Tag: NR pura

  • ಚಿಕ್ಕಮಗಳೂರು | ಒಂದೂವರೆ ವರ್ಷದಿಂದ ರೈತರಿಗೆ ಕಾಟ ಕೊಡ್ತಿದ್ದ ಪುಂಡಾನೆ ಸೆರೆ

    ಚಿಕ್ಕಮಗಳೂರು | ಒಂದೂವರೆ ವರ್ಷದಿಂದ ರೈತರಿಗೆ ಕಾಟ ಕೊಡ್ತಿದ್ದ ಪುಂಡಾನೆ ಸೆರೆ

    ಚಿಕ್ಕಮಗಳೂರು: ಜಿಲ್ಲೆಯ ಎನ್‍ಆರ್‌ಪುರ (NR Pura) ಸುತ್ತಮುತ್ತ ಕಳೆದ ಒಂದೂವರೆ ವರ್ಷದಿಂದ ರೈತರಿಗೆ ಹಾಗೂ ಕಾಡಂಚಿನ ಗ್ರಾಮದ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆಯನ್ನು (Elephant) ಅರಣ್ಯ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.

    ಪುಂಡಾನೆ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕಳೆದ ಒಂದೂವರೆ ವರ್ಷದಿಂದ ಉಪಟಳ ನೀಡುತ್ತಿತ್ತು. ವಗಡೆ, ಕಾನೂರು, ಬಾಳೆಹಿತ್ತಲು, ಸಾತ್ವಾನಿ, ಗುಂಡ್ವಾನಿ, ಗುಬ್ಬಿಗಾ, ಹೊರಬೈಲು, ನೇರ್ಲೆ, ಗೋಣಿಕೊಪ್ಪ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಈ ಸಲಗವು ನಿರಂತರವಾಗಿ ಬೆಳೆ ಹಾನಿ ಮಾಡುತ್ತಿತ್ತು. ಇದರಿಂದ ರೈತರ ತೋಟಗಳಿಗೆ ಅಪಾರ ನಷ್ಟ ಉಂಟಾಗಿತ್ತು. ಇದನ್ನೂ ಓದಿ: ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು

    ಗ್ರಾಮಸ್ಥರು ಅರಣ್ಯ ಇಲಾಖೆ ಹಾಗೂ ಶೃಂಗೇರಿ ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಸ್ಥಳೀಯರ ಒತ್ತಾಯದ ಮೇರೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆನೆ ಸೆರೆ ಹಿಡಿಯುವಂತೆ ಆದೇಶಿಸಿದ್ದರು. ಹಾಗಾಗಿ ಸಕ್ರೆಬೈಲಿನಿಂದ ಮೂರು ಕುಮ್ಕಿ ಆನೆಗಳು ಹಾಗೂ ಕುಶಾಲನಗರದ ದುಬಾರೆಯಿಂದ ಮೂರು ಆನೆಗಳು ಸೇರಿ ಒಟ್ಟು 6 ಕುಮ್ಕಿ ಆನೆಗಳು ಕಾರ್ಯಾಚರಣೆಯಗೆ ಆಗಮಿಸಿದ್ದವು. ಇಂದು (ಅ.6) ಬೆಳಿಗ್ಗೆ ಗುಡ್ಡೆಹಳ್ಳ ಬಳಿ ಅರವಳಿಕೆ ನೀಡಿ ಆನೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಇದನ್ನೂ ಓದಿ: ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ `ಆನೆಪಥ’: ಈಶ್ವರ್ ಖಂಡ್ರೆ

  • ಜಸ್ಟ್ ಮಿಸ್, ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇಟಿಎಫ್ ಸಿಬ್ಬಂದಿ!

    ಜಸ್ಟ್ ಮಿಸ್, ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇಟಿಎಫ್ ಸಿಬ್ಬಂದಿ!

    ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಆನೆ ಹಾವಳಿ ಮುಂದುವರೆದಿದ್ದು ಆನೆ ದಾಳಿಯಿಂದ ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ಸಿಬ್ಬಂದಿಯೊಬ್ಬರು ಮರಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ (Salur Forest) ನಡೆದಿದೆ.

    ಎನ್.ಆರ್.ಪುರ ತಾಲೂಕಿನಲ್ಲಿ ಇತ್ತಿಚೆಗೆ ಆನೆ ಹಾವಳಿ ಮಿತಿ ಮೀರಿದೆ. ಕಾಡಾನೆಗಳು ಪ್ರತಿನಿತ್ಯ ಪುಂಡಾಟ ಮೆರೆಯುತ್ತಿದ್ದು, ಮೂರು ತಿಂಗಳಲ್ಲಿ ಇಬ್ಬರು ಆನೆ ದಾಳಿಗೆ ತುತ್ತಾಗಿದ್ದಾರೆ.‌

     

    View this post on Instagram

     

    A post shared by PUBLiC TV (@publictv)

    ಶುಕ್ರವಾರ ಕೂಡ ಕಾಫಿತೋಟಕ್ಕೆ ಬಂದಿದ್ದ ಪುಂಡಾನೆಯೊಂದನ್ನು ಓಡಿಸಲು ಹೋಗಿದ್ದ ಇಟಿಎಫ್ ಸಿಬ್ಬಂದಿ ಮೇಲೆಯೇ ಆನೆಯೊಂದು ದಾಳಿ ಮಾಡಲು ಮುಂದಾಗಿದೆ. ಇದನ್ನೂ ಓದಿ: ಭಾರತದತ್ತ ಯುರೋಪಿಯನ್ ರಾಷ್ಟ್ರಗಳ ಹೆಜ್ಜೆ – ತಿಂಗಳಾಂತ್ಯಕ್ಕೆ 27 ರಾಷ್ಟ್ರಗಳ ಆಯುಕ್ತರ ತಂಡ ಭೇಟಿ

    ಸಾಲೂರು ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಕಾಡಾನೆಯನ್ನು ಓಡಿಸುವ ವೇಳೆ ಆನೆ ಇಟಿಎಫ್ ಸಿಬ್ಬಂದಿ ಮೇಲೆ ದಾಳಿ ನಡೆಸಲು ಮುಂದಾಗಿದೆ. ತಕ್ಷಣ ಎಚ್ಚೆತ್ತ ಇಟಿಎಫ್ ಸಿಬ್ಬಂದಿ ಮರವನ್ನೇರಿ ಜೀವ ಉಳಿಸಿಕೊಂಡಿದ್ದಾರೆ.

    ಮರವೇರಿ ಕುಳಿತ ನಂತರವೂ ಕಾಡಾನೆ ಮರವನ್ನು ಅಲುಗಾಡಿಸಲು ಮುಂದಾಗಿದ್ದು, ಈ ದೃಶ್ಯವನ್ನು ಮರದ ಮೇಲೆ ಕುಳಿತುಕೊಂಡು ಆನೆ ನಿಗ್ರಹ ದಳದ ಸಿಬ್ಬಂದಿ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

    ಆನೆ ದಾಳಿ ಹಾಗೂ ಹಾವಳಿಯಿಂದ ಕಂಗೆಟ್ಟಿರುವ ಜನ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.

  • ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವಾಗ ಏಕಾಏಕಿ  ಕಾಡಾನೆ ದಾಳಿ – ಮಹಿಳೆ ಸಾವು

    ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವಾಗ ಏಕಾಏಕಿ ಕಾಡಾನೆ ದಾಳಿ – ಮಹಿಳೆ ಸಾವು

    ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ  (Elephant Attack) ಕೂಲಿ ಕಾರ್ಮಿಕ ಮಹಿಳೆ ಮೃತಪಟ್ಟ ಘಟನೆ ಎನ್.ಆರ್.ಪುರ  (NR Pura) ತಾಲೂಕಿನ ಕತ್ತಲೇಖಾನ್ ಎಸ್ಟೇಟ್‍ನಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ವಿನೋದಾ (39) ಎಂದು ಗುರುತಿಸಲಾಗಿದೆ. ಕಾಫಿ ಹಣ್ಣು ಕೊಯ್ಯುವ ಕೆಲಸಕ್ಕೆ ತೆರಳಿದ್ದ ವೇಳೆ ಆನೆ ದಾಳಿ ನಡೆಸಿದೆ. ಇದರಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

    ಮೃತ ಮಹಿಳೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಮೂಲದವರು. ಅವರ ಕುಟುಂಬ ಕೂಲಿ ಕೆಲಸಕ್ಕಾಗಿ ಚಿಕ್ಕಮಗಳೂರಿನ (Chikkamagaluru) ಕತ್ತಲೇಖಾನ್ ಎಸ್ಟೇಟ್‍ಗೆ ಬಂದಿದ್ದರು. ಇಂದು (ಫೆ.8) ಬೆಳಗ್ಗೆ ಕಾಫಿ ಹಣ್ಣು ಕೊಯ್ಯುವಾಗ ಮಹಿಳೆ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

    ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ!

    ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ!

    ಚಿಕ್ಕಮಗಳೂರು: ನಾಯಿ (Dog) ಬೊಗಳಿದ್ದಕ್ಕೆ ಮನೆ ಮಾಲೀಕನ ಮೇಲೆ ಆಸಿಡ್ ದಾಳಿ (Acid Attack) ನಡೆಸಿರುವ ಘಟನೆ ಜಿಲ್ಲೆಯ ಎನ್‌ಆರ್ ಪುರ (NR Pura) ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ನಡೆದಿದೆ.

    ಜೇಮ್ಸ್ ಆಸಿಡ್ ದಾಳಿ ಮಾಡಿದ ಆರೋಪಿಯಾದರೆ, ಸುಂದರ್ ರಾಜ್ ಆಸಿಡ್ ದಾಳಿಗೊಳಗಾದ ವ್ಯಕ್ತಿ. ಜೇಮ್ಸ್ ಹಾಗೂ ಸುಂದರ್ ರಾಜ್ ಅಕ್ಕಪಕ್ಕದ ಮನೆಯವರು. ಹಲವು ದಿನಗಳಿಂದ ಇಬ್ಬರ ನಡುವೆ ಗಲಾಟೆಯಾಗಿ, ಮನಸ್ಥಾಪವಿತ್ತು.

    dog

    ನಿನ್ನೆ ಸುಂದರ್ ರಾಜ್ ಮನೆಯ ಸಾಕು ನಾಯಿ ಬೊಗಳುತ್ತಿತ್ತು. ಈ ವೇಳೆ ಮನೆ ಮಾಲೀಕ ಸುಂದರ್ ರಾಜ್ ನಾಯಿಗೆ ಬೈದಿದ್ದಾರೆ. ಆಗ ಜೇಮ್ಸ್ ನಾಯಿಗೆ ಬೈದಂತೆ ನನಗೆ ಬೈಯುತ್ತಿದ್ದಾನೆ ಎಂದು ಜಗಳವಾಡಿದ್ದಾನೆ. ಇಬ್ಬರು ಜಗಳವಾಡುವಾಗ ಜೇಮ್ಸ್ ಏಕಾಏಕಿ ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಇದನ್ನೂ ಓದಿ: ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?

    ಆಸಿಡ್ ದಾಳಿಗೆ ಸುಂದರ್ ರಾಜ್ ಮುಖ ಬಹುತೇಕ ಸುಟ್ಟಿದ್ದು ಎಡಗಣ್ಣಿಗೆ ಗಂಭೀರ ಗಾಯವಾಗಿದೆ. ಅರ್ಧ ಮುಖ ಸಂಪೂರ್ಣ ಸುಟ್ಟುಹೋಗಿದೆ. ಕೂಡಲೇ ಅವರನ್ನು ಎನ್‌ಆರ್ ಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಶಿವಮೊಗ್ಗದಲ್ಲಿ ವೈದ್ಯರು ಸುಂದರ್ ರಾಜ್ ಅವರ ಎಡಗಣ್ಣಿನ ಪದರ ಸಂಪೂರ್ಣ ಡ್ಯಾಮೇಜ್ ಆಗಿದೆ, ಕಣ್ಣಿನ ಪದರವನ್ನು ಬದಲಾಯಿಸಬೇಕೆಂದು ತಿಳಿಸಿದ್ದಾರೆ. ಕೂಲಿ ಮಾಡಿಕೊಂಡು ಬದುಕುತ್ತಿದ್ದ ಸುಂದರ್ ರಾಜ್ ಕುಟುಂಬ ಇದೀಗ ಚಿಕಿತ್ಸೆಯ ಹಣಕ್ಕಾಗಿ ಕಂಗಾಲಾಗಿದ್ದಾರೆ. ಆಸಿಡ್ ದಾಳಿ ಬಳಿಕ ಜೇಮ್ಸ್ ದಂಪತಿ ನಾಪತ್ತೆಯಾಗಿದ್ದಾರೆ. ಎನ್‌ಆರ್ ಪುರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Rain Alert: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ

  • ಲಾಂಗ್ ಬೀಸಿದ ರೌಡಿಶೀಟರ್ ಮಂಡಿ ಸೀಳಿದ ಖಾಕಿ

    ಲಾಂಗ್ ಬೀಸಿದ ರೌಡಿಶೀಟರ್ ಮಂಡಿ ಸೀಳಿದ ಖಾಕಿ

    ಚಿಕ್ಕಮಗಳೂರು: ರೌಡಿ ಶೀಟರ್‌ನನ್ನು (Rowdy Sheeter) ಬಂಧಿಸಲು ಹೋದ ಪೊಲೀಸರ (Police) ಮೇಲೆ ಮಚ್ಚು ಬೀಸಿದ ಕಾರಣ ಸಬ್ ಇನ್ಸ್ಪೆಕ್ಟರ್ (Sub Inspector) ರೌಡಿ ಶೀಟರ್ ಮೇಲೆ ಗುಂಡು ಹಾರಿಸಿದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಎನ್‌ಆರ್‌ಪುರ (NR Pura) ತಾಲೂಕಿನ ಬಾಳೆಹೊನ್ನೂರು ಸಮೀಪದ ಮಾಗಲು ಗ್ರಾಮದಲ್ಲಿ ನಡೆದಿದೆ.

    ಮಾಗಲು ಗ್ರಾಮದ ಪೂರ್ಣೇಶ್ ಎಂಬವನ ಮೇಲೆ 2012 ರಿಂದ 8 ಪ್ರಕರಣಗಳು ದಾಖಲಾಗಿದ್ದವು. 4 ಹಾಫ್ ಮರ್ಡರ್ ಕೇಸ್, 3 ಹಲ್ಲೆ ಪ್ರಕರಣ ಮತ್ತೊಂದು ಪೊಲೀಸರ ಮೇಲೆ ಹಲ್ಲೆ ಮಾಡಿದ್ದು, ಪ್ರಕರಣ ಸಂಬಂಧ ಕೋರ್ಟಿನಿಂದ ಸಮನ್ಸ್ ಜಾರಿಯಾಗಿದ್ದರೂ ಆತ ಕೋರ್ಟಿಗೆ ಹಾಜರಾಗಿರಲಿಲ್ಲ. ಆತ ಮನೆಗೂ ಹೋಗುತ್ತಿರಲಿಲ್ಲ. ರಾತ್ರಿ ವೇಳೆ ಕಾಡು, ಕಾಫಿ ತೋಟ, ಕಾಡಿನ ದೊಡ್ಡ-ದೊಡ್ಡ ಮರಗಳ ಮೇಲೆ ಮಲಗಿ ಪೊಲೀಸರಿಗೂ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ. ಇದನ್ನೂ ಓದಿ: ಭತ್ತದ ಗದ್ದೆಗೆ ನೀರುಕಟ್ಟಲು ಹೋದಾಗ ಮಾರಕಾಸ್ತ್ರದಿಂದ ವ್ಯಕ್ತಿಯ ಕೊಲೆ

    ಆತ ಮಾಗಲು ಗ್ರಾಮದ ತಮ್ಮ ಮನೆಯಲ್ಲಿ ಇರುವ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಪೊಲೀಸರ ಮೇಲೂ ಮಚ್ಚು ಬೀಸಿದ್ದಾನೆ. ಎನ್‌ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸಬ್ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಆದರೆ ಪೊಲೀಸರ ಮಾತು ಕೇಳದೆ ಪೊಲೀಸ್ ಪೇದೆ ಮಂಜುನಾಥ್ ಎಂಬವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಘಟನೆಯಿಂದ ಪೇದೆ ಮಂಜುನಾಥ್ ಎಡಗೈಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ನೆರೆಮನೆಯಾತ ಸೀರೆ ಎಳೆದಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

    ಪೊಲೀಸರ ಮೇಲೆ ಮಚ್ಚು ಬೀಸಿದ ಕಾರಣ ಆತ್ಮರಕ್ಷಣೆಗಾಗಿ ರೌಡಿ ಶೀಟರ್ ಬಲಗಾಲಿನ ಮಂಡಿಗೆ ಗುಂಡು ಹಾರಿಸಿ ಬಂಧಿಸಿ, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಎಸ್‌ಪಿ ವಿಕ್ರಂ ಅಮಟೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ, ಪೇದೆ ಮಂಜುನಾಥ್ ಆರೋಗ್ಯ ವಿಚಾರಿಸಿದ್ದಾರೆ. ರೌಡಿ ಶೀಟರ್ ಪೂರ್ಣೇಶ್ ಮೇಲೆ 2012ರಿಂದ 8 ಕೇಸ್‌ಗಳು ದಾಖಲಾಗಿವೆ. ಆತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದರಿಂದ ಆತನಿಂದ ಹಲ್ಲೆಗೊಳಗಾದವರು ಸಂತಸಪಟ್ಟಿದ್ದಾರೆ. ಈ ಕುರಿತು ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಸ್ಫೋಟ ಪ್ರಕರಣ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆ ವೇಳೆ ತುಂಬು ಗರ್ಭಿಣಿ ಸಾವು

    ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆ ವೇಳೆ ತುಂಬು ಗರ್ಭಿಣಿ ಸಾವು

    ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆ ವೇಳೆ ತುಂಬು ಗರ್ಭಿಣಿ ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.

    ಬಾಳೆಹೊನ್ನೂರು ನಿವಾಸಿ ಶ್ವೇತಾ(27) ಮೃತ ದುರ್ದೈವಿ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ವೈದ್ಯ ಎಲ್ಡೋಸ್ ನಿರ್ಲಕ್ಷ್ಯದಿಂದ ಗರ್ಭಿಣಿ ಶ್ವೇತಾ ಮತ್ತು ಆಕೆಯ ಹೊಟ್ಟೆಯಲ್ಲಿದ್ದ ಹಸುಗೂಸು ಅಸುನೀಗಿದೆ. ಇದನ್ನೂ ಓದಿ: 8 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ- ಅಧಿಕಾರಿ ವಿರುದ್ಧ ಪ್ರಕರಣ ದಾಖಲು

    ಎಲ್ಡೋಸ್ ಈ ಹಿಂದೆ ಎನ್.ಆರ್.ಪುರ, ಶೃಂಗೇರಿಯಲ್ಲಿ ಅಮಾನತ್ತಾಗಿದ್ದು, ಪೋಷಕರು ಗರ್ಭಿಣಿಯನ್ನ ಚಿಕ್ಕಮಗಳೂರಿಗೆ ಕರೆದುಕೊಂಡು ಹೋಗಲು ಮುಂದಾಗಿದ್ದರು. ಆದರೆ ಎಲ್ಡೋಸ್ ಅವರು ನಾನೇ ಹೆರಿಗೆ ಮಾಡಿಸುತ್ತೇನೆಂದು ಮುಂದಾಗಿದ್ದಾರೆ. ಆದರೆ ಶ್ವೇತಾ ಮತ್ತು ಮಗು ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

    ಈ ಪರಿಣಾಮ ವೈದ್ಯರ ವಿರುದ್ಧ ಆಸ್ಪತ್ರೆ ಮುಂಭಾಗ ಸ್ಥಳಿಯರು ಪ್ರತಿಭಟನೆ ಮಾಡುತ್ತಿದ್ದು, ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಲಾಗುತ್ತಿದೆ. ಈ ವೇಳೆ ಪ್ರತಿಭಟನೆಯನ್ನು ನಿಲ್ಲಿಸಲು ಬಂದ ಪೊಲೀಸರ ಜೊತೆ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದ್ದಾರೆ.

  • ಆಟೋದಲ್ಲಿ ಗೋಮಾಂಸ ಸಾಗಾಟ – ಇಬ್ಬರ ಬಂಧನ

    ಆಟೋದಲ್ಲಿ ಗೋಮಾಂಸ ಸಾಗಾಟ – ಇಬ್ಬರ ಬಂಧನ

    ಚಿಕ್ಕಮಗಳೂರು: ಹಸುವನ್ನ ಕೊಂದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಆಟೋ ಸಮೇತ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.

    ಬಾಳೆಹೊನ್ನೂರು ಸಮೀಪದ ದೇವದಾನ ಗ್ರಾಮದಿಂದ ವಿಜಯಗಿರಿ ಎಸ್ಟೇಟ್ ಹೋಗುವ ಮಾರ್ಗ ಮಧ್ಯೆ ಹಸುವನ್ನ ಕೊಂದು ಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದರು. ದೇವದಾನ ಸಮೀಪದ ಕಡ್ಲೆಮಕ್ಕಿ ಗ್ರಾಮದ ಇಬ್ರಾಹಿಂ ಹಾಗೂ ಷರೀಫ್ ಎಂಬುವರು ಅಕ್ರಮವಾಗಿ ಹಸುವನ್ನ ಕೊಂಡು ಕಾಡಿನಲ್ಲಿ ಮಾಂಸ ಮಾಡಿಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದರು. ಮಾಂಸವನ್ನ ಲಗೇಜ್ ಆಟೋದಲ್ಲಿ ತಂದು ಮಾರ್ಗ ಮಧ್ಯೆ ಸಿಗುವ ಹಳ್ಳಿಗಳಲ್ಲಿ ಮಾರಾಟಕ್ಕೆ ಮುಂದಾಗಿದ್ದರ. ವಿಷಯ ತಿಳಿದ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಸ್ಥಳಕ್ಕೆ ಬಂದ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ ಆಟೋ ಹಾಗೂ ಗೋಮಾಂಸವನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಮಲೆನಾಡು ಭಾಗದಲ್ಲಿ ಗೋಕಳ್ಳತನ ಯಥೇಚ್ಛವಾಗಿದ್ದು, ಮೇಯಲು ಹೋದ ರಾಸುಗಳು ಮನೆಗೆ ಬಂದಾಗಲೇ ಬಂದವು ಎಂದು ಗ್ಯಾರಂಟಿ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆನಾಡು ಭಾಗದಲ್ಲಿ ಗೋಕಳ್ಳತನ ಕೂಡ ಹೆಚ್ಚಾಗಿದ್ದು ರೈತರು ರಾಸುಗಳನ್ನ ಸಾಕುವುದಕ್ಕಿಂತ ಅವುಗಳನ್ನ ರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ತಲೆನೋವಾಗಿದೆ. ಬಂಧಿತರಿಬ್ಬರ ವಿರುದ್ಧ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 12 ವರ್ಷದ ಬಳಿಕ ಮೈದುಂಬಿ ಹರೀತಿದೆ ಬೃಹತ್ ಚೆಕ್ ಡ್ಯಾಂ

    12 ವರ್ಷದ ಬಳಿಕ ಮೈದುಂಬಿ ಹರೀತಿದೆ ಬೃಹತ್ ಚೆಕ್ ಡ್ಯಾಂ

    ಚಿಕ್ಕಮಗಳೂರು: ಕಳೆದ 12 ವರ್ಷಗಳಿಂದ ತುಂಬದ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬೃಹತ್ ಚೆಕ್ ಡ್ಯಾಂ ಈ ವರ್ಷ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ.

    ನೋಡೋಕೆ ಮಿನಿ ಡ್ಯಾಂನಂತಿರೋ ಈ ಬೃಹತ್ ಚೆಕ್ ಡ್ಯಾಂ ತುಂಬಿರೋದ್ರಿಂದ ಕುಡಿಯೋ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಥಳಿಯರಲ್ಲಿ ಸಂತಸ ಮೂಡಿದೆ. ಇದೊಂದೆ ಅಲ್ಲ, ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರೋ ಭಾರೀ ಮಳೆಗೆ ಜಿಲ್ಲೆಯ ಎಲ್ಲಾ ನದಿಗಳು, ಹಳ್ಳ-ಕೊಳ್ಳಗಳು, ಚೆಕ್ ಡ್ಯಾಂಗಳು, ಕೆರೆಕಟ್ಟೆಗಳು ಮೈದುಂಬಿ ಹರಿಯುತ್ತಿದ್ರೆ, ನದಿಗಳು ತಿಂಗಳಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

    ಎನ್.ಆರ್.ಪುರ ಭಾಗದಲ್ಲಿ ಭಾರೀ ಮಳೆಯಾಗ್ತಿದ್ದು, ಭದ್ರಾ ಡ್ಯಾಂಗೂ ಕೂಡ ಅಪಾರ ಪ್ರಮಾಣದ ನೀರು ಹರಿದು ಹೋಗ್ತಿದೆ.