Tag: nuclear weapons

  • ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದೆ ಬಂದ ಹಲವು ದೇಶಗಳು!

    ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದೆ ಬಂದ ಹಲವು ದೇಶಗಳು!

    ಟೆಹ್ರಾನ್: ಇರಾನ್‌ (Iran) ಹಾಗೂ ಇಸ್ರೇಲ್‌ (Israel) ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ಅಮೆರಿಕ (America) ಸಹ ಅಧಿಕೃತವಾಗಿ ಎಂಟ್ರಿಯಾಗಿ ಇರಾನ್‌ನ ಅಣ್ವಸ್ತ್ರ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಹಲವು ರಾಷ್ಟ್ರಗಳು ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದಾಗಿವೆ ಎಂದು ವರದಿಯಾಗಿದೆ.

    ರಷ್ಯಾ (Russia) ಹಾಗೂ ಚೀನಾ, ಇರಾನ್‌ಗೆ ಬೆಂಬಲವನ್ನು ಘೋಷಿಸಿವೆ. ಇರಾನ್‌ನ ಅಣ್ವಸ್ತ್ರ ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಯು ಖಂಡನಾರ್ಹ. ಇರಾನ್‌ಗೆ ಅಣ್ವಸ್ತ್ರ ಪೂರೈಸಲು ಹಲವು ದೇಶಗಳು ಮುಂದಾಗಿವೆ ಎಂದು ರಷ್ಯಾ ಅಧ್ಯಕ್ಷ ಪುಟಿನ್‌ ಆಪ್ತ ಡಿಮಿಟ್ರಿ ಮೆಡ್ಡೆಡೆವ್ ಹೇಳಿದ್ದಾರೆ. ಇದನ್ನೂ ಓದಿ: Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ 

    ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾ, ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಕಾನೂನುಗಳನ್ನು ಅಮೆರಿಕ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದೆ.

    ಇರಾನ್‌ನ ಫೋರ್ಡೊ, ನಟಾಂಜ್ ಮತ್ತು ಎಸ್ಪಹಾನ್‌ ಮೂರು ಪರಮಾಣು ಕೇಂದ್ರಗಳ ಮೇಲೆ ಶನಿವಾರ ಮಧ್ಯರಾತ್ರಿ ಅಮೆರಿಕ ಬಾಂಬ್‌ ದಾಳಿ (Bomb Attack) ನಡೆಸಿತ್ತು. 14,000 ಕೆಜಿ ತೂಕ ಹೊಂದಿರುವ ಹಾಗೂ ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿ ಎಂದು ಗುರುತಿಸಿಕೊಂಡಿರುವ ಬಿ-12 ಬಾಂಬರ್‌ ಬಳಸಿ ದಾಳಿ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅಮೆರಿಕಗೆ ಭೀಕರ ದಾಳಿ ಎದುರಿಸಲು ತಯಾರಾಗಿ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಇಸ್ರೇಲ್‌ ಮೇಲೆ ಮತ್ತೆ ಬ್ಯಾಲಿಸ್ಟಿಕ್ ಮಿಸೈಲ್‌ಗಳ ಸುರಿಮಳೆ – ಅಮೆರಿಕ ದಾಳಿಗೂ ಜಗ್ಗದ ಇರಾನ್‌

  • ಭಯಾನಕ ಅಣ್ವಸ್ತ್ರ ಹೊರತೆಗೆದ ರಷ್ಯಾ – ಕೀವ್‌ನಿಂದ 200 ಕಿಮೀ ದೂರದಲ್ಲಿರೋ ಬೆಲಾರಸ್‌ಗೆ ರವಾನೆ!

    ಭಯಾನಕ ಅಣ್ವಸ್ತ್ರ ಹೊರತೆಗೆದ ರಷ್ಯಾ – ಕೀವ್‌ನಿಂದ 200 ಕಿಮೀ ದೂರದಲ್ಲಿರೋ ಬೆಲಾರಸ್‌ಗೆ ರವಾನೆ!

    – ಹಿರೋಷಿಮಾ, ನಾಗಸಾಕಿ ಅಣ್ವಸ್ತ್ರಕ್ಕಿಂತ 3 ಪಟ್ಟು ಹೆಚ್ಚು ಶಕ್ತಿಶಾಲಿ ರಷ್ಯಾದ ಅಣ್ವಸ್ತ್ರ

    ಮಾಸ್ಕೋ: ಉಕ್ರೇನ್ (Ukranine) ಮೇಲೆ ವರ್ಷದಿಂದ ಯುದ್ಧ ಮಾಡುತ್ತಿರುವ ರಷ್ಯಾ (Russia) ಇದೀಗ ತನ್ನ ಮೊದಲ ಬ್ಯಾಚ್‌ನ ಪರಮಾಣು ಶಸ್ತ್ರಾಸ್ತ್ರವನ್ನು (Nuclear Weapons) ಬೆಲಾರಸ್‌ಗೆ (Belarus) ಕಳುಹಿಸಿರುವುದಾಗಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಶುಕ್ರವಾರ ತಿಳಿಸಿದ್ದಾರೆ. ಈ ವಿಚಾರ ದೃಢವಾಗುತ್ತಲೇ ಇಡೀ ಜಗತ್ತಿಗೆ ಭೀತಿ ಉಂಟಾಗಿದೆ.

    ಸೆಂಟ್ ಪೀಟರ್ಸ್ಬರ್ಗ್ ಇಂಟರ್‌ನ್ಯಾಶನಲ್ ಎಕನಾಮಿಕ್ ಫೋರಮ್ ಅನ್ನು ಉದ್ದೇಶಿಸಿ ಮಾತನಾಡಿರುವ ಪುಟಿನ್, ಈ ಬೇಸಿಗೆಯ ಅಂತ್ಯದ ವೇಳೆಗೆ ಉಳಿದ ಪರಮಾಣು ಶಸ್ತ್ರಾಸ್ತ್ರಗಳನ್ನು ತಲುಪಿಸುವ ಗುರಿಯಿದೆ. ಇದು ರಷ್ಯಾ ಹಾಗೂ ಅದರ ಕಾರ್ಯತಂತ್ರದ ಸೋಲಿನ ಬಗ್ಗೆ ಯೋಚಿಸುತ್ತಿರೋ ಎಲ್ಲಾ ವಿರೋಧಿಗಳಿಗೂ ತಿರುಗೇಟಿನ ಕ್ರಮವಾಗಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಇದೀಗ ರಷ್ಯಾ ಉಕ್ರೇನ್ ಮೇಲೆ ಅಣ್ವಸ್ತ್ರದ ಬಳಕೆ ಮಾಡುತ್ತದೋ ಎಂಬ ಪ್ರಶ್ನೆಗೆ ಕಾರಣವಾಗಿದೆ ಮಾತ್ರವಲ್ಲದೇ ಜಗತ್ತಿನ ನಿದ್ದೆಗೆಡಿಸಿದಂತಾಗಿದೆ.

    ಈ ವಾರ ಬೆಲಾರಸ್‌ನ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರು, ನಾವು ರಷ್ಯಾದಿಂದ ಬಾಂಬ್‌ಗಳು ಹಾಗೂ ಕ್ಷಿಪಣಿಗಳ ಮೊದಲ ಬ್ಯಾಚ್ ಅನ್ನು ಸ್ವೀಕರಿಸಿದ್ದೇವೆ ಎಂದು ತಿಳಿಸಿದ್ದಾರೆ. ಈ ಬಾಂಬ್‌ಗಳು ಹಿರೋಷಿಮಾ ಮತ್ತು ನಾಗಸಾಕಿಯಲ್ಲಿ ಬಳಸಲಾಗಿದ್ದ ಅಣ್ವಸ್ತ್ರಕ್ಕಿಂತ ಮೂರು ಪಟ್ಟು ಹೆಚ್ಚು ಶಕ್ತಿಶಾಲಿಯಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇಂದಿನಿಂದ ಬೆಂಗಳೂರಲ್ಲಿ ಮತ್ತೆ ಜೆಸಿಬಿಗಳ ಘರ್ಜನೆ – ಬಿಬಿಎಂಪಿಯಿಂದ ಆಪರೇಷನ್‌ ರಾಜಕಾಲುವೆ

    ಉಕ್ರೇನ್ ಹಾಗೂ ರಷ್ಯಾದ ನಡುವೆ ಯುದ್ಧ ಆರಂಭವಾಗಿ ವರ್ಷವೇ ಕಳೆದಿದೆ. ಯುದ್ಧ ಇನ್ನೇನು 500ನೇ ದಿನ ಪೂರೈಸಲಿದೆ. ಅಮೆರಿಕ ಈ ಯುದ್ಧದ ಬಗ್ಗೆ ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ಇದೀಗ ರಷ್ಯಾ ನೇರವಾಗಿ ಅಣ್ವಸ್ತ್ರವನ್ನೇ ತನ್ನ ಮಿತ್ರ ರಾಷ್ಟ್ರ ಬೆಲಾರಸ್‌ಗೆ ಕಳುಹಿಸಿ ಕೊಟ್ಟಿದೆ. ಬೆಲಾರಸ್‌ನ ಗಡಿಯಿಂದ ಉಕ್ರೇನ್‌ನ ರಾಜಧಾನಿ ಕೀವ್‌ಗೆ ಕೇವಲ 200 ಕಿ.ಮೀ ದೂರವಿದೆ. ಇದೀಗ ರಷ್ಯಾ ನೇರವಾಗಿ ಕೀವ್ ಮೇಲೆ ಅಣ್ವಸ್ತ್ರ ಪ್ರಯೋಗಿಸಲು ಮುಂದಾಗುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದನ್ನೂ ಓದಿ: ಚಿಪ್ಸ್ ಕರೆಯುವ ಎಣ್ಣೆ ಬಾಣಲೆಗೆ ಬಿದ್ದಿದ್ದ 25 ರ ಯುವಕ ಸಾವು

  • ಅಣ್ವಸ್ತ್ರವನ್ನು ಯಾರು ಕೂಡಾ ಆಶ್ರಯಿಸಬಾರದು: ರಷ್ಯಾಗೆ ರಾಜನಾಥ್ ಸಿಂಗ್ ಸಲಹೆ

    ಅಣ್ವಸ್ತ್ರವನ್ನು ಯಾರು ಕೂಡಾ ಆಶ್ರಯಿಸಬಾರದು: ರಷ್ಯಾಗೆ ರಾಜನಾಥ್ ಸಿಂಗ್ ಸಲಹೆ

    ನವದೆಹಲಿ: ಉಕ್ರೇನ್‌ನೊಂದಿಗಿನ (Ukraine) ಸಂಘರ್ಷವನ್ನು ಮಾತುಕತೆ ಹಾಗೂ ರಾಜತಾಂತ್ರಿಕತೆಯ ಮೂಲಕ ಬಗೆಹರಿಸಬೇಕು. ಆದರೆ ಅಣ್ವಸ್ತ್ರವನ್ನು (Nuclear Weapons) ಯಾರು ಕೂಡಾ ಆಶ್ರಯಿಸಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ರಷ್ಯಾದ (Russia) ಸಹವರ್ತಿ ಸರ್ಗೆಯ್ ಶೋಯಿಗು (Sergei Shoigu) ಅವರಿಗೆ ಸಲಹೆ ನೀಡಿದ್ದಾರೆ.

    ಬುಧವಾರ ದೂರವಾಣಿ ಮೂಲಕ ಉಭಯ ರಾಷ್ಟ್ರಗಳ ರಕ್ಷಣಾ ಸಚಿವರು ಮಾತುಕತೆ ನಡೆಸಿದ್ದಾರೆ. ಈ ವೇಳೆ ಶೋಯಿಗು ಅವರು ಉಕ್ರೇನ್‌ನಲ್ಲಿ ನಡೆಸುತ್ತಿರುವ ತಮ್ಮ ಕಾರ್ಯಾಚರಣೆಯ ಬಗ್ಗೆ ಸಿಂಗ್‌ಗೆ ವಿವರಿಸಿದ್ದಾರೆ. ಈ ವೇಳೆ ರಾಜನಾಥ್ ಸಿಂಗ್ ಯುದ್ಧವನ್ನು ಮಾತುಕತೆ ಮೂಲಕ ಬಗೆಹರಿಸುವಂತೆ ಸಲಹೆ ನೀಡಿರುವುದಾಗಿ ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.

    ಮಾತುಕತೆಯ ವೇಳೆ ರಾಜನಾಥ್ ಸಿಂಗ್ ಅಣ್ವಸ್ತ್ರ ಬಳಕೆಯಿಂದ ಮುಂದಾಗಬಹುದಾದಂತಹ ಅಪಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಘರ್ಷಣೆಯ ಪರಿಹಾರಕ್ಕೆ ಮಾತುಕತೆ ಹಾಗೂ ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವ ಅಗತ್ಯತೆಯನ್ನು ಸಿಂಗ್ ಪುನರುಚ್ಚರಿಸಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

    ಪರಮಾಣು ಅಥವಾ ರೇಡಿಯೊಲಾಜಿಕಲ್ ಶಸ್ತ್ರಾಸ್ತ್ರಗಳ ಬಳಕೆ ಮಾನವೀಯತೆಯ ಮೂಲ ತತ್ವಗಳಿಗೆ ವಿರುದ್ಧವಾಗಿದೆ. ಹೀಗಾಗಿ ಪರಮಾಣು ಆಯ್ಕೆಯನ್ನು ಯಾವೊಬ್ಬ ದೇಶವೂ ಆಶ್ರಯಿಸಬಾರದು ಎಂದು ರಾಜನಾಥ್ ಸಿಂಗ್ ಸೂಚಿಸಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‍ನಲ್ಲಿ ಅಂಪೈರಿಂಗ್ ಮಾಡಿದ ಫುಟ್‍ಬಾಲ್ ದಿಗ್ಗಜ ಮೆಸ್ಸಿ! – ಫೋಟೋ ವೈರಲ್

    ತೀವ್ರ ಸ್ಥಿತಿಗೆ ಯುದ್ಧ:
    ಕಳೆದ 2 ವಾರಗಳ ಹಿಂದೆ ಕ್ರೈಮಿಯಾದಲ್ಲಿ ಸಂಭವಿಸಿದ ಭಾರೀ ಸ್ಫೋಟಕ್ಕೆ ಪ್ರತಿಕ್ರಿಯೆಯಾಗಿ ರಷ್ಯಾ ಉಕ್ರೇನ್‌ನ ವಿವಿಧ ನಗರಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಈ ಪ್ರತೀಕಾರದ ದಾಳಿ ಯುದ್ಧದ ತೀವ್ರತೆಯನ್ನು ಹೆಚ್ಚಿಸಿದೆ.

    ಯುದ್ಧ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ಪ್ರಜೆಗಳು ಹಾಗೂ ವಿದ್ಯಾರ್ಥಿಗಳನ್ನು ತಕ್ಷಣವೇ ಉಕ್ರೇನ್ ತೊರೆಯುವಂತೆ ಕೇಳಿಕೊಂಡಿದೆ. ಇದನ್ನೂ ಓದಿ: ಎಂಇಎಸ್‍ನಿಂದ ಮತ್ತೆ ಗಡಿ ಖ್ಯಾತೆ – ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ಸಿದ್ಧತೆ

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನ ಅಪಾಯಕಾರಿ ಅಲ್ಲ, ಜವಾಬ್ದಾರಿಯುತ ರಾಷ್ಟ್ರ: ಶೆಹಬಾಜ್ ಷರೀಫ್

    ಪಾಕಿಸ್ತಾನ ಅಪಾಯಕಾರಿ ಅಲ್ಲ, ಜವಾಬ್ದಾರಿಯುತ ರಾಷ್ಟ್ರ: ಶೆಹಬಾಜ್ ಷರೀಫ್

    ಇಸ್ಲಾಮಾಬಾದ್: ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ (Dangerous Country) ಪಾಕಿಸ್ತಾನವೂ (Pakistan) ಒಂದು ಎಂದು ಅಮೆರಿಕ (America) ಅಧ್ಯಕ್ಷ ಜೋ ಬೈಡನ್ (Joe Biden) ಅವರ ಹೇಳಿಕೆಯನ್ನು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ತಿರಸ್ಕರಿಸಿದ್ದಾರೆ. ಪಾಕಿಸ್ತಾನ ಅಪಾಯಕಾರಿ ರಾಷ್ಟ್ರ ಅಲ್ಲ, ಬದಲಿಗೆ ಜವಾಬ್ದಾರಿಯುತ ರಾಷ್ಟ್ರ ಎಂದು ಷರೀಫ್ ತಿಳಿಸಿದ್ದಾರೆ.

    ಬೈಡನ್ ಹೇಳಿಕೆಗೆ ತಿರುಗೇಟು ನೀಡಿದ ಷರೀಫ್, ಅಮೆರಿಕ ಅಧ್ಯಕ್ಷರ ಹೇಳಿಕೆ ದೋಷಪೂರಿತವಾಗಿದ್ದು, ವಾಸ್ತವವಾಗಿ ತಪ್ಪು ದಾರಿಗೆಳೆಯುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ.

    ಪಾಕಿಸ್ತಾನ ಅತ್ಯಂತ ಜವಾಬ್ದಾರಿಯುತ ಪರಮಾಣು ಹೊಂದಿರುವ ರಾಷ್ಟ್ರವೆಂದು ಕಳೆದ ದಶಕದಲ್ಲಿಯೇ ಸಾಬೀತಾಗಿದೆ. ತನ್ನ ಪರಮಾಣು ಕಾರ್ಯಗಳನ್ನು ನುರಿತ ಹಾಗೂ ಯಾವುದೇ ತಪ್ಪುಗಳಾಗದ ರೀತಿಯ ನಿಯಂತ್ರಣ ವ್ಯವಸ್ಥೆಯಿಂದ ನಿರ್ವಹಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಪಾಕಿಸ್ತಾನವೂ ಒಂದು – ಜೋ ಬೈಡೆನ್‌

    Shehbaz Sharif

    ಬೈಡನ್ ಲಾಸ್ ಏಂಜಲೀಸ್‌ನಲ್ಲಿ ನಡೆದ ಡೆಮಾಕ್ರಟಿಕ್ ಕಾಂಗ್ರೆಸ್ ಕಾಂಪೇನ್ ಕಮಿಟಿಯ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪಾಕಿಸ್ತಾನ ಯಾವುದೇ ಒಗ್ಗಟ್ಟಿನ ವ್ಯವಸ್ಥೆ ಇಲ್ಲದೇ ಅಣ್ವಸ್ತ್ರಗಳನ್ನು ಹೊಂದಿದೆ. ಇದು ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಪಾಕಿಸ್ತಾನದ ಕಿರುಕುಳ, ತಾರತಮ್ಯಕ್ಕೆ ಬೇಸತ್ತು ಭಾರತಕ್ಕೆ ಬಂದ 100 ಹಿಂದೂಗಳು

    Live Tv
    [brid partner=56869869 player=32851 video=960834 autoplay=true]

  • ಸೇನೆಯನ್ನು ಭಾಗಶಃ ಸಜ್ಜುಗೊಳಿಸಿ – ಅಣ್ವಸ್ತ್ರ ಬಳಕೆಯ ಸುಳಿವು ನೀಡಿದ ಪುಟಿನ್

    ಸೇನೆಯನ್ನು ಭಾಗಶಃ ಸಜ್ಜುಗೊಳಿಸಿ – ಅಣ್ವಸ್ತ್ರ ಬಳಕೆಯ ಸುಳಿವು ನೀಡಿದ ಪುಟಿನ್

    ಮಾಸ್ಕೋ: ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ತನ್ನ ಸೇನೆಯನ್ನು (Military) ಭಾಗಶಃ ಸಜ್ಜುಗೊಳಿಸುವಂತೆ ಆದೇಶ ನೀಡಿದ್ದಾರೆ. ಈ ಆದೇಶದಿಂದಾಗಿ ರಷ್ಯಾ ಉಕ್ರೇನ್ (Ukraine) ಮೇಲಿನ ಯುದ್ಧದಲ್ಲಿ ಪರಮಾಣು ಶಸ್ತ್ರಾಸ್ತ್ರವನ್ನು (Nuclear Weapons) ಬಳಸುವ ಸುಳಿವು ನೀಡಿದ್ದಾರೆ.

    ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಗೆ ಬೆದರಿಕೆಯಿದ್ದರೆ, ರಷ್ಯಾ ಹಾಗೂ ನಮ್ಮ ಜನರನ್ನು ರಕ್ಷಿಸಲು ನಾವು ನಮ್ಮಿಂದಾಗುವ ಎಲ್ಲಾ ರೀತಿಯ ವಿಧಾನಗಳನ್ನೂ ಬಳಸುತ್ತೇವೆ ಎಂದು ಪುಟಿನ್ ರಾಷ್ಟ್ರವನ್ನು ಉದ್ದೇಶಿಸಿ ದೂರದರ್ಶನದ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ರಷ್ಯಾ ತನ್ನ ಎಲ್ಲಾ ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವ ಬಗ್ಗೆ ಪುಟಿನ್ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹಿಂದೂ, ಮುಸ್ಲಿಮರು ಸಹೋದರ, ಸಹೋದರಿಯರಂತೆ ಇದ್ದೇವೆ- ಬ್ರಿಟನ್‌ನಲ್ಲಿ ಒಗ್ಗಟ್ಟಿನ ಮಂತ್ರ

    Vladimir Putin

    ಅಮೆರಿಕ, ಯುರೋಪಿಯನ್ ಯೂನಿಯನ್, ಹಾಗೂ ಬ್ರಿಟನ್ ಉಕ್ರೇನ್ ಅನ್ನು ಪ್ರೋತ್ಸಾಹಿಸುತ್ತಿದ್ದು, ರಷ್ಯಾದ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುವ ಸಂಚು ರೂಪಿಸಿವೆ. ಪಶ್ಚಿಮವು ಪರಮಾಣು ಬ್ಲ್ಯಾಕ್‌ಮೇಲ್‌ನಲ್ಲಿ ತೊಡಗಿದೆ. ಆದರೆ ಇದಕ್ಕೆ ಪ್ರತ್ಯುತ್ತರ ನೀಡಲು ರಷ್ಯಾದಲ್ಲಿಯೂ ಸಾಕಷ್ಟು ಶಸ್ತ್ರಾಸ್ತ್ರಗಳಿವೆ ಎಂದು ಪುಟಿನ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರತನ್‌ ಟಾಟಾ ಈಗ PM CARES Fund ಟ್ರಸ್ಟಿ- ಸುಧಾಮೂರ್ತಿಗೆ ಸಲಹಾ ಮಂಡಳಿಯಲ್ಲಿ ಸ್ಥಾನ

    ಪೂರ್ವ ಉಕ್ರೇನ್‌ನ ಡಾನ್‌ಬಾಸ್ ಪ್ರದೇಶವನ್ನು ಸ್ವತಂತ್ರ್ಯಗೊಳಿಸುವ ಗುರಿಯಿದೆ. ರಷ್ಯಾದ ನಿಯಂತ್ರಣದಲ್ಲಿರುವ ಆ ಪ್ರದೇಶದಲ್ಲಿ ಹೆಚ್ಚಿನ ಜನರು ಕೀವ್‌ನಿಂದ ಆಡಳಿತ ನಡೆಯುವುದನ್ನು ನಿರಾಕರಿಸುತ್ತಿದ್ದಾರೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ನಮ್ಮ ದೇಶದ ಅಸ್ತಿತ್ವಕ್ಕೆ ಧಕ್ಕೆ ಬಂದರೆ ಮಾತ್ರವೇ ಪರಮಾಣು ಶಸ್ತ್ರಾಸ್ತ್ರ ಬಳಕೆ: ರಷ್ಯಾ

    ನಮ್ಮ ದೇಶದ ಅಸ್ತಿತ್ವಕ್ಕೆ ಧಕ್ಕೆ ಬಂದರೆ ಮಾತ್ರವೇ ಪರಮಾಣು ಶಸ್ತ್ರಾಸ್ತ್ರ ಬಳಕೆ: ರಷ್ಯಾ

    ಮಾಸ್ಕೋ: ರಷ್ಯಾದ ಅಸ್ತಿತ್ವಕ್ಕೆ ಬೆದರಿಕೆಯಿದ್ದರೆ ಮಾತ್ರ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುತ್ತದೆ ಎಂದು ರಷ್ಯಾದ ವಕ್ತಾರ ಡಿಮಿಟ್ರಿ ಪೆಸ್ಕೋವ್ ಸೋಮವಾರ ಸಂದರ್ಶನದಲ್ಲಿ ತಿಳಿಸಿದ್ದಾರೆ.

    ನಾವು ಭದ್ರತಾ ಪರಿಕಲ್ಪನೆಯನ್ನು ಹೊಂದಿದ್ದೇವೆ. ರಾಜ್ಯದ ಅಸ್ತಿತ್ವಕ್ಕೆ ಬೆದರಿಕೆ ಉಂಟಾದಾಗ ಮಾತ್ರ ಅದನ್ನು ತೊಡೆದುಹಾಕಲು ನಾವು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಸಾಧ್ಯತೆ ಇದೆ ಹಾಗೂ ಖಂಡಿತವಾಗಿಯೂ ಬಳಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾರವಾರ ಬಂದರು ವಿಸ್ತರಣೆ ಕಾಮಗಾರಿ ಮುಂದುವರಿಸಬೇಡಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

    ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೇಶದ ಕಾರ್ಯತಂತ್ರದ ಪರಮಾಣು ಪಡೆಗೆ ಆಕ್ರಮಣಕ್ಕೆ ತಯಾರಾಗಿರಲು ತಿಳಿಸಿದ್ದರು. ಈ ಆದೇಶ ಜಾಗತಿಕವಾಗಿಯೇ ಎಚ್ಚರಿಕೆಯ ಕರೆಗಂಟೆಯಾಗಿದೆ. ಇದನ್ನೂ ಓದಿ: ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ

    ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಗಾಗಿ ಪರಮಾಣು ಶಸ್ತ್ರಾಸ್ತ್ರ ಬಳಕೆ ಕಾರಣವಾಗುವುದಿಲ್ಲ. ಬದಲಾಗಿ ರಷ್ಯಾಗೆ ಬೆದರಿಕೆಯಿದ್ದಲ್ಲಿ ಮಾತ್ರವೇ ಪರಮಾಣು ಶಸ್ತ್ರಾಸ್ತ್ರ ಬಳಸುವುಗಿ ಡಿಮಿಟ್ರಿ ಪೆಸ್ಕೋವ್ ಸ್ಪಷ್ಟಪಡಿಸಿದ್ದಾರೆ.