Tag: NSS

  • ಎನ್‌ಎಸ್‌ಎಸ್ ಶಿಬಿರದಲ್ಲಿ ನಮಾಜ್ ಮಾಡುವಂತೆ ಒತ್ತಾಯ – 8 ಮಂದಿಯ ವಿರುದ್ಧ FIR

    ಎನ್‌ಎಸ್‌ಎಸ್ ಶಿಬಿರದಲ್ಲಿ ನಮಾಜ್ ಮಾಡುವಂತೆ ಒತ್ತಾಯ – 8 ಮಂದಿಯ ವಿರುದ್ಧ FIR

    ರಾಯ್ಪುರ: ರಾಷ್ಟ್ರೀಯ ಸೇವಾ ಯೋಜನೆ (NSS) ಶಿಬಿರದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ನಮಾಜ್ (Namaz) ಮಾಡಲು ಒತ್ತಾಯಿಸಿದ ಆರೋಪದ ಮೇಲೆ ಛತ್ತೀಸ್‌ಗಢದ (Chhattisgarh) ಗುರು ಘಾಸಿದಾಸ್ ಕೇಂದ್ರೀಯ ವಿಶ್ವವಿದ್ಯಾಲಯದ (Guru Ghasidas Central University) ಏಳು ಶಿಕ್ಷಕರು ಮತ್ತು ಒಬ್ಬ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ಛತ್ತೀಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದಿದೆ.

    ಮಾರ್ಚ್ 31ರಂದು ಸುಮಾರು 159 ವಿದ್ಯಾರ್ಥಿಗಳನ್ನು ನಮಾಜ್ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. 159 ವಿದ್ಯಾರ್ಥಿಗಳ ಪೈಕಿ ಕೇವಲ ನಾಲ್ವರು ಮಾತ್ರ ಮುಸ್ಲಿಂ ಸಮುದಾಯದವರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ – ವಿಚಾರಣೆ ಬಳಿಕ ಮುತ್ತಪ್ಪ ರೈ 2ನೇ ಪತ್ನಿ ಪ್ರತಿಕ್ರಿಯೆ

    ಶಿಬಿರದಿಂದ ವಾಪಸಾದ ಬಳಿಕ ವಿದ್ಯಾರ್ಥಿಗಳು ಈ ಬಗ್ಗೆ ಪ್ರತಿಭಟನೆ ನಡೆಸಿದ್ದು, ನಮಾಜ್‌ಗೆ ಒತ್ತಾಯಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಲಪಂಥೀಯ ಸಂಘಟನೆಗಳು ಆಗ್ರಹಿಸಿದ್ದವು. ಘಟನೆ ಸಂಬಂಧ ಬಿಲಾಸ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಜನೇಶ್ ಸಿಂಗ್ ತನಿಖೆಗೆ ಆದೇಶಿಸಿದರು. ಅಲ್ಲದೇ ಕೊಟ್ವಾಲಿ (ನಗರ) ಎಸ್ಪಿ ಅಕ್ಷಯ್ ಸಬದ್ರ ನೇತೃತ್ವದಲ್ಲಿ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿದರು. ಇದನ್ನೂ ಓದಿ: ಇಸ್ಲಾಂ ನಲ್ಲಿ ಜಾತಿ, ಧರ್ಮ, ಭೇದ-ಭಾವ ಮಾಡಿ ಅಂತ ಹೇಳಿಲ್ಲ – ಜಮೀರ್‌

    ಸಮಿತಿಯ ತನಿಖಾ ವರದಿಯ ಆಧಾರದ ಮೇಲೆ, ಶಿಕ್ಷಕರಾದ ದಿಲೀಪ್ ಝಾ, ಮಧುಲಿಕಾ ಸಿಂಗ್, ಜ್ಯೋತಿ ವರ್ಮಾ, ನೀರಜ್ ಕುಮಾರಿ, ಪ್ರಶಾಂತ್ ವೈಷ್ಣವ್, ಸೂರ್ಯಭನ್ ಸಿಂಗ್, ಬಸಂತ್ ಕುಮಾರ್ ಮತ್ತು ವಿದ್ಯಾರ್ಥಿ ನಾಯಕ ಆಯುಷ್ಮಾನ್ ಚೌಧರಿ ವಿರುದ್ಧ ಶನಿವಾರ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಳಿಕ ಪಾಕ್‌ನಿಂದ ಆಮದಾಗ್ತಿದ್ದ ಡ್ರೈಫ್ರೂಟ್ಸ್‌ ಪೂರೈಕೆಯಲ್ಲಿ ವ್ಯತ್ಯಯ – ಬೆಲೆ ಏರಿಕೆ ಆತಂಕ!

    ಪ್ರಕರಣವನ್ನು ಕೋಣಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪ್ರಕರಣದ ವರದಿಯನ್ನು ಕೋಟ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತ ಹಿಂದೂಗಳಂತೆ ಮುಸ್ಲಿಮರಿಗೂ ಸೇರಿದೆ – ಪಹಲ್ಗಾಮ್ ದಾಳಿ ಬಗ್ಗೆ ರಾಖಿ ಸಾವಂತ್ ಮಾತು

  • ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಎನ್‌ಎಸ್‌ಎಸ್‌ ಪಾತ್ರ ಅಪಾರ – ರಾಜ್ಯಪಾಲ ಗೆಹ್ಲೋಟ್

    ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಎನ್‌ಎಸ್‌ಎಸ್‌ ಪಾತ್ರ ಅಪಾರ – ರಾಜ್ಯಪಾಲ ಗೆಹ್ಲೋಟ್

    ಬೆಂಗಳೂರು: ರಾಷ್ಟ್ರೀಯ ಸೇವಾ ಯೋಜನೆಯ (NSS) ಮುಖ್ಯ ಉದ್ದೇಶವು ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸುವುದರ ಜೊತೆಗೆ ಸಹಿಷ್ಣುತೆ, ಸಹಭಾಗಿತ್ವ, ಸೇವೆ ಮತ್ತು ಸಹಾನುಭೂತಿ, ಸ್ವಾವಲಂಬನೆ ಮತ್ತು ದೇಶ ಪ್ರೇಮದ ಗುಣಗಳನ್ನು ಸಾರ್ವಜನಿಕ ಹಿತಾಸಕ್ತಿ ಮೈಗೂಡಿಸಿಕೊಳ್ಳುವಂತೆ ಮಾಡುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (thawar chand gehlot) ಅವರು ಹೇಳಿದರು.

    ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಕೋಶ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯ ಎನ್‌ಎಸ್‌ಎಸ್‌ ಕೋಶ ವತಿಯಿಂದ ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ 2020-21ನೇ ಎನ್‌ಎಸ್‌ಎಸ್‌ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ: ಕಾಂಗ್ರೆಸ್ ಲೇವಡಿ

    ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರ್ಕಾರವು ʼಸಬ್ಕಾ ಸಾಥ್, ಸಬ್ಕಾ ವಿಕಾಸ್ʼ ಎಂಬ ಧ್ಯೇಯವಾಕ್ಯದೊಂದಿಗೆ ʼಏಕ್ ಭಾರತ್, ಶ್ರೇಷ್ಠ ಭಾರತʼ ಧ್ಯೇಯದಲ್ಲಿ ಕೆಲಸ ಮಾಡುತ್ತಿದೆ. ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಅಭಿವೃದ್ಧಿಪಡಿಸಲು ‘ಮೇಕ್ ಇನ್ ಇಂಡಿಯಾ’ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ‘ಡಿಜಿಟಲ್ ಇಂಡಿಯಾ’ ಉಪಕ್ರಮವು ಭಾರತವನ್ನು ಡಿಜಿಟಲ್ ಸಶಕ್ತ ಮತ್ತು ಚೇತರಿಸಿಕೊಳ್ಳುವ ಆರ್ಥಿಕತೆಯಾಗಿ ಪರಿವರ್ತಿಸಲು ಪ್ರಯತ್ನಿಸುತ್ತದೆ. ಸ್ವಚ್ಛ ಮತ್ತು ಹಸಿರು ಭಾರತವನ್ನು ನಿರ್ಮಿಸಲು ‘ಸ್ವಚ್ಛ ಭಾರತ ಮಿಷನ್’ ಆರಂಭಿಸಲಾಗಿದೆ. ಈ ಯೋಜನೆಗಳಿಗೆ ಎನ್‌ಎಸ್‌ಎಸ್‌ ಸ್ವಯಂಸೇವಕರು ಗಮನಾರ್ಹ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.

    ಎನ್‌ಎಸ್‌ಎಸ್‌ ಭಾರತದಾದ್ಯಂತ 40 ಲಕ್ಷಕ್ಕೂ ಹೆಚ್ಚು ಸ್ವಯಂಸೇವಕರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಯುವ ಸ್ವಯಂಸೇವಾ ಸಂಸ್ಥೆಗಳಲ್ಲಿ ಒಂದಾಗಿದೆ. ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಎನ್ಎಸ್ಎಸ್ ಅನ್ನು ದೊಡ್ಡ ರೀತಿಯಲ್ಲಿ ವಿಸ್ತರಿಸಲು ಬದ್ಧವಾಗಿದೆ. ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಸಮಾಜದ ಸೇವೆಯಲ್ಲಿ ಪಾಲ್ಗೊಂಡು, ಶಿಸ್ತು, ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ಸಂಕಷ್ಟದಲ್ಲಿರೋ ಜನರಿಗೆ ಸ್ಪಂದಿಸೋದು ಬಿಟ್ಟು ಡಾನ್ಸ್ ಮಾಡ್ತಿದ್ದಾರೆ : ಸಿದ್ದರಾಮಯ್ಯ ಕಿಡಿ

    ಕರ್ನಾಟಕ ರಾಜ್ಯದಲ್ಲಿ ಸುಮಾರು 5 ಲಕ್ಷ ಎನ್‌ಎಸ್‌ಎಸ್ ಸ್ವಯಂಸೇವಕರು ಪ್ರಶಂಸನೀಯ ಕಾರ್ಯಗಳನ್ನು ಮಾಡಿದ್ದಾರೆ. ಎನ್‌ಎಸ್‌ಎಸ್‌ ಸ್ವಯಂಸೇವಕರು ಕರ್ನಾಟಕ ರಾಜ್ಯದ ಪ್ರಮುಖ ಯೋಜನೆಗಳು, ಶಿಕ್ಷಣ ಮತ್ತು ಸಾಕ್ಷರತೆ, ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಪೋಷಣೆ, ನೈರ್ಮಲ್ಯ, ಪರಿಸರ ಸಂರಕ್ಷಣೆ, ಸಮಾಜ ಸೇವಾ ಕಾರ್ಯಕ್ರಮಗಳು, ಮಹಿಳೆಯರ ಸ್ಥಿತಿ ಸುಧಾರಣೆ, ವಿಪತ್ತು ಪರಿಹಾರ ಮತ್ತು ಪುನರ್ವಸತಿ ಕಾರ್ಯಕ್ರಮಗಳಿಗೆ ಹಾಗೂ ಸಾಮಾಜಿಕ ಅನಿಷ್ಟಗಳು, ಹಿಂಸಾಚಾರ-ವಿರೋಧಿ, ಯೋಗ ಮುಂತಾದ ಪ್ರಮುಖ ಕಾರ್ಯಕ್ರಮಗಳ ಪ್ರಚಾರ ಮತ್ತು ಅನುಷ್ಠಾನದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.

    ಎನ್‌ಎಸ್‌ಎಸ್‌ ಸ್ವಯಂ ಸೇವಕರು COVID-19 ಸಾಂಕ್ರಾಮಿಕ ಸಮಯದಲ್ಲಿ ಕೊರೊನಾ ವಾರಿಯರ್ ಆಗಿ ಮಾಡಿದ ಕಾರ್ಯಕ್ಕಾಗಿ ಅಭಿನಂದಿಸಿದ ರಾಜ್ಯಪಾಲರು, ಕರ್ನಾಟಕ ರಾಜ್ಯವು 2019-20ನೇ ಸಾಲಿನ ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ. ಈ ಸಾಧನೆಗಳು ನಿಸ್ಸಂಶಯವಾಗಿ ಎನ್ಎಸ್ಎಸ್ ಚಟುವಟಿಕೆಗಳ ಅನುಷ್ಠಾನವನ್ನು ಪ್ರೋತ್ಸಾಹಿಸುತ್ತವೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಚಿವ ಡಾ.ನಾರಾಯಣ ಗೌಡ, ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಲಿಂಗರಾಜು ಗಾಂಧಿ, ರಾಜ್ಯ ಎನ್‌ಎಸ್‌ಎಸ್‌ ಅಧಿಕಾರಿ ಪ್ರತಾಪ್ ಲಿಂಗ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • 2021ರಿಂದಲೇ ಕರ್ನಾಟಕ ಯುವ ನೀತಿ ಪರಿಷ್ಕರಣೆ ಜಾರಿ- ಸಚಿವ ಡಾ.ನಾರಾಯಣಗೌಡ

    2021ರಿಂದಲೇ ಕರ್ನಾಟಕ ಯುವ ನೀತಿ ಪರಿಷ್ಕರಣೆ ಜಾರಿ- ಸಚಿವ ಡಾ.ನಾರಾಯಣಗೌಡ

    ಶಿವಮೊಗ್ಗ: ಕರ್ನಾಟಕ ಯುವ ನೀತಿಯನ್ನು ಪರಿಷ್ಕರಿಸಿ 2021ರಿಂದಲೇ ಜಾರಿಗೆ ತರಲಾಗುವುದು. ಈ ಸಂಬಂಧ ಸಮಿತಿಯನ್ನು ರಚಿಸಿ ಕರಡು ಸಿದ್ಧಪಡಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣಗೌಡ ಹೇಳಿದರು.

    ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಎನ್‍ಎಸ್‍ಎಸ್, ಎನ್‍ವೈಕೆ ಅಧಿಕಾರಿಗಳು, ಪದಾಧಿಕಾರಿಗಳು ಹಾಗೂ ಯುವ ಸಂಘಗಳ ಜೊತೆ ಸಂವಾದ ನಡೆಸಿದ ಅವರು, ಕರ್ನಾಟಕ ಯುವ ನೀತಿ ಪರಿಷ್ಕರಣೆ ಆಗಬೇಕು. ಅದಕ್ಕಾಗಿ ಸಮಿತಿಯನ್ನು ಶೀಘ್ರದಲ್ಲೇ ರಚನೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಚಾಮುಂಡೇಶ್ವರಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ರೂ ಜನ ಸೋಲಿಸಿಬಿಟ್ರು: ಸಿದ್ದರಾಮಯ್ಯ

    ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯುವ ಸಬಲೀಕರಣಕ್ಕಾಗಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಯುವಜನತೆಗೆ ಇದು ಸರಿಯಾಗಿ ತಲುಪುತ್ತಿಲ್ಲ. ಕೇಂದ್ರ ಸರ್ಕಾರದ ಮುದ್ರಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳು ಯುವ ಜನತೆಗೆ ಉದ್ಯೋಗ ಕಂಡುಕೊಳ್ಳಲು ಅವಕಾಶ ಮಾಡಿಕೊಡುತ್ತವೆ. ಯುವಕರಲ್ಲಿ ಸೇವಾ ಮನೋಭಾವ ಬೆಳೆಯಬೇಕು. ಆಗ ಮಾತ್ರ ಯುವಜನತೆ ಅಡ್ಡದಾರಿಗೆ ಹೋಗುವುದು ತಪ್ಪುತ್ತದೆ ಎಂದರು.

    ಎನ್‍ಎಸ್‍ಎಸ್, ಎನ್‍ವೈಕೆ ಯುವ ಸಂಘಟನೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿದರೆ ಉತ್ತಮ ಸಮಾಜ ನಿರ್ಮಿಸಬಹುದು. ನಿರುದ್ಯೋಗ ತಗ್ಗಿಸಬಹುದು. ಯುವ ಜನರನ್ನು ಸ್ವಾವಲಂಬಿಗಳಾಗಿ ಮಾಡಬಹುದು. ಆದರೆ ಸೇವಾ ಮನೋಭಾವ ಇಲ್ಲದೆ, ಕಾಟಾಚಾರ ಎಂಬಂತೆ ಕಾರ್ಯಕ್ರಮಗಳನ್ನು ಮಾಡಿದರೆ ನಾನು ಸಹಿಸುವುದಿಲ್ಲ ಎಂದು ಸಚಿವರು ಖಡಕ್ಕಾಗಿ ಎಚ್ಚರಿಸಿದರು. ಇದನ್ನೂ ಓದಿ: ಸಿ.ಎಂ.ಗೆ ಉಡುಗೊರೆ ನೀಡಿದ್ದ ಬೆಳ್ಳಿ ಗದೆಯನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಿದ ಬಿ.ಸಿ.ಪಾಟೀಲ್

    ಕಾರ್ಯಕ್ರಮದಲ್ಲಿ ಎನ್‍ಎಸ್‍ಎಸ್ ರಾಜ್ಯ ಅಧಿಕಾರಿ ಪ್ರತಾಪಲಿಂಗಯ್ಯ, ಎನ್‍ವೈಕೆ ರಾಜ್ಯ ನಿರ್ದೇಶಕ ನಟರಾಜ್, ಕ್ರೀಡಾ ಇಲಾಖೆ ಉಪನಿರ್ದೇಶಕ ರಮೆಶ್, ಮತ್ತಿತರರು ಉಪಸ್ಥಿತರಿದ್ದರು.

  • ಕರ್ನಾಟಕಕ್ಕೆ ನಾಲ್ಕು NSS ರಾಷ್ಟ್ರೀಯ ಪ್ರಶಸ್ತಿ – ನಾರಾಯಣಗೌಡ ಅಭಿನಂದನೆ

    ಕರ್ನಾಟಕಕ್ಕೆ ನಾಲ್ಕು NSS ರಾಷ್ಟ್ರೀಯ ಪ್ರಶಸ್ತಿ – ನಾರಾಯಣಗೌಡ ಅಭಿನಂದನೆ

    ಬೆಂಗಳೂರು: ಪ್ರತಿಷ್ಠಿತ ರಾಷ್ಟ್ರೀಯ ಸೇವಾ ಯೋಜನೆಯ(NSS) ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯದ ನಾಲ್ವರು ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ನಾಲ್ವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 6 ವರ್ಷಗಳ ಬಳಿಕ ರಾಜ್ಯಕ್ಕೆ ಈ ಪ್ರಶಸ್ತಿ ಒಲಿದುಬಂದಿದೆ. ಗೌರವಕ್ಕೆ ಭಾಜನರಾಗಿರುವವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಅಭಿನಂದಿಸಿದ್ದಾರೆ.

    Narayana Gowda

    ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಾರ್ಯಕ್ರಮ ಸಂಯೋಜಕ ಡಾ. ಬಿ. ವಸಂತ ಶೆಟ್ಟಿ, ಕಾಲೇಜು ಮಟ್ಟದ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿಗೆ ಧಾರವಾಡದ ಜೆಎಸ್‍ಎಸ್ ಬನಶಂಕರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕಾರ್ಯಕ್ರಮ ಅಧಿಕಾರಿ ಸುರೇಶಪ್ಪ ಕೆ. ಸಜ್ಜನ, ರಾಷ್ಟ್ರಮಟ್ಟದಲ್ಲಿ ಕಾರ್ಯ ನಿರ್ವಹಿಸಿದ ಸ್ವಯಂಸೇವಕರ ವಿಭಾಗದಲ್ಲಿ ಬೆಂಗಳೂರಿನ ಕೆ.ಎಸ್.ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸ್ವಯಂ ಸೇವಕ ಸಿರೀಶ್ ಗೋವರ್ಧನ್ ಮತ್ತು ಮಂಗಳೂರು ಸೂರತ್ಕಲ್‍ನ ಗೋವಿಂದ ದಾಸ್ ಕಾಲೇಜಿನ ಸ್ವಯಂ ಸೇವಕಿ ಬಿಂದಿಯಾ ಶೆಟ್ಟಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ಕಳೆದ 6 ವರ್ಷಗಳಲ್ಲಿ ಎನ್‍ಎಸ್‍ಎಸ್ ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯದಿಂದ ಯಾರೂ ಆಯ್ಕೆಯಾಗಿರಲಿಲ್ಲ. ಈ ಬಾರಿ 4 ಜನ ಸಾಧಕರು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಸೆಪ್ಟಂಬರ್ 24 ರಂದು ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನದ ಅಂಗವಾಗಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ ಪ್ರಶಸ್ತಿ ಪುರಸ್ಕೃತರಿಗೆ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.

  • ಹಾವೇರಿ: ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

    ಹಾವೇರಿ: ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

    ಹಾವೇರಿ: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕವು 2016-17 ನೇ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ತಾಲೂಕಿನ ನೆಲೋಗಲ್ಲ ಗ್ರಾಮದಲ್ಲಿ ಆಯೋಜಿಸಿತ್ತು.

    ರಾಜ್ಯದ ಜವಳಿ ಮತ್ತು ಮುಜರಾಯಿ ಖಾತೆ ಸಚಿವ ರುದ್ರಪ್ಪ ಲಮಾಣಿ ಎನ್‍ಎಸ್‍ಎಸ್ ಶಿಬಿರವನ್ನು ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಿಂದ ಗ್ರಾಮ ಜಾಗೃತಿ ಸಾಧ್ಯವಾಗುತ್ತದೆ. ಜನರಲ್ಲಿ ಅರಿವು ಮತ್ತು ವಾಸ್ತವ ಪ್ರಜ್ಞೆ ಮೂಡಲು ಸಹಕಾರಿಯಾಗುತ್ತದೆ. ಇಂದು ನೀರಿನ ಅಭಾವ ಎಲ್ಲೆಡೆಗೂ ಹೆಚ್ಚಾಗುತ್ತಿದ್ದು, ನೀರನ್ನು ಮಿತವಾಗಿ ಬಳಸುವ ಕಾರ್ಯವಾಗಬೇಕಿದೆ. ಅಂತರ್ಜಲ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕಿದೆ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಪಿ.ಡಿ.ಶಿರೂರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಚಾರ್ಯ ಪ್ರೊ. ಎಸ್.ಬಿ.ನಾಡಗೌಡ, ಪ.ಪೂ. ಪ್ರಾಚಾರ್ಯ ಡಾ. ಸಿ.ಮಲ್ಲಣ್ಣ, ಪ್ರೊ. ಡಿ.ಎ.ಕೊಲ್ಹಾಪುರೆ, ಡಾ. ಜೆ.ಎಫ್.ಹೊಸಮನಿ, ಪ್ರೊ. ನಾಗರಾಜ ಮುಚ್ಚಟ್ಟಿ ಹಾಗೂ ಗ್ರಾಮದ ಗುರುಹಿರಿಯರು ಪಾಲ್ಗೊಂಡಿದ್ದರು.

    ಆರಂಭದಲ್ಲಿ ಶಿಬಿರಾರ್ಥಿ ನವೀನಕುಮಾರ ಸಾಸನೂರ ಪ್ರಾರ್ಥಿಸಿದರು. ಪ್ರೊ. ರಮೇಶ ನಾಯ್ಕ್ ಸ್ವಾಗತಿಸಿದರು. ಪ್ರೊ. ಸಿದ್ಧೇಶ್ವರಯ್ಯ ಹುಣಶೀಕಟ್ಟಿಮಠ ಕಾರ್ಯಕ್ರಮ ನಿರ್ವಹಿಸಿದರು. ಪ್ರೊ. ಎಸ್.ಎಸ್. ಸಣ್ಣಶಿವಣ್ಣನವರ ವಂದಿಸಿದರು.