Tag: north korea

  • ಕೊರೊನಾಗೆ ಇಡೀ ಜಗತ್ತೇ ತತ್ತರಿಸಿದ್ರೆ, ಈ 2 ದೇಶಗಳಲ್ಲಿ ಮಾತ್ರ ಒಂದೇ ಒಂದು ಕೇಸ್‌ ಇಲ್ಲ

    ಕೊರೊನಾಗೆ ಇಡೀ ಜಗತ್ತೇ ತತ್ತರಿಸಿದ್ರೆ, ಈ 2 ದೇಶಗಳಲ್ಲಿ ಮಾತ್ರ ಒಂದೇ ಒಂದು ಕೇಸ್‌ ಇಲ್ಲ

    ನವದೆಹಲಿ: ಚೀನಾದಲ್ಲಿ (China) ಹುಟ್ಟಿದ ಮಾರಕ ಕೊರೊನಾ (Covid-19) ವೈರಸ್‌ನಿಂದಾಗಿ ಇಡೀ ವಿಶ್ವವೇ ಕಂಗೆಟ್ಟಿದೆ. ಈಗ ಮತ್ತೆ ಕೋವಿಡ್‌ 4ನೇ ಅಲೆ ಭೀತಿ ಜಗತ್ತನ್ನು ಕಾಡುತ್ತಿದೆ. ಆದರೆ ಎರಡು ದೇಶಗಳಲ್ಲಿ ಮಾತ್ರ ಒಂದೇ ಒಂದು ಕೋವಿಡ್‌ ಪ್ರಕರಣ ದೃಢಪಟ್ಟಿಲ್ಲ. ಈ ದೇಶಗಳು ಸದ್ಯ ಕೋವಿಡ್‌ ಮುಕ್ತವಾಗಿವೆ.

    ಹೌದು, ತುರ್ಕಮೆನಿಸ್ತಾನ್‌ (Turkmenistan) ಹಾಗೂ ಉತ್ತರ ಕೊರಿಯಾ (North Korea) ದೇಶಗಳು ಮಾತ್ರ ಕೋವಿಡ್‌ ಮುಕ್ತವಾಗಿವೆ. ಈ ದೇಶಗಳು ಜನರು ಕೊರೊನಾ ವೈರಸ್‌ ಭೀತಿಯಿಲ್ಲದೇ ಆರಾಮಾಗಿ ಓಡಾಡಿಕೊಂಡಿದ್ದಾರೆ. ಈ ದೇಶಗಳ ಆರೋಗ್ಯ ಇಲಾಖೆ ನೀಡಿರುವ ವರದಿ ನೋಡಿ ವಿಶ್ವ ಆರೋಗ್ಯ ಸಂಸ್ಥೆ (WHO) ಕೂಡ ಅಚ್ಚರಿಗೊಂಡಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ಏಕಕಾಲಕ್ಕೆ 120 ಕ್ಷಿಪಣಿಗಳ ದಾಳಿ ನಡೆಸಿದ ರಷ್ಯಾ

    ಡಬ್ಲ್ಯೂಹೆಚ್‌ಒ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಪಟ್ಟಿಯಲ್ಲಿ ತುರ್ಕಮೆನಿಸ್ತಾನ್‌ ಮತ್ತು ಉತ್ತರ ಕೊರಿಯಾ ದೇಶಗಳು ಕೊರೊನಾ ಮುಕ್ತವಾಗಿರುವ ವಿಚಾರ ಬೆಳಕಿಗೆ ಬಂದಿದೆ. WHO ಪಟ್ಟಿಯು ಎಲ್ಲಾ ದೇಶಗಳನ್ನು ಹೊಂದಿದೆ. ಆಯಾ ಸರ್ಕಾರಗಳು ಬಿಡುಗಡೆ ಮಾಡಿರುವ COVID-19 ಪ್ರಕರಣಗಳ ಸಂಖ್ಯೆಯನ್ನು ಪಟ್ಟಿಯು ಹೊಂದಿದೆ.

    ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ತುರ್ಕಮೆನಿಸ್ತಾನ್ ಕಳಪೆ ಸ್ಥಾನದಲ್ಲಿದೆ. ಅಷ್ಟೇ ಅಲ್ಲ, 2019ರ ಜಾಗತಿಕ ಆರೋಗ್ಯ ಭದ್ರತಾ ಸೂಚ್ಯಂಕದಲ್ಲಿ 195 ದೇಶಗಳ ಪೈಕಿ ತುರ್ಕಮೆನಿಸ್ತಾನ್ 101ನೇ ಸ್ಥಾನದಲ್ಲಿದೆ. ಹೀಗಿದ್ದೂ ಈ ದೇಶದಲ್ಲಿ ಸದ್ಯ ಒಂದು ಕೋವಿಡ್‌ ಪ್ರಕರಣ ಕೂಡ ವರದಿಯಾಗಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯ ಭೀಕರ ಹತ್ಯೆ – ಶಿರಚ್ಛೇದಿಸಿ, ಚರ್ಮ ಸುಲಿದ್ರು

    ಉತ್ತರ ಕೊರಿಯಾ ಆಗಸ್ಟ್‌ನಲ್ಲಿ ತನ್ನ ಮೊದಲ ಕೋವಿಡ್ ಪ್ರಕರಣವನ್ನು ದೃಢಪಡಿಸಿತ್ತು. ನಂತರ ಅನಾರೋಗ್ಯಕ್ಕೆ ಒಳಗಾದವರೆಲ್ಲರೂ ಚೇತರಿಸಿಕೊಂಡಿದ್ದಾರೆ. ಅಂದಿನಿಂದ ಈವರೆಗೂ ಈ ದೇಶದಲ್ಲಿ ಕೋವಿಡ್‌ ಪ್ರಕರಣ ವರದಿಯಾಗಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಕೊರಿಯನ್‌ ಡ್ರಾಮಾ ನೋಡಿದ್ದ ಇಬ್ಬರು ಅಪ್ರಾಪ್ತರಿಗೆ ಮರಣದಂಡನೆ

    ಕೊರಿಯನ್‌ ಡ್ರಾಮಾ ನೋಡಿದ್ದ ಇಬ್ಬರು ಅಪ್ರಾಪ್ತರಿಗೆ ಮರಣದಂಡನೆ

    ಪ್ಯೊಂಗ್ಯಾಂಗ್: ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮಾವನ್ನು (South Korean Drama) ವೀಕ್ಷಿಸಿದ ಹಿನ್ನೆಲೆಯಲ್ಲಿ ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ (North Korea) ನಡೆದಿದೆ.

    ಉತ್ತರ ಕೊರಿಯಾದ ರಿಯಾಂಗ್‍ಗಾಂಗ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಈ ಭಾಗವು ಚೀನಾದ ಗಡಿ ಭಾಗದ ಸಮೀಪವಿದೆ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸುಲಭವಾಗಿ ದಕ್ಷಿಣ ಕೊರಿಯಾ ಹಾಗೂ ಅಮೆರಿಕದ ಸಿನಿಮಾಗಳು ಸುಲಭವಾಗಿ ಸಿಗುತ್ತವೆ. ಈ ಹಿನ್ನೆಲೆಯಲ್ಲಿ ಈ ಇಬ್ಬರು ವಿದ್ಯಾರ್ಥಿಗಳಿಗೂ ಕೆ- ಡ್ರಾಮಾ ದೊರೆತಿದಿದ್ದು, ಇದನ್ನು ವೀಕ್ಷಿಸಿದ್ದಾರೆ.

    ತಾವು ವೀಕ್ಷಿಸಿದ ದಕ್ಷಿಣ ಕೊರಿಯಾದ ಕೆ-ಡ್ರಾಮಾವನ್ನು ಈ ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರಿಗೂ ನೀಡಿದ್ದಾರೆ. ಆದರೆ ಉತ್ತರ ಕೋರಿಯಾದಲ್ಲಿ ದಕ್ಷಿಣ ಕೋರಿಯಾದ ಸಿನಿಮಾ, ಡ್ರಾಮಾವನ್ನು ವೀಕ್ಷಿಸುವುದು ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ ಕಿಮ್ ಜಾಂಗ್ ಉನ್ ( Kim Jong Un) ಸರ್ಕಾರವು ಆ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳನ್ನು ಗಲ್ಲಿಗೇರಿಸಿದ್ದಾರೆ ಎಂದು ವರದಿ ತಿಳಿಸಿದೆ. ಇದನ್ನೂ ಓದಿ: ವಾಯುಭಾರ ಕುಸಿತ – ನಾಳೆಯಿಂದ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಶುರು

    crime

    ಕೊರಿಯನ್ ಡ್ರಾಮಾ ವೀಕ್ಷಿಸಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಸಾರ್ವಜನಿಕರ ಮುಂದೆ ದಕ್ಷಿಣ ಕೊರಿಯಾದ ಪೊಲೀಸರು ಕರೆತಂದಿದ್ದಾರೆ. ಅದಾದ ಬಳಿಕ ಅವರಿಗೆ ಮರಣದಂಡನೆ ವಿಧಿಸಿದ್ದಾರೆ. ಅದಾದ ಬಳಿಕ ಏರ್‌ಫೀಲ್ಡ್‌ನಲ್ಲಿ ಅಧಿಕಾರಿಗಳು ಆ ಇಬ್ಬರು ವಿದ್ಯಾರ್ಥಿಗಳನ್ನು ಹೊಡೆದುರುಳಿಸಿದರು ಎಂದು ವರದಿ ತಿಳಿಸಿದೆ. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತದ ಬಗ್ಗೆ ಟ್ವೀಟ್ ಮಾಡಿದ TMC ವಕ್ತಾರ ಅರೆಸ್ಟ್ – ಮೋದಿ ವಿರುದ್ಧ ಮಮತಾ ಗರಂ

    Live Tv
    [brid partner=56869869 player=32851 video=960834 autoplay=true]

  • ಮೊದಲ ಬಾರಿ ಸಾರ್ವಜನಿಕವಾಗಿ ಮಗಳೊಂದಿಗೆ ಕಾಣಿಸಿಕೊಂಡ ಕಿಮ್ ಜಾಂಗ್ ಉನ್

    ಮೊದಲ ಬಾರಿ ಸಾರ್ವಜನಿಕವಾಗಿ ಮಗಳೊಂದಿಗೆ ಕಾಣಿಸಿಕೊಂಡ ಕಿಮ್ ಜಾಂಗ್ ಉನ್

    ಪ್ಯೊಂಗ್ಯಾಗ್: ತನ್ನ ಖಾಸಗಿ ಬದುಕನ್ನು ಯಾವಾಗಲೂ ರಹಸ್ಯವಾಗಿಡಲು ಹೆಸರುವಾಸಿಯಾಗಿರುವ ಉತ್ತರ ಕೊರಿಯಾದ (North Korea) ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ (Kim Jong Un) ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ತನ್ನ ಮಗಳೊಂದಿಗೆ (Daughter) ಕಾಣಿಸಿಕೊಂಡಿದ್ದಾರೆ.

    ರಾಜ್ಯ ಏಜೆನ್ಸಿ ಹಂಚಿಕೊಂಡಿರುವ ಚಿತ್ರಗಳಲ್ಲಿ ಕಿಮ್ ಜಾಂಗ್ ಉನ್ ತಮ್ಮ ಮಗಳೊಂದಿಗೆ ಕೈ ಹಿಡಿದುಕೊಂಡು ಪಕ್ಕದಲ್ಲಿ ನಿಂತಿರುವುದು ಕಾಣಿಸಿಕೊಂಡಿದೆ. ಕೆಲವು ಫೋಟೋಗಳಲ್ಲಿ ಅವರು ಕ್ಷಿಪಣಿ ಉಡಾವಣೆ ಹಾಗೂ ಮಿಲಿಟರಿ ಕಾರ್ಯಗಳನ್ನು ನೋಡುತ್ತಿರುವುದು ಕಂಡುಬಂದಿದೆ.

    ಕಿಮ್ ಜಾಂಗ್ ಉನ್ ತನ್ನ ವೈಯಕ್ತಿಕ ಜೀವನದ ಬಗ್ಗೆ ಹಲವು ವಿಚಾರಗಳು ಇನ್ನು ಕೂಡಾ ರಹಸ್ಯವಾಗಿಯೇ ಇದೆ. 2013ರಲ್ಲಿ ಮಾಜಿ ಬಾಸ್ಕೆಟ್‌ಬಾಲ್ ತಾರೆ ಡೆನ್ನಿಸ್ ರಾಡ್‌ಮನ್ ಬ್ರಿಟಿಷ್ ದಿನಪತ್ರಿಕೆಯೊಂದರಲ್ಲಿ ಕಿಮ್‌ಗೆ ‘ಜು ಎ’ ಹೆಸರಿನ ಮಗುವಿದೆ ಎಂದು ತಿಳಿಸಿದ್ದರು. ರಾಡ್‌ಮನ್ ಕಿಮ್ ಅವರ ಕುಟುಂಬದೊಂದಿಗೆ ಸಮಯ ಕಳೆದಿದ್ದು, ಕಿಮ್ ಅವರನ್ನು ಒಬ್ಬ ಒಳ್ಳೆಯ ತಂದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ನಾಪತ್ತೆಯಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಪತ್ತೆ – ಬಾಲಕಿಯನ್ನು ಕರೆದೊಯ್ದಿದ್ದ ಮಹಿಳೆ

    ಶುಕ್ರವಾರ ಉತ್ತರ ಕೊರಿಯಾದಲ್ಲಿ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯ ವೇಳೆ ಕಿಮ್ ಜಾಂಗ್ ಉನ್ ಅವರೊಂದಿಗೆ ಕಾಣಿಸಿಕೊಂಡ ಬಾಲಕಿಯ ಹೆಸರನ್ನು ರಾಜ್ಯ ಮಾಧ್ಯಮ ಬಹಿರಂಗಪಡಿಸಿಲ್ಲ.

    ಉತ್ತರ ಕೊರಿಯಾ ನಿನ್ನೆ ಪ್ಯೊಂಗ್ಯಾಂಗ್ ಅಂತಾರಾಷ್ಟ್ರೀಯ ಏರ್‌ಫೀಲ್ಡ್‌ನಿಂದ ಖಂಡಾಂತರ ಕ್ಷಿಪಣಿಯನ್ನು ಪರೀಕ್ಷಾರ್ಥವಾಗಿ ಹಾರಿಸಿತು. ಅದು ಜಪಾನಿನ ಸಮುದ್ರದ ಬಳಿ ಬಂದಿಳಿದಿದೆ. ಇದನ್ನೂ ಓದಿ: ಪೀಸ್ ಪೀಸ್ ಪ್ರೇಮಿಯ ಮತ್ತಷ್ಟು ಕ್ರೂರತೆ ಬಹಿರಂಗ- ದೆಹಲಿ ಮಾತ್ರವಲ್ಲ ಡೆಹ್ರಾಡೂನ್‍ನಲ್ಲೂ ದೇಹದ ತುಂಡು ಎಸೆತ

    Live Tv
    [brid partner=56869869 player=32851 video=960834 autoplay=true]

  • ಉತ್ತರ ಕೊರಿಯಾದೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಉಕ್ರೇನ್

    ಉತ್ತರ ಕೊರಿಯಾದೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಉಕ್ರೇನ್

    ಕೀವ್: ಉತ್ತರ ಕೊರಿಯಾದೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುತ್ತಿರುವುದಾಗಿ ಉಕ್ರೇನ್ ಹೇಳಿದೆ.

    ದೇಶದ ಪೂರ್ವದಲ್ಲಿ ರಷ್ಯಾದ ಪರ ಪ್ರತ್ಯೇಕತಾವಾದಿಗಳು ತಮ್ಮ ಸ್ವಘೋಷಿತ ಗಣರಾಜ್ಯಗಳನ್ನು ಗುರುತಿಸಿದೆ ಎಂದು ಹೇಳಿದ ಸ್ಪಲ್ವ ಸಮಯದ ನಂತರ ಉಕ್ರೇನ್ ಈ ನಿರ್ಧಾರಕ್ಕೆ ಬಂದಿದೆ. ಡೊನೆಟ್ಸ್ಕ್ ಪೀಪಲ್ಸ್ ರಿಪಬ್ಲಿಕ್ ಮತ್ತು ಲುಗಾನ್ಸ್ಕ್ ಪೀಪಲ್ಸ್ ರಿಪಬ್ಲಿಕ್‌ ಘೋಷಣೆಗೆ ಉತ್ತರ ಕೊರಿಯಾದ ಮಾನ್ಯತೆ ಕೊಟ್ಟಿತು. ಅಲ್ಲದೇ ಕಳೆದ ತಿಂಗಳು ರಷ್ಯಾದ ಮತ್ತೊಂದು ಮಿತ್ರರಾಷ್ಟ್ರ ಸಿರಿಯಾ ಸಹ ಅದೇ ಕ್ರಮವನ್ನು ತೆಗೆದುಕೊಂಡಿತ್ತು. ಆದರೆ ಉಕ್ರೇನಿಯನ್ ವಿದೇಶಾಂಗ ಸಚಿವಾಲಯವು ಉತ್ತರ ಕೊರಿಯಾದ ಈ ನಿರ್ಧಾರವನ್ನು ಖಂಡಿಸಿದೆ. ಇದನ್ನೂ ಓದಿ:  ಬಿಜೆಪಿ MLAಗೆ ಮಣ್ಣಿನ ಸ್ನಾನ ಮಾಡಿಸಿದ ಮಹಿಳೆಯರ ಗುಂಪು – ಕಾರಣ ಕೇಳಿ ನೆಟ್ಟಿಗರು ಶಾಕ್ 

    ಡೆಮಾಕ್ರಟಿಕ್ ಪೀಪಲ್ಸ್ ರಿಪಬ್ಲಿಕ್ ಆಫ್ ಕೊರಿಯಾದೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸುವುದಾಗಿ ಉಕ್ರೇನ್ ಘೋಷಿಸಿದೆ ಎಂದು ಹೇಳಿಕೆ ತಿಳಿಸಿದೆ.

    ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅವಲಂಬಿಸಿರುವ ದೇಶಗಳನ್ನು ಹೊರತುಪಡಿಸಿ, ರಷ್ಯಾವು ಇನ್ನು ಮುಂದೆ ಜಗತ್ತಿನಲ್ಲಿ ಯಾವುದೇ ಮಿತ್ರರಾಷ್ಟ್ರಗಳನ್ನು ಹೊಂದಿಲ್ಲ ಎಂದು ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಹರಡುವಿಕೆ ನಡುವೆಯೇ ಉತ್ತರ ಕೊರಿಯಾದಲ್ಲಿ ಇನ್ನೊಂದು ರೋಗದ ಭೀತಿ

    ಕೋವಿಡ್ ಹರಡುವಿಕೆ ನಡುವೆಯೇ ಉತ್ತರ ಕೊರಿಯಾದಲ್ಲಿ ಇನ್ನೊಂದು ರೋಗದ ಭೀತಿ

    ಸಿಯೋಲ್: ಉತ್ತರ ಕೊರಿಯಾದಲ್ಲಿ ಏಕಾಏಕಿ ಕೋವಿಡ್ ಪ್ರಕರಣಗಳ ಏರಿಕೆ ನಡುವೆಯೇ ಇನ್ನೊಂದು ಸಾಂಕ್ರಾಮಿಕ ರೋಗವೊಂದು ಸ್ಫೋಟಿಸಿರುವುದಾಗಿ ಗುರುವಾರ ವರದಿಯಾಗಿದೆ. ಈ ಹೊಸ ಕಾಯಿಲೆಯಿಂದ ಬಳಲುತ್ತಿರುವವರಿಗೆ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ತಮ್ಮ ಖಾಸಗಿ ಔಷಧಿಗಳನ್ನು ದಾನಮಾಡಿದ್ದಾರೆ ಎನ್ನಲಾಗಿದೆ.

    ಹೊಸ ರೋಗ ಎಷ್ಟು ಗಂಭೀರವಾಗಿದೆ ಎಂಬುದು ಅಸ್ಪಷ್ಟವಾಗಿದೆ. ಆದರೆ ಹೊರಗಿನವರು ಹೇಳುವ ಪ್ರಕಾರ ಕಿಮ್ ಜಾಂಗ್ ಉನ್ ನಾಯಕನಾಗಿ ತನ್ನ ಮೇಲಿರುವ ಕಳಂಕವನ್ನು ನಿವಾರಿಸಲು ಸಾರ್ವಜನಿಕರ ಕಾಳಜಿ ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮೆಟ್ರೋ ಸಂಚಾರ ರಾತ್ರಿ 1.30ರ ವರೆಗೂ ವಿಸ್ತರಣೆ – ಯಾಕೆ ಗೊತ್ತೇ?

    ಹೊಸ ರೋಗ ಖಚಿತಪಡಿಸಿಕೊಂಡವರಿಗೆ ಕಿಮ್ ಬುಧವಾರ ತನ್ನ ಕುಟುಂಬದವರಿಗೆ ಮೀಸಲುಪಡಿಸಿದ್ದ ಔಷಧಿಗಳನ್ನು ನೀಡಿದ್ದಾರೆ ಎಂದು ಅಧಿಕೃತ ಕೊರಿಯಾದ ಕೇಂದ್ರ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರೊಂದಿಗೆ ಕಿಮ್ ಹಾಗೂ ಅವರ ಪತ್ನಿ ರಿ ಸೋಲ್ ಜು ದಾನಮಾಡುವ ಔಷಧಿಗಳನ್ನು ಪರಿಶೀಲಿಸುತ್ತಿದ್ದ ಫೋಟೋವನ್ನು ರೋಡಾಂಗ್ ಸಿನ್ಮುನ್ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದೆ. ಇದನ್ನೂ ಓದಿ: ಎಟಿಎಂನಲ್ಲಿ ಬಂತು 5 ಪಟ್ಟು ಹೆಚ್ಚು ಕ್ಯಾಶ್! – ಸುದ್ದಿ ಕೇಳುತ್ತಲೇ ಮುಗಿಬಿದ್ರು ಜನ

    ಉತ್ತರ ಕೊರಿಯಾದಲ್ಲಿ ಯಾವ ರೋಗ ಹರಡುತ್ತಿದೆ ಹಾಗೂ ಎಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಕೆಲವು ವೀಕ್ಷಕರ ಪ್ರಕಾರ ಟೈಫಾಯಿಡ್, ಭೇದಿ ಅಥವಾ ಕಾಲಾರಾದಂತಹ ರೋಗ ಇರಬಹುದು ಎನ್ನಲಾಗಿದೆ.

    Live Tv

  • ಫಸ್ಟ್ ಟೈಂ – ಉತ್ತರ ಕೊರಿಯಾದಲ್ಲಿ ವಿದೇಶಾಂಗ ಸಚಿವೆಯಾದ ಮಹಿಳೆ

    ಫಸ್ಟ್ ಟೈಂ – ಉತ್ತರ ಕೊರಿಯಾದಲ್ಲಿ ವಿದೇಶಾಂಗ ಸಚಿವೆಯಾದ ಮಹಿಳೆ

    ಸಿಯೋಲ್: ಉತ್ತರ ಕೊರಿಯಾ ತನ್ನ ಹಿರಿಯ ರಾಜತಾಂತ್ರಿಕ ಚೋ ಸೋನ್-ಹುಯಿ ಅವರನ್ನು ದೇಶದ ಮೊದಲ ಮಹಿಳಾ ವಿದೇಶಾಂಗ ಸಚಿವೆಯಾಗಿ ನೇಮಿಸಿದೆ.

    ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಬಗ್ಗೆ ಆಗಾಗ ಬೆದರಿಕೆ ಒಡ್ಡುತ್ತಲೇ ಇರುವ ಹಾಗೂ ಅಮೆರಿಕದೊಂದಿಗಿನ ಮಾತುಕತೆಗೆ ನಿರ್ಲಕ್ಷ್ಯ ತೋರುತ್ತಿರುವ ಉತ್ತರ ಕೊರಿಯಾ ಈ ನಡುವೆಯೇ ಹೊಸ ಮಹಿಳಾ ವಿದೇಶಾಂಗ ಸಚಿವೆಯನ್ನು ನೇಮಕ ಮಾಡಿದೆ.

    ಈ ಹಿಂದೆ ಉತ್ತರ ಕೊರಿಯಾದ ಉಪ ವಿದೇಶಾಂಗ ಸಚಿವೆಯಾಗಿದ್ದ ಚೋ, ಮಾಜಿ ಮಿಲಿಟರಿ ಅಧಿಕಾರಿ ರಿ ಸನ್ ಗ್ವಾನ್ ಅವರ ಸ್ಥಾನವನ್ನು ತುಂಬಲಿದ್ದಾರೆ. ನಿರರ್ಗಳವಾಗಿ ಇಂಗ್ಲಿಷ್ ಮಾತನಾಡಬಲ್ಲ ಚೋ ವಿದೇಶೀ ನಾಯಕರೊಂದಿಗೆ ಸಂವಹನ ನಡೆಸುವ ಮೂಲಕ ಕಿಮ್ ಜಾಂಗ್ ಉನ್ ಆಡಳಿತಕ್ಕೆ ಬಲ ನೀಡಲಿದ್ದಾರೆ. ಇದನ್ನೂ ಓದಿ: ಎಸ್‍ಡಿಪಿಐ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಪೊಲೀಸರು

    ಚೋ ಈ ಹಿಂದೆಯೂ ಅಮೆರಿಕದೊಂದಿಗೆ ಪರಮಾಣು ಮಾತುಕತೆ ಸಂದರ್ಭ ಹಾಗೂ ಆಗಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಶೃಂಗಸಭೆಯಲ್ಲೂ ಭಾಗವಹಿಸಿದ್ದರು. ಇದನ್ನೂ ಓದಿ: ಜಮ್ಮು- ಕಾಶ್ಮೀರದಲ್ಲಿ ಎನ್‍ಕೌಂಟರ್ – ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಓರ್ವ ಹತ್ಯೆ

    ಉತ್ತರ ಕೊರಿಯಾ ಶಸ್ತ್ರಾಸ್ತ್ರ ನಿರ್ಭಂಧಗಳನ್ನು ತಳ್ಳಿಹಾಕಿ, ಪರೀಕ್ಷೆಗಳನ್ನು ನಡೆಸುತ್ತಿದೆ. ಅದರಲ್ಲೂ 2017ರಲ್ಲಿ ಮೊದಲ ಬಾರಿಗೆ ಖಂಡಾಂತರ ಕ್ಷಿಪಣಿಯನ್ನೂ ಹಾರಿಸಿದೆ. ಕೆಲವು ದಿನಗಳ ಹಿಂದೆ ದಕ್ಷಿಣ ಕೊರಿಯಾ ಹಾಗೂ ಅಮೆರಿಕದ ಅಧಿಕಾರಿಗಳು ಉತ್ತರ ಕೊರಿಯಾ ತನ್ನ 7ನೇ ಪರಮಾಣು ಪರೀಕ್ಷೆಯನ್ನು ನಡೆಸಲು ತಯಾರಿ ನಡೆಸುತ್ತಿದೆ ಎಂದು ಎಚ್ಚರಿಸಿದ್ದಾರೆ.

  • ಪರಮಾಣು ಪರೀಕ್ಷೆ ಆತಂಕದ ನಡುವೆಯೇ ಇನ್ನೊಂದು ಕ್ಷಿಪಣಿ ಪರೀಕ್ಷಿಸಿದ ಉತ್ತರ ಕೊರಿಯಾ

    ಪರಮಾಣು ಪರೀಕ್ಷೆ ಆತಂಕದ ನಡುವೆಯೇ ಇನ್ನೊಂದು ಕ್ಷಿಪಣಿ ಪರೀಕ್ಷಿಸಿದ ಉತ್ತರ ಕೊರಿಯಾ

    ಸಿಯೋಲ್: ಉತ್ತರ ಕೊರಿಯಾ ಪರಮಾಣು ಪರೀಕ್ಷೆ ನಡೆಸಲು ಯೋಜಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯ ನಡುವೆಯೇ ಭಾನುವಾರ ಮತ್ತೊಂದು ಅಪರಿಚಿತ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಪರೀಕ್ಷಿಸಿದೆ ಎಂದು ದಕ್ಷಿಣ ಕೊರಿಯಾದ ಮಿಲಿಟರಿ ತಿಳಿಸಿದೆ.

    ಜಪಾನ್ ಮಾಹಿತಿ ಉಲ್ಲೇಖಿಸಿ, ದಕ್ಷಿಣ ಕೊರಿಯಾ ಅಧಿಕಾರಿಗಳು ಉತ್ತರ ಕೊರಿಯಾ ಅಪರಿಚಿತ ಕ್ಷಿಪಣಿಯನ್ನು ತನ್ನ ಪೂರ್ವ ಸಮುದ್ರದ ಕಡೆ ಹಾರಿಸಿದೆ ಎಂದು ತಿಳಿಸಿದ್ದಾರೆ. ಆದರೆ ಕ್ಷಿಪಣಿಯನ್ನು ಎಲ್ಲಿಂದ ಹಾರಿಸಲಾಯಿತು ಹಾಗೂ ಯಾವ ಗುರಿಗೆ ಹಾರಿಸಲಾಯಿತು ಎಂಬ ಬಗ್ಗೆ ತಿಳಿಸಿಲ್ಲ. ಇದನ್ನೂ ಓದಿ: ಕಂಟೈನರ್ ಡಿಪೋದಲ್ಲಿ ಬೆಂಕಿ: 16 ಸಾವು, 450ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ಉತ್ತರ ಕೊರಿಯಾ ಆರ್ಥಿಕ ನಿರ್ಬಂಧಗಳನ್ನು ಎಸುರಿಸುತ್ತಿದ್ದರೂ ಈ ವರ್ಷ ತನ್ನ ಶಸ್ತ್ರಾಸ್ತ್ರ ನವೀಕರಣ ಯೋಜನೆಗಳನ್ನು ದ್ವಿಗುಣಗೊಳಿಸಿದೆ. ತನ್ನ 7ನೇ ಪರಮಾಣು ಕ್ಷಿಪಣಿ ಪರೀಕ್ಷೆಯನ್ನು ಶೀಘ್ರವೇ ನಡೆಸಲಿದೆ ಎಂದು ಅಮೆರಿಕ ಹಾಗೂ ದಕ್ಷಿಣ ಕೊರಿಯ ಅಧಿಕಾರಿಗಳು ಕಳೆದ 1 ವಾರದಿಂದ ಹೇಳುತ್ತಲೇ ಇದ್ದಾರೆ. ಇದನ್ನೂ ಓದಿ: ಇಮ್ರಾನ್ ಖಾನ್ ಹತ್ಯೆಗೆ ಸಂಚು- ಬಿಗಿ ಭದ್ರತೆ

    ಕಳೆದ ತಿಂಗಳು 3 ಕ್ಷಿಪಣಿಗಳನ್ನು ಉತ್ತರ ಕೊರಿಯಾ ಪರೀಕ್ಷಿಸಿದ್ದು, ಅವುಗಳಲ್ಲಿ ಅತಿದೊಡ್ಡ ಖಂಡಾಂತರ ಕ್ಷಿಪಣಿ ಹ್ವಾಸಾಂಗ್-17 ಕೂಡಾ ಇತ್ತು ಎಂದು ತಿಳಿದುಬಂದಿದೆ.

  • ಪರಮಾಣು ಅಸ್ತ್ರ ಬಳಸಿದರೆ, ಯುಎನ್‌ಗೆ ನಿರ್ಬಂಧ ಕಠಿಣಗೊಳಿಸಲು ಯತ್ನಿಸುತ್ತೇವೆ: ಉತ್ತರ ಕೊರಿಯಾಗೆ ಅಮೆರಿಕ ಎಚ್ಚರಿಕೆ

    ವಾಷಿಂಗ್ಟನ್: ಉತ್ತರ ಕೊರಿಯಾ ಪರಮಾಣು ಅಸ್ತ್ರ ಪ್ರಯೋಗಿಸಿದ್ದಲ್ಲಿ, ವಿಶ್ವಸಂಸ್ಥೆಗೆ ನಿರ್ಬಂಧವನ್ನು ಕಠಿಣಗೊಳಿಸುವಂತೆ ಒತ್ತಾಯಿಸುತ್ತೇವೆ ಎಂದು ಅಮೆರಿಕ ಎಚ್ಚರಿಸಿದೆ.

    ಉತ್ತರ ಕೊರಿಯಾ ವಿನಾಶಕಾರಿ ಪರಮಾಣು ಅಸ್ತ್ರ ಪರೀಕ್ಷೆಗೆ ಮುಂದಾದಲ್ಲಿ, ಅಮೆರಿಕದ ಭದ್ರತ ಮಂಡಳಿ ಹೊಸ ಪ್ರಯತ್ನ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಮೆರಿಕ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್, ಖಂಡಿತವಾಗಿಯೂ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರಾಜ್ಯದ ಉದ್ಯಮಿಗಳಿಗೆ ಐಟಿ ಶಾಕ್

     

    ಮೊದಲನೆಯದಾಗಿ ನಾವು ಈಗಾಗಲೇ ಜಾರಿಗೊಳಿಸಲು ಅಧಿಕಾರ ಹೊಂದಿರುವ ನಿರ್ಬಂಧಗಳನ್ನು ಜಾರಿಗೊಳಿಸಬೇಕಾಗಿದೆ. ಈ ಕೊನೆಯ ನಿರ್ಣಯದಲ್ಲಿ ನಾವು ಪ್ರಯತ್ನಿಸಿದಂತೆ ಹೆಚ್ಚುವರಿ ನಿರ್ಬಂಧಗಳನ್ನು ಜಾರಿಗೊಳಿಸುವಂತೆ ವಿಶ್ವಸಂಸ್ಥೆಯನ್ನು ಒತ್ತಾಯಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಭಾರತ, ಪಾಕಿಸ್ತಾನ ಪರಸ್ಪರ ವ್ಯಾಪಾರದಿಂದ ಬಹಳಷ್ಟು ಲಾಭ ಹೊಂದಿದೆ: ಪಾಕ್ ಪ್ರಧಾನಿ

    ಉತ್ತರ ಕೊರಿಯಾ 2017ರಿಂದಲೇ ತನ್ನ ಪ್ರಮಾಣು ಅಸ್ತ್ರ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ತಿಳಿಸಿದೆ.

    ಉತ್ತರ ಕೊರಿಯಾ ಪರಮಾಣು ಅಸ್ತ್ರ ಪ್ರಯೋಗ ನಡೆಸಿತು ಎಂದಾದಲ್ಲಿ ಅಮೆರಿಕ ಭದ್ರತಾ ಮಂಡಳಿಯಲ್ಲಿ ಕಠಿಣ ನಿರ್ಬಂಧದ ಕುರಿತು ಮತ ಚಲಾಯಿಸುವಂತೆ ಒತ್ತಾಯಿಸಿದೆ ಎಂದು ಅಮೆರಿಕ ಹಾಗೂ ದಕ್ಷಿಣ ಕೊರಿಯಾ ಅಧಿಕಾರಿಗಳು ತಿಳಿಸಿದ್ದಾರೆ.

  • ಉತ್ತರ ಕೊರಿಯಾದಲ್ಲಿ ನಿಯಂತ್ರಣಕ್ಕೆ ಬಂದ ಕೊರೊನಾ

    ಉತ್ತರ ಕೊರಿಯಾದಲ್ಲಿ ನಿಯಂತ್ರಣಕ್ಕೆ ಬಂದ ಕೊರೊನಾ

    ಸಿಯೋಲ್: ಉತ್ತರ ಕೊರಿಯಾದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದ್ದು, ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.

    ಉತ್ತರ ಕೊರಿಯಾದಲ್ಲಿ ಕೊರೊನಾ ಸ್ಫೋಟಿಸಿತ್ತು. ಕೇವಲ ಮೂರು ದಿನಗಳ ಅವಧಿಯಲ್ಲೇ 10 ಲಕ್ಷಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು. ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವುದಕ್ಕೆ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಔಷಧ ವಿತರಿಸಲು ಸಹಾಯ ಮಾಡುವಂತೆ ಸೈನ್ಯಕ್ಕೆ ಆದೇಶಿಸಿದ್ದರು.

    ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತವಾಗಿದ್ದ ಉತ್ತರ ಕೊರಿಯಾವು ಸೋಂಕು ಹರಡುವುದನ್ನು ತಡೆಯಲು ಯಶಸ್ಸು ಸಾಧಿಸಿದೆ. 134,510 ಹೊಸ ಸೋಂಕಿತರು ಸೇರಿಸಿದರೂ ಸೋಮವಾರ ಸಂಜೆಯ ವೇಳೆಗೆ ಯಾವುದೇ ಹೊಸ ಜ್ವರ ಸಾವು ವರದಿಯಾಗಿಲ್ಲ. ಇದನ್ನೂ ಓದಿ: ಪಿಯುಸಿ ಅಡ್ಮಿಷನ್‍ಗೆ ಹೊರಟಿದ್ದ ಪ್ರತಿಭಾವಂತ ವಿದ್ಯಾರ್ಥಿ ಅಪಘಾತದಲ್ಲಿ ಸಾವು

    ಗರಿಷ್ಠ ತುರ್ತು ಸಾಂಕ್ರಾಮಿಕ ತಡೆಗಟ್ಟುವ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದ ಕೆಲವೇ ದಿನಗಳಲ್ಲಿ, ರಾಷ್ಟ್ರವ್ಯಾಪಿ ಸೋಂಕಿತರು ಮತ್ತು ಮರಣ ಪ್ರಮಾಣಗಳು ತೀವ್ರವಾಗಿ ಕಡಿಮೆಯಾಗಿದೆ. ಅಷ್ಟೇ ಅಲ್ಲದೇ ಕೊರೊನಾದಿಂದ ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಏಪ್ರಿಲ್ ಅಂತ್ಯದಿಂದ ಇಂದಿನವರೆಗೆ ಕೊರೊನಾ ಸೋಂಕಿತರ ಒಟ್ಟು ಪ್ರಕರಣಗಳ ಸಂಖ್ಯೆ 2.95 ಮಿಲಿಯನ್‍ಗೆ ಏರಿದ್ದು, ಸಾವಿನ ಸಂಖ್ಯೆ 68 ಆಗಿದೆ. ಇದನ್ನೂ ಓದಿ: ಉತ್ತರ ಕೊರಿಯಾದಲ್ಲಿ ಕೊರೊನಾ ಸ್ಫೋಟ – ಮೂರೇ ದಿನಕ್ಕೆ 12 ಲಕ್ಷ ಮಂದಿಗೆ ಸೋಂಕು

  • ಕಿಮ್ ಜಾಂಗ್ ಇಲ್ ಪುಣ್ಯತಿಥಿ – 11 ದಿನ ನಗೋದನ್ನ ಬ್ಯಾನ್ ಮಾಡಿದ ಉತ್ತರ ಕೊರಿಯಾ ಸರ್ಕಾರ

    ಕಿಮ್ ಜಾಂಗ್ ಇಲ್ ಪುಣ್ಯತಿಥಿ – 11 ದಿನ ನಗೋದನ್ನ ಬ್ಯಾನ್ ಮಾಡಿದ ಉತ್ತರ ಕೊರಿಯಾ ಸರ್ಕಾರ

    ಸಿಯೋಲ್: ಮಾಜಿ ನಾಯಕ ಕಿಮ್ ಜಾಂಗ್ ಇಲ್ 10ನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಉತ್ತರ ಕೊರಿಯಾದಲ್ಲಿ 11 ದಿನಗಳ ಕಾಲ ನಗುವುದನ್ನು ನಿಷೇಧಿಸಲಾಗಿದ್ದು, ಶೋಕಾಚರಣೆ ನಡೆಸುವಂತೆ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸುಗ್ರೀವಾಜ್ಞೆ ಹೊರಡಿಸಿದ್ದಾರೆ.

    ಈ ಕುರಿತಂತೆ ಈಶಾನ್ಯ ಗಡಿ ನಗರವಾದ ಸಿನುಯಿಜುವಿನ ನಾಗರಿಕರೊಬ್ಬರು ರೇಡಿಯೋ ಫ್ರೀ ಏಷ್ಯಾಗೆ ಪ್ರತಿಕ್ರಿಯಿಸಿದ್ದು, ಪ್ರಜೆಗಳು ಮದ್ಯಪಾನ, ದಿನಸಿ, ಶಾಪಿಂಗ್ ಮಾಡಬಾರದು ಮತ್ತು ವಿರಾಮ ಚಟುವಟಿಕೆಯಲ್ಲಿ ತೊಡಗಬಾರದು. ಒಂದು ವೇಳೆ 11 ದಿನಗಳ ಶೋಕಾಚರಣೆಯ ಅವಧಿಯಲ್ಲಿ ಈ ನಿಯಮಗಳನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್

    ಈ ಮುನ್ನ ಶೋಕಾಚರಣೆಯ ವೇಳೆ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಕೆಲವರನ್ನು ಬಂಧಿಸಿ ಅವರನ್ನು ಸೈದ್ಧಾಂತಿಕ ಅಪರಾಧಿಗಳೆಂದು ಪರಿಗಣಿಸಿ ಪೊಲೀಸರು ಕರೆದೊಯ್ದಿದ್ದರು. ಆದರೆ ಮತ್ತೆ ಅವರು ಕಾಣಿಸಿಕೊಂಡಿಲ್ಲ. ಅಲ್ಲದೇ ಶೋಕಾಚರಣೆಯ ಸಮಯದಲ್ಲಿ ಕುಟುಂಬದ ಸದಸ್ಯರೇ ಸತ್ತರೂ ಜೋರಾಗಿ ಅಳುವಂತಿಲ್ಲ. ಶೋಕಾಚರಣೆ ಮುಗಿದ ನಂತರವಷ್ಟೇ ದೇಹವನ್ನು ಹೊರತೆಗೆಯಬೇಕು. ಶೋಕ ದಿನಗಳಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳುವಂತಿಲ್ಲ. ಶೋಕಾಚರಣೆಯ ಅವಧಿಯಲ್ಲಿ ಮನಸ್ಥಿತಿಗೆ ಹಾನಿ ಮಾಡುವವರನ್ನು ಗುರುತಿಸಿ ಶಿಕ್ಷಿಸಲು ಪೊಲೀಸರಿ ಅಧಿಕಾರ ನೀಡಲಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ಲಾಮಾಬಾದ್‍ನಲ್ಲಿ 3 ದಿನ ಮೊಬೈಲ್ ಸೇವೆ ಸ್ಥಗಿತ

    ಕಿಮ್ ಜಾಂಗ್ ಇಲ್ ಅವರ ಪುಣ್ಯತಿಥಿಯ ಪ್ರಯುಕ್ತ ಉತ್ತರ ಕೊರಿಯಾದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇವುಗಳಲ್ಲಿ ಅವರ ಫೋಟೋ ಮತ್ತು ಪೇಟಿಂಗ್ ಅನ್ನು ಸಾರ್ವಜನಿಕರ ಪ್ರದರ್ಶನಕ್ಕೆ ಇಡಲಾಗಿದೆ ಮತ್ತು ಸಂಗೀತ ಕಚೇರಿಯನ್ನು ಏರ್ಪಡಿಸಲಾಗಿದೆ.