Tag: Non Resident Kannadigas

  • ಮತದಾನ ಮಾಡಲು ಅವಕಾಶ ನೀಡಿ – ಅನಿವಾಸಿ ಕನ್ನಡಿಗರಿಂದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ

    ಮತದಾನ ಮಾಡಲು ಅವಕಾಶ ನೀಡಿ – ಅನಿವಾಸಿ ಕನ್ನಡಿಗರಿಂದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ

    ಬೆಂಗಳೂರು: ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆಯನ್ನು (Election) ಘೋಷಿಸಿದ್ದು, ಅನಿವಾಸಿ ಕನ್ನಡಿಗರು (Non Resident Kannadigas) ತಾವಿರುವ ಸ್ಥಳದಲ್ಲಿಯೇ ಮತದಾನ (Voting) ಮಾಡಲು ಅವಕಾಶ ಕಲ್ಪಿಸಿ ಕೊಡುವಂತೆ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (Chief Electoral Officer) ಮನವಿ ಮಾಡಿದ್ದಾರೆ.

    ಕರ್ನಾಟಕದ (Karnataka) ಅನೇಕ ಕನ್ನಡಿಗರು ಕೆಲಸದ ಸಲುವಾಗಿ ದೇಶ- ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ. ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಅನಿವಾಸಿ ಕನ್ನಡಿಗರಿಗೆ ಬರಲು ಅಸಾಧ್ಯ. ಆದ್ದರಿಂದ ಅಂಚೆ ಮತದಾನ (Postal Voting) ಅಥವಾ ಭಾರತೀಯ ರಾಯಭಾರಿ ಕಚೇರಿಯಲ್ಲಿ (Indian Embassy) ಮತಗಟ್ಟೆ (Polling Booth) ತೆರೆಯುವ ಮೂಲಕ ಮತದಾನ ಮಾಡಲು ಅವಕಾಶ ಮಾಡಿಕೊಡಬೇಕೆಂದು ಸಾಗರೋತ್ತರ ಕನ್ನಡಿಗರು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿ ಫೈಟ್‌ನಲ್ಲಿ ಗೆದ್ದ ಪರಮೇಶ್ವರ್‌! 

    ಅಲ್ಲದೇ ಚುನಾವಣಾ ಆಯೋಗವು ಧ್ವಜಾಧಾರಿ ಮತ್ತು ಪ್ರಜಾಸತ್ತಾತ್ಮಕ ಸುಧಾರಣೆಗಳ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಪ್ರಜಾಸತ್ತಾತ್ಮಕ ಪ್ರಗತಿಯನ್ನು ಬಲಪಡಿಸುವ ನಿಮ್ಮ ಕೆಲಸವನ್ನು ಶ್ಲಾಘಿಸುತ್ತೇವೆ ಎಂದು ಮನವಿ ಪತ್ರದ ಮೂಲಕ ಶುಭಹಾರೈಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ – ಈಶ್ವರಪ್ಪಗೆ ಹೈಕಮಾಂಡ್‌ ಶಾಕ್‌ 

    ಸುಮಾರು 60 ಲಕ್ಷ ಭಾರತೀಯರು ವಿದೇಶದಲ್ಲಿ ವಾಸಿಸುತ್ತಿದ್ದು, ಇವರ ಮತದಾನದಿಂದ ಪ್ರಜಾಪ್ರಭುತ್ವದಲ್ಲಿ (Democracy) ಮಹತ್ವದ ಬದಲಾವಣೆ ತರಬಹುದು. ಅಲ್ಲದೇ 5 ಲಕ್ಷ ಅನಿವಾಸಿ ಕನ್ನಡಿಗರು ಮತದಾನ ಮಾಡಲು ಅರ್ಹರಾಗಿದ್ದಾರೆ. ಈ ಕುರಿತು ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಮತದಾನ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗಿಂತ ಪತ್ನಿಯೇ ಹೆಚ್ಚು ಶ್ರೀಮಂತೆ – ಆಸ್ತಿ ಎಷ್ಟಿದೆ ಗೊತ್ತಾ?

  • 30ಕ್ಕೂ ಹೆಚ್ಚು ದೇಶಗಳ ಅನಿವಾಸಿ ಕನ್ನಡಿಗರ ಟ್ವಿಟ್ಟರ್ ಅಭಿಯಾನ

    30ಕ್ಕೂ ಹೆಚ್ಚು ದೇಶಗಳ ಅನಿವಾಸಿ ಕನ್ನಡಿಗರ ಟ್ವಿಟ್ಟರ್ ಅಭಿಯಾನ

    ಬೆಂಗಳೂರು: ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ ಮೂವತ್ತಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ, ಒಂದೇ ಧ್ವನಿಯೊಂದಿಗೆ ಟ್ವಿಟ್ಟರ್ ಮತ್ತು ಇಮೇಲ್ ಮೂಲಕ ಕರ್ನಾಟಕ ಸರಕಾರಕ್ಕೆ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸಿ ಇಂದು ಅಭಿಯಾನ ನಡೆಸಲಾಯಿತು.

    ‘ಎನ್‍ಆರ್‍ಐ ಅಪೀಲ್ ಡೇ’ #NRIappealDay ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಜನವರಿ 2ನ್ನು ಅಂತರಾಷ್ಟ್ರೀಯ ಅನಿವಾಸಿ ಕನ್ನಡಿಗರ ಮನವಿ ದಿನವಾಗಿ ಆಚರಿಸಲಾಯಿತು. ಅಭಿಯಾನದಲ್ಲಿ ಅಮೆರಿಕ, ಯುಎಇ, ಬ್ರಿಟನ್, ಆಸ್ಟ್ರೇಲಿಯಾ, ಕತಾರ್, ಕುವೈಟ್, ಇಟಲಿ, ಜರ್ಮನಿ, ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡಾ, ಇಥಿಯೋಪಿಯ, ಡೆನ್ಮಾರ್ಕ್, ನೈಜೀರಿಯಾ, ಹಾಲೆಂಡ್, ಓಮನ್, ಬಹರೈನ್, ಇಂಡೋನೇಷಿಯಾ, ಸೌದಿ ಅರೇಬಿಯಾ, ಇಸ್ರೇಲ್, ಈಜಿಪ್ಟ್, ಸ್ವಿಜಲ್ರ್ಯಾಂಡ್, ಘಾನ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಹಾಂಕಾಂಗ್, ಸಿಂಗಪೂರ್, ಸ್ಕಾಟ್ಲ್ಯಾಂಡ್, ನಾರ್ವೆ, ನೆದಲ್ರ್ಯಾಂಡ್, ಸೌತ್ ಕೊರಿಯಾ ಸೇರಿದಂತೆ ಇನ್ನಿತರ ದೇಶದ ನೂರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಭಾಗವಹಿಸಿದ್ದವು.

    ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಗೆ ಕೂಡಲೇ ಉಪಾಧ್ಯಕ್ಷರನ್ನ ನೇಮಿಸಬೇಕು, ಉಪಾಧ್ಯಕ್ಷ ಸ್ಥಾನಕ್ಕೆ ಅನಿವಾಸಿಗಳ ಕಷ್ಟ ಬಲ್ಲ ಒಬ್ಬ ಅನಿವಾಸಿ ಕನ್ನಡಿಗರನ್ನೇ ನೇಮಿಸಬೇಕು. ನೆನೆಗುದಿಗೆ ಬಿದ್ದಿರುವ ಎನ್‍ಆರ್‍ಕೆ ಕಾರ್ಡ್ ಯೋಜನೆಯನ್ನು ತ್ವರಿತವಾಗಿ ಜಾರಿಗೆಗೊಳಿಸಬೇಕು. ಹೆಚ್ಚು ಅನಿವಾಸಿ ಕನ್ನಡಿಗರ ಸಾಂದ್ರತೆ ಇರುವ ದೇಶಗಳಲ್ಲಿ ಕನ್ನಡ ಭವನ ನಿರ್ಮಾಣ ಮಾಡಿ ಕನ್ನಡ ಪಾಠಶಾಲೆ ನಡೆಸಲು ವ್ಯವಸ್ಥೆ ಮಾಡಬೇಕು ಎಂಬ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಲಾಯಿತು.

  • ಅನಿವಾಸಿ ಕನ್ನಡಿಗರ #NRIappealDay ಅಭಿಯಾನಕ್ಕೆ ಕರವೇ ಬೆಂಬಲ

    ಅನಿವಾಸಿ ಕನ್ನಡಿಗರ #NRIappealDay ಅಭಿಯಾನಕ್ಕೆ ಕರವೇ ಬೆಂಬಲ

    ಬೆಂಗಳೂರು: ಸತತ ಕೋರಿಕೆ, ಹಲವಾರು ಮನವಿಗಳ ನಂತರವೂ ಹಲವು ವರ್ಷಗಳಿಂದ ಕಡೆಗಣಿಸಲ್ಪಟ್ಟು, ಸ್ಪಂದನೆ ಸಿಗದೇ ಹೋದರೆ ಗಮನ ಸೆಳೆಯಬೇಕಾದರೆ ವಿಭಿನ್ನ ರೀತಿಯ ಪ್ರಯತ್ನ ಮಾಡಬೇಕಾಗುತ್ತದೆ ಅಂತದ್ದೇ ಒಂದು ಪ್ರಯತ್ನಕ್ಕೆ ವಿಶ್ವದಾದ್ಯಂತ ಇರುವ ಅನಿವಾಸಿ ಕನ್ನಡಿಗರು ಕೈಹಾಕಿದ್ದಾರೆ. ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ ಮೂವತ್ತಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಟ್ವಿಟರ್ ಮತ್ತು ಇಮೇಲ್ ಮೂಲಕ ಕರ್ನಾಟಕ ಸರ್ಕಾರಕ್ಕೆ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸುವ ಅಭಿಯಾನವನ್ನು ಜನವರಿ 2ರಂದು ಮಧ್ಯಾಹ್ನ ನಡೆಸಲು ತೀರ್ಮಾನಿಸಿದ್ದಾರೆ. #NRIappealDay ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಜನವರಿ 2ರಂದು ಅಂತರಾಷ್ಟ್ರೀಯ ಅನಿವಾಸಿ ಕನ್ನಡಿಗರ ಮನವಿ ದಿನವಾಗಿ ಆಚರಿಸಲು ಮುಂದಾಗಿದ್ದಾರೆ.

    ಅನಿವಾಸಿ ಕನ್ನಡಿಗರಿಗಾಗಿಯೇ ಕರ್ನಾಟಕ ಸರ್ಕಾರದಲ್ಲಿ ಅನಿವಾಸಿ ಭಾರತೀಯ ಸಮಿತಿ ಇದೆ(ಕೆಎನ್‍ಆರ್‍ಐ ಫೋರಂ). ಅದರ ಅಧ್ಯಕ್ಷರು ಸ್ವತಃ ಮುಖ್ಯಮಂತ್ರಿಗಳು, ಆದರೆ ಮುಖ್ಯಮಂತ್ರಿಗಳಿಗೆ ಸರ್ಕಾರದ ಇತರ ಗಂಭೀರ ಜವಾಬ್ದಾರಿಗಳಿರುವ ಕಾರಣ ಕೆಎನ್‍ಆರ್‍ಐ ಸಮಿತಿಯಲ್ಲಿ ಉಪಾಧ್ಯಕ್ಷರಿಗೇ ಹೆಚ್ಚಿನ ಜವಾಬ್ದಾರಿ. ಆದರೆ ಕಳೆದ ಮೂರು ವರ್ಷಗಳ ಹಿಂದೆ ತೆರವುಗೊಂಡ ಉಪಾಧ್ಯಕ್ಷ ಸ್ಥಾನಕ್ಕೆ ಹೊಸದಾಗಿ ಯಾರನ್ನೂ ನೇಮಕವೇ ಮಾಡಿಲ್ಲ. ಹಲವಾರು ಕನ್ನಡಪರ ಸಂಘಟನೆಗಳು ಈ ಕುರಿತು ಸರ್ಕಾರದ ಗಮನ ಸೆಳೆದಿದ್ದರೂ ಯಾರು ಸ್ಪಂದಿಸುವ ಗೋಜಿಗೆ ಹೋಗಿರಲಿಲ್ಲ. ಇದೀಗ ಶತಾಯಗತಾಯ ಬೇಡಿಕೆಯನ್ನು ಕರ್ನಾಟಕ ಸರ್ಕಾರಕ್ಕೆ ತಲುಪಿಸಿ ಸೇರಿಸಿಕೊಳ್ಳಬೇಕೆಂದು ಈಡೇರಿಸಿ ಕೊಳ್ಳಬೇಕೆಂದು ಅನಿವಾಸಿ ಕನ್ನಡಿಗರು ತೀರ್ಮಾನಿಸಿದಂತಿದೆ. ಹಾಗಾಗಿ ಈ ವಿಭಿನ್ನ ಅಭಿಯಾನದ ಮೂಲಕ ಒಗ್ಗಟ್ಟಾಗಿ ಧ್ವನಿ ಎತ್ತಲಿದ್ದಾರೆ.

    ಅಂತರರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಕರೆಕೊಟ್ಟಿರುವ ಈ ಅಭಿಯಾನಕ್ಕೆ ಈಗಾಗಲೇ ಅಮೆರಿಕ, ಯುಎಇ, ಬ್ರಿಟನ್, ಆಸ್ಟ್ರೇಲಿಯಾ, ಕತಾರ್, ಕುವೈಟ್, ಇಟಲಿ, ಜರ್ಮನಿ, ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡಾ, ಇಥಿಯೋಪಿಯ, ಡೆನ್ಮಾರ್ಕ್, ನೈಜೀರಿಯಾ, ಹಾಲೆಂಡ್, ಓಮನ್, ಬಹರೈನ್, ಇಂಡೋನೇಷಿಯಾ, ಸೌದಿ ಅರೇಬಿಯಾ, ಇಸ್ರೇಲ್, ಈಜಿಪ್ಟ್, ಸ್ವಿಜಲ್ರ್ಯಾಂಡ್, ಘಾನ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಹಾಂಕಾಂಗ್, ಸಿಂಗಪೂರ್, ಸ್ಕಾಟ್ಲ್ಯಾಂಡ್, ನಾರ್ವೆ, ನೆದಲ್ರ್ಯಾಂಡ್, ಸೌತ್ ಕೊರಿಯಾ ಇನ್ನಿತರ ದೇಶದ ನೂರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಬೆಂಬಲ ಘೋಷಿಸಿವೆ.

    ‘ಅನಿವಾಸಿಗಳಿಗಾಗಿ ಒಂದು ದಿನ’ ಎಂದು ದೇಶ ವಿದೇಶಗಳಲ್ಲಿ ಇರುವ ಎಲ್ಲ ಕನ್ನಡಿಗರೊಂದಿಗೆ ಅಭಿಯಾನದಲ್ಲಿ ಭಾಗವಹಿಸಲು ವಿನಂತಿಸಿದ್ದಾರೆ. ಅನಿವಾಸಿ ಕನ್ನಡಿಗರ ಈ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಬೆಂಬಲಿಸಿದ್ದು, ಈ ಟ್ವಿಟ್ಟರ್ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರವೇ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಸರ್ಕಾರ ಅನಿವಾಸಿ ಕನ್ನಡಿಗರ ಈ ಕೂಗನ್ನು ಆಲಿಸಬೇಕು. ರಾಜ್ಯ ಸರ್ಕಾರ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನು ತಕ್ಷಣವೇ ನೇಮಿಸಿ, ಸರ್ಕಾರ ಮತ್ತು ಅನಿವಾಸಿ ಕನ್ನಡಿಗರ ನಡುವಿನ ಸಂಬಂಧ-ಸಂವಹನವನ್ನು ಹೆಚ್ಚು ಮಾಡಬೇಕು ಎಂದು ವಿನಂತಿಸಿದ್ದಾರೆ.