Tag: Nursing student

  • ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಸಾವು ಪ್ರಕರಣ – ಪತಿಗೆ 10 ವರ್ಷ ಜೈಲು, 12 ಲಕ್ಷ ದಂಡ

    ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಸಾವು ಪ್ರಕರಣ – ಪತಿಗೆ 10 ವರ್ಷ ಜೈಲು, 12 ಲಕ್ಷ ದಂಡ

    ತಿರುವನಂತಪುರಂ: ಇಡೀ ಕೇರಳ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ (22) ಸಾವಿನ ಪ್ರಕರಣದಲ್ಲಿ ಆರೋಪಿಯಾಗಿದ್ದ ಆಕೆಯ ಪತಿ ಎಸ್.ಕಿರಣ್ ಕುಮಾರ್‌ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 12.55 ಲಕ್ಷ ರೂ. ದಂಡ ವಿಧಿಸಿದೆ.

    ವಿಸ್ಮಯಾಳ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಕ್ಕಾಗಿ 6 ವರ್ಷ ಜೈಲು 2 ಲಕ್ಷ ರೂ. ದಂಡ, ಕ್ರಿಮಿನಲ್ ಬೆದರಿಕೆಯ ಅಪರಾಧಕ್ಕಾಗಿ 2 ವರ್ಷ ಜೈಲು, 50 ಸಾವಿರ ದಂಡ, ವರ್ದಕ್ಷಿಣೆ ನಿಷೇಧ ಕಾಯ್ದೆ ಅಡಿಯಲ್ಲಿ 6 ವರ್ಷ ಜೈಲು 10 ಲಕ್ಷ ರೂ. ದಂಡ, ವರದಕ್ಷಿಣೆ ಕಿರುಕುಳ ನೀಡಿದ ಅಪರಾಧಕ್ಕಾಗಿ 1 ವರ್ಷ ಜೈಲು ಹಾಗೂ 5 ಸಾವಿರ ದಂಡ ಸೇರಿದಂತೆ ಒಟ್ಟಾರೆ 25 ವರ್ಷ ಜೈಲು ಶಿಕ್ಷೆ ವಿಧಿಸಿದ್ದರೂ, 10 ವರ್ಷ ಅವರು ಜೈಲು ವಾಸ ಅನುಭವಿಸಬೇಕಾಗುತ್ತದೆ. ಜೊತೆಗೆ 12.55 ಲಕ್ಷ ರೂಪಾಯಿಗಳನ್ನು ವಿಸ್ಮಯಾ ಪೋಷಕರಿಗೆ ಪರಿಹಾರವಾಗಿ ನೀಡಬೇಕಾಗುತ್ತದೆ ಎಂದು ಕೊಲ್ಲಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ.

    ಪ್ರಕರಣದ ಏಕೈಕ ಆರೋಪಿಯಾಗಿರುವ ಕಿರಣ್‌ಗೆ ಭಾರತೀಯ ದಂಡ ಸಂಹಿತೆ(IPC)ಯ ಅನ್ವಯ 304B (ವರದಕ್ಷಿಣೆ ಸಾವು), 498 A (ವರದಕ್ಷಿಣೆ ಕಿರುಕುಳ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಈ 3 ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ವಿಸ್ಮಯಾ ಸಾವಿಗೂ ಮುನ್ನ ಗಂಡ-ಹೆಂಡತಿ ನಡುವಿನ ಫೋನ್ ಸಂಭಾಷಣೆಯ ರೆಕಾರ್ಡಿಂಗ್ ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳು ಪ್ರಕರಣದಲ್ಲಿ ಪ್ರಮುಖ ಪುರಾವೆಯಾಗಿ ಸಿಕ್ಕಿದ್ದನ್ನು ಆಧಾರಿಸಿ ತೀರ್ಪು ಪ್ರಕಟಿಸಿದೆ.

    ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ ಸಾವಿನ ಪ್ರಕರಣದಲ್ಲಿ ಪತಿಯೇ ತಪ್ಪಿತಸ್ಥ ಎಂದು ಕೊಲ್ಲಂ ಕೋರ್ಟ್ ನಿನ್ನೆ ತೀರ್ಪು ನೀಡಿತ್ತು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಎನ್.ಸುಜಿತ್ ಅವರು, ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದರು.

    ವರದಕ್ಷಿಣೆ ಕಿರುಕುಳದಿಂದ ವಿಸ್ಮಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇರಳ ಪೊಲೀಸರು 500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. 22 ವರ್ಷದ ವಿಸ್ಮಯಾ ಜೂನ್ 21, 2021 ರಂದು ಕೊಲ್ಲಂ ಜಿಲ್ಲೆಯ ಸಾಸ್ತಾಮ ಕೋಟಾದಲ್ಲಿ ತನ್ನ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಘಟನೆಗೆ ಒಂದು ದಿನ ಮೊದಲೇ ವಿಸ್ಮಯಾ ತನ್ನ ಸಂಬಂಧಿಕರಿಗೆ ವರದಕ್ಷಿಣೆ ಕಿರುಕುಳದ ಆರೋಪದ ಬಗ್ಗೆ ವಾಟ್ಸಾಪ್ ಸಂದೇಶಗಳನ್ನು ಕಳುಹಿಸಿದ್ದಳು. ಜೊತೆಗೆ ತನ್ನ ದೇಹದ ಮೇಲೆ ಗಾಯಗಳು ಹಾಗೂ ಹೊಡೆದ ಗುರುತುಗಳ ಫೋಟೋಗಳನ್ನು ಕಳುಹಿಸಿದ್ದಳು.

    2020ರಲ್ಲಿ ನಡೆದ ವಿವಾಹದ ವೇಳೆ ಕುಮಾರ್‌ಗೆ ವರದಕ್ಷಿಣೆಯಾಗಿ 10 ಲಕ್ಷ ರೂ. ಮೌಲ್ಯದ ಕಾರನ್ನು ನೀಡಿದ್ದಲ್ಲದೆ 100 ಸವರನ್ ಚಿನ್ನ ಹಾಗೂ 1 ಎಕರೆಗೂ ಹೆಚ್ಚು ಭೂಮಿ ನೀಡಲಾಗಿತ್ತು. ಆದರೆ ಕುಮಾರ್‌ಗೆ ಕಾರು ಇಷ್ಟವಾಗದೆ 10 ಲಕ್ಷ ರೂ. ನಗದು ಬೇಕೆಂದು ಬಯಸಿದ್ದ. ಅದು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ ಆಕೆಗೆ ಚಿತ್ರಹಿಂಸೆ ನೀಡಲು ಪ್ರಾರಂಭಿಸಿದ್ದಾನೆ ಎಂದು ವಿಸ್ಮಯಾಳ ತಂದೆ ಹೇಳಿದ್ದರು. ಈ ಪ್ರಕರಣ ಇಂದು ಅಂತ್ಯಕಂಡಿದ್ದು, ವಿಸ್ಮಯಾಳ ಪತಿಗೆ ಶಿಕ್ಷೆ ವಿಧಿಸಲಾಗಿದೆ.

  • ಫೀಸ್ ಕಟ್ಟಲು ಕಾಲೇಜಿನಿಂದ ಕಿರುಕುಳ- ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

    ಫೀಸ್ ಕಟ್ಟಲು ಕಾಲೇಜಿನಿಂದ ಕಿರುಕುಳ- ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

    – ಡೆತ್ ನೋಟ್ ಬರೆದಿಟ್ಟು, ಬಾತ್ ರೂಂನಲ್ಲಿ ಆತ್ಮಹತ್ಯೆಗೆ ಶರಣು

    ಮಂಗಳೂರು: ಕೊಲೊಸೊ ಆಸ್ಪತ್ರೆಯ ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾಳೆ. ಕಾಲೇಜಿನಿಂದ ಫೀಸ್ ಕಟ್ಟಲು ಒತ್ತಡ ಹಾಕುತ್ತಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೇಲ್ನೋಟಕ್ಕೆ ತಿಳಿದಿದೆ.

    ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿ ಮಂಗಳೂರಿನ ಕದ್ರಿ ಬಳಿಯ ಕೊಲಾಸೊ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದಳು. ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು, ಮಂಗಳವಾರ ಹಾಸ್ಟೆಲ್ ನ ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಳು. ಬಳಿಕ ವಿದ್ಯಾರ್ಥಿನಿಯನ್ನು ರಕ್ಷಿಸಿ, ಮಂಗಳೂರಿನ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಜಿಲೆಟಿನ್ ಇಟ್ಟುಕೊಂಡು ಹೆಂಡತಿಯನ್ನು ತಬ್ಬಿದ-ಬಾಂಬ್ ಸ್ಫೋಟವಾಗಿ ಇಬ್ಬರು ಸಾವು

    ಕಾಲೇಜಿನಲ್ಲಿ ಫೀಸ್ ಕಟ್ಟಲು ಒತ್ತಡ ಹೆಚ್ಚಾದ ಹಿನ್ನೆಲೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಫೀಸ್ ಕಟ್ಟುವ ವಿಚಾರದಲ್ಲಿ ಕಾಲೇಜಿನಿಂದ ಕಿರುಕುಳ ನೀಡಲಾಗುತ್ತಿತ್ತು ಎಂಬ ಶಂಕೆ ಸಹ ವ್ಯಕ್ತವಾಗಿದೆ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

  • ಸೆಕ್ಸ್ ವೇಳೆ ಮೂರ್ಛೆ ಹೋದ್ಳು, ನಾನು ಕೊಲೆ ಮಾಡಿಲ್ಲ ಅಂದ ಆರೋಪಿ!

    ಸೆಕ್ಸ್ ವೇಳೆ ಮೂರ್ಛೆ ಹೋದ್ಳು, ನಾನು ಕೊಲೆ ಮಾಡಿಲ್ಲ ಅಂದ ಆರೋಪಿ!

    – ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯ ರೇಪ್ ಆ್ಯಂಡ್ ಮರ್ಡರ್

    ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೇಪ್ ಆ್ಯಂಡ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ರೆಹಮಾನ್ ಎಂಬಾತನನ್ನು ಬಂಧಿಸಿದ್ದಾರೆ. ಆದ್ರೆ ಆರೋಪಿ ಸೆಕ್ಸ್ ವೇಳೆ ಆಕೆ ಮೂರ್ಛೆ ಹೋದಳು. ನಾನು ಆಕೆಯನ್ನ ಕೊಲೆ ಮಾಡಿಲ್ಲ ಎಂದು ಪೊಲೀಸರ ಮುಂದೆ ಹೇಳಿದ್ದಾನೆ ಎಂದು ತಿಳಿದು ಬಂದಿದೆ.

    ಅಸ್ಸಾಂ ಮೂಲದ 21 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಅಸ್ಸಾಂ ಮೂಲಕ ವಿದ್ಯಾರ್ಥಿನಿಗೂ ಮತ್ತು ಆರೋಪಿ ರೆಹಮಾನ್ ಗೂ ಸ್ನೇಹವಿತ್ತು. ಹಾಗೆ ಎರಡೂ ಕುಟುಂಬಗಳ ಒಡನಾಟವಿತ್ತು. ಕಳೆದ ಒಂದೂವರೆ ವರ್ಷದಿಂದ ರೆಹಮಾನ್ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದನು. ರೆಹಮಾನ್ ಮೂಲಕವೇ ವಿದ್ಯಾರ್ಥಿನಿ ನರ್ಸಿಂಗ್ ವಿದ್ಯಾಭ್ಯಾಸಕ್ಕಾಗಿ ದೂರದ ಅಸ್ಸಾಂನಿಂದ ಬೆಂಗಳೂರಿಗೆ ಬಂದಿದ್ದಳು.

    ರೆಹಮಾನ್ ಜೊತೆ ಸೇರಿ ಕಾಲೇಜು ಅಡ್ಮಿಶನ್ ಮಾಡಿ, ಒಂದು ದಿನ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಬುಧವಾರ ಶಾಪಿಂಗ್ ಗಾಗಿ ರೆಹಮಾನ್ ಕರೆದೊಯ್ಯಲು ಆತ ವಾಸವಿದ್ದ ಕೊಠಡಿಗೆ ಬಂದಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನ ಅತ್ಯಾಚಾರಗೈದು ಕೊಲೆ ಮಾಡಿದ್ದಾನೆ ಎಂಬ ಆರೋಪಗಳು ಕೇಳಿ ಬಂದಿವೆ.

    ಸೆಕ್ಸ್ ವೇಳೆ ಆಕೆ ಪ್ರಜ್ಞಾಹೀನಳಾದಳು. ಇದರಿಂದ ಭಯವಾಗಿ ಮನೆಯ ಮಾಲೀಕರ ಸಹಾಯ ಪಡೆದು ಆಸ್ಪತ್ರೆಗೆ ದಾಖಲಿಸಿದೆ. ಆದ್ರೆ ವೈದ್ಯರು ಗೆಳತಿ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾಳೆ ಎಂದು ದೃಢಪಡಿಸಿದರು. ಆದ್ರೆ ಆಕೆಯನ್ನ ನಾನು ಕೊಂದಿಲ್ಲ ಎಂದು ಆರೋಪಿ ರೆಹಮಾನ್ ಪೊಲೀಸರ ಮುಂದೆ ಹೇಳಿದ್ದಾನೆ ಎಂದು ತಿಳಿದು ಬಂದಿದೆ.

  • ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

    ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

    ಕಾರವಾರ: ಪರೀಕ್ಷೆ ಬರೆಯಲು ತೆರಳಬೇಕಿದ್ದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹಾರವಾಡಾ ಗ್ರಾಮದ ಒಕ್ಕಲಕೇರಿಯಲ್ಲಿ ನಡೆದಿದೆ.

    ನಾಗರತ್ನಾ ಗೌಡ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಉಳವರೆಯ ಬೊಳಕುಂಟೆ ಗ್ರಾಮದ ನಾಗರತ್ನಾ ಹಾರವಾಡದ ತನ್ನ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಕಲಿಕೆಯಲ್ಲೂ ಮುಂದಿದ್ದ ನಾಗರತ್ನಾ ನರ್ಸಿಂಗ್ ಮಾಡುತ್ತಿದ್ದಳು.

    ಸೋಮವಾರ ನರ್ಸಿಂಗ್ ಕೋರ್ಸ್ ಪರೀಕ್ಷೆ ಬರೆದು ಬಂದಿದ್ದ ಯುವತಿ ಮಂಗಳವಾರ ಪರೀಕ್ಷೆಗೆ ತೆರಳುವ ಮುನ್ನವೇ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಬಾಗಿಲು ಹಾಕಿಕೊಂಡು ನೇಣಿಗೆ ಕೊರಳೊಡ್ಡಿದ್ದಾಳೆ. ಬಳಿಕ ಮನೆಯವರು ಬಂದು ಬಾಗಿಲು ಒಡೆದು ನಾಗರತ್ನಾಳನ್ನು ನೇಣಿನಿಂದ ರಕ್ಷಿಸುವ ಪ್ರಯತ್ನ ಮಾಡಿದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ಸ್ಥಳಕ್ಕೆ ಆಗಮಿಸಿ ಸಿಪಿಐ ಕೃಷ್ಣಾನಂದ ನಾಯಕ, ಪಿಎಸ್ ಐ ಸಂಪತ್ ಕುಮಾರ್ ಪರಿಶೀಲನೆ ನಡೆಸಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಜೂ.ಹುಡುಗಿ ಜೊತೆ ಲವ್ವರ್ ಮದ್ವೆ ನಿಗದಿ – ವಾಟ್ಸಪ್‍ನಲ್ಲಿ ಫೋಟೋ ನೋಡಿ ವಿಷ ಕುಡಿದ್ಳು!

    ಜೂ.ಹುಡುಗಿ ಜೊತೆ ಲವ್ವರ್ ಮದ್ವೆ ನಿಗದಿ – ವಾಟ್ಸಪ್‍ನಲ್ಲಿ ಫೋಟೋ ನೋಡಿ ವಿಷ ಕುಡಿದ್ಳು!

    – ವಿಷ ಸೇವಿಸಿ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ತಿರುವನಂತಪುರಂ: ಎರಡು ದಿನಗಳ ಹಿಂದೆ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಳು. ಇದೀಗ ಆಕೆಯ ಕುಟುಂಬದವರು ಗೆಳೆಯ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.

    ಈ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದ್ದು, ಶುಕ್ರವಾರ ಅರಟ್ಟುಪುಳ ಮೂಲದ ಅರ್ಚನಾ (21) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನರ್ಸಿಂಗ್ ವಿದ್ಯಾರ್ಥಿನಿ. ಪ್ರೀತಿಸಿದ ಹುಡುಗ ಹೆಚ್ಚಿನ ವರದಕ್ಷಿಣೆ ಬೇಕೆಂದು ಕೇಳಿದ್ದನು. ಇದರಿಂದ ಮನನೊಂದು ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಬಂಧಿಕರು ಕೇಳಿದ್ದಾರೆ.

    ಏನಿದು ಪ್ರಕರಣ?
    ಅರ್ಚನಾ ಮತ್ತು ಯುವಕ ಕಳೆದ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಏಳು ತಿಂಗಳ ಹಿಂದೆ ಯುವಕ ಮತ್ತು ಅವನ ಕುಟುಂಬವು ಮದುವೆಯ ಪ್ರಸ್ತಾಪದೊಂದಿಗೆ ನಮ್ಮ ಮನೆಗೆ ಬಂದಿದ್ದರು. ಈ ವೇಳೆ 100 ಗ್ರಾ ಚಿನ್ನವನ್ನು ವರದಕ್ಷಿಣೆಯಾಗಿ ನೀಡುವಂತೆ ಒತ್ತಾಯಿಸುತ್ತಿದ್ದರು. ನನ್ನ ತಂದೆ ದಿನಗೂಲಿ ಕಾರ್ಮಿಕರಾಗಿದ್ದು, ನಾವು ಅಷ್ಟು ವರದಕ್ಷಿಣೆ ನೀಡಲು ಸಾಧ್ಯವಿಲ್ಲ ಮತ್ತು ಮದುವೆಗೆ ಕೇವಲ 30 ಗ್ರಾಂ ಚಿನ್ನವನ್ನು ಮಾತ್ರ ನೀಡಬಹುದು ಎಂದು ಹೇಳಿದೆವು. ಆದರೆ ಯುವಕನ ಮನೆಯವರು ಇದಕ್ಕೆ ಒಪ್ಪಿಕೊಂಡಿಲ್ಲ ಎಂದು ಅರ್ಚನಾಳ ಸಹೋದರಿ ತಿಳಿಸಿದ್ದಾಳೆ.

    ಕೆಲವು ವಾರಗಳ ಹಿಂದೆ ಯುವಕನ ಕುಟುಂಬದವರು ಬೇರೆ ಹುಡುಗಿಯೊಂದಿಗೆ ಅವನ ಮದುವೆಯನ್ನು ನಿಶ್ಚಯಿಸಿದ್ದರು. ಆತನಿಗೆ ನಿಶ್ಚಯ ಮಾಡಿದ್ದ ಹುಡುಗಿ ಕೂಡ ಅರ್ಚನಾ ವ್ಯಾಸಂಗ ಮಾಡುತ್ತಿದ್ದ ಕಾಲೇಜಿನಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದು, ಜೂನಿಯರ್ ವಿದ್ಯಾರ್ಥಿನಿಯಾಗಿದ್ದಳು. ಶುಕ್ರವಾರ ಯಾರೋ ಇಬ್ಬರಿಗೂ ವಿವಾಹ ನಿಶ್ಚಯ ಮಾಡುವ ಫೋಟೋವನ್ನು ಅರ್ಚನಾಗೆ ಕಳುಹಿಸಿದ್ದಾರೆ. ಅದೇ ದಿನ ಅವಳು ವಿಷ ಸೇವಿಸಿದ್ದು, ತಕ್ಷಣ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದೆವು. ಅಷ್ಟರಲ್ಲಿಯೇ ಅರ್ಚನಾ ಸಾವನ್ನಪ್ಪಿದ್ದಳು ಅರ್ಚನಾ ಚಿಕ್ಕಪ್ಪ ಶ್ರೀಕುಮಾರ್ ಹೇಳಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿದ್ದಾರೆ. ಅರ್ಚನಾ ವಿಷ ಕುಡಿಯುವ ಮುನ್ನ ಸ್ನೇಹಿತರಿಗೆ ವಾಟ್ಸಪ್ ಆಡಿಯೋ ಸಂದೇಶವನ್ನು ರವಾನಿಸಿದ್ದಾಳೆ. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯಕ್ಕೆ ನಾವು ಈ ಕುರಿತು ಎಲ್ಲ ಆಯಾಮಾಗಳಲ್ಲಿ ತನಿಖೆ ನಡೆಸುತ್ತಿದ್ದೇವೆ. ಈ ಪ್ರಕರಣದಲ್ಲಿ ಯಾರನ್ನೂ ಆರೋಪಿ ಎಂದು ಪರಿಗಣಿಸಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಮೆಡಿಕಲ್ ಕಾಲೇಜಿನ ಕಟ್ಟಡದಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ

    ಮೆಡಿಕಲ್ ಕಾಲೇಜಿನ ಕಟ್ಟಡದಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ

    -ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

    ಲಕ್ನೋ: ನರ್ಸಿಂಗ್ ವಿದ್ಯಾರ್ಥಿನ ಮೆಡಿಕಲ್ ಕಾಲೇಜಿನ ಕಟ್ಟಡದ ಮೊದಲ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ. ಬುಧವಾರ ಪೊಲೀಸರು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.

    ವರುಣ್ ಅರ್ಜುನ್ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಕೋವಿಡ್-19 ರೋಗಿಗಳ ವಿಭಾಗಕ್ಕೆ ನೇಮಿಸಲಾಗಿತ್ತು. ಆದ್ರೆ ನರ್ಸಿಂಗ್ ವಿದ್ಯಾರ್ಥಿನಿಗೆ ಡ್ಯೂಟಿಗೆ ತೆರಳಲು ಸಿದ್ಧವಿರಲಿಲ್ಲ. ಅಧಿಕಾರಿಗಳ ಒತ್ತಡದಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

    ವಿದ್ಯಾರ್ಥಿನಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ವಿದ್ಯಾರ್ಥಿನಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೋವಿಡ್-19 ಆಸ್ಪತ್ರೆಯಲ್ಲಿ ಯಾವುದೇ ಸುರಕ್ಷತೆ ಇಲ್ಲ. ಹಾಗಾಗಿ ಅಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿನಿ ಹಿರಿಯ ಅಧಿಕಾರಿಗಳ ಮುಂದೆ ಮನವಿ ಮಾಡಿಕೊಂಡಿದ್ದಾರೆ. ಇದೇ ವಿಡಿಯೋದಲ್ಲಿ ವಿದ್ಯಾರ್ಥಿನಿ ಸಂಬಳ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಇರಿಸಿದ್ದಾಳೆ. ನಮ್ಮ ಮೇಲೆ ಮಾನಸಿಕವಾಗಿ ಒತ್ತಡ ಹಾಕಲಾಗುತ್ತಿದೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.