ್ಕರ ನಡೆಯಲಿದ್ದು, ವೈದ್ಯರ ಸೇವೆಯಲ್ಲಿ ವ್ಯತ್ಯಯವಾಗುತ್ತಿದೆ.

  • ಶನಿವಾರ ಪೂರ್ಣಾವಧಿ ಕೆಲಸಕ್ಕೆ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಸೂಚನೆ

    ಶನಿವಾರ ಪೂರ್ಣಾವಧಿ ಕೆಲಸಕ್ಕೆ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಸೂಚನೆ

    ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಬಂದ್ ಹಿನ್ನೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿಗೆ ರಜೆ ನೀಡದಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

    ಸಾರ್ವಜನಿಕರಿಗೆ ತೊಂದರೆ ಆಗದಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದು, ಎಲ್ಲಾ ಸಿಬ್ಬಂದಿ ಶನಿವಾರ ಪೂರ್ಣಾವಧಿ ಕೆಲಸ ಮಾಡಬೇಕೆಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಸೂಚನೆ ನೀಡಿದೆ.

    ಪ್ರತಿಭಟನೆ ಏಕೆ: ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‍ಎಂಸಿ) ಮಸೂದೆಯನ್ನು ಜಾರಿಗೆ ತರದಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘವು ಬಂದ್‍ಗೆ ಕರೆ ನೀಡಿದೆ. ಬಂದ್ ನಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಸೇವೆ ಹೊರತುಪಡಿಸಿ, ಉಳಿದ ಒಪಿಡಿ, ಪ್ರಯೋಗಾಲಯ ಸೇರಿದಂತೆ ವೈದ್ಯಕೀಯ ಸೇವೆ ಅಲಭ್ಯವಾಗಲಿದೆ.

    ಏನಿದು ಎನ್‍ಎಂಸಿ ಮಸೂದೆ?: ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರ ಹಾಗೂ ವೈದ್ಯ ವೃತ್ತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ‘ರಾಷ್ಟ್ರೀಯ ವೈದ್ಯಕೀಯ ಆಯೋಗ-2017’ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಈಗಿರುವ ಭಾರತೀಯ ವೈದ್ಯಕೀಯ ಪರಿಷತ್ (ಎಂಸಿಐ) ವಿಸರ್ಜಿಸಿ ಅದರ ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸುವುದು ಈ ವಿಧೇಯಕದ ಪ್ರಮುಖ ಉದ್ದೇಶವಾಗಿದೆ.

  • ಗಮನಿಸಿ: ಶನಿವಾರ ಖಾಸಗಿ ಆಸ್ಪತ್ರೆ ಒಪಿಡಿ ಬಂದ್

    ಗಮನಿಸಿ: ಶನಿವಾರ ಖಾಸಗಿ ಆಸ್ಪತ್ರೆ ಒಪಿಡಿ ಬಂದ್

    ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‍ಎಂಸಿ) ಮಸೂದೆಯನ್ನು ಜಾರಿಗೆ ತರದಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘವು ದೇಶದಾದ್ಯಂತ ಶನಿವಾರ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಗೆ ಕರೆ ಕೊಟ್ಟಿವೆ.

    ಕೇಂದ್ರ ಸರ್ಕಾರದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಒಂದು ದಿನ ಸಾಂಕೇತಿಕ ಮುಷ್ಕರ ನಡೆಯಲಿದೆ. ಹೀಗಾಗಿ ಅಂದು ತುರ್ತು ಸೇವೆ ಹೊರತುಪಡಿಸಿ, ಉಳಿದ ಒಪಿಡಿ, ಪ್ರಯೋಗಾಲಯ ಸೇರಿದಂತೆ ವೈದ್ಯಕೀಯ ಸೇವೆ ಅಲಭ್ಯವಾಗಲಿದೆ.

    ಎನ್‍ಎಂಸಿ ಮಸೂದೆ ಕೈ ಬಿಡುವಂತೆ ಒತ್ತಾಯಿಸಿ ವೈದ್ಯರು ಈ ಹಿಂದೆಯೂ ಸಾಕಷ್ಟು ಬಾರಿ ಹೋರಾಟ ಕೈಗೊಂಡಿದ್ದರು. ಈಗ ಮತ್ತೆ ಹೋರಾಟ ತೀವ್ರಗೊಳಿಸಲು ನಿರ್ಧಾರ ಕೈಗೊಂಡಿದ್ದಾರೆ.

    ಏನಿದು ಎನ್‍ಎಂಸಿ ಮಸೂದೆ?: ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರ ಹಾಗೂ ವೈದ್ಯ ವೃತ್ತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ‘ರಾಷ್ಟ್ರೀಯ ವೈದ್ಯಕೀಯ ಆಯೋಗ-2017’ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಈಗಿರುವ ಭಾರತೀಯ ವೈದ್ಯಕೀಯ ಪರಿಷತ್ (ಎಂಸಿಐ) ಅನ್ನು ವಿಸರ್ಜಿಸಿ ಅದರ ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸುವುದು ಈ ವಿಧೇಯಕದ ಪ್ರಮುಖ ಉದ್ದೇಶವಾಗಿದೆ.