Tag: No-trust

  • ಸುಪ್ರೀಂ ಕೋರ್ಟ್‌ನಲ್ಲಿ ಇಮ್ರಾನ್‌ಗೆ ಸೋಲು- ಅವಿಶ್ವಾಸ ನಿರ್ಣಯ ಮತಕ್ಕೆ ಹಾಕಲು ಸೂಚನೆ

    ಸುಪ್ರೀಂ ಕೋರ್ಟ್‌ನಲ್ಲಿ ಇಮ್ರಾನ್‌ಗೆ ಸೋಲು- ಅವಿಶ್ವಾಸ ನಿರ್ಣಯ ಮತಕ್ಕೆ ಹಾಕಲು ಸೂಚನೆ

    ಇಸ್ಲಾಮಾಬಾದ್‌: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧದ ಅವಿಶ್ವಾಸ ಗೊತ್ತುವಳಿಯನ್ನು ಸ್ವೀಕರಿಸದೇ ಇರುವುದು ಅಸಾಂವಿಧಾನಿಕ. ಹೀಗಾಗಿ ಖಾನ್‌ ವಿರುದ್ಧದ ಅವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕುವಂತೆ ಸುಪ್ರೀಂ ಕೋರ್ಟ್‌ ಗುರುವಾರ ಸೂಚನೆ ನೀಡಿದೆ.

    ವಿಸರ್ಜನೆಗೊಂಡಿರುವ ಪಾಕಿಸ್ತಾನದ ಸಂಸತ್ತು ನ್ಯಾಷನಲ್‌ ಅಸೆಂಬ್ಲಿಯನ್ನು ಮರುಸ್ಥಾಪನೆ ಮಾಡಿರುವ ಸುಪ್ರೀಂ ಕೋರ್ಟ್‌, ಏ.9 ರಂದು ಸಂಸತ್‌ನ ಅಧಿವೇಶನ ಕರೆಯುವಂತೆ ಸ್ಪೀಕರ್‌ಗೆ ಸೂಚಿಸಿದೆ. ಇದನ್ನೂ ಓದಿ: ಪಾಕ್‍ನಲ್ಲಿ ತಿಕ್ಕಾಟ – ಭಾರತದ ಸಹಾಯ ಕೇಳಿದ ಪಿಒಕೆ ಪ್ರಜೆ

    ಪ್ರಧಾನಿ ಹುದ್ದೆಯಿಂದ ತಮ್ಮನ್ನು ಪದಚ್ಯುತಗೊಳಿಸುವ ಪ್ರಯತ್ನವನ್ನು ವಿಫಲಗೊಳಿಸಿದ್ದ ಇಮ್ರಾನ್‌ ಖಾನ್‌, ಕಳೆದ ಭಾನುವಾರ ಪಾಕಿಸ್ತಾನದ ಸಂಸತ್ತನ್ನು ವಿಸರ್ಜನೆ ಮಾಡಲು ಅಧ್ಯಕ್ಷ ಆರಿಫ್‌ ಅಲ್ವಿ ಅವರಿಂದ ಅನುಮೋದನೆ ಪಡೆದುಕೊಂಡಿದ್ದರು.

    ಮೈತ್ರಿಕೂಟದ ಕೆಲ ಪಕ್ಷಗಳು ಖಾನ್‌ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಆದರೆ ಇದಕ್ಕೆ ಉಪ ಸಭಾಪತಿ ಖಾಸಿಮ್‌ ಸೂರಿ ಸೊಪ್ಪು ಹಾಕಿರಲಿಲ್ಲ. ಇದರಿಂದ ಸಂಸತ್ತು ವಿಸರ್ಜಿಸುವಂತೆ ಅಧ್ಯಕ್ಷರಿಗೆ ಇಮ್ರಾನ್‌ ಖಾನ್‌ ಸಲಹೆ ನೀಡಿದ್ದರು. ಇದನ್ನೂ ಓದಿ: ಇಮ್ರಾನ್ ಖಾನ್ ಅಧಿಕಾರಕ್ಕೆ ಕತ್ತರಿ ಬೀಳ್ತಿದ್ದಂತೇ ಆಪ್ತರಿಗೆ ಸಂಕಷ್ಟ

    ಇದು ಅಸಾಂವಿಧಾನಿಕ ಎಂದು ಆರೋಪಿಸಿದ್ದ ಪ್ರತಿ ಪಕ್ಷಗಳು, ಸಭಾಪತಿ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

    ಪಾಕಿಸ್ತಾನದ ಸಂವಿಧಾನದ 58 ನೇ ವಿಧಿಯನ್ವಯ, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದ ವೇಳೆ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಲಾಗುವುದಿಲ್ಲ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ.

  • ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿರುವುದು ಪ್ರಧಾನಿ, ರೆಡ್ಡಿ ವಿರುದ್ಧದ ಕೇಸ್ ವಜಾ ಗೊಳಿಸಿದ್ರಿ: ಟಿಡಿಪಿ ಸಂಸದ

    ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿರುವುದು ಪ್ರಧಾನಿ, ರೆಡ್ಡಿ ವಿರುದ್ಧದ ಕೇಸ್ ವಜಾ ಗೊಳಿಸಿದ್ರಿ: ಟಿಡಿಪಿ ಸಂಸದ

    ನವದೆಹಲಿ: ಗಾಲಿ ಜನಾರ್ದನ ರೆಡ್ಡಿ ಪ್ರಕರಣ ಮುಚ್ಚಿ ಹಾಕುವಲ್ಲಿ ಬಿಜೆಪಿ ಹೆಚ್ಚು ಕಾಳಜಿ ವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟಿಡಿಪಿ ಸಂಸದ ಗಲ್ಲಾ ಜಯದೇವ್ ವಾಗ್ದಾಳಿ ನಡೆಸಿದ್ದಾರೆ.

    ಲೋಕಸಭೆ ಕಲಾಪದಲ್ಲಿ ಬಿಜೆಪಿ ವಿರುದ್ಧ ಅವಿಶ್ವಾಸ ಮಂಡನೆಯಲ್ಲಿ ಮಾತನಾಡಿದ ಸಂಸದರು, ನಾನು ಭ್ರಷ್ಟಾಚಾರ ಮಾಡಲ್ಲ. ಬೇರೆಯವರಿಗೂ ಅವಕಾಶ ನೀಡುವುದಿಲ್ಲ ಎಂದು ನರೇಂದ್ರ ಮೋದಿ ಹೇಳಿದ್ದರು. ಆದರೆ ಪ್ರಧಾನಿಗಳೇ ಭ್ರಷ್ಟರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಗಾಲಿ ಜನಾರ್ದನ ರೆಡ್ಡಿ ಆಂಧ್ರ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಎಸಗಿದ್ದಾರೆ. ಅಷ್ಟೇ ಅಲ್ಲದೆ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಹಲವು ಪ್ರಕರಣಗಳು ದಾಖಲಾಗಿವೆ. ಆದರೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣಗಳನ್ನು ವಜಾಗೊಳಿಸಲಾಯಿತು. 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪ್ರಚಾರಕ್ಕಾಗಿ ಜನಾರ್ದನ ರೆಡ್ಡಿಯನ್ನು ಬಳಸಿಕೊಳ್ಳಲಾಗಿದೆ. ನಿಮ್ಮ ಈ ನಡೆ ಭ್ರಷ್ಟಾಚಾರವನ್ನು ಬೆಂಬಲಿಸುವಂತಿದೆ. ದೇಶದ ಜನತೆ ಇದನ್ನು ಸೂಕ್ಷ್ಮವಾಗಿ ಅವಲೋಕನ ಮಾಡಿದ್ದಾರೆ ಎಂದು ದೂರಿದರು.