Tag: NSUI

  • ರಾಹುಲ್‌ ಪತ್ರ – ಸರ್ಕಾರಿ ಪದವಿ ಕಾಲೇಜುಗಳಲ್ಲಿ 35 ವರ್ಷದ ಬಳಿಕ ವಿದ್ಯಾರ್ಥಿ ಚುನಾವಣೆಗೆ ಅನುಮತಿ?

    ರಾಹುಲ್‌ ಪತ್ರ – ಸರ್ಕಾರಿ ಪದವಿ ಕಾಲೇಜುಗಳಲ್ಲಿ 35 ವರ್ಷದ ಬಳಿಕ ವಿದ್ಯಾರ್ಥಿ ಚುನಾವಣೆಗೆ ಅನುಮತಿ?

    – 1989 ರಲ್ಲಿ ಗಲಾಟೆಗಳು ನಡೆದ ಬಳಿಕ ಚುನಾವಣೆ ರದ್ದು

    ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 35 ವರ್ಷದ ಬಳಿಕ ವಿದ್ಯಾರ್ಥಿ ಚುನಾವಣೆ (Campus Elections) ನಡೆಯುವ ಸಾಧ್ಯತೆಯಿದೆ.

    ರಾಹುಲ್ ಗಾಂಧಿ (Rahul Gandhi) ಅವರು ಸಿಎಂ ಸಿದ್ದರಾಮಯ್ಯಗೆ (CM Siddaramaiah) ವಿದ್ಯಾರ್ಥಿ ಚುನಾವಣೆಗೆ ಅನುಮತಿ ನೀಡುವಂತೆ ಪತ್ರ ಬರೆದಿದ್ದಾರೆ. ರಾಹುಲ್ ಗಾಂಧಿ ಸೂಚನೆ ಮೇರೆಗೆ ಡಿಗ್ರಿ ಕಾಲೇಜುಗಳಲ್ಲಿ ಮತ್ತೆ ಎಲೆಕ್ಷನ್‌ಗೆ ಅನುಮತಿ ನೀಡುವ ಬಗ್ಗೆ ಉನ್ನತ ಶಿಕ್ಷಣ ‌ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

    ಒಂದು ವೇಳೆ ಸರ್ಕಾರ ಏನಾದರೂ ಚುನಾವಣೆಗೆ ಅವಕಾಶ ನೀಡಿದರೆ ಮುಂದಿ‌ನ ವರ್ಷಗಳಿಂದಲೇ ಡಿಗ್ರಿ ಕಾಲೇಜಿನಲ್ಲಿ ಎಲೆಕ್ಷನ್ ಪಾಲಿಟಿಕ್ಸ್ ಎಂಟ್ರಿ ಆಗಲಿದೆ.

    ಕಾಲೇಜುಗಳಲ್ಲಿ ಎಲೆಕ್ಷನ್ ಗೆ ಅನುಮತಿ ನೀಡುವ ಚರ್ಚೆ ಮಧ್ಯೆಯ ಸಿಎಂ ಸಿದ್ದರಾಮಯ್ಯನವರು ದೆಹಲಿಯಲ್ಲಿ ಪ್ರತಿಕ್ರಿಯಿಸಿ, ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಬಗ್ಗೆ ಚಿಂತನೆ ಇದೆ. ರಾಹುಲ್ ಗಾಂಧಿ ಅವರಿಗೂ ಈ ಆಸಕ್ತಿ ಇದೆ ಎನ್ನುವ ಮೂಲಕ ಅನುಮತಿ ನೀಡುವ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ನಿರ್ಧಾರ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: 2029ಕ್ಕೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರ್ತೀವಿ, ಬಿಜೆಪಿ ನಾಯಕರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

     

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಮತ್ತು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಕರ್ನಾಟಕದಲ್ಲಿ ಈಗ ಬಲಶಾಲಿಯಾಗುತ್ತಿದೆ. ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟಕ್ಕೆ (NSUI) ಪ್ರೋತ್ಸಾಹ ನೀಡಿ ಯುವ ನಾಯಕರನ್ನು ಬೆಳೆಸಿದಾಗ ಮಾತ್ರ ಭವಿಷ್ಯದಲ್ಲಿ ಕಾಂಗ್ರೆಸ್‌ ರಾಜ್ಯದಲ್ಲಿ ಗಟ್ಟಿಯಾಗುತ್ತದೆ. ಈ ಕಾರಣಕ್ಕೆ ಮತ್ತೆ ಪದವಿ ಕಾಲೇಜಿನಲ್ಲಿ ಚುನಾವಣೆ ಅನುಮತಿ ನೀಡಲು ಕಾಂಗ್ರೆಸ್‌ ಚಿಂತನೆ ನಡೆಸಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

    ವಿದ್ಯಾರ್ಥಿ ಚುನಾವಣೆಗಳಲ್ಲಿ ಹಿಂಸಾಚಾರ, ಜಾತಿ ಆಧಾರಿತ ರಾಜಕೀಯ, ರೌಡಿ ಅಂಶಗಳು ಮತ್ತು ರಾಜಕಾರಣಿಗಳ ಹಸ್ತಕ್ಷೇಪದಿಂದ ಪ್ರಾಬಲ್ಯದಿಂದಾಗಿ ಎನ್‌ಎಸ್‌ಯುಐ ಪ್ರಭಾವ ಕರ್ನಾಟಕದಲ್ಲಿ ಕಡಿಮೆಯಾಗಿದೆ.

    ಚುನಾವಣೆ ನಿಷೇಧಿಸಿದ್ದು ಯಾಕೆ?
    1989 ರಲ್ಲಿ ನಡೆದ ಚುನಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪದಿಂದ ಭಾರೀ ಅಹಿತಕರ ಘಟನೆಗಳು ನಡೆದಿದ್ದವು. ಚುನಾವಣೆ ಸಮಯದಲ್ಲಿ ವಿದ್ಯಾರ್ಥಿಗಳ ಮಧ್ಯೆಯೇ ಗಲಾಟೆ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ವಿದ್ಯಾರ್ಥಿ ಚುನಾವಣೆಯನ್ನು ರದ್ದು ಮಾಡಲಾಗಿತ್ತು.  ಇದನ್ನೂ ಓದಿ: ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ ಡೆಲ್ಲಿಯಲ್ಲಿ ಸಿಎಂ ಗೂಗ್ಲಿ

  • ಮೋದಿ ಕಾರ್ಯಕ್ರಮ ಸ್ಥಳಕ್ಕೆ NSUI ಸಂಘಟನೆ ಮುತ್ತಿಗೆ ಯತ್ನ

    ಮೋದಿ ಕಾರ್ಯಕ್ರಮ ಸ್ಥಳಕ್ಕೆ NSUI ಸಂಘಟನೆ ಮುತ್ತಿಗೆ ಯತ್ನ

    – ಗೋ ಬ್ಯಾಕ್ ಮೋದಿ ಎಂದು ಧಿಕ್ಕಾರ

    ದಾವಣಗೆರೆ: ಮೋದಿ ಕಾರ್ಯಕ್ರಮ ಸ್ಥಳಕ್ಕೆ ಮುತ್ತಿಗೆ ಹಾಕಲು ಎನ್‌ಎಸ್‌ಯುಐ (NSUI) ಯತ್ನಿಸಿದ ಘಟನೆ ದಾವಣಗೆರೆಯ (Davanagere) ಅಂಬೇಡ್ಕರ್ ಸರ್ಕಲ್‌ನಲ್ಲಿ ನಡೆದಿದೆ.

    ಎನ್‌ಎಸ್‌ಯುಐ ಸಂಘಟನೆಯಿಂದ ಮೋದಿಗೆ (Narendra Modi) ಚೊಂಬು ಪ್ರದರ್ಶನಕ್ಕೆ ಯತ್ನಿಸಿದ್ದು, ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರತಿಭಟನೆ (Protest) ನಡೆಸಿದ್ದಾರೆ. ಖಾಲಿ ಚೊಂಬು ಪೋಸ್ಟರ್ ಪ್ರದರ್ಶನ ಮಾಡುತ್ತಾ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ನೇಹಾ ಬದಲು ಮುಸ್ಲಿಂ ಸಾವಾಗಿದ್ರೆ ಸಿಎಂ ಹೆಲಿಕಾಪ್ಟರ್ ಇಳಿಸ್ತಿದ್ರು: ಯತ್ನಾಳ್

    ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುವ ಹಿನ್ನೆಲೆ ಗೋಬ್ಯಾಕ್ ಮೋದಿ ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಸದ್ಯ ಪ್ರತಿಭಟನೆ ನಡೆಸಿ ಗದ್ದಲ ಎಬ್ಬಿಸಿದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ – ನೊಂದ ಮಹಿಳೆಯಿಂದ ಮಹಿಳಾ ಆಯೋಗಕ್ಕೆ ದೂರು

  • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು

    ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು

    ಶಿವಮೊಗ್ಗ: ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿದೆ.

    ಎನ್‌ಎಸ್‌ಯುಐ (NSUI) ಕಾರ್ಯಕರ್ತರು ನೀಡಿದ ದೂರಿನ ಆಧಾರದಲ್ಲಿ ಸಿಆರ್‌ಪಿಸಿ ಕಲಂ 157 ಅಡಿ ಎಫ್‌ಐಆರ್‌ ದಾಖಲಾಗಿದೆ. ಎಸ್‌ಎಸ್‌ಎಲ್‌ಸಿ (SSLC) ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ವಿಷಯದಲ್ಲಿ ಧಾರ್ಮಿಕ ಭಾವನೆ ಕೆರಳಿಸಿರುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ಇದನ್ನೂ ಓದಿ: ಸೂಲಿಬೆಲೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಅಡ್ಡಿ – ವಿರೋಧದ ನಡ್ವೆ ಯಶಸ್ವಿಯಾದ ನಮೋ ಭಾರತ್‌

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ. ಫೆ.26 ರಿಂದ ಆರಂಭವಾಗುವ ಪರೀಕ್ಷೆ ಮಾರ್ಚ್‌ 2 ರವರೆಗೆ ನಡೆಯಲಿದೆ.

    ಐದು ವಿಷಯಗಳು ಬೆಳಗ್ಗೆ 10:15ಕ್ಕೆ ಆರಂಭವಾದರೆ ಮಾರ್ಚ್‌ 1ರ ವಿಜ್ಞಾನ ಪರೀಕ್ಷೆ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಮಾರ್ಚ್‌ 1 ಶುಕ್ರವಾರ ಒಂದೇ ದಿನ ಮಧ್ಯಾಹ್ನದ ನಂತರ ಪರೀಕ್ಷೆ ನಡೆಸುತ್ತಿರುವುದು ಯಾಕೆ ಎನ್ನುವುದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿತ್ತು.

    ಸೂಲಿಬೆಲೆ ಹೇಳಿದ್ದೇನು?
    ​ಕರ್ನಾಟಕ ರಾಜ್ಯ 10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಶುಕ್ರವಾರ ಹೊರತು ಪಡಿಸಿ ಎಲ್ಲಾ ಪರೀಕ್ಷೆಗಳು ಬೆಳಗಿನ ಅವಧಿಯಲ್ಲಿ ನಡೆಯಲಿದೆ. ಯಾಕೆ ನಮಾಜ್‌ ಸಮಯಕ್ಕಾ ಎಂದು ಸಾಮಾಜಿಕ ಜಾಲತಾಣದಲ್ಲಿ ಸೂಲಿಬೆಲೆ ಪ್ರಶ್ನಿಸಿದ್ದರು.

  • ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನ- NSUI ಕಾರ್ಯಕರ್ತರ ಬಂಧನ

    ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನ- NSUI ಕಾರ್ಯಕರ್ತರ ಬಂಧನ

    ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎನ್‍ಎಸ್‍ಯುಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ (Nalin Kumar Kateel) ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ನಳಿನ್ ಕುಮಾರ್ ಕಟೀಲ್ ವಿರುದ್ಧ ಘೋಷಣೆ ಕೂಗಿದ ಎನ್‍ಎಸ್‍ಯುಐ ಕಾರ್ಯಕರ್ತರು ಕಟೀಲ್ ಮನೆ ಮುಂದೆ ಭಾರೀ ಹೈಡ್ರಾಮಾ ಮಾಡಿದರು.

    ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ಕಟೀಲ್ ಮನೆಗೆ ನುಗ್ಗಲು ಕಾರ್ಯಕರ್ತರು ಯತ್ನಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಎನ್‍ಎಸ್‍ಯುಐ ಕಾರ್ಯಕರ್ತರನ್ನು ತಡೆದು ಬಂಧಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ಇಲ್ಲದ ರಾಜ್ಯಕ್ಕೆ ಅನುದಾನ ಇಲ್ಲ: ಸರ್ಕಾರದ ವಿರುದ್ಧ ಖರ್ಗೆಯಿಂದ ಕಪ್ಪು ಪತ್ರ ಬಿಡುಗಡೆ

    ಮಂಗಳೂರಿನ ಉರ್ವದಲ್ಲಿರುವ ಅಶೋಕಾ ಅಪಾರ್ಟ್‌ ಮೆಂಟ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

  • ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ NSUI ಕಾರ್ಯಕರ್ತರ ಮಧ್ಯೆ ಕಿತ್ತಾಟ

    ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ NSUI ಕಾರ್ಯಕರ್ತರ ಮಧ್ಯೆ ಕಿತ್ತಾಟ

    ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್‌ ಹಮ್ಮಿಕೊಂಡಿದ್ದ ʼಸ್ವಾತಂತ್ರ್ಯ ನಡಿಗೆʼ ಕಾರ್ಯಕ್ರಮದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

    ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಮೇಲೆ ಕಾರ್ಯದರ್ಶಿ ದೀಪಕ್ ಗೌಡ, ಉಪಾಧ್ಯಕ್ಷ ಜಯಂದರ್ ಹಲ್ಲೆ ಮಾಡಿರುವ ಆರೋಪ ಬಂದಿದೆ. ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಕೀರ್ತಿ ಗಣೇಶ್ ದೂರು ನೀಡಿದ್ದಾರೆ.

    ಈ ದೂರಿಗೆ ಪ್ರತಿಯಾಗಿ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಕೀರ್ತಿ ಗಣೇಶ್ ವಿರುದ್ಧ ದೀಪಕ್ ಹಾಗೂ ಜಯಂದರ್  ದೂರು ನೀಡಿದ್ದಾರೆ.

    ಹಿರಿಯ ನಾಯಕರ ಸೂಚನೆಗೆ ಕ್ಯಾರೇ ಎನ್ನದೇ ಯುವ ನಾಯಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಬಗೆಹರಿಯಬೇಕಿದ್ದ ಜಗಳ ಈಗ ಪೊಲೀಸ್‌ ಠಾಣೆಯ ಅಂಗಳಕ್ಕೆ ಬಂದಿದೆ. ಇದನ್ನೂ ಓದಿ: ಮದರಸಾಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ – ಶೀಘ್ರವೇ ಸರ್ಕಾರದ ಆದೇಶ ಸಾಧ್ಯತೆ

    ಜಗಳ ನಡೆದಿದ್ದು ಯಾಕೆ?
    ಎನ್‌ಎಸ್‌ಯುಐ ಸಂಘಟನೆಯಲ್ಲಿ ಮೊದಲಿಂದಲೂ ಈ ಎರಡು ಬಣಗಳ ನಡುವೆ ಭಿನ್ನಾಭಿಪ್ರಾಯ ಇದೆ. ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಕೀರ್ತಿ ಗಣೇಶ್ ಡ್ಯಾನ್ಸ್ ಟೀಮ್ ಒಂದನ್ನು ಸಿದ್ದ ಮಾಡಿರುತ್ತಾರೆ. ಡ್ಯಾನ್ಸ್ ಟೀಮ್ ಪಾದಯಾತ್ರೆಯಲ್ಲಿ ಭಾಗಿಯಾಗಿರುತ್ತದೆ.

    ಈ ನಡಿಗೆ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ದೀಪಕ್ ಗೌಡ ಹಾಗೂ ಜಯಂದರ್ ಕರೆ ತಂದಿದ್ದಾರೆ. ಕೀರ್ತಿ ಗಣೇಶ್ ಗಮನಕ್ಕೆ ತರದೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕರೆತಂದಿದ್ದಾರೆ ಎನ್ನಲಾಗುತ್ತಿದೆ. ಈ ವಿಷಯಕ್ಕೆ ಉಭಯ ಬಣಗಳ ನಡುವೆ ಜಗಳ ನಡೆದಿದೆ.

    ಎಫ್‌ಐಆರ್‌ ದಾಖಲು:
    ಕಿರ್ತೀ ಗಣೇಶ್ ಕೊಟ್ಟಿರುವ ದೂರಿನ ಆಧಾರ ಮೇಲೆ ವಿವಿಪುರಂ ಪೊಲೀಸ್ ಠಾಣೆಯಲ್ಲಿ ದೀಪಕ್ ಗೌಡ , ಚೇತನ್, ದಿಲೀಪ್ ಸೇರಿ ಐವರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಆದರೆ ಕೀರ್ತಿ ಗಣೇಶ್ ವಿರುದ್ಧ ಬಸವನಗುಡಿಯಲ್ಲಿ ನೀಡಲಾದ ದೂರನ್ನು ಎನ್‌ಸಿಆರ್(ಗಂಭೀರವಲ್ಲದ ಪ್ರಕರಣ) ಮಾಡಲಾಗಿದೆ. ದೂರು ಕೊಡಲು ಮುಂದಾದಾಗ ಬಸವನಗುಡಿ ಠಾಣೆ ಮುಂದೆ ಗಲಾಟೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎನ್‌ಸಿಆರ್‌ ದಾಖಲಾಗಿದೆ.

    ಎಫ್‍ಐಆರ್ ಆದ ಬಳಿಕ ಡ್ಯಾನ್ಸ್ ಟೀಂ ಮುಂದಾಳತ್ವ ವಹಿಸಿದ್ದ ಪ್ರವೀಣ್ ಹುಡುಗರು ದೀಪಕ್ ಗೌಡ ಟೀಂನ ಹುಡುಗನಿಗೆ ವಿವಿಪುರಂ ಠಾಣಾ ವ್ಯಾಪ್ತಿಯ ಪೇಟ್ರೊಲ್ ಬಂಕ್ ಬಳಿ ಹಲ್ಲೆ ಮಾಡಿದ್ದಾರೆಂದು ಇಂದು ಪ್ರವೀಣ್ ಟೀಂ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿ.ಸಿ ನಾಗೇಶ್ ಮನೆ ಮುತ್ತಿಗೆ ಪ್ರಕರಣ – ಬಂಧಿತ 24 NSUI ಕಾರ್ಯಕರ್ತರ ಬಿಡುಗಡೆ

    ಬಿ.ಸಿ ನಾಗೇಶ್ ಮನೆ ಮುತ್ತಿಗೆ ಪ್ರಕರಣ – ಬಂಧಿತ 24 NSUI ಕಾರ್ಯಕರ್ತರ ಬಿಡುಗಡೆ

    ತುಮಕೂರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 24 ಜನ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‍ಎಸ್‍ಯುಐ) ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಗಿದೆ.

    ನೂತನ ಪಠ್ಯಪುಸ್ತಕ ವಿಚಾರವಾಗಿ ಎನ್‍ಎಸ್‍ಯುಐ ಕಾರ್ಯಕರ್ತರು ಕೆಲದಿನಗಳ ಹಿಂದೆ ಪ್ರತಿಭಟನೆ ನಡೆಸಿ ಬಿ.ಸಿ ನಾಗೇಶ್ ಮನೆಗೆ ನುಗ್ಗಲು ಪ್ರಯತ್ನಿಸಿ ಮನೆಯಲ್ಲಿದ್ದ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು. ಪ್ರಕರಣ ಸಂಬಂಧಿಸಿದಂತೆ ಎನ್‍ಎಸ್‍ಯುಐ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಈ ಪೈಕಿ ಇದೀಗ 24 ಜನ ಕಾರ್ಯಕರ್ತರು ತುಮಕೂರು ಜಿಲ್ಲಾ ಕೇಂದ್ರ ಕಾರಾಗೃಹದಿಂದ ಇಂದು ಬಿಡುಗಡೆಗೊಂಡಿದ್ದಾರೆ. ಇದನ್ನೂ ಓದಿ: ನಾಗೇಶ್‌ ಮನೆಗೆ ದಾಳಿ ನಡೆಸಿದವರು ತುಮಕೂರಿನವರಲ್ಲ : ಎಫ್‌ಐಆರ್‌ನಲ್ಲಿ ಏನಿದೆ?

    24 ಜನ ಎನ್‍ಎಸ್‍ಯುಐ ಕಾರ್ಯಕರ್ತರ ಬಿಡುಗಡೆ ಸುದ್ದಿ ತಿಳಿಯುತ್ತಿದ್ದಂತೆ ಜೈಲಿನ ಮುಂಭಾಗ ನೂರಾರು ಎನ್‍ಎಸ್‍ಯುಐ ಕಾರ್ಯಕರ್ತರು ಜಮಾಯಿಸಿದ್ದರು. ಆರೋಪಿಗಳು ಬಿಡುಗಡೆಗೊಂಡು ಜೈಲಿನಿಂದ ಹೊರಬರುತ್ತಿದ್ದಂತೆ, ಜೈಲಿನ ಮುಂಭಾಗ ಎನ್‍ಎಸ್‍ಯುಐ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದ್ದಾರೆ.

  • NSUI ಕಾರ್ಯಕರ್ತರ ಬಂಧನಕ್ಕೆ ವಿರೋಧ – ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ

    NSUI ಕಾರ್ಯಕರ್ತರ ಬಂಧನಕ್ಕೆ ವಿರೋಧ – ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ

    ಬೆಂಗಳೂರು: ತುಮಕೂರಿನ ತಿಪಟೂರಿನಲ್ಲಿ ಎನ್‍ಎಸ್‍ಯುಐ ಕಾರ್ಯಕರ್ತರ ಬಂಧನ ಖಂಡಿಸಿ ಒಂದು ಕಡೆ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಯೂತ್ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನಲ್ಲಿಂದು ನಡೆದ ಯೂತ್ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಫುಲ್ ಹೈಡ್ರಾಮಾನೇ ನಡೆಯಿತು.

    ತಿಪಟೂರಿನಲ್ಲಿ ಸಚಿವ ಬಿ.ಸಿ. ನಾಗೇಶ್ ನಿವಾಸದ ಆವರಣಕ್ಕೇ ನುಗ್ಗಿ ಪ್ರತಿಭಟಿಸಿದ ಎನ್‍ಎಸ್‍ಯುಐ ಕಾರ್ಯಕರ್ತರ ಬಂಧನ ಖಂಡಿಸಿ ಇಂದು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಬೀದಿಗಿಳಿದಿದ್ದರು. ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಮತ್ತು ರಾಜ್ಯಾಧ್ಯಕ್ಷ ನಳಪಾಡ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಲಾಯಿತು. ಆರ್‍ಎಸ್‍ಎಸ್ ಸಮವಸ್ತ್ರ ಸುಟ್ಟಿದ್ದಕ್ಕೆ ಜೈಲಿಗೆ ಹಾಕಿದ್ದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇಬ್ಬರೂ ಕಿಡಿಕಾರಿದರು. ಆರ್‌ಎಸ್‌ಎಸ್‌ ಸಮವಸ್ತ್ರ ತೊಟ್ಟ ಪ್ರತಿಕೃತಿ ಪ್ರದರ್ಶಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

    ಇದೇ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಮೊಹಮದ್ ನಳಪಾಡ್ ಬಸ್‍ನ ಕಿಟಕಿಯಿಂದ ಜಿಗಿಯುವ ಮೂಲಕ ಹೈಡ್ರಾಮಾ ಸೃಷ್ಟಿಸಿದರು. ಪೊಲೀಸರ ಬಂಧನ ಖಂಡಿಸಿ ಬಸ್‍ನಿಂದ ಜಿಗಿದ ನಳಪಾಡ್ ರಸ್ತೆ ಮಧ್ಯೆಯೇ ಕೂತು ಧಿಕ್ಕಾರ ಕೂಗಲಾರಂಭಿಸಿದರು. ಪೊಲೀಸರು ಮತ್ತೊಮ್ಮೆ ಬಲವಂತವಾಗಿ ನಳಪಾಡ್‍ನನ್ನು ಬಸ್‍ನೊಳಗೆ ತಳ್ಳಿ ಕರೆದೊಯ್ದರು.

    ಪ್ರತಿಭಟನೆಯ ಅಂತ್ಯದಲ್ಲಿ ಅರ್ಧ ನಾಡಗೀತೆ ಹಾಡುವ ಮೂಲಕ ನಾಡಗೀತೆಗೆ ಅವಮಾನ ಮಾಡಲಾಯಿತು. ಒಟ್ಟಿನಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಾಮಕಾವಸ್ತೆಗೆ ಮಾಡಿದಂತಿತ್ತು. ಇದನ್ನೂ ಓದಿ: ಬೀದರ್ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್, ಆಂದೋಲನ ಶ್ರೀಗಳಿಗೆ ಬ್ಯಾನ್

  • ಒಂದು ಚಡ್ಡಿ ಸುಟ್ಟಿದ್ದಕ್ಕೆ ಅರೆಸ್ಟ್ ಮಾಡ್ತೀರಾ? ಎಲ್ಲಾ ಜಿಲ್ಲೆಗಳಲ್ಲೂ ಚಡ್ಡಿಗಳನ್ನು ಸುಡ್ತೀವಿ: ನಲಪಾಡ್ ಸವಾಲು

    ಒಂದು ಚಡ್ಡಿ ಸುಟ್ಟಿದ್ದಕ್ಕೆ ಅರೆಸ್ಟ್ ಮಾಡ್ತೀರಾ? ಎಲ್ಲಾ ಜಿಲ್ಲೆಗಳಲ್ಲೂ ಚಡ್ಡಿಗಳನ್ನು ಸುಡ್ತೀವಿ: ನಲಪಾಡ್ ಸವಾಲು

    ಬೆಂಗಳೂರು: ಒಂದು ಚಡ್ಡಿ ಸುಟ್ಟಿದ್ದಕ್ಕೆ ಅರೆಸ್ಟ್ ಮಾಡ್ತೀರಾ ಅಲ್ವಾ? ಎಲ್ಲಾ ಜಿಲ್ಲೆಗಳಲ್ಲೂ ಚಡ್ಡಿಗಳನ್ನು ಸುಡ್ತೀವಿ. ಎಷ್ಟು ಜನರನ್ನು ಅರೆಸ್ಟ್ ಮಾಡ್ತೀರಾ ನೋಡೋಣ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

    ಆರ್‌ಎಸ್‌ಎಸ್‌ ಚಡ್ಡಿ ಸುಟ್ಟು ಪ್ರತಿಭಟನೆ ಮಾಡಿದ ಕಾರಣಕ್ಕೆ ಎನ್‍ಎಸ್‍ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಮತ್ತಿತರರ ಬಂಧನ ವಿರೋಧಿಸಿ ಯೂತ್ ಕಾಂಗ್ರೆಸ್ ವತಿಯಿಂದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ನಲಪಾಡ್, ಚಡ್ಡಿಗೆ ಬೆಂಕಿ ಹಾಕಿದ್ದಕ್ಕೆ ಮನೆ ಸುಡಲು ಹೋದ್ರು ಅಂತ ಆರೋಪ ಮಾಡುತ್ತಿದ್ದಾರೆ. ಚಡ್ಡಿಯ ಬೆಂಕಿಯಿಂದ ಮನೆ ಸುಡಕ್ಕಾಗುತ್ತಾ? ಆರ್‌ಎಸ್‌ಎಸ್‌ ದೇಶವನ್ನು ಸುಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜವೇ: ಎನ್‍ಎಸ್‍ಯುಐ ಉಪಾಧ್ಯಕ್ಷೆ

    ಮೊದಲು ಹಿಜಬ್ ಎಂದು ಬಿಜೆಪಿಯವರು ಮುಸ್ಲಿಮರನ್ನು ಒಡೆದರು. ನಂತರ ಕ್ರೈಸ್ತರು, ದಲಿತರನ್ನು ಒಡೆದರು. ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣ ಗುರುವನ್ನೂ ಕೂಡ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಿಟ್ಟಿಲ್ಲ. ಆರ್‌ಎಸ್‌ಎಸ್‌ನವರು ಸಂವಿಧಾನದ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಆರ್‌ಎಸ್‌ಎಸ್‌ನವರಿಗೆ ಎಲ್ಲರೂ ಒಂದಾಗಿ ಇರೋಣ ಎಂಬ ಮನಸ್ಥಿತಿ ಇಲ್ಲ. ಆರ್‌ಎಸ್‌ಎಸ್‌ಸ್‍ನವರು ನಮ್ಮ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ನನ್ನ ಮಿತ್ರ ಒಂದೇ ಒಂದು ಚಡ್ಡಿಗೆ ಬೆಂಕಿ ಇಟ್ಟಿದ್ದಕ್ಕೆ ಮನೆಗೆ ಬೆಂಕಿ ಇಟ್ಟ ಎಂದು ಬಂಧಿಸುತ್ತಾರೆ. ಆ ಚಡ್ಡಿಯ ಪವರ್ ಈ ದೇಶವನ್ನು ಒಡೆಯುವ ಪವರ್. ಚಡ್ಡಿಗೆ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಸಾಮರ್ಥ್ಯ ಇಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಶಕ್ತಿ ಇರುವುದು ಕಾಂಗ್ರೆಸ್‍ಗೆ ಮಾತ್ರ. ಈ ಸಮಾಜವನ್ನು ಒಡೆಯುವ ಸರ್ಕಾರ ಇದೆ ಇದನ್ನು ಕಿತ್ತೊಗೆಯುವುದು ನಮ್ಮ ಮುಂದಿರುವ ಮೊದಲ ಗುರಿ ಎಂದು ಕರೆ ನೀಡಿದರು. ಇದನ್ನೂ ಓದಿ: ಮದರಸಾ ತೆರವು ಮಾಡದೆ ಇದ್ದರೆ ನಾವೇ ಅವರ ಕೊರಳಪಟ್ಟಿ ಹಿಡಿದು ಹೊರ ಹಾಕ್ತಿವಿ: ಹಿಂದೂ ಸಂಘಟನೆಗಳು

    ನಾವು ಇಲ್ಲಿಂದ ಗೃಹ ಸಚಿವರ ಮನೆಗೆ ಹೋಗಿ ಮುತ್ತಿಗೆ ಹಾಕ್ತೇವೆ. ಪೊಲೀಸರು ಬಂಧಿಸಬಹುದು, ಬಂಧಿಸಲಿ ಎಷ್ಟು ಜನ ನಲಪಾಡ್, ಶ್ರೀನಿವಾಸರನ್ನು ಬಂಧಿಸ್ತಾರೆ, ಬಂಧಿಸಲಿ. ಇನ್ನಷ್ಟು ಜನ ನಲಪಾಡ್, ಶ್ರೀನಿವಾಸ್ ಹುಟ್ಟಿ ಬರುತ್ತಾರೆ. ಇದು ರಾಹುಲ್ ಗಾಂಧಿ ಕಂಡಂತಹ ಯುವ ಕಾಂಗ್ರೆಸ್ ಎಂದರು.

  • ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜವೇ: ಎನ್‍ಎಸ್‍ಯುಐ ಉಪಾಧ್ಯಕ್ಷೆ

    ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜವೇ: ಎನ್‍ಎಸ್‍ಯುಐ ಉಪಾಧ್ಯಕ್ಷೆ

    ಬೆಂಗಳೂರು: ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜಾ ನಾ.. ಎಂದು ಎನ್‍ಎಸ್‍ಯುಐ ಉಪಾಧ್ಯಕ್ಷೆ ಭವ್ಯ ಪ್ರಶ್ನೆ ಮಾಡಿದ್ದಾರೆ.

    ಪಠ್ಯಪುಸ್ತಕ ಪರಿಶೀಲನಾ ಸಮಿತಿ ನಿರ್ಧಾರ ವಿರೋಧಿಸಿ ತುಮಕೂರಿನಲ್ಲಿ ಪ್ರತಿಭಟನೆ ಮಾಡಿದಕ್ಕೆ ಎನ್‍ಎಸ್‍ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಇಂದು ಪ್ರತಿಭಟನಾ ಸಭೆಯನ್ನು ಯುವ ಕಾಂಗ್ರೆಸ್ ಆಯೋಜಿಸಿತ್ತು. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಮೇಲೆ ದಾಳಿ – 177 ಶಿಕ್ಷಕರ ವರ್ಗಾವಣೆ

    ಪಠ್ಯ ಪರಿಷ್ಕರಣೆ ವೇಳೆ ಬಸವಣ್ಣ, ಕುವೆಂಪು, ನಾರಾಯಣಗುರು ಮತ್ತು ಟಿಪ್ಪು ಸುಲ್ತಾನ್ ಅವರ ವಿಷಯವನ್ನು ಬಿಟ್ಟು, ಕೆಲಸಕ್ಕೆ ಬಾರದೆ ಇರುವ ವಿಷಯಗಳನ್ನು ಪಠ್ಯದಲ್ಲಿ ಸೇರಿಸಲಾಗಿದೆ. ಈ ಮೂಲಕ ಯುವಕರ ಭವಿಷ್ಯ ಹಾಳು ಮಾಡಲಾಗುತ್ತಿದೆ. ಆ ರೀತಿ ನಡೆಯಬಾರದು ಎಂದು ಕೀರ್ತಿ ಗಣೇಶ್ ಅವರು ತಮ್ಮ ಎನ್‍ಎಸ್‍ಯುಐ ಪದಾಧಿಕಾರಿಗಳ ಜೊತೆ ಪ್ರತಿಭಟನೆ ಮಾಡುವುದಕ್ಕೆ ಹೋದ್ರೆ ಅವರನ್ನು ಜೈಲಿಗೆ ಹಾಕಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಆರ್‍ಎಸ್‍ಎಸ್ ಚಡ್ಡಿಯನ್ನು ಸುಟ್ಟಿದ್ದಕ್ಕೆ ಕೀರ್ತಿ ಗಣೇಶ್ ಅವರನ್ನು ಜೈಲಿಗೆ ಹಾಕಿದ್ದಾರೆ. ಇವತ್ತು ಕೇವಲ ತುಮಕೂರಿನಲ್ಲಿ ಸುಟ್ಟಿದ್ದಾರೆ. ಆದರೆ ಮುಂದೆ ಯುವ ಕಾಂಗ್ರೆಸಿಗರು ಪ್ರತಿಯೊಂದು ಜಿಲ್ಲೆಯಲ್ಲಿಯೂ ಆರ್‌ಎಸ್‍ಎಸ್ ಚಡ್ಡಿಯನ್ನು ಸುಡುತ್ತಾರೆ ನೋಡುತ್ತೀರಿ. ಎಷ್ಟು ಜನಗಳನ್ನು ಬಂಧಿಸುತ್ತೀರಾ ಬಂಧಿಸಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ:  ಕೊರೊನಾ ಭೀತಿ: ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ 

    ಕೆ.ಎಸ್.ಈಶ್ವರಪ್ಪ ಅವರು ಕೆಂಪುಕೋಟೆ ಮೇಲೆ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಹೇಳಿದ್ದರು. ಆದರೆ ಮುಂದಿನ ದಿನಗಳಲ್ಲಿ ಚಡ್ಡಿ ಹಾರಿಸುವುದಿಲ್ಲ ಎಂಬುದಕ್ಕೆ ಏನು ಗ್ಯಾರಂಟಿ? ಆದರೆ ಇದೇ ರೀತಿ ಬೇರೆ ಯಾರೇ ಮಾತನಾಡಿದ್ರೂ ಅವರಿಗೆ ರಾಷ್ಟ್ರದ್ರೋಹಿ ಎಂದು ಪಟ್ಟಕಟ್ಟಿ ಜೈಲಿಗೆ ಕಳುಹಿಸುತ್ತಿದ್ದರು ಎಂದು ಟೀಕಿಸಿದ್ದಾರೆ.

  • ಪಾಪ ಹುಡುಗರು ಭಾವುಟ ತಗೊಂಡೋಗಿದ್ದಾರೆ, ಅವರೇನು ಪೆಟ್ರೋಲ್ ತಂದಿದ್ರಾ? – ರಾಮಲಿಂಗಾ ರೆಡ್ಡಿ ಗರಂ

    ಪಾಪ ಹುಡುಗರು ಭಾವುಟ ತಗೊಂಡೋಗಿದ್ದಾರೆ, ಅವರೇನು ಪೆಟ್ರೋಲ್ ತಂದಿದ್ರಾ? – ರಾಮಲಿಂಗಾ ರೆಡ್ಡಿ ಗರಂ

    ಬೆಂಗಳೂರು: ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು. ಅದರಲ್ಲಿ ತಪ್ಪೇನು ಇಲ್ಲ. ಪಾಪ ಹುಡುಗರು ಭಾವುಟ ತಗೊಂಡು ಹೋಗಿದ್ದಾರೆ ಅದರಲ್ಲಿ ತಪ್ಪೇನಿದೆ? ಎಂದು ಮಾಜಿ ಸಚಿವರೂ ಆಗಿರುವ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಟೀಕಿಸಿದರು.

    Ramalinga Reddy

    ಎನ್‌ಎಸ್‌ಯುಐ ಕಾರ್ಯಕರ್ತರು ಸಚಿವ ನಾಗೇಶ್ ಮನೆಗೆ ಬೆಂಕಿ ಹಚ್ಚಲು ಬಂದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರೇನು ಪೆಟ್ರೋಲ್ ತಗೊಂಡು ಹೋಗಿದ್ರಾ? ಪಾಪ ಭಾವುಟ ತಗೊಂಡು ಹೋಗಿದ್ದಾರೆ. ಪ್ರತಿಭಟನೆ ಮಾಡೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಗೆಲ್ಲುವುದು ಬೇಡ ರಾಜ್ಯದ ಜನರನ್ನು ಉಳಿಸಲು ಗೆಲ್ಲೋಣ: ಸಿದ್ದರಾಮಯ್ಯ

    Ramalinga Reddy

    ಬಿಜೆಪಿಯವರು ಹುಟ್ಟು ಸುಳ್ಳುಗಾರರು, ಮಾಡುವುದೆಲ್ಲ ಕಚಡಾ ಕೆಲಸ. ಅವರ ಬಾಯಲ್ಲಿ ಸುಳ್ಳು ಬಿಟ್ಟು ಬೇರೇನೂ ಬರಲ್ಲ. ಸುಮ್ಮನೆ ಕಾಂಗ್ರೆಸ್‌ನವರ ಮೇಲೆ ಮುಖ್ಯವಾಗಿ ವಿದ್ಯಾರ್ಥಿಗಳ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ. ಪ್ರತಿಭಟನೆ ಮಾಡಲು ಬಂದ ಹುಡುಗರನ್ನ ಮನೆಗೆ ಬೆಂಕಿ ಹಚ್ಚಲು ಬಂದಿದ್ದಾರೆ ಅಂತ ಸುಳ್ಳು ಹೇಳಿದ್ದಾರೆ. ಈ ದೇಶವನ್ನ ಇನ್ನೂ ಎಲ್ಲಿಗೆ ತಗೊಂಡು ಹೋಗ್ತಾರೆ ಅನ್ನೋದೆ ಗೊತ್ತಿಲ್ಲ ಎಂದು ಆತಂಕಪಟ್ಟರು. ಇದನ್ನೂ ಓದಿ: ಸುಪ್ರೀಂ ಆದೇಶ ಪಾಲಿಸದವರ ಮೇಲೆ ಗುಂಡು ಹೊಡಿತೀವಿ: ಮುತಾಲಿಕ್