Tag: ODISHA

  • ಆಂಧ್ರ, ಒಡಿಶಾ ಕರಾವಳಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ – 110 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಆಂಧ್ರ, ಒಡಿಶಾ ಕರಾವಳಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ – 110 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    – ಕರಾವಳಿ ಪ್ರದೇಶದಲ್ಲಿರುವ ಜನರ ಸ್ಥಳಾಂತರ
    – ರೈಲು, ವಿಮಾನ ಸಂಚಾರಕ್ಕೆ ಚಂಡಮಾರುತ ಅಡ್ಡಿ

    ನವದೆಹಲಿ: ಮೊಂಥಾ ಚಂಡಮಾರುತ (Cyclone Montha) ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸಿದೆ. ಪರಿಣಾಮ ಆಂಧ್ರಪ್ರದೇಶ ಮತ್ತು ಒಡಿಶಾದ (Odisha) ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.

    ಮಂಗಳವಾರ ಸಂಜೆ 7 ಗಂಟೆಗೆ ಮೊಂಥಾ ಆಂಧ್ರಪ್ರದೇಶದ ಕರಾವಳಿಯ ಭಾಗವಾದ ಮಚಲಿಪಟ್ಟಣ ಮತ್ತು ಮತ್ತು ಕಳಿಂಗಪಟ್ಟಣ ಮಧ್ಯೆ ಅಪ್ಪಳಿಸಿತು. ಗಂಟೆಗೆ 110 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಕೊನಸೀಮಾ ಜಿಲ್ಲೆಯಲ್ಲಿ ಮರವೊಂದು ಮನೆಯ ಮೇಲೆ ಬಿದ್ದು ವೃದ್ಧ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

    ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯಾದ್ಯಂತ ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ ಮತ್ತು ಮುಂದಿನ 6 ಗಂಟೆಗಳಲ್ಲಿ ಅದರ ತೀವ್ರತೆಯನ್ನು ಕಾಯ್ದುಕೊಳ್ಳಲಿದೆ. 6 ಗಂಟೆಯ ನಂತರ ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

    ಮುಂದಿನ 36 ಗಂಟೆಗಳಲ್ಲಿ ಇದು ಪೂರ್ವ-ಮಧ್ಯ ಅರಬ್ಬೀ ಸಮುದ್ರದಾದ್ಯಂತ ಈಶಾನ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಕರಾವಳಿ ವೀಕ್ಷಣಾಲಯಗಳು, ಸ್ವಯಂಚಾಲಿತ ಹವಾಮಾನ ಕೇಂದ್ರಗಳು (AWS) , ಹಡಗುಗಳು ಮತ್ತು ಬೋಯ್‌ಗಳು ಮತ್ತು ಉಪಗ್ರಹಗಳ ಜೊತೆಗೆ ಮಚಲಿಪಟ್ಟಣಂ ಮತ್ತು ವಿಶಾಖಪಟ್ಟಣದಲ್ಲಿರುವ ಡಾಪ್ಲರ್ ಹವಾಮಾನ ರಾಡಾರ್ (DWR) ಮೂಲಕ ಈ ವ್ಯವಸ್ಥೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.

    ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಕಾಕಿನಾಡ, ಕೃಷ್ಣ, ಎಲೂರು, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಮತ್ತು ಚಿಂತೂರು ಮತ್ತು ರಾಮಪಚೋಡವರಂ ಭಾಗಗಳು ಚಂಡಮಾರುತದ ಗರಿಷ್ಠ ಪರಿಣಾಮವನ್ನು ಕಾಣುತ್ತಿವೆ.

     

    ಮಂಗಳವಾರ ರಾತ್ರಿ 8:30 ರಿಂದ ಬುಧವಾರ ಬೆಳಿಗ್ಗೆ 6 ಗಂಟೆಯವರೆಗೆ ಈ ಏಳು ಜಿಲ್ಲೆಗಳಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿತ್ತು. ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಗೆ ಮಾಹಿತಿ ನೀಡಿದ್ದು ನೆಲ್ಲೂರು ಜಿಲ್ಲೆಯಲ್ಲಿ ಇದುವರೆಗೆ ಅತಿ ಹೆಚ್ಚು ಮಳೆಯಾಗಿದೆ ಎಂದು ತಿಳಿಸಿದ್ದಾರೆ.

    ಮೊಂಥಾ ಎದುರಿಸಲು 22 ಎನ್‌ಡಿಆರ್‌ಎಫ್ ತಂಡಗಳ ನಿಯೋಜನೆ ಮಾಡಲಾಗಿದ್ದು ಕರಾವಳಿ ಪ್ರದೇಶದಲ್ಲಿರುವ ಜನರನ್ನು ಸ್ಥಳಾಂತರ ಮಾಡಲಾಗಿದೆ. 100ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಆಂಧ್ರ ಮತ್ತು ಒಡಿಶಾ ಕರಾವಳಿ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

  • ದುರ್ಗಾಪುರ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ – ಜೊತೆಗಿದ್ದ ಸ್ನೇಹಿತನೇ 6ನೇ ಆರೋಪಿ

    ದುರ್ಗಾಪುರ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ – ಜೊತೆಗಿದ್ದ ಸ್ನೇಹಿತನೇ 6ನೇ ಆರೋಪಿ

    – ಮ್ಯಾಜಿಸ್ಟ್ರೇಟ್‌ ಮುಂದೆ ಸಂತ್ರಸ್ತೆ ಹೇಳಿಕೆ ಬಳಿಕ ಅರೆಸ್ಟ್‌

    ಕೋಲ್ಕತ್ತಾ: ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ (Odisha) ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ಸಂತ್ರಸ್ತೆ ಮ್ಯಾಜಿಸ್ಟ್ರೇಟ್‌ ಎದುರು ನೀಡಿದ ಹೇಳಿಕೆಯನ್ನಧಾರಿಸಿ ಆಕೆ ಜೊತೆಗೆ ಊಟಕ್ಕೆ ಬಂದಿದ್ದ ಸ್ನೇಹಿತನನ್ನ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ತಲುಪಿದೆ.

    West Bengal Police

    ನನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನ
    ವರದಿಗಳ ಪ್ರಕಾರ, ಸಂತ್ರಸ್ತೆ ಮ್ಯಾಜಿಸ್ಟ್ರೇಟ್‌ ಮುಂದೆ ನೀಡಿದ ಹೇಳಿಕೆಯಲ್ಲಿ, ಜೊತೆಗಿದ್ದ ಸಹಪಾಠಿ ತನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನಾಧರಿಸಿ ಊಟದ ಸಮಯದಲ್ಲಿ ಜೊತೆಗಿದ್ದ ಸಹಪಾಠಿಯನ್ನ 6ನೇ ಆರೋಪಿಯಾಗಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    Stop Rape Crime 2

    ಕಳೆದ ಶುಕ್ರವಾರ ಜಲೇಶ್ವರದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆ ತನ್ನ ಸ್ನೇಹಿತನೊಂದಿಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು ಅವರನ್ನು 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.

    ಘಟನೆ ಬಳಿಕ ಆಕೆಯ ಸ್ನೇಹಿತ ಕೂಡ ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿತ್ತು. ಯುವತಿಗೆ ಸುಳ್ಳು ಹೇಳಿ ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲದೇ ಆಕೆಯ ಫೋನ್ ಕಸಿದುಕೊಂಡು 5,000 ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: ರಾತ್ರಿ ವೇಳೆ ಹೆಣ್ಣುಮಕ್ಕಳನ್ನ ಹೊರಗೆ ಬಿಡಬಾರದು – ಗ್ಯಾಂಗ್‌ರೇಪ್‌ ಕೇಸ್‌ ಬಗ್ಗೆ ದೀದಿ ಶಾಕಿಂಗ್‌ ಹೇಳಿಕೆ

  • ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ (Medical Student) ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸ್ಥಳೀಯರಾಗಿದ್ದು, ಪೊಲೀಸರು ಅವರ ಗುರುತನ್ನು ಇನ್ನೂ ಬಹಿರಂಗಪಡಿಸಿಲ್ಲ.

    ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ (Odisha) ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆ ತನ್ನ ಸ್ನೇಹಿತನೊಂದಿಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು ಅವರನ್ನು 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ಆಕೆಯ ಸ್ನೇಹಿತ ಕೂಡ ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಯುವತಿಗೆ ಸುಳ್ಳು ಹೇಳಿ ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲದೇ ಆಕೆಯ ಫೋನ್ ಕಸಿದುಕೊಂಡು 5,000 ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಯುವತಿಗೆ ದುರ್ಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವಳು ಗುಣಮುಖಳಾಗುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮನೆಗೆ ಊಟಕ್ಕೆ ಅಂತ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರೊಫೆಸರ್ ಅರೆಸ್ಟ್

  • ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ಕೋಲ್ಕತ್ತಾ: ಆರ್‌ಜಿಕರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ (Medical College Student) ಮೇಲೆ ನಡೆದ ಅತ್ಯಚಾರ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು, ಇದರ ಬೆನ್ನಲೆ ಪಶ್ಚಿಮ ಬಂಗಾಳದಲ್ಲಿ (West Bengal) ಮತ್ತೊಂದು ಘೋರ ಘಟನೆ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

    ಒಡಿಶಾದ ಜಲೇಶ್ವರ ನಿವಾಸಿಯಾಗಿರುವ ಯುವತಿ, ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ (Private Medical College) ದ್ವೀತಿಯ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶುಕ್ರವಾರ ರಾತ್ರಿ ಸ್ನೇಹಿತನೊಂದಿಗೆ ಊಟಕ್ಕೆ ಹೋಗಿ ಮರಳುವ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಹನಿಟ್ರ್ಯಾಪ್‌ಗೆ ಸಿಲುಕಿ ಪಾಕ್ ಪರ ಬೇಹುಗಾರಿಕೆ – ರಾಜಸ್ಥಾನದಲ್ಲಿ ಆರೋಪಿ ಅರೆಸ್ಟ್‌

    ಸಂತ್ರಸ್ಥ ಯುವತಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ. ಇಲ್ಲಿಯವರೆಗೆ ಈ ಸಂಪೂರ್ಣ ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ.

    ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯ ಪೋಷಕರು, ತಮ್ಮ ಮಗಳ ಸ್ನೇಹಿತರಿಂದ ಕರೆ ಬಂದ ನಂತರ ಇಂದು ಬೆಳಗ್ಗೆ ದುರ್ಗಾಪುರ ತಲುಪಿದ್ದೇವೆ ಎಂದು ಹೇಳಿದರು. ವಿದ್ಯಾರ್ಥಿನಿಯ ತಂದೆ ಮಾತನಾಡಿ, ನಮಗೆ ಅವಳ ಸ್ನೇಹಿತರಿಂದ ಕರೆ ಬಂತು ಮತ್ತು ಅವರು ಘಟನೆಯ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪಾಕ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ – 7 ಪೊಲೀಸರು, 6 ಉಗ್ರರು ಸಾವು

    ನಾವು ಇಂದು ಬೆಳಗ್ಗೆ ಇಲ್ಲಿಗೆ ಬಂದು ಪೊಲೀಸ್ ದೂರು ದಾಖಲಿಸಿದ್ದೇವೆ. ಪ್ರಸ್ತುತ, ಪೊಲೀಸರು ಎಲ್ಲಾ ಸಂಭಾವ್ಯ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ತನಿಖಾ ಅಧಿಕಾರಿಗಳು ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು | ಬಾಲಕಿಯ ರೇಪ್‌ ಬಳಿಕ ಎದೆ, ಹೊಟ್ಟೆ, ಮರ್ಮಾಂಗಕ್ಕೆ 19 ಬಾರಿ ಚಾಕು ಇರಿದು ಕೊಂದಿದ್ದ ಕಾಮುಕ 

  • ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಕಲ್ಲು ತೂರಾಟ – ಇಂಟರ್ನೆಟ್ ಸ್ಥಗಿತ, 36 ಗಂಟೆಗಳ ಕಾಲ ಕರ್ಫ್ಯೂ

    ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಕಲ್ಲು ತೂರಾಟ – ಇಂಟರ್ನೆಟ್ ಸ್ಥಗಿತ, 36 ಗಂಟೆಗಳ ಕಾಲ ಕರ್ಫ್ಯೂ

    ಭುವನೇಶ್ವರ: ಒಡಿಶಾದ ಕಟಕ್ ನಗರದಲ್ಲಿ ದುರ್ಗಾ ವಿಗ್ರಹ (Durga Puja idol) ವಿಸರ್ಜನೆ ವೇಳೆ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಸಂಭವಿಸಿದ ಒಂದು ದಿನದ ನಂತರ ಅಂದ್ರೆ ಭಾನುವಾರ (ಅ.5) ಉದ್ವಿಗ್ನತೆ ತಾರಕಕ್ಕೇರಿದೆ.

    ಉದ್ವಿಗ್ನತೆ ಹೆಚ್ಚಾಗ್ತಿದ್ದಂತೆ ಒಡಿಶಾ ಸರ್ಕಾರವು ಕಟಕ್‌ನ (Cuttack) ಹಲವು ಭಾಗಗಳಲ್ಲಿ ಇಂಟರ್ನೆಟ್ (Internet Banned) ಹಾಗೂ ಸೋಶಿಯಲ್‌ ಮೀಡಿಯಾಗಳನ್ನ ಸ್ಥಗಿತಗೊಳಿಸಿದೆ. ಸಾರ್ವಜನಿಕ ವಲಯದಲ್ಲಿ ಶಾಂತಿ ಕಾಪಾಡಲು ಮತ್ತು ಪ್ರಚೋದನಕಾರಿ ಸಂದೇಶಗಳ ಹರಡುವಿಕೆ ತಡೆಯಲು 36 ಗಂಟೆಗಳ ಕರ್ಫ್ಯೂ (Curfew) ವಿಧಿಸಿರುವುದಾಗಿ ಗೃಹ ಇಲಾಖೆ ತಿಳಿಸಿದೆ.

    ಹಿಂಸಾಚಾರ ಸಂಭವಿಸಿದ್ದು ಹೇಗೆ?
    ಪೊಲೀಸರ ಪ್ರಕಾರ, ಶನಿವಾರ ಬೆಳಗಿನ ಜಾವ 1:30 ರಿಂದ 2 ಗಂಟೆಯ ನಡುವೆ ಹಿಂಸಾಚಾರ ಸಂಭವಿಸಿದೆ. ತಡರಾತ್ರಿಯಲ್ಲಿ ದರ್ಗಾ ಬಜಾರ್ ಪ್ರದೇಶದ ಮೂಲಕ ಕಥಜೋಡಿ ನದಿಯ ದಡದ ಕಡೆಗೆ ಹಾದುಹೋಗುವ ದುರ್ಗಾ ವಿಗ್ರಹ ವಿಸರ್ಜನಾ ಮೆರವಣಿಗೆಯನ್ನ ಸ್ಥಳೀಯರ ಗುಂಪೊಂದು ತಡೆದಿದೆ. ಈ ವೇಳೆ ವಾಗ್ವಾದ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿತು. ಜನಸಮೂಹವು ಮನೆಗಳ ಮೇಲಿಂದ ಕಲ್ಲುಗಳು, ಗಾಜಿನ ಬಾಟಲಿಗಳನ್ನು ಎಸೆದಿದ್ದು ಉದ್ವಿಗ್ನಕ್ಕೆ ಕಾರಣವಾಯ್ತು. ಈ ವೇಳೆ ಕಟಕ್ ಡಿಸಿಪಿ ರಿಷಿಕೇಶ್ ಜ್ಞಾನದೇವ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಈ ಘಟನೆಯಲ್ಲಿ ವಾಹನಗಳು ಮತ್ತು ರಸ್ತೆ ಬದಿಯ ಅಂಗಡಿಗಳಿಗೆ ಹಾನಿಯಾಗಿದೆ.

    ಕಟಕ್‌ನ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನ ನಿಯೋಜಿಸಲಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದಾರೆ.

  • ಒಡಿಶಾ | 60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗೆ ಮೋದಿ ಚಾಲನೆ

    ಒಡಿಶಾ | 60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗೆ ಮೋದಿ ಚಾಲನೆ

    • 97,500 4G ಮೊಬೈಲ್ ಟವರ್‌ಗಳಿಗೆ ಚಾಲನೆ
    • ರ‍್ಯಾಲಿಯಲ್ಲಿ ಮಕ್ಕಳು ತಂದ ಚಿತ್ರ ಸಂಗ್ರಹಿಸಲು ಸೂಚನೆ

    ಭುವನೇಶ್ವರ್‌: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಒಡಿಶಾದ (Odisha) ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡುವಾಗ ಮಕ್ಕಳು ಹಿಡಿದಿದ್ದ ಚಿತ್ರಗಳನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಪ್ರಧಾನಿಗಳು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಅಭಿವೃದ್ಧಿ ಯೋಜನೆಗಳಲ್ಲಿ ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಸೇರಿವೆ. ಸ್ವದೇಶಿ ತಂತ್ರಜ್ಞಾನದೊಂದಿಗೆ ಸುಮಾರು 37,000 ಕೋಟಿ ರೂ. ವೆಚ್ಚದ 97,500 BSNL 4G ಮೊಬೈಲ್ ಟವರ್‌ಗಳನ್ನು (ಭಾರತದಾದ್ಯಂತ) ಉದ್ಘಾಟಿಸಿದ್ದಾರೆ.

    ಡಿಜಿಟಲ್ ಭಾರತ್ ನಿಧಿಯಡಿಯಲ್ಲಿ 18,900 ಕ್ಕೂ ಹೆಚ್ಚು 4G ಸೈಟ್‌ಗಳಿಗೆ ಹಣಕಾಸಿನ ನೆರವು ನೀಡಲಾಗಿದೆ. ಇದರಿಂದ ಸುಮಾರು 26,700 ಸಂಪರ್ಕವಿಲ್ಲದ ಹಳ್ಳಿಗಳಿಗೆ ಸಂಪರ್ಕ ಸಾಧಿಸಲು ಅನುಕೂಲವಾಗುತ್ತದೆ. 20 ಲಕ್ಷಕ್ಕೂ ಹೆಚ್ಚು ಬಳಕೆದಾರರಿಗೆ ಇದರಿಂದ ಉಪಯೋಗವಾಗಲಿದೆ. ಈ ಟವರ್‌ಗಳು ಸೌರಶಕ್ತಿ ಚಾಲಿತವಾಗಿದ್ದು ಪರಿಸರ ಸ್ನೇಹಿಯಾಗಿವೆ.

    ಸಂಬಲ್‌ಪುರ-ಸರ್ಲಾದಲ್ಲಿ ರೈಲು ಮೇಲ್ಸೇತುವೆಗೆ ಶಂಕು ಸ್ಥಾಪನೆ ನೆರವೇರಿದ್ದು, ಈ ಯೋಜನೆಗಳು ಒಡಿಶಾ ಮತ್ತು ನೆರೆಯ ರಾಜ್ಯಗಳಿಗೆ ಸರಕು ಸಾಗಾಟ ಮತ್ತು ಪ್ರಯಾಣಿಕರ ಸಂಚಾರ ಸುಗಮಗೊಳಿಸುತ್ತದೆ. ಸ್ಥಳೀಯ ಕೈಗಾರಿಕೆಗಳು ಮತ್ತು ವ್ಯಾಪಾರ ಅಭಿವೃದ್ಧಿ ಹೊಂದಲಿದೆ.

    ಬೆರ್ಹಾಂಪುರ ಮತ್ತು ಉಧ್ನಾ (ಸೂರತ್) ನಡುವಿನ ಅಮೃತ್ ಭಾರತ್ ಎಕ್ಸ್‌ಪ್ರೆಸ್‌ಗೆ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಈ ಯೋಜನೆ ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ. ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ.

    ರಾಜ್ಯದಲ್ಲಿ ಡಿಜಿಟಲ್ ಶಿಕ್ಷಣವನ್ನು ಹೆಚ್ಚಿಸಲು, ಪ್ರಧಾನಿ ಮೋದಿ 130 ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವೈ-ಫೈ ಸೌಲಭ್ಯಗಕ್ಕೆ ಚಾಲನೆ ನೀಡಲಿದ್ದಾರೆ. ಇದರಿಂದ 2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

    ಒಡಿಶಾದ ಜನರಿಗೆ ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸಲು ಅಪಘಾತ ಆರೈಕೆ ಘಟಕಗಳು, ದಂತ ಕಾಲೇಜುಗಳು, ಮಾತೃ ಮತ್ತು ಮಕ್ಕಳ ಆರೈಕೆ ಘಟಕಗಳಿಗೆ ಚಾಲನೆ ನೀಡಲಿದ್ದಾರೆ.

    ಅಂತ್ಯೋದಯ ಗೃಹ ಯೋಜನೆಯಡಿ 50,000 ಫಲಾನುಭವಿಗಳಿಗೆ ಮಂಜೂರಾತಿ ಆದೇಶಗಳನ್ನು ವಿತರಿಸಲಿದ್ದಾರೆ. ಈ ಯೋಜನೆಯು ಅಂಗವಿಕಲರು, ವಿಧವೆಯರು, ಮಾರಕ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂತ್ರಸ್ತರು ಸೇರಿದಂತೆ ದುರ್ಬಲ ಗ್ರಾಮೀಣ ಕುಟುಂಬಗಳಿಗೆ ಮನೆ ಮತ್ತು ಆರ್ಥಿಕ ಸಹಾಯ ನೀಡಲಿದೆ.

  • ಪ್ರಿಯಕರನ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ಮೂವರು ಅರೆಸ್ಟ್

    ಪ್ರಿಯಕರನ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ಮೂವರು ಅರೆಸ್ಟ್

    ಭುವನೇಶ್ವರ: ಒಡಿಶಾದ (Odisha) ಪುರಿಯ ಬೀಚ್ ಬಳಿ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನ ಎದುರಲ್ಲೇ ಮೂವರು ಕಾಮುಕರು ಅತ್ಯಾಚಾರವೆಸಗಿರುವ ಹೀನ ಕೃತ್ಯ ನಡೆದಿದೆ.

    ಯುವತಿಯು ಪ್ರಿಯಕರನೊಂದಿಗೆ ಬಲಿಹರ್ಚಂಡಿ ದೇವಾಲಯದ (Baliharichandi Temple) ಬಳಿ ಕುಳಿತು ಕಾಲ ಕಳೆಯುತ್ತಿದ್ದರು. ಇದನ್ನು ಗಮನಿಸಿದ ಮೂವರು ಆರೋಪಿಗಳು ಅವರ ವೀಡಿಯೋವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಬಳಿಕ ಅವರ ಬಳಿ ಬಂದು ವೀಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಹಣ ಕೊಡಲು ನಿರಾಕರಿಸಿದ ವೇಳೆ ಆರೋಪಿಗಳು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ, ಆತನನ್ನು ಮರಕ್ಕೆ ಕಟ್ಟಿ ಹಾಕಿ ಆತನ ಎದುರೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

    ಯುವತಿಯು ಆರೋಪಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆರೋಪಿಗಳ ಮೊಬೈಲ್‌ನಲ್ಲಿದ್ದ ವೀಡಿಯೋವನ್ನೂ ಡಿಲೀಟ್ ಮಾಡಿದ್ದಾರೆ.

  • ತಮಾಷೆಗಾಗಿ ಹಾಸ್ಟೆಲ್‌ನಲ್ಲಿ ಸ್ನೇಹಿತರಿಂದ ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಗಮ್ – 7 ಮಕ್ಕಳಿಗೆ ಮುಂದುವರಿದ ಚಿಕಿತ್ಸೆ

    ತಮಾಷೆಗಾಗಿ ಹಾಸ್ಟೆಲ್‌ನಲ್ಲಿ ಸ್ನೇಹಿತರಿಂದ ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಗಮ್ – 7 ಮಕ್ಕಳಿಗೆ ಮುಂದುವರಿದ ಚಿಕಿತ್ಸೆ

    ಭುವನೇಶ್ವರ: ಒಡಿಶಾದ (Odisha) ಕಂಧಮಾಲ್ ಜಿಲ್ಲೆಯಲ್ಲಿ ಪ್ರಾಂಕ್ (Prank) ಮಾಡಲು 8 ಹಾಸ್ಟೆಲ್ ವಿದ್ಯಾರ್ಥಿಗಳ ಕಣ್ಣುಗಳಿಗೆ ಉಳಿದ ವಿದ್ಯಾರ್ಥಿಗಳು ಫೆವಿಕ್ವಿಕ್ (Fevikwik) ಗಮ್ ಹಾಕಿರುವುದಾಗಿ ತನಿಖೆಯಲ್ಲಿ ಬಯಲಾಗಿದೆ.

    ಹೌದು, ಕಂಧಮಾಲ್‌ನ ಸಲಗುಡದಲ್ಲಿರುವ ಸೇವಾಶ್ರಮ ಶಾಲೆಯಲ್ಲಿ 3, 4 ಮತ್ತು 5ನೇ ತರಗತಿಯ 8 ವಿದ್ಯಾರ್ಥಿಗಳು ರಾತ್ರಿ ಹಾಸ್ಟೆಲ್‌ನಲ್ಲಿ ಮಲಗಿದ್ದಾಗ ಕೆಲವು ವಿದ್ಯಾರ್ಥಿಗಳು ಅವರ ಕಣ್ಣಿಗೆ ಅಂಟು ಹಾಕಿದ್ದಾರೆ. ಮಕ್ಕಳು ನಿದ್ರೆಯಿಂದ ಎದ್ದಾಗ ಅವರಿಗೆ ಕಣ್ಣುಗಳನ್ನು ತೆರೆಯಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ರಾತ್ರಿ ಮಲಗಿದ್ದಾಗ ಕಣ್ಣಿಗೆ ಫೆವಿಕ್ವಿಕ್‌ ಅಂಟು – ಬೆಳಗ್ಗೆ ಕಣ್ಣು ತೆರೆಯಲಾಗದೇ ಒದ್ದಾಡುತ್ತಿದ್ದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ಬಳಿಕ ವಿದ್ಯಾರ್ಥಿಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಫುಲ್ಬಾನಿಯಲ್ಲಿರುವ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಗಮ್ ಹಾಕಿರುವುದರಿಂದ ಮಕ್ಕಳ ಕಣ್ಣಿಗೆ ಹಾನಿಯುಂಟಾಗಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿರುವುದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇದೀಗ ಒಬ್ಬ ವಿದ್ಯಾರ್ಥಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇತರ ಏಳು ಮಂದಿಯನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ನಿರ್ಲಕ್ಷ್ಯದ ಕಾರಣದಿಂದ ಕಂಧಮಲ್ ಜಿಲ್ಲಾಡಳಿತವು ಶಾಲೆಯ ಮುಖ್ಯೋಪಾಧ್ಯಾಯ ಮನೋರಂಜನ್ ಸಾಹು ಅವರನ್ನು ಅಮಾನತುಗೊಳಿಸಿತ್ತು. ಇದೀಗ ತನಿಖೆಯಲ್ಲಿ ತಮಾಷೆಗಾಗಿ ಕೆಲವು ವಿದ್ಯಾರ್ಥಿಗಳು 8 ಮಕ್ಕಳ ಕಣ್ಣಿಗೆ ಫೆವಿಕ್ವಿಕ್ ಗಮ್ ಹಾಕಿರುವುದು ಬೆಳಕಿಗೆ ಬಂದಿದೆ.

  • 22 ವರ್ಷದ ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ

    22 ವರ್ಷದ ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ

    ಭುವನೇಶ್ವರ: 22 ವರ್ಷದ ಯುವತಿಯನ್ನು ಐವರು ಕಾಮುಕರು ಗ್ಯಾಂಗ್ ರೇಪ್  ಮಾಡಿರುವ ಘಟನೆ ಒಡಿಶಾದ (Odisha) ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿದೆ.

    ಆ.29 ರಂದು ಸಂಜೆ ಇಬ್ಬರು ಪರಿಚಯಸ್ಥ ವ್ಯಕ್ತಿಗಳು ಕೆಲಸದ ವಿಚಾರವಾಗಿ ಮಾತನಾಡಲು ನನ್ನನ್ನು ಬಂಗಿರಿಪೋಸಿ ಪ್ರದೇಶಕ್ಕೆ ಕರೆಸಿಕೊಂಡಿದ್ದರು. ಬಳಿಕ ಅಲ್ಲಿಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದರು. ಇದನ್ನೂ ಓದಿ: ಚಿನ್ನಯ್ಯ ಈಗ ಡಬಲ್‌ ಗೇಮ್‌ ಆಡುತ್ತಿದ್ದಾನೆ: ಜಯಂತ್‌

    ಬಳಿಕ ಮಾರ್ಗ ಮಧ್ಯೆ ಕಾರಿಗೆ ಇನ್ನುಳಿದ ಮೂವರು ಹತ್ತಿಕೊಂಡಿದ್ದರು. ಉಡಾಲ ಮತ್ತು ಬಾಲಸೋರ್ ಪಟ್ಟಣವನ್ನು ಸಂಪರ್ಕಿಸುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿ, ಅಲ್ಲೇ ಬಿಟ್ಟು ಹೋಗಿದ್ದರು ಎಂದು ಸಂತ್ರಸ್ಥೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ | ಮತ್ತೊಬ್ಬಳನ್ನು ಮದುವೆಯಾಗುವ ಆಸೆಗೆ ಪ್ರೇಯಸಿಯನ್ನೇ ಕೊಂದ ಪ್ರಿಯಕರ

    ಸಂತ್ರಸ್ಥೆಯ ಹೇಳಿಕೆಯ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಈವರೆಗೆ ಇಬ್ಬರು ಆರೋಪಿಗಳು ಬಂಧಿಸಲಾಗಿದೆ. ಇನ್ನುಳಿದ ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಉಡಾಲ ಠಾಣೆಯ (Udala police) ಪೊಲೀಸ್ ಅಧಿಕಾರಿ ಹೃಷಿಕೇಶ್ ನಾಯಕ್ ತಿಳಿಸಿದ್ದಾರೆ.

  • ಒಡಿಶಾ | ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯೂಟ್ಯೂಬರ್

    ಒಡಿಶಾ | ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯೂಟ್ಯೂಬರ್

    ಭುವನೇಶ್ವರ: ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಯೂಟ್ಯೂಬರ್ (YouTuber) ಕೊಚ್ಚಿಹೋದ ಘಟನೆ ಒಡಿಶಾದ (Odisha) ಕೊರಾಪುಟ್ (Koraput) ಜಿಲ್ಲೆಯಲ್ಲಿ ನಡೆದಿದೆ.

    ದುಡುಮಾ ಜಲಪಾತದಲ್ಲಿ (Duduma Waterfall) ಘಟನೆ ನಡೆದಿದೆ. ನೀರಿನಲ್ಲಿ ಸಿಲುಕಿ ಬೆರ್ಹಾಂಪುರ್‌ನ ಸಾಗರ್ ತುಡು (22) ಎಂಬ ಯೂಟ್ಯೂಬರ್ ನಾಪತ್ತೆಯಾಗಿದ್ದಾನೆ. ಸಾಗರ್ ತನ್ನ ಯೂಟ್ಯೂಬ್ ಚಾನೆಲ್‌ಗಾಗಿ ಪ್ರಮುಖ ಪ್ರವಾಸಿ ತಾಣಗಳ ವೀಡಿಯೋಗಳನ್ನು ಚಿತ್ರೀಕರಿಸಲು ಬಂದಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

    ಕಟಕ್‌ನಿಂದ ತನ್ನ ಸ್ನೇಹಿತ ಅಭಿಜಿತ್ ಬೆಹೆರಾ ಜೊತೆ ಕೊರಾಪುಟ್‌ಗೆ ಬಂದಿದ್ದ ಸಾಗರ್ ಜಲಪಾತದಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ರೀಲ್ ರೆಕಾರ್ಡ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಜಲಪಾತದಲ್ಲಿ ಹಠಾತ್ ನೀರಿನ ಪ್ರಮಾಣ ಏರಿಕೆಯಾದ ಪರಿಣಾಮ ಬಂಡೆಯ ಮೇಲೆ ನಿಂತಿದ್ದ ಸಾಗರ್ ಕೊಚ್ಚಿಹೋಗಿದ್ದಾನೆ. ನಾಪತ್ತೆಯಾಗಿರುವ ಸಾಗರ್‌ಗಾಗಿ ಅಗ್ನಿಶಾಮಕ ದಳ ರಕ್ಷಣಾ ಪಡೆಗಳಿಂದ ಶೋಧ ಕಾರ್ಯ ನಡೆಯುತ್ತಿದೆ.  ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ನಿಷೇಧ – BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11