Tag: no-trust motion

  • ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

    ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

    ನವದೆಹಲಿ: ಮಣಿಪುರ (Manipur) ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ (No Trust Motion) ಸಲ್ಲಿಸಲಾಗಿದೆ. ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರ ಸಮಿತಿ ಬುಧವಾರ ನೋಟಿಸ್‌ಗಳನ್ನು ಸಲ್ಲಿಸಿವೆ.

    ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕ ಗೌರವ್ ಗೊಗೊಯ್ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಕಚೇರಿಗೆ ನೋಟಿಸ್ ಸಲ್ಲಿಸಿದ್ದಾರೆ. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರತ್ಯೇಕ ನೋಟಿಸ್ ಅನ್ನು ಭಾರತ್ ರಾಷ್ಟ್ರ ಸಮಿತಿ ಸಂಸದ ನಾಗೇಶ್ವರ್ ರಾವ್ ಅವರು ಸ್ಪೀಕರ್‌ಗೆ ಸಲ್ಲಿಸಿದ್ದಾರೆ.

    ಮುಂದಿನ ಹಂತದಲ್ಲಿ ಲೋಕಸಭೆಯ ಸ್ಪೀಕರ್ ಕ್ರಮಬದ್ಧವಾಗಿ ನಿರ್ಣಯವನ್ನು ಸದನದಲ್ಲಿ ಓದಲಿದ್ದಾರೆ. ಬಳಿಕ ಅದನ್ನು ಮತಕ್ಕೆ ಹಾಕಲಿದ್ದಾರೆ. ವಿಪಕ್ಷಗಳ ಈ ಕಸರತ್ತಿನಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಯಾವುದೇ ಅಪಾಯಗಳಿಲ್ಲ. ಎನ್‌ಡಿಎ ಒಕ್ಕೂಟಕ್ಕೆ 332 ಸದಸ್ಯರ ಬೆಂಬಲವಿದ್ದು, ವಿಪಕ್ಷಗಳ ಇಂಡಿಯಾ ಒಕ್ಕೂಟಕ್ಕೆ 144 ಅಸುಪಾಸಿನ ಬೆಂಬಲವಿದೆ. ಇದನ್ನೂ ಓದಿ: ಉತ್ತರದಲ್ಲಿ ಅವಾಂತರದ ಬಳಿಕ ಮುಂಗಾರು ದಕ್ಷಿಣ ಭಾರತಕ್ಕೆ – ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

    ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಸದನದಲ್ಲಿ ಮಾತನಾಡಬೇಕು ಎಂದು ಒತ್ತಾಯಿಸುತ್ತಿರುವ ಪ್ರತಿಪಕ್ಷ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈವರೆಗೂ ಪ್ರಧಾನಿ ನರೇಂದ್ರ ಮೋದಿ ಮಾತನಾಡದ ಹಿನ್ನೆಲೆ ಜುಲೈ 20 ರಿಂದ ಆರಂಭವಾಗಿರುವ ಕಲಾಪ ನಿರಂತರವಾಗಿ ಮುಂದೂಡಿಕೆಯಾಗುತ್ತಿದೆ. ಇದನ್ನೂ ಓದಿ: ಸರ್ಕಾರ ಮುಸ್ಲಿಂ ಓಲೈಕೆಗೆ ಸಂವಿಧಾನಬಾಹಿರವಾಗಿ ವರ್ತಿಸಿದ್ರೆ ಪರಿಣಾಮ ನೆಟ್ಟಗಿರಲ್ಲ: ಸುನೀಲ್ ಕುಮಾರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಮ್ರಾನ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಸರ್ಕಾರ ಪತನಕ್ಕೆ ಕ್ಷಣಗಣನೆ

    ಇಮ್ರಾನ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಸರ್ಕಾರ ಪತನಕ್ಕೆ ಕ್ಷಣಗಣನೆ

    ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಪಾಕ್ ಸಂಸತ್‍ನಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ. ಒಂದು ವಾರದ ಒಳಗೆ ಪ್ರಧಾನಿ ಸ್ಥಾನಕ್ಕೆ ಇಮ್ರಾನ್ ಖಾನ್ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.

    ಅವಿಶ್ವಾಸ ನಿರ್ಣಯಕ್ಕೆ 161 ಸದಸ್ಯರು ಬೆಂಬಲ ಸೂಚಿಸಿದ್ದಾರೆ. ಇಮ್ರಾನ್ ಖಾನ್ ವಿರುದ್ಧ ಎರಡೂ ಡಜನ್‍ಗೂ ಹೆಚ್ಚು ಸಂಸದರ ಬಂಡಾಯ ಎದ್ದಿದ್ದಾರೆ. ಇದೀಗ ಇಮ್ರಾನ್ ಖಾನ್ ನೇತೃತ್ವದ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದೆ. ಇದನ್ನೂ ಓದಿ: ಮೆಕ್ಸಿಕೋದಲ್ಲಿ ಗುಂಡಿನ ದಾಳಿ – 19 ಜನರ ಸಾವು

    342 ಸ್ಥಾನಗಳ ಪೈಕಿ ಬಹುಮತಕ್ಕೆ 172 ಸ್ಥಾನಗಳು ಅವಶ್ಯಕತೆ ಇತ್ತು. ಸದ್ಯ ಇಮ್ರಾನ್ ಖಾನ್ ಪರ 155 ಸಂಸದರಿದ್ದಾರೆ. ಕಲಾಪವನ್ನು ಮಾರ್ಚ್ 31ರ ವರೆಗೆ ಮುಂದೂಡಲಾಗಿದ್ದು, ಏಪ್ರಿಲ್ 3 ಅಥವಾ 4ರಂದು ಅವಿಶ್ವಾಸ ನಿರ್ಣಯದ ಮೇಲೆ ಮತದಾನ ನಡೆಯುವ ಸಾಧ್ಯತೆ ಇದೆ.

    ಸದ್ಯ ವಿಪಕ್ಷ ನಾಯಕರಾಗಿರುವ ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಪಕ್ಷದ ಷಹಬಾಜ್ ಷರೀಫ್ ಪಾಕಿಸ್ತಾನದ ಮುಂದಿನ ಪ್ರಧಾನಿ ಆಗಬಹುದು ಎಂದು ಹೇಳಲಾಗುತ್ತಿದೆ. ಸದ್ಯ ಮಿತ್ರಪಕ್ಷಗಳ ವಿಶ್ವಾಸ ಕಳೆದುಕೊಂಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ಭಾಗವಾಗಿದ್ದ ಪಿಎಂಎಲ್ ಕ್ಯೂ ಪಕ್ಷದ ಸದಸ್ಯರು ಸಂಸತ್ ಕಲಾಪದಲ್ಲಿ ವಿಪಕ್ಷಗಳ ಜೊತೆ ಕಾಣಿಸಿಕೊಂಡು ಇಮ್ರಾನ್ ಖಾನ್‍ಗೆ ಶಾಕ್ ನೀಡಿದ್ದಾರೆ. ಇದನ್ನೂ ಓದಿ: ವುಹಾನ್‌ ನಂತರ ಚೀನಾದಲ್ಲಿ ಅತಿದೊಡ್ಡ ಲಾಕ್‌ಡೌನ್: 2.6 ಕೋಟಿ ಜನ ಮನೆಯಲ್ಲೇ ಲಾಕ್

    ಕಾರಣ ಏನು?
    ಇಮ್ರಾನ್‍ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರವು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಪಾಕಿಸ್ತಾನ ಅಳಿವಿನ ಅಂಚಿನತ್ತ ಸಾಗುತ್ತಿದೆ ಮತ್ತು ಹಣದುಬ್ಬರ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಆರೋಪಿಸಿ ಮಾರ್ಚ್ 8 ರಂದು ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿ ಸಚಿವಾಲಯದ ಮುಂದೆ ಅವಿಶ್ವಾಸ ನಿರ್ಣಯ ಸಲ್ಲಿಸಿದ್ದವು. ಇದರಿಂದಾಗಿ ಮಾರ್ಚ್ 25ರಂದು ಇಮ್ರಾನ್ ಖಾನ್‍ರನ್ನು ಪದಚ್ಯುತಿಗೊಳಿಸಲು ಅವಿಶ್ವಾಸ ಗೊತ್ತುವಳಿ ಮಂಡಿಸಲು ದಿನಾಂಕ ನಿಗದಿಪಡಿಸಲಾಗಿತ್ತು.

    ಪಾಕಿಸ್ತಾನದ ಸಂಸತ್ತು 15 ಅಂಶಗಳ ಅಜೆಂಡಾ ಬಿಡುಗಡೆ ಮಾಡಿತ್ತು. ಇದರಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿಯೂ ಸೇರಿದೆ. ಆರ್ಥಿಕತೆಯನ್ನೂ ಇಮ್ರಾನ್ ಖಾನ್ ಸಮರ್ಪಕವಾಗಿ ನಿರ್ವಹಿಸಿಲ್ಲ. ಹಣದುಬ್ಬರ ಪ್ರಮಾಣ ಎರಡಂಕಿಗೆ ಹೆಚ್ಚಾಗಿರುವ ಕಾರಣ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಜನಸಾಮಾನ್ಯರಲ್ಲಿ ಸರ್ಕಾರದ ಬಗ್ಗೆ ಅಸಮಾಧಾನ ಮನೆಮಾಡಿದ್ದು, ರಾಜಕೀಯ ಭವಿಷ್ಯಕ್ಕೆ ಆತಂಕ ತಂದೊಡ್ಡಿದೆ. ವಿರೋಧ ಪಕ್ಷಗಳ ನಾಯಕರ ವಿರುದ್ಧ ಆಡಳಿತಾರೂಢ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ. ವಿರೋಧ ಪಕ್ಷಗಳು ಒಗ್ಗೂಡಲು ಸಹ ಇದು ಮುಖ್ಯಕಾರಣವಾಗಿದೆ ಎಂಬ ಅಂಶವನ್ನು ಇದರಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ತಾಲಿಬಾನ್ ಹೊಸ ಕಾನೂನು – ಪುರುಷರೊಂದಿಗೆ ಮಹಿಳೆಯರು ಪಾರ್ಕ್‌ಗೆ ಹೋಗುವಂತಿಲ್ಲ

    ಪಾಕಿಸ್ತಾನದ ಸಂಸತ್ತು 342 ಸದಸ್ಯಬಲ ಹೊಂದಿದೆ. ಅಧಿಕಾರಕ್ಕೆ ಬರಲು 172 ಸದಸ್ಯ ಬಲ ಅಗತ್ಯವಿದೆ. ಇಮ್ರಾನ್ ಖಾನ್‍ರ ಪಿಟಿಐ ನೇತೃತ್ವದ ಮೈತ್ರಿಕೂಟವು ಈ ಹಿಂದೆ 179 ಸದಸ್ಯಬಲ ಹೊಂದಿತ್ತು. ಪಿಟಿಐ ಪಕ್ಷದ 155 ಸಂಸದರು ಸಂಸತ್ತಿನಲ್ಲಿದ್ದರು. ಅವಿಶ್ವಾಸ ಗೊತ್ತುವಳಿಯಲ್ಲಿ ಪಾಲ್ಗೊಳ್ಳುವುದಾಗಿ 3 ಪ್ರಮುಖ ಮಿತ್ರಪಕ್ಷಗಳು ಹೇಳಿಕೆ ನೀಡಿದ್ದವು. ಪಾಕಿಸ್ತಾನದ ಸಂಸತ್ತಿನಲ್ಲಿ ವಿರೋಧ ಪಕ್ಷಗಳು 163 ಸ್ಥಾನಗಳನ್ನು ಹೊಂದಿವೆ. ಪಿಟಿಐ ಪಕ್ಷ ತೊರೆದಿರುವ ಸಂಸದರು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿರುವುದರ ಪರಿಣಾಮ ಇದೀಗ ಇಮ್ರಾನ್ ಖಾನ್ ಪಿಎಂ ಕುರ್ಚಿ ಬಿಟ್ಟು ಕೊಡಬೇಕಾಗಿದೆ.