Tag: Odisha Train Accident

  • ಪ್ರಯಾಣಿಕರ ಮೂಲ ಸೌಕರ್ಯ ಕಡೆಗಣಿಸಿ, ವಂದೇ ಭಾರತ್‌ ಮಾತ್ರ ಪಬ್ಲಿಸಿಟಿ ಮಾಡ್ತಿದ್ದಾರೆ: ದೀದಿ ಕೆಂಡಾಮಂಡಲ

    ಪ್ರಯಾಣಿಕರ ಮೂಲ ಸೌಕರ್ಯ ಕಡೆಗಣಿಸಿ, ವಂದೇ ಭಾರತ್‌ ಮಾತ್ರ ಪಬ್ಲಿಸಿಟಿ ಮಾಡ್ತಿದ್ದಾರೆ: ದೀದಿ ಕೆಂಡಾಮಂಡಲ

    ಕೋಲ್ಕತ್ತಾ: ಕೇಂದ್ರ ಸರ್ಕಾರ ರೈಲ್ವೆ ಇಲಾಖೆ ಹಾಗೂ ರೈಲುಗಳಲ್ಲಿ ಮೂಲ ಸೌಕರ್ಯಗಳನ್ನು ಕಡೆಗಣಿಸಿ, ವಂದೇ ಭಾರತ್‌ ರೈಲುಗಳ ಬಗ್ಗೆ ಮಾತ್ರ ಪಬ್ಲಿಸಿಟಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಕಿಡಿ ಕಾರಿದ್ದಾರೆ.

    ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ನಡೆದ ರೈಲು ದುರಂತದ ಕುರಿತು ಮಾತನಾಡಿದ ಸಿಎಂ, ರೈಲ್ವೆ ಸುರಕ್ಷತೆಗಾಗಿ ನಾನು ಅನೇಕ ಕೆಲಸಗಳನ್ನು ಪ್ರಾರಂಭಿಸಿದ್ದೇನೆ. ಆದ್ರೆ ಬಿಜೆಪಿಯವರು ವಂದೇ ಭಾರತ್‌ (Vande Bharat) ಬಗ್ಗೆ ಪಬ್ಲಿಸಿಟಿ ಮಾಡ್ತಿದ್ದಾರೆ. ರಾಜಧಾನಿ ಎಕ್ಸ್‌ಪ್ರೆಸ್ ನಂತರ ದುರೊಂತೊ ಎಕ್ಸ್‌ಪ್ರೆಸ್‌ (Duronto Express) ಅತ್ಯಂತ ವೇಗದ ರೈಲು, ಈಗ ಅದು ಎಲ್ಲಿದೆ? ಇದೆಲ್ಲವು ರೈಲ್ವೆ ಇಲಾಖೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಇದನ್ನೂ ಓದಿ: ರಾಜಧಾನಿಗೆ ಅಮರಾವತಿಯನ್ನೇ ಚಂದ್ರಬಾಬು ನಾಯ್ಡು ಆಯ್ದುಕೊಂಡಿದ್ದು ಏಕೆ..?

    ಕೇಂದ್ರ ಸರ್ಕಾರ ಬಣ್ಣ ಬಣ್ಣದ ಮಾತುಗಳನ್ನಾಡುತ್ತಾ ಪ್ರಯಾಣಿಕರ ಮೂಲ ಸೌಕರ್ಯಗಳನ್ನು ನಿರ್ಲಕ್ಷಿಸುತ್ತಿದೆ. ಸ್ಲೀಪರ್‌ ಕೋಚ್‌ಗಳಲ್ಲಿ ರಾತ್ರಿ ಪ್ರಯಾಣಿಸುವವರಿಗೆ ಕಳಪೆ ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಕೋಚ್‌ಗಳಲ್ಲಿ ಶೌಚಾಲಯಗಳಲ್ಲಿ ಶುಚಿತ್ವವೂ ಇರುವುದಿಲ್ಲ. ಕೇಂದ್ರ ಸರ್ಕಾರ ರೈಲ್ವೆ ಇಲಾಖೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಯೋಜನೆಗಳನ್ನು ಉದ್ಘಾಸಿಟುವ ವೇಳೆ ಮಾತ್ರ ಆ ಇಲಾಖೆಗಳನ್ನು ನೋಡುವಂತಾಗಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಕಳೆದ 3 ದಶಕಗಳಲ್ಲಿ ದೇಶ ಕಂಡ ಡೆಡ್ಲಿ ರೈಲು ದುರಂತಗಳ ಬಗ್ಗೆ ನಿಮಗೆ ಗೊತ್ತಾ?

    ರೈಲ್ವೆ ಇಲಾಖೆ (Railway Department) ಈಗ ಹೆಸರಿಗೆ ಮಾತ್ರ ಅಸ್ತಿತ್ವದಲ್ಲಿದೆ. ಬಜೆಟ್‌ ಕೊರತೆಯಿಂದ ಪೋಷಣೆ ಮಾಡುವವರೇ ಇಲ್ಲದಂತಾಗಿದೆ. ನಾನೂ ಈ ಹಿಂದೆ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಿರುವುದರಿಂದ ಅಲ್ಲಿನ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ಈಗಿನ ಸರ್ಕಾರ ರೈಲ್ವೆ ಅಧಿಕಾರಿಗಳು, ಎಂಜಿನಿಯರ್‌ಗಳು, ತಾಂತ್ರಿಕ ಸಿಬ್ಬಂದಿ, ಸುರಕ್ಷತಾ ಅಧಿಕಾರಿಗಳು ಮತ್ತು ಕಾರ್ಮಿಕರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ರೈಲ್ವೆ ಸಿಬ್ಬಂದಿಗೆ ನೀಡಲಾಗಿದ್ದ ಹಳೆಯ ಪಿಂಚಣಿ ವ್ಯವಸ್ಥೆಯನ್ನೂ ಹಿಂಪಡೆಯಲಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಅಲ್ಲದೇ ಈ ಹಿಂದೆ ರೈಲುಗಳ ಸುರಕ್ಷತೆಗಾಗಿ ನಮ್ಮ ಸರ್ಕಾರ ವ್ಯವಸ್ಥೆಗೊಳಿಸಿದ್ದ ಆಂಟಿ-ಕೊಲ್ಯೂಷನ್ ಸಾಧನವನ್ನು ಬಿಜೆಪಿ ʻಕವಚʼ ಎಂದು ಮರುನಾಮಕರಣ ಮಾಡಿದೆ. ಈ ವ್ಯವಸ್ಥೆಯು ಚಾಲಕ ನಿದ್ರಿಸುತ್ತಿದ್ದರೆ ಅಲಾರಂ ನಿಂದ ಎಚ್ಚರಿಸುತ್ತದೆ. ಎರಡೂ ರೈಲುಗಳು ಒಂದೇ ಟ್ರ್ಯಾಕ್‌ನಲ್ಲಿ ಬಂದರೆ ನಿಲ್ಲುತ್ತದೆ. ಬಿಜೆಪಿ ಇದನ್ನು ಮರುನಾಮಕರಣ ಮಾಡಿದರೂ ಪರವಾಗಿಲ್ಲ, ಆದ್ರೆ ಜನರಿಗೆ ಅದು ರಕ್ಷಾಕವಚವಾಗಿರುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಕಾಂಜನಜುಂಗಾ ಎಕ್ಸ್‌ರೈಲು (Kanchanjunga Express Train) ಅಪಘಾತ ನಡೆದ ಸ್ಥಳಕ್ಕೆ ಸದ್ಯ ವೈದ್ಯಕೀಯ ತಂಡಗಳು ಹಾಗೂ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸಲಾಗಿದೆ. ಅಪಘಾತದಲ್ಲಿ ಸಂತ್ರಸ್ತರನ್ನ ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು – ಐವರು ದುರ್ಮರಣ, 25 ಮಂದಿಗೆ ಗಾಯ

    ಡಾರ್ಜಿಲಿಂಗ್‌ ಘಟನೆ ಏನು?
    ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ 9ಕ್ಕೆ ಏರಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

  • ಕಳೆದ 3 ದಶಕಗಳಲ್ಲಿ ದೇಶ ಕಂಡ ಡೆಡ್ಲಿ ರೈಲು ದುರಂತಗಳ ಬಗ್ಗೆ ನಿಮಗೆ ಗೊತ್ತಾ?

    ಕಳೆದ 3 ದಶಕಗಳಲ್ಲಿ ದೇಶ ಕಂಡ ಡೆಡ್ಲಿ ರೈಲು ದುರಂತಗಳ ಬಗ್ಗೆ ನಿಮಗೆ ಗೊತ್ತಾ?

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ (West Bengal Train Accident) ಮೃತಪಟ್ಟವರ ಸಂಖ್ಯೆ 9ಕ್ಕೆ ಹಾಗೂ ಗಾಯಾಳುಗಳ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ (PM Modi), ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

    ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ನೆರವು ನೀಡುವುದಾಗಿ ಪ್ರಧಾನಿ ಕಾರ್ಯಾಲಯ ಘೋಷಿಸಿದೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ (Darjeeling) ನಡೆದ ರೈಲು ದುರಂತವು ಕಳೆದ ವರ್ಷ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ದುರಂತವನ್ನೇ ನೆನಪಿಸಿದೆ. ಈ ಹೊತ್ತಿನಲ್ಲಿ ಕಳೆದ ಮೂರು ದಶಕಗಳಲ್ಲಿ ದೇಶದಲ್ಲಿ ಸಂಭವಿಸಿದ ಭೀಕರ ರೈಲು ದುರಂತಗಳ ಬಗ್ಗೆ ತಿಳಿಯುವುದು ಮುಖ್ಯವಾಗಿದೆ. ಇದನ್ನೂ ಓದಿ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿ ಪ್ರಕರಣ – ತನಿಖೆ ಎನ್‍ಐಎ ಹೆಗಲಿಗೆ

    ಡೆಡ್ಲಿ ರೈಲು ದುರಂತಗಳು:
    2023: ಒಡಿಶಾದ ಬಾಲಸೋರ್‌ನಲ್ಲಿ ಟ್ರಿಪಲ್ ರೈಲು ಅಪಘಾತದಲ್ಲಿ ಸುಮಾರು 300 ಜನ ಸಾವನ್ನಪ್ಪಿದರು ಮತ್ತು 1,000ಕ್ಕೂ ಹೆಚ್ಚು ಜನರು ಗಾಯಗೊಂಡರು.

    2016: ಉತ್ತರ ಪ್ರದೇಶದ ಕಾನ್ಪುರ ಬಳಿ ಇಂದೋರ್-ಪಾಟ್ನಾ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿ ಕನಿಷ್ಠ 150 ಪ್ರಯಾಣಿಕರು ಸಾವನ್ನಪ್ಪಿದರು.

    2010: ಪಶ್ಚಿಮ ಬಂಗಾಳದಲ್ಲಿ ಜ್ಞಾನೇಶ್ವರಿ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು 146 ಜನರು ಸಾವನ್ನಪ್ಪಿದರು.

    2002: ಕೋಲ್ಕತ್ತಾ-ನವದೆಹಲಿ ರಾಜಧಾನಿ ಧಬಿ ನದಿಯಲ್ಲಿ ಮುಳುಗಿ ಕನಿಷ್ಠ 120 ಜನರು ಸಾವನ್ನಪ್ಪಿದರು.

    1999: ಪಶ್ಚಿಮ ಬಂಗಾಳದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 285 ಜನರು ಸಾವನ್ನಪ್ಪಿದರು.

    1998: ಪಂಜಾಬ್‌ನಲ್ಲಿ ಹಳಿ ತಪ್ಪಿದ ರೈಲಿಗೆ ಸೀಲ್ದಾ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಕನಿಷ್ಠ 210 ಜನರು ಸಾವನ್ನಪ್ಪಿದರು.

    1995: ಆಗ್ರಾ ಬಳಿಯ ಫಿರೋಜಾಬಾದ್‌ನಲ್ಲಿ ಪುರುಷೋತ್ತಮ್ ಎಕ್ಸ್‌ಪ್ರೆಸ್‌ಗೆ ಕಾಳಿಂದಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

    ಡಾರ್ಜಿಲಿಂಗ್‌ ಘಟನೆ ಏನು?
    ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ 9ಕ್ಕೆ ಏರಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು – ಐವರು ದುರ್ಮರಣ, 25 ಮಂದಿಗೆ ಗಾಯ

    ಇಲ್ಲಿಯವರೆಗೆ ದೊರೆತ ಮಾಹಿತಿಯ ಪ್ರಕಾರ, ಗೂಡ್ಸ್ ರೈಲು ಸಿಗ್ನಲ್ ಅನ್ನು ಮೀರಿದ ಪರಿಣಾಮ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಮತ್ತು ಅಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೋಡಗಿಕೊಂಡಿವೆ. ಜನರು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ರೈಲ್ವೆ ಇಲಾಖೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ರೈಲು ದುರಂತ – ವಿಷಾದ ವ್ಯಕ್ತಪಡಿಸಿದ ಪ್ರಧಾನಿ ಮೋದಿ

  • Pakistan Train Accident: ಭೀಕರ ರೈಲು ದುರಂತ – 20 ಮಂದಿ ಸಾವು, 80 ಮಂದಿಗೆ ಗಾಯ

    Pakistan Train Accident: ಭೀಕರ ರೈಲು ದುರಂತ – 20 ಮಂದಿ ಸಾವು, 80 ಮಂದಿಗೆ ಗಾಯ

    ಇಸ್ಲಾಮಾಬಾದ್‌: ಕರಾಚಿಯಿಂದ (Karachi) ರಾಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್‌ಪ್ರೆಸ್‌ (Hazara Express) ರೈಲು ಭೀಕರ ದುರಂತಕ್ಕೀಡಾಗಿದೆ. ಘಟನೆಯಲ್ಲಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಪಾಕಿಸ್ತಾನದ (Pakistan) ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.

    ಕರಾಚಿಯಿಂದ 275 ಕಿಲೋ ಮೀಟರ್ ದೂರದಲ್ಲಿರುವ ರಾವಲ್ಪಿಂಡಿಗೆ (Rawalpindi) ತೆರಳುತ್ತಿದ್ದ ಹಜಾರಾ ಎಕ್ಸ್‌ಪ್ರೆಸ್‌ ರೈಲಿನ ಒಟ್ಟು 10 ಬೋಗಿಗಳು ಹಳಿ ತಪ್ಪಿದೆ. ಘಟನೆಯಲ್ಲಿ ಈವೆರೆಗೆ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆದ್ರೆ ಘಟನೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಪ್ರಧಾನಿ ಅರೆಸ್ಟ್ – ಇಮ್ರಾನ್ ಖಾನ್‌ಗೆ 3 ವರ್ಷ ಜೈಲು, 5 ವರ್ಷ ರಾಜಕೀಯದಿಂದ ಬ್ಯಾನ್

    ರೈಲ್ವೆ ಆಡಳಿತ ಮಂಡಳಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಪಾಕಿಸ್ತಾನ ಸೇನೆ ಕೂಡ ಕಾರ್ಯಾಚರಣೆಗೆ ಕೈಜೋಡಿಸಿದ್ದು, ಸಮೀಪದ ನೆಲೆಗಳಿಂದ ಹೆಚ್ಚಿನ ಸೈನಿಕರನ್ನ ಕರೆಸಿಕೊಳ್ಳಲಾಗಿದೆ. ಘಟನಾ ಸ್ಥಳಕ್ಕೆ ಸಮೀಪದಲ್ಲಿರುವ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಇತರ ಪ್ರಯಾಣಿಕರನ್ನ ನಿಗದಿತ ಸ್ಥಳಕ್ಕೆ ತಲುಪಿಸಲು ಪರ್ಯಾಯ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸ್ಥಳೀಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ

    ಎರಡು ತಿಂಗಳ ಹಿಂದೆಯಷ್ಟೇ ಒಡಿಶಾ ರಾಜ್ಯದಲ್ಲಿ ನಡೆದ ಭೀಕರ ರೈಲು ದುರಂತ (Odisha Train Accident) ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು ಜೂನ್ 2ರ ಸಂಜೆ ಸರಕುಗಳ ರೈಲಿಗೆ ಡಿಕ್ಕಿ ಹೊಡೆದು ಅದರ ಹೆಚ್ಚಿನ ಕೋಚ್‍ಗಳು ಹಳಿತಪ್ಪಿದ್ದವು. ಈ ಅಪಘಾತದಲ್ಲಿ ಸುಮಾರು 288 ಮಂದಿ ಸಾವನ್ನಪ್ಪಿದ್ದರು ಅಲ್ಲದೇ 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಪಾಕಿಸ್ತಾನದಲ್ಲಿ ಸಂಭವಿಸಿರುವ ದುರಂತದಲ್ಲಿ ಸಂತ್ರಸ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Odisha Train Accident – 2 ತಿಂಗಳಾದರೂ ಪತ್ತೆಯಾಗದ 29 ಶವಗಳ ಗುರುತು

    Odisha Train Accident – 2 ತಿಂಗಳಾದರೂ ಪತ್ತೆಯಾಗದ 29 ಶವಗಳ ಗುರುತು

    ಭುವನೇಶ್ವರ: ಒಡಿಶಾದ ರೈಲು ಅಪಘಾತ (Odisha Train Accident) ಸಂಭವಿಸಿ ಇಂದಿಗೆ 2 ತಿಂಗಳುಗಳು ಕಳೆದಿವೆ. ಆದರೂ ಭುವನೇಶ್ವರದ ಆಸ್ಪತ್ರೆಯಲ್ಲಿ ಇರಿಸಲಾದ 29 ಮೃತದೇಹಗಳ ಗರುತು ಇನ್ನೂ ಪತ್ತೆಯಾಗಿಲ್ಲ ಎಂದು ಎಐಐಎಂಎಸ್‍ನ‌ (All India Institute of Medical Sciences) ವೈದ್ಯಕೀಯ ಅಧೀಕ್ಷಕ ದಿಲೀಪ್ ಕುಮಾರ್ ಪರಿದಾ ಹೇಳಿದ್ದಾರೆ.

    ಆಸ್ಪತ್ರೆಯಲ್ಲಿ 162 ದೇಹಗಳನ್ನು ಇರಿಸಲಾಗಿತ್ತು. ಆದರಲ್ಲಿ 113 ಮೃತದೇಹಗಳ ಗುರುತು ಪತ್ತೆಯಾಗಿದ್ದು ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಉಳಿದ ಮೃತ ದೇಹಗಳಿಗಾಗಿ ಡಿಎನ್‍ಎ ಪರೀಕ್ಷೆ ನಡೆಸಲಾಗಿದೆ. ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಖಚಿತ ವರದಿಯ ಬಳಿಕವಷ್ಟೆ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು. ಅಲ್ಲದೇ ಡಿಎನ್‍ಎ ಪರೀಕ್ಷೆ ಬಳಿಕವೂ ಗುರುತು ಪತ್ತೆಯಾಗದ ಮೃತದೇಹಗಳ ಸಂಸ್ಕಾರದ ಬಗ್ಗೆ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: Odisha Train Tragedy: ದುರಂತಕ್ಕೆ ಸಿಕ್ತು ಅಸಲಿ ಕಾರಣ – ಸುರಕ್ಷತೆಗೆ ಹೊಸ ಟೆಕ್ನಾಲಜಿ ಬಳಸುವ ಪ್ರಯತ್ನ

    ರೈಲು ಅಪಘಾತದ ಬಗ್ಗೆ ವಿಚಾರಣೆಯನ್ನು ಪೂರ್ಣಗೊಳಿಸಲಾಗಿದೆ. ಮೊದಲ ವರದಿಯಲ್ಲಿ ರೈಲು ದುರಂತಕ್ಕೆ ಸಿಗ್ನಲಿಂಗ್ ಮತ್ತು ಟ್ರಾಫಿಕ್ ಕಂಟ್ರೋಲ್ ವಿಭಾಗಗಳನ್ನು ಹೊಣೆ ಮಾಡಲಾಗಿದೆ. ಈ ಅಪಘಾತಕ್ಕೆ ಇದೇ ಕಾರಣ ಎಂದು ರೈಲ್ವೆ ಸಚಿವಾಲಯ ರಾಜ್ಯಸಭೆಯಲ್ಲಿ ವರದಿಯನ್ನು ಬಹಿರಂಗ ಪಡಿಸಿತ್ತು. ಸಿಗ್ನಲಿಂಗ್ ದೋಷಗಳ ಪರಿಣಾಮವಾಗಿ ರಾಂಗ್ ಲೈನ್‍ಗೆ ಹಸಿರು ಸಿಗ್ನಲ್ ಪ್ರದರ್ಶಿಸಲಾಯಿತು. ಇದು ನಿಂತಿದ್ದ ಸರಕು ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿಯಾಗಲು ಕಾರಣವಾಯಿತು. ಬಳಿಕ ಡಿಕ್ಕಿಯಾಗಿ ಪಕ್ಕದ ಹಳಿಗಳ ಮೇಲೆ ಬಿದ್ದಿದ್ದ ಬೋಗಿಗಳಿಗೆ ಮತ್ತೊಂದು ರೈಲು ವೇಗವಾಗಿ ಬಂದು ಡಿಕ್ಕಿಯಾಗಿತ್ತು.

    ಜೂ.2 ರಂದು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿತ್ತು. ಬಳಿಕ ಕೆಲ ಬೋಗಿಗಳು ಪಕ್ಕದ ಹಳಿ ಮೇಲೆ ಬಿದ್ದಿವೆ. ಸ್ವಲ್ಪ ಸಮಯದ ನಂತರ ಅದೇ ಹಳಿಯಲ್ಲಿ ಬಂದ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ 288 ಜನ ಸಾವಿಗೀಡಾಗಿದ್ದರು. ಇದನ್ನೂ ಓದಿ: ಒಡಿಶಾ ರೈಲು ದುರಂತ – ಮೊದಲ ಬಾರಿ ವರದಿ ಬಿಡುಗಡೆ ಮಾಡಿದ ರೈಲ್ವೆ ಇಲಾಖೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Odisha Train Tragedy: ದುರಂತಕ್ಕೆ ಸಿಕ್ತು ಅಸಲಿ ಕಾರಣ – ಸುರಕ್ಷತೆಗೆ ಹೊಸ ಟೆಕ್ನಾಲಜಿ ಬಳಸುವ ಪ್ರಯತ್ನ

    Odisha Train Tragedy: ದುರಂತಕ್ಕೆ ಸಿಕ್ತು ಅಸಲಿ ಕಾರಣ – ಸುರಕ್ಷತೆಗೆ ಹೊಸ ಟೆಕ್ನಾಲಜಿ ಬಳಸುವ ಪ್ರಯತ್ನ

    ಭುನವೇಶ್ವರ: ಕೆಲ ದಿನಗಳ ಹಿಂದೆಯಷ್ಟೇ ಒಡಿಶಾದ (ODISHA) ಬಾಲಸೋರ್‌ನಲ್ಲಿ ನಡೆದ ತ್ರಿವಳಿ ರೈಲು ದುರಂತಕ್ಕೆ (Odisha Train Tragedy) ಅಸಲಿ ಕಾರಣ ಏನೆಂಬುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಸುಮಾರು 293 ಜೀವಗಳನ್ನು ಬಲಿಪಡೆದ ದುರಂತಕ್ಕೆ ಮಾನವ ದೋಷವೇ ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರು ತಿಳಿಸಿದ್ದಾರೆ.

    ಕೇಂದ್ರೀಯ ತನಿಖಾ ದಳ (CBI) ಕ್ರಿಮಿನಲ್‌ ಅಪರಾಧ ಹಿನ್ನೆಲೆ ಕೇಂದ್ರೀಕರಿಸಿ ತನಿಖೆ ನಡೆಸುತ್ತಿದೆ. ರೈಲ್ವೆ ಇಲಾಖೆ ಅಧಿಕಾರಿ ಮೂಲಗಳ ಪ್ರಕಾರ 3‌ ವರ್ಷಗಳ ಹಿಂದೆ ಸುರಕ್ಷತೆಯ ಕಾರಣದಿಂದ ರೈಲ್ವೆ ಅಳಿ ವಿನ್ಯಾಸದಲ್ಲಿ ಬದಲಾವಣೆ ಮಾಡಲಾಗಿತ್ತು. ಆ ನಂತರ ಅಧಿಕಾರಿಗಳು ಅಳಿ ತಪಾಸಣೆ ನಡೆಸಿ ಸುರಕ್ಷತಾ ಕಾರ್ಯವಿಧಾನ ಅನುಸರಿಸೋದನ್ನ ಕಡೆಗಣಿಸಿದ್ದರು. ಹಾಗಾಗಿ ಅಧಿಕಾರಿಗಳ ನಿರ್ಲಕ್ಷ್ಯವೂ ಎದ್ದು ಕಾಣ್ತಿದೆ. ಸಿಗ್ನಲಿಂಗ್‌ (Railway Signalling) ವಿಭಾಗದವರೂ ಮಾತ್ರವಲ್ಲದೇ ಸುರಕ್ಷತೆಯ ಪ್ರಕ್ರಿಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಸಚಿವಾಲಯ ಕ್ರಮ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಸಿಗ್ನಲಿಂಗ್, ಟ್ರಾಫಿಕ್ ಕಂಟ್ರೋಲ್ ವಿಭಾಗಗಳೇ ಹೊಣೆ

    CSR ವರದಿಯಲ್ಲಿ ವಿಧ್ವಂಸಕ ಕೃತ್ಯ ಎಂದೇ ಸೂಚಿಸಿದ್ದರೂ, ಸಿಬಿಐನ ನಂತರದ ವರದಿಗಳಿಂದ ರೈಲ್ವೆ ಇಲಾಖೆ ತನ್ನ ಸುರಕ್ಷತಾ ವ್ಯವಸ್ಥೆಯನ್ನ ಮರುಹೊಂದಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ.

    ಈಗಾಗಲೇ ಉನ್ನತಮಟ್ಟದ ಸುರಕ್ಷತಾ ಕ್ರಮ ಕೈಗೊಳ್ಳಲು ರೈಲ್ವೆ ಇಲಾಖೆ ಮುಂದಾಗಿದೆ. ಅದಕ್ಕಾಗಿ ಉಕ್ಕಿನ ಉದ್ಯಮದಲ್ಲಿ ಬಳಸಲಾಗುವ ಉತ್ತಮ ತಂತ್ರಜ್ಞಾನಗಳು ಮತ್ತು ವಿಶ್ವದಾದ್ಯಂತ ಬೇರೆ ಬೇರೆ ದೇಶಗಳಲ್ಲಿ ಬಳಸುವ ರೈಲ್ವೆ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಎಲೆಕ್ಟ್ರಾನಿಕ್ ರಿಲೇ ಸಿಸ್ಟಮ್‌ಗಳ ಬಳಕೆಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಈ ವ್ಯವಸ್ಥೆ ಜಾರಿಗೆ ಬರಲು ಕನಿಷ್ಠ ಮೂರು ವರ್ಷಗಳ ಸಮಯ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 20ರ ಯುವಕನಿಗೆ ಚಾಕು ಇರಿತ- ಪೊಲೀಸರ ಮುಂದೆ ಮೃತನ ತಾಯಿ ಹೇಳಿದ್ದೇನು?

    ಜೂ.2 ರಂದು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‍ಪ್ರೆಸ್ ರೈಲು ಹಳಿ ತಪ್ಪಿ ಕೆಲ ಬೋಗಿಗಳು ನಿಂತಿದ್ದ ಗೂಡ್ಸ್ ರೈಲಿನ ಮೇಲೆ ಬಿದ್ದಿವೆ. ಸ್ವಲ್ಪ ಸಮಯದ ನಂತರ ಅದೇ ಹಳಿಯಲ್ಲಿ ಬಂದ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ 3-4 ಬೋಗಿಗಳು ಹಳಿತಪ್ಪಿತ್ತು ಈ ಘಟನೆಯಲ್ಲಿ 288 ಜನ ಸಾವಿಗೀಡಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಡಿಶಾ ರೈಲು ದುರಂತ – ಸಿಗ್ನಲಿಂಗ್, ಟ್ರಾಫಿಕ್ ಕಂಟ್ರೋಲ್ ವಿಭಾಗಗಳೇ ಹೊಣೆ

    ಒಡಿಶಾ ರೈಲು ದುರಂತ – ಸಿಗ್ನಲಿಂಗ್, ಟ್ರಾಫಿಕ್ ಕಂಟ್ರೋಲ್ ವಿಭಾಗಗಳೇ ಹೊಣೆ

    ಭುವನೇಶ್ವರ: 288 ಜನರನ್ನು ಬಲಿ ಪಡೆದಿದ್ದ ಒಡಿಶಾ ರೈಲು ದುರಂತಕ್ಕೆ (Odisha Train Accident) ಸಿಗ್ನಲಿಂಗ್ (Signalling) ಮತ್ತು ಟ್ರಾಫಿಕ್ ಕಂಟ್ರೋಲ್ (Traffic Operations) ವಿಭಾಗಗಳನ್ನು ಹೊಣೆ ಮಾಡಲಾಗಿದೆ.

    ರೈಲ್ವೇ (Railway) ಸಿಗ್ನಲ್ ಹಾಗೂ ಇಂಟರ್‌ಲಾಕ್‌ ರಿಪೇರಿ ಮಾಡಿಸುವಂತೆ ಸ್ಟೇಷನ್ ಮಾಸ್ಟರ್‌ಗೆ ಸೂಚಿಸಲಾಗಿತ್ತು. ಸಿಗ್ನಲ್ ರಿಪೇರಿಯ ಬಳಿಕ ರೈಲು ಸಂಚರಿಸುವ ಮುನ್ನ ಸಿಗ್ನಲಿಂಗ್ ವ್ಯವಸ್ಥೆಯನ್ನು ಪರೀಕ್ಷಿಸುವ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿಲ್ಲ. ಅಲ್ಲದೇ ರೈಲ್ವೇ ಮರುಸಂಪರ್ಕಕ್ಕೆ ಸೂಚನೆ ನೀಡಿದ ನಂತರವೂ ಸಿಗ್ನಲಿಂಗ್ ಸಿಬ್ಬಂದಿ ಕೆಲಸವನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಅಪಘಾತಕ್ಕೆ ಸಿಗ್ನಲ್ ನಿರ್ವಹಣೆ ಹಾಗೂ ಟ್ರಾಫಿಕ್ ಕಂಟ್ರೋಲ್ ಸಿಬ್ಬಂದಿ ಜವಾಬ್ದಾರರಾಗಿದ್ದಾರೆ ಎಂದು ಸಿಆರ್‍ಎಸ್ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ತಡವಾಗಿ ಬಂದ ಬಸ್ ಅಡ್ಡಗಟ್ಟಿ ಡ್ರೈವರ್‌ಗೆ ಕ್ಲಾಸ್‌ ತೆಗೆದುಕೊಂಡ ಮಹಿಳೆಯರು

    ಸಿಗ್ನಲಿಂಗ್ ಸಿಬ್ಬಂದಿ ಮತ್ತು ಸ್ಟೇಷನ್ ಮಾಸ್ಟರ್ ಇಬ್ಬರೂ ಜವಾಬ್ದಾರರಾಗಿರುವ ಇಂಟರ್‌ಲಾಕಿಂಗ್ ಸಿಗ್ನಲಿಂಗ್ ಸಿಸ್ಟಮ್‍ನ ಕೇಂದ್ರ ಕೊಠಡಿಯಲ್ಲೂ ಲೋಪಗಳಾಗಿವೆ. ಇದಾದ ಬಳಿಕ ರೈಲ್ವೆ ಇಲಾಖೆ ಖರಗ್‍ಪುರ ವಿಭಾಗೀಯ ರೈಲ್ವೆ ವ್ಯವಸ್ಥಾಪಕ  ಶುಜತ್ ಹಶ್ಮಿ ಮತ್ತು ಆಗ್ನೇಯ ರೈಲ್ವೆ ಸುರಕ್ಷತಾ ಸಿಗ್ನಲ್ ಭದ್ರತಾ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಯಿಸಿದೆ.

    ಆಗ್ನೇಯ ರೈಲ್ವೆ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ ಅವರನ್ನು ಬೆಂಗಳೂರಿನ ರೈಲ್ ವೀಲ್ ಪ್ಲಾಂಟ್‍ನ ಜನರಲ್ ಮ್ಯಾನೇಜರ್ ಆಗಿ ವರ್ಗಾವಣೆ ಮಾಡಲಾಗಿದೆ. ಈಶಾನ್ಯ ರೈಲ್ವೆಯ ಹೆಚ್ಚುವರಿ ಜನರಲ್ ಮ್ಯಾನೇಜರ್ ಎ.ಕೆ ಮಿಶ್ರಾ ಅವರನ್ನು ಆಗ್ನೇಯ ರೈಲ್ವೆಯ ಹೊಸ ಜಿಎಂ ಆಗಿ ನೇಮಿಸಿದೆ. ಈ ಸಂಬಂಧ ಆಗ್ನೇಯ ವಲಯದ ರೈಲ್ವೆ ಸುರಕ್ಷತಾ ಆಯುಕ್ತ ಎ.ಕೆ ಚೌಧರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದು ಬಂದಿದೆ.

    ಜೂ.2 ರಂದು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‍ಪ್ರೆಸ್ ರೈಲು ಹಳಿ ತಪ್ಪಿ ಕೆಲ ಬೋಗಿಗಳು ನಿಂತಿದ್ದ ಗೂಡ್ಸ್ ರೈಲಿನ ಮೇಲೆ ಬಿದ್ದಿವೆ. ಸ್ವಲ್ಪ ಸಮಯದ ನಂತರ ಅದೇ ಹಳಿಯಲ್ಲಿ ಬಂದ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ 3-4 ಬೋಗಿಗಳು ಹಳಿತಪ್ಪಿತ್ತು ಈ ಘಟನೆಯಲ್ಲಿ 288 ಜನ ಸಾವಿಗೀಡಾಗಿದ್ದರು. ಇದನ್ನೂ ಓದಿ: Lausanne Diamond League: ಚಿನ್ನಕ್ಕೆ ಮುತ್ತಿಟ್ಟ ನೀರಜ್‌ ಚೋಪ್ರಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಡಿಶಾದಲ್ಲಿ ಮತ್ತೊಂದು ಭೀಕರ ಅಪಘಾತ – ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದ 12 ಮಂದಿ ಮಸಣಕ್ಕೆ

    ಒಡಿಶಾದಲ್ಲಿ ಮತ್ತೊಂದು ಭೀಕರ ಅಪಘಾತ – ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದ 12 ಮಂದಿ ಮಸಣಕ್ಕೆ

    ಭುವನೇಶ್ವರ: ಇತ್ತೀಚೆಗಷ್ಟೇ ಭೀಕರ ರೈಲು ದುರಂತ (Odisha Train Accident) ಸಂಭವಿಸಿದ್ದ ಒಡಿಶಾದಲ್ಲಿ (Odisha) ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು 12 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.

    ಎರಡು ಬಸ್ಸುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮದುವೆ (Marriage) ಮುಗಿಸಿ ಮನೆಗೆ ತೆರಳುತ್ತಿದ್ದ 12 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆಯ ಮೇಲಲ್ಲ, ಕೋರ್ಟ್‍ನಲ್ಲಿ ಹೋರಾಟ ಮುಂದುವರೆಯಲಿದೆ – ಸಿಂಗ್‍ಗೆ ಕುಸ್ತಿಪಟುಗಳ ಎಚ್ಚರಿಕೆ

    ಒಡಿಶಾದಿಂದ ಸುಮಾರು 35 ಕಿಮೀ ದೂರದಲ್ಲಿರುವ ಬರ್ಹಾಂಪುರ-ತಪ್ತಪಾಣಿ ರಸ್ತೆಯ ದಿಗಪಹಂಡಿ ಪ್ರದೇಶದ ಬಳಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ ಎಂದು ಬರ್ಹಾಂಪುರ ಪೊಲೀಸ್ ವರಿಷ್ಠಾಧಿಕಾರಿ ಎಂ. ಶರವಣ ವಿವೇಕ್ ತಿಳಿಸಿದ್ದಾರೆ.

    ಬರ್ಹಾಂಪುರದಲ್ಲಿ ವಿವಾಹಮಹೋತ್ಸವ ಮುಗಿಸಿಕೊಂಡು ಪ್ರಯಾಣಿಕರು ದಿಗಪಹಂಡಿ ಬಳಿಕ ಖಂಡದೇಲಿಗೆ ಹಿಂದಿರುಗುತ್ತಿದ್ದರು, ಈ ವೇಳೆ ಅಪಘಾತ ಸಂಭವಿಸಿದೆ. ಇದರಲ್ಲಿ ಒಂದೇ ಕುಟುಂಬದ 7 ಮಂದಿ ಸೇರಿ 12 ಮಂದಿ ಮೃತಪಟ್ಟಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಅವರನ್ನ ಎಂಕೆಸಿಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಡ್ರಗ್ಸ್ ಗಾಗಿ ಪೆಡ್ಲರ್ ಜೊತೆ ಅನೈತಿಕ ಸಂಬಂಧ: ಹೆಂಡತಿ ವಿರುದ್ಧವೇ ಸ್ಯಾಂಡಲ್ ವುಡ್ ನಟ ದೂರು

    ಅಪಘಾತದಲ್ಲಿ ಗಾಯಗೊಂಡ ಪ್ರತಿಯೊಬ್ಬರ ಚಿಕಿತ್ಸೆಗೆ ಒಡಿಶಾ ಸರ್ಕಾರ (Odisha Government) ತಲಾ 30 ಸಾವಿರ ರೂ. ಪರಿಹಾರ ಮಂಜೂರು ಮಾಡಿದೆ. ಸದ್ಯ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಮರೆಯದ ರೈಲು ದುರಂತ:
    ಇತ್ತೀಚೆಗಷ್ಟೇ ಒಡಿಶಾದ ಬಾಲಾಸೋರ್‌ ಬಳಿ ಪ್ರಯಾಣಿಕರಿದ್ದ ಎರಡು ರೈಲು ಹಾಗೂ ಸರಕು ತುಂಬಿದ್ದ ಒಂದು ರೈಲು ಅಪಘಾತಕ್ಕೀಡಾಗಿದ್ದವು. ಈ ಭೀಕರ ದುರಂತದಲ್ಲಿ ಸುಮಾರು 275 ಮಂದಿ ದುರ್ಮರಣಕ್ಕೀಡಾಗಿದ್ದರು. 1,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬೆಚ್ಚಿಬೀಳಿಸುವಂತಹ ದುರಂತಕ್ಕೆ ವಿಶ್ವಾದ್ಯಂತ ವಿಷಾದ ವ್ಯಕ್ತವಾಗಿತ್ತು. ಅಪಘಾತವು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ನಂತರ ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಲಾಗಿತ್ತು.

  • ಒಡಿಶಾ ರೈಲು ದುರಂತದಲ್ಲಿ ಮೃತರ ಕುಟುಂಬಕ್ಕೆ 20 ಲಕ್ಷ ದೇಣಿಗೆ ನೀಡಿದ ಭಾರತೀಯ ಫುಟ್ಬಾಲ್‌ ತಂಡ

    ಒಡಿಶಾ ರೈಲು ದುರಂತದಲ್ಲಿ ಮೃತರ ಕುಟುಂಬಕ್ಕೆ 20 ಲಕ್ಷ ದೇಣಿಗೆ ನೀಡಿದ ಭಾರತೀಯ ಫುಟ್ಬಾಲ್‌ ತಂಡ

    ಭುವನೇಶ್ವರ: ಭಾರತೀಯ ಫುಟ್ಬಾಲ್‌ ತಂಡವು (Indian Football Team) ಇಂಟರ್‌ಕಾಂಟಿನೆಂಟಲ್ ಕಪ್ ನಗದು ಬಹುಮಾನವಾಗಿ ಪಡೆದ ಹಣದಲ್ಲಿ 20 ಲಕ್ಷ ರೂ.ಗಳನ್ನ ಬಾಲಸೋರ್ ರೈಲು ದುರಂತದಲ್ಲಿ (Odisha Train Accident) ಮೃತಪಟ್ಟವರ ಕುಟುಂಬಗಳಿಗೆ ದೇಣಿಯಾಗಿ ನೀಡಿದೆ. ಈ ಮೂಲಕ ಕಪ್‌ ಗೆಲ್ಲುವ ಜೊತೆಗೆ ಭಾರತೀಯರ ಮನವನ್ನೂ ಗೆದ್ದಿದೆ.

    ಚಾಂಪಿಯನ್‌ ಪಟ್ಟ ಗೆದ್ದ ನಂತರ ಸಿಕ್ಕ ನಗದು ಪ್ರಶಸ್ತಿಯ ಒಂದು ಭಾಗವನ್ನ ಒಡಿಶಾ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ʻಪರಿಹಾರ ಮತ್ತು ಪುನರ್ವಸತಿʼ ಕಾರ್ಯಕ್ಕಾಗಿ ದಾನ ಮಾಡಲು ಭಾರತೀಯ ಫುಟ್ಬಾಲ್‌ ತಂಡ ನಿರ್ಧರಿಸಿದೆ. ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳಿಂದಲೂ ಇದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತ; ಸಂಚಾರ ರದ್ದಾಗಿ ಬೆಂಗ್ಳೂರಲ್ಲೇ ನಿಂತ ಬೆಂಗಳೂರು-ಗುವಾಹಟಿ ರೈಲು 

    ಭಾನುವಾರ ಒಡಿಶಾದಲ್ಲಿ ನಡೆದ ಇಂಟರ್‌ಕಾಂಟಿನೆಂಟಲ್ ಕಪ್ ಫೈನಲ್‌ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು 2-0 ಗೋಲುಗಳಿಂದ ಎದುರಾಳಿ ಲೆಬನಾನ್ ತಂಡವನ್ನ ಮಣಿಸಿತು. ಈ ಮೂಲಕ 2ನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಿತು. ಫೈನಲ್‌ ಪಂದ್ಯದಲ್ಲಿ ಗೆದ್ದ ಭಾರತ ತಂಡಕ್ಕೆ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ (Naveen Patnaik) 1 ಕೋಟಿ ರೂ. ನಗದು ಬಹುಮಾನ ಘೋಷಿಸಿದ್ದರು. ಈ ಮೊತ್ತದಲ್ಲಿ 20 ಲಕ್ಷ ರೂ.ಗಳನ್ನ ದೇಣಿಗೆ ನೀಡಲು ಫುಟ್ಬಾಲ್‌ ತಂಡ ಸಾಮೂಹಿಕ ನಿರ್ಧಾರ ಮಾಡಿತು.  

    ಗೆಲುವಿಗೆ ಬಹುಮಾನವಾಗಿ ನಗದು ಬೋನಸ್ ನೀಡುತ್ತಿರುವುದಕ್ಕೆ ಒಡಿಶಾ ಸರ್ಕಾರಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ನಾವೆಲ್ಲರೂ ತ್ವರಿತ ಮತ್ತು ಸಾಮೂಹಿಕ ನಿರ್ಧಾರವೊಂದಕ್ಕೆ ಬಂದಿದ್ದೇವೆ. ಈ ಮೊತ್ತದಲ್ಲಿ 20 ಲಕ್ಷ ರೂ.ಗಳನ್ನ ದೇಣಿಗೆ ನೀಡಲು ನಿರ್ಧರಿಸಿದ್ದೇವೆ. ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗೆ ಈ ಹಣವನ್ನು ನೀಡಲಾಗುತ್ತದೆ ಎಂದು ಭಾರತೀಯ ಫುಟ್ಬಾಲ್ ತಂಡ ಟ್ವೀಟ್ ಟ್ವೀಟ್‌ ಮೂಲಕ ತಿಳಿಸಿದೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದ ಬಳಿಕ ಎಚ್ಚೆತ್ತ ರೈಲ್ವೆ ಇಲಾಖೆ- ಟ್ರ್ಯಾಕ್‌ಗಳ ಡೀಪ್ ಸ್ಕ್ರೀನಿಂಗ್‌ಗೆ ನಿರ್ಧಾರ

    ಅದೇ ರೀತಿ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಕೂಡಾ, ರೈಲು ದುರಂತದಿಂದ ಸಾವನ್ನಪ್ಪಿದವರ ಕುಟುಂಬಸ್ಥರ ನೆರವಿಗೆ ಬಂದಿದ್ದಾರೆ. ದುರಂತ ಅಪಘಾತದಲ್ಲಿ ಜೀವ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

    ಇದೇ ತಿಂಗಳ ಜೂನ್‌ 2ರ ರಾತ್ರಿ ಓಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ದುರಂತ ನಡೆದಿತ್ತು.

  • ಒಡಿಶಾ ರೈಲು ದುರಂತ – ಪರಿಹಾರದ ಹಣಕ್ಕಾಗಿ ಮೃತ ವ್ಯಕ್ತಿಯನ್ನು ಪತಿ ಎಂದ ಮಹಿಳೆ

    ಒಡಿಶಾ ರೈಲು ದುರಂತ – ಪರಿಹಾರದ ಹಣಕ್ಕಾಗಿ ಮೃತ ವ್ಯಕ್ತಿಯನ್ನು ಪತಿ ಎಂದ ಮಹಿಳೆ

    ಭುವನೇಶ್ವರ: ಸರ್ಕಾರದ ಪರಿಹಾರದ ಹಣ (Government Compensation Cash) ಪಡೆಯಲು ಬಾಲಸೋರ್ ರೈಲು ದುರಂತದಲ್ಲಿ (Odisha Train Accident) ಪತಿ ಮೃತಪಟ್ಟಿದ್ದಾನೆ ಎಂದು ಮಹಿಳೆಯೊಬ್ಬಳು ಕತೆಕಟ್ಟಿದ ಪ್ರಕರಣ ಒಡಿಶಾದ (Odisha) ಕಟಕ್‍ನಲ್ಲಿ ನಡೆದಿದೆ.

    ಇದೀಗ ಕತೆಕಟ್ಟಿದ ಪತ್ನಿಯ ವಿರುದ್ಧ ಪತಿ ಬಹನಾಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಅಲ್ಲದೇ ಪರಿಹಾರದ ಹಣ ಪಡೆಯಲು ಈ ರೀತಿ ಸಂಚು ರೂಪಿಸಿದ್ದಾಳೆ ಎಂದು ಆರೋಪಿಸಿದ್ದಾನೆ. ಸಾರ್ವಜನಿಕರ ಹಣವನ್ನು ದೋಚಲು ಯತ್ನಿಸಿದ ಗೀತಾಂಜಲಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪತಿ ಒತ್ತಾಯಿಸಿದ್ದಾನೆ. ಈಗ ಬಂಧನದ ಭೀತಿಯಿಂದ ಮಹಿಳೆ ತಲೆಮರೆಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಜಾರ್ಖಂಡ್‍ನಲ್ಲಿ ತಪ್ಪಿತ್ತು ರೈಲು ದುರಂತ!

    ಗೀತಾಂಜಲಿ ದತ್ತಾ ಎಂಬಾಕೆ ರೈಲು ಅಪಘಾತದಲ್ಲಿ ತನ್ನ ಪತಿ ಬಿಜಯ್ ದತ್ತಾ ಸಾವನ್ನಪ್ಪಿದ್ದಾನೆ ಎಂದು ಹೇಳಿಕೊಂಡಿದ್ದಳು. ಅಲ್ಲದೆ ಮೃತದೇಹವೊಂದನ್ನು ತನ್ನ ಗಂಡನದ್ದೇ ಎಂದು ಗುರುತಿಸಿದ್ದಳು. ಆದರೆ ದಾಖಲೆಗಳ ಪರಿಶೀಲನೆಯ ನಂತರ ಆಕೆ ಹೇಳುತ್ತಿರುವುದು ಸುಳ್ಳು ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದರು.

    ಈ ಪ್ರಕರಣದ ಬಳಿಕ ರೈಲ್ವೇ ಇಲಾಖೆ, ಮೃತದೇಹಗಳ ನಕಲಿ ವಾರಸುದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿತ್ತು. ಈ ಪ್ರಕರಣದ ಪತಿ ಹಾಗೂ ಪತ್ನಿ ಕಳೆದ 13 ವರ್ಷಗಳಿಂದ ಬೇರೆಬೇರೆಯಾಗಿ ವಾಸಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು (Coromandel Express) ಜೂನ್ 2ರ ಸಂಜೆ ಸರಕುಗಳ ರೈಲಿಗೆ ಡಿಕ್ಕಿ ಹೊಡೆದು ಅದರ ಹೆಚ್ಚಿನ ಕೋಚ್‍ಗಳು ಹಳಿತಪ್ಪಿದ್ದವು. ಈ ಅಪಘಾತದಲ್ಲಿ ಸುಮಾರು 276 ಜನರು ಸಾವನ್ನಪ್ಪಿದ್ದರು. ಅಲ್ಲದೇ 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಒಡಿಶಾ ಸಿಎಂ ನವೀನ್ ಪಟ್ನಾಯಕ್ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಪ್ರಧಾನಿ ನರೇಂದ್ರ ಮೋದಿಯವರು (Narendra Modi) 2 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಅಲ್ಲದೆ ಅಪಘಾತದ ಸಂತ್ರಸ್ಥರ ಕುಟುಂಬಗಳಿಗೆ ರೈಲ್ವೆ ಸಚಿವಾಲಯ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದನ್ನೂ ಓದಿ: ಜೈಲಿನಲ್ಲಿರೋ ಸಿಸೋಡಿಯಾ ನೆನೆದು ಕಣ್ಣೀರಾಕಿದ ಸಿಎಂ ಕೇಜ್ರಿವಾಲ್

  • ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ

    ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ

    ಭುವನೇಶ್ವರ: ಒಡಿಶಾ ರೈಲು ದುರಂತವಾಗಿ (Odisha Train Tragedy) 4 ದಿನ ಕಳೆದರೂ 275 ಮೃತರ ಪೈಕಿ, 101 ಮೃತದೇಹಗಳ ಗುರುತು ಇನ್ನೂ ಪತ್ತೆಯೇ ಆಗಿಲ್ಲ. ಕೇವಲ 55 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

    ಈಸ್ಟರ್ನ್ ಸೆಂಟ್ರಲ್ ರೈಲ್ವೇಯ ವಿಭಾಗೀಯ ರೈಲ್ವೇ ಮ್ಯಾನೇಜರ್ ರಿಂಕೇಶ್ ರಾಯ್ ಅವರು ಈ ಸಂಬಂಧ ಮಾಹಿತಿ ನೀಡಿದ್ದಾರೆ. ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ- ಪತ್ರದ ಮೂಲಕ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

    ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ. ಅವರ ಪೈಕಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಡಿಸ್ಚಾರ್ಜ್‌ ಮಾಡಲಾಗಿದೆ. ಸುಮಾರು 200 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ 278 ಮಂದಿ ಪೈಕಿ, 101 ಮೃತದೇಹಗಳು ಇನ್ನೂ ಉಳಿದಿವೆ. ಅವರು ಯಾರೆಂಬ ಗುರುತು ಪತ್ತೆಯಾಗಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.

    ಭುವನೇಶ್ವರದಲ್ಲಿ ಇರಿಸಲಾಗಿರುವ ಒಟ್ಟು 193 ಶವಗಳಲ್ಲಿ 80 ಶವಗಳನ್ನು ಗುರುತಿಸಲಾಗಿದೆ. ಅದರ ಪೈಕಿ 55 ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಬಿಎಂಸಿಯ ಸಹಾಯವಾಣಿ ಸಂಖ್ಯೆಗೆ 200 ಕ್ಕೂ ಹೆಚ್ಚು ಕರೆಗಳು ಬಂದಿವೆ. ಮೃತದೇಹಗಳನ್ನು ಗುರುತಿಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತಿದೆ ಎಂದು ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್‌ನ ಆಯುಕ್ತ ವಿಜಯ್ ಅಮೃತ್ ಕುಲಂಗೆ ಅವರು ತಿಳಿಸಿದ್ದಾರೆ. ಇದನ್ನೂ ಓದಿ: 275 ಮಂದಿ ಸಾವನ್ನಪ್ಪಿದ ದುರಂತದ ಬೆನ್ನಲ್ಲೇ ಒಡಿಶಾದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು!

    ಒಡಿಶಾದ ಬಾಲಾಸೋರ್‌ ಬಳಿ ಪ್ರಯಾಣಿಕರಿದ್ದ ಎರಡು ರೈಲು ಹಾಗೂ ಸರಕುಗಳಿದ್ದ ಒಂದು ರೈಲು ಅಪಘಾತಕ್ಕೀಡಾಗಿದ್ದವು. ಈ ಭೀಕರ ದುರಂತದಲ್ಲಿ ಸುಮಾರು 275 ಮಂದಿ ದುರ್ಮರಣಕ್ಕೀಡಾಗಿದ್ದಾರೆ. 1,100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಚ್ಚಿಬೀಳಿಸುವಂತಹ ದುರಂತಕ್ಕೆ ವಿಶ್ವಾದ್ಯಂತ ವಿಷಾದ ವ್ಯಕ್ತವಾಗಿತ್ತು. ಅಪಘಾತವು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.