Tag: Note Demonetization

  • ಹಳೇ ನೋಟು ಸಂಗ್ರಹಿಸೋ ಖತರ್ನಾಕ್ ಗ್ಯಾಂಗ್ ಬಂಧನ- 1.95 ಕೋಟಿ ರೂ. ವಶ

    ಹಳೇ ನೋಟು ಸಂಗ್ರಹಿಸೋ ಖತರ್ನಾಕ್ ಗ್ಯಾಂಗ್ ಬಂಧನ- 1.95 ಕೋಟಿ ರೂ. ವಶ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 500 ರೂ., 1 ಸಾವಿರ ರೂ. ನೋಟು ಬ್ಯಾನ್ ಮಾಡಿ ಸರಿಸುಮಾರು 2 ವರ್ಷ ಆಗುತ್ತಿದ್ದರೂ ನಗರದಲ್ಲಿ ಹಳೇ ನೋಟು ಬದಲಾವಣೆ ದಂಧೆಗೆ ಮಾತ್ರ ಬ್ರೇಕ್ ಬಿದ್ದಿಲ್ಲ. ಇದರಂತೆ ನಗರದಲ್ಲಿ ನೋಟು ಬದಲಾವಣೆ ಮಾಡುತ್ತಿದ್ದ ಗ್ಯಾಂಗನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

    ರಮೇಶ್, ಸಕಾರಕ್, ಪ್ರಕಾಶ್, ವೆಂಕಟರಾಮ್ ಬಂಧಿತ ಆರೋಪಿಗಳು. ಮಡಿಕೇರಿ ಮೂಲದ ವ್ಯಕ್ತಿಯೊಬ್ಬರಿಂದ ಹಳೇ ನೋಟು ತಂದಿದ್ದ ನಾಲ್ವರು ಇಪ್ಪತ್ತು ಪರ್ಸೆಂಟ್ ಕಮೀಷನ್‍ಗೆ ಹಳೇ ನೋಟು ಕೊಟ್ಟು ಹೊಸ ನೋಟು ಪಡೆಯುತ್ತಿದ್ದರು.

    ನೋಟು ಬದಲಾವಣೆ ದಂಧೆ ಮಾಡುತ್ತಿದ್ದ ಆರೋಪಿಗಳು ಬಿಜೆಪಿ ಸರ್ಕಾರದ ಅವಧಿ ಮುಗಿದ ಬಳಿಕ ಮತ್ತೆ ಹಳೇ ನೋಟು ಚಲಾವಣೆಗೆ ಬರುತ್ತೆ ಎಂದು ಜನರಿಗೆ ಸುಳ್ಳು ಹೇಳಿ ಮೋಸ ಮಾಡುತ್ತಿದ್ದರು. ಈಗಾಗಲೇ ಹಲವು ಮಂದಿಗೆ ಇದೇ ರೀತಿ ಹೇಳಿ ಮೋಸ ಮಾಡಿದ್ದ ಈ ಗ್ಯಾಂಗ್, ಹಳೆ ನೋಟುಗಳನ್ನು ತೆಗೆದುಕೊಳ್ಳಲು ಸಾಕಷ್ಟು ಗಿರಾಕಿಗಳನ್ನು ಹೊಂದಿದ್ದರು ಎನ್ನಲಾಗಿದೆ.

    ನಗರದ ನಂದಿನಿ ಲೇಔಟ್ ಬಸ್ ನಿಲ್ದಾಣದ ಬಳಿ 1,95 ಕೋಟಿ ರೂ. ಹಣ ಬದಲಾವಣೆಗಾಗಿ ಕಾದು ಕುಳಿತಿದ್ದ ವೇಳೆ ಖಚಿತ ಮಾಹಿತಿ ಪಡೆದ ಪೊಲೀಸರು ನಗದು ಸಮೇತ ಬಂಧಿಸಿದ್ದಾರೆ. ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನಂದಿನಿ ಲೇಔಟ್ ಪೊಲೀಸರು ಈ ಗ್ಯಾಂಗಿನ ಪ್ರಮುಖ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೇ ಇಂತಹ ಗ್ಯಾಂಗ್ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನೋಟು ನಿಷೇಧದಿಂದಾಗಿ ಹೆಚ್ಚಿನ ಪ್ರಮಾಣದ ತೆರಿಗೆ ಸಂಗ್ರಹ: ಅರುಣ್ ಜೇಟ್ಲಿ

    ನೋಟು ನಿಷೇಧದಿಂದಾಗಿ ಹೆಚ್ಚಿನ ಪ್ರಮಾಣದ ತೆರಿಗೆ ಸಂಗ್ರಹ: ಅರುಣ್ ಜೇಟ್ಲಿ

    ನವದೆಹಲಿ: ಕೇಂದ್ರ ಸರ್ಕಾರದ ನೋಟು ನಿಷೇಧದಿಂದಾಗಿ ದೇಶದ ಆರ್ಥಿಕತೆ ಸುಗಮವಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಟೀಕಾಕಾರಿಗೆ ಉತ್ತರಿಸಿದ್ದಾರೆ.

    ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಗೊಳಿಸಿರುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ ಸರ್ಕಾರದ ಈ ಕ್ರಮದಿಂದ ಇಂದು ದೇಶದ ಆರ್ಥಿಕತೆ ಸುಗಮವಾಗಿ ನಡೆಯಲು ಸಹಾಯಕವಾಗಿದೆ. ಅಲ್ಲದೇ ದಾಖಲೆಯ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ ಎಂದಿದ್ದಾರೆ.

    ನೋಟು ಅಮಾನ್ಯೀಕರಣದ ಮೊದಲು 2 ವರ್ಷಗಳಲ್ಲಿ ತೆರಿಗೆ ಸಂಗ್ರಹ ಕೇವಲ ಶೇ.6.6 ರಿಂದ ಶೇ.9 ರಷ್ಟಿತ್ತು. ನೋಟು ನಿಷೇಧದ ಬಳಿಕ ಇದರ ಪ್ರಮಾಣ ಶೇ.15 ರಿಂದ ಶೇ.18ಕ್ಕೆ ಗಣನೀಯವಾಗಿ ಏರಿಕೆಯಾಗಿದೆ. 2014 ರಲ್ಲಿ ಆದಾಯ ತೆರಿಗೆ ಪಾವತಿಸುತ್ತಿದ್ದವರ ಸಂಖ್ಯೆ ಕೇವಲ 3.8 ಕೋಟಿಯಷ್ಟಿತ್ತು, ಸದ್ಯ 2017-18ನೇ ಸಾಲಿನಲ್ಲಿ 6.86 ಕೋಟಿ ಗ್ರಾಹಕರು ಆದಾಯ ತೆರಿಗೆಯನ್ನು ಪಾವತಿ ಮಾಡುತ್ತಿದ್ದಾರೆ ಎಂದು ಹೇಳಿದರು.

    ನೋಟು ಅಮಾನ್ಯೀಕರಣದಿಂದಾಗಿ 2016ರ ನವೆಂಬರ್ 8 ರವರೆಗು ಚಲಾವಣೆಯಲ್ಲಿದ್ದ 500 ಹಾಗೂ 1,000 ಮುಖಬೆಲೆಯ 15.41 ಲಕ್ಷ ಕೋಟಿ ರೂಪಾಯಿಗಳ ಪೈಕಿ 15.31 ಲಕ್ಷ ಕೋಟಿ ರೂಪಾಯಿಗಳು ಭಾರತೀಯ ರಿಸರ್ವ್ ಬ್ಯಾಂಕಿಗೆ ಜಮೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 15.3 ಲಕ್ಷ ಕೋಟಿ ರೂ. ಮೌಲ್ಯದ 99.3% ನಿಷೇಧಗೊಂಡಿದ್ದ ನೋಟುಗಳು ವಾಪಸ್: ಆರ್‌ಬಿಐ

    ಟೀಕೆ ಏನು:
    ಪ್ರಧಾನಿ ನರೇಂದ್ರ ಮೋದಿಯವರು 2016 ರ ನವೆಂಬರ್ 8 ರಂದು 500 ಹಾಗೂ 1,000 ಮುಖ ಬೆಲೆಯ ನೋಟುಗಳನ್ನು ಅಮಾನ್ಯೀಕರಣಗೊಳಿಸಿದ್ದರು. ಇದರ ಸಂಬಂಧ ಆರ್‍ಬಿಐ ಇತ್ತೀಚೆಗೆ ನೋಟು ಅಮಾನ್ಯೀಕರಣದಿಂದಾಗಿ ಚಲಾವಣೆಯಲ್ಲಿದ್ದ ಬಹುತೇಕ ಎಲ್ಲಾ 500 ಹಾಗೂ 1,000 ಸಾವಿರ ಮುಖಬೆಲೆಯ ನೋಟುಗಳು ಬ್ಯಾಂಕುಗಳಿಗೆ ಜಮೆಯಾಗಿದೆ ಎಂದು ವರದಿ ನೀಡಿತ್ತು. ಈ ವರದಿಯು ದೇಶಾದ್ಯಂತ ವಾಪಕ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದಲ್ಲದೆ, ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಣಮಾಡುವ ಮೂಲಕ ಏನು ಸಾಧನೆ ಮಾಡಿದೆ ಎಂಬ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv