Tag: Nomination Paper

  • ಇಂದು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

    ಇಂದು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

    ಮಂಡ್ಯ: ಮಂಡ್ಯದ (Mandya) ಗತ್ತು ಇಂಡಿಯಾಗೆ ಗೊತ್ತು ಎಂಬ ಮಾತಿದೆ. ಈ ಮಾತು ಬಂದಿರೋದೆ ಇಲ್ಲಿನ ರಾಜಕೀಯ ಚಟುವಟಿಕೆಗಳಿಂದ. ಈ ಬಾರಿಯ ಲೋಕಸಭಾ ಚುನಾವಣೆಯೂ (Lok Sabha Election) ಸಹ ಮಂಡ್ಯದಲ್ಲಿ ಅದೇ ರೀತಿ ಸದ್ದು ಮಾಡುತ್ತಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಇವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು (Star Chandru) ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಕಾಂಗ್ರೆಸ್ ಅಭ್ಯರ್ಥಿ ಮಂಡ್ಯದಲ್ಲಿ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ.

    ಇಂದು (ಏ.1) ಬೆಳಗ್ಗೆ 9 ಗಂಟೆಗೆ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮಂಡ್ಯದ ಆದಿದೇವತೆ ಶ್ರೀಕಾಳಿಕಾಂಬ ದೇವಸ್ಥಾನದಲ್ಲಿ ನಾಮಪತ್ರ (Nomination Paper) ಇಟ್ಟು ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ. ಬಳಿಕ ಕಾಳಿಕಾಂಬ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಮೆರವಣಿಗೆ ವೇಳೆ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಲ್ಲಿ ಕೈ ನಾಯಕರು ಇದ್ದಾರೆ. ಇದನ್ನೂ ಓದಿ: 15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್‌ ದರ ಇಳಿಕೆ – 100+ ಯೂನಿಟ್‌ ಬಳಸುವವರಿಗೆ ಲಾಭ

    ಒಂದು ಕಡೆ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಸೋದು ಮುಖ್ಯ ವಿಚಾರ ಆದರೆ ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವುದು ಗಮನಸೆಳೆಯಲಿದೆ. ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಕೈ ಹಿಡಿದು ನಾವು ನಿಜವಾದ ಜೋಡೆತ್ತು ಎಂದು ನಿಖಿಲ್ ಪರ ಡಿಕೆಶಿ ಪ್ರಚಾರ ಮಾಡಿದ್ದರು. ಇದೀಗ ಅದೇ ಹೆಚ್‌ಡಿಕೆ ವಿರುದ್ಧ ತಮ್ಮ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡಲು ಡಿಕೆ ಶಿವಕುಮಾರ್ ಮಂಡ್ಯ ಅಖಾಡ ಪ್ರವೇಶ ಮಾಡಲಿದ್ದಾರೆ. ಈ ವಿಚಾರ ಸದ್ಯ ತೀವ್ರ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಆರ್‌ಎಸ್‌ಎಸ್ ವಿಷ ಇದ್ದಂತೆ, ಟೇಸ್ಟ್ ನೋಡೋಕೆ ಯತ್ನಿಸಿದ್ರೆ ಸಾಯ್ತಿರಾ: ಮಲ್ಲಿಕಾರ್ಜುನ ಖರ್ಗೆ

    ಒಟ್ಟಾರೆ ಇಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಗೆ ಠಕ್ಕರ್ ಫೈಟ್ ನೀಡಲು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇನ್ನೂ ಡಿಕೆಶಿ ಹೆಚ್‌ಡಿಕೆ ವಿರುದ್ಧ ಏನೆಲ್ಲಾ ವಾಗ್ದಾಳಿ ಮಾಡಲಿದ್ದಾರೆ ಎಂದು ಕಾದುನೋಡಬೇಕಿದೆ. ಇದನ್ನೂ ಓದಿ: ಮತ್ತೆ ಮದುವೆಯಾಗಬೇಕಿದ್ದರೆ ಚುನಾವಣೆಗೆ ಮುಂಚೆಯೇ ಆಗಿಬಿಡಿ, ಇಲ್ಲಾಂದ್ರೆ ಜೈಲು ಗ್ಯಾರಂಟಿ; ಅಸ್ಸಾಂ ಸಿಎಂ ವಾರ್ನಿಂಗ್‌!

  • ಹಾಸನ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

    ಹಾಸನ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

    – ತಾತ ಹೆಚ್‌ಡಿಡಿ ಹಾಗೂ ಶಾಸಕರ ಆಶೀರ್ವಾದ ಪಡೆದ ಪ್ರಜ್ವಲ್

    ಹಾಸನ: ಲೋಕಸಭಾ ಚುನಾವಣೆಗೆ (Lok Sabha Election) ನಾಮಪತ್ರ (Nomination) ಸಲ್ಲಿಕೆ ಕಾರ್ಯ ಆರಂಭಗೊಂಡಿದ್ದು, ಹಾಸನ (Hassan) ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

    ಜಿಲ್ಲಾ ಚುನಾವಣಾಧಿಕಾರಿ ಸಿ.ಸತ್ಯಭಾಮಗೆ ಪ್ರಜ್ವಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಶಾಸಕರಾದ ಹೆಚ್‌ಡಿ ರೇವಣ್ಣ, ಎ.ಮಂಜು, ಹೆಚ್‌ಪಿ ಸ್ವರೂಪ್ ಪ್ರಕಾಶ್, ಸಿಎನ್ ಬಾಲಕೃಷ್ಣ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಪ್ರಜ್ವಲ್ ರೇವಣ್ಣ ದೇವರ ಮೊರೆ ಹೋಗಿದ್ದು, ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ನಾಮಪತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣಗೆ ಶಾಸಕ ಹೆಚ್‌ಪಿ ಸ್ವರೂಪ್ ಪ್ರಕಾಶ್ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಭಾರತ ಸಮನ್ಸ್‌ ನೀಡಿದರೂ ಕೇಜ್ರಿವಾಲ್‌ ಬಂಧನ ಬಗ್ಗೆ ಅಮೆರಿಕ ಮತ್ತೆ ಪ್ರತಿಕ್ರಿಯೆ

    ನಾಮಪತ್ರ ಸಲ್ಲಿಕೆಗೂ ಮುನ್ನ ಹುಟ್ಟೂರು ಹರದನಹಳ್ಳಿಯಲ್ಲಿರುವ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆಶೀರ್ವಾದ ಪಡೆದಿದ್ದು, ಸೂಚಕರಾಗಿ ನಾಮಪತ್ರಕ್ಕೆ ಸಹಿ ಮಾಡಿ ಹೆಚ್‌ಡಿಡಿ ಮೊಮ್ಮಗನಿಗೆ ಹಾರೈಸಿದ್ದಾರೆ. ಬಳಿಕ ಶಾಸಕರಾದ ಎ.ಮಂಜು, ಸಿಎನ್ ಬಾಲಕೃಷ್ಣ ಅವರ ಕಾಲಿಗೆ ಬಿದ್ದು ಪ್ರಜ್ವಲ್ ಆಶೀರ್ವಾದ ಪಡೆದುಕೊಂಡಿದ್ದಾರೆ. ಮಗನ ನಾಮಪತ್ರ ಸಲ್ಲಿಕೆ ಹಿನ್ನೆಲೆ ಮಾಜಿ ಸಚಿವ ಹೆಚ್‌ಡಿ ರೇವಣ್ಣ ದೇವರಿಗೆ ಪೂಜೆ ಸಲ್ಲಿಸಿ ಬರಿಗಾಲಿನಲ್ಲೇ ಚುನಾವಣಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿ ಮಗನ ನಾಮಪತ್ರ ಸಲ್ಲಿಕೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ

  • ಡಿಕೆಶಿಗೆ ಬಿಗ್ ರಿಲೀಫ್ – ನಾಮಪತ್ರ ಸ್ವೀಕೃತ

    ಡಿಕೆಶಿಗೆ ಬಿಗ್ ರಿಲೀಫ್ – ನಾಮಪತ್ರ ಸ್ವೀಕೃತ

    ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕನಕಪುರ (Kanakapur) ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ.

    ಡಿಕೆ ಶಿವಕುಮಾರ್ ಕಾಂಗ್ರೆಸ್‌ನಿಂದ (Congress) ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರವನ್ನು ಸಲ್ಲಿಸಿದ್ದರು. ಆದರೆ ಆದಾಯ ತೆರಿಗೆ ನೋಟಿಸ್ ಹಿನ್ನೆಲೆ ಅವರ ನಾಮಪತ್ರ ತಿರಸ್ಕೃತವಾಗುತ್ತದೆ ಎಂಬ ಭೀತಿಯಿತ್ತು. ಹೀಗಾಗಿ ಅವರ ಸಹೋದ ಡಿಕೆ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು. ಇದೀಗ ಡಿಕೆಶಿ ನಾಮಪತ್ರ ಸ್ವೀಕೃತವಾಗಿದ್ದು, ದೊಡ್ಡ ತಲೆನೋವು ಕಳೆದಂತಾಗಿದೆ.

    ಕೆಪಿಸಿಸಿ ಅಧ್ಯಕ್ಷರ ನಾಮಪತ್ರವನ್ನು ಚುನಾವಣಾಧಿಕಾರಿ ಸಂತೋಷ್ ಶುಕ್ರವಾರ ಪರಿಶೀಲನೆ ನಡೆಸಿದ್ದಾರೆ. ಅಫಿಡವಿಟ್ ಸೇರಿ ಇನ್ನಿತರ ದಾಖಲಾತಿಗಳನ್ನು ಪರಿಶೀಲಿಸಲಾಗಿದೆ. ಡಿಕೆಶಿ 4 ಸೆಟ್ ನಾಮಪತ್ರಗಳನ್ನು ಸಲ್ಲಿಸಿದ್ದು, ಎಲ್ಲಾ ನಾಮಪತ್ರಗಳನ್ನೂ ಸ್ವೀಕೃತಗೊಳಿಸಲಾಗಿದೆ. ಇದನ್ನೂ ಓದಿ: ಚುನಾವಣಾ ಕಣಕ್ಕಿಳಿಯಲು ನಕಲಿ ಜಾತಿ ಪ್ರಮಾಣ ಪತ್ರ – ಸರ್ಟಿಫಿಕೇಟ್ ರದ್ದು ಪಡಿಸಿದ ಡಿಸಿ

    ಡಿಕೆಶಿಯ ನಾಮಪತ್ರ ಸ್ವೀಕೃತಗೊಂಡ ಹಿನ್ನೆಲೆಯಲ್ಲಿ ಡಿಕೆ ಸುರೇಶ್ ನಾಮಪತ್ರ ಹಿಂದಕ್ಕೆ ಪಡೆಯಲಿದ್ದು ಯಾವಗಾ ಹಿಂದಕ್ಕೆ ಪಡೆಯುತ್ತಾರೆ ಎಂಬುದು ತಿಳಿದು ಬಂದಿಲ್ಲ. ಇದನ್ನೂ ಓದಿ: ಶನಿವಾರದ ಒಳಗಡೆ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ ರಾಹುಲ್ ಗಾಂಧಿ

  • ಶೆಟ್ಟರ್‌ಗೆ ಟಿಕೆಟ್ ತಪ್ಪಲು ನಾನೇ ಕಾರಣ ಅನ್ನೋದು ಸುಳ್ಳು: ಬೊಮ್ಮಾಯಿ

    ಶೆಟ್ಟರ್‌ಗೆ ಟಿಕೆಟ್ ತಪ್ಪಲು ನಾನೇ ಕಾರಣ ಅನ್ನೋದು ಸುಳ್ಳು: ಬೊಮ್ಮಾಯಿ

    – ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

    ಹಾವೇರಿ/ಹುಬ್ಬಳ್ಳಿ: ಶಿಗ್ಗಾಂವಿ (Shiggaavi) ಮತಕ್ಷೇತ್ರದಿಂದ ಸ್ಪರ್ಧಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿಯವರು (Basavaraj Bommai) ಶನಿವಾರ ಶಿಗ್ಗಾಂವಿಗೆ ತೆರಳಿ ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

    ಬೊಮ್ಮಾಯಿ ನಾಮಪತ್ರ (Nomination Paper) ಸಲ್ಲಿಕೆಗೂ ಮುನ್ನ ಹುಬ್ಬಳ್ಳಿಯ (Hubballi) ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪಟ್ಟಣದ ಪುರಸಭೆ ಬಳಿ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಗ್ರಾಮ ದೇವತೆಯ ದರ್ಶನ ಪಡೆದು, ಅಂಬೇಡ್ಕರ್ ಮೂರ್ತಿಗೆ ಹಾರ ಹಾಕಿದ ಸಿಎಂ ಬಳಿಕ ತಮ್ಮ ಕುಟುಂಬಸ್ಥರು ಹಾಗೂ ಮುಖಂಡರೊಡನೆ ನಾಮಪತ್ರ ಸಲ್ಲಿಕೆಗೆ ತಹಸೀಲ್ದಾರ್ ಕಚೇರಿಗೆ ತೆರಳಿದರು. ಸಿಎಂಗೆ ಬೆಂಬಲ ನೀಡಲು 50ಕ್ಕೂ ಹೆಚ್ಚು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತೆರಳಿದ್ದರು.

    ಸಂಸದ ಶಿವಕುಮಾರ್ ಉದಾಸಿ, ಸಚಿವ ಸಿಸಿ ಪಾಟೀಲ್, ಸಿಎಂ ಪುತ್ರ ಭರತ್ ಬೊಮ್ಮಾಯಿ, ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡರು ಬೊಮ್ಮಾಯಿಗೆ ಸಾಥ್ ನೀಡಿದರು. ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಕೆ ಮಾಡಿದ ಬಳಿಕ ಮಾತನಾಡಿದ ಸಿಎಂ, ಜನರು ಈ ಹಿಂದಿಗಿಂತಲೂ ಹೆಚ್ಚಿನ ಬೆಂಬಲ ನೀಡುತ್ತಾರೆ. ಆಡಳಿತ ಪಕ್ಷ ಹಲವು ಹಾಲಿ ಶಾಸಕರನ್ನು ತೆಗೆದಾಗ ಬಂಡಾಯ ಸಹಜ. ಚುನಾವಣೆ ಎಂದರೆ ಕುಸ್ತಿ, ಎದುರಾಳಿ ಯಾರೇ ಬಂದರೂ ಎದುರಿಸುತ್ತೇವೆ ಎಂದಿದ್ದಾರೆ.

    ಇದಕ್ಕೂ ಮುನ್ನ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು ಹುಬ್ಬಳ್ಳಿಯಲ್ಲಿ ಇಳಿದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಇಂದು ಒಳ್ಳೆಯ ಮುಹೂರ್ತ ಇದ್ದಿದ್ದರಿಂದ ಸಾಂಕೇತಿಕವಾಗಿ ಮೊದಲ ಹಂತದ ನಾಮಪತ್ರ ಸಲ್ಲಿಸಲಿದ್ದೇನೆ. ಏಪ್ರಿಲ್ 19ರಂದು ಜನ ಸೇರಿಸಿ ನಾಮಪತ್ರ ಸಲ್ಲಿಸುತ್ತೇನೆ. ಇಂದು ಇಡೀ ದಿನ ಕ್ಷೇತ್ರದಲ್ಲಿ ಇರುತ್ತೇನೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಚುನಾವಣಾ ಕಣ ಸಿದ್ಧವಾಗಿದೆ. ನಮಗೆ ಆತ್ಮವಿಶ್ವಾಸ ಇದೆ. ಸಂಪೂರ್ಣ ಬಹುಮತ ಬರುತ್ತದೆ. ಉಳಿದ ಕ್ಷೇತ್ರಗಳಿಗೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಆಗಲಿದೆ. 12 ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಕೇಂದ್ರ ಚುನಾವಣೆ ಸಮಿತಿ ತೀರ್ಮಾನ ಮಾಡುತ್ತದೆ ಎಂದರು.

    ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆಯುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಜಗದೀಶ್ ಶೆಟ್ಟರ್ ಮನವೊಲಿಕೆ ಪ್ರಯತ್ನ ಮಾಡಿದ್ದೇವೆ. ಇವತ್ತಿಗೂ ಪ್ರಯತ್ನ ನಡೆಯುತ್ತಿದೆ. ನಿನ್ನೆ ಧರ್ಮೇಂದ್ರ ಪ್ರಧಾನ ಬಳಿ ಚರ್ಚೆ ಮಾಡಿದ್ದೇನೆ. ಶೆಟ್ಟರ್ ಜನಸಂಘ ಕಾಲದ ಮನೆತನ. ಬಿಜೆಪಿಗೆ ಶೆಟ್ಟರ್ ಅತ್ಯಂತ ನಿಷ್ಠರು. ಅವರು ಉತ್ತರ ಕರ್ನಾಟಕ ಭಾಗಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಬೇಕೆಂದು ಹೇಳಿದ್ದೇನೆ. ಅತ್ಯಂತ ಅವಶ್ಯ ಇರೋ ನಾಯಕನನ್ನು ಉಳಿಸಿಕೊಳ್ಳುವ ವಿಶ್ವಾಸವಿದೆ. ಈ ಬಗ್ಗೆ ಜೆಪಿ ನಡ್ಡಾ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಶಾಸಕ ಅನಿಲ್ ಬೆನಕೆಗೆ ಬಿ.ಎಲ್ ಸಂತೋಷ್ ಬುಲಾವ್

    ಶೆಟ್ಟರ್‌ಗೆ ಟಿಕೆಟ್ ತಪ್ಪಲು ಕಾರಣ ಬೊಮ್ಮಾಯಿ ಎನ್ನಲಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಸುಳ್ಳು ವದಂತಿ, ಯಾರೂ ಅದನ್ನು ನಿರೀಕ್ಷೆ ಮಾಡಬಾರದು. ಅತ್ಯಂತ ಪ್ರಾಮಾಣಿಕವಾಗಿ ಶೆಟ್ಟರ್ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಹೇಳೋರು ನೂರಾರು ಹೇಳುತ್ತಾರೆ. ಶೆಟ್ಟರ್ ನಮ್ಮ ಆತ್ಮೀಯರು ಎಂದು ನುಡಿದರು. ಇದನ್ನೂ ಓದಿ: ಸೋಮಣ್ಣ ಹೊರಗಿನವ, ವರುಣಾದಲ್ಲಿ ಒಂದು ಮತವೂ ಬೀಳಲ್ಲ: ಸಿದ್ದು

  • ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ – ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

    ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ – ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

    ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರು (Basavaraj Bommai) ವಿಧಾನಸಭಾ ಚುನಾವಣೆಗೆ (Assembly Election) ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿಯಲ್ಲಿ (Shiggaavi) ಸ್ಪರ್ಧಿಸಲಿದ್ದಾರೆ. ಈ ಹಿನ್ನೆಲೆ ಸಿಎಂ ಶನಿವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

    ಈಗಾಗಲೇ ಬೊಮ್ಮಾಯಿಯವರು ತಮ್ಮ ನಾಮಪತ್ರ ಸಲ್ಲಿಸಲು ಶಿಗ್ಗಾಂವಿ ಪ್ರಯಾಣದಲ್ಲಿದ್ದಾರೆ. ಬೆಂಗಳೂರಿನ ಆರ್‌ಟಿ ನಗರ ನಿವಾಸದಿಂದ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಅವರು ತೆರಳಿದ್ದಾರೆ. ವಿಶೇಷ ವಿಮಾನದ ಮೂಲಕ ಸಿಎಂ ಹುಬ್ಬಳ್ಳಿಗೆ ತೆರಳಲಿದ್ದು, ಬಳಿಕ ಅಲ್ಲಿಂದ ಶಿಗ್ಗಾಂವಿಗೆ ರಸ್ತೆ ಮಾರ್ಗದ ಮೂಲಕ ತೆರಳಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ – ಮಾಜಿ ಸಚಿವ ಆಸ್ಪತ್ರೆಗೆ ದಾಖಲು

    ಸಿಎಂ 11 ಗಂಟೆ ವೇಳೆಗೆ ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ನಾಮಪತ್ರ ಸಲ್ಲಿಕೆಯ ಬಳಿಕ ಬೊಮ್ಮಾಯಿ ಶಿಗ್ಗಾಂವಿಯ ತಮ್ಮ ನಿವಾಸದಲ್ಲಿ ಸಂಜೆ ವರೆಗೂ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

  • ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ನಾಮಪತ್ರ ಸಲ್ಲಿಕೆ

    ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ನಾಮಪತ್ರ ಸಲ್ಲಿಕೆ

    ಚಿಕ್ಕಬಳ್ಳಾಪುರ: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್ (K.Sudhakar) ಗುರುವಾರ ಸಾಂಕೇತಿಕವಾಗಿ ಚಿಕ್ಕಬಳ್ಳಾಪುರ (Chikkaballapura) ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿಯಾಗಿ ನಾಮಪತ್ರ (Nomination Paper) ಸಲ್ಲಿಸಿದ್ದಾರೆ.

    ಗುರುವಾರ ಕುಟಂಬ ಸಮೇತ ತಿರುಪತಿ (Tirupati) ತಿಮ್ಮಪ್ಪನ ದರ್ಶನ ಪಡೆದು ಆಗಮಿಸಿದ ಸಚಿವ ಸುಧಾಕರ್, ಚಿಕ್ಕಪ್ಯಾಯಲಗುರ್ಕಿ ಗ್ರಾಮದ ಮನೆ ದೇವರು ಚನ್ನಕೇಶವಸ್ವಾಮಿ ದೇವಾಯಕ್ಕೂ ಭೇಟಿ ನೀಡಿದರು. ನಂತರ ಚಿಕ್ಕಬಳ್ಳಾಪುರ ನಗರದ ಉಪವಿಭಾಗಾಧಿಕಾರಿಗಳ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ (Election Officer) ಸಂತೋಷ್ ಕುಮಾರ್‌ಗೆ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ: ನಾನೇನಾದ್ರೂ ರೇಪ್ ಮಾಡಿದ್ನಾ: ಏನ್ ತಪ್ಪು ಮಾಡಿದ್ದೆ? – ಟಿಕೆಟ್ ಕೈತಪ್ಪಿದ್ದಕ್ಕೆ ಸವದಿ ಬೇಸರ 

    ಸಚಿವ ಸುಧಾಕರ್‌ಗೆ ಪತ್ನಿ ಪ್ರೀತಿ, ತಂದೆ ಕೇಶವರೆಡ್ಡಿ, ಸಹೋದರಿ ಅಶ್ವಿನಿ, ಹಾಗೂ ಮಾವ ಆನಂದ್ ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಸುಧಾಕರ್, ಗುರುವಾರ ಗುರುವನ್ನು ನಂಬುವ ನಾನು ತಿರುಪತಿ ತಿಮ್ಮಪ್ಪನ ಪರಮ ಭಕ್ತ. ಹಾಗಾಗಿ ಇಂದು ದೇವರ ದರ್ಶನ ಪಡೆದು ಆಗಮಿಸಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷ ಬಿ ಫಾರಂ ನೀಡಿದ್ದು, ಅದನ್ನು ಪಡೆಯಲು ಸಾಧ್ಯವಾಗಲಿಲ್ಲ. ಹಾಗೆ ಬಂದು ಇಂದು ಸಾಂಕೇತಿಕವಾಗಿ ನಾಮಿನೇಷನ್ ಮಾಡಿದ್ದೇನೆ ಎಂದರು. ಇದನ್ನೂ ಓದಿ: ವರುಣಾ ಕ್ಷೇತ್ರದಲ್ಲಿ ಜನ ಅಬ್ಬೆಪಾರಿಗಳಾಗಿದ್ದಾರೆ : ಪ್ರತಾಪ್ ಸಿಂಹ  

    ಏಪ್ರಿಲ್ 17ರಂದು ಮತ್ತೆ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲಿದ್ದೇನೆ. ಈ ಬಾರಿ ನನಗೆ ಪ್ರಬಲ ಪ್ರತಿಸ್ಪರ್ಧಿಗಳೇ ಇಲ್ಲ. ಕಳೆದ ಮೂರು ಬಾರಿ ಪಡೆದ ಲೀಡ್‌ಗಿಂತ ಹೆಚ್ಚಿನ ಲೀಡ್ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು. ಇದನ್ನೂ ಓದಿ: ಪತ್ರಿಕೋದ್ಯಮ ಓದಿದ ಬರಿಗಾಲ ಸಂತನಿಗೆ ಬಿಜೆಪಿ ಟಿಕೆಟ್

  • ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ

    ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ

    ಬೆಂಗಳೂರು: ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ (Election) ಘೋಷಿಸಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಏಪ್ರಿಲ್ 13ರಿಂದ ನಾಮಪತ್ರ (Nomination Paper) ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

    ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ (Election Officer) ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್. ಶಂಕರ್ 

    ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿಗೆ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್ 24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇದನ್ನೂ ಓದಿ: ರಾಜಕಾರಣ ನನಗೆ ಹೊಸದಲ್ಲ, ಹೊಂದಾಣಿಕೆ ಮಾತೇ ಇಲ್ಲ: ಡಿಕೆಶಿ 

    ರಾಜ್ಯದಲ್ಲಿ ಈಗಾಗಲೇ ಚುನಾವಣೆಗೆ ಅವಶ್ಯವಿರುವ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, 146 ವೆಚ್ಚ ನಿರ್ವಹಣಾ ವೀಕ್ಷಕರು, 120 ಸಾಮಾನ್ಯ ವೀಕ್ಷಕರು ಸೇರಿದಂತೆ 37 ಪೊಲೀಸ್ ವೀಕ್ಷಕರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಯಶಸ್ವಿಯಾಗಿದ್ದೇವೆ, ಯಾವ ಬಂಡಾಯಕ್ಕೆ ಹೆದರಬೇಡಿ – ಬೊಮ್ಮಾಯಿಗೆ ಹೈಕಮಾಂಡ್‌ ಭರವಸೆ

    ಗುರುವಾರ ಅಧಿಕೃತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದ್ದು, ಮತದಾನದ ಸಮಯ ಸೇರಿದಂತೆ ಇತರೆ ಪ್ರಮುಖ ವಿಷಯಗಳನ್ನು ಅಧಿಸೂಚನೆ ಒಳಗೊಂಡಿರುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ (Press Release) ತಿಳಿಸಿರುತ್ತಾರೆ. ಇದನ್ನೂ ಓದಿ: ಮತ್ತೆ ಜೆಡಿಎಸ್‌ ಬಾಗಿಲು ತಟ್ಟಿದ ದತ್ತಾ