Tag: nuclear

  • ಪಾಕ್‌ ನ್ಯೂಕ್‌ ವೆಪನ್‌ ಫೆಸಿಲಿಟಿ ಮೇಲೆ ದಾಳಿಯಾಗಿದೆ, ಭಾರತಕ್ಕೆ ಜಯ ಸಿಕ್ಕಿದೆ: ಟಾಮ್‌ ಕೂಪರ್‌

    ಪಾಕ್‌ ನ್ಯೂಕ್‌ ವೆಪನ್‌ ಫೆಸಿಲಿಟಿ ಮೇಲೆ ದಾಳಿಯಾಗಿದೆ, ಭಾರತಕ್ಕೆ ಜಯ ಸಿಕ್ಕಿದೆ: ಟಾಮ್‌ ಕೂಪರ್‌

    ನವದೆಹಲಿ: ಮೇ 10 ರಂದು ಭಾರತೀಯ ವಾಯುಸೇನೆ (IAF) ಪಾಕ್‌ ವಾಯುನೆಲೆ (Pakistan Air Bases) ಮಾತ್ರವಲ್ಲ ಪರಮಾಣು ಶಸ್ತ್ರಾಸ್ತ್ರ ಸಂಗ್ರಹಣಾ ಘಟಕ(Nuclear Weapons Facility) ಮೇಲೆ ಕ್ಷಿಪಣಿ ದಾಳಿ ನಡೆಸಿ ಎರಡೂ ಪ್ರವೇಶದ್ವಾರಗಳನ್ನು ಹೊಡೆದು ಹಾಕಿತ್ತು ಎಂದು ಮಧ್ಯಪ್ರಾಚ್ಯ ಮತ್ತು ದಕ್ಷಿಣ ಏಷ್ಯಾ ವಾಯು ಯುದ್ಧಗಳ ವಿಶ್ವ ಪ್ರಸಿದ್ಧ ಇತಿಹಾಸಕಾರ ಟಾಮ್ ಕೂಪರ್ (Tom Cooper) ಹೇಳಿದ್ದಾರೆ.

    ಖಾಸಗಿ ಸುದ್ದಿವಾಹಿನಿಯ ಜೊತೆ ಮಾತನಾಡಿದ ಅವರು, ಒಂದು ಕಡೆ ಪರಮಾಣು ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯಗಳ ಮೇಲೆ ಬಾಂಬ್ ದಾಳಿ ನಡೆಸುತ್ತಿರುವಾಗ ಮತ್ತೊಂದು ಕಡೆ ಪಾಕಿಸ್ತಾನಕ್ಕೆ ದಾಳಿ ಮಾಡುವ ಸಾಮರ್ಥ್ಯ ಇಲ್ಲದೇ ಇದ್ದಾಗ ನನ್ನ ಅಭಿಪ್ರಾಯದಲ್ಲಿ ಭಾರತದ ಸ್ಪಷ್ಟವಾಗಿ ಜಯ ದಾಖಲಿಸಿದೆ ಎಂದು ಅವರು ವಿಶ್ಲೇಷಿಸಿದರು. ಇದನ್ನೂ ಓದಿ: ಅಣ್ವಸ್ತ್ರಗಳಿರೋ ಬೆಟ್ಟದ ಮೇಲೆ ದಾಳಿ – ಬೆದರಿದ ಪಾಕ್‌, ಅಮೆರಿಕಕ್ಕೂ ಶಾಕ್‌!

    ಭಾರತೀಯ ವಾಯುಪಡೆಯು ಪಾಕಿಸ್ತಾನದಲ್ಲಿರುವ ವಾಯು ನೆಲೆಗಳ ಮೇಲೆ ಸ್ವತಂತ್ರವಾಗಿ ದಾಳಿ ಮಾಡಿತ್ತು. ಆದರೆ ಪಾಕಿಸ್ತಾನಕ್ಕೆ ಅದೇ ರೀತಿಯ ದಾಳಿ ಮಾಡಲು ಸಾಧ್ಯವಾಗಲಿಲ್ಲ. ಅಂದರೆ ಪಾಕಿಸ್ತಾನದ ಪ್ರತಿಬಂಧಕ ವಿಫಲವಾಗಿದೆ ಮತ್ತು ಅದರ ವಾಯು ರಕ್ಷಣಾ ವ್ಯವಸ್ಥೆಗಳು ಕುಸಿದಿದೆ ಎಂದರ್ಥ ಎಂದು ಅವರು ವಿವರಿಸಿದರು. ಇದನ್ನೂ ಓದಿ: ಅಣ್ವಸ್ತ್ರ ಸಂಗ್ರಹ ಇರೋ ಬೆಟ್ಟದ ಮೇಲೆ ದಾಳಿ ಚರ್ಚೆ – ಪತ್ರಕರ್ತನಿಗೆ ಥ್ಯಾಂಕ್ಸ್‌ ಹೇಳಿದ ವಾಯುಸೇನೆ

    ಮೇ 10 ರಂದು, ಐಎಎಫ್ ಪಾಕ್ ವಾಯುಪಡೆಯ ನೆಲೆಗಳನ್ನು ಮಾತ್ರವಲ್ಲದೆ ಸರ್ಗೋಧಾ ಸಂಕೀರ್ಣದ ಭಾಗವಾಗಿರುವ ಮುಷಾಫ್ ವಾಯುನೆಲೆಯಲ್ಲಿರುವ ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರ ಸಂಗ್ರಹಣಾ ಸ್ಥಳದ ಎರಡೂ ಪ್ರವೇಶದ್ವಾರಗಳನ್ನೂ ಸಹ ಹೊಡೆದು ಹಾಕಿತ್ತು ಎಂದು ಹೇಳಿದರು. ಇದನ್ನೂ ಓದಿ: ಪಾಕ್‌ನಲ್ಲಿ ಪರಮಾಣು ವಿಕಿರಣ ಸೋರಿಕೆ ಆಗ್ತಿದ್ಯಾ?

    ಪಾಕಿಸ್ತಾನಿಗಳು ಸುಲಭವಾಗಿ ತಲೆಬಾಗುವ ಅಥವಾ ಸೋಲನ್ನು ಬಹಿರಂಗವಾಗಿ ಒಪ್ಪಿಕೊಳ್ಳುವ ಸ್ಥಿತಿಯಲ್ಲಿ ಇರಲಿಲ್ಲ. ಯಾವಾಗ ವಾಯುನೆಲೆಯ ಜೊತೆಗೆ ಶಸ್ತ್ರಾಸ್ತ್ರ ಸಂಗ್ರಹಣಾ ಘಟಕದ ಮೇಲೆ ಭಾರತೀಯ ಕ್ಷಿಪಣಿಗಳು ದಾಳಿ ಮಾಡಿದಾಗ ಬೇರೆ ಯಾವುದೇ ಆಯ್ಕೆ ಇರಲಿಲ್ಲ.  ಪಾಕಿಸ್ತಾನ ಕರೆ ಮಾಡಿ ದಾಳಿ ನಿಲ್ಲಿಸಲು ಮನವಿ ಮಾಡಿತು ಎಂದು ತಿಳಿಸಿದರು.

  • ಭಾರತದ ಮೇಲಿನ ಪರಮಾಣು ನಿರ್ಬಂಧ ತೆಗೆದ ಅಮೆರಿಕ – ಏನಿದರ ಮಹತ್ವ?

    ಭಾರತದ ಮೇಲಿನ ಪರಮಾಣು ನಿರ್ಬಂಧ ತೆಗೆದ ಅಮೆರಿಕ – ಏನಿದರ ಮಹತ್ವ?

    ನಾಗರಿಕ ಪರಮಾಣು ಸಹಕಾರವನ್ನು (Civil nuclear cooperation) ಉತ್ತೇಜಿಸುವ ಸಲುವಾಗಿ ಭಾರತ ಸರ್ಕಾರದ ಪರಮಾಣು ಕೇಂದ್ರಗಳ ಮೇಲಿನ ನಿರ್ಬಂಧಗಳನ್ನು ತಗೆದು ಹಾಕುವುದಾಗಿ ಅಮೆರಿಕದ ರಕ್ಷಣಾ ಸಲಹೆಗಾರ (US Defense Adviser) ಜೇಕ್ ಸುಲ್ಲಿವಾನ್ (Jake Sullivan) ತಿಳಿಸಿದ್ದಾರೆ.

    ಭಾರತಕ್ಕೆ ಆಗಮಿಸಿದ್ದ ನಿರ್ಗಮಿತ ಅಮೆರಿಕ ರಕ್ಷಣಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ತಮ್ಮ ಎರಡು ದಿನಗಳ ಭಾರತ ಭೇಟಿಯಲ್ಲಿ ಪರಮಾಣು ತಂತ್ರಜ್ಞಾನದ ಕೆಲಸ ಮಾಡುತ್ತಿರುವ ಭಾರತದ ಸಂಸ್ಥೆಗಳ ಮೇಲೆ ಅಮೆರಿಕ ಸರ್ಕಾರ ಹೇರಿದ್ದ ನಿರ್ಬಂಧಗಳನ್ನು ತೆಗದುಹಾಕುವುದಾಗಿ ತಿಳಿಸಿದ್ದರು. ಈ ಕುರಿತು ಮಾತನಾಡಿದ ಅವರು ನಾನು ರಕ್ಷಣಾ ಸಲಹೆಗಾರನಾಗಿ ಇದು ನನ್ನ ಕೊನೆಯ ವಿದೇಶ ಪ್ರವಾಸವಾಗಿದೆ. ನನ್ನ ಅಂತಿಮ ಆಡಳಿತ್ಮಾಕ ವಿದೇಶ ಪ್ರವಾಸವು ಭಾರತಕ್ಕೆ ಭೇಟಿ ನೀಡುವುದರಿಂದ ಕೊನೆಗೊಳ್ಳುತ್ತಿದೆ. ಇನ್ನೂ, ಭಾರತದ ಪರಮಾಣು ಕೇಂದ್ರಗಳ ಮೇಲಿನ ನಿರ್ಬಂಧವನ್ನು ತೆರವು ಮಾಡುತ್ತಿರುವುದು ನನ್ನ ಪಾಲಿನ ಐತಿಹಾಸಿಕ ಸಾಧನೆಯಾಗಿದೆ ಎಂದಿದ್ದರು. ಈ ಮೂಲಕ ಅಮೆರಿಕ ಮತ್ತು ಭಾರತ ತಂತ್ರಜ್ಞಾನ ಹಾಗೂ ಬಾಹ್ಯಾಕಾಶ ಸಂಶೋಧನೆಯಲ್ಲಿ ದೊಡ್ಡ ಹೆಜ್ಜೆ ಇಡಲು ಸಜ್ಜಾಗಿವೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದರು.

    2000 ದಲ್ಲಿ ಭಾರತವು ಪರಮಾಣು ರಾಷ್ಟ್ರವಾದಗಿನಿಂದಲೂ ತಕರಾರು ತಗೆದಿರುವ ಅಮೆರಿಕವು ಭಾರತದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿತ್ತು. ಕಾಲನಂತರ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರು ಅಮೆರಿಕದ ಮಾಜಿ ಅಧ್ಯಕ್ಷ ಬುಷ್ ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೂ ಸಹ ಪರಮಾಣು ಕುರಿತು ಅಮೆರಿಕವು ಭಾರತದ ಮೇಲೆ ನಿರ್ಬಂಧವಿತ್ತು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್ ಅವರ ಪ್ರಯತ್ನದಿಂದ ಭಾರತದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಮೇಲಿನ ನಿರ್ಬಂಧ ತೆಗೆಯಲಾಗಿದೆ. ಇದರೊಂದಿಗೆ ಭಾರತದ ಪರಮಾಣು ಸಂಸ್ಥೆಗಳು ಅಂತರಾಷ್ಟ್ರೀಯ ಸಂಸ್ಥೆಗಳು ಮತ್ತು ವಿಶ್ವದ ಇತರೆ ರಾಷ್ಟ್ರಗಳ ಪರಮಾಣು ಸಂಸ್ಥೆಗಳೊಂದಿಗೆ ವ್ಯವಹಾರ ನಡೆಸಲು ಅನುಕೂಲವಾಗಲಿದೆ. 

    ಅಮೆರಿಕದಿಂದ ನಿರ್ಬಂಧ ಹೊಂದಿರುವ ಕೇಂದ್ರಗಳು: ಬಾಬಾ ಪರಮಾಣು ಸಂಶೋಧನಾ ಕೇಂದ್ರ (BARC), ಇಂದಿರಾ ಗಾಂಧಿ ಪರಮಾಣು ಸಂಶೋಧನಾ ಕೇಂದ್ರ (IGCAR), ಅಭರ್​ ಟೆಕ್ನಾಲಜೀಸ್ ಎಂಡ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಅಗ್ರಿಮ್ ಏವಿಯೇಷನ್ ​​ಪ್ರೈವೇಟ್ ಲಿಮಿಟೆಡ್, ಅನಲಾಗ್ ಟೆಕ್ನಾಲಜಿ ಲಿಮಿಟೆಡ್

    ಈ ಕೇಂದ್ರಗಳನ್ನು ನಿರ್ಬಂಧದ ಪಟ್ಟಿಯಿಂದ ತೆಗೆದುಹಾಕುವುದರೊಂದಿಗೆ ಭಾರತೀಯ ಸಂಸ್ಥೆಗಳು ಅಮೆರಿಕದ ಸಂಸ್ಥೆಗಳೊಂದಿಗೆ ಕೆಲಸ ಮಾಡಬಹುದಾಗಿದೆ. ಇದರೊಂದಿಗೆ ರಕ್ಷಣಾ ವಲಯ ಸೇರಿದಂತೆ ಹಲವಾರು ಉದ್ದೇಶಗಳಿಗಾಗಿ ಪರಮಾಣು ತಂತ್ರಜ್ಞಾನದ ಪ್ರವೇಶವನ್ನು ಪಡೆಯಬಹುದಾಗಿದೆ.  

    ಅಮೆರಿಕ ಕೆಂಗಣ್ಣಿಗೆ ಗುರಿಯಾಗಿದ್ದ ಆಪರೇಷನ್ ಶಕ್ತಿ: ಭಾರತ ಮೇ 1998 ರಲ್ಲಿ ರಾಜಸ್ಥಾನದ ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆಗಳನ್ನು ನಡೆಸಿತ್ತು. ಆಪರೇಷನ್ ಶಕ್ತಿ ಎಂಬ ಹೆಸರಿನಲ್ಲಿ ನಡೆದಿದ್ದ ಈ ಕಾರ್ಯಾಚರಣೆಯು ಹಲವಾರು ದೇಶಗಳ ಕೆಂಗಣ್ಣಿಗೆ ಕಾರಣವಾಗಿತ್ತು. ಇದಕ್ಕೆ ಅಮೆರಿಕ ಸುಮಾರು 200ಕ್ಕೂ ಹೆಚ್ಚು ಭಾರತೀಯ ಸಂಸ್ಥೆಗಳ ಮೇಲೆ ನಿರ್ಬಂಧಗಳನ್ನು ಹೇರುವ ಮೂಲಕ ಪ್ರತಿಕ್ರಿಯಿಸಿತ್ತು. ಅಲ್ಲದೇ ಹಲವಾರು ದೇಶಗಳಿಂದ ಆರ್ಥಿಕ ನಿರ್ಬಂಧಗಳಿಗೆ ಕಾರಣವಾಗಿತ್ತು. 

    1998ರ ಪರಮಾಣು ಪರೀಕ್ಷೆ ಬಳಿಕ, ಭಾರತ ಸರ್ಕಾರ ತನ್ನ ಬಳಿ ಈಗ ಪರಮಾಣು ಶಸ್ತ್ರಾಸ್ತ್ರಗಳಿವೆ ಎಂದು ಜಗತ್ತಿಗೆ ಘೋಷಿಸಿತ್ತು. ಮೇ 11, 1998ರಂದು ಭಾರತ ಪೋಖ್ರಾನ್‌ನಲ್ಲಿರುವ ತನ್ನ ಮಿಲಿಟರಿ ಪರೀಕ್ಷಾ ನೆಲೆಯಲ್ಲಿ ಮೂರು ಪರಮಾಣು ಬಾಂಬ್‌ಗಳನ್ನು ಯಶಸ್ವಿಯಾಗಿ ಪರೀಕ್ಷಿಸಿತ್ತು. ಅದಾದ ಬಳಿಕ, ಮೇ 13ರಂದು ಭಾರತ ಇನ್ನೂ ಎರಡು ಬಾಂಬ್‌ಗಳನ್ನು ಪರೀಕ್ಷಿಸಲಾಗಿತ್ತು. ಭಾರತದ ಕೆಲವು ಪರಮಾಣು ಬಾಂಬ್‌ಗಳಂತೂ 200,000 ಟನ್‌ಗಳಷ್ಟು (200 ಕಿಲೋ ಟನ್) ಶಕ್ತಿಯುತವಾಗಿವೆ. ಈ ಪರೀಕ್ಷೆಗಳು ಭಾರತವೂ ಸಹ ಶಕ್ತಿಶಾಲಿ ಪರಮಾಣು ಶಸ್ತ್ರಗಳನ್ನು ತಯಾರಿಸಬಲ್ಲದು ಎಂಬ ಸಂದೇಶವನ್ನು ಜಗತ್ತಿಗೆ ಸಾರಿತ್ತು.

    ಭಾರತದ ಅಣ್ವಸ್ತ್ರ ಸಾಮರ್ಥ್ಯದ ಅನಾವರಣ: ರಾಜಕೀಯ ಅಸ್ಥಿರತೆ ಮತ್ತು ಅಣ್ವಸ್ತ್ರ ಪರೀಕ್ಷೆ ನಡೆಸುವ ಇಚ್ಛಾಶಕ್ತಿಯ ಕೊರತೆಗಳ ನಡುವೆಯೇ ಒಂದಷ್ಟು ವರ್ಷಗಳು ಕಳೆದು ಹೋಗಿದ್ದವು. ಆದರೆ ಅದೃಷ್ಟವಶಾತ್ 1998ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ನಾಯಕತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಸರ್ಕಾರ ರಚಿಸಿತ್ತು. ಅಧಿಕಾರಕ್ಕೆ ಬರುವ ಮುನ್ನ, ಎನ್‌ಡಿಎ ಭಾರತದ ಮಿಲಿಟರಿ ಸಾಮರ್ಥ್ಯಕ್ಕೆ ಅಣ್ವಸ್ತ್ರ ಸಾಮರ್ಥ್ಯವನ್ನೂ ಸೇರಿಸುವುದನ್ನು ತನ್ನ ಚುನಾವಣಾ ಪ್ರಣಾಳಿಕೆಯ ಪ್ರಮುಖ ಅಂಶವಾಗಿಸಿತ್ತು.

    1998ರಲ್ಲಿ, ಚೀನಾದ ಬೆಂಬಲದೊಡನೆ ಅಭಿವೃದ್ಧಿಪಡಿಸಿದ್ದ ಘೋರಿ ಕ್ಷಿಪಣಿಯನ್ನು ಪಾಕಿಸ್ತಾನ ಯಶಸ್ವಿಯಾಗಿ ಪರೀಕ್ಷಿಸಿತು. ಅದೇ ವರ್ಷದ ಮೇ ತಿಂಗಳಲ್ಲಿ, ಪಾಕಿಸ್ತಾನದ ಸಾಮರ್ಥ್ಯಕ್ಕೆ ಭಾರತ ತನ್ನ ಆಪರೇಶನ್ ಶಕ್ತಿಯ ಮೂಲಕ ತಕ್ಕ ಪ್ರತ್ಯುತ್ತರ ನೀಡಿತು. 1974ರಲ್ಲಿ, ಭಾರತ ತನ್ನ ಪರಮಾಣು ಪರೀಕ್ಷೆಯನ್ನು ಶಾಂತಿಯುತ ಉದ್ದೇಶಗಳಿಗಾಗಿ ಎಂದಿತ್ತಾದರೂ, 1998ರ ಪರಮಾಣು ಪರೀಕ್ಷೆಗಳು ಭಾರತವನ್ನು ಸ್ಪಷ್ಟವಾಗಿ ಅಣ್ವಸ್ತ್ರ ಸಜ್ಜಿತ ರಾಷ್ಟ್ರವಾಗಿ ರೂಪುಗೊಂಡಿತ್ತು.  

    1998ರ ಭಾರತದ ಅಣ್ವಸ್ತ್ರ ಪರೀಕ್ಷೆಗಳ ಪರಿಣಾಮವಾಗಿ, ಅಮೆರಿಕ ಸೇರಿದಂತೆ ಹಲವು ದೇಶಗಳು ಭಾರತದ ಮೇಲೆ ನಿರ್ಬಂಧಗಳನ್ನು ಹೇರಿದವು. ಆದರೆ, ಈ ಬಾರಿಯ ಪ್ರತಿರೋಧಗಳು 1974ರಲ್ಲಿನ ಭಾರತದ ಮೊದಲ ಪರಮಾಣು ಪರೀಕ್ಷೆಗಳ ಸಂದರ್ಭದಲ್ಲಿದ್ದಷ್ಟು ತೀಕ್ಷ್ಣವಾಗಿರಲಿಲ್ಲ. ಕ್ಷಿಪ್ರವಾಗಿ ಬೆಳೆಯುತ್ತಿದ್ದ ಭಾರತದ ಆರ್ಥಿಕತೆ ಮತ್ತು ಭಾರತದ ಬೃಹತ್ ಮಾರುಕಟ್ಟೆಯನ್ನು ಬಳಸುವ ವಿದೇಶಗಳ ಹಂಬಲದ ಕಾರಣದಿಂದ ಭಾರತಕ್ಕೆ ಈ ಎಲ್ಲ ಟೀಕೆ, ಪ್ರತಿರೋಧಗಳನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಯಿತು. ಈ ಅಣ್ವಸ್ತ್ರ ಪರೀಕ್ಷೆಗಳು ಭಾರತಕ್ಕೆ ತನ್ನನ್ನು ತಾನು ಅತ್ಯಂತ ಪ್ರಬಲ ರಾಷ್ಟ್ರಗಳ ಸಾಲಿನಲ್ಲಿ ಸ್ಥಾಪಿಸಲೂ ಪೂರಕವಾಯಿತು.

    `ಪಕ್ಷಪಾತಿ’ ಅಣ್ವಸ್ತ್ರ ಪ್ರಸರಣ ತಡೆ ಒಪ್ಪಂದ: 1960ರ ದಶಕದ ಶೀತಲ ಸಮರದ ಅವಧಿಯಲ್ಲಿ ಅಮೆರಿಕ ಮತ್ತು ಸೋವಿಯತ್ ಒಕ್ಕೂಟಗಳೆರಡೂ ಅಪಾರ ಸಂಖ್ಯೆಯಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದವು. ಇದರಿಂದಾಗಿ ಜಗತ್ತಿನಾದ್ಯಂತ ಜನರು ಅಣ್ವಸ್ತ್ರಗಳನ್ನು ಇಲ್ಲವಾಗಿಸುವ ಸಲುವಾಗಿ, ಅವುಗಳ ಪ್ರಸರಣವನ್ನು ತಡೆಯಬೇಕೆಂದು ಆಗ್ರಹಿಸಲಾಗಿತ್ತು. ಚೀನಾ ಸಹ ತನ್ನದೇ ಆದ ಅಣ್ವಸ್ತ್ರವನ್ನು ಪರೀಕ್ಷಿಸಿದಾಗ, ದೊಡ್ಡ ರಾಷ್ಟ್ರಗಳು ಇನ್ನಷ್ಟು ದೇಶಗಳು ಅಣ್ವಸ್ತ್ರ ಹೊಂದದಂತೆ ತಡೆಯಲು ಹೊಸ ಕಾನೂನುಗಳನ್ನು ಜಾರಿಗೆ ತರಬೇಕು ಎಂದು ಅಭಿಪ್ರಾಯ ಹೊರಬಿದ್ದಿತ್ತು. ಇದು ಅಣ್ವಸ್ತ್ರಗಳ ಪ್ರಸರಣವನ್ನು ತಡೆಯುವ ಸಲುವಾಗಿ ಹೊಸ ಒಪ್ಪಂದವೊಂದನ್ನು ರೂಪಿಸಲು ಕೈಗೊಂಡ ಆರಂಭಿಕ ಹಂತವಾಗಿತ್ತು. 

    1968ರಲ್ಲಿ, ಅಣ್ವಸ್ತ್ರ ಪ್ರಸರಣ ತಡೆ ಒಪ್ಪಂದ (ನಾನ್ ಪ್ರಾಲಿಫರೇಶನ್ ಟ್ರೀಟಿ) ಅಥವಾ ಎನ್‌ಪಿಟಿ ಅನ್ನು ರೂಪಿಸಲಾಯಿತು. ಈ ಒಪ್ಪಂದದ ಪ್ರಕಾರ, ಜನವರಿ 1, 1967ರ ಮುನ್ನ ಅಣ್ವಸ್ತ್ರ ಪರೀಕ್ಷೆ ನಡೆಸಿದ ರಾಷ್ಟ್ರಗಳು ಮಾತ್ರವೇ ಅಣ್ವಸ್ತ್ರ ಹೊಂದಬಹುದು ಎನ್ನಲಾಗಿತ್ತು. ಈ ನಿಗದಿತ ದಿನಕ್ಕಿಂತ ಮೊದಲು ಅಮೆರಿಕ, ರಷ್ಯಾ (ಹಿಂದಿನ ಸೋವಿಯತ್ ಒಕ್ಕೂಟ), ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್ ಮತ್ತು ಚೀನಾಗಳು ಮಾತ್ರವೇ ಅಣ್ವಸ್ತ್ರ ಪರೀಕ್ಷೆ ನಡೆಸಿದ್ದವು. ಇನ್ನಷ್ಟು ಹೊಸ ದೇಶಗಳು ಅಣ್ವಸ್ತ್ರಗಳನ್ನು ಹೊಂದುವುದನ್ನು ತಡೆಯುವ ಉದ್ದೇಶವನ್ನು ಈ ಒಪ್ಪಂದ ಹೊಂದಿತ್ತು. ಜಗತ್ತಿನ ಬಹುತೇಕ ಎಲ್ಲ ರಾಷ್ಟ್ರಗಳೂ ಈ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡರೂ, ಭಾರತ ಇದಕ್ಕೆ ಸಹಿ ಹಾಕಲು ನಿರಾಕರಿಸಿತ್ತು. 

    ಈ ಒಪ್ಪಂದ ಭಾರತದ ಕಳವಳಗಳಿಗೆ ಯಾವುದೇ ಉತ್ತರ ಕೊಡದಿದ್ದ ಕಾರಣ, ಭಾರತ ಅಣ್ವಸ್ತ್ರ ಪ್ರಸರಣ ತಡೆ ಒಪ್ಪಂದಕ್ಕೆ ಸಹಿ ಹಾಕದಿರಲು ನಿರ್ಧರಿಸಿತ್ತು. ಈ ಒಪ್ಪಂದ, ಈಗಾಗಲೇ ಅಣ್ವಸ್ತ್ರಗಳನ್ನು ಹೊಂದಿರುವ ರಾಷ್ಟ್ರಗಳ ಕುರಿತು ಯಾವುದೇ ಕ್ರಮ ಕೈಗೊಳ್ಳುತ್ತಿರಲಿಲ್ಲ ಎನ್ನುವುದು ಭಾರತದ ಪ್ರಶ್ನೆಯಾಗಿತ್ತು. 

  • ಅಣು ಶಕ್ತಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾಸಗಿ ಹಣ – ರೇಸ್‌ನಲ್ಲಿ ಟಾಟಾ, ರಿಲಯನ್ಸ್‌, ಅದಾನಿ

    ಅಣು ಶಕ್ತಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾಸಗಿ ಹಣ – ರೇಸ್‌ನಲ್ಲಿ ಟಾಟಾ, ರಿಲಯನ್ಸ್‌, ಅದಾನಿ

    ನವದೆಹಲಿ: ಪರಮಾಣು ಕ್ಷೇತ್ರದಲ್ಲಿ (Nuclear Power) ಮೊದಲ ಬಾರಿಗೆ ಖಾಸಗಿ ಕಂಪನಿಗಳ ಹೂಡಿಕೆಗೆ (Private Investment ) ಕೇಂದ್ರ ಸರ್ಕಾರ ಅವಕಾಶ ನೀಡಿದೆ.

    ಈ ವಲಯದಲ್ಲಿ ಹೂಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಕಂಪನಿಗಳನ್ನು ಆಹ್ವಾನಿಸಿದೆ. ರಿಲಯನ್ಸ್ ಇಂಡಸ್ಟ್ರೀಸ್, ಟಾಟಾ ಪವರ್, ಅದಾನಿ ಪವರ್ ಮತ್ತು ವೇದಾಂತ ಲಿಮಿಟೆಡ್ ಸೇರಿದಂತೆ ಕನಿಷ್ಠ ಐದು ಖಾಸಗಿ ಸಂಸ್ಥೆಗಳೊಂದಿಗೆ ಸರ್ಕಾರವು ಸುಮಾರು 2.16 ಲಕ್ಷ ರೂ. ಹೂಡಿಕೆ ಮಾಡಲು ಮಾತುಕತೆ ನಡೆಸುತ್ತಿದೆ ಎಂದು ಈ ವಿಷಯದಲ್ಲಿ ನೇರವಾಗಿ ಭಾಗಿಯಾಗಿರುವ ಎರಡು ಮೂಲಗಳು ತಿಳಿಸಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಅಣು ಸಚಿವಾಲಯ ಮತ್ತು ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಕಳೆದ ವರ್ಷದಲ್ಲಿ ಹೂಡಿಕೆ ಯೋಜನೆ ಕುರಿತು ಖಾಸಗಿ ಕಂಪನಿಗಳೊಂದಿಗೆ ಅನೇಕ ಸುತ್ತಿನ ಚರ್ಚೆಗಳನ್ನು ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಾಂಗ್ರೆಸ್‌ ಪಕ್ಷದ ಖಾತೆಗಳಿಂದ 65 ಕೋಟಿ ರೂ. ಕಡಿತ – IT ವಿರುದ್ಧ ಗಂಭೀರ ಆರೋಪ

    ಪ್ರಸ್ತುತ ಭಾರತದ (India) ಅಣು ಇಂಧನ ಕ್ಷೇತ್ರ ಸಂಪೂರ್ಣ ಸರ್ಕಾರದ ನಿಯಂತ್ರಣದಲ್ಲಿದೆ. ರಿಯಾಕ್ಟರ್ ನಿರ್ಮಾಣ, ಉತ್ಪಾದನೆ, ಇಂಧನ ನಿರ್ವಹಣೆಯು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ಎನ್‌ಪಿಸಿಐಎಲ್‌ಗೆ ಇರಲಿದೆ. ಇದನ್ನೂ ಓದಿ: ಯುಪಿ ಬಗ್ಗೆ ರಾಗಾ ವಿವಾದಾತ್ಮಕ ಮಾತು- ಮಗನಿಗೆ ಬುದ್ಧಿ ಹೇಳುವಂತೆ ಸೋನಿಯಾಗೆ ಸ್ಮೃತಿ ಸಲಹೆ

    ಹೊಸ ಖಾಸಗಿ ಹೂಡಿಕೆ ರಿಯಾಕ್ಟರ್ ಹೊರಗಿನ ನಿರ್ಮಾಣ, ಭೂಮಿ ಖರೀದಿ, ನೀರು ಮತ್ತು ಇತರೆ ಮೂಲಸೌಕರ್ಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರಲಿದೆ. ಹೂಡಿಕೆ ಮಾಡಿದ ಕಂಪನಿಗಳು ವಿದ್ಯುತ್ ಮಾರಾಟದ ಲಾಭ ಪಡೆದುಕೊಳ್ಳಲಿದೆ.

    ಹಾಲಿ ಅಣುಶಕ್ತಿ ಸಾಮರ್ಥ  7,500 ಮೆಗಾ ವ್ಯಾಟ್‌ ಇದ್ದು, 2040ರ ವೇಳೆಗೆ 11,000 ಮೆ.ವ್ಯಾ.ಗೆ ಏರಿಸುವ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಯೋಜನೆಯು ಇನ್ನೂ ಅಂತಿಮ ಹಂತದಲ್ಲಿದೆ .

    ಈ ಯೋಜನೆಗೆ 1962 ರ ಭಾರತದ ಪರಮಾಣು ಶಕ್ತಿ ಕಾಯ್ದೆಗೆ ಯಾವುದೇ ತಿದ್ದುಪಡಿ ಮಾಡುವ ಅಗತ್ಯವಿಲ್ಲ. ಪರಮಾಣು ವಿದ್ಯುತ್ ಸ್ಥಾವರಗಳನ್ನು ಖಾಸಗಿ ಕಂಪನಿಗಳು ಸ್ಥಾಪಿಸುವುದಕ್ಕೆ ಭಾರತೀಯ ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ ಘಟಕಗಳು, ಉಪಕರಣಗಳನ್ನು ಪೂರೈಸಲು ಮತ್ತು ರಿಯಾಕ್ಟರ್‌ಗಳ ಹೊರಗಿನ ಕೆಲಸಕ್ಕೆ ಕಾಯ್ದೆಯಲ್ಲಿ ಅವಕಾಶವಿದೆ.

     

  • ಚೀನಾ ತಲುಪಬಲ್ಲ ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ-5 ಕ್ಷಿಪಣಿ ಪ್ರಯೋಗ ಯಶಸ್ವಿ

    ಚೀನಾ ತಲುಪಬಲ್ಲ ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ-5 ಕ್ಷಿಪಣಿ ಪ್ರಯೋಗ ಯಶಸ್ವಿ

    ಭುವನೇಶ್ವರ: ಅರುಣಾಚಲ ಪ್ರದೇಶದ ತವಾಗ್‌ ಗಡಿಯಲ್ಲಿ ಚೀನಾದ(China) ಜೊತೆ ಘರ್ಷಣೆ ನಡೆದಿರುವ ಸಮಯದಲ್ಲೇ ಭಾರತ(India) ಅಣ್ವಸ್ತ್ರ ಸಿಡಿತಲೆಯ ಖಂಡಾಂತರ ಕ್ಷಿಪಣಿ ಅಗ್ನಿ-5ರ(Nuclear Capable Agni-V Ballistic Missile) ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದೆ.

    ಬರೋಬ್ಬರಿ 5 ಸಾವಿರ ಕಿಲೋಮೀಟರ್ ದೂರ ಕ್ರಮಿಸಬಲ್ಲ ಕ್ಷಿಪಣಿಗೆ ಡಮ್ಮಿ ಸಿಡಿತಲೆಯನ್ನು ಇರಿಸಿ ರಾತ್ರಿ ಒಡಿಶಾದ ಬಾಲಸೋರ್ ಜಿಲ್ಲೆಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ(ವೀಲರ್) ಯಶಸ್ವಿಯಾಗಿ ಪ್ರಯೋಗ ನಡೆಸಲಾಗಿದೆ.

    5,500 ಕಿಲೋಮೀಟರ್‌ಗಳ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಅತಿ ಹೆಚ್ಚು ನಿಖರತೆಯೊಂದಿಗೆ ತಲುಪುವ ಸಾಮರ್ಥ್ಯ ಅಗ್ನಿ-5 ಕ್ಷಿಪಣಿಗಿದೆ. ಚೀನಾದ ಯಾವುದೇ ಭಾಗವನ್ನು ಈ ಕ್ಷಿಪಣಿ ಮೂಲಕ ಭಾರತ ಟಾರ್ಗೆಟ್ ಮಾಡಬಹುದಾಗಿದೆ. ಅಷ್ಟೇ ಅಲ್ಲದೇ ಏಷ್ಯಾದ ಎಲ್ಲಾ ಭಾಗವನ್ನು, ಆಫ್ರಿಕಾದ ಕೆಲ ಭಾಗಗಳನ್ನು, ಯುರೋಪ್ ಖಂಡವನ್ನು ತಲುಪಬಲ್ಲ ಸಾಮರ್ಥ್ಯವನ್ನು ಹೊಂದಿದೆ.

    ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ(DRDO) ಅಭಿವೃದ್ಧಿ ಪಡಿಸಿದ 17.5 ಮೀಟರ್ ಎತ್ತರದ ಈ ಕ್ಷಿಪಣಿ 50 ಟನ್ ತೂಕ ಇದೆ. 1.5 ಟನ್ ಅಣ್ವಸ್ತ್ರ ಹೊತ್ತೊಯ್ಯುವ ಸಾಮರ್ಥ್ಯ ಇದಕ್ಕಿದೆ.

    ಅಕ್ಟೋಬರ್ 2021 ರಲ್ಲಿ ಕೊನೆಯದಾಗಿ ಅಗ್ನಿ-5 ಪರೀಕ್ಷೆ ನಡೆಸಿತ್ತು. ಈ ವೇಳೆ 1998ರ ಯುಎನ್‌ಎಸ್‌ಸಿ ರೆಸಲ್ಯೂಶನ್ 1172 ಅನ್ನು ಉಲ್ಲೇಖಿಸಿ ಚೀನಾ ಆಕ್ಷೇಪ ವ್ಯಕ್ತಪಡಿಸಿತ್ತು. ಭಾರತ ಮತ್ತು ಪಾಕಿಸ್ತಾನ ಎರಡೂ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಯನ್ನು ನಿಲ್ಲಿಸಬೇಕು ಎಂದು ನಿರ್ಣಯವು ಹೇಳಿರುವಾಗ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿತ್ತು. ಭಾರತ 5000-5,500 ಕಿ.ಮೀ ವ್ಯಾಪ್ತಿ ಎಂದು ಹೇಳಿದರೂ ಇದು 8,000 ಕಿ.ಮೀ ವ್ಯಾಪ್ತಿಯನ್ನು ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. ಬೇರೆ ದೇಶಗಳಿಂದ ಆತಂಕ ವ್ಯಕ್ತವಾಗಬಹುದು ಎಂಬ ಕಾರಣಕ್ಕೆ ಭಾರತ ಈ ಅಗ್ನಿ 5 ಸಾಮರ್ಥ್ಯವನ್ನು ಕಡಿಮೆ ಮಾಡುತ್ತಿದೆ ಎಂದು ಚೀನಾ ಆರೋಪಿತ್ತು. ಇದನ್ನೂ ಓದಿ: ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ: ಡಿಕೆಶಿ ಪ್ರಶ್ನೆ

    ಇದು ಸಾಂಪ್ರದಾಯಿಕ ಮತ್ತು ಅಣ್ವಸ್ತ್ರ ಎರಡೂ ರೀತಿಯ ಸಿಡಿತಲೆಗಳನ್ನು ಕೊಂಡೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. 1989ರಲ್ಲಿ ಮೊದಲ ಬಾರಿಗೆ ಅಗ್ನಿ ಕ್ಷಿಪಣಿಯನ್ನು ಪರೀಕ್ಷಾರ್ಥವಾಗಿ ಪ್ರಯೋಗಿಸಲಾಗಿತ್ತು. ನಂತ ವಿವಿಧ ಅಗ್ನಿ ಕ್ಷಿಪಣಿಗಳ ಪರೀಕ್ಷೆಗಳನ್ನು ನಡೆಸಿಕೊಂಡು ಬಂದಿದೆ.

    ಬ್ಯಾಲಿಸ್ಟಿಕ್ ಕ್ಷಿಪಣಿ ಎಂದರೇನು?
    ಈ ಕ್ಷಿಪಣಿಗಳು ಇವು ತಮ್ಮದೇ ಆದ ಚೋದನ ಕ್ರಮಗಳಿಂದ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ, ಮತ್ತೆ ಭೂಮಿಯ ವಾತಾವರಣವನ್ನು ಮರು ಪ್ರವೇಶಿಸಿ ಭೂಮಿಯನ್ನು ಅಪ್ಪಳಿಸುವ ಸಾಮರ್ಥ್ಯ ಹೊಂದಿರುತ್ತದೆ. ವೇಗವಾಗಿ ಭೂಮಿಯ ವಾತಾವರಣವನ್ನು ಮರುಪ್ರವೇಶಿಸುವಾಗ ವಾತಾವರಣದೊಂದಿಗೆ ಘರ್ಷಣೆಯುಂಟಾಗಿ ಅತಿ ಹೆಚ್ಚಿನ ತಾಪಮಾನ ಬಿಡುಗಡೆಯಾಗುವುದರಿಂದ ಶತ್ರುಗಳ ಕ್ಷಿಪಣಿಗಳನ್ನೇ ನಾಶ ಮಾಡುವ ಸಾಮರ್ಥ್ಯ ಈ ಕ್ಷಿಪಣಿಗಳಿಗಿದೆ. ನಿಗದಿತ ಗುರಿಯನ್ನು ತಲುಪಲು ಜಿಪಿಎಸ್ ಅಳವಡಿಸಲಾಗಿರುತ್ತದೆ. ಈ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಭೂಮಿಯಿಂದ, ಆಕಾಶದಿಂದ, ಸಮುದ್ರದಿಂದ, ಜಲಾಂತರ್ಗಾಮಿ ಅಲ್ಲದೇ ಚಲಿಸುವ ವಾಹನಗಳಿಂದಲೂ ಉಡಾಯಿಸಬಹುದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಏಲಿಯನ್ ಅಟ್ಯಾಕ್, ಸೋಲರ್ ಸುನಾಮಿ – ವಿಶ್ವದ ಅಂತ್ಯದ ಬಗ್ಗೆ ಬಾಬಾ ವಂಗಾ ಭವಿಷ್ಯವಾಣಿ

    ಏಲಿಯನ್ ಅಟ್ಯಾಕ್, ಸೋಲರ್ ಸುನಾಮಿ – ವಿಶ್ವದ ಅಂತ್ಯದ ಬಗ್ಗೆ ಬಾಬಾ ವಂಗಾ ಭವಿಷ್ಯವಾಣಿ

    ಸೋಫಿಯಾ: 2023ರ ಅವಧಿಯಲ್ಲಿ ಅನ್ಯಗ್ರಹ ಜೀವಿಗಳ ದಾಳಿ (Alien Attack), ಸೋಲರ್ ಸುನಾಮಿಯಂತಹ (Solar Storm) ಅನೇಕ ಗಂಡಾ ತರಗಳಿಂದ ವಿಶ್ವ ನಾನಾ ರೀತಿಯ ತೊಂದರೆಗಳನ್ನು ಎದುರಿಸಲಿದೆ ಎಂದು ನಾಸ್ಟ್ರಾಡಾಮಸ್‌ (Nostradamus) ಮಹಿಳೆ ಎಂದೇ ಹೆಸರಾಗಿರುವ ಬಾಬಾ ವಂಗಾ (Baba Vanga) ಭವಿಷ್ಯವಾಣಿ ನುಡಿದಿದ್ದಾರೆ. ವಿಶ್ವದ ಅಂತ್ಯದ ಬಗ್ಗೆಯೂ ಇದೇ ವೇಳೆ ಸುಳಿವು ಕೊಟ್ಟಿದ್ದಾರೆ.

    ಕೆಲ ತಿಂಗಳ ಹಿಂದೆಯಷ್ಟೇ ಭಾರತದ ಭವಿಷ್ಯ ನುಡಿದು ಆತಂಕ ಸೃಷ್ಟಿಸಿದ್ದ ಬಲ್ಗೇರಿಯಾದ ಕುರುಡು ಮಹಿಳೆ ಬಾಬಾ ವಂಗಾ, ಇದೀಗ ವಿಶ್ವದ ಭವಿಷ್ಯ ನುಡಿದು ಮತ್ತೊಮ್ಮೆ ಆತಂಕ ಉಂಟಾಗುವಂತೆ ಮಾಡಿದ್ದಾರೆ. ಇದನ್ನೂ ಓದಿ: ಬಾಂಗ್ಲಾದ ನಾಯಕ-ಭಾರತದ ಬೌಲರ್ – ಏಕದಿನ ಸರಣಿ ಆರಂಭಕ್ಕೂ ಮುನ್ನ ಔಟ್

    ಬಾಬಾ ವಂಗಾರ 2023ರ ಭವಿಷ್ಯವಾಣಿ ಏನು?
    2023ರಲ್ಲಿ ಸೋಲಾರ್ ಸುನಾಮಿ ಸಂಭವಿಸುತ್ತದೆ. ಇದರ ಪರಿಣಾಮವಾಗಿ ಭೂಮಿಯ ಕಾಂತೀಯ ಕವಚವು ನಾಶವಾಗುತ್ತದೆ. ಭೂಮಿಯ ಮೇಲೆ ಏಲಿಯನ್‌ಗಳ (ಅನ್ಯಗ್ರಹ ಜೀವಿ) ದಾಳಿಯಿಂದ ಲಕ್ಷಾಂತರ ನಿವಾಸಿಗಳು ಸಾಯುತ್ತಾರೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಊರು ಬಿಡುವಂತೆ ರೌಡಿಗಳಿಗೆ ಸಿಸಿಬಿ ಖಡಕ್ ಸೂಚನೆ – ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ರೆ ಕ್ರಮದ ಎಚ್ಚರಿಕೆ

    ಬಾಬಾ ವಂಗಾ (Baba Vanga) ಅವರ 2023ರ ಭಯಾನಕ ಭವಿಷ್ಯವಾಣಿಗಳು, ಭೂಮಿಯು ಈಗ ಬ್ರಹ್ಮಾಂಡದಲ್ಲಿ ಅನಿಶ್ಚಿತ ಸಮತೋಲನದಲ್ಲಿ ಉಳಿದಿದೆ. ನಂತರ ಅದು ತನ್ನ ಕಕ್ಷೆಯನ್ನು ಬದಲಿಸುತ್ತದೆ. ಇದರಲ್ಲಿನ ಸಣ್ಣ ಬದಲಾವಣೆಯೂ ಹವಾಮಾನದಲ್ಲಿ ಭಾರೀ ಬದಲಾವಣೆ ಉಂಟುಮಾಡಬಹುದು. ಆಗ ಪರಿಸ್ಥಿತಿ ನಿಜಕ್ಕೂ ಭೀರಕವಾಗಿರುತ್ತದೆ ಎಂದು ಹೇಳಲಾಗಿದೆ.

    2023ರ ವೇಳೆಗೆ ಪ್ರಯೋಗಾಲಯಗಳಲ್ಲಿ ಮಾನವರನ್ನು ಉತ್ಪಾದಿಸಲಾಗುತ್ತದೆ (Humans Produce Laboratories). ಹುಟ್ಟದ ಮಗುವಿಗೆ ತಮ್ಮ ಆಯ್ಕೆಯ ಬಣ್ಣ ಮತ್ತು ಗುಣಲಕ್ಷಣಗಳನ್ನು ಆಯ್ಕೆ ಮಾಡುವ ಸಂದರ್ಭ ಬರುತ್ತದೆ. ಈ ಜನನದ ಪ್ರಕ್ರಿಯೆಯು ಮಾನವನ ನಿಯಂತ್ರಣದಲ್ಲಿರುತ್ತದೆ ಮತ್ತು ಬಾಡಿಗೆ ತಾಯ್ತನದ ಸಮಸ್ಯೆಯು ಅದರ ಆವಿಷ್ಕಾರದೊಂದಿಗೆ ಕೊನೆಗೊಳ್ಳುತ್ತದೆ. ವಿದ್ಯುತ್ ಸ್ಥಾವರದಲ್ಲಿನ ಸ್ಫೋಟವು ವಿಷಕಾರಿ ಮೋಡಗಳ ರಚನೆಗೆ ಕಾರಣವಾಗಬಹುದು. ಇದು ಇಡೀ ಏಷ್ಯಾ ಖಂಡವೇ ಮಂಜು ಕವಿಯುವಂತೆ ಮಾಡುತ್ತದೆ. ಈ ಬದಲಾವಣೆಯಿಂದಾಗಿ ಇತರ ದೇಶಗಳು ಸಹ ಗಂಭೀರ ಕಾಯಿಲೆಗಳಿಂದ ಬಾಧಿಸತೊಡಗುತ್ತವೆ.

    Live Tv

    [brid partner=56869869 player=32851 video=960834 autoplay=true]

  • ಪರಮಾಣು ಪರೀಕ್ಷೆ ಆತಂಕದ ನಡುವೆಯೇ ಇನ್ನೊಂದು ಕ್ಷಿಪಣಿ ಪರೀಕ್ಷಿಸಿದ ಉತ್ತರ ಕೊರಿಯಾ

    ಪರಮಾಣು ಪರೀಕ್ಷೆ ಆತಂಕದ ನಡುವೆಯೇ ಇನ್ನೊಂದು ಕ್ಷಿಪಣಿ ಪರೀಕ್ಷಿಸಿದ ಉತ್ತರ ಕೊರಿಯಾ

    ಸಿಯೋಲ್: ಉತ್ತರ ಕೊರಿಯಾ ಪರಮಾಣು ಪರೀಕ್ಷೆ ನಡೆಸಲು ಯೋಜಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯ ನಡುವೆಯೇ ಭಾನುವಾರ ಮತ್ತೊಂದು ಅಪರಿಚಿತ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಪರೀಕ್ಷಿಸಿದೆ ಎಂದು ದಕ್ಷಿಣ ಕೊರಿಯಾದ ಮಿಲಿಟರಿ ತಿಳಿಸಿದೆ.

    ಜಪಾನ್ ಮಾಹಿತಿ ಉಲ್ಲೇಖಿಸಿ, ದಕ್ಷಿಣ ಕೊರಿಯಾ ಅಧಿಕಾರಿಗಳು ಉತ್ತರ ಕೊರಿಯಾ ಅಪರಿಚಿತ ಕ್ಷಿಪಣಿಯನ್ನು ತನ್ನ ಪೂರ್ವ ಸಮುದ್ರದ ಕಡೆ ಹಾರಿಸಿದೆ ಎಂದು ತಿಳಿಸಿದ್ದಾರೆ. ಆದರೆ ಕ್ಷಿಪಣಿಯನ್ನು ಎಲ್ಲಿಂದ ಹಾರಿಸಲಾಯಿತು ಹಾಗೂ ಯಾವ ಗುರಿಗೆ ಹಾರಿಸಲಾಯಿತು ಎಂಬ ಬಗ್ಗೆ ತಿಳಿಸಿಲ್ಲ. ಇದನ್ನೂ ಓದಿ: ಕಂಟೈನರ್ ಡಿಪೋದಲ್ಲಿ ಬೆಂಕಿ: 16 ಸಾವು, 450ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ಉತ್ತರ ಕೊರಿಯಾ ಆರ್ಥಿಕ ನಿರ್ಬಂಧಗಳನ್ನು ಎಸುರಿಸುತ್ತಿದ್ದರೂ ಈ ವರ್ಷ ತನ್ನ ಶಸ್ತ್ರಾಸ್ತ್ರ ನವೀಕರಣ ಯೋಜನೆಗಳನ್ನು ದ್ವಿಗುಣಗೊಳಿಸಿದೆ. ತನ್ನ 7ನೇ ಪರಮಾಣು ಕ್ಷಿಪಣಿ ಪರೀಕ್ಷೆಯನ್ನು ಶೀಘ್ರವೇ ನಡೆಸಲಿದೆ ಎಂದು ಅಮೆರಿಕ ಹಾಗೂ ದಕ್ಷಿಣ ಕೊರಿಯ ಅಧಿಕಾರಿಗಳು ಕಳೆದ 1 ವಾರದಿಂದ ಹೇಳುತ್ತಲೇ ಇದ್ದಾರೆ. ಇದನ್ನೂ ಓದಿ: ಇಮ್ರಾನ್ ಖಾನ್ ಹತ್ಯೆಗೆ ಸಂಚು- ಬಿಗಿ ಭದ್ರತೆ

    ಕಳೆದ ತಿಂಗಳು 3 ಕ್ಷಿಪಣಿಗಳನ್ನು ಉತ್ತರ ಕೊರಿಯಾ ಪರೀಕ್ಷಿಸಿದ್ದು, ಅವುಗಳಲ್ಲಿ ಅತಿದೊಡ್ಡ ಖಂಡಾಂತರ ಕ್ಷಿಪಣಿ ಹ್ವಾಸಾಂಗ್-17 ಕೂಡಾ ಇತ್ತು ಎಂದು ತಿಳಿದುಬಂದಿದೆ.