Tag: Oath Taking

  • ಸೋಮವಾರ ದೆಹಲಿಗೆ ನೂತನ ಸಿಎಂ ಆಯ್ಕೆ – ಫೆ.18ರಂದೇ ಪ್ರಮಾಣ ವಚನ

    ಸೋಮವಾರ ದೆಹಲಿಗೆ ನೂತನ ಸಿಎಂ ಆಯ್ಕೆ – ಫೆ.18ರಂದೇ ಪ್ರಮಾಣ ವಚನ

    ನವದೆಹಲಿ: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ದೆಹಲಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ (BJP) ಸೋಮವಾರ (ಫೆ.17) ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಉನ್ನತಮಟ್ಟದ ಸಭೆ ಆಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

    ಸೋಮವಾರ ಮಧ್ಯಾಹ್ನ 3 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಅವರ ನೇತೃತ್ವದಲ್ಲಿ ದೆಹಲಿ ಪ್ರಧಾನ ಕಚೇರಿಯಲ್ಲಿ ನಿರ್ಣಾಯಕ ಸಭೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಕ್ಷದ ಎಲ್ಲಾ ಶಾಸಕರು ಹಾಗೂ ದೆಹಲಿಯ ಎಲ್ಲಾ 7 ಸಂಸದರೂ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಸಭೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದು, ಮಂಗಳವಾರ (ಫೆ.18) ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

    ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಲ್ಲಾ ಎನ್‌ಡಿಎ ಮೈತ್ರಿಕೂಟದ ನಾಯಕರು ಭಾಗವಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

    ದೆಹಲಿಯ ನೂತನ ಸಿಎಂ ಯಾರು?
    ಸದ್ಯ ದೆಹಲಿ ಸಿಎಂ ಪಟ್ಟಕ್ಕೆ ಹಲವರ ಹೆಸರು ರೇಸ್‌ನಲ್ಲಿವೆ. ನವದೆಹಲಿ ಕ್ಷೇತ್ರದಲ್ಲಿ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ ಮತ್ತು ಕಲ್ಕಾಜಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ಸೋಲಿಸಿದ ರಮೇಶ್ ಬಿಧೂರಿ ಸೇರಿದಂತೆ ಐವರ ಹೆಸರು ರೇಸ್‌ನಲ್ಲಿದೆ. ಇದರೊಂದಿಗೆ ಬಿಜೆಪಿ ಸಂಸದ ಮನೋಜ್ ತಿವಾರಿ, ಕಪಿಲ್ ಮಿಶ್ರಾ, ಆಶಿಶ್ ಸೂದ್, ರೇಖಾ ಗುಪ್ತಾ, ಮತ್ತು ವಿಜೇಂದರ್ ಗುಪ್ತಾ ಅವರ ಹೆಸರುಗಳೂ ಕೇಳಿಬಂದಿವೆ.

  • ಶಾಸಕಾಂಗ ಪಕ್ಷದ ನಾಯಕನಾಗಿ ಸೈನಿ ಅವಿರೋಧ ಆಯ್ಕೆ –  ಎರಡನೇ ಬಾರಿಗೆ ಸಿಎಂ ಆಗಿ ಗುರುವಾರ ಪ್ರಮಾಣವಚನ

    ಶಾಸಕಾಂಗ ಪಕ್ಷದ ನಾಯಕನಾಗಿ ಸೈನಿ ಅವಿರೋಧ ಆಯ್ಕೆ – ಎರಡನೇ ಬಾರಿಗೆ ಸಿಎಂ ಆಗಿ ಗುರುವಾರ ಪ್ರಮಾಣವಚನ

    ಚಂಡೀಗಢ: ಸತತ ಮೂರನೇ ಬಾರಿಗೆ ಹರಿಯಾಣದಲ್ಲಿ (Haryana)  ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ಪಂಚಕುಲದಲ್ಲಿ (Panchkula) ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರ ಹೆಸರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

    ವೀಕ್ಷಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಅನಿಲ್ ವಿಜ್ ಮತ್ತು ಕೃಷ್ಣಾ ಬೇಡಿ ಅವರು ನಯಾಬ್ ಸಿಂಗ್ ಸೈನಿ ಅವರ ಹೆಸರಿನ ಪ್ರಸ್ತಾವನೆ ಮುಂದಿಟ್ಟರು. ಪ್ರಸ್ತಾವನೆಗೆ ಅವಿರೋಧವಾಗಿ ಶಾಸಕರು ಬೆಂಬಲ ಸೂಚಿಸಿದ ಹಿನ್ನೆಲೆ ಸೈನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಿಸಲಾಯಿತು. ಇದನ್ನೂ ಓದಿ: ಚಿತ್ರದುರ್ಗ| ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ

    ಗುರುವಾರ ಬೆಳಗ್ಗೆ 11:30ಕ್ಕೆ ಪಂಚಕುಲದಲ್ಲಿ ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಹಾರ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಪುದುಚೆರಿ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಸೈಟ್ ಸಿದ್ದಪ್ಪನವರೇ, ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? – ಜೆಡಿಎಸ್ ಟೀಕೆ

    ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್ ಲಾಲ್ ಬಡೋಲಿ ಮಾತನಾಡಿ, ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿದಂತೆ 37 ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ. ಇವರಲ್ಲಿ ಕೇಂದ್ರ ಸಚಿವರು, ಎನ್‌ಡಿಎ ಘಟಕಗಳ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದ್ದಾರೆ. ನಾವು ಎಲ್ಲರೊಂದಿಗೆ ಸಂಪರ್ಕದಲ್ಲಿದ್ದೇವೆ. ಬೆಳಗ್ಗೆ 11 ಗಂಟೆಯ ಸುಮಾರಿಗೆ ಕಾರ್ಯಕ್ರಮ ಆರಂಭವಾಗಿ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮುಕ್ತಾಯವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ – ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಪ್ರತಿಭಟನೆ

    ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಮಾತನಾಡಿದ ನಯಾಬ್ ಸಿಂಗ್ ಸೈನಿ, ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. 2047ರ ವೇಳೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಲು ಜನರು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಮೂರನೇ ಬಾರಿಗೆ ಅಧಿಕಾರ ನೀಡಿದ್ದಾರೆ. 24,000 ಯುವಕರ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಮೊದಲು ಪ್ರಕಟಿಸಿ ನಂತರ ಪ್ರಮಾಣ ವಚನ ಸ್ವೀಕರಿಸುವುದಾಗಿ ಘೋಷಿಸಿದ್ದೆ. ಆ ಭರವಸೆಯಂತೆ ನಾಳೆ (ಗುರುವಾರ) ಫಲಿತಾಂಶ ಪ್ರಕಟಿಸಲಾಗುವುದು. ಬಿಜೆಪಿ ಹೇಳಿದ್ದನ್ನೇ ಮಾಡುತ್ತದೆ ಎಂದರು. ಇದನ್ನೂ ಓದಿ: ಮಂತ್ರಾಲಯಕ್ಕೆ ಹೊರಟಿದ್ದ ಕ್ರೂಸರ್ ಪಲ್ಟಿ: ಚಾಲಕನ ಕೈ ಮುರಿತ, ಹಲವರಿಗೆ ಗಾಯ

  • ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು, ಡಿಸಿಎಂ ಆಗಿ ಪವನ್ ಕಲ್ಯಾಣ್ ನಾಳೆ ಪ್ರಮಾಣವಚನ ಸ್ವೀಕಾರ

    ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು, ಡಿಸಿಎಂ ಆಗಿ ಪವನ್ ಕಲ್ಯಾಣ್ ನಾಳೆ ಪ್ರಮಾಣವಚನ ಸ್ವೀಕಾರ

    ಅಮರಾವತಿ: ಆಂಧ್ರದಲ್ಲಿ (Andhra Pradesh) ನಾಳೆ ಎನ್‌ಡಿಎ (NDA) ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಸಿಎಂ ಆಗಿ ಚಂದ್ರಬಾಬು ನಾಯ್ಡು (Chandrababu Naidu), ಡಿಸಿಎಂ ಆಗಿ ಜನಸೇನಾನಿ ಪವನ್ ಕಲ್ಯಾಣ್ (Pawan Kalyan) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಚಂದ್ರಬಾಬು ಸಂಪುಟದಲ್ಲಿ ಬಿಜೆಪಿಗರಿಗೂ ಸ್ಥಾನಮಾನ ಸಿಗಲಿದೆ ಎಂದು ಹೇಳಲಾಗಿದೆ. ನಾಳೆಯ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ಮೋದಿ, ಚಿರಂಜೀವಿ, ರಜಿನಿಕಾಂತ್ ಸೇರಿ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ. ಅಮರಾವತಿಯೇ ಆಂಧ್ರ ರಾಜಧಾನಿ. ವಿಶಾಖಪಟ್ಟಣ ಆರ್ಥಿಕ ರಾಜಧಾನಿ ಎಂದು ಭಾವಿ ಸಿಎಂ ಚಂದ್ರಬಾಬು ನಾಯ್ಡು ಘೋಷಣೆ ಮಾಡಿದ್ದಾರೆ. ಇನ್ನು ಆಂಧ್ರದಲ್ಲಿಯೂ ಕರ್ನಾಟಕ, ತೆಲಂಗಾಣ ಮಾದರಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಯಣಕ್ಕೆ ಅವಕಾಶ ಮಾಡಿಕೊಡುವ ಬಗ್ಗೆ ಈಗಾಗಲೇ ಅಧ್ಯಯನ ಶುರುವಾಗಿದ್ದು, ಮುಂದಿನ ಒಂದೆರಡು ವಾರಗಳಲ್ಲಿ ಈ ಯೋಜನೆ ಜಾರಿಯಾಗುವ ಸಂಭವ ಇದೆ. ಇದನ್ನೂ ಓದಿ: ಎರಡು ಕಿವಿಗಳಲ್ಲೂ ಶ್ರವಣದೋಷ ಇದ್ದ ನೈಜೀರಿಯನ್ ಯುವತಿಗೆ ಫೋರ್ಟಿಸ್‌ ವೈದ್ಯರಿಂದ ಯಶಸ್ವಿ ‘ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ’

    ಮತ್ತೊಂದೆಡೆ ಒಡಿಶಾದಲ್ಲಿಯೂ ನಾಳೆಯೇ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಇಂದು ಭುವನೇಶ್ವರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬುಡಕಟ್ಟು ಸಮುದಾಯದ ಮೋಹನ್ ಮಝ್ಹಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ನಾಳೆ ಮೋದಿ ಸಮ್ಮುಖದಲ್ಲಿ ಮೋಹನ್ ಮಝ್ಹಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 52 ವರ್ಷದ ಮೋಜನ್ ಮಝ್ಹಿ ನಾಲ್ಕನೇ ಬಾರಿ ಕಿಯೋಂಜರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇನ್ನು, ಎರಡು ಡಿಸಿಎಂ ಹುದ್ದೆ ಸೃಷ್ಟಿಸಲು ಬಿಜೆಪಿ ನಿರ್ಧರಿಸಿದೆ. ನಾಳೆಯ ಪದಗ್ರಹಣ ಸಮಾರಂಭಕ್ಕೆ ಮಾಜಿ ಸಿಎಂ ನವೀನ್ ಪಟ್ನಾಯಕ್‌ರನ್ನು ಬಿಜೆಪಿ ಆಹ್ವಾನಿಸಿದೆ. ವಿಶೇಷ ಎಂದರೆ ಒಡಿಶಾ ನೂತನ ಸಿಎಂಗೆ ಅಧಿಕೃತ ನಿವಾಸವನ್ನು ಹುಡುಕಲಾಗುತ್ತಿದೆ. 24 ವರ್ಷ ಸಿಎಂ ಆಗಿದ್ದ ನವೀನ್ ಪಟ್ನಾಯಕ್ ತಮ್ಮ ನಿವಾಸದಿಂದಲೇ ಆಡಳಿತ ನಡೆಸಿದ್ದ ಕಾರಣ ಈ ಸಮಸ್ಯೆ ಉದ್ಭವ ಆಗಿದೆ. ಇದನ್ನೂ ಓದಿ: SDMFನಿಂದ 100 ಕೋಟಿ ಬಿಡುಗಡೆ – ಮೊದಲ ಹಂತದಲ್ಲಿ 93 ಕೆರೆಗಳ ಸಂಗ್ರಹಣಾ ಸಾಮರ್ಥ್ಯ ವೃದ್ಧಿ: ಸಚಿವ ಎನ್‌.ಎಸ್‌.ಬೋಸರಾಜು

  • ಕೇಂದ್ರ ಸಚಿವರಾಗಿ ಕರ್ನಾಟಕದ ನಾಲ್ವರು ಪ್ರಮಾಣವಚನ ಸ್ವೀಕಾರ

    ಕೇಂದ್ರ ಸಚಿವರಾಗಿ ಕರ್ನಾಟಕದ ನಾಲ್ವರು ಪ್ರಮಾಣವಚನ ಸ್ವೀಕಾರ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಸಂಪುಟದ ಸಚಿವರಾಗಿ (Cabinet Ministers) ಕರ್ನಾಟಕದ (Karnataka)  ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.

    ಕೇಂದ್ರ ಸಚಿವರಾಗಿ ಹೆಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲಿಗೆ ದೇವರ ಹೆಸರಲ್ಲಿ ಹೆಚ್‌ಡಿಕೆ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇದನ್ನೂ ಓದಿ: ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಲ್ಹಾದ್ ಜೋಶಿ

    ಪ್ರಹ್ಲಾದ್ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರು ಎರಡನೇ ಬಾರಿಗೆ ಮೋದಿ ಸಂಪುಟ ಸಚಿವರಾಗಿದ್ದಾರೆ. ಜೊತೆಗೆ ವಿ ಸೋಮಣ್ಣ ಅವರು ಕೂಡ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇದನ್ನೂ ಓದಿ: 4 ಬಾರಿ ಸಿಎಂ, 6 ಬಾರಿ ಸಂಸದ – ಮಧ್ಯಪ್ರದೇಶದ ಮಾಮಾ ಈಗ ಕೇಂದ್ರ ಸಚಿವ

  • 4 ಬಾರಿ ಸಿಎಂ, 6 ಬಾರಿ ಸಂಸದ – ಮಧ್ಯಪ್ರದೇಶದ ಮಾಮಾ ಈಗ ಕೇಂದ್ರ ಸಚಿವ

    4 ಬಾರಿ ಸಿಎಂ, 6 ಬಾರಿ ಸಂಸದ – ಮಧ್ಯಪ್ರದೇಶದ ಮಾಮಾ ಈಗ ಕೇಂದ್ರ ಸಚಿವ

    – ಇದೇ ಮೊದಲ ಬಾರಿ ಮೋದಿ ಕ್ಯಾಬಿನೆಟ್‌ ಪ್ರವೇಶಿಸಿದ ಶಿವರಾಜ್‌ ಸಿಂಗ್‌ ಚೌಹಾಣ್

    ನವದೆಹಲಿ: ಮಧ್ಯಪ್ರದೇಶದಲ್ಲಿ ‘ಮಾಮಾ’ ಎಂದೇ ಖ್ಯಾತರಾಗಿರುವ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivaraj Singh Chouhan) ಈ ಬಾರಿಯ ಮೋದಿ ಸಂಪುಟದಲ್ಲಿ (Modi Cabinet) ಸಚಿವ ಸ್ಥಾನ ಪಡೆದಿದ್ದಾರೆ. 4 ಬಾರಿ ಸಿಎಂ ಹಾಗೂ 6 ಬಾರಿ ಸಂಸದರಾಗಿರುವ ಹೆಗ್ಗಳಿಕೆಯೂ ʻಮಾಮಾʼ ಹೆಸರಿನಲ್ಲಿದೆ.

    ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಇಂದು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. 1990ರಲ್ಲಿ ಬುಧ್ನಿಯಿಂದ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಶಾಸಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಜೆಪಿಯ ಪ್ರಬಲ ನಾಯಕರಾಗಿದ್ದಾರೆ. 90ರ ದಶಕದಲ್ಲಿ ಅಖಿಲ ಭಾರತ ಕೇಶರಿಯ ವಾಹಿನಿಯ ಸಂಚಾಲಕರಾಗಿ ರಾಜಕೀಯ ಜೀವನ ಆರಂಭಿಸಿದ್ದರು.

    ಬಳಿಕ ಶಿವರಾಜ್ ಸಿಂಗ್ ಚೌಹಾಣ್ 1990 ರಲ್ಲಿ ಬುಧ್ನಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಶಾಸಕರಾದರು. ಮುಂದಿನ ವರ್ಷ 1991 ರಲ್ಲಿ, ಅವರು 10 ನೇ ಲೋಕಸಭೆಯ ಚುನಾವಣೆಯಲ್ಲಿ ವಿದಿಶಾದಿಂದ ಗೆಲ್ಲುವ ಮೂಲಕ ಮೊದಲ ಬಾರಿಗೆ ಸಂಸದರಾದರು. 1996ರಲ್ಲಿ ಅವರು 11 ನೇ ಲೋಕಸಭೆ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾದರು. ಜೊತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಲ್ಲಿ ಸಲಹಾ ಸಮಿತಿಯ ಸದಸ್ಯರಾಗಿ ಕೆಲಸ ಮಾಡಿದರು. ನಂತರ, ಚೌಹಾಣ್‌ ಅವರು 1996 ರಿಂದ 1997 ರವರೆಗೆ ಮಧ್ಯಪ್ರದೇಶದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದರು.

    1998ರಲ್ಲಿ, ಅವರು ಸತತ ಮೂರನೇ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಗೆದ್ದರು ಮತ್ತು ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಉಪಸಮಿತಿ ಸದಸ್ಯರಾಗಿ ಕೆಲಸ ಮಾಡಿದರು. 13ನೇ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದು ಸಂಸತ್ತನ್ನು ತಲುಪಿದರು. ಇದೇ ವೇಳೆ ಅವರು ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತು 2000 ರಿಂದ 2003ರವರೆಗೆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದರು.

    ಡಿಸೆಂಬರ್ 2003ರ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶವನ್ನು ಬಿಜೆಪಿ ಗೆದ್ದಾಗ, ಶಿವರಾಜ್ ಸಿಂಗ್ ಹಾಲಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ರಾಘೋಗಢದಿಂದ ಸ್ಪರ್ಧಿಸಿದರು. ಆದರೆ ಈ ಚುನಾವಣೆಯಲ್ಲಿ ʼಮಾಮಾʼ ಸೋತರು. ನಂತರ ಅವರು 2000 ರಿಂದ 2004 ರವರೆಗೆ ಸಂವಹನ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾದರು ಮತ್ತು 2004 ರಲ್ಲಿ ಐದನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು 14 ನೇ ಲೋಕಸಭೆಯಲ್ಲಿ ಮತ್ತೊಮ್ಮೆ ಸಂಸದರಾದರು.

    ಹ್ಯಾಟ್ರಿಕ್ ಗೆಲುವಿನ ನಂತರ ಶಿವರಾಜ್ ಸಿಎಂ!
    ಆದರೆ, ಮುಂದಿನ ವರ್ಷ 2005ರಲ್ಲಿ ಅವರ ಅದೃಷ್ಟ ಖುಲಾಯಿತು. ಬಿಜೆಪಿಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದರು. ಇದಾದ ನಂತರ 2006ರಲ್ಲಿ ಬುಧ್ನಿ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ತಮ್ಮ ಹಳೆಯ ಕ್ಷೇತ್ರದಿಂದ 36,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದರು.

    2008ರಲ್ಲಿ, ಚೌಹಾಣ್ ತಮ್ಮ ಬುಧ್ನಿ ಸ್ಥಾನವನ್ನು 41,000 ಕ್ಕಿಂತ ಹೆಚ್ಚು ಮತಗಳಿಂದ ಉಳಿಸಿಕೊಂಡರು. ಇದು ರಾಜ್ಯದಲ್ಲಿ ಬಿಜೆಪಿಯ ಸತತ ಎರಡನೇ ಗೆಲುವಿಗೆ ಕಾರಣವಾಯಿತು. 12 ಡಿಸೆಂಬರ್ 2008ರಂದು ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 8 ಡಿಸೆಂಬರ್ 2013ರಂದು ಚೌಹಾಣ್ ಮತ್ತೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರು ಮತ್ತು ಮೂರನೇ ಬಾರಿಗೆ ಸಿಎಂ ಹುದ್ದೆಗೆ ಆಯ್ಕೆಯಾದರು.

    2018ರ ಡಿಸೆಂಬರ್ 12 ರಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಹುಮತವನ್ನು ಪಡೆಯಲು ವಿಫಲವಾದ ನಂತರ, ಚೌಹಾಣ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು ನಂತರ ಅವರು ಮತ್ತೊಮ್ಮೆ 23 ಮಾರ್ಚ್ 2020 ರಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. 2023ರ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ದೊಡ್ಡ ಗೆಲುವು ಸಾಧಿಸಿದರೂ ಶಿವರಾಜ್ ಸಿಂಗ್ ಅವರನ್ನು ಬಿಜೆಪಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಲಿಲ್ಲ. ಬದಲಿಗೆ ಬಿಜೆಪಿ ಹೈಮಾಂಡ್‌ ಮೋಹನ್ ಯಾದವ್‌ಗೆ ಅವಕಾಶ ನೀಡಿತು.

    ಈ ಬಾರಿ ಗೆಲುವು, ದೆಹಲಿಗೆ ಬುಲಾವ್!
    ಚುನಾವಣೆ ಬಳಿಕ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡದೇ ಇದ್ದಾಗ ಕೇಂದ್ರ ನಾಯಕತ್ವವು ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ದೆಹಲಿಗೆ ಕರೆಸಿ ಉನ್ನತ ಹುದ್ದೆ ನೀಡುತ್ತದೆ ಎಂಬ ಊಹಾಪೋಹವು ಪ್ರಾರಂಭವಾಯಿತು. ಚುನಾವಣೆ ಕಳೆದ ಬಳಿಕ ಹಾಗೇನೂ ಆಗಲಿಲ್ಲ. ಆದರೆ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ, ಶಿವರಾಜ್ ಸಿಂಗ್ ಚೌಹಾಣ್ ಮತ್ತೊಮ್ಮೆ ವಿದಿಶಾದಿಂದ ಸ್ಪರ್ಧಿಸಿ 8,17,429 ಮತಗಳ ಅಂತರದಿಂದ ದೊಡ್ಡ ಗೆಲುವು ದಾಖಲಿಸಿದರು. ಇದು ಲೋಕಸಭೆ ಚುನಾವಣೆಯಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ 6ನೇ ಗೆಲುವು.

    ವಿದ್ಯಾಭ್ಯಾಸದಲ್ಲೂ ಶಿವರಾಜ್ ಸಿಂಗ್‌ಗೆ ಅಗ್ರಸ್ಥಾನ!
    ಶಿವರಾಜ್ ಸಿಂಗ್ ಅವರು ಭೋಪಾಲ್‌ನ ಬರ್ಕತುಲ್ಲಾ ವಿಶ್ವವಿದ್ಯಾಲಯದಲ್ಲಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ ಮತ್ತು ಅವರು ಎಂ.ಎ. (ಫಿಲಾಸಫಿ) ನಲ್ಲಿ ಚಿನ್ನದ ಪದಕವನ್ನೂ ಗೆದ್ದಿದ್ದಾರೆ. ಸೆಹೋರ್ ಜಿಲ್ಲೆಯ ಜೈಟ್ ಗ್ರಾಮದಲ್ಲಿ ಪ್ರೇಮ್ ಸಿಂಗ್ ಚೌಹಾಣ್ ಮತ್ತು ಸುಂದರ್ ಬಾಯಿ ಚೌಹಾಣ್ ದಂಪತಿಗೆ ಜನಿಸಿದರು. ಶಿವರಾಜ್ ಸಿಂಗ್‌ ಚೌಹಾಣ್ ರೈತ ಕುಟುಂಬದಿಂದ ಬಂದಿದ್ದು, ಕಿರಾರ್ ಸಮುದಾಯಕ್ಕೆ ಸೇರಿದವರು.‌ ಶಿವರಾಜ್ ಸಿಂಗ್ ಅವರ ಪತ್ನಿ ಸಾಧನಾ ಸಿಂಗ್ ಚೌಹಾಣ್. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

  • ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

    ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

    ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು (Narendra Modi) ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ (Oath Taking) ಸ್ವೀಕರಿಸಿದ್ದಾರೆ.

    72 ಸಚಿವರೊಂದಿಗೆ ಇಂದು ಮೋದಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಜವಾಹರಲಾಲ್ ನೆಹರೂ ಬಳಿಕ ಮೂರನೇ ಬಾರಿಗೆ ಮೋದಿ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. 72 ಸಚಿವರ ಪೈಕಿ 32 ಕ್ಯಾಬಿನೆಟ್ ಸಚಿವರು, 5 ಸ್ವತಂತ್ರ ಮತ್ತು 36 ರಾಜ್ಯ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಮೋದಿ ಸಂಪುಟಕ್ಕೆ ಜೆಪಿ ನಡ್ಡಾ?

    73ರ ಹರೆಯದ ಮೋದಿ ಅವರು ಎನ್‌ಡಿಎ ಮೈತ್ರಿಕೂಟದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ಮೋದಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ಮೋದಿ ನಂತರ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ನವೀನ್‌ ಪಟ್ನಾಯಕ್‌ ಆಪ್ತ ವಿ.ಕೆ.ಪಾಂಡಿಯನ್‌ ಸಕ್ರಿಯ ರಾಜಕಾರಣಕ್ಕೆ ವಿದಾಯ

    ಇವರ ಬಳಿಕ ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ನಿರ್ಮಲಾ ಸೀತಾರಾಮನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಮತ್ತೆ ಪ್ರಧಾನಿಯಾಗಿ ಮೋದಿ ಪದಗ್ರಹಣ – ಪುರಿ ಬೀಚ್‌ನಲ್ಲಿ ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ

  • ಮೋದಿ ಜೊತೆ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ!

    ಮೋದಿ ಜೊತೆ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ!

    – ಒಟ್ಟು 2 ಹಂತದಲ್ಲಿ ಮೋದಿ ಸಂಪುಟ ರಚನೆ
    – ಮಹತ್ವದ ಖಾತೆಗಳನ್ನು ತನ್ನ ಬಳಿಯೇ ಇಟ್ಟುಕೊಳ್ಳಲಿದೆ ಬಿಜೆಪಿ

    ನವದೆಹಲಿ: ತೀಸ್ರೀ ಬಾರ್ ಮೋದಿ ಸರ್ಕಾರ್ (Modi Sarkar) ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ (NDA) ಸರ್ಕಾರ ರಚನೆ ಆಗುವುದಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ಕೌಂಟ್‌ಡೌನ್ ಶುರುವಾಗಿದೆ.

    ಇಂದು ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ (Narendra Modi) ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಶಕೆ ಮತ್ತೆ ದೇಶದಲ್ಲಿ ಆರಂಭವಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ಸಾಧನೆ ಬಗ್ಗೆ ಎಐಸಿಸಿ ಅಸಮಾಧಾನ – ತಲೆದಂಡದ ಸುದ್ದಿ ಅಲ್ಲಗಳೆದ ಸಚಿವರು

     

    ಮೋದಿ ಪ್ರಮಾಣ ಬೆನ್ನಲ್ಲೇ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಒಟ್ಟು ಎರಡು ಹಂತಗಳಲ್ಲಿ ಸಂಪುಟ ರಚನೆಯಾಗುವ ಸಾಧ್ಯತೆಯಿದ್ದು ಪ್ರಮಾಣವಚನ ಸಮಾರಂಭಕ್ಕಾಗಿ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿವೆ. ಪೂರ್ಣ ಪ್ರಮಾಣದ ಮಂತ್ರಿಮಂಡಲದ ಬಲವು 78 ಮತ್ತು 81 ರ ನಡುವೆ ಇರಬಹುದೆಂದು ನಿರೀಕ್ಷಿಸಲಾಗಿದೆ.

    ಗೃಹ, ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳಂತಹ ಮಹತ್ವದ ಖಾತೆಗಳನ್ನು ಬಿಜೆಪಿ ಇಟ್ಟುಕೊಳ್ಳಲಿದ್ದು ಉಕ್ಕು, ನಾಗರಿಕ ವಿಮಾನಯಾನ ಮತ್ತು ಕಲ್ಲಿದ್ದಲು ಮುಂತಾದ ಖಾತೆಗಳು ಮಿತ್ರ ಪಕ್ಷಗಳಿಗೆ ಸಿಗುವ ಸಾಧ್ಯತೆಯಿದೆ. ಇಂದು ಬೆಳಗ್ಗೆಯಿಂದ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರಿಗೆ ಸರ್ಕಾರದಿಂದ ಕರೆಗಳು ಬರುವ ನಿರೀಕ್ಷೆಯಿದೆ.

     

    ನೈಬರ್‌ಹುಡ್ ಫಸ್ಟ್ ಪಾಲಿಸಿ ಮತ್ತು ಸಾಗರ್ ವಿಷನ್ ಭಾಗವಾಗಿ ನೆರೆ-ಹೊರೆಯ ದೇಶಗಳ ಮುಖ್ಯಸ್ಥರನ್ನು ಆಮಂತ್ರಿಸಲಾಗಿದೆ. ಈಗಾಗಲೇ ಹಲವು ದೇಶಗಳ ಮುಖ್ಯಸ್ಥರು ನವದೆಹಲಿಗೆ ಆಗಮಿಸಿದ್ದಾರೆ.

    ಮೋದಿ ಪದಗ್ರಹಣ ಸಮಾರಂಭಕ್ಕೆ ಕೆಲ ವಿಶೇಷ ವ್ಯಕ್ತಿಗಳು 8 ರಿಂದ 9 ಸಾವಿರ ಮಂದಿಯನ್ನು ಆಹ್ವಾನಿಸಲಾಗಿದೆ. ಜೂನ್ 13ರಿಂದ 15ರವರೆಗೂ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಇಟಲಿಗೆ ಮೊದಲ ಪ್ರವಾಸ ಕೈಗೊಳ್ಳಲಿದ್ದಾರೆ. 18ನೇ ಲೋಕಸಭೆಯ ಮೊದಲ ಸಮಾವೇಶ ಜೂನ್ 15ಕ್ಕೆ ಆರಂಭ ಆಗಬಹುದು ಎನ್ನಲಾಗಿದೆ.

  • ಬಿಎಸ್‍ವೈ ಸಿಎಂ ಆಗುತ್ತಿರೋದು ಸಂತಸ ತಂದಿದೆ: ಕರಂದ್ಲಾಜೆ

    ಬಿಎಸ್‍ವೈ ಸಿಎಂ ಆಗುತ್ತಿರೋದು ಸಂತಸ ತಂದಿದೆ: ಕರಂದ್ಲಾಜೆ

    – ಅತೃಪ್ತ ಶಾಸಕರು ಬಿಜೆಪಿಗೆ ಬಂದರೆ ಸ್ವಾಗತ

    ನವದೆಹಲಿ: ಬಡವರ, ರೈತರ ಪರ ಹೋರಾಟ ನಡೆಸುತ್ತಾ ಬಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಿರುವುದು ಸಂತಸ ತಂದಿದೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವ ವಿಶ್ವಾಸ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಯಡಿಯೂರಪ್ಪ ಅವರು ಹೋರಾಟ ಹಿನ್ನೆಲೆಯಿಂದ ಬಂದಿರುವ ಕಾರಣ ಮುಂದಿನ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುತ್ತಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು, ಈ ವೇಳೆ ಅವರು ಸಿಎಂ ಆಗುತ್ತಿರುವುದರಿಂದ ಅವರು ಖಂಡಿತ ಜನರ ಕೈ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಶಾಸಕರ ಅನರ್ಹತೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸ್ಪೀಕರ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಅವರು ಕೆಲ ಶಾಸಕರ ಅನರ್ಹತೆಯನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಹೈಕಮಾಂಡ್ ಕೂಡ ಸರ್ಕಾರ ರಚನೆಗೆ ತಡ ಮಾಡಿತ್ತು ಎನ್ನಬಹುದು. ಆದರೆ ಇಂದಿಗೂ ಕೆಲ ಶಾಸಕರ ರಾಜೀನಾಮೆ ಅಂಗೀಕಾರ ಮಾಡದ ಕಾರಣ ಗೊಂದಲ ಉಂಟಾಗಿದೆ ಎಂದರು.

    ಮೈತ್ರಿ ಸರ್ಕಾರ ವಿರುದ್ಧ ಬೇಸತ್ತು ಶಾಸಕರು ರಾಜೀನಾಮೆ ನೀಡಿದ್ದರು. ಅವರು ಮತ್ತೆ ಕಾಂಗ್ರೆಸ್, ಜೆಡಿಎಸ್‍ಗೆ ಮರಳುವುದಿಲ್ಲ ಎಂದಿದ್ದಾರೆ. ನಮ್ಮ 105 ಶಾಸಕರು ಬಿಎಸ್‍ವೈ ಅವರ ಪರವಾಗಿ ಇದ್ದೇವೆ. ಮುಂದೆ ಏನಾಗುತ್ತೆ ಕಾದು ನೋಡುತ್ತೇವೆ. ರಾಜೀನಾಮೆ ಸ್ವೀಕಾರವಾಗಿ ಶಾಸಕರು ಬಿಜೆಪಿಗೆ ಬರಲು ಇಚ್ಛೆ ಇದ್ದರೆ ಹೈಕಮಾಂಡ್ ಅವರಿಗೆ ಸ್ವಾಗತ ನೀಡಲಿದೆ. ಅವರನ್ನು ಮತ್ತೆ ಅದೇ ಕ್ಷೇತ್ರದಿಂದ ಗೆಲ್ಲಿಸಿಕೊಡುವ ಪ್ರಯತ್ನವನ್ನು ಬಿಜೆಪಿ ಮಾಡಲಿದೆ ಎಂದು ಆಶ್ವಾಸನೆ ನೀಡಿದರು.

    ಬಿಎಸ್ ಯಡಿಯೂರಪ್ಪ ಅವರು 24 ಗಂಟೆ ಕೆಲಸ ಮಾಡುವ ಸಾಮಥ್ರ್ಯವನ್ನ ಹೊಂದಿದ್ದಾರೆ. ಈ ಹಿಂದೆಯೂ ಕೂಡ ಅಧಿಕಾರಿಗಳು ಅವರು ಕೆಲಸ ರೀತಿ ಕಂಡು ಅಚ್ಚರಿ ವ್ಯಕ್ತಪಡಿಸಿದ್ದರು. ಕಳೆದ 1 ವರ್ಷದ ಮೈತ್ರಿ ಸರ್ಕಾರದ ಆಡಳಿತ, ವರ್ಗಾವಣೆ ದಂಧೆ, ಭ್ರಷ್ಟಾಚಾರದಿಂದ ಜನರು ಬೇಸರಗೊಂಡಿದ್ದರು. ಮುಂದಿನ 4 ವರ್ಷಗಳ ಅವಧಿಯಲ್ಲಿ ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡಬೇಕಿದೆ. ಬಿಎಸ್ ಯಡಿಯೂರಪ್ಪ ಅವರು ಇದಕ್ಕೆ ಸಮರ್ಥರಿದ್ದಾರೆ. ಎಲ್ಲರ ಸಹಕಾರದಿಂದ ಸ್ಥಿರ ಸರಕಾರ ನಡೆಯಲಿದೆ ಎಂದರು.

  • ಇಂದು ಸಂಜೆ 6.15ರೊಳಗೆ ಬಿಎಸ್‍ವೈ ಪ್ರಮಾಣವಚನ ಸ್ವೀಕಾರ

    ಇಂದು ಸಂಜೆ 6.15ರೊಳಗೆ ಬಿಎಸ್‍ವೈ ಪ್ರಮಾಣವಚನ ಸ್ವೀಕಾರ

    ಬೆಂಗಳೂರು: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ರಾಜ್ಯಪಾಲ ವಜೂಭಾಯ್ ವಾಲಾ ಅವರಿಗೆ ಸರ್ಕಾರ ರಚನೆ ಮಾಡಲು ಹಕ್ಕು ಪ್ರತಿಪಾದನೆ ಮಾಡಿದ್ದಾರೆ. ಇಂದು ಸಂಜೆ 6 ರಿಂದ 6.15ರೊಳಗೆ ಪ್ರಮಾಣ ವಚನ ಸ್ವೀಕಾರ ಮಾಡಲು ರಾಜ್ಯಪಾಲರು ಅವಕಾಶ ನೀಡಿದ್ದಾರೆ.

    ರಾಜಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಬಿಎಸ್‍ವೈ ಪ್ರಮಾಣ ಸ್ವೀಕಾರ ಮಾಡಲಿದ್ದು, ಏಕಾಂಗಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಈ ಮೂಲಕ ಬಿಎಸ್‍ವೈ ಅವರು 4ನೇ ಬಾರಿಗೆ ಸಿಎಂ ಆಗಿ ಪ್ರಮಾಣ ಸ್ವೀಕಾರ ಮಾಡಲಿದ್ದಾರೆ. ಈ ಹಿಂದೆ ಮೂರು ಬಾರಿ ಪ್ರಮಾಣ ಸ್ವೀಕಾರ ಮಾಡಿದ್ದರು ಕೂಡ 5 ವರ್ಷ ಪೂರ್ಣಾವಧಿ ಮಾಡಿರಲಿಲ್ಲ.

    ಇಂದು ಬೆಳಗ್ಗೆ ತಮ್ಮ ನಿವಾಸದ ಎದುರು ಮಾತನಾಡಿದ್ದ ಬಿಎಸ್‍ವೈ, ಈಗಾಗಲೇ ನಾನು ವಿರೋಧ ಪಕ್ಷದ ನಾಯಕನಾಗಿರುವುದರಿಂದ ಮತ್ತೊಮ್ಮೆ ಶಾಸಕಾಂಗದ ಸಭೆ ಅಗತ್ಯವಿಲ್ಲ. ಹೀಗಾಗಿ ನಾನು ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಮಾಡಲು ಹಕ್ಕು ಮಂಡನೆ ಮಾಡಲಿದ್ದೇನೆ. ಅಲ್ಲದೆ ಇವತ್ತೇ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲು ಅವಕಾಶ ಮಾಡಿಕೊಡಿ ಎಂದು ರಾಜ್ಯಪಾಲ ಬಳಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದರು. ಆ ಬಳಿಕ ಸಂಜಯನಗರದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

    ಮೈತ್ರಿ ಸರ್ಕಾರ ಪತನಗೊಂಡು ಇಂದಿಗೆ 4 ದಿನಗಳು ಆಗಿದ್ದು, ದಿಢೀರ್ ಬೆಳವಣಿಗೆ ಎಂಬಂತೆ ಹೈಕಮಾಂಡ್ ಬಿಎಸ್‍ವೈ ಅವರಿಗೆ ಸೂಚನೆ ನೀಡಿದೆ. ಸರ್ಕಾರ ರಚನೆ ತಡವಾದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಹಲವು ಅನುಮಾನಗಳು ಮೂಡಿತ್ತು. ಆದರೆ ಈ ಎಲ್ಲಾ ಗಾಳಿ ಸುದ್ದಿಗಳಿಗೆ ತೆರೆ ಎಳೆದಿರುವ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನೆ ಮಾಡಿದೆ. ತುರ್ತು ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಕೇಂದ್ರ ನಾಯಕರು ಗೈರಾಗಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

  • ಪ್ರಮಾಣವಚನ ಸ್ವೀಕರಿಸಿ ಸ್ಪೀಕರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಂಸದೆ: ವಿಡಿಯೋ ವೈರಲ್

    ಪ್ರಮಾಣವಚನ ಸ್ವೀಕರಿಸಿ ಸ್ಪೀಕರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಂಸದೆ: ವಿಡಿಯೋ ವೈರಲ್

    ನವದೆಹಲಿ: ಮೊದಲನೇ ಬಾರಿಗೆ ಸಂಸದೆ ಆದ ನಟಿ ನುಸ್ರತ್ ಜಹಾನ್ ಮದುವೆಯಿಂದಾಗಿ ಪ್ರಮಾಣ ವಚನ ಸ್ವೀಕರಿಸಲಿಲ್ಲ. ಮಂಗಳವಾರ ಮೊದಲ ಬಾರಿಗೆ ಸಂಸತ್‍ನಲ್ಲಿ ಭಾಗವಹಿಸಿ ಅವರು ಹಾಗೂ ಮಿಮಿ ಚಕ್ರವರ್ತಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ವೇಳೆ ನುಸ್ರತ್ ಸ್ಪೀಕರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

    ನುಸ್ರತ್ ಜಹಾನ್ ಮಂಗಳವಾರ ಸಂಸತ್‍ನಲ್ಲಿ ಬಂಗಾಳಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನುಸ್ರತ್ ಮದುವೆಯಲ್ಲಿ ಭಾಗಿಯಾಗಿದ್ದ ಕಾರಣ ನಟಿ, ಸಂಸದೆ ಮಿಮಿ ಚಕ್ರವರ್ತಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಇಬ್ಬರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಪ್ರಮಾಣವಚನ ಸ್ವೀಕರಿಸಿದ ಬಳಿಕ ನುಸ್ರತ್ ಜೈ ಹಿಂದ್, ವಂದೇ ಮಾತರಂ ಹಾಗೂ ಜೈ ಬಾಂಗ್ಲಾ ಎಂದು ಹೇಳಿದ್ದಾರೆ. ಅಲ್ಲದೆ ಸ್ಪೀಕರ್ ಓಂ ಬಿರ್ಲಾ ಅವರ ಕಾಲಿಗೆ ಬಿದ್ದು ಆಶೀರ್ವಾದ ಕೂಡ ಪಡೆದುಕೊಂಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದ್ದು, ನುಸ್ರತ್ ಅವರ ಈ ನಡೆ ನೋಡಿ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ನುಸ್ರತ್ ಜಹಾನ್ ಕಳೆದ ವಾರ ಉದ್ಯಮಿ ನಿಖಿಲ್ ಜೈನ್ ಜೊತೆ ಟರ್ಕಿಯ ಬೋದ್ರಮ್‍ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಬಗ್ಗೆ ನುಸ್ರತ್ ತಮ್ಮ ಟ್ವಿಟ್ಟರಿನಲ್ಲಿ ಮದುವೆ ಫೋಟೋ ಹಾಕಿ ಅಧಿಕೃತವಾಗಿ ಎಲ್ಲರಿಗೂ ತಿಳಿಸಿದ್ದರು. ಜುಲೈ 4ರಂದು ನುಸ್ರತ್ ಹಾಗೂ ನಿಖಿಲ್ ಜೈನ್ ಕೋಲ್ಕತ್ತಾದಲ್ಲಿ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಬೆಂಗಾಲಿ ಕಲಾವಿದರು ಹಾಗೂ ರಾಜಕೀಯ ನಾಯಕರು ಆಗಮಿಸುವ ಸಾಧ್ಯತೆ ಇದೆ.

    ಲೋಕಸಭಾ ಚುನಾವಣೆಯಲ್ಲಿ 3.50 ಲಕ್ಷ ಮತಗಳ ಅಂತರದಿಂದ ನುಸ್ರತ್ ಜಹಾನ್ ಗೆದ್ದಿದ್ದರು. ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಖುಷಿಯಲ್ಲಿದ್ದ ನುಸ್ರತ್ ನಟಿ ಮಿಮಿ ಚಕ್ರವರ್ತಿ ಜೊತೆ ಸಂಸತ್ ಭವನದ ಮುಂದೆ ನಿಂತು ಫೋಟೋಗೆ ಪೋಸ್ ಕೊಟ್ಟು ಟ್ರೋಲ್ ಆಗಿದ್ದರು.