Tag: NPCI

  • ಬದಲಾಗಲಿದೆ ಯುಪಿಐನ ಕೆಲ ನಿಯಮಗಳು – ಆ.1ರಿಂದ ಹೊಸ ನಿಯಮ ಜಾರಿ

    ಬದಲಾಗಲಿದೆ ಯುಪಿಐನ ಕೆಲ ನಿಯಮಗಳು – ಆ.1ರಿಂದ ಹೊಸ ನಿಯಮ ಜಾರಿ

    – ಕೆಲವು ರಿಚಾರ್ಜ್‌ಗಳಿಗೆ ಸಮಯ ನಿಗದಿ

    ನವದೆಹಲಿ: ಯುಪಿಐ ಪೇಮೆಂಟ್ ಜನರ ಅವಿಭಾಜ್ಯ ಅಂಗವಾಗಿದೆ. ಕಿರಿಯರಿಂದ ವೃದ್ಧರವರೆಗೂ ಯುಪಿಐ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕ್ಯಾಶ್ ಲೆಸ್ ವ್ಯವಹಾರದ ಸಂಖ್ಯೆ ಹೆಚ್ಚಾದ ಹಿನ್ನೆಲೆ, ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಕೆಲ ಪ್ರಮುಖ ಬದಲಾವಣೆಯಾಗಲಿದೆ.

    ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ನಿಯಮಗಳಲ್ಲಿ ಮಹತ್ವದ ಬದಲಾವಣೆಗಳ ಜಾರಿಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಮುಂದಾಗಿದೆ. ಈ ಹೊಸ ಮಾರ್ಗಸೂಚಿಗಳು ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂನಂತಹ ಡಿಜಿಟಲ್ ಪಾವತಿ ಆಪ್‌ಗಳಿಗೆ ಅನ್ವಯವಾಗಲಿವೆ. ಈ ಬದಲಾವಣೆಗಳು ಬಳಕೆದಾರರ ದೈನಂದಿನ ವಹಿವಾಟುಗಳ ಮೇಲೆ ಅಂತಹ ಬದಲಾವಣೆಗಳನ್ನೇನೂ ತರುವುದಿಲ್ಲವಾದರೂ, ಬ್ಯಾಲೆನ್ಸ್ ಚೆಕ್ ಮತ್ತು ಆಟೋ ಡೆಬಿಟ್‌ಗಳಂತಹ ಕೆಲವು ಕಾರ್ಯಗಳಿಗೆ ಮಿತಿಗಳನ್ನು ಹೇರಲಿದೆ. ಹೊಸ ನಿಯಮಗಳ ಪ್ರಕಾರ, ಬಳಕೆದಾರರು ಪ್ರತಿ ಯುಪಿಐ ಅಪ್ಲಿಕೇಶನ್‌ನಲ್ಲಿ ದಿನಕ್ಕೆ ಗರಿಷ್ಠ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ ಇರಲಿದೆ. ಅದಲ್ಲದೇ ನಿಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ದಿನಕ್ಕೆ 25 ಬಾರಿ ಮಾತ್ರ ಪಡೆಯಲು ಅವಕಾಶವಿರಲಿದೆ. ಇದನ್ನೂ ಓದಿ: ರಷ್ಯಾದ ಕರಾವಳಿಯಲ್ಲಿ 8.7 ತೀವ್ರತೆಯ ಭಾರೀ ಭೂಕಂಪ – ಅಮೆರಿಕ, ಜಪಾನ್‌ಗೆ ಸುನಾಮಿ ಎಚ್ಚರಿಕೆ

    ಇನ್ನೂ ಬ್ಯಾಲೆನ್ಸ್ ಚೆಕ್ ಮಾಡುವುದರ ಜೊತೆಗೆ ಓಟಿಟಿ ಸೇರಿದಂತೆ ಮೊಬೈಲ್ ರಿಚಾರ್ಜ್‌ಗಳ ಆಟೋ ಪೇಗೆ ಸಮಯ ನಿಗದಿಯಾಗಿದ್ದು, ಆ ಸಮಯ ಸಂಧರ್ಭದಲ್ಲಿ ಮಾತ್ರ ಪಾವತಿಗೆ ಅವಕಾಶ ಇರಲಿದೆ. ಮೂರು ನಿರ್ದಿಷ್ಟ ಸಮಯದ ಸ್ಲಾಟ್‌ಗಳನ್ನು ನಿಗದಿಪಡಿಸಲಾಗಿದೆ. ಪೀಕ್ ಅವರ್‌ಗಳಲ್ಲಿ ಸರ್ವರ್‌ಗಳ ಮೇಲಿನ ಒತ್ತಡ ಕಡಿಮೆ ಮಾಡಲು ಈ ಪಾವತಿಗಳನ್ನು ಬೆಳಗ್ಗೆ 10 ಗಂಟೆಗೂ ಮುನ್ನ, ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯ ನಡುವೆ, ಮತ್ತು ರಾತ್ರಿ 9.30ರ ನಂತರ ಮಾತ್ರ ಆಟೋ ಪೇ ಪ್ರಕ್ರಿಯೆ ನಡೆಯಲಿದೆ. ಇಷ್ಟೇ ಅಲ್ಲ ವಹಿವಾಟು ಬಾಕಿ ಉಳಿದಿರೋದನ್ನ ಪರಿಶೀಲನೆ ಮಿತಿಯನ್ನು ಮೂರು ಬಾರಿಗೆ ಮಾತ್ರ ಪರಿಶೀಲಿಸಲು ಅವಕಾಶ ನೀಡಲಾಗಿದೆ. ಪ್ರತಿ ಪ್ರಯತ್ನದ ನಡುವೆ ಕಡ್ಡಾಯವಾಗಿ 90 ಸೆಕೆಂಡ್ ಅಂತರ ಇರಲೇಬೇಕು. ಈ ನಿಯಮವು ಬಳಕೆದಾರರಿಗೆ ಕೊಂಚ ಅನೂನುಕೂಲ ಉಂಟು ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್‌ ಧನಕರ್‌ ರಾಜೀನಾಮೆ – ಆಯ್ಕೆ ಪ್ರಕ್ರಿಯೆ ಹೇಗೆ? ಅರ್ಹತೆಗಳೇನು?

    ಒಟ್ಟಾರೆ ಯುಪಿಐ ನಿಯಮಗಳ ಬದಲಾವಣೆ ಬಳಕೆದಾರರ ದೈನಂದಿನ ವಹಿವಾಟಿನ ಮೇಲೆ ಗಂಭೀರ ಪರಿಣಾಮ ಬೀರಲ್ಲ. ಆದರೆ ಸರ್ವರ್ ಮೇಲಿನ ಒತ್ತಡ ಕಡಿಮೆ ಮಾಡಲು ಈ ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: ರಷ್ಯಾ | ಮಿಲಿಟರಿ ಡ್ರೋನ್‌ ತಯಾರಿಕೆಗೆ ಮಕ್ಕಳ ಬಳಕೆ – ಆಟದ ಜೊತೆಗೆ‌ ಸಕತ್ ಟ್ಯಾಲೆಂಟ್!

  • ಗೂಗಲ್ ಪೇ, ಫೋನ್‌ಪೇ & ಪೇಟಿಎಂ ಬಳಕೆದಾರರಿಗೆ ಸೂಚನೆ – ಏ.1ರಿಂದ ಕೆಲವು ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ ಪಾವತಿ ಸಮಸ್ಯೆ

    ನವದೆಹಲಿ: ಜನಪ್ರಿಯ ಯುಪಿಐ ಪಾವತಿ ಆ್ಯಪ್‌ಗಳಾದ ಗೂಗಲ್ ಪೇ, ಫೋನ್‌ಪೇ ಮತ್ತು ಪೇಟಿಎಂ ಬಳಕೆದಾರರಿಗೆ ಒಂದು ಪ್ರಮುಖ ಅಪ್‌ಡೇಟ್ ಬಂದಿದೆ. ಇದೇ ಏ.1ರಿಂದ ಕೆಲವು ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ (UPI) ಪಾವತಿ ಮಾಡುವಾಗ ಸಮಸ್ಯೆ ಎದುರಾಗಬಹುದು ಎಂದು ತಿಳಿದು ಬಂದಿದೆ.

    ಈ ಬಗ್ಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಬ್ಯಾಂಕ್‌ಗಳು ಮತ್ತು ಯುಪಿಐ ಅಪ್ಲಿಕೇಶನ್‌ಗಳಿಗೆ “ನಿಷ್ಕ್ರಿಯ ಮೊಬೈಲ್ ಸಂಖ್ಯೆ”ಗಳನ್ನು ತಮ್ಮ ವ್ಯವಸ್ಥೆಯಿಂದ ತೆಗೆದುಹಾಕಲು ಸೂಚನೆ ನೀಡಿದೆ. ದೀರ್ಘಕಾಲದಿಂದ ಸಕ್ರಿಯವಾಗಿಲ್ಲದ ಮೊಬೈಲ್ ಸಂಖ್ಯೆಗಳನ್ನು ಯುಪಿಐಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆಗಳಿಂದ ತೆಗೆದುಹಾಕಬೇಕು ಎಂದು ಹೇಳಿದೆ.ಇದನ್ನೂ ಓದಿ:ಪ್ರಭಾಸ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌- ‌’ಕಲ್ಕಿ2898 ಎಡಿ’ ಸೀಕ್ವೆಲ್‌ ಬಗ್ಗೆ ಹೊರಬಿತ್ತು ಬಿಗ್‌ ಅಪ್‌ಡೇಟ್

    ಈ ನಿರ್ಧಾರದಿಂದಾಗಿ ಏ.1 ರಿಂದ ಅಂತಹ ಮೊಬೈಲ್ ಸಂಖ್ಯೆಗಳ ಮೂಲಕ ಯುಪಿಐ ಪಾವತಿಗಳು ಸ್ಥಗಿತಗೊಳ್ಳಲಿವೆ. ಸೈಬರ್ ಕ್ರೈಂಗಳ ಹೆಚ್ಚಳ ಮತ್ತು ತಾಂತ್ರಿಕ ದೋಷಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎನ್‌ಪಿಸಿಐ ತಿಳಿಸಿದೆ. ಒಂದು ವೇಳೆ ಟೆಲಿಕಾಂ ಸೇವಾ ಒದಗಿಸುವವರು ಈ ನಿಷ್ಕ್ರಿಯ ಸಂಖ್ಯೆಗಳನ್ನು ಬೇರೆಯವರಿಗೆ ಮರು ಹಂಚಿಕೆ ಮಾಡಿದರೆ, ಅದು ವಂಚನೆಗೆ ಕಾರಣವಾಗಬಹುದು ಎಂದು ಎನ್‌ಪಿಸಿಐ ಎಚ್ಚರಿಸಿದೆ.

    ಹೀಗಾಗಿ ಬಳಕೆದಾರರು ತಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಸಕ್ರಿಯವಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯ. ಯುಪಿಐ ವಹಿವಾಟುಗಳಲ್ಲಿ ಮೊಬೈಲ್ ಸಂಖ್ಯೆಯು ಪ್ರಮುಖ ಗುರುತಿನ ಚಿಹ್ನೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಹಣವು ಸರಿಯಾದ ಫಲಾನುಭವಿಗೆ ತಲುಪುವುದನ್ನು ಖಾತ್ರಿಪಡಿಸುತ್ತದೆ ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿದೆ.

    ಈ ಹೊಸ ನಿಯಮದ ಪ್ರಕಾರ, ಬ್ಯಾಂಕ್‌ಗಳು ಮತ್ತು ಯುಪಿಐ ಅಪ್ಲಿಕೇಶನ್‌ಗಳು ಪ್ರತಿ ವಾರ ನಿಷ್ಕ್ರಿಯ ಸಂಖ್ಯೆಗಳ ಪಟ್ಟಿಯನ್ನು ನವೀಕರಿಸಬೇಕು ಎಂದು ಎನ್‌ಪಿಸಿಐ ಸೂಚಿಸಿದೆ. ಬಳಕೆದಾರರು ತಮ್ಮ ಯುಪಿಐ ಸೇವೆಗಳಲ್ಲಿ ಯಾವುದೇ ಅಡಚಣೆ ಎದುರಾಗದಂತೆ ತಮ್ಮ ಸಕ್ರಿಯ ಮೊಬೈಲ್ ಸಂಖ್ಯೆಯನ್ನು ಖಾತೆಗೆ ಲಿಂಕ್ ಮಾಡಿರುವುದನ್ನು ಖಚಿತಪಡಿಸಿಕೊಳ್ಳಲು ಕೋರಲಾಗಿದೆ.ಇದನ್ನೂ ಓದಿ: ಅಧಿಕಾರಕ್ಕಾಗಿ ಚಮಚಾಗಿರಿ ಮಾಡೋರಿಗೆ ಮಂಡ್ಯ ಜನರ ಬಗ್ಗೆ ಮಾತಾಡೋ ಯೋಗ್ಯತೆ ಇಲ್ಲ: ಡಿಕೆಶಿಗೆ ಅಶೋಕ್ ಟಾಂಗ್

  • FASTag ಬ್ಯಾಲೆನ್ಸ್‌ ಇಲ್ಲದೇ ಇದ್ರೆ ದುಪ್ಪಟ್ಟು ದಂಡ: ಇಂದಿನಿಂದ ಏನೇನು ಬದಲಾವಣೆ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    FASTag ಬ್ಯಾಲೆನ್ಸ್‌ ಇಲ್ಲದೇ ಇದ್ರೆ ದುಪ್ಪಟ್ಟು ದಂಡ: ಇಂದಿನಿಂದ ಏನೇನು ಬದಲಾವಣೆ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    ನವದೆಹಲಿ: ಟೋಲ್‌ (Toll) ಇರುವ ಹೆದ್ದಾರಿಯಲ್ಲಿ ನೀವು ವಾಹನ ಚಾಲನೆ ಮಾಡುತ್ತೀರಾ? ಹಾಗಾದ್ರೆ ಇನ್ನು ಮುಂದೆ ಪ್ರಯಾಣ ನಡೆಸುವ ಒಂದು ಗಂಟೆಯ ಮೊದಲು ಫಾಸ್ಟ್‌ಟ್ಯಾಗ್‌ (FASTag) ಸಕ್ರಿಯವಾಗಿದೆಯೋ ಇಲ್ವೋ ಎಂಬುದನ್ನು ಪರೀಕ್ಷೆ ಮಾಡಿಕೊಳ್ಳಿ.

    ಹೌದು. ಕಡಿಮೆ ಬ್ಯಾಲೆನ್ಸ್‌, ವಿಳಂಬ ಪಾವತಿ, ಕೆವೈಸಿ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಅಥವಾ ಕಪ್ಟುಪಟ್ಟಿಗೆ (Black List) ಸೇರ್ಪಡೆಯಾದ ಫಾಸ್ಟ್‌ಟ್ಯಾಗ್‌ಗಳಿಗೆ ದಂಡ ವಿಧಿಸುವ ಈ ಹೊಸ ನಿಯಮ ಇಂದಿನಿಂದ(ಫೆ.17) ಜಾರಿಗೆ ಬಂದಿದೆ.

    ರಾಷ್ಟ್ರೀಯ ಪಾವತಿ ನಿಗಮ (NPCI) ಟೋಲ್ ಸಂಗ್ರಹಕ್ಕಾಗಿ ಹೊಸ ನಿಯಮಗಳನ್ನು ಪ್ರಕಟಿಸಿದೆ. ಈ ನಿಯಮಗಳನ್ನು ಪಾಲಿಸಲು ವಿಫಲವಾದರೆ ಬಳಕೆದಾರರು ದುಪ್ಪಟ್ಟು ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇದನ್ನೂ ಓದಿ: ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ – ಪತ್ನಿ, ಮಕ್ಕಳಿಗೆ ವಿಷ ನೀಡಿ ನೇಣಿಗೆ ವ್ಯಕ್ತಿ ಶರಣು!

     

    ನಿಯಮ ಏನು ಬದಲಾವಣೆ?
    1. ವಾಹನ ಟೋಲ್‌ ದಾಟುವ 60 ನಿಮಿಷ ಮೊದಲು ಮತ್ತು ಟೋಲ್‌ ದಾಟಿದ ಕನಿಷ್ಠ 10 ನಿಮಿಷ ಫಾಸ್ಟ್‌ಟ್ಯಾಗ್‌ ಸಕ್ರಿಯ ಆಗಿರುವಂತೆ ನೋಡಿಕೊಳ್ಳಬೇಕು.
    2. ಕಡಿಮೆ ಬ್ಯಾಲೆನ್ಸ್ ಅಥವಾ ತಾಂತ್ರಿಕ ಸಮಸ್ಯೆಗಳಿಂದಾಗಿ ಕಪ್ಪುಪಟ್ಟಿಗೆ ಸೇರಿಸಿದ್ದರೆ ಬಳಕೆದಾರರು ತಮ್ಮ ಖಾತೆಯನ್ನು ರೀಚಾರ್ಜ್ ಮಾಡಲು 70 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.
    3. ಟೋಲ್‌ನಲ್ಲೇ ಹಣ ಕಡಿತ ವಿಳಂಬವಾದರೆ ಅದಕ್ಕೆ ಟೋಲ್‌ ಆಪರೇಟರ್‌ ಅವರನ್ನೇ ಹೊಣೆ ಮಾಡಲಾಗುತ್ತದೆ.

    ಪಾವತಿಗಳನ್ನು ಯಾವಾಗ ತಿರಸ್ಕರಿಸಲಾಗುತ್ತದೆ?
    ವಾಹನ ಟೋಲ್‌ ದಾಟುವ 60 ನಿಮಿಷ ಮೊದಲು ಮತ್ತು ಟೋಲ್‌ ದಾಟಿದ ಕನಿಷ್ಠ 10 ನಿಮಿಷ ಫಾಸ್ಟ್‌ಟ್ಯಾಗ್‌ ಸಕ್ರಿಯ ಆಗಿರುವಂತೆ ನೋಡಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ಆ ಫಾಸ್ಟ್‌ಟ್ಯಾಗ್‌ ವಹಿವಾಟು ನಿರಾಕರಿಸಲಾಗುತ್ತದೆ. ಸಕ್ರಿಯ ಆಗಿರದೇ ಇದ್ದರೆ ಟೋಲ್‌ ಸಿಸ್ಟಮ್‌ನಲ್ಲಿ ‘ಎರರ್‌ ಕೋಡ್‌ 176’ ಎಂದು ತೋರಿಸಲಾಗುತ್ತದೆ ಮತ್ತು ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ. ಕಪ್ಪುಪಟ್ಟಿಗೆ ಸೇರಿಸಿದ ಫಾಸ್ಟ್ಯಾಗ್‌ನೊಂದಿಗೆ ಟೋಲ್ ಪ್ರವೇಶಿಸಿದರೆ ವಾಹನ ಮಾಲೀಕರಿಗೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ.

     

    FASTag ಕಪ್ಪುಪಟ್ಟಿಗೆ ಹೇಗೆ ಹೋಗುತ್ತೆ?
    – ಸಾಕಷ್ಟು ಬ್ಯಾಲೆನ್ಸ್ ಇಲ್ಲದಿರುವುದು.
    – ಟೋಲ್ ತೆರಿಗೆ ಪಾವತಿಸದಿರುವುದು.
    – ಪಾವತಿ ವೈಫಲ್ಯಗಳು.
    – ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ (KYC) ವಿವರಗಳನ್ನು ಸರಿಯಾಗಿ ನವೀಕರಣ ಮಾಡದೇ ಇರುವುದು.
    – ವಾಹನದ ಚಾಸಿಸ್ ಸಂಖ್ಯೆ ಅಥವಾ ನೋಂದಣಿ ಸಂಖ್ಯೆಯಲ್ಲಿನ ವ್ಯತ್ಯಾಸ.

    ಹಣ ಇಲ್ಲದೇ ಇದ್ದರೂ ಪ್ರವೇಶ:
    ಒಂದು ವೇಳೆ ಫಾಸ್ಟ್‌ಟ್ಯಾಗ್‌ ಖಾತೆಯಲ್ಲಿ ಅಗತ್ಯ ಹಣ ಇಲ್ಲದೇ ಇದ್ದರೂ ಟೋಲ್‌ಗೇಟ್‌ನಲ್ಲಿ ಪ್ರವೇಶ ನೀಡಲಾಗುತ್ತದೆ. ಟೋಲ್‌ ಪ್ರವೇಶವಾದ ಕೂಡಲೇ ‘ನಿಮ್ಮ ಖಾತೆಯಲ್ಲಿ ಅಗತ್ಯ ಹಣ ಇಲ್ಲ, ಅದನ್ನು ಕೂಡಲೇ ಭರ್ತಿ ಮಾಡಿ’ ಎಂಬ ಮೆಸೇಜ್‌ ಮೊಬೈಲ್‌ಗೆ ಬರುತ್ತದೆ. ಮಸೇಜ್‌ ಬಂದ ಬಂದ 10 ನಿಮಿಷದ ಒಳಗಡೆ ಅಗತ್ಯ ಹಣ ಹಾಕಿಕೊಂಡರೆ ಯಾವುದೇ ದಂಡ ಇರುವುದಿಲ್ಲ. ಇಲ್ಲದೇ ಇದ್ದಲ್ಲಿ ಟೋಲ್‌ ಶುಲ್ಕದ ಎರಡು ಪಟ್ಟು ಹಣ ಕಟ್ಟಬೇಕಾಗುತ್ತದೆ. ನೆಗೆಟಿವ್‌ ಬ್ಯಾಲೆನ್ಸ್‌ ಇದ್ದಲ್ಲಿ ಟೋಲ್ ಶುಲ್ಕವನ್ನು ಭದ್ರತಾ ಠೇವಣಿಯಿಂದ ಕಡಿತಗೊಳಿಸಲಾಗುತ್ತದೆ.

    15 ದಿನದ ಬಳಿಕ ದೂರು:
    ಹೆಚ್ಚುವರಿ ಹಣ ಕಡಿತ ಅಥವಾ ತಪ್ಪು ಶುಲ್ಕಕ್ಕೆ ಸಂಬಂಧಿಸಿ ಸವಾರರು 15 ದಿನಗಳ ಕೂಲಿಂಗ್‌ ಅವಧಿಯ ನಂತರ ಬ್ಯಾಂಕ್‌ಗಳಲ್ಲಿ ದೂರು ಸಲ್ಲಿಸಬಹುದಾಗಿದೆ.

    FASTag ಬಳಕೆದಾರರಿಗೆ ಪ್ರಮುಖ ಸಲಹೆಗಳು
    – FASTag ವ್ಯಾಲೆಟ್‌ನಲ್ಲಿ ಸಾಕಷ್ಟು ಹಣ ಬ್ಯಾಲೆನ್ಸ್ ಇರುವಂತೆ ನೋಡಿಕೊಳ್ಳಿ, ಕನಿಷ್ಠ 100 ರೂ. ಬ್ಯಾಲೆನ್ಸ್ ಅನ್ನು ಖಚಿತಪಡಿಸಿಕೊಳ್ಳಿ.
    – ಬ್ಯಾಂಕಿನಿಂದ ಬರುವ SMS ಎಚ್ಚರಿಕೆಗಳು ಮತ್ತು ಮೆಸೇಜ್‌ಗಳನ್ನು ಗಮನಿಸಿ.
    – MyFASTag ಅಪ್ಲಿಕೇಶನ್ ಮೂಲಕ FASTag ಬ್ಯಾಲೆನ್ಸ್ ಮತ್ತು ಸ್ಥಿತಿಯನ್ನು ಪರಿಶೀಲಿಸಿ.
    – ವಾಹನದ ವಿಂಡ್‌ಶೀಲ್ಡ್‌ನಲ್ಲಿ FASTag ಸ್ಟಿಕ್ಕರ್ ಅನ್ನು ಸರಿಯಾಗಿ ಅಂಟಿಸಿ.
    – ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿ ವಾಹನಕ್ಕೆ ಒಂದೇ FASTag ಮಾತ್ರ ಬಳಸಿ.

     

  • ಗಮನಿಸಿ, ನಾಳೆಯಿಂದ ವಿಶೇಷ ಅಕ್ಷರ/ ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸೆಂಡ್‌ ಆಗಲ್ಲ

    ಗಮನಿಸಿ, ನಾಳೆಯಿಂದ ವಿಶೇಷ ಅಕ್ಷರ/ ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸೆಂಡ್‌ ಆಗಲ್ಲ

    ನವದೆಹಲಿ: ನಾಳೆಯಿಂದ ಯುಪಿಐ (UPI) ಪೇಮೆಂಟ್‌ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷ ಅಕ್ಷರ/ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕಾರ ಆಗುವುದಿಲ್ಲ.

    ನ್ಯಾಷನಲ್‌ ಪೇಮೆಂಟ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (NPCI) ಯುಪಿಐ ಐಡಿಯಲ್ಲಿ ವಿಶೇಷ ಅಕ್ಷರ, ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕರಿಸಲಾಗುವುದಿಲ್ಲ ಎಂದು ಸುತ್ತೋಲೆ ಪ್ರಕಟಿಸಿದೆ.

    ಯುಪಿಐ ವಹಿವಾಟು ಐಡಿಯನ್ನು ಕ್ರಿಯೇಟ್ ಮಾಡುವಾಗ ಕೇವಲ ಅಕ್ಷರ ಮತ್ತು ಸಂಖ್ಯೆಗಳನ್ನು ಮಾತ್ರ ಬಳಸಬೇಕು. ಯುಪಿಐ ಐಡಿಯಲ್ಲಿ @, $, #. ^ ,%, * ಸೇರಿದಂತೆ ಇಂತಹ ಯಾವುದೇ ಚಿಹ್ನೆಗಳನ್ನು ಬಳಸಬಾರದು. ಒಂದು ವೇಳೆ ಈ ರೀತಿ ಚಿಹ್ನೆ ಇರುವ ಯುಪಿಐ ಐಡಿ ಬಳಸಿದ್ದರೆ ಪೇಮೆಂಟ್ ಸ್ವೀಕಾರ ಆಗುವುದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

    ಯುಪಿಐ ವಹಿವಾಟು ಐಡಿಗಳನ್ನು ರಚಿಸಲು ಆಲ್ಫಾನ್ಯೂಮರಿಕ್ ಅಕ್ಷರಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ. ಈ ಸೂಚನೆಯ ಹೊರತಾಗಿಯೂ ಕೆಲವರು ವಿಶೇಷ ಅಕ್ಷರಗಳನ್ನು ಬಳಸುವುದನ್ನು ಮುಂದುವರೆಸಿದ್ದಾರೆ. ಇದು ತಾಂತ್ರಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಹೇಳಿದೆ.


    ಫೆಬ್ರವರಿ 1 ರಿಂದ UPI ಐಡಿಗಳು ಸಂಖ್ಯೆಗಳು (0-9) ಮತ್ತು ವರ್ಣಮಾಲೆಯ (A-Z) ಸೇರಿಸಲು ಮಾತ್ರ ಅನುಮತಿಸಲಾಗುತ್ತದೆ.

    ವ್ಯಾಲಿಡ್‌ ಐಡಿ: abcd123
    ಇನ್‌ವ್ಯಾಲಿಡಿ ಐಡಿ: abc@123#456!

  • ಇನ್ನು ಮುಂದೆ ಕ್ರೆಡಿಟ್‌ ಕಾರ್ಡ್‌ನಂತೆ ಯುಪಿಐ ಬಳಸಬಹುದು – ಇದು ಹೇಗೆ ಕೆಲಸ ಮಾಡುತ್ತೆ?

    ಇನ್ನು ಮುಂದೆ ಕ್ರೆಡಿಟ್‌ ಕಾರ್ಡ್‌ನಂತೆ ಯುಪಿಐ ಬಳಸಬಹುದು – ಇದು ಹೇಗೆ ಕೆಲಸ ಮಾಡುತ್ತೆ?

    ನವದೆಹಲಿ: ಇಲ್ಲಿಯವರೆಗೆ ಡೆಬಿಟ್‌ ಕಾರ್ಡ್‌ (Debit Card) ರೀತಿ ಯುಪಿಐ (UPI) ಕಾರ್ಯನಿರ್ವಹಿಸುತ್ತಿತ್ತು. ಆದರೆ ಇನ್ನು ಮುಂದೆ ಕ್ರೆಡಿಟ್‌ ಕಾರ್ಡ್‌ (Credit Card) ರೀತಿ ಯುಪಿಐ ಕಾರ್ಯನಿರ್ವಹಿಸಲಿದೆ.

    ಹೌದು. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಯುಪಿಐನಲ್ಲಿ ಕ್ರೆಡಿಟ್ ಕಾರ್ಡ್‌ ಫೀಚರ್‌ ಪರಿಚಯಿಸಲು ಸಿದ್ಧವಾಗಿದೆ.

    ಹೇಗೆ ಕೆಲಸ ಮಾಡುತ್ತೆ?
    ಈಗ ಯಪಿಐ ಬಳಸಿ ಯಾವುದಾದರು ವಸ್ತು ಖರೀದಿಸಿದರೆ ಕೂಡಲೇ ಬ್ಯಾಂಕ್‌ ಖಾತೆಯಿಂದ ಹಣ ಕಡಿತವಾಗುತ್ತದೆ. ಆದರೆ ಯುಪಿಐ ಕ್ರೆಡಿಡ್‌ ಕಾರ್ಡ್‌ನಲ್ಲಿ ತಕ್ಷಣ ಬ್ಯಾಂಕ್‌ ಖಾತೆಯಿಂದ ಹಣ ಕಡಿತವಾಗುವುದಿಲ್ಲ. ಹಣ ಬ್ಯಾಂಕ್‌ನಿಂದ ವರ್ಗಾವಣೆಯಾದರೂ  ತಿಂಗಳ ಕೊನೆಯಲ್ಲಿ ಇತ್ಯರ್ಥವಾಗಲಿದೆ. ಇದನ್ನೂ ಓದಿ: 200 ಅಡಿ ಆಳದ ಕಮರಿಗೆ ಉರುಳಿದ ಬಸ್ – ಇಬ್ಬರು ಸಾವು, 25 ಮಂದಿಗೆ ಗಾಯ

    ವಿಶೇಷತೆ ಏನು?
    ಈ ರೀತಿ ಹಣ ವರ್ಗಾವಣೆಯಾದರೆ ಗ್ರಾಹಕರಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ವರದಿಯಾಗಿದೆ. ಆನ್‌ಲೈನ್‌ ಶಾಪಿಂಗ್‌/ ಮಳಿಗೆಗಳು ಈ ಶುಲ್ಕವನ್ನು ಭರಿಸಬೇಕಾಗುತ್ತದೆ. ಇದು ಯುಪಿಐ ಕ್ರೆಡಿಟ್‌ ಕಾರ್ಡ್‌ ವಿಶೇಷತೆ.

    ಈಗ ಹೇಗೆ ನಡೆಯುತ್ತಿದೆ?
    ಬ್ಯಾಂಕ್‌ಗಳು ಗ್ರಾಹಕನ ಖಾತೆಯಲ್ಲಿರುವ ಬ್ಯಾಲೆನ್ಸ್‌ ಪರಿಗಣಿಸಿ ಕ್ರೆಡಿಟ್‌ ಕಾರ್ಡ್‌ ಬಳಕೆಗೆ ಹಣವನ್ನು ನಿಗದಿಪಡಿಸುತ್ತದೆ. ನಂತರ ನಿಗದಿ ಪಡಿಸಿದ ಸಮಯದ ಒಳಗಡೆ ಆ ಹಣವನ್ನು ಬ್ಯಾಂಕಿಗೆ ಗ್ರಾಹಕ ಪಾವತಿಸಬೇಕಾಗುತ್ತದೆ. ಇದನ್ನೂ ಓದಿ: ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!

    ಡೆಬಿಟ್‌ ಕಾರ್ಡ್‌ಗೆ ಆಫರ್‌ ಇಲ್ಲ:
    ಸದ್ಯ ಡೆಬಿಟ್‌ ಕಾರ್ಡ್‌ ಹೊಂದಿವರಿಗೆ ಆಫರ್‌/ ರಿಯಾಯಿತಿಗಳು ಸಿಗುವುದಿಲ್ಲ. ಆದರೆ ಕ್ರೆಡಿಟ್‌ ಕಾರ್ಡ್‌ ಹೊಂದಿವರಿಗೆ ಹಲವು ಆಕರ್ಷಕ ರಿಯಾಯಿತಿಗಳು ಲಭ್ಯ ಇರುತ್ತವೆ. ಯುಪಿಐ ಪೇಮೆಂಟ್ಸ್‌ನಲ್ಲಿ ವಿಶ್ವದಲ್ಲೇ ಭಾರತ ಮೊದಲ ಸ್ಥಾನದಲ್ಲಿದೆ. ಒಂದು ವೇಳೆ ಯುಪಿಐನಲ್ಲಿ ಕ್ರೆಡಿಟ್‌ ಕಾರ್ಡ್‌ ವಿಶೇಷತೆ ಸೇರಿಸಿದಂತೆ ಯುಪಿಐ ವ್ಯವಹಾರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಲಿದೆ.

    ಈಗಾಗಲೇ ಈ ಸೇವೆ ಲಭ್ಯವಿದೆ:
    ಬ್ಯಾಂಕ್‌ಗಳಾದ ಆಕ್ಸಿಸ್‌, ಹೆಚ್‌ಡಿಎಫ್‌ಸು, ಐಸಿಐಸಿಐ, ಇಂಡಿಯನ್‌ ಬ್ಯಾಂಕ್‌, ಪಿಎನ್‌ಬಿ ಬ್ಯಾಂಕ್‌ಗಳು ಈಗಾಗಲೇ ಈ ರೀತಿಯ ವಿಶೇಷತೆಯನ್ನು ನೀಡುತ್ತವೆ. ಯುಪಿಐ ರೂಪೇ ಕ್ರೆಡಿಟ್‌ ಕಾರ್ಡ್‌ ವರ್ಚುಯಲ್‌ ಆಗಿದ್ದು ಇದನ್ನು ಬಳಸಿ ಹಣವನ್ನು ತೆಗೆಯಲು ಸಾಧ್ಯವಿಲ್ಲ.