Tag: obc

  • ಒಬಿಸಿ ಮೀಸಲಾತಿ ಏರಿಸಿದ್ದ ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ

    ಒಬಿಸಿ ಮೀಸಲಾತಿ ಏರಿಸಿದ್ದ ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ

    ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳು ಅಥವಾ ಒಬಿಸಿ ಸಮುದಾಯಗಳಿಗೆ (OBC Community) ಮೀಸಲಾತಿ ಹೆಚ್ಚಿಸಿದ್ದ ತೆಲಂಗಾಣ ಸರ್ಕಾರಕ್ಕೆ (Telangana Government) ಭಾರೀ ಹಿನ್ನಡೆಯಾಗಿದೆ.

    ಒಬಿಸಿ ಮೀಸಲಾತಿ (Resevartion) ವಿಸ್ತರಿಸಿ ತಾನು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಪ್ರಶ್ನಿಸಿ ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

    ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ.ಸಂದೀಪ್ ಮೆಹ್ತಾ ಅವರಿದ್ದ ಪೀಠವು ಇಂದು ಅರ್ಜಿ ವಿಚಾರಣೆ ನಡೆಸಿ, ಹೈಕೋರ್ಟ್‌ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಒಬಿಸಿ ಮೀಸಲಾತಿಯಲ್ಲಿ ಯಾವುದೇ ಪ್ರಸ್ತಾವಿಸಿದಂತೆ ಹೆಚ್ಚಳ ಮಾಡದೇ ಸ್ಥಳೀಯ ಚುನಾವಣೆಗಳನ್ನು ನಡೆಸಬಹುದು ಸೂಚಿಸಿದೆ. ಇದನ್ನೂ ಓದಿ:  ರಸ್ತೆ ಗುಂಡಿ, ತೆರೆದ ಮ್ಯಾನ್‌ಹೋಲ್‌ಗಳಿಗೆ ಬಿದ್ದು ಮೃತಪಡುವವರ ಕುಟುಂಬಕ್ಕೆ 6 ಲಕ್ಷ ಪರಿಹಾರ ನೀಡಿ: ಬಾಂಬೆ ಹೈಕೋರ್ಟ್‌ ಆದೇಶ

     

    ತೆಲಂಗಾಣ ಸರ್ಕಾರ ಇತರೇ ಹಿಂದುಳಿದ ವರ್ಗಕ್ಕೆ ಶೇ.42ರಷ್ಟು ಮೀಸಲಾತಿ ನೀಡಿದ್ದರಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ.67ಕ್ಕೆ ಏರಿಕೆಯಾಗಿತ್ತು. 1992 ರ ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೀಸಲಾತಿ ಪ್ರಮಾಣ ಶೇ.50 ಮಿತಿಯನ್ನು ಏರುವಂತಿಲ್ಲ ತೀರ್ಪು ನೀಡಿತ್ತು. ಸುಪ್ರೀಂ ತೀರ್ಪು ಉಲ್ಲಂಘನೆಯಾಗಿದ್ದರಿಂದ ಅ.10 ರಂದು ತೆಲಂಗಾಣ ಹೈಕೋರ್ಟ್‌ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು.

    ತನ್ನ ಆದೇಶದಲ್ಲಿ ಒಬಿಸಿ ಕೋಟಾದಲ್ಲಿ ಹೆಚ್ಚು ಮಾಡಲಾದ ಶೇ.17ರಷ್ಟು ಸೀಟುಗಳನ್ನು ಸಾಮಾನ್ಯ ಎಂದು ಪರಿಗಣಿಸಿ ಚುನಾವಣೆ ನಡೆಸಲು ಹೈಕೋರ್ಟ್‌ ಸೂಚಿಸಿತ್ತು. ಜತೆಗೆ ವಿವರವಾದ ಅಫಿಡವಿಟ್‌ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ 4 ವಾರ, ಅರ್ಜಿದಾರರಿಗೆ 2 ವಾರಗಳ ಗಡುವು ವಿಧಿಸಿತ್ತು.

  • ನಾನು ಆಗಲೇ ಹೋಗಿಲ್ಲ, ಈಗ ಯಾಕೆ ಹೋಗಲಿ? – ಆಪ್ತರ ಬಳಿ ಸಿಎಂ ಮನದ ಮಾತು

    ನಾನು ಆಗಲೇ ಹೋಗಿಲ್ಲ, ಈಗ ಯಾಕೆ ಹೋಗಲಿ? – ಆಪ್ತರ ಬಳಿ ಸಿಎಂ ಮನದ ಮಾತು

    ಬೆಂಗಳೂರು: ನಾನು ಆಗಲೇ ಹೋಗಿಲ್ಲ, ಈಗ ಯಾಕೆ ಹೋಗಲಿ? ರಾಜಕೀಯದ ಕಡೇ ಕಾಲಘಟ್ಟದಲ್ಲಿ ಇರುವಾಗ ರಾಷ್ಟ್ರ ರಾಜಕಾರಣಕ್ಕೆ (National Politics) ಯಾಕೆ ನಾನು ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ಮನದಾಳದ ಮಾತನ್ನು ಆಡಿದ್ದಾರೆ.

    ಸಿದ್ದರಾಮ್ಯಯ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬ ಸುದ್ದಿಗಳಿಗೆ ಸಿಎಂ ಆಪ್ತರ ಬಳಿಯೇ ಉತ್ತರ ನೀಡಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ.  ಈಗ ವಯಸ್ಸು ಕೂಡ ಇಲ್ಲ. ಗೌರವಯುತ ಸಾರ್ವಜನಿಕ ಬದುಕು ಇಲ್ಲೇ ಮುಗಿಯಲಿ. ಇಲ್ಲಿ ತನಕ ಆ ರೀತಿ ಏನೂ ಚರ್ಚೆ ನಡೆದಿಲ್ಲ. ಒಬಿಸಿ ಸಭೆಯ ನೇತೃತ್ವದ ಬಗ್ಗೆ ದೆಹಲಿಯ ನಾಯಕರಿಗೆ ವಿವರಣೆ ಕೊಡುತ್ತೇನೆ ಎಂದು ಹೇಳಿದರು.  ಇದನ್ನೂ ಓದಿ: ಶಾಲಾ ವಾಹನಕ್ಕೆ ರೈಲು ಡಿಕ್ಕಿ 3 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

     

    ಎಐಸಿಸಿ ಒಬಿಸಿ ಸಲಹಾ ಮಂಡಳಿಯಲ್ಲಿ (OBC Advisory Panel) ಸ್ಥಾನ ಪಡೆದ ಹಿನ್ನೆಲೆಯಲ್ಲಿ ಗುರುವಾರ ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಿಎಂ ಮುಂದಾಗಿದ್ದು ಸ್ಪಷ್ಟನೆ ಕೇಳಲು ಬಯಸಿದ್ದಾರೆ.

    ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಒಬಿಸಿ ಸಲಹಾ ಮಂಡಳಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ.‌ ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದು ಸಭೆ ಕೆಪಿಸಿಸಿ (KPCC) ಕಚೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜನೆಗೊಂಡಿದೆ. ಇದನ್ನೂ ಓದಿ: ಪ್ರಿಯಕರನ ನಂಬಿ ಗಂಡನ ಬಿಟ್ಟು ಬಂದ ಮಹಿಳೆ ಗರ್ಭಿಣಿ ಮಾಡಿ ಪರಾರಿಯಾದ ಯುವಕ!

    ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಐಸಿಸಿಯ ಒಬಿಸಿ ಘಟಕದ ಸಲಹ ಸಮಿತಿಗೆ ಬೇರೆ ಬೇರೆ ರಾಜ್ಯದ ಪ್ರಮುಖ 24 ಒಬಿಸಿ ನಾಯಕರನ್ನ ಸಲಹೆಗಾರರಾಗಿ ನೇಮಿಸಲಾಗಿದೆ.

  • ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗಿಲ್ಲ: ಸಿಎಂ ಕಚೇರಿ ಸ್ಪಷ್ಟನೆ

    ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗಿಲ್ಲ: ಸಿಎಂ ಕಚೇರಿ ಸ್ಪಷ್ಟನೆ

    ನವದೆಹಲಿ: ಕಾಂಗ್ರೆಸ್‌ (Congress) ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು (CM Siddaramaiah) ನೇಮಕ ಮಾಡಿಲ್ಲ ಎಂದು ಸಿಎಂ ಕಚೇರಿ ತಿಳಿಸಿದೆ.

    ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಅಂತಹ ಯಾವುದೇ ನೇಮಕಾತಿ ನಡೆದಿಲ್ಲ ಎಂದು ಹೇಳಿದೆ.

    ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ.‌ ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದು ಸಭೆ ಕೆಪಿಸಿಸಿ (KPCC) ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ಇದನ್ನೂ ಓದಿ: ಎಐಸಿಸಿ ಒಬಿಸಿ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ ಸಿಎಂ ನೇಮಕ ಪೇಪರ್‌ ಓದಿ ವಿಚಾರ ಗೊತ್ತಾಯ್ತು ಎಂದ ಸಿದ್ದರಾಮಯ್ಯ!

    ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

    ಎಐಸಿಸಿಯ ಒಬಿಸಿ ಘಟಕದ ಸಲಹ ಸಮಿತಿಗೆ ಬೇರೆ ಬೇರೆ ರಾಜ್ಯದ ಪ್ರಮುಖ 24 ಒಬಿಸಿ ನಾಯಕರನ್ನ ಸಲಹೆಗಾರರಾಗಿ ನೇಮಿಸಲಾಗಿದೆ. ಕೆಲವು ಮಾಜಿ ಸಿಎಂಗಳು ಇದರಲ್ಲಿ ಇದ್ದಾರೆ ಎಂದು ಸಿದ್ದರಾಮಯ್ಯನವರ ಕಚೇರಿ ತಿಳಿಸಿದೆ.

  • ಒಬಿಸಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ ಕೊಕ್ಕೆ?- ವಿದ್ಯಾರ್ಥಿವೇತನ ಬಾರದೇ ವಿದ್ಯಾರ್ಥಿಗಳು ಪರದಾಟ

    ಒಬಿಸಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ ಕೊಕ್ಕೆ?- ವಿದ್ಯಾರ್ಥಿವೇತನ ಬಾರದೇ ವಿದ್ಯಾರ್ಥಿಗಳು ಪರದಾಟ

    – ಯುವನಿಧಿ ಬೇಡ.. ಸ್ಕಾಲರ್‌ಶಿಪ್ ಕೊಡಿ ಸ್ವಾಮಿ ಎನ್ನುತ್ತಿದ್ದಾರೆ ವಿದ್ಯಾರ್ಥಿಗಳು

    ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ ಕೊಕ್ಕೆ ಬಿದ್ದಿದೆ ಎನ್ನಲಾಗಿದೆ. ವಿದ್ಯಾರ್ಥಿ ವೇತನ ಸಿಗದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರೆ.

    ರಾಜ್ಯದಲ್ಲಿ ಈಗ ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌ಗಾಗಿ ಅಲೆದಾಡುವ ಪರಿಸ್ಥಿತಿ ಉದ್ಭವವಾಗಿದೆ. ಎಂಬಿಎ, ಎಂಬಿಬಿಎಸ್ ಹೀಗೆ ಬಹುತೇಕ ಕೋರ್ಸ್ ಓದುತ್ತಿರುವ ಒಬಿಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಕ್ಕಿಲ್ಲ ಎನ್ನುವುದು ವಿದ್ಯಾರ್ಥಿಗಳ ಅಳಲು. ನಿರುದ್ಯೋಗ ಭತ್ಯೆ ಕೊಡುವ ಬದಲು ನಮಗೆ ಓದಲು ಪ್ರೋತ್ಸಾಹಕ್ಕೆ ಸ್ಕಾಲರ್‌ಶಿಪ್ ಕೊಡಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

    ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಗುತ್ತಿದೆ. ಆದರೆ, ಒಬಿಸಿ ವಿದ್ಯಾರ್ಥಿಗಳಿಗೆ ಈ ಅನ್ಯಾಯವಾಗುತ್ತಿದೆ ಅಂತಾ ವಿದಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಕೂಡ ಸ್ಕಾಲರ್‌ಶಿಪ್ ಬಗ್ಗೆ ಸಮೀಕ್ಷೆ ಮಾಡಿದ್ದು, 97% ನಷ್ಟು ವಿದ್ಯಾರ್ಥಿಗಳು ಸ್ಕಾಲರ್‌ಶಿಪ್ ಪಡೆದಿಲ್ಲ ಎಂದು ಹೇಳಿದ್ದಾರೆ.

  • 2010 ರಿಂದ ಬಂಗಾಳದಲ್ಲಿ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಹೈಕೋರ್ಟ್‌

    2010 ರಿಂದ ಬಂಗಾಳದಲ್ಲಿ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಹೈಕೋರ್ಟ್‌

    ಕೋಲ್ಕತ್ತಾ: 2010 ರಿಂದ ಪಶ್ಚಿಮ ಬಂಗಾಳದಲ್ಲಿ (West Bengal) ನೀಡಲಾದ ಎಲ್ಲಾ ಇತರ ಹಿಂದುಳಿದ ವರ್ಗಗಳ (OBC) ಪ್ರಮಾಣಪತ್ರಗಳನ್ನು ಕೋಲ್ಕತ್ತಾ ಹೈಕೋರ್ಟ್‌ (Calcutta High Court) ವಜಾಗೊಳಿಸಿದೆ.

    ಒಬಿಸಿ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್ ಮಂಥ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

    ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗವು, 1993 ರ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆಯ ಆಧಾರದ ಮೇಲೆ OBC ಗಳ ಹೊಸ ಪಟ್ಟಿಯನ್ನು ತಯಾರಿಸಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ. ಹೈಕೋರ್ಟ್ ಪೀಠವು 2010 ರ ನಂತರ ಸಿದ್ಧಪಡಿಸಲಾದ ಒಬಿಸಿ ಪಟ್ಟಿಯನ್ನು ‘ಅಕ್ರಮ’ ಎಂದು ಹೇಳಿದೆ.

    ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳು (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ) (ಸೇವೆಗಳು ಮತ್ತು ಹುದ್ದೆಗಳಲ್ಲಿ ಖಾಲಿ ಹುದ್ದೆಗಳ ಮೀಸಲಾತಿ) ಕಾಯಿದೆ-2012 ಸೆಕ್ಷನ್ 2H, 5, 6 ಮತ್ತು ಸೆಕ್ಷನ್ 16 ಮತ್ತು ಶೆಡ್ಯೂಲ್ I ಮತ್ತು III ಅನ್ನು ‘ಅಸಂವಿಧಾನಿಕ’ ಎಂದು ಹೈಕೋರ್ಟ್ ತಳ್ಳಿಹಾಕಿದೆ. ಇದನ್ನೂ ಓದಿ: ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

    2010 ರ ನಂತರ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳು 1993 (ಪಶ್ಚಿಮ ಬಂಗಾಳ ಹಿಂದುಳಿದ ವರ್ಗ ಆಯೋಗ) ಕಾಯಿದೆಯನ್ನು ಬೈಪಾಸ್ ಮಾಡಲಾಗಿದೆ ಎಂದು 2011 ರಲ್ಲಿ ಸಲ್ಲಿಸಿದ್ದ PILನಲ್ಲಿ ಆರೋಪಿಸಲಾಗಿತ್ತು. ವಾಸ್ತವವಾಗಿ ಹಿಂದುಳಿದ ವರ್ಗದವರಿಗೆ ಪ್ರಮಾಣಪತ್ರಗಳನ್ನು ನೀಡಲಾಗಿಲ್ಲ ಎನ್ನಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಎಲ್ಲಾ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದೆ.

    ಈಗಾಗಲೇ ಸೇವೆಯಲ್ಲಿರುವ ಅಥವಾ ಮೀಸಲಾತಿಯಿಂದ ಪ್ರಯೋಜನ ಪಡೆದಿರುವ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಿರುವ ವರ್ಗಗಳ ನಾಗರಿಕರ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

  • ರಾಹುಲ್ ಗಾಂಧಿ ಬಾಯಿ ಬಿಟ್ಟರೆ ಬರೀ ಸುಳ್ಳು – ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

    ರಾಹುಲ್ ಗಾಂಧಿ ಬಾಯಿ ಬಿಟ್ಟರೆ ಬರೀ ಸುಳ್ಳು – ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

    ­- 1999ರಲ್ಲೇ ಮೋದಿ ಜೀಗೆ OBC ಸ್ಥಾನಮಾನ ನೀಡಲಾಗಿದೆ

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ನಾಚಿಕೆಯೇ ಆಗುವುದಿಲ್ಲವೇ? ಬರೀ ಸುಳ್ಳು ಸುಳ್ಳು ಸುದ್ದಿಗಳನ್ನು ಹರಿ ಬಿಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು OBC ಜಾತಿಯಲ್ಲಿ ಹುಟ್ಟಿಲ್ಲ ಮತ್ತು ಅವರು ಗುಜರಾತ್‌ ಸಿಎಂ ಆದ ಮೇಲೆ OBC ಜಾತಿಯನ್ನು ಸೂಚಿಸಿದ್ದಾರೆ ಎಂದಿರುವ ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಜೋಶಿ ಅವರು ತಿರುಗೇಟು ನೀಡಿದ್ದು, ತಮ್ಮ X ಖಾತೆಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು

    ಕಾಂಗ್ರೆಸ್‌ನ (Congress) ಸುಳ್ಳಿನ ಬುತ್ತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವ ಸಮಯ ಬಂದಿದೆ. ವಾಸ್ತವ ಬೇರೆಯೇ ಇರುವಾಗ ಕಾಂಗ್ರೆಸ್ ಬರೀ ಸುಳ್ಳುಗಳನ್ನೇ ಹೆಣೆದು ಜನರ ಕಿವಿಗೆ ಹೂವಿನ ಗೊಂಚಲೇ ಇಡುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮಂಗಳ ಗ್ರಹಕ್ಕೆ ಸೋಲಾರ್‌ ಚಾಲಿತ ವಿಮಾನ ಕಳಿಸಲು ನಾಸಾ ಚಿಂತನೆ – ಏನಿದರ ವಿಶೇಷ?

    ಇಲ್ಲಿದೆ ಸತ್ಯ:
    ಮೋದಿಯವರು ಗುಜರಾತ್ (Gujarat) ಮುಖ್ಯಮಂತ್ರಿಯಾಗುವ ಎರಡು ವರ್ಷಗಳ ಮೊದಲು 1999ರ ಅಕ್ಟೋಬರ್ 27ರಂದು ಅವರ OBC ಸ್ಥಾನಮಾನವನ್ನು ಗುರುತಿಸಲಾಗಿದೆ ಎಂದು ಜೋಶಿ ದಾಖಲೆ ಸಮೇತ ಸ್ಪಷ್ಟಪಡಿಸಿದ್ದಾರೆ.

    ಪ್ರಧಾನಿ ಮೋದಿ ಅವರನ್ನು OBC ಅಲ್ಲ ಎನ್ನುವ ಮೂಲಕ ಕಾಂಗ್ರೆಸ್ ಮತ್ತೊಮ್ಮೆ ಇಡೀ OBC ಸಮುದಾಯವನ್ನೇ ಅವಮಾನಿಸಿದೆ. ಒಬಿಸಿ ವರ್ಗದವರೆಲ್ಲ ಲೋಕಸಭೆ ಚುನಾವಣೆಯಲ್ಲಿ ಪ್ರತಿಧ್ವನಿಸುವ ಮೂಲಕ ರಾಹುಲ್ ಗಾಂಧಿ ಆರೋಪಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೋಶಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸಮಯ ಸಿಕ್ಕಾಗ ವಿದ್ಯಾರ್ಥಿ ಮನೆಗೇ ಹೋಗಿ ಸೆಕ್ಸ್‌ ಮಾಡ್ತಿದ್ದೆ – ತಪ್ಪೊಪ್ಪಿಕೊಂಡ ಶಿಕ್ಷಕಿಗೆ 50 ವರ್ಷ ಜೈಲು

    ರಾಹುಲ್‌ ಗಾಂಧಿ ಹೇಳಿದ್ದೇನು?
    ಒಡಿಶಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೂಲತಃ ಹಿಂದುಳಿದ ವರ್ಗದಲ್ಲಿ ಜನಿಸಿಲ್ಲ, ಆದ್ರೆ ತಮ್ಮನ್ನು ಒಬಿಸಿ ಎಂದು ಹೇಳಿಕೊಳ್ಳುವ ಮೂಲಕ ಇತರೇ ವರ್ಗದ ಜನರನ್ನ ದಾರಿ ತಪ್ಪಿಸುತ್ತಿದ್ದಾರೆ. ಮೋದಿ ಜೀ ಅವರು `ತೇಲಿ’ ಜಾತಿಯ ಕುಟುಂಬದಲ್ಲಿ ಜನಿಸಿದ್ದಾರೆ. 2000ನೇ ಇಸವಿಯಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದರು. ಆದ್ದರಿಂದ ಮೋದಿ ಜಿ ಹುಟ್ಟಿನಿಂದ ಒಬಿಸಿ ಅಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರತಿಪಾದಿಸಿದ್ದರು.

  • ಲೋಕಸಮರ ಗೆಲ್ಲಲು ನಿತೀಶ್ ತಂತ್ರ : ಬಿಹಾರದಲ್ಲಿ ಮೀಸಲಾತಿ ಪ್ರಮಾಣ 65% ಏರಿಕೆ –  ಜಾತಿ ಸಮೀಕ್ಷೆಯಲ್ಲಿ ಏನಿದೆ?

    ಲೋಕಸಮರ ಗೆಲ್ಲಲು ನಿತೀಶ್ ತಂತ್ರ : ಬಿಹಾರದಲ್ಲಿ ಮೀಸಲಾತಿ ಪ್ರಮಾಣ 65% ಏರಿಕೆ – ಜಾತಿ ಸಮೀಕ್ಷೆಯಲ್ಲಿ ಏನಿದೆ?

    ಪಾಟ್ನಾ: ಲೋಕಸಭೆ ಚುನಾವಣೆ (Lok Sabha Election) ದೃಷ್ಟಿಯಿಂದ ದೇಶದಲ್ಲಿ ಹಿಂದುಳಿದ ವರ್ಗಗಳ (OBC) ಮೀಸಲಾತಿ ರಾಜಕೀಯ (Reservation Politics) ಜೋರಾಗಿದ್ದು, ಬಿಹಾರ (Bihar) ಈಗ ಸರ್ಕಾರಿ ನೇಮಕಾತಿಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿಗಳ ಮೀಸಲಾತಿ ಪ್ರಮಾಣವನ್ನು 50% ರಿಂದ 65% ಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ಸಿಎಂ ನಿತೀಶ್ ಕುಮಾರ್ (CM Nitish Kumar) ಮಾಡಿದ್ದಾರೆ.

    ಇದರಿಂದ ಆರ್ಥಿಕವಾಗಿ ಹಿಂದುಳಿದವರಿಗಾಗಿ 10%ರಷ್ಟು ಮೀಸಲಾತಿಯನ್ನು ಹೊರಗಿಡಲಾಗಿದೆ. ಈ ಮೀಸಲಾತಿಯೂ ಸೇರಿದರೆ ಒಟ್ಟಾರೆ ಮೀಸಲಾತಿ ಪ್ರಮಾಣ 75% ಹೆಚ್ಚಲಿದೆ. ಈ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕಾರ್ಯವನ್ನು ಪ್ರಸಕ್ತ ಅಧಿವೇಶನದಲ್ಲಿಯೇ ಮಾಡಲು ಪ್ರಯತ್ನಿಸಲಾಗುವುದು ಎಂದು ಬಿಹಾರ ಸಿಎಂ ಘೋಷಿಸಿದ್ದಾರೆ. ಒಬಿಸಿ ಮಹಿಳೆಯರಿಗೆ ಇರುವ 3%ರಷ್ಟು ಮೀಸಲಾತಿಯನ್ನು ರದ್ದು ಮಾಡುವುದಾಗಿ ನಿತೀಶ್‌ ಕುಮಾರ್‌ ಹೇಳಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಬೆಂಗಳೂರು ಕಂಬಳಕ್ಕೆ ಬರಲಿದ್ದಾರೆ ಅನುಷ್ಕಾ ಶೆಟ್ಟಿ, ಐಶ್ವರ್ಯಾ ರೈ

    ಬಿಹಾರ ಸರ್ಕಾರವು ಈಗ ಎರಡನೇ ಹಂತದ ಜಾತಿ ಗಣತಿಯ ವರದಿಯನ್ನು ಬಿಹಾರ ವಿಧಾನಸಭೆಯಲ್ಲಿ ಮಂಡಿಸಿದೆ. ಕಳೆದ ತಿಂಗಳು ಬಿಹಾರ ಸರ್ಕಾರವು ಜಾತಿ ಗಣತಿಯ ಮೊದಲ ವರದಿಯನ್ನು ಮಂಡಿಸಿತ್ತು.
    ಇದನ್ನೂ ಓದಿ: 90 ಸಾವಿರ ಪ್ಯಾಲೆಸ್ತೇನಿಯನ್ನರ ಬದಲು ಭಾರತೀಯರ ನೇಮಕಕ್ಕೆ ಮುಂದಾದ ಇಸ್ರೇಲ್‌

    ಎಷ್ಟು ಇತ್ತು? ಎಷ್ಟು ಏರಿಕೆ?
    ಎಸ್‌ಸಿ 6% ಇದ್ದರೆ ಇನ್ನು ಮುಂದೆ 20% ಏರಿಕೆ ಆಗಲಿದೆ. ಒಬಿಸಿ, ಇಬಿಸಿ ಮೀಸಲಾತಿ 30% ನಿಂದ 43%ಕ್ಕೆ ಏರಲಿದೆ. ಎಸ್‌ಟಿ 01% ನಿಂದ 02% ರಷ್ಟು ಏರಿಕೆಯಾದರೆ ಇಡಬ್ಲ್ಯೂಎಸ್‌ಗೆ ಹಾಲಿ ಇರುವ 10% ಮೀಸಲಾತಿ ಮುಂದುವರಿಯಲಿದೆ.

    ಜಾತಿ ಗಣತಿಯಲ್ಲಿ ಏನಿದೆ?
    ಬಿಹಾರ ಜಾತಿ ಗಣತಿ (Caste Survey) ಪ್ರಕಾರ ಹಿಂದೂಳಿದ ವರ್ಗ 27%, ಅತಿ ಹಿಂದುಳಿದ ವರ್ಗ 36%, ಪರಿಶಿಷ್ಟ ಜಾತಿ 19%, ಪರಿಶಿಷ್ಟ ಪಂಗಡ 1.68%, ಸಾಮಾನ್ಯ ವರ್ಗ 15% ಇದ್ದಾರೆ.  ಮೊಬೈಲಿನಲ್ಲೇ ಲೇಟೆಸ್ಟ್‌ ಸುದ್ದಿ ಓದಲು ಪಬ್ಲಿಕ್‌ ಟಿವಿ ವಾಟ್ಸಪ್‌ ಚಾನೆಲಿಗೆ ಸೇರ್ಪಡೆಯಾಗಿಪಬ್ಲಿಕ್‌ ಟಿವಿ ವಾಟ್ಸಪ್‌ ಚಾನೆಲ್‌

    ಒಟ್ಟು ಕುಟುಂಬಗಳ ಪೈಕಿ 34.13% ಕುಟುಂಬಗಳು ತಿಂಗಳಿಗೆ 6,000 ರೂ. ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಸಂಪಾದಿಸುತ್ತಿವೆ. 29.61% ಕುಟುಂಬ 10,000 ರೂ. ಅಥವಾ ಅದಕ್ಕಿಂತ ಕಡಿಮೆ ಆದಾಯ ಗಳಿಸುತ್ತಿದೆ. ಒಟ್ಟು 28% ಕುಟುಂಬಗಳು 10,000 ರೂ. ಮತ್ತು 50,000 ರೂ. ಆದಾಯದ ಒಳಗಡೆ ಜೀವಿಸುತ್ತಿವೆ. ಕೇವಲ 4% ಕುಟುಂಬ 50,000 ರೂ. ಗಿಂತ ಹೆಚ್ಚಿನ ಆದಾಯವನ್ನು ಸಂಪಾದಿಸುತ್ತಿದೆ.

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 42% ಕುಟುಂಬಗಳು ಬಡತನ ರೇಖೆಗಿಂತ ಕೆಳಮಟ್ಟದಲ್ಲಿವೆ. ಹಿಂದುಳಿದ ಮತ್ತು ಅತಿ ಹಿಂದುಳಿದ ವರ್ಗಗಳ 33%ರಷ್ಟು ಕುಟುಂಬಗಳನ್ನು ಬಡ ಕುಟುಂಬಗಳೆಂದು ವರ್ಗೀಕರಿಸಲಾಗಿದೆ.

     

  • UPSCಗೆ ಸಿದ್ಧತೆ ನಡೆಸುವ OBC ವಿದ್ಯಾರ್ಥಿಗಳಿಗೆ ಬೆಂಗಳೂರು, ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ: ಶಿವರಾಜ್ ತಂಗಡಗಿ

    UPSCಗೆ ಸಿದ್ಧತೆ ನಡೆಸುವ OBC ವಿದ್ಯಾರ್ಥಿಗಳಿಗೆ ಬೆಂಗಳೂರು, ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ: ಶಿವರಾಜ್ ತಂಗಡಗಿ

    ಬೆಂಗಳೂರು: ಕೇಂದ್ರ ಲೋಕಾಸೇವಾ ಆಯೋಗದ (UPSC) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ (OBC) ವಿದ್ಯಾರ್ಥಿಗಳಿಗೆ ಬೆಂಗಳೂರು (Bengaluru) ಹಾಗೂ ದೆಹಲಿಯಲ್ಲಿ (Delhi) ಉಚಿತ ವಸತಿ ವ್ಯವಸ್ಥೆ (Free Accommodation) ಕಲ್ಪಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಚಿವರು ಸೂಚನೆ ನೀಡಿದರು. ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದೆಹಲಿ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿ ಬೇಡಿಕೆ ಸಲ್ಲಿಸಿದ್ದಾರೆ.

    ಗ್ರಾಮೀಣ ಭಾಗದ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸಂಬಂಧ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ವರದಿ ಸಿದ್ಧಪಡಿಸುವಂತೆ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    100% ರಷ್ಟು ಗುರಿ ಸಾಧಿಸಿ:
    ಬಜೆಟ್‌ನಲ್ಲಿ ಇಲಾಖೆಗೆ ನೀಡಲಾಗಿರುವ ಹಣವನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು. ಮಾರ್ಚ್ ವೇಳೆಗೆ 100% ರಷ್ಟು ಗುರಿ ಸಾಧಿಸಬೇಕು. ಮಾರ್ಚ್ ತಿಂಗಳವರೆಗೆ ಹಣ ಉಳಿಸಿಕೊಂಡು ತರಾತುರಿಯಲ್ಲಿ ಹಣ ವ್ಯಯಿಸುವ ಕೆಲಸ ಆಗಬಾರದು. ಅವಧಿಗೂ ಮುನ್ನ ಬಳಕೆ ಮಾಡಿದರೆ ಮುಖ್ಯಮಂತ್ರಿಗಳ ಬಳಿ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮಾಜಿ ಸಿಎಂ ಬಿಎಸ್‌ವೈಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

    ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಪ್ರಸ್ತುತ ಕ್ಷೇತ್ರದಲ್ಲಿ ಆಯಾ ಶಾಸಕರು ಕಳುಹಿಸುತ್ತಿರುವುದು ತಡವಾಗುತ್ತಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಕೂಡಲೇ ಶಾಸಕರಿಗೆ ನವೆಂಬರ್ ಒಳಗೆ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸಿ ಕಳುಹಿಸುವಂತೆ ಪತ್ರ ಬರೆಯಿರಿ ಎಂದು ಸಲಹೆ ನೀಡಿದರು.

    ಇಲಾಖೆಯಲ್ಲಿನ ಶೈಕ್ಷಣಿಕ ಸಾಲ, ಸ್ವಾವಲಂಬಿ ಸಾಲ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಪ್ರತಿಯೊಂದು ಯೋಜನೆಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪಬೇಕು. ಇಲಾಖೆ ವ್ಯಾಪ್ತಿಗೆ ಬರುವ ನಿಗಮಗಳ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಲ್ಲಿನ ಯೋಜನೆಗಳ ಬಗ್ಗೆ ರಾಜ್ಯದ ಜನರಿಗೆ ಮಾಹಿತಿ ಒದಗಿಸಬೇಕು. ಈ ಬಗ್ಗೆ ಅಧಿಕಾರಿಗಳು ಗಮನವಹಿಸಬೇಕು ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ವನ್ಯಜೀವಿಯಿಂದ ಜೀವಹಾನಿ – ಸ್ಥಳ ಭೇಟಿಗೆ ಈಶ್ವರ್ ಖಂಡ್ರೆ ಸೂಚನೆ

    ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಒಕ್ಕಲಿಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ ಮುರಳೀಧರ್, ಲಿಂಗಾಯತ ಅಭಿವೃದ್ಧಿ ನಿಗಮದ ಅಮರೇಗೌಡ ಮಾಲಿ ಪಾಟೀಲ್, ಮಧುಸೂದನ್ ರೆಡ್ಡಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಸ್ಲಿಂ ಮೀಸಲಾತಿ ರದ್ದು ಪ್ರಕರಣ – ರಾಜಕೀಯ ಹೇಳಿಕೆಗಳಿಗೆ ಸುಪ್ರೀಂ ಕಿಡಿ

    – ವಿಚಾರಣೆ ಜುಲೈ 25ಕ್ಕೆ ಮುಂದೂಡಿಕೆ

    ನವದೆಹಲಿ: ಮುಸ್ಲಿಮರಿಗೆ ನೀಡಲಾಗಿದ್ದ 4% ಒಬಿಸಿ (OBC) ಮೀಸಲಾತಿ (Reservation) ರದ್ದು ಪಡಿಸಿರುವ ಸರ್ಕಾರದ ಆದೇಶದ ಕುರಿತು ರಾಜಕೀಯ ಹೇಳಿಕೆಗಳನ್ನು ಸುಪ್ರೀಂ ಕೋರ್ಟ್ (Supreme Court) ಗಂಭೀರವಾಗಿ ಪರಿಗಣಿಸಿದೆ. ನ್ಯಾಯಾಲಯದ ವಿಚಾರಣೆಯಲ್ಲಿರುವ ಪ್ರಕರಣ ಕುರಿತು ಮಾತನಾಡುವಾಗ ಜಾಗೃತೆವಹಿಸಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

    ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕ ಸರ್ಕಾರ (Karnataka Government)  ಆದೇಶವನ್ನು ನ್ಯಾ. ಕೆಎಂ ಜೋಸೆಫ್‌, ಬಿವಿ ನಾಗರತ್ನ, ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

    ಈ ವೇಳೆ ನ್ಯಾಯಾಂಗದ ವಿಷಯಗಳ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡಬಾರದು. ರಾಜಕೀಯಕ್ಕೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಅರ್ಜಿ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಿದೆ. ಇದನ್ನೂ ಓದಿ:  ಮುಸ್ಲಿಂ ಮೀಸಲಾತಿ ರದ್ದು ವಿಚಾರ- ಸುಪ್ರೀಂನಲ್ಲಿ ಇಂದು ವಿಚಾರಣೆ

    ಅರ್ಜಿದಾರರ ಪರ ವಕೀಲ ದುಶ್ಯಂತ್ ದವೆ,  ಪ್ರತಿ ದಿನ  ಗೃಹ ಸಚಿವ (Home Minister) ಅಮಿತ್ ಶಾ (Amit Shah) ಅವರು ಮೀಸಲಾತಿ ರದ್ದುಗೊಳಿಸಿದ್ದರ ಬಗ್ಗೆ ಹೆಮ್ಮೆಯಿಂದ  ಮಾತನಾಡುತ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

    ಈ ವೇಳೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಧರ್ಮದ ಆಧಾರದಲ್ಲಿ ನೀಡುವ ಮೀಸಲಾತಿಯನ್ನು ಯಾರು ವಿರೋಧಿಸುತ್ತಾರೋ ಅವರು ಸಮರ್ಥಿಸಿಕೊಳ್ಳುತ್ತಾರೆ ಎಂದು ವಾದಿಸಿದರು.  ಈ ವೇಳೆ ನ್ಯಾಯಮೂರ್ತಿ ಬಿವಿ ನಾಗರತ್ನ, ಪ್ರಕರಣ ನ್ಯಾಯಾಲಯದಲ್ಲಿರುವಾಗ ಸರ್ಕಾರದ ವ್ಯಕ್ತಿಗಳು ಯಾವುದೇ ಹೇಳಿಕೆ ನೀಡಬಾರದು.  ಮಾತನಾಡುವಾಗ ಜಾಗೃತೆವಹಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು ಮೀಸಲಾತಿ ರದ್ದಿಗೆ ಸಂಬಂಧಿಸಿದ ಭಾಷಣಗಳ ಸುದ್ದಿಯನ್ನು ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸುವಂತೆ ಮನವಿ ಮಾಡಿದರು. ಆದರ ಮನವಿಯನ್ನು ಪೀಠ ಪುರಸ್ಕರಿಸಲಿಲ್ಲ.

    ಅರ್ಜಿ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಿದ ಕೋರ್ಟ್‌  ಮುಂದಿನ ಆದೇಶದವರೆಗೂ ಹಳೆಯ ಮೀಸಲಾತಿಯನ್ನು ಮುಂದುವರಿಸುವಂತೆ ಆದೇಶಿಸಿದೆ. ಇದನ್ನೂ ಓದಿ: ಐಎಎಸ್ ಅಧಿಕಾರಿ ಕೊಲೆ ಅಪರಾಧಿ ರಿಲೀಸ್ – ಬಿಹಾರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

  • ಏ.18ವರೆಗೆ ಹೊಸ ಮೀಸಲಾತಿ ಅನ್ವಯ ನೇಮಕಾತಿ, ಪ್ರವೇಶಾತಿ ನೀಡುವಂತಿಲ್ಲ: ಮುಸ್ಲಿಮರು, ಒಕ್ಕಲಿಗ & ಲಿಂಗಾಯತರ ಪರ ವಾದ ಏನಿತ್ತು?

    ಏ.18ವರೆಗೆ ಹೊಸ ಮೀಸಲಾತಿ ಅನ್ವಯ ನೇಮಕಾತಿ, ಪ್ರವೇಶಾತಿ ನೀಡುವಂತಿಲ್ಲ: ಮುಸ್ಲಿಮರು, ಒಕ್ಕಲಿಗ & ಲಿಂಗಾಯತರ ಪರ ವಾದ ಏನಿತ್ತು?

    ನವದೆಹಲಿ: ಏಪ್ರಿಲ್ 18 ವರೆಗೂ ಹೊಸ ಮೀಸಲಾತಿ (Reservation) ನಿಯಮದ ಅನ್ವಯ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶಾತಿ  ನೀಡದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ (Supreme Court) ಸೂಚನೆ ನೀಡಿದೆ.

    ಮುಸ್ಲಿಂ (Muslims) ಸಮುದಾಯದ 4% ಮೀಸಲಾತಿ ರದ್ದು ಮಾಡಿದ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ಇಂದು ನ್ಯಾ.ಕೆ.ಎಂ ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.

    ಅರ್ಜಿದಾರ ಗುಲಾಮ್ ರಸೂಲ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್ ದವೆ, ಮುಸ್ಲಿಂ ಮೀಸಲಾತಿ ರದ್ದು ಮಾಡಿ ಸರ್ಕಾರ ಈ‌ ಮೀಸಲಾತಿಯನ್ನು ಇತರೆ ಜಾತಿಗಳಿಗೆ ನೀಡಿದೆ. ಈ ಮೂಲಕ ಸರ್ಕಾರ ಸುಪ್ರೀಂಕೋರ್ಟ್ ಹಿಂದಿನ ಆದೇಶಗಳನ್ನು ಉಲ್ಲಂಘಿಸಿದೆ. ಇದೊಂದು ಅಸಾಂವಿಧಾನಿಕ ನಿರ್ಧಾರವಾಗಿದೆ. ರಾತ್ರೋರಾತ್ರಿ ಚುನಾವಣೆ ಸಂದರ್ಭದಲ್ಲಿ ಈ ನಿರ್ಧಾರ ಕೈಗೊಳ್ಳುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.

    ಯಾವುದೇ ವರದಿಯನ್ನು ಪಡೆಯದೇ ಮೀಸಲಾತಿ ರದ್ದು ಮಾಡಿರುವುದು 1996ರ ಕಾಯ್ದೆಗೆ ವಿರುದ್ಧವಾಗಿದೆ. ಮುಸ್ಲಿಂ ಸಮುದಾಯವನ್ನು ಜನರಲ್‌ ಕೆಟಗರಿಗೆ ಸೇರ್ಪಡೆ ಮಾಡಿರುವುದು ಆಘಾತಕಾರಿ ಬೆಳವಣಿಗೆ ಎಂದು ವಾದ ಮಂಡಿಸಿದರು. ಇದನ್ನೂ ಓದಿ: ಕ್ರೈಸ್ತ, ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರಿಗೆ ಮೀಸಲಾತಿ ರದ್ದು ವಿಚಾರ: ಸಮಿತಿ ವರದಿಗಾಗಿ ಕಾಯಲ್ಲ – ಸುಪ್ರೀಂ

    ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹಟಗಿ, ಎಲ್ಲ‌ ಮುಸ್ಲಿಮರು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಆಧಾರದಲ್ಲಿ ಪರಿಗಣಿಸುವುದು ತಪ್ಪು. ಕರ್ನಾಟಕದ ಎಲ್ಲಾ ಮುಸ್ಲಿಮರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದು ಹೇಗೆ ಹೇಳುತ್ತೀರಿ? ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂದು ಎರಡು ಹೈಕೋರ್ಟ್‌ಗಳ ಸಾಂವಿಧಾನಿಕ ಪೀಠ ಹೇಳಿದೆ. ಇದು ಕೇವಲ ಮೀಸಲಾತಿ ರದ್ದು ವಿಚಾರ ಅಲ್ಲ. ಎರಡು ಸಮುದಾಯಗಳಿಗೆ ಮೀಸಲಾತಿ ನೀಡಿರುವ ವಿಚಾರ ಎಂದರು.

     

    ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮುಸ್ಲಿಮರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲಾಗಿದೆಯೇ ಹೊರತು ಯಾವುದೇ ಪ್ರಯೋಗಿಕ ದತ್ತಾಂಶ ಇಲ್ಲ ಎಂದು ವಾದಿಸಿದರು.

    ತುಷಾರ್‌ ಮೆಹ್ತಾ ಅಫಿಡವಿಟ್ ಸಲ್ಲಿಕೆಗೆ ಮೂರು ದಿನಗಳ ಸಮಯ ಕೇಳಿದ ಹಿನ್ನಲೆಯಲ್ಲಿ ಕೋರ್ಟ್ ಮುಂದಿನ ವಿಚಾರಣೆಯನ್ನು ಏ.18ಕ್ಕೆ ಮುಂದೂಡಿತು.