Tag: Odia

  • ಹಿರಿಯನಟ ರೈ ಮೋಹನ್ ಶವವಾಗಿ ಮನೆಯಲ್ಲಿ ಪತ್ತೆ

    ಹಿರಿಯನಟ ರೈ ಮೋಹನ್ ಶವವಾಗಿ ಮನೆಯಲ್ಲಿ ಪತ್ತೆ

    ಮೊನ್ನೆಯಷ್ಟೇ ಒಡಿಶಾದ ಯುವ ನಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಸಾವಿನ ಸುದ್ದಿ ಇನ್ನೂ ಮಾಸುವ ಮುನ್ನವೇ ಹಿರಿಯ ಒಡಿಯಾ ನಟ ರೈ ಮೋಹನ್ ಪರಿದಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭುವನೇಶ್ವರದಲ್ಲಿರುವ ಅವರ ಮನೆಯಲ್ಲಿ ಇಂದು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಒಡಿಯಾ ಸಿನಿಮಾ ರಂಗದಲ್ಲಿ ಖಳನಟನಾಗಿ ಫೇಮಸ್ ಆಗಿರುವ ರೈಮೋಹನ್ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಾಡಿದ ಬಹುತೇಕ ಪಾತ್ರಗಳ ವಿಲನ್ ಆಗಿದ್ದರೂ, ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ನಟ ಇವರಾಗಿದ್ದಾರೆ. ಇವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲವಾದರೂ, ತನಿಖೆ ನಡೆಯುತ್ತಿದೆ. ಇದನ್ನು ಓದಿ:ರಶ್ಮಿಕಾ ಮಂದಣ್ಣ ಸಂಭಾವನೆ 5 ಕೋಟಿನಾ? : ನಂ.1 ಸ್ಥಾನಕ್ಕೆ ಏರಿದ ಕೊಡಗಿನ ಬೆಡಗಿ

    ಬೆಂಗಾಲಿ, ಒಡಿಯಾ ಸಿನಿಮಾಗಳಲ್ಲಿ ನಟಿಸಿರುವ ಇವರು, ನಟನೆಗಾಗಿ ಒಡಿಶಾ ರಾಜ್ಯ ಪ್ರಶಸ್ತಿಯನ್ನೂ ಪಡೆದಿದ್ದಾರೆ. ‘ಹೇ ಅನನಿ’ ಡೈಲಾಗ್ ಮೂಲಕ ಇವರನ್ನು ಅಭಿಮಾನಿಗಳು ಗುರುತಿಸುತ್ತಿದ್ದು, ಪ್ರಾಚಿ ಬಿಹಾರದ ಉದಯ್ ಪುರ ಅಪಾರ್ಟ್ಮೆಂಟ್ ನಲ್ಲಿ ಕುಟುಂಬದೊಂದಿಗೆ ವಾಸವಿದ್ದರು.

    Live Tv

  • ಗಾಯಕ ಪ್ರಫುಲ್ಲ ಕರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    ಗಾಯಕ ಪ್ರಫುಲ್ಲ ಕರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    ಡಿಯಾದ ಖ್ಯಾತ ಸಂಗೀತಗಾರ ಮತ್ತು ಗಾಯಕ ಪ್ರಫುಲ್ಲ ಕರ್ ಇಂದು ನಿಧನರಾಗಿದ್ದಾರೆ. ಪ್ರಫುಲ್ಲ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ನೋವು ಭರಿಸುವಂತಹ ಶಕ್ತಿಯು ದೇವರು ಕೊಡಲೆಂದು ಪ್ರಾರ್ಥಿಸಿದ್ದಾರೆ.

    ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಕೆ ಅವರು ಸಲ್ಲಿಸಿದ ಕೊಡುಗೆಗಾಗಿ ಕರ್ ಅವರನ್ನು ಸ್ಮರಿಸಲಾಗುವುದು ಎಂದು ಮೋದಿ ಹೇಳಿದ್ದಾರೆ. ‘ಶ್ರೀ ಪ್ರಫುಲ್ಲ ಕರ್ ಅವರ ನಿಧನದಿಂದ ನನಗೆ ಅಪಾರ ದುಃಖವಾಗಿದೆ. ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಕೆ ಅವರ ಕೊಡುಗೆ ಅಪಾರ. ಅವರು ಬಹುಮುಖಿ ವ್ಯಕ್ತಿತ್ವದಿಂದ ಆಶೀರ್ವದಿಸಲ್ಪಟ್ಟಿದ್ದಾರೆ ಮತ್ತು ಅವರ ಸೃಜನಶೀಲತೆಯು ಅವರ ಕೃತಿಗಳಲ್ಲಿ ಪ್ರತಿಫಲಿಸುತ್ತದೆ’ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳನ್ನು ಸೂಚಿಸುತ್ತೇನೆ ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

    ಖ್ಯಾತ ಒಡಿಯಾ ಸಂಗೀತಗಾರ ಮತ್ತು ಗಾಯಕ ಕರ್ ಅವರು ರಾಜ್ಯ ರಾಜಧಾನಿ ಭುವನೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ. 83 ವರ್ಷ ವಯಸ್ಸಿನ ಅವರು ಕೆಲವು ತಿಂಗಳಿನಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರ ಅಂತಿಮ ಸಂಸ್ಕಾರವನ್ನು ಪೂರ್ಣ ಗೌರವದಿಂದ ಪುರಿಯಲ್ಲಿ ಇಂದು ನೆರವೇರಿಸಲಾಗಿದೆ.

  • ಭಾಷೆ ತಿಳಿಯದೆ ಅಧಿಕಾರ ಕಳೆದುಕೊಂಡ ಮಹಿಳೆ

    ಭಾಷೆ ತಿಳಿಯದೆ ಅಧಿಕಾರ ಕಳೆದುಕೊಂಡ ಮಹಿಳೆ

    ಭುವನೇಶ್ವರ: ಭಾಷೆ ಗೊತ್ತಿಲ್ಲ ಎಂದು ಗ್ರಾಮ ಪಂಚಾಯತ್ ಸದಸ್ಯತ್ವ ಸ್ಥಾನದಿಂದ ಮಹಿಳೆ ಅನರ್ಹವಾಗಿರುವ ಘಟನೆ ಗಂಜಾಮ್ ಜಿಲ್ಲೆಯಲ್ಲಿ ನಡೆದಿದೆ.

    ಎಂ. ಲಕ್ಷ್ಮೀ ಗಂಜಾಮ್ ಜಿಲ್ಲೆಯ ಛತ್ರಪುರ್ ಬ್ಲಾಕ್ ಅಡಿಯಲ್ಲಿ ಬರುವ ಆರ್ಯಪಲಿ ಗ್ರಾಮ ಪಂಚಾಯ್ತಿಯಿಂದ 2017ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಆದರೆ ಲಕ್ಷ್ಮೀಯ ಆಯ್ಕೆಯ ಕುರಿತಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು. ಲಕ್ಷ್ಮೀ ಅವರಿಗೆ ಒಡಿಯಾ ಭಾಷೆ ಗೊತ್ತಿಲ್ಲ ಎಂದು ಆರೋಪಿಸಲಾಗಿತ್ತು.

    1994ರ ಒಡಿಶಾ ಗ್ರಾಮ ಪಂಚಾಯ್ತಿ ಕಾಯ್ದೆ ಪ್ರಕಾರ ಒಡಿಯಾ ಭಾಷೆಯನ್ನು ಓದಲು, ಬರೆಯಲು ಹಾಗೂ ಮಾತನಾಡಕಲು ಬರಲಿಲ್ಲವೆಂದರೆ ಗ್ರಾಮಪಂಚಾಯ್ತಿಯಲ್ಲಿ ಯಾವುದೇ ಸ್ಥಾನವನ್ನು ಹೊಂದಲು ಅವಕಾಶ ಇರುವುದಿಲ್ಲ.

    ಇದೀಗ ಸುದೀರ್ಘ ವಿಚಾರಣೆ ನಂತರ ಲಕ್ಷ್ಮೀ ಅವರಿಗೆ ಭಾಷೆ ಗೊತ್ತಿಲ್ಲ ಎಂದು ನ್ಯಾಯಾಲಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದೆ. ಲಕ್ಷ್ಮೀ ಅವರಿಗೆ ಒಡಿಯಾ ಗೊತ್ತಿಲ್ಲ ಎಂದು ಸ್ಪಷ್ಟವಾದ ಬಳಿಕ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತಾಗಿ ಸೂಕ್ತವಾದ ಕ್ರಮವನ್ನು ತೆಗೆದುಕೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.