Tag: ODI Worldcup 2023

  • ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ

    ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ

    ಮುಂಬೈ: ಕಳೆದ ವರ್ಷ ಟಿ20 ಕ್ರಿಕೆಟ್‌ನಲ್ಲಿ ಧೂಳೆಬ್ಬಿಸಿದ್ದ ಟೀಂ ಇಂಡಿಯಾ (Team India) ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌ (Suryakumar Yadav) ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಕ್ರಿಕೆಟ್‌ನಲ್ಲಿ ಗೋಲ್ಡನ್‌ ಡಕ್‌ ಆಗಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

    ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸೂರ್ಯಕುಮಾರ್‌ ಅವರು 2022ರ ಋತುವಿನಲ್ಲಿ 1,164 ರನ್‌ ಕಲೆಹಾಕಿದ್ದರು. 2 ಶತಕ ಮತ್ತು 9 ಅರ್ಧಶತಕ ಗಳಿಸಿದ್ದರು. ಅಲ್ಲದೇ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಟಿ20 ಬ್ಯಾಟರ್‌ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮ್‌ ರಿಜ್ವಾನ್‌ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದರು. ಈ ವರ್ಷಾರಂಭದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಸರಣಿಯಲ್ಲೂ ಸ್ಫೋಟಕ ಶತಕ ಸಿಡಿಸಿ ಟೀಂ ಇಂಡಿಯಾಕ್ಕೆ ಸರಣಿ ಕಿರೀಟ ತಂಡುಕೊಟ್ಟಿದ್ದರು. ಆದರೆ ಏಕದಿನ ಕ್ರಿಕೆಟ್‌ನಲ್ಲಿ ಫಾರ್ಮ್‌ಗೆ ಮರಳಲು ಹೆಣಗಾಡುತ್ತಿರುವ ಸೂರ್ಯಕುಮಾರ್‌ ಅಭಿಮಾನಿಗಳಿಂದಲೂ ಟೀಕೆಗೆ ಗುರಿಯಾಗಿದ್ದಾರೆ. ಈ ನಡುವೆ ಟೀಂ ಇಂಡಿಯಾ ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ (Yuvraj Singh) ಸೂರ್ಯನ ಬೆಂಬಲಕ್ಕೆ ನಿಂತಿದ್ದಾರೆ.

    ಈ ಕುರಿತು ಟ್ವೀಟ್‌ ಮಾಡಿರುವ ಯುವರಾಜ್‌ ಸಿಂಗ್‌, ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನದಲ್ಲಿ ಏರಿಳಿತಗಳು ಸಹಜ. ನಾವು ಕೂಡ ಒಂದು ಹಂತದಲ್ಲಿ ಅದನ್ನ ಅನುಭವಿಸಿದ್ದೇವೆ. ವಿಶ್ವಕಪ್ ಟೂರ್ನಿಯಲ್ಲಿ (ODI WorldCup 2023) ಸೂರ್ಯಕುಮಾರ್ ಯಾದವ್‌ಗೆ ಆಡುವ ಒಂದೇ ಒಂದು ಅವಕಾಶ ಸಿಕ್ಕರೆ ಪರಿಣಾಮಕಾರಿ ಬ್ಯಾಟಿಂಗ್ ಪ್ರದರ್ಶನ ತೋರಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ನಾನು ನಂಬುತ್ತೇನೆ. ಭಾರತ ತಂಡದಲ್ಲಿ ಸೂರ್ಯ ಮತ್ತೇ ಉದಯಿಸುತ್ತದೆʼಎಂದು ಹೇಳಿದ್ದಾರೆ. ಇದನ್ನೂ ಓದಿ: 3 ಪಂದ್ಯ, ಫಸ್ಟ್ ಬಾಲಿಗೆ ಔಟ್ – ಕೆಟ್ಟ ದಾಖಲೆ ಬರೆದ ಸೂರ್ಯ

    ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 5 ಬಾರಿ ಚಾಂಪಿಯನ್ಸ್‌ ಆಗಿರುವ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಬ್ಯಾಟ್ಸ್‌ಮ್ಯಾನ್‌ ಆಗಿರುವ ಸೂರ್ಯಕುಮಾರ್ ಯಾದವ್, 2022ರ ಆವೃತ್ತಿಯಲ್ಲಿ ಗಾಯಗೊಂಡು ಕೊನೆಯ ಪಂದ್ಯಗಳಿಂದ ತಂಡದಿಂದ ಹೊರಗುಳಿದಿದ್ದರು. ಅದಕ್ಕೂ ಮುನ್ನ ಆಡಿದ್ದ 8 ಪಂದ್ಯಗಳಲ್ಲಿ 150 ಸ್ಟ್ರೆಕ್ ರೇಟ್‌ನಲ್ಲಿ ಬ್ಯಾಟ್‌ ಬೀಸಿ 303 ರನ್ ಸಿಡಿಸಿದ್ದರು. ಇದನ್ನೂ ಓದಿ: IPL 2023: ಕಣಕ್ಕಿಳಿಯಲು RCB, CSK ಬಲಿಷ್ಠ ತಂಡ ರೆಡಿ – ಈ ಸಲ ಕಪ್ ಯಾರದ್ದು?

    16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.

  • ಕೊಹ್ಲಿಗೆ ಸೂರ್ಯನಂತೆ ಬ್ಯಾಟಿಂಗ್ ಮಾಡಲು ಹೇಳಿದ್ರೆ ಆಗಲ್ಲ – ಗಂಭೀರ್

    ಕೊಹ್ಲಿಗೆ ಸೂರ್ಯನಂತೆ ಬ್ಯಾಟಿಂಗ್ ಮಾಡಲು ಹೇಳಿದ್ರೆ ಆಗಲ್ಲ – ಗಂಭೀರ್

    ಮುಂಬೈ: 2023ರ ಏಕದಿನ ವಿಶ್ವಕಪ್‌ಗೆ (ODI Worldcup 2023) ಕೆಲವೇ ತಿಂಗಳು ಬಾಕಿ ಇದ್ದು, ಈಗಾಗಲೇ 20 ಆಟಗಾರರನ್ನ ಬಿಸಿಸಿಐ (BCCI) ಆಯ್ಕೆ ಮಾಡಿರುವುದಾಗಿ ಮೂಲಗಳು ತಿಳಿಸಿವೆ. ಈ ಆಟಗಾರರ ಕುರಿತು ತಜ್ಞರು ಚರ್ಚೆ ನಡೆಸಿದ್ದಾರೆ. ಈ ವೇಳೆ ಸಂಸದರೂ ಆಗಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಕೆಲವು ಅಂಶಗಳನ್ನ ಪ್ರಸ್ತಾಪಿಸಿದ್ದಾರೆ.

    ಒಬ್ಬ ಆಟಗಾರನಂತೆ ಮತ್ತೊಬ್ಬ ಆಟಗಾರ ಆಡಲು ಸಾಧ್ಯವಿಲ್ಲ. ಆದ್ದರಿಂದ ಉತ್ತಮ ಆಟಗಾರರನ್ನು ಆಯ್ಕೆ ಮಾಡುವುದು ಸೂಕ್ತ ಎಂದು ಹೇಳುವಾಗ ವಿರಾಟ್ ಕೊಹ್ಲಿ (Virat Kohli) ಮತ್ತು ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನ ಉದಾಹರಣೆ ನೀಡಿದ್ದಾರೆ. ಇದನ್ನೂ ಓದಿ: ಪಂತ್ ಮುಂಬೈಗೆ ಏರ್‌ಲಿಫ್ಟ್‌

    ಈಗ ನಾನು ಯುಸೂಫ್ (ಪಠಾಣ್) ಶೈಲಿಯಲ್ಲಿ ಆಡಲು ಸಾಧ್ಯವಿಲ್ಲ. ಹಾಗೆಯೇ ಅವರೂ ನನ್ನ ಶೈಲಿಯಲ್ಲಿ ಆಡಲು ಸಾಧ್ಯವಿಲ್ಲ. ಯಾರಾದ್ರೂ ಯುಸೂಫ್ ಶೈಲಿಯನ್ನ ಅನುಸರಿಸಲು ಹೇಳಿದ್ರೆ ನನಗೆ ಅದನ್ನ ಮಾಡಲು ಸಾಧ್ಯವಾಗಲ್ಲ. ಹಾಗೆಯೇ ವಿರಾಟ್ ಕೊಹ್ಲಿಗೆ ಸೂರ್ಯಕುಮಾರ್ ಯಾದವ್ ಅವರಂತೆ ಬ್ಯಾಟಿಂಗ್ ಮಾಡಲು ಹೇಳಿದ್ರೆ ಸಾಧ್ಯವಾಗೋದಿಲ್ಲ. ವಿರಾಟ್ ರೀತಿ ಸೂರ್ಯನಿಗೆ ಹೇಳಿದ್ರೂ ಅವರಿಂದ ಆಗೋದಿಲ್ಲ. ಆದ್ದರಿಂದ ಆಟಗಾರರನ್ನ ಗುರುತಿಸೋದು ಬಹಳ ಮುಖ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವೈಡ್ ಕೊಡದ ಅಂಪೈರ್‌ಗೆ ನಿಂದಿಸಿದ ದೀಪಕ್ ಹೂಡಾ

    ವಿರಾಟ್, ರೋಹಿತ್ ಪಾತ್ರ ಮುಖ್ಯ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ (Rohit Sharma) ಪ್ರಮುಖ ಆಟಗಾರರು. ಅವರಂತಹ ಅನುಭವಿ ಆಟಗಾರರು ಸ್ಪಿನ್ನರ್‌ಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಅವರು ದೊಡ್ಡ ಪಾತ್ರ ನಿರ್ವಹಿಸಲಿದ್ದಾರೆ. ಆದ್ರೆ ಕೆಲವರು ಮತ್ತೊಬ್ಬರ ಶೈಲಿಗೆ ಹೊಂದಿಕೊಳ್ಳುವುದಿಲ್ಲ. ನಿರ್ದಿಷ್ಟ ಶೈಲಿಯಲ್ಲಿ ಆಡುವಂತೆ ಆಟಗಾರರನ್ನು ಏಕೆ ದೂಡಬೇಕು? ಆದ್ದರಿಂದ ನಿರ್ದಿಷ್ಟ ಶೈಲಿ ಆಡಬೇಕು ಎಂದು ಯೋಚಿಸುವುದಕ್ಕಿಂತ, ಒಂದೇ ಮನಸ್ಥಿತಿಯಲ್ಲಿ ಆಟವಾಡುವವರನ್ನು ಆಯ್ಕೆ ಮಾಡುವುದು ಉತ್ತಮ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k