Tag: Nursing student

  • ಕೇರಳ | ಆತ್ಮಹತ್ಯೆಗೆ ಯತ್ನಿಸಿ ಕೋಮಾದಲ್ಲಿದ್ದ ವಿದ್ಯಾರ್ಥಿನಿ 3 ತಿಂಗಳ ಬಳಿಕ ಸಾವು – ಹಾಸ್ಟೆಲ್ ವಾರ್ಡನ್ ವಶ

    ಕೇರಳ | ಆತ್ಮಹತ್ಯೆಗೆ ಯತ್ನಿಸಿ ಕೋಮಾದಲ್ಲಿದ್ದ ವಿದ್ಯಾರ್ಥಿನಿ 3 ತಿಂಗಳ ಬಳಿಕ ಸಾವು – ಹಾಸ್ಟೆಲ್ ವಾರ್ಡನ್ ವಶ

    ಹಾಸ್ಟೆಲ್‌ನ್ನು ಜೈಲಿನಂತೆ ಮಾಡಿಟ್ಟಿದ್ದ ವಾರ್ಡನ್!

    ತಿರುವನಂತಪುರಂ: ಕೇರಳದ (Kerala) ಕೋಝಿಕೋಡ್‌ನ ಹಾಸ್ಟೆಲ್‌ (Hostel) ಒಂದರಲ್ಲಿ ಕಳೆದ ಡಿಸೆಂಬರ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿ ಕೋಮಾದಲ್ಲಿದ್ದ ನರ್ಸಿಂಗ್ ವಿದ್ಯಾರ್ಥಿನಿ (Nursing Student) ಮೂರು ತಿಂಗಳ ಬಳಿಕ ಸಾವನ್ನಪ್ಪಿದ್ದಾಳೆ.

    ಮೃತ ವಿದ್ಯಾರ್ಥಿನಿಯನ್ನು ಕೊಟ್ಟಾಯಂ ಮೂಲದ ಚೈತನ್ಯ ಕುಮಾರಿ (20) ಎಂದು ಗುರುತಿಸಲಾಗಿದೆ. ಆಕೆ ಮಂಜೂರ್ ಆಸ್ಪತ್ರೆ (Hospital) ಹಾಗೂ ನರ್ಸಿಂಗ್ ಕಾಲೇಜ್‌ನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಅವಳು ಒಂದು ದಿನ ಹಾಸ್ಟೆಲ್‌ನಿಂದ ಹೊರಗೆ ಹೋಗಿ ಆರೋಗ್ಯ ಏರುಪೇರಾಗಿತ್ತು. ಇದರಿಂದ ವಾರ್ಡನ್ ರಂಜನಿ ವಿದ್ಯಾರ್ಥಿನಿಗೆ ಗದರಿಸಿದ್ದರು. ಅಂದಿನಿಂದ ಆಕೆ ಆಹಾರ ನೀರನ್ನು ತ್ಯೆಜಿಸಿದ್ದಳು. ಡಿಸೆಂಬರ್ 7 ರಂದು ಆಕೆ ಹಾಸ್ಟೆಲ್ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಮೂರು ತಿಂಗಳಿಗೂ ಹೆಚ್ಚು ಕಾಲ ಕೋಮಾದಲ್ಲಿದ್ದಳು. ಚಿಕಿತ್ಸೆ ಫಲಿಸದೇ ಬಾನುವಾರ ರಾತ್ರಿ ಚೈತನ್ಯ ಸಾವನ್ನಪ್ಪಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಆತ್ಮಹತ್ಯೆಗೆ ಯತ್ನಿಸಿದ್ದ ಆಕೆಯನ್ನು ಮೊದಲು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆತರಲಾಗಿತ್ತು. ನಂತರ ಆಕೆಯನ್ನು ಕಸ್ತೂರ್ಬಾ ಆಸ್ಪತ್ರೆಗೆ ಮತ್ತು ಕಣ್ಣೂರಿನ ಆಸ್ಟರ್ ಮಿಮ್ಸ್‌ಗೆ ಸ್ಥಳಾಂತರಿಸಲಾಯಿತು. ಬಳಿಕ ಆಕೆಯನ್ನು ಕೋಝಿಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

    ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಮಹಿಳೆಯ ತಾಯಿ ಹಾಗೂ ವಿದ್ಯಾರ್ಥಿನಿಯರು ವಾರ್ಡನ್ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಾರೀ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಹಾಸ್ಟೆಲ್‌ನಲ್ಲಿ ಜೈಲಿನಂತ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಇದಾದ ಬಳಿಕ ವಾರ್ಡನ್ ಅವರನ್ನು ಕರ್ತವ್ಯದಿಂದ ತೆಗೆದುಹಾಕಲಾಗಿತ್ತು. ವಿದ್ಯಾರ್ಥಿನಿಯ ಸಾವಿನ ನಂತರ, ಪೊಲೀಸರು ವಾರ್ಡನ್ ಅವರನ್ನು ವಶಕ್ಕೆ ಪಡೆದಿದ್ದಾರೆ.

  • ಚಿತ್ರದುರ್ಗ | ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ – ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

    ಚಿತ್ರದುರ್ಗ | ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ – ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

    ಚಿತ್ರದುರ್ಗ: ಬೈಕ್‌ಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗದ (Chitradurga) ಗ್ರಾಮಾಂತರ ಠಾಣೆ ಬಳಿ ನಡೆದಿದೆ.

    ಯಾಸಿನ್ (22), ಅಲ್ತಾಫ್ (22) ಮೃತ ವಿದ್ಯಾರ್ಥಿಗಳು. ಮೃತರು ಕೇರಳ ಮೂಲದವರಾಗಿದ್ದು, ನರ್ಸಿಂಗ್ ಓದುತ್ತಿದ್ದರು. ಇದನ್ನೂ ಓದಿ: ಧರೆಗುರುಳಿದ ಮದ್ದೂರಮ್ಮ ಜಾತ್ರೆಯ ತೇರು – ಗಾಯಗೊಂಡಿದ್ದ ಯುವತಿ ಸಾವು

    ಘಟನೆ ಸಂಬಂಧ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Honey Trap Case | ರಾಜಣ್ಣ ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ – ಪರಮೇಶ್ವರ್‌ ಭರವಸೆ

  • ರಾಮನಗರ | ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

    ರಾಮನಗರ | ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

    ರಾಮನಗರ: ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬರು (Nursing Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾರೋಹಳ್ಳಿ (Harohalli) ತಾಲೂಕಿನ ಪ್ರತಿಷ್ಠಿತ ದಯಾನಂದ ಸಾಗರ್ ಕಾಲೇಜಿನಲ್ಲಿ ನಡೆದಿದೆ.

    ಅನಾಮಿಕಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಇದನ್ನೂ ಓದಿ: USA vs China Tax War | ಅಮೆರಿಕದ ಕಲ್ಲಿದ್ದಲು, ಗ್ಯಾಸ್‌ ಮೇಲೆ ತೆರಿಗೆ ವಿಧಿಸಿದ ಚೀನಾ

    ಅನಾಮಿಕ ಕೇರಳ ಮೂಲದ ಕಣ್ಣೂರಿನ ವಿದ್ಯಾರ್ಥಿನಿ ಆಗಿದ್ದು, ಮೊದಲ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಾಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಹಾಸ್ಟೆಲ್‌ನಲ್ಲಿ ಊಟಕ್ಕೆ ಬಾರದ ಹಿನ್ನೆಲೆಯಲ್ಲಿ ಸಹ ವಿದ್ಯಾರ್ಥಿನಿಯರು ರೂಮ್‌ ಬಳಿ ಹೋಗಿದ್ದಾರೆ. ಬಾಗಿಲು ತಟ್ಟಿದ್ದರೂ ತೆಗೆಯದೇ ಇದ್ದರಿಂದ ಕಿಟಕಿಯಿಂದ ನೋಡಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ.

    ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾರೋಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯ ಮಾಹಿತಿ ಆಯುಕ್ತರಾಗಿ ಬದ್ರುದ್ದೀನ್ ಕೆ.ಮಾಣಿ ಸೇರಿದಂತೆ 7 ಮಂದಿ ಪ್ರಮಾಣವಚನ ಸ್ವೀಕಾರ

  • ಬೆಂಗ್ಳೂರಲ್ಲಿ ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿನಿ ನೇಣಿಗೆ ಶರಣು

    ಬೆಂಗ್ಳೂರಲ್ಲಿ ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿನಿ ನೇಣಿಗೆ ಶರಣು

    ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು (Nursing student) ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಾಲಹಳ್ಳಿಯಲ್ಲಿ (Jalahalli) ನಡೆದಿದೆ.

    ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಎಂದು ಗುರುತಿಸಲಾಗಿದೆ. ಮೃತ ಯುವತಿ ನಗರದ ನರ್ಸಿಂಗ್ ಕಾಲೇಜ್ ಒಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಮೂರು ದಿನಗಳ ಹಿಂದೆ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲಿಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಮೊಬೈಲ್‍ನಲ್ಲಿ ಮಾತಾಡ್ತಿದ್ದಾಗ ದಾಳಿ- ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ

    ಕೌಟುಂಬಿಕ ಕಲಹದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ (Jalahalli Police) ಪ್ರಕರಣ ದಾಖಲಾಗಿದೆ.‌ ಇದನ್ನೂ ಓದಿ: ಬಸ್‌ ಪಲ್ಟಿಯಾಗಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

     

  • ಭಾರತ ಮೂಲದ ಯುವತಿಯ ಜೀವಂತ ಸಮಾಧಿ – ಆರೋಪಿಗೆ ಜೀವಾವಧಿ ಶಿಕ್ಷೆ ಸಾಧ್ಯತೆ

    ಭಾರತ ಮೂಲದ ಯುವತಿಯ ಜೀವಂತ ಸಮಾಧಿ – ಆರೋಪಿಗೆ ಜೀವಾವಧಿ ಶಿಕ್ಷೆ ಸಾಧ್ಯತೆ

    ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ (Australia) ನಡೆದಿದ್ದ ಭಾರತದ (India) ಮೂಲದ ಯುವತಿಯೊಬ್ಬಳನ್ನು ಆಕೆಯ ಮಾಜಿ ಪ್ರಿಯಕರ ಜೀವಂತವಾಗಿ ಸಮಾಧಿ ಮಾಡಿದ ಪ್ರಕರಣದಲ್ಲಿ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

    21 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ‌ (Nursing Student) ಜಸ್ಮೀನ್ ಕೌರ್ ಎಂಬ ಯುವತಿಯನ್ನು ಆರೋಪಿ ತಾರಿಕ್‍ಜೋತ್ ಸಿಂಗ್ 2021ರ ಮಾರ್ಚ್‍ನಲ್ಲಿ ಅಪಹರಿಸಿದ್ದ. ಬಳಿಕ ಕೇಬಲ್ ಹಾಗೂ ಗಮ್ ಟೇಪ್ ಬಳಸಿ ಕೈ ಕಾಲುಗಳಿಗೆ ಸುತ್ತಿ ಆಕೆಯನ್ನು ಜೀವಂತವಾಗಿ ಸಮಾಧಿ ಮಾಡಿದ್ದ. ಆತ ಈ ಕೃತ್ಯವನ್ನು ಆಕೆಯ ಮೇಲಿನ ದ್ವೇಷದಿಂದ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ನಾಲ್ವರು ಅಪ್ರಾಪ್ತರಿಂದಲೇ 9ರ ಬಾಲಕಿ ಮೇಲೆ ಅತ್ಯಾಚಾರ

    ಈ ವರ್ಷದ ಫೆಬ್ರುವರಿಯಲ್ಲಿ ಆತನ ವಿಚಾರಣೆ ನಡೆಸಿದ್ದಾಗ ಆರೋಪಿ ಆಕೆಯ ಹತ್ಯೆ ಮಾಡಿದ್ದಾಗಿ ತಪ್ಪೋಪ್ಪಿಕೊಂಡಿದ್ದ. ಬಳಿಕ ಯುವತಿಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.

    ಈ ಬಗ್ಗೆ ಮಾತನಾಡಿರುವ ಯುವತಿಯ ತಾಯಿ, ಆರೋಪಿ ತನ್ನ ಮಗಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆದರೆ ಆಕೆ ಆತನನ್ನು ನಿರಾಕರಿಸಿದ್ದಳು. ಇದರಿಂದಾಗಿ ಆತ ಕೃತ್ಯ ಎಸಗಿದ್ದಾನೆ. ಆತ ಕ್ಷಮೆಗೆ ಯೋಗ್ಯನಲ್ಲ, ನನ್ನ ಮಗಳ ಸಂಕಟ ನೆನೆದು ದುಃಖಿಸುತ್ತಿದ್ದೇನೆ ಎಂದಿದ್ದಾರೆ.

    ಈ ಬಗ್ಗೆ ನ್ಯಾಯಾಲಯದಲ್ಲಿ ವಾದಿಸಿರುವ ಕೌರ್ ಪರ ವಕೀಲ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಣ್ಣು ಕಿತ್ತು, ಕತ್ತು ಕೊಯ್ದು ನರ್ಸಿಂಗ್‌ ವಿದ್ಯಾರ್ಥಿನಿಯ ಕೊಲೆ – ಕರಾಳ ರಾತ್ರಿಯಲ್ಲಿ ನಡೆದಿದ್ದೇನು?

    ಕಣ್ಣು ಕಿತ್ತು, ಕತ್ತು ಕೊಯ್ದು ನರ್ಸಿಂಗ್‌ ವಿದ್ಯಾರ್ಥಿನಿಯ ಕೊಲೆ – ಕರಾಳ ರಾತ್ರಿಯಲ್ಲಿ ನಡೆದಿದ್ದೇನು?

    ಹೈದರಾಬಾದ್‌: ತನ್ನ ಸೋದರ ಮಾವನೊಂದಿಗೆ ಜಗಳವಾಡಿಕೊಂಡು ಮನೆಯಿಂದ ಹೊರಗೆ ಹೋಗಿದ್ದ ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬಳು (Nursing Student) ಭೀಕರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತೆಲಂಗಾಣದಲ್ಲಿ (Telangana) ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ತೆಲಂಗಾಣದ ವಿಕಾರಾಬಾದ್‌ (Vikarabad) ಜಿಲ್ಲೆಯ ಕಾಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ಯುವತಿಯನ್ನ ಕಂಡ್ಲಾಪುರ ನಿವಾಸಿ ಸಿರಿಶಾ (19) ಎಂದು ಗುರುತಿಸಲಾಗಿದೆ. ತನ್ನ ಸೋದರ ಮಾವನೊಂದಿಗೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದ ಸಿರಿಶಾ ಭಾನುವಾರ ನೀರಿನ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸಿರಿಶಾಳನ್ನ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗ್ರಾಮದ ನೀರಿನ ಹೊಂಡಕ್ಕೆ ಎಸೆದಿದ್ದಾರೆ. ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಭೇಟಿ ನೀಡಿ ಶವವನ್ನ ಹೊರತೆಗೆಯಲಾಗಿದೆ ಎಂದು ಪರಿಗಿ ಸಬ್ ಇನ್ಸ್‌ಪೆಕ್ಟರ್ (SI) ವಿಠ್ಠಲ್ ರೆಡ್ಡಿ ತಿಳಿಸಿದ್ದಾರೆ.

    ಘಟನೆ ನಂತರ ವಿಕಾರಾಬಾದ್ ಎಸ್ಪಿ ಎನ್.ಕೋಟಿ ರೆಡ್ಡಿ ಅವರು ತನಿಖೆ ನಡೆಸಲು ವಿಶೇಷ ತಂಡ ರಚಿಸಿದ್ದಾರೆ. ಮೃತ ಸಿರಿಶಾಳ ಸೋದರ ಮಾವನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಆ ರಾತ್ರಿ ನಡೆದಿದ್ದೇನು?
    ಮೃತ ಸಿರಿಶಾ ಜೂನ್‌ 10 ರಂದು ರಾತ್ರಿ 10 ಗಂಟೆ ಸುಮಾರಿಗೆ ತನ್ನ ಸೋದರ ಮಾವನೊಂದಿಗೆ ಜಗಳ ಮಾಡಿಕೊಂಡು ಮನೆಯಿಂದ ಹೊರಗೆ ಹೋಗಿದ್ದಾಳೆ. ಆಕೆ ಮನೆಯಿಂದ ಹೊರಬಂದ ಕೆಲವೇ ನಿಮಿಷಗಳಲ್ಲಿ ದುಷ್ಕರ್ಮಿಗಳು ಕೊಂದು ನೀರಿನ ಹೊಂಡಕ್ಕೆ ಎಸೆದು ಎಸ್ಕೇಪ್‌ ಆಗಿದ್ದಾರೆ. ಕಣ್ಣುಗಳಿಗೆ ಕಬ್ಬಿಣದ ರಾಡ್‌ನಿಂದ ಬಲವಾಗಿ ಹೊಡೆದಿದ್ದಾರೆ, ಹರಿತವಾದ ಚಾಕುವಿನಿಂದ ದೇಹದ ಇತರ ಭಾಗಗಳನ್ನ ಕೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ.

    ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಂಕಿತರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರ‍್ಯಾಂಪ್‌ವಾಕ್‌ ಮಾಡ್ತಿದ್ದಾಗ ಕಬ್ಬಿಣದ ಪಿಲ್ಲರ್‌ ಬಿದ್ದು 24ರ ಮಾಡೆಲ್‌ ದುರ್ಮರಣ

    ನರ್ಸಿಂಗ್‌ ಓದುತ್ತಿದ್ದ ಸಿರಿಶಾ ತನ್ನ ತಾಯಿ ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದರಿಂದಾಗಿ ಕಳೆದ ಎರಡು ತಿಂಗಳಿಂದ ಕಾಲೇಜಿಗೆ ಹೋಗುವುದನ್ನೇ ನಿಲ್ಲಿಸಿದ್ದಳು. ಇದನ್ನೂ ಓದಿ: ಜೊತೆಯಾಗಿ ಸ್ನಾನಕ್ಕೆ ಹೋದವರು ಹೆಣವಾದ್ರು – ಹಸೆಮಣೆ ಏರಬೇಕಿದ್ದ ಜೋಡಿಯ ದುರಂತ ಅಂತ್ಯ

  • ಮೊದಲ ಮತದಾನಕ್ಕೆ ಬಂದು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವಿದ್ಯಾರ್ಥಿನಿ

    ಮೊದಲ ಮತದಾನಕ್ಕೆ ಬಂದು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವಿದ್ಯಾರ್ಥಿನಿ

    ರಾಯಚೂರು: ತನ್ನ ಮೊದಲ ಮತದಾನ (Voting) ಮಾಡಲು ಉತ್ಸಾಹದಲ್ಲಿ ಸ್ವಗ್ರಾಮಕ್ಕೆ ಬಂದಿದ್ದ ವಿದ್ಯಾರ್ಥಿನಿ ಮತದಾನ ನಂತರ ಅಪಘಾತಕ್ಕೆ ಒಳಗಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಲಿಂಗಸುಗೂರಿನ ಮುದಗಲ್ ಬಳಿ ಮೇ 10 ರಂದು ಅಪಘಾತ ನಡೆದಿದೆ.

    ಮತದಾನ ಮಾಡಿ ಬೈಕ್‌ನಲ್ಲಿ ಮನೆಗೆ ಮರಳುವಾಗ ಬೈಕ್ ಹಾಗೂ ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ (Road Accident) ನಡೆದಿದ್ದು, 20 ವರ್ಷದ ಸನಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮೊದಲ ಬಾರಿಗೆ ಮತದಾನ ಮಾಡಲು ಧಾರವಾಡದಿಂದ ಹಟ್ಟಿ ಪಟ್ಟಣಕ್ಕೆ ಬಂದಿದ್ದಳು. ಮಸ್ಕಿ ವಿಧಾನಸಭಾ ಕ್ಷೇತ್ರದ ಜಕ್ಕಲುಮರಡಿಯಲ್ಲಿ ಮತದಾನ ಮಾಡಿ ವಾಸವಿರುವ ಹಟ್ಟಿಗೆ ಬೈಕ್‌ನಲ್ಲಿ ಮರಳುವಾಗ ಮುದಗಲ್ ಬಳಿ ಅಪಘಾತ ನಡೆದಿದೆ. ಇದನ್ನೂ ಓದಿ: ಬಿಎಸ್‍ವೈ ಕಣ್ಣೀರು ಹಾಕಿ ರಾಜೀನಾಮೆ ಕೊಟ್ಟು ಬಂದಾಗಿನಿಂದ ಇಂಪ್ಯಾಕ್ಟ್ ಆಯ್ತು: ಶೆಟ್ಟರ್

    ಧಾರವಾಡದಲ್ಲಿ ಬಿಎಸ್‌ಸಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿಗೆ (BSC Nursing Student) ಅಪಘಾತದಲ್ಲಿ ಕೈ, ಕಾಲು ಮುರಿತವಾಗಿದ್ದು, ಕಿಡ್ನಿ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳ ಚಿಕಿತ್ಸೆಗೆ ಪರದಾಡುತ್ತಿರುವ ಬಡ ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಮನೆಗೆ ಆಧಾರವಾಗಬೇಕಿದ್ದ ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೆ ಪೋಷಕರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಸಚಿನ್‌ ಪೈಲೆಟ್‌ಗೆ ರಾಹುಲ್‌ ಆರಂಭದಲ್ಲಿ ಮಾತು ಕೊಟ್ಟಿದ್ದರು, ನಂತರ ಏನಾಯ್ತು? – ವೇಣುಗೋಪಾಲ್‌ಗೆ ಉಲ್ಟಾ ಹೊಡೆದ ಡಿಕೆಶಿ

  • ತಂದೆಯ ಸಾಲ ತೀರಿಸಲು ಮೂತ್ರ ಪಿಂಡ ಮಾರಲು ಮುಂದಾದ ಮಗಳು 16 ಲಕ್ಷ ಕಳೆದುಕೊಂಡಳು

    ತಂದೆಯ ಸಾಲ ತೀರಿಸಲು ಮೂತ್ರ ಪಿಂಡ ಮಾರಲು ಮುಂದಾದ ಮಗಳು 16 ಲಕ್ಷ ಕಳೆದುಕೊಂಡಳು

    ಹೈದರಾಬಾದ್: ತಂದೆಯ ಸಾಲ ತೀರಿಸಲು ತನ್ನ ಮೂತ್ರಪಿಂಡ (Kidney) ಮಾರಲು ಯತ್ನಿಸಿದ್ದ ವಿದ್ಯಾರ್ಥಿನಿ (Student) ಸೈಬರ್ ವಂಚಕರ (Cyber Crooks) ಜಾಲಕ್ಕೆ ಸಿಕ್ಕಿ 16 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

    ಹೈದರಾಬಾದ್‌ನ ಗುಂಟೂರಿನ ನರ್ಸಿಂಗ್ ವಿದ್ಯಾರ್ಥಿನಿ (Nursing Student) ತನ್ನ ತಂದೆ ಮಾಡಿದ್ದ 2 ಲಕ್ಷ ರೂಪಾಯಿ ಸಾಲ ತೀರಿಸಲು ತನ್ನ ಮೂತ್ರಪಿಂಡ ಮಾರಾಟ ಮಾಡಲು ಯತ್ನಿಸಿದ್ದಾಳೆ. ಈ ವೇಳೆ ಸೈಬರ್ ವಂಚಕರಿಗೆ ಸಿಕ್ಕಿ ತನ್ನ ಬ್ಯಾಂಕ್ ಖಾತೆಯಿಂದ 16 ಲಕ್ಷ ರೂ. ಕಳೆದುಕೊಂಡಿದ್ದಾಳೆ. ಈ ಸಂಬಂಧ ಗುಂಟೂರು ಪೊಲೀಸರಿಗೆ (Guntur Police) ದೂರು ನೀಡಿದ್ದಾಳೆ. ಇದನ್ನೂ ಓದಿ: ಗಡಿ ವಿವಾದದ ನಡುವೆಯೂ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಭೇಟಿ

    ಆಕೆ ಕಿಡ್ನಿ ಮಾರಲು ಯತ್ನಿಸಿದಾಗ ವಂಚಕರು 3 ಕೋಟಿ ಆಫರ್ ನೀಡಿದ್ದಾರೆ. ಅದಕ್ಕೂ ಮುನ್ನ ಪೊಲೀಸ್ ವೆರಿಫಿಕೇಶನ್ ಹಾಗೂ ತೆರಿಗೆ ಹಣವಾಗಿ 16 ಲಕ್ಷ ರೂಪಾಯಿ ಪಾವತಿ ಮಾಡಬೇಕು ಎಂದು ಹೇಳಿದ್ದಾರೆ. ಈ ವೇಳೆ ಸೋಶಿಯಲ್ ಮೀಡಿಯಾದಲ್ಲಿ ಪ್ರವೀಣ್ ರಾಜ್ ಎಂಬವನನ್ನ ಭೇಟಿಯಾಗಿದ್ದು, ಆತ ಶೇ.50 ರಷ್ಟು ಹಣವನ್ನು ಆಪರೇಷನ್‌ಗೆ ಮುಂಚಿತವಾಗಿ, ಉಳಿದ ಹಣವನ್ನು ಕೆಲಸ ಮುಗಿದ ನಂತರ ಕೊಡುವುದಾಗಿ ಹೇಳಿದ್ದಾನೆ. ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ – ಅರುಣಾಚಲ ಪ್ರದೇಶದಲ್ಲಿ ವಾಯು ಗಸ್ತು ಆರಂಭಿಸಿದ ಭಾರತೀಯ ಸೇನೆ

    ಸಾಂದರ್ಭಿಕ ಚಿತ್ರ

    ಹಣ ವರ್ಗಾವಣೆ ಮಾಡುವುದಕ್ಕಾಗಿ ಚೆನ್ನೈ ಸಿಟಿ ಬ್ಯಾಂಕ್‌ನಲ್ಲಿ ಖಾತೆ ತೆರೆದಿದ್ದಾಳೆ. ಈ ಖಾತೆ ಮೂಲಕ 16 ಲಕ್ಷ ಪಾವತಿಸಿದ ಬಳಿಕ ಹಣ ಕೇಳಿದ್ದಾಳೆ. ನಂತರ ಹಣ ವಸೂಲಿ ಮಾಡಲು ದೆಹಲಿಗೆ ಹೋಗುವಂತೆ ಹೇಳಿದ್ದಾರೆ. ಆಕೆ ದೆಹಲಿಗೆ ತೆರಳಿದಾಗ ವಿಳಾಸ ಸಹ ನಕಲಿಯಾಗಿರುವುದು ಕಂಡುಬಂದಿದೆ.

    ಸಂತ್ರಸ್ತೆಯ ತಂದೆ ತನ್ನ ಎಟಿಎಂ ಕಾರ್ಡ್‌ಗಳಲ್ಲಿ ಒಂದನ್ನು ಮಗಳಿಗೆ ನೀಡಿದ್ದರು. ನವೆಂಬರ್‌ನಲ್ಲಿ ಖಾತೆಯಿಂದ ಹಣ ತೆಗೆದುಕೊಂಡಿರುವ ಬಗ್ಗೆ ಅವರಿಗೆ ಗೊತ್ತಾಯಿತು. ನಂತರ ಮಗಳನ್ನು ಮನೆಗೆ ಬರುವಂತೆ ಹೇಳಿದಾಗ, ಆಕೆ ಹಾಸ್ಟೆಲ್ ಬಿಟ್ಟು ಹೋಗಿದ್ದಳು. ಬಳಿಕ ಹುಡುಕಾಟ ನಡೆಸಿದ್ದ ಎನ್‌ಟಿಆರ್ ಜಿಲ್ಲೆಯ ಪೊಲೀಸರು ಜಗ್ಗಯ್ಯಪೇಟಾದಲ್ಲಿ ಆಕೆಯ ಸ್ನೇಹಿತನ ಮನೆಯಲ್ಲಿ ಆಕೆಯನ್ನು ಪತ್ತೆ ಹಚ್ಚಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಾಸ್ಟೆಲ್‌ನಲ್ಲಿ ನಿದ್ರೆ ಬರುತ್ತಿಲ್ಲ ಅಂತ 19ರ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

    ಹಾಸ್ಟೆಲ್‌ನಲ್ಲಿ ನಿದ್ರೆ ಬರುತ್ತಿಲ್ಲ ಅಂತ 19ರ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

    ಭುವನೇಶ್ವರ: ಹಾಸ್ಟೆಲ್ ಕೊಠಡಿಯಲ್ಲಿ ತನಗೆ ಸರಿಯಾಗಿ ನಿದ್ರೆ ಬರುತ್ತಿಲ್ಲವೆಂದು 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭುವನೇಶ್ವರದ ಹಾಸ್ಟೆಲ್‌ನಲ್ಲಿ ನಡೆದಿದೆ.

    ಬೋಲಂಗಿರ್ ಜಿಲ್ಲೆಯ ವಿದ್ಯಾರ್ಥಿನಿ ನಿನ್ನೆ ತಡರಾತ್ರಿ ಜಮುಕೋಲಿಯಲ್ಲಿರುವ ಖಾಸಗಿ ಹಾಸ್ಟೆಲ್‌ನಲ್ಲಿ ತನ್ನ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೃತದೇಹವನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಪ್ಲೇಟ್‍ನಲ್ಲಿದ್ದ ಮೊಮೊಸ್ ಬೀಳಿಸಿದ್ದಕ್ಕೆ ನಡೀತು ವ್ಯಕ್ತಿ ಬರ್ಬರ ಹತ್ಯೆ

    ಆತ್ಮಹತ್ಯೆ ಬಳಿಕ ವಿದ್ಯಾರ್ಥಿ ಕೋಣೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಕೆಲ ದಿನಗಳಿಂದ ಸರಿಯಾಗಿ ನಿದ್ರೆ ಬಾರದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತ್ರದಲ್ಲಿ ಬರೆದಿದ್ದಾಳೆ. ಅಲ್ಲದೇ ತನ್ನ ಸಾವಿಗೆ ಯಾರೂ ಕಾರಣರಲ್ಲ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕಾಗಿ ಕುಟುಂಬದವರಲ್ಲಿ ಕ್ಷಮೆಯಾಚಿಸುತ್ತೇನೆ ಎಂಬುದಾಗಿ ಬರೆದಿದ್ದಾಳೆ.

    ಫೋರೆನ್ಸಿಕ್ ಹಾಗೂ ಕೈಬರಹ ತಜ್ಞರು ಈ ಪತ್ರ ಯುವತಿಯೇ ಬರದಿದ್ದಾ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಈ ಪ್ರಕರಣವನ್ನು ಸಹಜ ಸಾವಿನ ಪ್ರಕರಣವೆಂದು ದಾಖಲಿಸಿ, ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ನನ್ನನ್ನು ಬಂಧಿಸುವಂತೆ ಒತ್ತಡ ಹಾಕಿದ್ದಕ್ಕೆ ಸಿಬಿಐ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಮನೀಶ್ ಸಿಸೋಡಿಯಾ

    ಏನಿದು ಸಾವಿನ ರಹಸ್ಯ?
    ಕೆಲ ದಿನಗಳಿಂದ ಆಕೆ ಮಾನಸಿಕ ಒತ್ತಡದಲ್ಲಿದ್ದಳು. ಇತರರು ಮಲಗಿದ್ದಾಗ ರಾತ್ರಿಯಿಡೀ ಹಾಸ್ಟೆಲ್ ಆವರಣದಲ್ಲೇ ಸುತ್ತಾಡಿದಳು, ಸರಿಯಾಗಿ ನಿದ್ರೆ ಮಾಡುತ್ತಿರಲಿಲ್ಲ. ಏಕೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆಕೆಯನ್ನು ಮನೆಗೆ ಕರೆದುಕೊಂದು ಹೋಗುವಂತೆ ಹಾಸ್ಟೆಲ್ ಅಧಿಕಾರಿಗಳು ಕುಟುಂಬದವರಿಗೆ ತಿಳಿಸಿದ್ದರು. ಅಷ್ಟರಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಏರ್‌ಫೀಲ್ಡ್ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್-ಇನ್‌ಚಾರ್ಜ್ ರಾಧಾಕಾಂತ ಸಾಹು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಒಂದೇ ಸಿರಿಂಜ್‍ನಿಂದ 39 ವಿದ್ಯಾರ್ಥಿಗಳಿಗೆ ಲಸಿಕೆ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

    ಒಂದೇ ಸಿರಿಂಜ್‍ನಿಂದ 39 ವಿದ್ಯಾರ್ಥಿಗಳಿಗೆ ಲಸಿಕೆ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

    ಭೋಪಾಲ್: ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ 39 ಮಕ್ಕಳಿಗೆ ಆಂಟಿ-ಕೊರೊನಾ ವೈರಸ್ ಲಸಿಕೆ ಡೋಸ್‍ಗಳನ್ನು ನೀಡಲು ಒಂದೇ ಸಿರಿಂಜ್ ಬಳಸಿದ ಲಸಿಕೆದಾರನನ್ನು ಬಂಧಿಸಲಾಗಿದೆ.

    vaccine

    ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ಶಿಬಿರವನ್ನು ಆಯೋಜಿಸಲಾಗಿತ್ತು. ಜಿತೇಂದ್ರ ಅಹಿರ್ವಾರ್ ಎಂದು ಗುರುತಿಸಲಾದ ನರ್ಸಿಂಗ್ ವಿದ್ಯಾರ್ಥಿಯನ್ನು ಲಸಿಕೆ ಹಾಕಲು ನಿಯೋಜಿಸಲಾಗಿದೆ. ವ್ಯಾಕ್ಸಿನೇಷನ್ ನಡೆಯುತ್ತಿರುವಾಗ ಜಿತೇಂದ್ರ, ಸಿರಿಂಜ್ ಬದಲಾಯಿಸದಿರುವುದನ್ನು ಗಮನಿಸಿದ ವಿದ್ಯಾರ್ಥಿಯ ತಂದೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 6 ರಿಂದ 7 ಮಂದಿ ಸೇರಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ 

    ಈ ಕುರಿತು ಪೋಷಕರು ಪ್ರಶ್ನೆ ಮಾಡಿದಾಗ ಆತ, ನಮ್ಮ ಗಾಡಿಯಲ್ಲಿ ಒಂದೇ ಸಿರಿಂಜ್ ಇತ್ತು. ಅದಕ್ಕೆ ನಾವು ಅದನ್ನೆ ಬಳಸಿದ್ದೇವೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ಪೋಷಕರು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಜಿತೇಂದ್ರನನ್ನು ಪೋಷಕರು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಜಿತೇಂದ್ರ ಅಹಿರ್ವಾರ್ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆರೋಗ್ಯ ಇಲಾಖೆಯಿಂದ ಲಸಿಕೆ ಕಾರ್ಯಕ್ರಮವನ್ನು ಕೈಗೊಳ್ಳಲು ತರಬೇತಿ ಪಡೆದಿದ್ದಾರೆ ಎಂದು ಸಾಗರ ಜಿಲ್ಲೆಯ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ(ಸಿಎಂಎಚ್‍ಒ) ಡಾ.ಡಿ.ಕೆ.ಗೋಸ್ವಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ಯುವತಿ ಫೋಟೋ ಬಳಸಿ ಯುವಕರಿಂದ 19 ಲಕ್ಷ ರೂ. ಎಗರಿಸಿದ್ದ ಆರೋಪಿ ಅರೆಸ್ಟ್ 

    ಜಿತೇಂದ್ರ ಅವರ ಆರೋಪಗಳ ಬಗ್ಗೆ ಸಿಎಂಎಚ್‍ಒ ಡಾ.ಗೋಸ್ವಾಮಿ ಅವರನ್ನು ಕೇಳಿದಾಗ, ಇದು ತನಿಖೆಯ ವಿಷಯವಾಗಿದೆ. ಘಟನೆಗೆ ಕಾರಣರಾದ ಜಿಲ್ಲಾ ವ್ಯಾಕ್ಸಿನೇಷನ್ ಅಧಿಕಾರಿಯನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಪೊಲೀಸರು ಗುರುವಾರ ಸಂಜೆ ಸಾಗರ್ ನಗರದಿಂದ ಜಿತೇಂದ್ರನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಎಫ್‍ಐಆರ್ ದಾಖಲಿಸಿಕೊಳ್ಳಾಗಿದೆ ಎಂದು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]