Tag: ODI AisaCup

  • ಭಾರತ ತಂಡ ಪಾಕಿಸ್ತಾನಕ್ಕೆ ಬರದಿದ್ರೆ ನಾವೂ ಹೋಗಲ್ಲ – ಜಾವೆದ್‌ ಮಿಯಾಂದದ್‌

    ಭಾರತ ತಂಡ ಪಾಕಿಸ್ತಾನಕ್ಕೆ ಬರದಿದ್ರೆ ನಾವೂ ಹೋಗಲ್ಲ – ಜಾವೆದ್‌ ಮಿಯಾಂದದ್‌

    ಇಸ್ಲಾಮಾಬಾದ್‌/ಮುಂಬೈ: BCCI ತಮ್ಮ ತಂಡವನ್ನ ನಮ್ಮ ದೇಶಕ್ಕೆ ಕಳುಹಿಸಲು ಒಪ್ಪಿಕೊಳ್ಳುವವರೆಗೂ ಈ ವರ್ಷದ ICC ವಿಶ್ವಕಪ್‌ (ODI WorldCup) ಸೇರಿದಂತೆ ಯಾವುದೇ ಪಂದ್ಯಗಳಿಗೂ ಪಾಕಿಸ್ತಾನ (Pakistan) ನೆರೆಯ ದೇಶಕ್ಕೆ ಹೋಗುವುದಿಲ್ಲ ಎಂದು ಪಾಕ್‌ ತಂಡದ ಮಾಜಿ ನಾಯಕ ಜಾವೆದ್‌ ಮಿಯಾಂದದ್‌ ಹೇಳಿದ್ದಾರೆ.

    ಪ್ರತಿಷ್ಠಿತ ಏಷ್ಯಾ ಕಪ್‌ (ODI AisaCup) ಟೂರ್ನಿಯಲ್ಲಿ ಭಾಗವಹಿಸುವ ಸಲುವಾಗಿ ಪಾಕಿಸ್ತಾನಕ್ಕೆ ಭಾರತ ತಂಡವನ್ನ (Team India) ಕಳುಹಿಸಲು ನಿರಾಕರಿಸುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ವಿರುದ್ಧ ಪಾಕ್‌ ಹಿರಿಯ ಕ್ರಿಕೆಟಿಗರು ಹರಿಹಾಯ್ದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ʻಭಾರತ ತಂಡ ನರಕಕ್ಕೆ ಹೋಗಲಿʼ ಎಂದು ನಾಲಗೆ ಹರಿಬಿಟ್ಟಿದ್ದ ಜಾವೆದ್‌ ಮಿಯಾಂದದ್‌, ಪಾಕ್‌ ತಂಡ ಭಾರತಕ್ಕೆ ಹೋಗದಂತೆ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಆ.31 ರಿಂದ ಏಕದಿನ ಏಷ್ಯಾಕಪ್; ಲಂಕಾ, ಪಾಕ್ ಆತಿಥ್ಯ – ಬುಮ್ರಾ, ಅಯ್ಯರ್ ಕಂಬ್ಯಾಕ್ ಸಾಧ್ಯತೆ

    2023ರ ಏಷ್ಯಾ ಕಪ್‌ ಟೂರ್ನಿಯ ಆಯೋಜನೆಗೆ ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ ತಟಸ್ಥ ಸ್ಥಳಗಳನ್ನ ಆಯ್ಕೆ ಮಾಡಿದೆ. ಭಾರತ ತಂಡದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದರೆ, ಇನ್ನುಳಿದ ಪಂದ್ಯಗಳು ಪಾಕಿಸ್ತಾನದಲ್ಲಿ ಜರುಗಲಿವೆ. ಏಷ್ಯಾಕಪ್‌ ಕ್ರಿಕೆಟ್‌ ಸಮಿತಿ ಈ ನಿರ್ಧಾರವನ್ನ ಜಾವೆದ್‌ ಮಿಯಾಂದದ್‌ ವಿರೋಧಿಸಿದ್ದರು. ಪಾಕಿಸ್ತಾನಕ್ಕೆ ಭಾರತ ತಂಡ ಬಂದಿಲ್ಲವಾದರೆ, ಪಾಕಿಸ್ತಾನ ತಂಡ ಕೂಡ ಭಾರತಕ್ಕೆ ಹೋಗುವುದನ್ನು ನಿಷೇಧಿಸಬೇಕೆಂದು ಆಗ್ರಹಿಸಿದ್ದರು.

    ಮತ್ತೊಮ್ಮೆ ಈ ಬಗ್ಗೆ ಮಾತನಾಡಿರುವ ಮಿಯಾಂದ್‌, ಬಿಸಿಸಿಐ ತನ್ನ ತಂಡವನ್ನ ಪಾಕ್‌ಗೆ ಕಳುಹಿಸಲು ಒಪ್ಪಿಕೊಳ್ಳುವವರೆಗೂ ಪಾಕಿಸ್ತಾನ ಐಸಿಸಿ ವಿಶ್ವಕಪ್‌ ಸೇರಿದಂತೆ ಯಾವುದೇ ಪಂದ್ಯಗಳಿಗೆ ಭಾರತಕ್ಕೆ ಹೋಗಬಾರದು ಎಂದು ಕರೆ ನೀಡಿದ್ದಾರೆ.

    ಸದ್ಯ ಐಸಿಸಿ ಸಿದ್ಧಪಡಿಸಿರುವ ಕರಡು ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಡೋ ಪಾಕ್‌ ಕದನ ನಡೆಯಲಿದೆ. ಆದ್ರೆ ಅದಕ್ಕೆ ತಗಾದೆ ತೆಗೆದಿರುವ ಮಿಯಾಂದ್‌ ಪಾಕಿಸ್ತಾನ ತಂಡ 2012 ಮತ್ತು 2016ರಲ್ಲಿ ಭಾರತಕ್ಕೆ ಪ್ರಯಾಣ ಬೆಳೆಸಿತ್ತು. ಹಾಗಾಗಿ ಭಾರತ ತಂಡ ಕೂಡ ಇಲ್ಲಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.

    ನಾವು ಭಾರತದೊಂದಿಗೆ ಆಡಲು ಸಿದ್ಧರಿದ್ದೇವೆ, ಆದ್ರೆ ಅವರೂ ಅದೇ ರೀತಿ ಪ್ರತಿಕ್ರಿಯಿಸುವುದಿಲ್ಲ. ಹಾಗಾಗಿ ನಾವು ಯಾವುದೇ ಪಂದ್ಯವನ್ನಾಡಲು ಭಾರತಕ್ಕೆ ಹೋಗುವುದಿಲ್ಲ ಎಂದರಲ್ಲದೆ, ಪಾಕಿಸ್ತಾನ ಕ್ರಿಕೆಟ್‌ ತುಂಬಾ ದೊಡ್ಡದು, ನಾವು ಇನ್ನೂ ಗುಣಮಟ್ಟದ ಆಟಗಾರರನ್ನ ಉತ್ಪಾದಿಸುತ್ತೇವೆ. ಭಾರತಕ್ಕೆ ಹೋಗದಿದ್ದರೂ ನಮ್ಮ ತಂಡದಲ್ಲಿ ಯಾವುದೇ ವ್ಯತ್ಯಾಸ ಕಂಡುಬರುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತದಲ್ಲಿ ಮೃತರ ಕುಟುಂಬಕ್ಕೆ 20 ಲಕ್ಷ ದೇಣಿಗೆ ನೀಡಿದ ಭಾರತೀಯ ಫುಟ್ಬಾಲ್‌ ತಂಡ

    ಭಾರತ ಏಕೆ ಪಾಕ್‌ಗೆ ಹೋಗ್ತಿಲ್ಲ?:
    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಟಿ20 ಏಷ್ಯಾಕಪ್‌ ಹಾಗೂ ಟಿ20 ವಿಶ್ವಕಪ್‌ನಲ್ಲಿ ಇತ್ತಂಡಗಳು ಭಾಗಿಯಾಗಿದ್ದವು. ನಂತರ ಏಷ್ಯಾಕಪ್‌ ಆಡಲು ಭಾರತ ತಂಡವನ್ನು ತನ್ನ ದೇಶಕ್ಕೆ ಕಳುಹಿಸಿಕೊಡುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಈ ಮನವಿಯನ್ನು ನಿರಾಕರಿಸಿದ್ದರು.

  • Asia Cup: ಪಾಕ್‌ಗೆ ಕೈತಪ್ಪಿದ ಏಷ್ಯಾಕಪ್‌ ಆತಿಥ್ಯ – ಲಂಕಾದಲ್ಲಿ ಟೂರ್ನಿ ನಡೆಯುವ ಸಾಧ್ಯತೆ

    Asia Cup: ಪಾಕ್‌ಗೆ ಕೈತಪ್ಪಿದ ಏಷ್ಯಾಕಪ್‌ ಆತಿಥ್ಯ – ಲಂಕಾದಲ್ಲಿ ಟೂರ್ನಿ ನಡೆಯುವ ಸಾಧ್ಯತೆ

    ದುಬೈ: ಏಷ್ಯಾಕಪ್‌ ಟೂರ್ನಿಯನ್ನು ಹೈಬ್ರಿಡ್‌ ಮಾದರಿಯಲ್ಲಿ ಆಯೋಜಿಸುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB)ಯ ಪ್ರಸ್ತಾವನೆಯನ್ನ ಸದಸ್ಯ ರಾಷ್ಟ್ರಗಳು ತಿರಸ್ಕರಿಸಿದ ನಂತರ ಏಷ್ಯಾಕಪ್‌ ಟೂರ್ನಿಯನ್ನ ದೇಶದಿಂದಲೇ ಸ್ಥಳಾಂತರಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ನಿರ್ಧರಿಸಿದೆ.‌

    ಸೆಪ್ಟೆಂಬರ್‌ 2 ರಿಂದ 17ರ ವರೆಗೆ ನಡೆಯಲಿರುವ ಏಕದಿನ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಅಫ್ಘಾನಿಸ್ತಾನ, ಶ್ರೀಲಂಕಾ (SriLanka) ಹಾಗೂ ಬಾಂಗ್ಲಾದೇಶ ಸೇರಿ 6 ದೇಶಗಳು ಸ್ಪರ್ಧಿಸಲಿವೆ. ಸದ್ಯ 6 ರಾಷ್ಟ್ರಗಳ ಕ್ರಿಕೆಟ್‌ ಟೂರ್ನಿ ಆಯೋಜಿಸಲು ಶ್ರೀಲಂಕಾ ಮುಂಚೂಣಿಯಲ್ಲಿದ್ದು, ಈ ಬಾರಿ ಆತಿಥ್ಯ ವಹಿಸಿಕೊಳ್ಳುವ ಸಾಧ್ಯತೆಯಿದೆ. ಆದ್ರೆ ಆತಿಥ್ಯ ಕೈತಪ್ಪಿದಲ್ಲಿ ಪಾಕಿಸ್ತಾನ ಏಷ್ಯಾಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತದೆಯೇ ಇಲ್ಲವೇ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

    ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಪಾಕಿಸ್ತಾನಕ್ಕೆ ಭಾರತ ತಂಡವನ್ನು ಕಳುಹಿಸಲು ನಿರಾಕರಿಸಿದ ನಂತರ ಪಿಸಿಬಿ ಹೈಬ್ರಿಡ್‌ ಮಾದರಿಯ ಪ್ರಸ್ತಾವನೆಯನ್ನು ಐಸಿಸಿ ಮುಂದಿಟ್ಟಿತ್ತು. ಪಾಕಿಸ್ತಾನವು ಆತಿಥೇಯ ದೇಶಗಳೊಂದಿಗೆ ತವರಿನಲ್ಲಿ ಹಾಗೂ ಭಾರತ ಪ್ರತಿಸ್ಪರ್ಧಿ ದೇಶಗಳೊಂದಿಗೆ ಆಡುವಾಗ ತಟಸ್ಥ ಸ್ಥಳದಲ್ಲಿ ಆಡಬಹುದು ಎಂದು ಹೇಳಿತ್ತು. ಆದ್ರೆ ಸದಸ್ಯ ರಾಷ್ಟ್ರಗಳು ಈ ಪ್ರಸ್ತಾಪವನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಪಾಕ್‌ನಿಂದ ಟೂರ್ನಿಯನ್ನು ಬೇರೆಡೆಗೆ ಸ್ಥಳಾಂತರಸಿಲಾಗುತ್ತಿದೆ. ಈ ಬಗ್ಗೆ ಮತತೊಂದು ಸುತ್ತಿನಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: AisaCup ಕ್ರಿಕೆಟ್‌ಗೆ ಭಾರತ ಪಾಕಿಸ್ತಾನಕ್ಕೆ ಹೋಗಲ್ಲ: BCCI ಅಧಿಕೃತ ಪ್ರಕಟ

    ಭಾರತ ಏಕೆ ಪಾಕ್‌ಗೆ ಹೋಗ್ತಿಲ್ಲ?:
    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಟಿ20 ಏಷ್ಯಾಕಪ್‌ ಹಾಗೂ ಟಿ20 ವಿಶ್ವಕಪ್‌ನಲ್ಲಿ ಇತ್ತಂಡಗಳು ಭಾಗಿಯಾಗಿದ್ದವು. ನಂತರ ಏಷ್ಯಾಕಪ್‌ ಆಡಲು ಭಾರತ ತಂಡವನ್ನು ತನ್ನ ದೇಶಕ್ಕೆ ಕಳುಹಿಸಿಕೊಡುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಈ ಮನವಿಯನ್ನು ನಿರಾಕರಿಸಿದ್ದರು.

  • AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

    AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

    ಇಸ್ಲಾಮಾಬಾದ್‌: ಏಕದಿನ ಏಷ್ಯಾಕಪ್‌ 2023ರ (ODI AisaCup) ಟೂರ್ನಿಗೆ ಭಾರತ ತಂಡ (Team India) ಪಾಲ್ಗೊಳ್ಳುವ ವಿಚಾರದಲ್ಲಿ ಕೊನೆಗೂ ಭಾರತದ ಎದುರು ಪಾಕಿಸ್ತಾನ (Pakistan) ಮಂಡಿಯೂರಿದೆ.

    ಪಾಕಿಸ್ತಾನವು ಆತಿಥೇಯ ದೇಶಗಳೊಂದಿಗೆ ತವರಿನಲ್ಲಿ ಹಾಗೂ ಭಾರತ ಪ್ರತಿಸ್ಪರ್ಧಿ ದೇಶಗಳೊಂದಿಗೆ ಆಡುವಾಗ ತಟಸ್ಥ ಸ್ಥಳದಲ್ಲಿ ಆಡಬಹುದು ಎಂದು ಹೇಳಿದೆ. ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಮುಖ್ಯಸ್ಥ ನಜಮ್‌ ಸೇಥಿ (Najam Sethi) ಶುಕ್ರವಾರ ಈ ವಿಷಯವನ್ನು ಬೋರ್ಡ್‌ನಲ್ಲಿ ಪ್ರಸ್ತಾಪಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ (ICC) ಪ್ರಸ್ತಾವನೆ ಕಳುಹಿಸಿದ್ದಾರೆ. ಇದನ್ನೂ ಓದಿ: ಲೀಗ್‌ ಹಂತದಲ್ಲೇ ಹಲವು ಸಮಸ್ಯೆ – ಈ ಸಲ ಕಪ್‌ ಗೆಲ್ಲುತ್ತಾ RCB?

    ಸೆಪ್ಟೆಂಬರ್‌ 2 ರಿಂದ 17ರ ವರೆಗೆ ನಡೆಯಲಿರುವ ಏಕದಿನ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಅಫ್ಘಾನಿಸ್ತಾನ, ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಸೇರಿ 6 ದೇಶಗಳು ಸ್ಪರ್ಧಿಸಲಿವೆ. ಭಾರತ ತಟಸ್ಥ ಸ್ಥಳದಲ್ಲಿ ಆಡುವ ಕುರಿತು ಐಸಿಸಿ ನಿರ್ಧಾರ ಪ್ರಕಟಿಸಿದ ಬಳಿಕ ಪಂದ್ಯಗಳ ನಿರ್ಣಾಯಕ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಪಿಸಿಬಿ ಹೇಳಿದೆ. ಇದನ್ನೂ ಓದಿ: ಕೊಹ್ಲಿ ಮತ್ತೆ ನಾಯಕನಾಗಲು ಇದೇ ಕಾರಣ – ನೋವಿನಲ್ಲೂ RCB ತಂಡಕ್ಕಾಗಿ ಅಬ್ಬರಿಸಿದ ಡುಪ್ಲೆಸಿಸ್‌

    ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೊ ಜರ್ದಾರಿ ಅವರು ಮೇ 4 ಹಾಗೂ 5 ರಂದು ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಮೇ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ನಿರ್ವಹಿಸಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಈ ಮಹತ್ವದ ಬೆಳವಣಿಗೆಯಿಂದ ಮುಂದೆ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಪಾಕಿಸ್ತಾನದಲ್ಲಿ ಆಡುವ ಸಾಧ್ಯತೆಯಿದೆ. ಅದಕ್ಕಾಗಿ ಏಷ್ಯಾಕಪ್‌ ಅನ್ನು ತಟಸ್ಥ ಸ್ಥಳದಲ್ಲಿ ಆಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

    ಭಾರತವು ತನ್ನ ದೇಶದಲ್ಲಿ ಕ್ರಿಕೆಟ್‌ ಆಡಬೇಕೆಂದು ಇಲ್ಲಿನ ಜನ ಬಯಸಿದ್ದಾರೆ. ನಮ್ಮ ಸರ್ಕಾರವೂ ಭಾರತದ ವಿರುದ್ಧ ಆಡಲು ಯಾವುದೇ ನಿರ್ಬಂಧ ವಿಧಿಸಿಲ್ಲ. ನಾವು ಭಾರತದೊಂದಿಗೆ ಗೌರವಯುತವಾಗಿ ಕ್ರಿಕೆಟ್‌ ಆಡಲು ಬಯಸುತ್ತೇವೆ. ಇದರಿಂದ ಪಾಕಿಸ್ತಾನದ ಆರ್ಥಿಕತೆಯೂ ಅಭಿವೃದ್ಧಿಯಾಗುತ್ತದೆ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಮುಖ್ಯಸ್ಥ ನಜಮ್‌ ಸೇಥಿ ತಿಳಿಸಿದ್ದಾರೆ.

    ಏಕದಿನ ಏಷ್ಯಾಕಪ್‌ ಟೂರ್ನಿಯಲ್ಲಿ ಭಾರತ ತಂಡ ತಟಸ್ಥ ಸ್ಥಳದಲ್ಲಿ ಆಡುವ ಬಗ್ಗೆ ಬಿಸಿಸಿಐ ಆಗಲಿ, ಐಸಿಸಿ ಆಗಲಿ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

    ಭಾರತ ಏಕೆ ಪಾಕ್‌ಗೆ ಹೋಗ್ತಿಲ್ಲ: ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಟಿ20 ಏಷ್ಯಾಕಪ್‌ ಹಾಗೂ ಟಿ20 ವಿಶ್ವಕಪ್‌ನಲ್ಲಿ ಇತ್ತಂಡಗಳು ಭಾಗಿಯಾಗಿದ್ದವು. ನಂತರ ಏಷ್ಯಾಕಪ್‌ ಆಡಲು ಭಾರತ ತಂಡವನ್ನು ತನ್ನ ದೇಶಕ್ಕೆ ಕಳುಹಿಸಿಕೊಡುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಈ ಮನವಿಯನ್ನು ನಿರಾಕರಿಸಿದ್ದರು.

  • 2023ರ ಏಕದಿನ AisaCup ಟೂರ್ನಿಗೆ ಪಾಕಿಸ್ತಾನಕ್ಕೆ ಲಗ್ಗೆ ಇಡಲಿದೆ ಭಾರತ

    2023ರ ಏಕದಿನ AisaCup ಟೂರ್ನಿಗೆ ಪಾಕಿಸ್ತಾನಕ್ಕೆ ಲಗ್ಗೆ ಇಡಲಿದೆ ಭಾರತ

    ಮುಂಬೈ: 2023ಕ್ಕೆ ಪಾಕಿಸ್ತಾನ ಆಯೋಜಿಸುವ ಏಷ್ಯಾಕಪ್ ಏಕದಿನ ಕ್ರಿಕೆಟ್ (ODI AisaCup Cricket) ಟೂರ್ನಿಗೆ ಭಾರತ ತಂಡವನ್ನು (Team India) ಪಾಕಿಸ್ತಾನಕ್ಕೆ (Pakistana) ಕಳುಹಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಕ್ತವಾಗಿದೆ.

    ಹೌದು. ಭಾರತ ತಂಡವು 2006ರಲ್ಲಿ ರಾಹುಲ್ ದ್ರಾವಿಡ್ (Rahul Dravid) ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ನಂತರ ರಾಜತಾಂತ್ರಿಕ ಕಾರಣಗಳಿಂದಾಗಿ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.

    ಇದೀಗ 2023ರಲ್ಲಿ ಪಾಕಿಸ್ತಾನವು ತನ್ನ ದೇಶದಲ್ಲಿ ಏಷ್ಯಾಕಪ್ ಏಕದಿನ ಕ್ರಿಕೆಟ್ ಟೂರ್ನಿ ಆಯೋಜಿಸಲು ನಿರ್ಧರಿಸಿದೆ. ಆ ನಂತರ ಭಾರತದಲ್ಲಿ ಐಸಿಸಿ (ICC) ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ನಡುವೆ ಪಾಕಿಸ್ತಾನಕ್ಕೆ ಟೀಂ ಇಂಡಿಯಾವನ್ನು (Team India) ಕಳುಹಿಸಲು ಮುಕ್ತವಾಗಿದೆ ಎನ್ನುವ ನಿರ್ಧಾರ ಪ್ರಕಟಿಸಿದೆ.

    ಕೇಂದ್ರ ಸರ್ಕಾರ (Central Government Of India) ಒಪ್ಪಿಗೆ ಸೂಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದೇ ತಿಂಗಳ ಅಕ್ಟೋಬರ್ 18ರಂದು ಬಿಸಿಸಿಐ ತನ್ನ ವಾರ್ಷಿಕ ಸಾಮಾನ್ಯ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ನಿರ್ಣಯಿಸಲಾಗುತ್ತದೆ ಎಂದು ಬಿಸಿಸಿಐ ಹೇಳಿದೆ. ಇದನ್ನೂ ಓದಿ: ಶಿಫಾಲಿ, ದೀಪ್ತಿ ಆಟಕ್ಕೆ ಥಾಯ್ಲೆಂಡ್‌ ಥಂಡಾ – ಏಷ್ಯಾಕಪ್ ಫೈನಲ್‍ಗೆ ಭಾರತ

    ಇತ್ತೀಚೆಗೆ ನಡೆದ ಟಿ20 (T20) ಏಷ್ಯಾಕಪ್ ಟೂರ್ನಿಯಲ್ಲಿ ಮೊದಲ ಪಂದ್ಯದಲ್ಲೇ ಬದ್ಧವೈರಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ ಲೀಗ್ ಫೋರ್ ಹಂತದಲ್ಲಿ ಸೋಲನ್ನು ಅನುಭವಿಸಿ ಟೂರ್ನಿಯಿಂದ ಹೊರ ಬಿದ್ದಿತ್ತು.

    Live Tv
    [brid partner=56869869 player=32851 video=960834 autoplay=true]