Tag: Nursing Staff

  • ರಾಜಸ್ಥಾನದ ಆಸ್ಪತ್ರೆ ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ರೇಪ್ – ಮತ್ತು ಬರುವ ಇಂಜೆಕ್ಷನ್ ಕೊಟ್ಟು ಅತ್ಯಾಚಾರ

    ರಾಜಸ್ಥಾನದ ಆಸ್ಪತ್ರೆ ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ರೇಪ್ – ಮತ್ತು ಬರುವ ಇಂಜೆಕ್ಷನ್ ಕೊಟ್ಟು ಅತ್ಯಾಚಾರ

    – ಮಹಿಳೆಯ ಕುಟುಂಬಸ್ಥರು ಐಸಿಯು ಹೊರಗಡೆ ಇದ್ದಾಗಲೇ ನಡೆದ ಕೃತ್ಯ

    ಜೈಪುರ: ರಾಜಸ್ಥಾನದ ಅಲ್ವಾರ್‌ನಲ್ಲಿರುವ ಇಎಸ್‌ಐಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (ESIC Medical College Hospital) ಐಸಿಯುಗೆ (ತೀವ್ರ ನಿಗಾ ಘಟಕ) ದಾಖಲಾಗಿದ್ದ ಮಹಿಳಾ ರೋಗಿ ಮೇಲೆ ನರ್ಸಿಂಗ್‌ ಸಿಬ್ಬಂದಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಸಂತ್ರಸ್ತೆ ಕುಟುಂಬಸ್ಥರು ಐಸಿಯು (ICU ವಾರ್ಡ್‌ನ ಹೊರಗಿದ್ದಾಗಲೇ ಘಟನೆ ಸಂಭವಿಸಿದೆ.

    ವರದಿಗಳ ಪ್ರಕಾರ, ಇದೇ ತಿಂಗಳ ಜೂನ್‌ 4ರಂದು (ಬುಧವಾರ) ರಾತ್ರಿ 1:30ರ ಸುಮಾರಿಗೆ ಘಟನೆ ನಡೆದಿದೆ. 32 ವರ್ಷದ ಮಹಿಳೆಯನ್ನ ಇದೇ ಜೂನ್‌ 2ರಂದು ಟ್ಯೂಬೆಕ್ಟಮಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್‌ 4ರಂದು ಶಸ್ತ್ರಚಿಕಿತ್ಸೆ ನಂತರ ಆಕೆಯನ್ನ ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಈ ವೇಳೆ‌ ನರ್ಸಿಂಗ್‌ ಸಿಬ್ಬಂದಿ (Nursing Staff) ಮಹಿಳೆಗೆ ಮತ್ತು ಬರುವ ಇಂಜೆಕ್ಷನ್‌ ನೀಡಿದ್ದಾನೆ. ಜೊತೆಗೆ ಆಕೆ ಮಲಗಿದ ನಂತರ ಆಕೆಯ ಪತಿಯನ್ನ ಹೊರ ಹೋಗುವಂತೆ ಸೂಚಿಸಿದ್ದಾನೆ. ಇದನ್ನೂ ಓದಿ: ಬೆಂಗಳೂರು | ಸೂಟ್‌ಕೇಸ್‌ನಲ್ಲಿ ಬಾಲಕಿ ಶವ ಪತ್ತೆ ಪ್ರಕರಣ – ಬಿಹಾರದಲ್ಲಿ 7 ಆರೋಪಿಗಳು ಅರೆಸ್ಟ್‌

    ಇಂಜೆಕ್ಷನ್‌ ನೀಡಿದ್ದರ ಪರಿಣಾಮವಾಗಿ ಸಂತ್ರಸ್ತೆ ಅರೆ ಪ್ರಜ್ಞಾವಸ್ಥೆ ತಲುಪಿದ್ದಾರೆ. ಮರುದಿನ ಜೂನ್ 5 ರಂದು, ರಾತ್ರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ತನ್ನ ಪತಿಗೆ ತಿಳಿಸಿದ್ದಾರೆ. ನರ್ಸಿಂಗ್ ಸಿಬ್ಬಂದಿ ತನ್ನ ಸ್ಥಿತಿಯನ್ನ ದುರುಪಯೋಗ ಮಾಡಿಕೊಂಡಿದ್ದಾನೆಂದು ಹೇಳಿದ್ದಾರೆ. ಅರೆಪ್ರಜ್ಞಾವಸ್ಥೆಯಲ್ಲಿದ್ದರಿಂದ ನಾನು ವಿರೋಧಿಸಲು ಆಗಲಿಲ್ಲ, ಸಹಾಯಕ್ಕಾಗಿ ಕರೆಯಲೂ ಆಗಲಿಲ್ಲ ಎಂದು ಹೇಳಿಕೊಂಡಿದ್ದಾಳೆ. ಈ ವಿಷಯವನ್ನು ಪತಿಗೆ ತಿಳಿಸಿದ ಬಳಿಕ ಪೊಲೀಸರಿಗೆ (Alwar Police) ಸಂತ್ರಸ್ತೆ ಪತಿ ದೂರು ನೀಡಿದ್ದಾರೆ.

    ಜೂನ್‌ 6ರಂದು ಸಂತ್ರಸ್ತೆ ವೈದ್ಯೆ ಡಾ. ದೀಪಿಕಾ ಅವರಿಗೆ‌ ಘಟನೆ ಬಗ್ಗೆ ತಿಳಿಸಿದ್ದಾರೆ. ಆರೋಪಿಯಾದ ನರ್ಸಿಂಗ್‌ ಸಿಬ್ಬಂದಿಯನ್ನ ವಿಚಾರಣೆಗೆ ಒಳಪಡಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ ಎಂದು ಎಸ್‌ಎಚ್‌ಒ ಅಜಿತ್ ಬದ್ಸಾರ ದೃಢಪಡಿಸಿದರು.

    ಘಟನೆ ನಂತರ ಇಎಸ್ಐಸಿ ವೈದ್ಯಕೀಯ ಕಾಲೇಜಿನ ಡೀನ್ ಡಾ. ಅಸಿಮ್ ದಾಸ್ ಅವರು ಆಂತರಿಕ ಆಡಳಿತಾತ್ಮಕ ಸಮಿತಿಯನ್ನ ರಚಿಸಿದ್ದಾರೆ. ಅಲ್ಲದೇ ಪೊಲೀಸ್‌ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ಹೇಳಿದ್ದಾರೆ. ಇದನ್ನೂ ಓದಿ: ಪರ ಪುರುಷನೊಂದಿಗೆ ಸರಸಕ್ಕೆ ಅಡ್ಡಿ – ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಯತ್ನಿಸಿದ್ದಾಕೆ ಅರೆಸ್ಟ್‌

    ಎಂಐಎ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.  ಇದನ್ನೂ ಓದಿ: ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

  • ಬ್ರಿಟನ್ ಆರೋಗ್ಯ ಇಲಾಖೆಗೆ ರಾಜ್ಯದಿಂದ 1 ಸಾವಿರ ನರ್ಸಿಂಗ್ ಸಿಬ್ಬಂದಿ: ಡಾ.ಸಿ.ಎನ್.ಅಶ್ವಥ್ ನಾರಾಯಣ್

    ಬ್ರಿಟನ್ ಆರೋಗ್ಯ ಇಲಾಖೆಗೆ ರಾಜ್ಯದಿಂದ 1 ಸಾವಿರ ನರ್ಸಿಂಗ್ ಸಿಬ್ಬಂದಿ: ಡಾ.ಸಿ.ಎನ್.ಅಶ್ವಥ್ ನಾರಾಯಣ್

    – ಬ್ರಿಟೀಷ್ ಆರೋಗ್ಯ ಇಲಾಖೆ ಜೊತೆ ರಾಜ್ಯದ ಕೌಶಲ್ಯಾಭಿವೃದ್ಧಿ ಇಲಾಖೆ ಒಪ್ಪಂದ
    – ವಿಶ್ವ ಕನ್ನಡ ಶುಶ್ರೂಷಕರ ಸಂಘ ಉದ್ಘಾಟಿಸಿದ ಆದಿಚುಂಚನಗಿರಿ ಶ್ರೀ

    ಬೆಂಗಳೂರು: ಬ್ರಿಟನ್ ರಾಷ್ಟ್ರೀಯ ಆರೋಗ್ಯ ಇಲಾಖೆ (NHS) ಯಿಂದ 1 ಸಾವಿರ ಶುಶ್ರೂಷಕರಿಗೆ ಬೇಡಿಕೆ ಬಂದಿದ್ದು, ಕೋವಿಡ್ ಸಂಕಷ್ಟ ಮುಗಿದ ನಂತರ ಅಷ್ಟೂ ನರ್ಸಿಂಗ್ ಸಿಬ್ಬಂದಿಯನ್ನು ಲಂಡನ್‍ಗೆ ಕಳಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

    ವರ್ಚುಯಲ್ ವೇದಿಕೆ ಮೂಲಕ ಭಾನುವಾರ ವಿಶ್ವ ಕನ್ನಡ ಶುಶ್ರೂಷಕರ ಸಂಘದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈಗಾಗಲೇ ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಎನ್‍ಎಚ್‍ಎಸ್ ಜತೆ ಒಪ್ಪಂದಕ್ಕೆ ಸಹಿ ಬಿದ್ದಿದೆ. 1 ಸಾವಿರ ಶುಶ್ರೂಷಕರನ್ನು ಕಳುಹಿಸುವಂತೆ ಅವರು ಕೋರಿದ್ದಾರೆ. ಅದಕ್ಕೆ ಈಗಾಗಲೇ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿನ ವ್ಯವಸ್ಥೆಗೆ ಒಗ್ಗಿ ಕೆಲಸ ಮಾಡುವುದಕ್ಕೆ ಅಗತ್ಯ ಭಾಷೆ, ಸಂವಹನ ಕಲೆ, ಸೇವಾ ಮನೋಭಾವ ಇತ್ಯಾದಿಗಳ ಬಗ್ಗೆ ಎಲ್ಲರಿಗೂ ತರಬೇತಿ ನೀಡಲಾಗುವುದು ಎಂದರು. ಇದನ್ನೂ ಓದಿ: ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ: ಡಿಸಿಎಂ ಅಶ್ವತ್ಥ ನಾರಾಯಣ್

    ಇನ್ನೂ ಹೆಚ್ಚಿನ ನರ್ಸಿಂಗ್ ಸಿಬ್ಬಂದಿ ಅಗತ್ಯವಿದ್ದರೆ ಕಳಿಸಲಾಗುವುದು. ಅಲ್ಲದೆ ಬ್ರಿಟನ್ ಜೊತೆಗೆ ಇತರೆ ದೇಶಗಳಿಗೂ ನರ್ಸಿಂಗ್ ಹಾಗೂ ಅರೆವೈದ್ಯಕೀಯ ಸಿಬ್ಬಂದಿಯನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಕೌಶಲ್ಯಾಭಿವೃದ್ಧಿ ಇಲಾಖೆ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

    ನರ್ಸಿಂಗ್ ಸಿಬ್ಬಂದಿಗೆ ಅಧಿಕಾರಿ ಮಟ್ಟದ ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ನಿರ್ಧಾರವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶವನ್ನೂ ಹೊರಡಿಸಿದ್ದಾರೆ. ಅಲ್ಲದೆ ಅವರ ಎಲ್ಲ ಬೇಡಿಕೆಗಳನ್ನೂ ಈಡೇರಿಸಲಾಗಿದೆ. ಜೊತೆಗೆ ದೇಶಾದ್ಯಂತ ಸುಮಾರು 2 ಲಕ್ಷ ನರ್ಸಿಂಗ್ ಸಿಬ್ಬಂದಿಗೆ ಆರೋಗ್ಯ ಕೇಂದ್ರಗಳಲ್ಲಿ ಉದ್ಯೋಗವನ್ನು ಕೊಡಲಾಗಿದೆ ಎಂದು ಡಾ.ಅಶ್ವಥ್ ನಾರಾಯಣ್ ವಿವರಿಸಿದರು.

    ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ವಿಶ್ವ ಕನ್ನಡ ಶುಶ್ರೂಷಕರ ಸಂಘವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಎಂ.ಬಿ.ಪಾಟೀಲ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು, ಗೋಪಾಲ ಕುಲಕರ್ಣಿ, ಸಂಘದ ಅಧ್ಯಕ್ಷ ತಮ್ಮಣ್ಣ, ಕಾರ್ಯದರ್ಶಿ ನಾಗರಾಜ್, ಖಜಾಂಚಿ ಹೇಮೇಗೌಡ ಮುಂತಾದವರು ವಿಶ್ವದ ವಿವಿಧ ದೇಶಗಳಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.