Tag: nr santhosh

  • ನಮ್ಮ ಸೊಸೈಟಿ ಬಗ್ಗೆ ಮಾತಾಡಲು ನೀನ್ಯಾರು?- ಎನ್.ಆರ್ ಸಂತೋಷ್‍ಗೆ ಗ್ರಾಮಸ್ಥರಿಂದ ತರಾಟೆ

    ನಮ್ಮ ಸೊಸೈಟಿ ಬಗ್ಗೆ ಮಾತಾಡಲು ನೀನ್ಯಾರು?- ಎನ್.ಆರ್ ಸಂತೋಷ್‍ಗೆ ಗ್ರಾಮಸ್ಥರಿಂದ ತರಾಟೆ

    ಹಾಸನ: ಅರಸೀಕೆರೆ ವಿಧಾನ ಕ್ಷೇತ್ರದ ಬಿಜೆಪಿ (BJP) ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿರುವ ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಅವರ ರಾಜಕೀಯ ಮಾಜಿ ಕಾರ್ಯದರ್ಶಿ ಎನ್.ಆರ್ ಸಂತೋಷ್ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

    ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ಬೆಳಗುಂಬ ಗ್ರಾಮದ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಗೊಲ್ಲರಹಟ್ಟಿಗೆ ಎನ್.ಆರ್ ಸಂತೋಷ್ ತಮ್ಮ ಬೆಂಬಲಿಗರೊಂದಿಗೆ ಪ್ರಚಾರಕ್ಕೆ ಬಂದಿದ್ದ ವೇಳೆ ಸೊಸೈಟಿ ವಿಚಾರವಾಗಿ ಮಾತನಾಡಿದ್ದಾರೆ. ಇದರಿಂದ ಕೆರಳಿದ ಗ್ರಾಮಸ್ಥರು ಎನ್.ಆರ್ ಸಂತೋಷ್‍ರನ್ನು ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಇದನ್ನೂ ಓದಿ: ಮೀನು ಮೃತಪಟ್ಟಿದ್ದಕ್ಕೆ ಮನನೊಂದು 13ರ ಬಾಲಕ ಆತ್ಮಹತ್ಯೆ

    ನಮ್ಮೂರ ಸೊಸೈಟಿ ಬಗ್ಗೆ ಮಾತನಾಡಲು ನೀನ್ಯಾರು, ನಾವೆಲ್ಲ ಕಷ್ಟಪಟ್ಟು ಸೊಸೈಟಿಗೆ ಒಂದು ಕೋಟಿ ದುಡ್ಡು ಹಾಕಿಸಿದ್ದೀವಿ. ಗ್ರಾಮಕ್ಕೆ ಬಂದಿದ್ದೀಯಾ ವೋಟು ಕೇಳಿಕೊಂಡು ಹೋಗು. ನೀನು ಬಂದು ಊರಿಗೆ ಊರನ್ನೇ ಹೊಡೆದಾಡುಸುತ್ತಿದ್ದೀಯಾ ಎಂದು ಹರಿಹಾಯ್ದರು. ನೀನು ಏನು ಒಳ್ಳೆಯ ಕೆಲಸ ಮಾಡಿದ್ದೀಯಾ?, ನಿನಗೆ ನಮ್ಮ ಸೊಸೈಟಿ ಬಗ್ಗೆ ಆಸಕ್ತಿ ಇದ್ದರೆ ನಿನ್ನ ಸ್ವಂತ ಜಾಗ ಕೊಡು. ನಾವ್ಯಾಕೆ ನಿನ್ನ ಜೊತೆ ಬರಬೇಕು, ನಿನ್ನಂತಹವರನ್ನು ಬಹಳ ಜನ ನೋಡಿದ್ದೀವಿ. ಎಲ್ಲಿಂದಲೂ ಬಂದು ನಮ್ಮ ಮೇಲೆ ದೌರ್ಜನ್ಯ ಮಾಡಲು ಬರ್ತಿಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿ ಎನ್.ಆರ್ ಸಂತೋಷ್ ಮೇಲೆ ಹಲ್ಲೆ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಗ್ರಾಮಸ್ಥರ ಆಕ್ರೋಶಕ್ಕೆ ಹೆದರಿದ ಎನ್.ಆರ್.ಸಂತೋಷ್ ಸ್ಥಳದಿಂದ ಕಾಲ್ಕಿತ್ತರು.

  • ‘ಆಪರೇಷನ್ ಕಮಲ’ಕ್ಕಾಗಿ 10 ಲಕ್ಷ ರೂಪಾಯಿ ಆಮಿಷ- ಸಿಎಂ ರಾಜಕೀಯ ಕಾರ್ಯದರ್ಶಿ ವಿರುದ್ಧ ದೂರು

    ‘ಆಪರೇಷನ್ ಕಮಲ’ಕ್ಕಾಗಿ 10 ಲಕ್ಷ ರೂಪಾಯಿ ಆಮಿಷ- ಸಿಎಂ ರಾಜಕೀಯ ಕಾರ್ಯದರ್ಶಿ ವಿರುದ್ಧ ದೂರು

    ಹಾಸನ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ವಿರುದ್ಧ ಹಾಸನ ಜಿಲ್ಲೆಯ ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಅರಸೀಕೆರೆ ನಗರಸಭೆ ಸದಸ್ಯೆ ಕಲೈರಸಿ ಅವರು ದೂರು ನೀಡಿದ್ದಾರೆ.

    ಅರಸೀಕೆರೆ ನಗರಸಭೆಗೆ ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದ ಏಳು ಜನ ಸದಸ್ಯರು ಜೆಡಿಎಸ್‍ಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನಂತರ ತಮ್ಮಬೆಂಬಲ ಬಿಜೆಪಿಗೆ ಇದೆ. ನಮಗೆ ಬೇರೆ ಆಸನ ವ್ಯವಸ್ಥೆ ಮಾಡಿ ಎಂದು ಡಿಸಿಗೆ ಮನವಿ ಮಾಡಿದ್ದರು. ಈ ವಿಚಾರವಾಗಿ ಯೂಟರ್ನ್ ಹೊಡೆದ ಕಲೈರಸಿ, ನನಗೆ ಹತ್ತು ಲಕ್ಷ ನೀಡಿ ಬಿಜೆಪಿಗೆ ಬೆಂಬಲ ನೀಡುವಂತೆ ಬೆದರಿಕೆ ಹಾಕಿದ್ದಾರೆ.

    ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ದೂರವಾಣಿಯಲ್ಲಿ ಬೆದರಿಕೆ ಹಾಕಿದ್ದಾರೆ. ಸಂತೋಷ್ ಆಪ್ತರಾದ ಸಿಖಂದರ್, ಹರ್ಷವರ್ಧನ್ ಎಂಬವರು ನಮ್ಮ ಮನೆಗೆ ಬಂದು 10 ಲಕ್ಷ ಹಣ ಇಟ್ಟು ಬಿಜೆಪಿಗೆ ಸಪೋರ್ಟ್ ಮಾಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಜಾತಿನಿಂದನೆ ಕೂಡ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

    ಇದೇ ವಿಚಾರವಾಗಿ ನಿನ್ನೆ 10 ಲಕ್ಷ ಹಣದೊಂದಿಗೆ ಶಾಸಕರಾದ ರೇವಣ್ಣ ಮತ್ತು ಶಿವಲಿಂಗೇಗೌಡ ಜಂಟಿ ಸುದ್ದಿಗೋಷ್ಟಿ ನಡೆಸಿದ್ದರು. ಈ ಭವಿಷ್ಯದಲ್ಲಿ ಕೋರ್ಟ್ ಮೆಟ್ಟಿಲೇರುವುದಾಗಿಯೂ ಎಚ್ಚರಿಕೆ ನೀಡಿದ್ದರು.  ಇದನ್ನೂ ಓದಿ: ಹತ್ತು ಲಕ್ಷ ಹಣದೊಂದಿಗೆ ಸುದ್ದಿಗೋಷ್ಠಿ ನಡೆಸಿದ ಹೆಚ್‍ಡಿ.ರೇವಣ್ಣ, ಶಿವಲಿಂಗೇಗೌಡ

  • ಸಂತೋಷ್ ಪ್ರಕರಣ ತನಿಖೆಗೆ ಕೊಡದಿದ್ರೆ ಹೋರಾಟ ಹಮ್ಮಿಕೊಳ್ತೇವೆ: ಸಲೀಂ ಅಹ್ಮದ್

    ಸಂತೋಷ್ ಪ್ರಕರಣ ತನಿಖೆಗೆ ಕೊಡದಿದ್ರೆ ಹೋರಾಟ ಹಮ್ಮಿಕೊಳ್ತೇವೆ: ಸಲೀಂ ಅಹ್ಮದ್

    ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಎನ್. ಆರ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣವನ್ನು ತನಿಖೆಗೆ ಕೊಡದಿದ್ದರೆ ನಾವು ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ಸುಲಭವಾದ್ದದ್ದಲ್ಲ. ಸಂತೋಷ್ ಆತ್ಮಹತ್ಯೆ ಪ್ರಯತ್ನದ ಹಿಂದೆ ರಾಜಕೀಯ ಒತ್ತಡವಿದೆ. ಈಗಾಗಲೇ ಸಾಕಷ್ಟು ಮಾಹಿತಿಗಳು ಹರಿದುಬರುತ್ತವೆ ಎಂದು ಹೇಳಿದ್ದಾರೆ.

    ಯಾವುದೋ ಸಿಡಿಯಿಂದಾಗಿ ಈ ರೀತಿಯಾಗಿದೆಯಂತೆ. ಇದರ ಬಗ್ಗೆ ವಿಶೇಷ ತಂಡದಿಂದ ತನಿಖೆಯಾಗಬೇಕು. ಸರ್ಕಾರ ಕೂಡಲೇ ತನಿಖೆಗೊಳಪಡಿಸಬೇಕು. ಅದರ ಹಿಂದಿರುವ ಸತ್ಯಾಂಶ ಹೊರಬರಬೇಕು. ತನಿಖೆಗೆ ಕೊಡದೇ ಹೋದರೆ ತಪ್ಪು ಸಾಬೀತಾದಂತೆ ಎಂದು ತಿಳಿಸಿದರು.

    ಒಂದು ವೇಳೆ ತನಿಖೆಗೆ ಕೊಡದಿದ್ದರೆ ನಾವು ಹೋರಾಟ ಹಮ್ಮಿಕೊಳ್ಳುತ್ತೇವೆ. ನಮ್ಮ ನಾಯಕರ ಜೊತೆ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಪ್ರಕರಣವನ್ನ ಮುಚ್ಚುವ ಪ್ರಯತ್ನ ಮಾಡಬಾರದು ಎಂದು ಸಲೀಂ ತನಿಖೆಗೆ ಆಗ್ರಹಿಸಿದರು. ಇದನ್ನೂ ಓದಿ: ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ: ಈಶ್ವರಪ್ಪ

    ಸಂತೋಷ್ ಅವರು ನಿನ್ನೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಕುಟುಂಬಸ್ಥರು ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದ್ದರು. ಇಂದು ಬೆಳಗ್ಗೆ ಸಂತೋಷ್ ಆರೋಗ್ಯ ಸಂಬಂಧ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆ ವೈದ್ಯರು, ನಿದ್ದೆ ಮಂಪರಿನಲ್ಲೇ ಇರುವ ಸಂತೋಷ್ ಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ನಿನ್ನೆ ರಾತ್ರಿಗಿಂತ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆಯಾಗಿದೆ. ಡಿಸ್ಚಾರ್ಜ್ ಮಾಡುವ ಬಗ್ಗೆ ಯಾವುದೇ ನಿರ್ಧಾರವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕೌಟುಂಬಿಕವಾಗಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಂತೋಷ್ ಪತ್ನಿ

    ಸಂತೋಷ್ ಅವರನ್ನು ನಿನ್ನೆ ರಾತ್ರಿ 8.30ರ ಸುಮಾರಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಮಧ್ಯಾಹ್ನ ನಂತರ ಜನರಲ್ ವಾರ್ಡಿಗೆ ಶಿಫ್ಟ್ ಮಾಡುತ್ತೇವೆ. ಅವರು ನಿನ್ನೆ ಬಂದಾಗ ಸ್ವಲ್ಪ ಮಂಕಾಗಿದ್ದರು. ಬೇರೆ ಯಾವುದೇ ಸಮಸ್ಯೆ ಇಲ್ಲ. ಎಷ್ಟು ನಿದ್ದೆ ಮಾತ್ರೆಗಳನ್ನು ತೆಗೆದುಕೊಂಡಿದ್ದರು ಅಂತ ಹೇಳೋಕೆ ಆಗಲ್ಲ ಎಂದು ನುಡಿದರು.

    ಆತ್ಮಹತ್ಯೆಗೆ ಯತ್ನ ಮಾಡಿರುವ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಲುಪಿರುವ ಮಾಹಿತಿ ಇತ್ತು: ಡಿಕೆಶಿ