ನವದೆಹಲಿ: ಕಳೆದ ತಿಂಗಳು ಜೂನ್ ಆರಂಭದಲ್ಲಿ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತಕ್ಕೆ (Odisha Train Tragedy) ಸಿಗ್ನಲ್ ದೋಷವೇ ಕಾರಣ ಎಂದು ರೈಲ್ವೆ ಸಚಿವಾಲಯ ರಾಜ್ಯಸಭೆಯಲ್ಲಿ ವರದಿಯನ್ನು ಮೊದಲ ಬಾರಿಗೆ ಬಹಿರಂಗಪಡಿಸಿದೆ.
ರಾಜ್ಯಸಭೆಯಲ್ಲಿ ಸಂಸದ ಡಾ. ಜಾನ್ ಬಿಟ್ರಾಸ್ ಅವರು ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತ್ರಿವಳಿ ರೈಲು ಅಪಘಾತ ಸಿಗ್ನಲ್ ಸರ್ಕ್ಯೂಟ್ ಆಲ್ಟರೇಶನ್‌ನಲ್ಲಿ ತಪ್ಪಾಗಿದ್ದರಿಂದ ಸಂಭವಿಸಿದೆ. ಇದರಿಂದ ಸಿಗ್ನಲ್ ತಪ್ಪಾಗಿ ಪ್ರದರ್ಶನವಾಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ನಿಲ್ದಾಣದ ನಾರ್ತ್ ಸಿಗ್ನಲ್ ಗೂಮ್ಟಿಯಲ್ಲಿ ಸಿಗ್ನಲಿಂಗ್ ಸರ್ಕ್ಯೂಟ್ ಮಾರ್ಪಾಡು ಹಾಗೂ ನಿಲ್ದಾಣದ ಲೆವೆಲ್ ಕ್ರಾಸಿಂಗ್ ಗೇಟ್ ನಂ.94ಕ್ಕೆ ಎಲೆಕ್ಟ್ರಿಕ್ ಲಿಫ್ಟಿಂಗ್ ಬ್ಯಾರಿಯರ್ ಬದಲಾಯಿಸುವುದಕ್ಕೆ ಸಂಬಂಧಿಸಿದಂತೆ ಸಿಗ್ನಲಿಂಗ್ ಕಾರ್ಯದ ವೇಳೆ ಸಿಗ್ನಲಿಂಗ್-ಸರ್ಕ್ಯೂಟ್ ಬದಲಾವಣೆಯಲ್ಲಿನ ಲೋಪಗಳಿಂದ ರೈಲುಗಳು ಡಿಕ್ಕಿಯಾಗಿವೆ ಎಂದು ಉತ್ತರಿಸಿದ್ದಾರೆ.
ಈ ದೋಷಗಳ ಪರಿಣಾಮವಾಗಿ ರಾಂಗ್ ಲೈನ್‌ಗೆ ಹಸಿರು ಸಿಗ್ನಲ್ ಪ್ರದರ್ಶಿಸಲಾಯಿತು. ಇದು ನಿಂತಿದ್ದ ಸರಕು ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿಯಾಗಲು ಕಾರಣವಾಯಿತು. ಈ ತಪ್ಪುಗಳು ರೈಲ್ವೆ ಅಧಿಕಾರಿಗಳ ಲೋಪ ಹಾಗೂ ನಿರ್ಲಕ್ಷ್ಯದಿಂದ ಸಂಭವಿಸಿರುವುದು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದ್ದಾರೆ. ಮಾತ್ರವಲ್ಲದೆ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರ ಪೈಕಿ 41 ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಸರ್ಕಾರ ಬಹಿರಂಗಪಡಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ
ಕಳೆದ ತಿಂಗಳು ಜೂನ್ 2ರಂದು ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 293 ಜನರು ಸಾವನ್ನಪ್ಪಿದ್ದಾರೆ. 1,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತ ಕಳೆದ 3 ದಶಕಗಳಲ್ಲೇ ಭಾರತದಲ್ಲಿ ಸಂಭವಿಸಿದ ಅತ್ಯಂತ ಭೀಕರ ರೈಲು ದುರಂತವಾಗಿದೆ.
ನವದೆಹಲಿ: ಒಡಿಶಾ ರೈಲು ದುರಂತಕ್ಕೆ (Odisha Train Tragedy) ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (CBI) ವಿಚಾರಣೆ ಎದುರಿಸಿದ ಬಳಿಕ ಜೂನಿಯರ್ ಎಂಜಿನಿಯರ್ (Junior Engineer) ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಇದನ್ನು ಭಾರತದ ಆಗ್ನೇಯ ರೈಲ್ವೆ ನಿರಾಕರಿಸಿದೆ.
289 ಜನರ ಸಾವಿಗೆ ಕಾರಣವಾದ ಭೀಕರ ರೈಲ್ವೆ ಅಪಘಾತದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಸೊರೋ ಸೆಕ್ಷನ್ ಆಫೀಸರ್ ಅಮೀರ್ ಖಾನ್ ಅವರನ್ನು ಈ ಹಿಂದೆ ಸಿಬಿಐ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿತ್ತು. ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲು ಸೋಮವಾರ ಸಿಬಿಐ ಅಧಿಕಾರಿಗಳು ಅಮೀರ್ ಖಾನ್ ಮನೆಗೆ ತೆರಳಿದ್ದರು. ಆದರೆ ಅಲ್ಲಿ ಯಾರೂ ಇರದೆ ಮನೆಗೆ ಬೀಗ ಹಾಕಲಾಗಿತ್ತು.
ಅವರು ಸಂಪರ್ಕಕ್ಕೂ ಸಿಗದ ಹಿನ್ನೆಲೆ ಅವರ ಬಾಡಿಗೆ ಮನೆಯನ್ನು ಸೀಲ್ ಮಾಡಿ, ಮನೆಯ ಮೇಲೆ ನಿಗಾ ಇಡಲು ಇಬ್ಬರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಮೀರ್ ಖಾನ್ ತಮ್ಮ ಕುಟುಂಬದೊಂದಿಗೆ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
CPRO South Eastern Railway (Balasore Train accident) rejects Media reports that one of staff is missing, absconding; clarifies all staff are part of CBI and CRS enquiry. None of the staff are missing or absconding. pic.twitter.com/ptJcH2S1NC
— All India Radio News (@airnewsalerts) June 20, 2023
ಜೂನಿಯರ್ ಎಂಜಿನಿಯರ್ ಪಾತ್ರವೇನು?
ಭಾರತೀಯ ರೈಲ್ವೆಯಲ್ಲಿ ಟ್ರ‍್ಯಾಕ್ ಸರ್ಕ್ಯೂಟ್‌ಗಳು, ಪಾಯಿಂಟ್ ಯಂತ್ರಗಳು ಮತ್ತು ಇಂಟರ್‌ಲಾಕಿಂಗ್ ಸಿಸ್ಟಮ್‌ಗಳು ಸೇರಿದಂತೆ ಸಿಗ್ನಲಿಂಗ್ ಉಪಕರಣಗಳ ಸ್ಥಾಪನೆ, ನಿರ್ವಹಣೆ ಮತ್ತು ದುರಸ್ತಿಯ ಜವಾಬ್ದಾರಿಯನ್ನು ಜೂನಿಯರ್ ಎಂಜಿನಿಯರ್ ನೋಡಿಕೊಳ್ಳುತ್ತಾರೆ. ರೈಲು ಸುರಕ್ಷಿತವಾಗಿ ಹಳಿಯಲ್ಲಿ ಸಂಚರಿಸಬಹುದೇ? ಬೇಡವೇ ಎಂಬುದನ್ನು ಖಾತರಿ ಪಡಿಸುವಲ್ಲಿ ಜೆಇ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ.
ಮೂಲಗಳ ಪ್ರಕಾರ, ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದಲ್ಲಿ ಬಹನಾಗಾ ಬಜಾರ್‌ನ ಸ್ಟೇಷನ್ ಮಾಸ್ಟರ್ ಸೇರಿದಂತೆ ಐವರು ರೈಲ್ವೆ ನೌಕರರು ಭಾಗಿಯಾಗಿರುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಇತರ ನಾಲ್ವರು ಉದ್ಯೋಗಿಗಳು ಸಿಗ್ನಲಿಂಗ್ ಸಂಬಂಧಿತ ಕೆಲಸದ ಜವಾಬ್ದಾರಿಯನ್ನು ಹೊಂದಿದ್ದರು ಮತ್ತು ಅಪಘಾತದ ಸಮಯದಲ್ಲಿ ಕರ್ತವ್ಯದಲ್ಲಿದ್ದರು. ಇದನ್ನೂ ಓದಿ: Odisha Train Tragedy – ವಿಚಾರಣೆ ಎದುರಿಸಿದ್ದ ಜ್ಯೂನಿಯರ್ ಎಂಜಿನಿಯರ್ ನಾಪತ್ತೆ
ನವದೆಹಲಿ: ಒಡಿಶಾದ (Odisha) ಬಾಲಸೋರ್‌ನಲ್ಲಿ ನಡೆದ ಸರಣಿ ರೈಲು ದುರಂತದ (Train Tragedy) ಬಳಿಕ ರೈಲ್ವೆ ಇಲಾಖೆ (Railway Department) ಎಚ್ಚೆತ್ತುಕೊಂಡಿದೆ. ಆಗ್ನೇಯ ರೈಲ್ವೆಯ ಎಲ್ಲಾ ಹಳಿಗಳನ್ನು ಡೀಪ್ ಸ್ಕ್ರೀನಿಂಗ್ (Deep Screening) ಮಾಡಲು ನಿರ್ಧರಿಸಿದ್ದು, 370 ಕೋಟಿ ರೂ. ಟೆಂಡರ್ ಕರೆಯಲಾಗಿದೆ.
ಆಗ್ನೇಯ ರೈಲ್ವೆಯ ಎಲ್ಲಾ ಬ್ರಾಡ್ ಗೇಜ್ ಮಾರ್ಗಗಳಲ್ಲಿ ಮುಖ್ಯ ಮಾರ್ಗದ ಹಳಿಗಳ ಆಳವಾದ ಸ್ಕ್ರೀನಿಂಗ್ ಮಾಡಲಾಗುತ್ತದೆ. ಈ ದೊಡ್ಡ ಕಸರತ್ತಿಗೆ 150ಕ್ಕೂ ಹೆಚ್ಚು ಬಾಲಾಸ್ಟ್ ಕ್ಲೀನಿಂಗ್ ಮೆಷಿನ್ (BCM) ಬಳಸಿಕೊಳ್ಳಲಾಗುತ್ತಿದೆ. ಈ ಪ್ರಕ್ರಿಯೆ ಟ್ರ್ಯಾಕ್ ಸ್ಥಿತಿಸ್ಥಾಪಕತ್ವವನ್ನು ಸುಧಾರಿಸುತ್ತದೆ ಮತ್ತು ಒಳಚರಂಡಿಯನ್ನು ಪುನಃ ಸ್ಥಾಪಿಸುತ್ತದೆ. ಇದನ್ನೂ ಓದಿ: ಕಾಂಗ್ರೆಸ್ ಜೊತೆ ಕೈ ಜೋಡಿಸಲು ಹಿಂದೇಟು – ಲೋಕಸಭೆ ಚುನಾವಣೆಗೆ ವಿಪಕ್ಷಗಳ ಮೈತ್ರಿ ಅನುಮಾನ
ಈ ಪ್ರಕ್ರಿಯೆ ಬಳಿಕ ಟ್ರ್ಯಾಕ್‌ನ ಸ್ಥಿರತೆಯನ್ನು ಪುನಃ ಸ್ಥಾಪಿಸಲು ಡೈನಾಮಿಕ್ ಟ್ರ್ಯಾಕ್ ಸ್ಟೇಬಿಲೈಸರ್ ಮತ್ತು ಬ್ಯಾಲೆಸ್ಟ್ ರೆಗ್ಯುಲೇಟಿಂಗ್ ಯಂತ್ರಗಳನ್ನು ಬಳಸಿ ಪರಿಶೀಲಿಸಲಾಗುತ್ತದೆ. ರೈಲು ಜಾಯಿಂಟ್‌ಗಳ ನಯಗೊಳಿಸುವಿಕೆ, ಜೋಗಲ್ಡ್ ಫಿಶ್ ಪ್ಲೇಟ್‌ಗಳನ್ನು ತೆರೆಯುವುದು ಮತ್ತು ಮರುಸ್ಥಾಪಿಸುವಂತಹ ಇತರ ಚಟುವಟಿಕೆಗಳನ್ನು ಸಹ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ನಟಿ ಖುಷ್ಬೂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- ಡಿಎಂಕೆ ನಾಯಕ ಅರೆಸ್ಟ್, ಪಕ್ಷದಿಂದ ಉಚ್ಛಾಟನೆ
ಆಗ್ನೇಯ ರೈಲ್ವೆ ವಲಯವು ಒಡಿಶಾ ಮತ್ತು ಪಶ್ಚಿಮ ಬಂಗಾಳವನ್ನು ಒಳಗೊಂಡಿದೆ. ಅಪಘಾತದ ಕುರಿತು ರೈಲ್ವೆ ಸುರಕ್ಷತಾ ಆಯುಕ್ತ (CRS) ಹಾಗೂ ಸಿಬಿಐ ತನಿಖೆ ನಡೆಸುತ್ತಿದ್ದು, ಸಿಗ್ನಲ್ ದೋಷವೇ ಅಪಘಾತಕ್ಕೆ ಕಾರಣ ಎಂದು ಊಹಿಸಲಾಗುತ್ತಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಲೂಪ್ ಲೈನ್‌ನಲ್ಲಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 271 ಮಂದಿ ಸಾವನ್ನಪ್ಪಿದ್ದು, 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ನನ್ನ ಲಿವರ್ ಏನು ಕಬ್ಬಿಣದ್ದಾ? ಹಗಲು ರಾತ್ರಿ ಮದ್ಯಪಾನ ಆರೋಪಕ್ಕೆ ಭಗವಂತ್ ಮಾನ್ ತಿರುಗೇಟು
ಚಿಕ್ಕಮಗಳೂರು: ಒಡಿಶಾ ತ್ರಿವಳಿ ರೈಲು ದುರಂತದಲ್ಲಿ (Odisha Train Tragedy) ಸುಮೇದ್ ಸಿಖರ್ಜಿ ಯಾತ್ರೆಗೆಂದು ಹೊರಟಿದ್ದ 110 ಯಾತ್ರಿಕರು ಬದುಕುಳಿದಿದ್ದು, ಈ ಪೈಕಿ ಒಬ್ಬ ಯಾತ್ರಿಕ (Pilgrim) ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಳಸ (Kalasa) ತಾಲೂಕಿನ ಕಳಕೋಡು ನಿವಾಸಿ ಧರ್ಮಪಾಲಯ್ಯ (72) ಮೃತ ದುರ್ದೈವಿ. ಇವರು ಸೇರಿದಂತೆ 110 ಯಾತ್ರಿಕರು ಸುಮೇದ್ ಸಿಖರ್ಜಿ ಯಾತ್ರೆಗೆಂದು ಬೆಂಗಳೂರಿನಿಂದ ರೈಲಿನಲ್ಲಿ ಹೊರಟ್ಟಿದ್ದರು. ಒಡಿಶಾದಲ್ಲಿ ತ್ರಿವಳಿ ರೈಲು ದುರಂತ ನಡೆದ ಸಂದರ್ಭದಲ್ಲಿ ಯಾತ್ರೆಗೆ ತೆರಳುತ್ತಿದ್ದ ಈ 110 ಕನ್ನಡಿಗರೂ ಬದುಕುಳಿದಿದ್ದರು. ಇದನ್ನೂ ಓದಿ: ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟ ಹಣ್ಣು ತಿಂದು ಯುವತಿ ಸಾವು!
ಬಳಿಕ ಸುಮೇದ್ ಸಿಖರ್ಜಿ ಯಾತ್ರೆಗೆ ತೆರಳಿದ ಅವರು, ಯಾತ್ರೆ ಮುಗಿಸಿ ಹಿಂದಿರುಗುವಾಗ ಉತ್ತರ ಪ್ರದೇಶದ (Uttar Pradesh) ಮಿರ್ಜಾಪುರ (Mirzapur) ರೈಲ್ವೇ ಸ್ಟೇಷನ್‌ನಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಶವ ಪರೀಕ್ಷೆಗಾಗಿ ಅವರ ಸಂಬಂಧಿಕರು ಮಿರ್ಜಾಪುರ ಸರ್ಕಾರಿ ಆಸ್ಪತ್ರೆ ಬಳಿ ಕಾಯುತ್ತಿದ್ದಾರೆ. ಇದನ್ನೂ ಓದಿ: ಪ್ರೇಯಸಿಯನ್ನು ಕೊಂದು ಟ್ಯಾಂಕ್‌ನಲ್ಲಿ ಬಚ್ಚಿಟ್ಟ ಭೂಪ ಅಂಧರ್
ಭುವನೇಶ್ವರ: ದೇಶದ ರೈಲು ದುರಂತದ ಇತಿಹಾಸದಲ್ಲೇ ಒಡಿಶಾ ರೈಲು ಅಪಘಾತ (Odisha Train Accident) ಒಂದು ಕಪ್ಪು ಚುಕ್ಕೆ. ಮೂರು ರೈಲುಗಳು ಅಪಘಾತಕ್ಕೀಡಾಗಿದ್ದು, ಅಪಾರ ಸಾವು-ನೋವಿನ ದೃಶ್ಯಗಳು ಈಗಲೂ ಬೆಚ್ಚಿಬೀಳುಸುತ್ತವೆ. ಇಂತಹ ಭೀಕರ ಅಪಘಾತವಾದ ಬಳಿಕ ಏನೇನಾಯಿತು ಎಂಬ ವಿವರವನ್ನು ಇಲ್ಲಿ ಎಳೆಎಳೆಯಾಗಿ ಬಿಚ್ಚಿಡಲಾಗಿದೆ.
ಸಿಎಸ್‌ಗೆ ಮೊದಲ ಫೋನ್ ಕರೆ
ಅಂದು ಜೂನ್ 2 ರ ಸಂಜೆ 7 ರಿಂದ 7:10 ರ ಸಂದರ್ಭ. ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಅವರು ಬಾಲಸೋರ್ ಜಿಲ್ಲಾಧಿಕಾರಿ ದತ್ತಾತ್ರೇಯ ಪಿ ಶಿಂಧೆ ಅವರಿಂದ ಕರೆ ಸ್ವೀಕರಿಸಿದರು. “ಸರ್, ಒಂದು ರೈಲು ಹಳಿತಪ್ಪಿದೆ ಮತ್ತು ನಾನು ಸ್ಥಳಕ್ಕೆ ಹೋಗುತ್ತಿದ್ದೇನೆ” ಎಂದು ಶಿಂಧೆ ಹೇಳಿದರು. ಏನಾದರೂ ಅಗತ್ಯವಿದೆಯೇ ಎಂದು ಕೇಳಿದಾಗ ಜಿಲ್ಲಾಧಿಕಾರಿ ಸರಿಯಾಗಿ ಪ್ರತಿಕ್ರಿಯಿಸಲಿಲ್ಲ. ಸರಕು ರೈಲು ಹಳಿತಪ್ಪಿದರೂ ಸಹ, ODRAF ಮತ್ತು ಅಗ್ನಿಶಾಮಕ ಸೇವೆಗಳ ತಂಡಗಳ ಅಗತ್ಯವಿರುತ್ತದೆ. ಲೂಪ್ ಲೈನ್‌ಗೆ ತಪ್ಪಾಗಿ ಪ್ರವೇಶಿಸಿದ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ಸ್ಟ್ಯಾಟಿಕ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಲ್ಲದೇ ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಕೊನೆಯ ಮೂರು ಕೋಚ್‌ಗಳಿಗೂ ಡಿಕ್ಕಿ ಹೊಡೆದಿತ್ತು. ಅಪಘಾತದ ಸ್ಥಳಕ್ಕೆ ಮುಖ್ಯ ಕಾರ್ಯದರ್ಶಿ ಅವರು ಜಿಲ್ಲೆಯ ಎರಡು ತಂಡಗಳನ್ನು ಸಜ್ಜುಗೊಳಿಸಿದರು. ಇದನ್ನೂ ಓದಿ: ಒಡಿಶಾ ರೈಲು ದುರಂತ – ಪರಿಹಾರದ ಹಣಕ್ಕಾಗಿ ಮೃತ ವ್ಯಕ್ತಿಯನ್ನು ಪತಿ ಎಂದ ಮಹಿಳೆ
ಇದಾದ ಕೆಲವೇ ನಿಮಿಷಗಳಲ್ಲಿ ಬಾಲಸೋರ್ ಜಿಲ್ಲಾಧಿಕಾರಿಯಿಂದ ಮುಖ್ಯ ಕಾರ್ಯದರ್ಶಿಗೆ ಎರಡನೇ ಕರೆ ಬಂತು. “ಸರ್, ಇದು ರೈಲು ಅಪಘಾತ” ಎಂದರು. ಮರುನಿಮಿಷದಲ್ಲಿ ಅವರಿಗೆ ಮುಖ್ಯಮಂತ್ರಿ ಕಚೇರಿಯಿಂದ ಹಠಾತ್ ಕರೆ ಬಂತು. ಅಪಘಾತದ ವಿಚಾರ ಪ್ರಸ್ತಾಪಿಸಿದರು. “ಅಪಘಾತದ ಬಗ್ಗೆ ಮಾಹಿತಿ ಬಂದಿದೆ. ನಾನು ಹೇಳಿದ್ದೇನೆ. ಸ್ಥಳಕ್ಕೆ ODRAF ಮತ್ತು ಅಗ್ನಿಶಾಮಕ ಸೇವೆಗಳ ತಂಡಗಳನ್ನು ನಿಯೋಜಿಸಿದ್ದೇನೆ. ಡಿಸಿ ಅಲ್ಲಿಗೆ ತಲುಪಿದಾಗ, ಇನ್ನೂ ಏನು ಅಗತ್ಯವಿದೆ ಎಂದು ಅವರಿಗೆ ತಿಳಿಯುತ್ತೆ. ಯಾವುದೇ ಪರಿಸ್ಥಿತಿ ಇದ್ದರೂ, ನಿಭಾಯಿಸಲು ರಾಜ್ಯ ಮಟ್ಟದಲ್ಲಿ ತಯಾರಿ ನಡೆಸುತ್ತಿದ್ದೇನೆ” ಎಂದು ಸಿಎಸ್ ಪ್ರತಿಕ್ರಿಯಿಸಿದರು. ನಂತರ ಟಿವಿ ಆನ್ ಮಾಡಿ ಸುದ್ದಿ ವಾಹಿನಿಯಲ್ಲಿ ರಾತ್ರಿ 7:15ರ ಸುಮಾರಿಗೆ ಮೊದಲ ದೃಶ್ಯಾವಳಿಗಳನ್ನು ನೋಡಿದಾಗ, ಮೇಜರ್ ಇದೆ ಎಂಬುದು ನಮಗೆ ಸ್ಪಷ್ಟವಾಯಿತು ಎಂದು ಸಿಎಸ್ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: PublicTV Explainer: ರಕ್ಷಾ ‘ಕವಚ’ ಇದ್ದಿದ್ರೆ ಒಡಿಶಾ ರೈಲು ದುರಂತ ತಪ್ಪಿಸಬಹುದಿತ್ತೆ?
ದುರಂತದ ತೀವ್ರತೆ ಮತ್ತು ಪ್ರಮಾಣವನ್ನು ಅರಿತ ಕೂಡಲೇ ರಾಜ್ಯ ಸರ್ಕಾರದ ಒಂಬತ್ತು ಹಿರಿಯ ಅಧಿಕಾರಿಗಳನ್ನು 45 ನಿಮಿಷಗಳಲ್ಲಿ ಬಾಲಸೋರ್‌ಗೆ ನಿಯೋಜಿಸಲಾಗಿದೆ. ಅವರಲ್ಲಿ ಎಸಿಎಸ್ ಸತ್ಯಬ್ರತ್ ಸಾಹು, ಕೈಗಾರಿಕಾ ಕಾರ್ಯದರ್ಶಿ ಹೇಮಂಡ್ ಶರ್ಮಾ, ಡಿಜಿ ಅಗ್ನಿಶಾಮಕ ಸೇವೆ ಸುಧಾಂಶು ಸಾರಂಗಿ, ಸಾರಿಗೆ ಆಯುಕ್ತ ಅಮಿತಾಭ್ ಠಾಕೂರ್ ಮತ್ತು ಡಿಜಿ ಜಿಆರ್‌ಪಿ ಇದ್ದರು. ಇದನ್ನೂ ಓದಿ: ಬಾಲಸೋರ್ ರೈಲು ಅಪಘಾತ – ತನಿಖೆ ಆರಂಭಿಸಿದ ಸಿಬಿಐ
ಕಂಟ್ರೋಲ್ ರೂಂನಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳ ತುರ್ತು ಸಭೆ ನಡೆಸಿದರು. “ಏನು ಬೇಕಾದರೂ ಮಾಡಿ. ಹಣದ ಬಗ್ಗೆ ಚಿಂತಿಸಬೇಡಿ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಡ್ರಾ ಮಾಡಿ” ಎಂದು ಸೂಚಿಸಿದರು. ಗಾಯಾಳುಗಳಿಗೆ ಚಿಕಿತ್ಸೆ, ಸಂತ್ರಸ್ತರಿಗೆ ಆಹಾರ ಎಲ್ಲವನ್ನೂ ಸೂಕ್ತ ರೀತಿಯಲ್ಲಿ ನಿರ್ವಹಿಸಿ ಎಂದು ಜೀವಗಳನ್ನು ಉಳಿಸುವ ಕುರಿತು ಸಭೆಯಲ್ಲಿ ಸಿಎಂ ಒತ್ತಿ ಹೇಳಿದರು.
ಇತ್ತ ಒಡಿಶಾ ಆರೋಗ್ಯ ಕಾರ್ಯದರ್ಶಿ ಶಾಲಿನಿ ಪಂಡಿತ್, ಜಿಲ್ಲೆಗೆ ಅಂಬುಲೆನ್ಸ್‌ಗಳನ್ನು ಸಜ್ಜುಗೊಳಿಸಿದರು. ರೋಗಿಗಳನ್ನು ಸ್ವೀಕರಿಸಲು ಸಿದ್ಧರಾಗಿರುವ ಬಾಲಾಸೋರ್ ಬಳಿಯ ಆಸ್ಪತ್ರೆಗಳನ್ನು ಎಚ್ಚರಿಸಿದರು. ಮೂರು ಗಂಟೆಗಳಲ್ಲಿ, ಅವರು 250 ಅಂಬುಲೆನ್ಸ್‌ಗಳು, SCB ವೈದ್ಯಕೀಯ ಕಾಲೇಜಿನಿಂದ 50 ವೈದ್ಯರು, ಬರಿಪಾದ ವೈದ್ಯಕೀಯ ಕಾಲೇಜಿನಿಂದ 30-40 ವೈದ್ಯರು ಮತ್ತು ಕೇಂದ್ರಪಾರಾ ಮತ್ತು ನೆರೆಯ ಜಾಜ್‌ಪುರದಿಂದ ಕೆಲವು ವೈದ್ಯರನ್ನು ಸಜ್ಜುಗೊಳಿಸಿದರು. ಬಾಲಾಸೋರ್‌ನಲ್ಲಿರುವ ಗ್ರೌಂಡ್ ಝೀರೋಗೆ “ಸಾಧ್ಯವಾದಷ್ಟು ಅಂಬುಲೆನ್ಸ್‌ಗಳನ್ನು ಕಳುಹಿಸಲು” ನೆರೆಯ ಭದ್ರಕ್ ಮತ್ತು ಜಾಜ್‌ಪುರದ ಡಿಸಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಸತ್ತಿದ್ದಾನೆಂದು ಹೆಣಗಳ ರಾಶಿಯಲ್ಲಿ ಇಟ್ಟಿದ್ದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ!
ಅಂಬುಲೆನ್ಸ್ ಜೊತೆಗೆ ಸ್ಥಳಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲಾಯಿತು. ಸಿಎಸ್ ಜೆನಾ ಅವರು ಸಾರಿಗೆ ಆಯುಕ್ತ ಅಮಿತಾಬ್ ಠಾಕೂರ್ ಅವರೊಂದಿಗೆ ಮಾತನಾಡಿದರು. ಪ್ರತಿಯಾಗಿ, ಬಾಲಸೋರ್, ಭದ್ರಕ್, ಜಾಜ್‌ಪುರ್ ಮತ್ತು ಬರಿಪದ ಜಿಲ್ಲೆಗಳ ಆರ್‌ಟಿಒಗಳಿಗೆ “ಕನಿಷ್ಠ 40 ಬಸ್‌ಗಳನ್ನು ಕಳುಹಿಸಲು” ಕೇಳಿದರು. “ರೈಲು ಅಪಘಾತದ ಎರಡು ಗಂಟೆಗಳ ಅವಧಿಯಲ್ಲಿ 40 ಅಂಬುಲೆನ್ಸ್‌ಗಳು, 40 ಬಸ್‌ಗಳು ಮತ್ತು 80 ವೈದ್ಯರು ಜಿಲ್ಲೆಯನ್ನು ತಲುಪಿದ್ದಾರೆ” ಎಂದು ಜೆನಾ ಹೇಳಿದರು.
9 ಅಧಿಕಾರಿಗಳ ನಿರಂತರ ಕೆಲಸ
ಅಗ್ನಿಶಾಮಕ ಸೇವೆಗಳ ಡಿಜಿ ಸುಧಾಂಶು ಸಾರಂಗಿ ಅವರು ಭುವನೇಶ್ವರದಿಂದ ಮೊದಲು ತಲುಪಿದರು. ನಂತರ ಎಸಿಎಸ್ ಸತ್ಯಬ್ರತ್ ಸಾಹು ಮತ್ತು ಕೈಗಾರಿಕಾ ಪ್ರಧಾನ ಕಾರ್ಯದರ್ಶಿ ಹೇಮಂತ್ ಶರ್ಮಾ ಹೋದರು. ಆ ಹೊತ್ತಿಗೆ, ಅಗ್ನಿಶಾಮಕ ಇಲಾಖೆಯ 15 ತಂಡಗಳು ಮತ್ತು ಎರಡು ODRAF ತಂಡಗಳು ಸ್ಥಳಕ್ಕೆ ತಲುಪಿದ್ದವು. ಮಧ್ಯರಾತ್ರಿಯ ವೇಳೆಗೆ ರಕ್ಷಣಾ ಸಿಬ್ಬಂದಿಗಳ ಸಂಖ್ಯೆ 400 ಆಗಿತ್ತು. ದುರಂತ ಸ್ಥಳದಲ್ಲಿ ಸತ್ಯಬ್ರತ್ ಸಾಹು, ಹೇಮಂತ್ ಶರ್ಮಾ, ಬಲವಂತ್ ಸಿಂಗ್, ಅರವಿಂದ್ ಅಗರ್ವಾಲ್, ಭೂಪಿಂದರ್ ಸಿಂಗ್ ಪುನಿಯಾ, ಸುಧಾಂಶು ಸಾರಂಗಿ, ದಯಾಳ್ ಗಂಗ್ವಾರ್, ಅಮಿತಾಭ್ ಠಾಕೂರ್, ಹಿಮಾಂಶು ಕುಮಾರ್ ಲಾಲ್ ಒಂಬತ್ತು ಅಧಿಕಾರಿಗಳು ಹಾಗೂ ಬಾಲಸೋರ್ ಜಿಲ್ಲಾಧಿಕಾರಿ ಮತ್ತು ಎಸ್ಪಿ ಜೊತೆಯಲ್ಲಿ ನಿರಂತರವಾಗಿ ಕೆಲಸ ಮಾಡಿದರು. ಇದನ್ನೂ ಓದಿ: ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ
3 ಹಂತಗಳಲ್ಲಿ ರಕ್ಷಣಾ ಕಾರ್ಯಾಚರಣೆ
ತುರ್ತು ಪರಿಸ್ಥಿತಿಯಲ್ಲಿ ಯಾರು ಪರಿಹಾರದ ಉಸ್ತುವಾರಿ ವಹಿಸಬೇಕು, ಗಾಯಗೊಂಡವರನ್ನು ಯಾರು ಸ್ವೀಕರಿಸಬೇಕು, ಮೃತದೇಹಗಳನ್ನು ಯಾರು ನಿರ್ವಹಿಸಬೇಕು ಎಂದು ಅಧಿಕಾರಿಗಳು ಒಬ್ಬಬ್ಬರಾಗಿ ಒಂದೊಂದು ಜವಾಬ್ದಾರಿ ವಹಿಸಿಕೊಂಡರು. ಮೊದಲ ಹಂತದಲ್ಲಿ, ಇನ್ನೂ ಜೀವಂತವಾಗಿರುವ ಪ್ರಯಾಣಿಕರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಬೇಕು. ನಂತರ ಟ್ರ್ಯಾಕ್‌ನಲ್ಲಿ ಮೃತದೇಹಗಳನ್ನು ಪಕ್ಕಕ್ಕೆ ಇರಿಸುವ ಕೆಲಸ ಮಾಡಿದರು. ಮೊದಲ 45 ನಿಮಿಷಗಳ ಕಾಲ, ಪ್ರಾಥಮಿಕವಾಗಿ ಶಿಂಧೆ ನೇತೃತ್ವದ ಸ್ಥಳೀಯ ಆಡಳಿತ, ಎಸ್ಪಿ ಮತ್ತು ಬಹನಾಗಾ ಜನರು ಪರಿಸ್ಥಿತಿಯನ್ನು ನಿಭಾಯಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವುದು, ಅಧಿಕಾರಿಗಳಿಗೆ ಅಗತ್ಯ ಸಹಾಯ ಒದಗಿಸುವುದು ಮತ್ತು ರಕ್ತದಾನ ಮಾಡುವ ಮೂಲಕ ಸ್ಥಳೀಯರು ಸಾಥ್ ನೀಡಿದರು.
ಅಷ್ಟೊತ್ತಿಗಾಗಲೇ ಕತ್ತಲಾವರಿಸಿತ್ತು. ಕತ್ತಲಿನಲ್ಲಿ ರಕ್ಷಣೆ ಕಾರ್ಯಾಚರಣೆ ಮಾಡುವುದು ಕಷ್ಟ ಎಂಬುದು ಅಧಿಕಾರಿಗಳಿಗೆ ಅರಿವಾಗಿದ್ದರಿಂದ ಮುಂಚೆಯೇ ಒಂದಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಇಡೀ ಪ್ರದೇಶವನ್ನು ಬೆಳಗಿಸುವುದು ಮೊದಲ ಕೆಲಸವಾಗಿತ್ತು. ನಾವು 53 ಲೈಟ್ ಟವರ್‌ಗಳನ್ನು ಮತ್ತು ಜನರೇಟರ್‌ಗಳನ್ನು ಸ್ಥಾಪಿಸಿದ್ದರು. ಇದರಿಂದ ರಕ್ಷಣಾ ಕಾರ್ಯಾಚರಣೆಗಳು ನಡೆಯಿತು. ಎರಡನೇ ಕೆಲಸ ಗಾಯಾಳುಗಳನ್ನು ಸ್ಥಳಾಂತರಿಸುವುದಾಗಿತ್ತು. ಸ್ಥಳೀಯ ಸಾರ್ವಜನಿಕರು ಮತ್ತು ಅಧಿಕಾರಿಗಳು ಒಟ್ಟಿಗೆ ಕೆಲಸ ಮಾಡಿದ್ದರಿಂದ ಗಾಯಾಳುಗಳ ಸ್ಥಳಾಂತರವು ತಕ್ಷಣವೇ ಪ್ರಾರಂಭವಾಯಿತು. ಹೊಸ ತಂಡಗಳು ಆಗಮಿಸುತ್ತಿದ್ದಂತೆ ಅಧಿಕಾರಿಗಳಿಗೆ ಮತ್ತಷ್ಟು ಬಲ ಹೆಚ್ಚಾದಂತಾಯಿತು. ಹೀಗೆ ನಿರಂತರ ಕಾರ್ಯಾಚರಣೆ ನಡೆಸಿ ಮಧ್ಯರಾತ್ರಿ 12 ಗಂಟೆ ಹೊತ್ತಿಗೆ ಬದುಕುಳಿದು ಗಾಯಗೊಂಡಿದ್ದ ಎಲ್ಲರನ್ನೂ ಹೊರತೆಗೆದು ಆಸ್ಪತ್ರೆಗೆ ಸಾಗಿಸುವ ಕೆಲಸವಾಗಿತ್ತು. ಸರಿಸುಮಾರು 1,200 ಗಾಯಾಳುಗಳನ್ನು ರಕ್ಷಿಸಲಾಯಿತು. ಗಂಭೀರವಾಗಿ ಗಾಯಗೊಂಡವರನ್ನು ಅಂಬುಲೆನ್ಸ್ ಮೂಲಕ ಹಾಗೂ ಸಣ್ಣಪುಟ್ಟ ಗಾಯಗಳಾಗಿದ್ದವರನ್ನು ಬಸ್‌ಗಳ ಮೂಲಕ ಆಸ್ಪತ್ರೆಗೆ ಸಾಗಿಸುವ ಕೆಲಸವಾಯಿತು. ಹೀಗೆ ಮೂರು ಹಂತಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ರಕ್ಷಣಾ ಕಾರ್ಯದಲ್ಲಿ ಹಂತಹಂತವಾಗಿ ಎನ್‌ಡಿಆರ್‌ಎಫ್, ಸೈನ್ಯದವರು ರಕ್ಷಣಾ ತಂಡಗಳನ್ನು ಸೇರಿ ಸಾಥ್ ಕೊಟ್ಟರು. ಇದನ್ನೂ ಓದಿ: ಒಡಿಶಾ ರೈಲು ದುರಂತ ವಿಧ್ವಂಸಕ ಕೃತ್ಯವೇ? – ಪ್ರಾಥಮಿಕ ತನಿಖೆಯ ಬೆನ್ನಲ್ಲೇ ಎದ್ದಿವೆ ಹಲವು ಪ್ರಶ್ನೆಗಳು
ತಾಪಮಾನವು 39 ಮತ್ತು 40 ಡಿಗ್ರಿಗಳಿಗೆ ಏರುವುದರೊಂದಿಗೆ ಸುಡುವ ಬೇಸಿಗೆಯಲ್ಲಿ ಮೃತದೇಹಗಳನ್ನು ಸಂರಕ್ಷಿಸುವುದು ಮತ್ತೊಂದು ದೊಡ್ಡ ಸವಾಲಾಗಿತ್ತು. ಅಪಘಾತದ ಮರುದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿತ್ತು. ನಂತರ ಸ್ಥಳಕ್ಕೆ ವಿಐಪಿಗಳ ಭೇಟಿ, ಪರಿಶೀಲನೆ ಕಾರ್ಯವೂ ನಡೆಯಿತು. ಪ್ರಧಾನಿ ಮೋದಿ ಜೂನ್ 3 ರಂದು ಮಧ್ಯಾಹ್ನ ದುರಂತದ ಸ್ಥಳಕ್ಕೆ ತಲುಪಿದಾಗ, ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮೈದಾನದಲ್ಲಿದ್ದ ಅಧಿಕಾರಿಗಳನ್ನು ಕೇಳಿದರು. ಅದೇ ದಿನ ಬೆಳಿಗ್ಗೆ ಅಪಘಾತದ ಸ್ಥಳದಲ್ಲಿದ್ದ ಪಟ್ನಾಯಕ್, ಮೃತದೇಹಗಳನ್ನು ಸಂರಕ್ಷಿಸುವಲ್ಲಿ ರಾಜ್ಯಕ್ಕೆ ಬೆಂಬಲದ ಅಗತ್ಯವಿದೆ ಎಂದು ಪ್ರಧಾನಿ ಮೋದಿಯವರಿಗೆ ತಿಳಿಸಿದರು.
ಪ್ರಧಾನಿ ಮೋದಿ ಅವರು ಕೇಂದ್ರದ ಆರೋಗ್ಯ ಮಂತ್ರಿಗಳು ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ನಂತರ ಒಂದೊಂದು ಅಂಬುಲೆನ್ಸ್‌ನಲ್ಲಿ 2 ಮೃತದೇಹಗಳನ್ನು ಭುವನೇಶ್ವರದ ಏಮ್ಸ್‌ಗೆ ಸಾಗಿಸಲಾಯಿತು. ಅಲ್ಲಿ ಶವಗಳಿಗಾಗಿ 150 ಹಾಸಿಗೆಗಳ ಶವಗಾರದ ವ್ಯವಸ್ಥೆ ಮಾಡಲಾಗಿತ್ತು. ಹೀಗೆ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ಇದನ್ನೂ ಓದಿ: Odisha Train Accident; ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ – 233 ಮಂದಿ ಬಲಿ, 900 ಮಂದಿಗೆ ಗಾಯ
ಮೃತರು ಮತ್ತು ಗಾಯಾಳುಗಳ ಬಂಧುಗಳಿಗೆ ಪರಿಹಾರವನ್ನು ಘೋಷಿಸುವುದರಿಂದ ಹಿಡಿದು, ಸಿಕ್ಕಿಬಿದ್ದ ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ, ಗುರುತಿನ ನಂತರ ಮೃತದೇಹಗಳನ್ನು ಕುಟುಂಬಸ್ಥರು ಉಚಿತವಾಗಿ ಸಾಗಿಸುವುದು, ಮರಣ ಪ್ರಮಾಣಪತ್ರಗಳನ್ನು ಪಡೆಯುವ ಪ್ರಕ್ರಿಯೆ ಸುಲಭಗೊಳಿಸುವುದು, ಸಹಾಯ ಕೇಂದ್ರಗಳನ್ನು ಸ್ಥಾಪಿಸುವುದು ಮತ್ತು ಸಂತ್ರಸ್ತರಿಗೆ ಆಹಾರ ಒದಗಿಸುವುದು. ಹೀಗೆ ಅನೇಕ ಸವಾಲುಗಳು ಎದುರಾದವು. ಸಿಎಂ, ಅಧಿಕಾರಿಗಳು ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದರು.
ಬೆಂಗಳೂರು: ಒಡಿಶಾ ತ್ರಿವಳಿ ರೈಲು ದುರಂತ (Odisha Train Tragedy) ಸಂಭವಿಸಿದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (H.D.Deve Gowda) ಹೇಳಿದ್ದಾರೆ.
ಮಂಗಳವಾರ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ರೈಲು ದುರಂತದಿಂದ ಸಂಭವಿಸಿದ ಬಳಿಕ ಅಲ್ಲಿನ ಪರಿಸ್ಥತಿಯನ್ನು ಸಹಜಸ್ಥಿತಿಗೆ ತರಲು ಅಶ್ವಿನಿ ವೈಷ್ಣವ್ ಅವರು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಈ ಹಂತದಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ
2024ರ ಚುನಾವಣೆಗೆ ವಿರೋಧ ಪಕ್ಷಗಳು ಒಗ್ಗೂಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾವು ಯಾವುದೇ ಚರ್ಚೆಯನ್ನು ಮಾಡಿಲ್ಲ. ಮೊದಲನೆಯದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ನಾವು ಬಯಸುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಜಾರ್ಖಂಡ್‍ನಲ್ಲಿ ತಪ್ಪಿತ್ತು ರೈಲು ದುರಂತ!
ಜೂನ್ 2ರಂದು ಒಡಿಶಾದ ಬಾಲಸೋರ್‌ನಲ್ಲಿ (Balasore) ತ್ರಿವಳಿ ರೈಲುಗಳು ಏಕಕಾಲಕ್ಕೆ ಡಿಕ್ಕಿಯಾದ ಪರಿಣಾಮ ಭಾರೀ ಪ್ರಮಾಣದ ನಷ್ಟವುಂಟಾಗಿದೆ. ಈ ಘಟನೆಯಲ್ಲಿ 278 ಮಂದಿ ಸಾವನ್ನಪ್ಪಿದ್ದು, 1,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರೈಲು ದುರಂತದ ತನಿಖೆಯನ್ನು ಸಿಬಿಐಗೆ (CBI) ಒಪ್ಪಿಸಿದ್ದು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎರಡು ದಿನಗಳ ಕಾಲ ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮತ್ತು ಪುನಃಸ್ಥಾಪನೆ ಕಾರ್ಯವನ್ನು ಮೇಲ್ವಿಚಾರಣೆ ಮಾಡಿದ್ದಾರೆ. ಇದನ್ನೂ ಓದಿ: ಕೇವಲ ಎರಡೂವರೆ ನಿಮಿಷದಲ್ಲಿ ಬ್ರೈನ್ ಆಪರೇಷನ್- ನಾರಾಯಣ ಹೆಲ್ತ್ ಸಿಟಿ ವೈದ್ಯರಿಂದ ಮಹತ್ತರ ಸಾಧನೆ
ಧಾರವಾಡ: ಚುನಾವಣಾ ಸಮಯದಲ್ಲಿ ನಾವು ಏನು ಭರವಸೆಗಳನ್ನು ಕೊಟ್ಟಿದ್ದೆವೋ ಅವುಗಳನ್ನು ಈಡೇರಿಸುವುದೇ ನಮ್ಮ ಗುರಿ. ಕೊಟ್ಟ ಮಾತುಗಳನ್ನು ನಾವು ಕಾರ್ಯರೂಪಕ್ಕೆ ತರುತ್ತೇವೆ ಎಂದು ಸಚಿವ ಸಂತೋಷ ಲಾಡ್ (Santhosh Lad) ಹೇಳಿಕೆ ನೀಡಿದ್ದಾರೆ.
ಧಾರವಾಡದ ಮುರುಘಾಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ (Congress) ಅಧಿಕಾರದ ಅಮಲು ಏರಿದೆ ಎಂಬ ಬಿಜೆಪಿ (BJP) ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಮೊನ್ನೆಯಷ್ಟೇ ನಾವು ಅಧಿಕಾರಕ್ಕೆ ಬಂದಿದ್ದೇವೆ. ಒಟ್ಟಾರೆ ನಮ್ಮ ಉದ್ದೇಶ ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವುದಾಗಿದೆ. ವಿಶೇಷವಾಗಿ ನಮ್ಮ ಗಮನ ಆ ಕಡೆ ಇರುತ್ತದೆ ಎಂದರು. ಇದನ್ನೂ ಓದಿ: ಕಂಡೀಷನ್‌ಗಳ ಮೂಲಕ ಗ್ಯಾರಂಟಿಗಳು ಜನರಿಗೆ ತಲುಪದಂತೆ ಕಾಂಗ್ರೆಸ್ ಷಡ್ಯಂತ್ರ ಮಾಡಿದೆ: ಪ್ರಹ್ಲಾದ್ ಜೋಶಿ
ಕರ್ನಾಟಕದಲ್ಲಿ ಅತೀ ಶೀಘ್ರದಲ್ಲೇ ತುರ್ತು ಪರಿಸ್ಥಿತಿ ಬರುತ್ತದೆ ಬರುತ್ತದೆ ಎಂಬ ಮಾಜಿ ಸಿಎಂ ಬೊಮ್ಮಾಯಿ (Basavaraj Bommai) ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಯಾವ ದೃಷ್ಟಿಯಿಂದ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಮುಂಬರುವ ದಿನಗಳಲ್ಲಿ ಅದಕ್ಕೆ ಉತ್ತರ ಸಿಗುತ್ತದೆ. ಸುಮ್ಮನೆ ಅವರೊಂದು ಹೇಳುವುದು ನಾವೊಂದು ಹೇಳುವುದು ಬೇಡ. ಬೊಮ್ಮಾಯಿ ಅವರು ಬಡತನ ಹಾಗೂ ಅಭಿವೃದ್ಧಿ ಬಗ್ಗೆ ಮಾತನಾಡುವುದು ಒಳ್ಳೆಯದು ಎಂದು ಹೇಳಿದರು. ಇದನ್ನೂ ಓದಿ: ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯದಲ್ಲಿ ನಕಲಿ ಜಾಬ್ ಕಾರ್ಡ್‌ಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಕಲಿ ಜಾಬ್ ಕಾರ್ಡ್ ಇರುವ ಬಗ್ಗೆ ಮಾಹಿತಿ ಬೇಕು. ನಕಲಿ ಜಾಬ್ ಕಾರ್ಡ್‌ಗೆ ಕೆಲವು ಮಾನದಂಡ ಹಾಕಿದ್ದೇವೆ. ನಕಲಿ ಎಂದು ಗೊತ್ತಾದರೆ ಅದನ್ನು ತೆಗೆಯುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: IAS ವರ್ಸಸ್ IPS: ರೂಪಾ ಮೌದ್ಗಿಲ್‌ಗೆ ಜಾಮೀನು
ಒಡಿಶಾ ರೈಲು ದುರಂತ (Odisha Train Tragedy) ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದುರಂತದಲ್ಲಿ 150ರಿಂದ 160 ಜನ ಕರ್ನಾಟಕದವರು ಇದ್ದರು. ಪುರಿ ಜಗನ್ನಾಥದಲ್ಲಿ ಇದ್ದವರು 17 ಜನ ವಾಪಸ್ ಬಂದಿದ್ದಾರೆ. 30ಕ್ಕೂ ಹೆಚ್ಚು ವಾಲಿಬಾಲ್ ಆಟಗಾರರನ್ನು ವಾಪಸ್ ಕರೆತರಲಾಗಿದೆ. ಯಾರಿಗೂ ತೊಂದರೆ ಆಗದಂತೆ 150-160 ಜನರನ್ನು ರಕ್ಷಣೆ ಮಾಡಲಾಗಿದೆ. ನನ್ನ ಮಾಹಿತಿ ಪ್ರಕಾರ ಯಾರಿಗೂ ತೊಂದರೆಯಾಗಿಲ್ಲ ಎಂದರು. ಇದನ್ನೂ ಓದಿ: ಪಶು ಸಂಗೋಪನಾ ಸಚಿವರನ್ನು ಮೆಂಟಲ್ ಆಸ್ಪತ್ರೆ ದಾಖಲಿಸಿ ಚೆಕ್ ಮಾಡಿಸ್ಬೇಕು: ಪ್ರಭು ಚವ್ಹಾಣ್ ಕಿಡಿ
– ರೈಲು ದುರಂತಕ್ಕೆ ಸಿಲುಕಿದ್ದ ಮಗನಿಗಾಗಿ 230 ಕಿಮೀ ದೂರದಿಂದ ಬಂದ ಅಪ್ಪನ ನಂಬಿಕೆ ಹುಸಿಯಾಗಲಿಲ್ಲ
ಭುವನೇಶ್ವರ: ಒಡಿಶಾ ರೈಲು ಅಪಘಾತದಲ್ಲಿ (Odisha Train Accident) ಮೃತಪಟ್ಟಿದ್ದಾನೆಂದು ನೂರಾರು ಶವಗಳ ರಾಶಿಯಲ್ಲಿ ಇಟ್ಟಿದ್ದ ತನ್ನ ಮಗನನ್ನು ಜೀವಂತವಾಗಿ ಗುರುತಿಸಿ ತಂದೆ ಹೊರ ತೆಗೆಸಿರುವ ಅಚ್ಚರಿಯ ಘಟನೆ ನಡೆದಿದೆ.
ರೈಲು ದುರಂತದಲ್ಲಿ ನಿಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದರು. ಈ ಮಾತನ್ನು ಒಪ್ಪಲು ನಿರಾಕರಿಸಿದ ತಂದೆ ತನ್ನ ಮಗನಿಗಾಗಿ ಕೋಲ್ಕತ್ತಾದಿಂದ ಬಾಲಾಸೋರ್‌ಗೆ 230 ಕಿಮೀ ಪ್ರಯಾಣ ಮಾಡಿದ್ದರು.
ಶವಗಾರದಲ್ಲಿ ಶವಗಳ ಮಧ್ಯೆ ಇರಿಸಿದ್ದ ಮಗನನ್ನು ಗುರುತಿಸಿ ಆತ ಬದುಕಿರುವುದನ್ನು ಖಚಿತ ಪಡಿಸಿಕೊಂಡರು. ನಂತರ ಒಡಿಶಾದಿಂದ ಮನೆಗೆ ಕರೆತಂದ ನಂತರ, ಮಗನನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಯ ಟ್ರಾಮಾ ಕೇರ್ ಘಟಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಗಂಭೀರ ಗಾಯಗಳ ಹೊರತಾಗಿಯೂ, ಬಿಸ್ವಜಿತ್ ಆರೋಗ್ಯ ಸ್ಥಿರವಾಗಿದೆ. ಇದನ್ನೂ ಓದಿ: 275 ಮಂದಿ ಸಾವನ್ನಪ್ಪಿದ ದುರಂತದ ಬೆನ್ನಲ್ಲೇ ಒಡಿಶಾದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು!
ಒಡಿಶಾದ ಬಾಲಾಸೋರ್ ಬಳಿ ಪ್ರಯಾಣಿಕರಿದ್ದ ಎರಡು ರೈಲು ಹಾಗೂ ಸರಕುಗಳಿದ್ದ ಒಂದು ರೈಲು ಅಪಘಾತಕ್ಕೀಡಾಗಿದ್ದವು. ಈ ಭೀಕರ ದುರಂತದಲ್ಲಿ ಸುಮಾರು 275 ಮಂದಿ ದುರ್ಮರಣಕ್ಕೀಡಾಗಿದ್ದಾರೆ. 1,100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಚ್ಚಿಬೀಳಿಸುವಂತಹ ದುರಂತಕ್ಕೆ ವಿಶ್ವಾದ್ಯಂತ ವಿಷಾದ ವ್ಯಕ್ತವಾಗಿತ್ತು. ಅಪಘಾತವು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.
ಭುವನೇಶ್ವರ: ಒಡಿಶಾ ರೈಲು ದುರಂತವಾಗಿ (Odisha Train Tragedy) 4 ದಿನ ಕಳೆದರೂ 275 ಮೃತರ ಪೈಕಿ, 101 ಮೃತದೇಹಗಳ ಗುರುತು ಇನ್ನೂ ಪತ್ತೆಯೇ ಆಗಿಲ್ಲ. ಕೇವಲ 55 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಈಸ್ಟರ್ನ್ ಸೆಂಟ್ರಲ್ ರೈಲ್ವೇಯ ವಿಭಾಗೀಯ ರೈಲ್ವೇ ಮ್ಯಾನೇಜರ್ ರಿಂಕೇಶ್ ರಾಯ್ ಅವರು ಈ ಸಂಬಂಧ ಮಾಹಿತಿ ನೀಡಿದ್ದಾರೆ. ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ- ಪತ್ರದ ಮೂಲಕ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ
ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ. ಅವರ ಪೈಕಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ. ಸುಮಾರು 200 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ 278 ಮಂದಿ ಪೈಕಿ, 101 ಮೃತದೇಹಗಳು ಇನ್ನೂ ಉಳಿದಿವೆ. ಅವರು ಯಾರೆಂಬ ಗುರುತು ಪತ್ತೆಯಾಗಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.
ಭುವನೇಶ್ವರದಲ್ಲಿ ಇರಿಸಲಾಗಿರುವ ಒಟ್ಟು 193 ಶವಗಳಲ್ಲಿ 80 ಶವಗಳನ್ನು ಗುರುತಿಸಲಾಗಿದೆ. ಅದರ ಪೈಕಿ 55 ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಬಿಎಂಸಿಯ ಸಹಾಯವಾಣಿ ಸಂಖ್ಯೆಗೆ 200 ಕ್ಕೂ ಹೆಚ್ಚು ಕರೆಗಳು ಬಂದಿವೆ. ಮೃತದೇಹಗಳನ್ನು ಗುರುತಿಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತಿದೆ ಎಂದು ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್‌ನ ಆಯುಕ್ತ ವಿಜಯ್ ಅಮೃತ್ ಕುಲಂಗೆ ಅವರು ತಿಳಿಸಿದ್ದಾರೆ. ಇದನ್ನೂ ಓದಿ: 275 ಮಂದಿ ಸಾವನ್ನಪ್ಪಿದ ದುರಂತದ ಬೆನ್ನಲ್ಲೇ ಒಡಿಶಾದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು!
ಒಡಿಶಾದ ಬಾಲಾಸೋರ್ ಬಳಿ ಪ್ರಯಾಣಿಕರಿದ್ದ ಎರಡು ರೈಲು ಹಾಗೂ ಸರಕುಗಳಿದ್ದ ಒಂದು ರೈಲು ಅಪಘಾತಕ್ಕೀಡಾಗಿದ್ದವು. ಈ ಭೀಕರ ದುರಂತದಲ್ಲಿ ಸುಮಾರು 275 ಮಂದಿ ದುರ್ಮರಣಕ್ಕೀಡಾಗಿದ್ದಾರೆ. 1,100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಚ್ಚಿಬೀಳಿಸುವಂತಹ ದುರಂತಕ್ಕೆ ವಿಶ್ವಾದ್ಯಂತ ವಿಷಾದ ವ್ಯಕ್ತವಾಗಿತ್ತು. ಅಪಘಾತವು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.
ಭುವನೇಶ್ವರ: ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ಎನಿಸಿಕೊಂಡ ಬಾಲಸೋರ್‌ನಲ್ಲಿ ನಡೆದ ರೈಲುಗಳ ಅಪಘಾತವಾಗಿ (Odisha Train Tragedy) ಇದೀಗ ಹಳಿಗಳನ್ನು ದುರಸ್ತಿ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಅಪಘಾತವಾಗಿ 51 ಗಂಟೆಗಳಲ್ಲಿ ಮೊದಲ ರೈಲು ಹಳಿಯಲ್ಲಿ ಸಂಚರಿಸಿದ್ದು, ಇದೀಗ ಕಾರ್ಯಾಚರಣೆ ಪುನರಾರಂಭವಾಗಿದೆ.
ಒಡಿಶಾದ (Odisha) ಬಾಲಸೋರ್‌ನಲ್ಲಿ (Balasore) ನಡೆದ ತ್ರಿವಳಿ ರೈಲು ಅಪಘಾತದಲ್ಲಿ (Train Accident) 275 ಜನರು ಸಾವನ್ನಪ್ಪಿದ್ದರು ಹಾಗೂ 1,100 ಕ್ಕೂ ಹೆಚ್ಚು ಜನರು ಗಾಯಗೊಂಡರು. ಘಟನೆ ಬಳಿಕ ದುರಸ್ತಿ ಮಾಡಲಾದ ಹಳಿಗಳ ಮೂಲಕ ಮೊದಲ ರೈಲು ಸಂಚರಿಸಿದ ಸಂದರ್ಭ ರೈಲ್ವೆ ಸಚಿವರು ಖುದ್ದಾಗಿ ಸ್ಥಳದಲ್ಲಿ ಹಾಜರಿದ್ದರು.
ಘಟನೆಯೇನು?
3 ರೈಲುಗಳಾದ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಹಾಗೂ ಗೂಡ್ಸ್ ರೈಲುಗಳ ನಡುವೆ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿತ್ತು. ಇದನ್ನು ಭಾರತದಲ್ಲೇ ಸಂಭವಿಸಿದ 3 ಅತ್ಯಂತ ಕೆಟ್ಟ ರೈಲ್ವೆ ಅಪಘಾತಗಳಲ್ಲಿ ಒಂದು ಎಂದು ಹೇಳಲಾಗಿದೆ.
ಕೋರಮಂಡಲ್ ಎಕ್ಸ್‌ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಅದರ ಹಲವು ಬೋಗಿಗಳು ಚದುರಿ ಹೋಗಿದ್ದವು. ಇದೇ ವೇಳೆ ಪಕ್ಕದ ಹಳಿಯಲ್ಲಿ ಹಾದು ಹೋಗುತ್ತಿದ್ದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ರೈಲಿಗೂ ಬೋಗಿಗಳು ಡಿಕ್ಕಿ ಹೊಡೆದು, ಅದರ ಕೆಲವು ಬೋಗಿಗಳೂ ಹಳಿ ತಪ್ಪಿದ್ದವು.