Tag: NPS

  • ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ದತಿ ಜಾರಿ ಮಾಡ್ತೀವಿ, ಸಮಯ ನಿಗದಿ ಮಾಡಲು ಆಗಲ್ಲ: ಬೋಸರಾಜು

    ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ದತಿ ಜಾರಿ ಮಾಡ್ತೀವಿ, ಸಮಯ ನಿಗದಿ ಮಾಡಲು ಆಗಲ್ಲ: ಬೋಸರಾಜು

    ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಇರುವ ಸರ್ಕಾರಿ ನೌಕರಿಗೆ ಓಪಿಎಸ್ ಜಾರಿ ಮಾಡುತ್ತೇವೆ. ಯಾವಾಗ ಮಾಡುತ್ತೇವೆ ಎಂದು ಸಮಯ ನೀಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರವಾಗಿ ವಿಧಾನ ಪರಿಷತ್‌ನಲ್ಲಿ ಸಭಾ ನಾಯಕ ಬೋಸರಾಜು (NS Boseraju) ಉತ್ತರ ನೀಡಿದ್ದಾರೆ.

    ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡೇ ಪ್ರಶ್ನೆ ಕೇಳಿದರು. ಸರ್ಕಾರಿ ಎನ್‌ಪಿಎಸ್ ನೌಕರರಿಗೆ ಓಪಿಎಸ್ ಯೋಜನೆ ಜಾರಿ ಮಾಡಬೇಕು. ಓಪಿಎಸ್ ಕೊಡೋದಾಗಿ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲೂ ಸೇರಿಸಲಾಗಿತ್ತು. ನಮ್ಮ ಸರ್ಕಾರ ಬಂದಾಗ ಓಪಿಎಸ್ ಜಾರಿ ಮಾಡೋದಾಗಿ ಹೇಳಿದ್ದೆವು. ಸರ್ಕಾರ ಬಂದು 1.5 ವರ್ಷ ಆದರೂ ಯಾವುದೇ ನಿರ್ಧಾರ ಆಗಿಲ್ಲ. ಇದು ಸರಿಯಲ್ಲ. ಸರ್ಕಾರ ಸಮಿತಿ ಮಾಡಿದೆ. ಸಮಿತಿಯಿಂದ ನಮಗೇನು ಲಾಭವಿಲ್ಲ. ಓಪಿಎಸ್‌ಗಾಗಿ ಹೋರಾಟ ನಡೆಯುತ್ತಿದೆ. ಕೂಡಲೇ ಓಪಿಎಸ್ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ

    ಸಿಎಂ ಸಿದ್ದರಾಮಯ್ಯ ಪರವಾಗಿ ಸಚಿವ ಬೋಸರಾಜು ಉತ್ತರ ನೀಡಿ, ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿ 2,86,445. ಸರ್ಕಾರಿ ನೌಕರರು ಒಳಪಟ್ಟಿದ್ದಾರೆ. ಓಪಿಎಸ್ ಜಾರಿ ಮಾಡುವ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಈಗಾಗಲೇ ಸಮಿತಿ ಎರಡು ಸಭೆ ಮಾಡಲಾಗಿದೆ. ಸಮಿತಿ ವರದಿ ಕೊಟ್ಟ ಬಳಿಕ ಪರಿಶೀಲನೆ ಮಾಡಿ ಓಪಿಎಸ್ ಜಾರಿ ಮಾಡೋ ಬಗ್ಗೆ ನಿರ್ಧಾರ ಮಾಡುತ್ತೇವೆ. ಓಪಿಎಸ್ ಕಾಲಮಿತಿ ನೀಡಲು ಆಗಲ್ಲ. ಇಷ್ಟೇ ಸಮಯ ಒಳಗೆ ಕೊಡುತ್ತೇವೆ ಎಂದು ಹೇಳಲು ಆಗಲ್ಲ. ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು. ಇದನ್ನೂ ಓದಿ: ರನ್ಯಾಗೆ ಮಾತ್ರ ಸಿನಿಮಾ ನಂಟಿಲ್ಲ – ಆರೋಪಿ ತರುಣ್‌ಗೆ ಇದೆ ಟಾಲಿವುಡ್ ನಂಟು!

    ಸಚಿವ ಪರಮೇಶ್ವರ್ ಮಾತಾಡಿ, ಪ್ರಣಾಳಿಕೆ ಬರೆಯೋವಾಗ ಚರ್ಚೆ ಮಾಡಿ ಇದನ್ನ ಸೇರಿಸಿದ್ದೇವೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿಲ್ಲ.ನಾವು ಕಮಿಟ್ ಆಗಿದ್ದೇವೆ. ನಾವು ಕೊಟ್ಟ ಭರವಸೆ ಈಡೇರಿಸುತ್ತೇವೆ. ಇಂದು ಆಗಬಹುದು, ನಾಳೆ ಆಗಬಹುದು. ಇದಕ್ಕೆ ಕೋಟ್ಯಂತರ ರುಪಾಯಿ ಖರ್ಚು ಆಗುತ್ತದೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಮಾನಿಟರ್‌ಗೆ ಪ್ರತಿ ಠಾಣೆಯಲ್ಲಿ ವಿಶೇಷ ವಿಭಾಗ ಸ್ಥಾಪನೆ: ಪರಮೇಶ್ವರ್

  • ಯುಪಿಎಸ್‌ನಲ್ಲಿ ʻUʼ ಅಂದ್ರೆ ಮೋದಿ ಸರ್ಕಾರ ಯುಟರ್ನ್‌ – ಏಕೀಕೃತ ಪಿಂಚಣಿ ಯೋಜನೆ ಕುರಿತು ಖರ್ಗೆ ಟೀಕೆ

    ಯುಪಿಎಸ್‌ನಲ್ಲಿ ʻUʼ ಅಂದ್ರೆ ಮೋದಿ ಸರ್ಕಾರ ಯುಟರ್ನ್‌ – ಏಕೀಕೃತ ಪಿಂಚಣಿ ಯೋಜನೆ ಕುರಿತು ಖರ್ಗೆ ಟೀಕೆ

    – 140 ಕೋಟಿ ಭಾರತೀಯರನ್ನು ನಾವು ರಕ್ಷಿಸುತ್ತೇವೆ ಎಂದ ಎಐಸಿಸಿ ನಾಯಕ
    – ಕರ್ನಾಟಕ ಕಾಂಗ್ರೆಸ್‌ನಂತೆ ಆರ್ಥಿಕ ಅವ್ಯವಸ್ಥೆ ಮಾಡಲ್ಲ: ಬಿಜೆಪಿ ವಕ್ತಾರ ಕಿಡಿ

    ನವದೆಹಲಿ: ಎನ್‌ಡಿಎ ನೇತೃತ್ವದ ಕೇಂದ್ರ ಸಂಪುಟ ಏಕೀಕೃತ ಪಿಂಚಣಿ ಯೋಜನೆಗೆ (UPS) ಅನುಮೋದನೆ ನೀಡಿದ ಮರುದಿನವೇ ಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು, ಮೋದಿ ಸರ್ಕಾರವನ್ನು ʻಯು-ಟರ್ನ್‌ ಸರ್ಕಾರʼ ಎಂದು ವಾಗ್ದಾಳಿ ನಡೆಸಿದ್ದಾರೆ.

    ಈ ಬಗ್ಗೆ ವರದಿಯೊಂದನ್ನು ಉಲ್ಲೇಖಿಸಿ ಎಕ್ಸ್‌ ಖಾತೆಯಲ್ಲಿ ಟೀಕಿಸಿರುವ ಖರ್ಗೆ ಅವರು, ʻಯುಪಿಎಸ್‌ʼನಲ್ಲಿ ʻಯುʼ ಅಂದ್ರೆ ಮೋದಿ ಸರ್ಕಾರದ ಯು-ಟರ್ನ್‌ಗಳು. ಮೋದಿ ಸರ್ಕಾರ (Modi government) ಯು-ಟರ್ನ್‌ ಸರ್ಕಾರ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಜೂನ್ 4ರ ನಂತರ, ಪ್ರಧಾನ ಮಂತ್ರಿಯ ಅಧಿಕಾರದ ದುರಹಂಕಾರದ ಮುಂದೆ ಜನರ ಶಕ್ತಿ ಮೇಲುಗೈ ಸಾಧಿಸಿದೆ. ಜಂಟಿ ಸಂಸದೀಯ ಸಮಿತಿಗೆ ವಕ್ಫ್ ಮಸೂದೆಯನ್ನು ಕಳುಹಿಸುವುದು, ಪ್ರಸಾರ ಮಸೂದೆಯ ಹಿಂಪಡೆಯುವಿಕೆ ದೀರ್ಘಾವಧಿಯ ಬಂಡವಾಳ ಗಳಿಕೆ/ಸೂಚ್ಯಂಕಕ್ಕೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ರೋಲ್‌ಬ್ಯಾಕ್, ಜಂಟಿ ಸಂಸದೀಯ ಸಮಿತಿಗೆ ವಕ್ಫ್ ಮಸೂದೆಯನ್ನು ಕಳುಹಿಸುವುದು, ಪ್ರಸಾರ ಮಸೂದೆಯ ರೋಲ್‌ಬ್ಯಾಕ್, ಲ್ಯಾಟರಲ್ ಎಂಟ್ರಿಯ ರೋಲ್‌ಬ್ಯಾಕ್ ಮುಂತಾದವು ಮೋದಿ ಸರ್ಕಾರದ ಯು-ಟರ್ನ್‌ಗಳುʼ ಎಂದು ವಾಗ್ದಾಳಿ ನಡೆಸಿದ್ದಾರೆ.

    ನಾವು ಹೊಣೆಗಾರಿಕೆಯನ್ನು ಖಾತ್ರಿಪಡಿಸಿಕೊಳ್ಳುತ್ತೇವೆ, ಜೊತೆಗೆ ನಿರಂಕುಶ ಸರ್ಕಾರದಿಂದ 140 ಕೋಟಿ ಭಾರತೀಯರನ್ನು ರಕ್ಷಿಸುತ್ತೇವೆ ಎಂದು ಖರ್ಗೆ ಅಭಯ ನೀಡಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್‌ನಲ್ಲೇ ಬಾಲಕಿ ಮೇಲೆ ಗ್ಯಾಂಗ್‌ರೇಪ್ – ಐವರ ವಿರುದ್ಧ ಪೋಕ್ಸೋ ಕೇಸ್!

    ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ತುಹಿನ್ ಸಿನ್ಹಾ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳು ಸೇರಿದಂತೆ ಕಾಂಗ್ರೆಸ್ ಎಲ್ಲೆಲ್ಲಿ ಆಡಳಿತ ನಡೆಸುತ್ತದೆಯೋ ಅಲ್ಲಿ ಅವರು ಯಾವಾಗಲೂ ಆರ್ಥಿಕ ಅವ್ಯವಸ್ಥೆ ಮಾಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಗೋಲ್ಡನ್ ಟೆಂಪಲ್‍ನಲ್ಲಿ ಕೇಜ್ರಿವಾಲ್ ಬಿಡುಗಡೆಗೆ ಮನೀಶ್ ಸಿಸೋಡಿಯಾ ಪ್ರಾರ್ಥನೆ

    ತೆಲಂಗಾಣ ಮತ್ತು ಕರ್ನಾಟಕದಲ್ಲಿ ಅಧಿಕಾರದಲ್ಲಿರುವವರು ಆತುರದ ರೀತಿಯಲ್ಲಿ ಯೋಚಿಸುತ್ತಾರೆ. ಅದರಿಂದ ಆರ್ಥಿಕ ಅವ್ಯವಸ್ಥೆ ಉಂಟಾಗುತ್ತದೆ. ಆದ್ರೆ ನಮ್ಮ ಸರ್ಕಾರ ಕಾಂಗ್ರೆಸ್‌ಗಿಂತ ಭಿನ್ನವಾಗಿ ಯೋಚಿಸುತ್ತದೆ. ಮೊದಲು ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕೇಂದ್ರ ಸರ್ಕಾರ ಕಾಳಜಿ ವಹಿಸುತ್ತದೆ. ಹೊಸ ಯುಪಿಎಸ್ 1 ವರ್ಷದಿಂದ ಕೆಲಸ ಮಾಡುತ್ತಿದೆ. ಹಣಕಾಸು ಕಾರ್ಯದರ್ಶಿ ಟಿ.ವಿ ಸೋಮನಾಥನ್ ಅಂತಿಮಗೊಳಿಸುವ ಮೊಲದಲು 100ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ (PM Modi) ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಯುಪಿಎಸ್, ಸರ್ಕಾರಿ ನೌಕರರಿಗೆ ಖಚಿತವಾದ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಖಚಿತವಾದ ಕನಿಷ್ಠ ಪಿಂಚಣಿ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಇದನ್ನೂ ಓದಿ: ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ

    ಏಕೀಕೃತ ಪಿಂಚಣಿ ಯೋಜನೆಯ ಉಪಯೋಗ ಏನು?
    ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ.

    1. ಖಚಿತವಾದ ಪಿಂಚಣಿ: ಕನಿಷ್ಠ 25 ವರ್ಷಗಳ ಸೇವೆ ಪೂರ್ಣಗೊಳಿಸುವ ಸರ್ಕಾರಿ ನೌಕರರಿಗೆ ನಿವೃತ್ತಿಯ ಮೊದಲು ಕಳೆದ 12 ತಿಂಗಳ ಸರಾಸರಿ ಮೂಲ ವೇತನದ 50% ನಷ್ಟು ಈ ಯೋಜನೆಯು ಖಾತರಿಪಡಿಸುತ್ತದೆ. ಕನಿಷ್ಠ 10 ವರ್ಷಗಳ ಸೇವೆಯವರೆಗಿನ ಕಡಿಮೆ ಸೇವಾ ಅವಧಿಗೆ ಇದು ಅನುಪಾತದಲ್ಲಿರುತ್ತದೆ.

    2. ಖಚಿತವಾದ (ಸ್ಥಿರ) ಕುಟುಂಬ ಪಿಂಚಣಿ: ಉದ್ಯೋಗಿಯ ಮರಣದ ಸಂದರ್ಭದಲ್ಲಿ ನೀಡಲಾಗುವ ಪಿಂಚಣಿ ವ್ಯವಸ್ಥೆಯಾಗಿದೆ. ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತದಷ್ಟು ಪಡೆಯಬಹುದಾಗಿದೆ.

    3. ಖಚಿತವಾದ ಕನಿಷ್ಠ ಪಿಂಚಣಿ: ಕನಿಷ್ಠ 10 ವರ್ಷಗಳ ಸೇವೆ ಸಲ್ಲಿದ ಸರ್ಕಾರಿ ನೌಕರರಿಗೆ ನಿವೃತ್ತಿಯ ನಂತರ ತಿಂಗಳಿಗೆ 10,000 ರೂ.ನಂತೆ ಖಚಿತವಾದ ಕನಿಷ್ಠ ಪಿಂಚಣಿ ಒದಗಿಸುತ್ತದೆ
    ಭರವಸೆ ನೀಡುತ್ತದೆ.

    ಪ್ರಸ್ತುತ ಪಿಂಚಣಿ ಯೋಜನೆಯ ಪ್ರಕಾರ, ನೌಕರರು ಶೇ.10 ರಷ್ಟು ಕೊಡುಗೆ ನೀಡಿದರೆ, ಕೇಂದ್ರ ಸರ್ಕಾರವು ಶೇ.14 ರಷ್ಟು ಕೊಡುಗೆ ನೀಡುತ್ತದೆ, ಇದನ್ನು ಯುಪಿಎಸ್‌ನೊಂದಿಗೆ ಶೇ.18ಕ್ಕೆ ಹೆಚ್ಚಿಸಲಾಗುತ್ತದೆ.

  • ಕೇಂದ್ರ ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ ಗಿಫ್ಟ್ – 23 ಲಕ್ಷ ಉದ್ಯೋಗಿಗಳಿಗೆ ಬಂಪರ್‌!

    ಕೇಂದ್ರ ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ ಗಿಫ್ಟ್ – 23 ಲಕ್ಷ ಉದ್ಯೋಗಿಗಳಿಗೆ ಬಂಪರ್‌!

    – ಕೇಂದ್ರಕ್ಕೆ ಅಂದಾಜು 10,579 ಕೋಟಿ ರೂ. ಹೊರೆ
    – ಏಕೀಕೃತ ಪಿಂಚಣಿ ಯೋಜನೆಯ ಉಪಯೋಗ ಏನು?

    ನವದೆಹಲಿ: ಕೇಂದ್ರ ಸಚಿವ ಸಂಪುಟ ಶನಿವಾರ (ಆ.24) ಮುರು ನಿರ್ಣಯ ಕೈಗೊಂಡಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ಸಾಮಾಜಿಕ ಭದ್ರತೆಗಾಗಿ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ.

    ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಯುಪಿಎಸ್, ಸರ್ಕಾರಿ ನೌಕರರಿಗೆ ಖಚಿತವಾದ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಖಚಿತವಾದ ಕನಿಷ್ಠ ಪಿಂಚಣಿ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

    ವೇತನದ ಶೇ.50ರಷ್ಟನ್ನ ಪಿಂಚಣಿ ರೂಪದಲ್ಲಿ ನೀಡಲು ಸಂಪುಟ ನಿರ್ಧರಿಸಿತು. ಇದರಿಂದ 23 ಲಕ್ಷ ಉದ್ಯೋಗಿಗಳಿಗೆ ಅನುಕೂಲ ಆಗಲಿದೆ. ಇದಕ್ಕಾಗಿ ಕೇಂದ್ರಕ್ಕೆ ಹೆಚ್ಚುವರಿಯಾಗಿ 10,579 ಕೋಟಿ ರೂ. ಹೊರೆಯಾಗುತ್ತದೆ ಎಂದು ಅಂದಾಜಿಸಲಾಗಿದೆ. 2025ರ ಏಪ್ರಿಲ್‌ 1ರಿಂದ ಈ ಯೋಜನೆ ಜಾರಿಗೆ ಬರಲಿದೆ. ಅಲ್ಲದೇ ಮುಂಬರುವ ಉದ್ಯೋಗಿಗಳು ಎನ್‌ಪಿಎಸ್‌ (ಹೊಸ ಪೆನ್ಶನ್‌ ಯೋಜನೆ) ಮತ್ತು ಯುಪಿಎಸ್‌ (ಏಕೀಕೃತ ಪಿಂಚಣಿ ಯೋಜನೆ) ಆಯ್ಕೆ ಮಾಡುವ ಅವಕಾಶವನ್ನು ಹೊಂದಿರುತ್ತಾರೆ ಎಂದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

    ಇದೇ ವೇಳೆ, ಬಯೋ ಇ-3 ವಿಧಾನದ ಜೊತೆಗೆ ವಿಜ್ಞಾನಧಾರಾ ಯೋಜನೆಗೆ ತರಲು ಸಂಪುಟ ಒಪ್ಪಿಗೆ ಸೂಚಿಸಿದೆ. 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಕಲ್ಪನೆಗೂ ಅನುಮೋದನೆ ನೀಡಿದೆ.

    ಏಕೀಕೃತ ಪಿಂಚಣಿ ಯೋಜನೆಯ ಉಪಯೋಗ ಏನು?
    ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ.

    1. ಖಚಿತವಾದ ಪಿಂಚಣಿ: ಕನಿಷ್ಠ 25 ವರ್ಷಗಳ ಸೇವೆ ಪೂರ್ಣಗೊಳಿಸುವ ಸರ್ಕಾರಿ ನೌಕರರಿಗೆ ನಿವೃತ್ತಿಯ ಮೊದಲು ಕಳೆದ 12 ತಿಂಗಳ ಸರಾಸರಿ ಮೂಲ ವೇತನದ 50% ನಷ್ಟು ಈ ಯೋಜನೆಯು ಖಾತರಿಪಡಿಸುತ್ತದೆ. ಕನಿಷ್ಠ 10 ವರ್ಷಗಳ ಸೇವೆಯವರೆಗಿನ ಕಡಿಮೆ ಸೇವಾ ಅವಧಿಗೆ ಇದು ಅನುಪಾತದಲ್ಲಿರುತ್ತದೆ.

    2. ಖಚಿತವಾದ (ಸ್ಥಿರ) ಕುಟುಂಬ ಪಿಂಚಣಿ: ಉದ್ಯೋಗಿಯ ಮರಣದ ಸಂದರ್ಭದಲ್ಲಿ ನೀಡಲಾಗುವ ಪಿಂಚಣಿ ವ್ಯವಸ್ಥೆಯಾಗಿದೆ. ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತದಷ್ಟು ಪಡೆಯಬಹುದಾಗಿದೆ.

    3. ಖಚಿತವಾದ ಕನಿಷ್ಠ ಪಿಂಚಣಿ: ಕನಿಷ್ಠ 10 ವರ್ಷಗಳ ಸೇವೆ ಸಲ್ಲಿದ ಸರ್ಕಾರಿ ನೌಕರರಿಗೆ ನಿವೃತ್ತಿಯ ನಂತರ ತಿಂಗಳಿಗೆ 10,000 ರೂ.ನಂತೆ ಖಚಿತವಾದ ಕನಿಷ್ಠ ಪಿಂಚಣಿ ಒದಗಿಸುತ್ತದೆ
    ಭರವಸೆ ನೀಡುತ್ತದೆ.

    ಪ್ರಸ್ತುತ ಪಿಂಚಣಿ ಯೋಜನೆಯ ಪ್ರಕಾರ, ನೌಕರರು ಶೇ.10 ರಷ್ಟು ಕೊಡುಗೆ ನೀಡಿದರೆ, ಕೇಂದ್ರ ಸರ್ಕಾರವು ಶೇ.14 ರಷ್ಟು ಕೊಡುಗೆ ನೀಡುತ್ತದೆ, ಇದನ್ನು ಯುಪಿಎಸ್‌ನೊಂದಿಗೆ ಶೇ.18ಕ್ಕೆ ಹೆಚ್ಚಿಸಲಾಗುತ್ತದೆ.

  • 2006 ರ ನಂತರ ನೇಮಕವಾದ 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ

    2006 ರ ನಂತರ ನೇಮಕವಾದ 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ

    -ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಬೆಂಗಳೂರು: 2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕವಾದ 13,000 ಸರ್ಕಾರಿ ನೌಕರರರಿಗೆ (Government Employees) ಹಳೆ ಪಿಂಚಣಿ ವ್ಯವಸ್ಥೆ (Old Pension Scheme) ಜಾರಿ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ಚುನಾವಣೆ (Election) ವೇಳೆ ಪ್ರಣಾಳಿಕೆಯಲ್ಲಿ ಎನ್‌ಪಿಎಸ್ (NPS) ರದ್ದು ಮಾಡಿ ಓಪಿಎಸ್ (OPS) ಜಾರಿ ಮಾಡುವುದಾಗಿ ಕಾಂಗ್ರೆಸ್ (Congress) ಭರವಸೆ ನೀಡಿತ್ತು. ಓಪಿಎಸ್‌ಗಾಗಿ ನಡೆದ ಹೋರಾಟದ ವೇಳೆ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕರು ಓಪಿಎಸ್ ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು.

    2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಾತಿಗೊಂಡ 13,000 ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಓಪಿಎಸ್ ಜಾರಿಗೆ ಸರ್ಕಾರ ಷರತ್ತು ವಿಧಿಸಿದ್ದು, ಷರತ್ತಿಗೆ ಒಳಪಟ್ಟಿವರಿಗೆ ಮಾತ್ರ ಓಪಿಎಸ್ ಅನ್ವಯ ಎಂದು ಆದೇಶ ನೀಡಿದೆ.

    ಸರ್ಕಾರದ ಷರತ್ತುಗಳೇನು?
    * 01-04-2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ 30.06.2024 ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
    * ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
    * ಮೇಲಿನ 1ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
    * ನೌಕರರ ಆಯ್ಕೆಗನುಸಾರ ಅವರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31-7-2024ರೊಳಗೆ ಅಂತಹ ನೌಕರರನ್ನು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೂಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.
    * ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ 31-8-2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.
    * ದಿನಾಂಕ 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ನ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ 30-06-2014ರೊಳಗೆ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅದನ್ನ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು.

  • ಇನ್ನು 15 ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ರಿಲೀಸ್ – ಜನಾರ್ದನ ರೆಡ್ಡಿ

    ಇನ್ನು 15 ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ರಿಲೀಸ್ – ಜನಾರ್ದನ ರೆಡ್ಡಿ

    ಬೆಂಗಳೂರು: ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ಇನ್ನೂ 15 ದಿನಗಳಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRP)  ಸಂಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ಹೇಳಿದ್ದಾರೆ.

    ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ (Freedom Park) ಎನ್‌ಪಿಎಸ್ (ನೂತನ ಪಿಂಚಣಿ ಯೋಜನೆ) ವಿರೋಧಿಸಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    ಎಲ್ಲರೂ ಹೊಸ ವರ್ಷದ ಸಂಭ್ರಮ ಮಾಡುತ್ತಿದ್ದರೆ, ನೀವು ನಿಮ್ಮ ಕುಟುಂಬದ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ ಎನ್ನುವುದನ್ನು ತಿಳಿದೇ ನಾನಿಲ್ಲಿಗೆ ಬಂದಿದ್ದೇನೆ. ಸರ್ಕಾರಿ ನೌಕರರ ಪರಿಸ್ಥಿತಿ ನನಗೂ ಗೊತ್ತು. ನನ್ನ ತಂದೆ ಕೂಡ ಪೊಲೀಸ್ ಇಲಾಖೆಯಲ್ಲಿದ್ದು ನಿವೃತ್ತರಾಗಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ ದಾಖಲು- ಹರಿಯಾಣದ ಕ್ರೀಡಾ ಸಚಿವ ಸ್ಥಾನಕ್ಕೆ ಸಂದೀಪ್ ಸಿಂಗ್ ರಾಜೀನಾಮೆ

    ರಾಜ್ಯ ಸರ್ಕಾರ (Government of Karnataka) ಮನಸ್ಸು ಮಾಡಿದ್ರೆ ಯಾವುದೂ ದೊಡ್ಡ ವಿಚಾರ ಅಲ್ಲ. ತಮ್ಮೆಲ್ಲರ ಆಶೀರ್ವಾದದಿಂದ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ನಿಮ್ಮ ಹಾಗೆಯೇ ನಾನು ಕೂಡ ಹಿಂದೆ ಸರಿಯಲ್ಲ. ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ಹೆಜ್ಜೆ ಇಟ್ಟಿದ್ದೇನೆ. 15 ದಿನದಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ. ಪ್ರಣಾಳಿಕೆಯಲ್ಲಿ ನಿವೃತ್ತ ನೌಕರರ ವಿಚಾರವನ್ನೂ ಇಟ್ಟಿದ್ದೇನೆ. ಸರ್ಕಾರ ನಿಮ್ಮ ಹೋರಾಟಕ್ಕೆ ತಲೆ ಬಾಗಲೇಬೇಕು. ಯಾವುದೇ ಕಾರಣಕ್ಕೂ ಹಿಂದೆ ಸರಿಯಬೇಡಿ ಎಂದು ಕರೆ ನೀಡಿದ್ದಾರೆ.

    ರಾಜ್ಯ ಸರ್ಕಾರಿ ಎನ್‌ಪಿಎಸ್ (NPS) ನೌಕರರ ಸಂಘದ ಪ್ರತಿಭಟನೆ 14ನೇ ದಿನಕ್ಕೆ ಕಾಲಿಟ್ಟಿದೆ. ಹೊಸ ಪಿಂಚಿಣಿ ಯೋಜನೆ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]