Tag: odissa

  • ಕಳಿಂಗ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ – ಲಕ್ನೋದಲ್ಲಿ 21 ವರ್ಷದ ಯುವಕನ ಬಂಧಿಸಿದ ಪೊಲೀಸರು

    ಕಳಿಂಗ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ – ಲಕ್ನೋದಲ್ಲಿ 21 ವರ್ಷದ ಯುವಕನ ಬಂಧಿಸಿದ ಪೊಲೀಸರು

    – ಕಳಿಂಗ ವಿವಿಯಲ್ಲಿ ಬಿಗಿಭದ್ರತೆ

    ಭುವನೇಶ್ವರ: ತೃತೀಯ ವರ್ಷದ ಬಿ.ಟೆಕ್ (B.tech) ವಿದ್ಯಾರ್ಥಿನಿ (Student) ತನ್ನ ಹಾಸ್ಟೆಲ್ ರೂಮ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಸ್ಸಾದ (Odissa) ಕಳಿಂಗ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆ (KIIT) ಕಾಲೇಜಿನಲ್ಲಿ ನಡೆದಿದೆ.

    ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಆಕೆಯನ್ನು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಆದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ಸಂಬಂಧಿಕರು ಇನ್ಫೋಸಿಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ : ಮಹಾಕುಂಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ ಕುಟುಂಬ ಪುಣ್ಯಸ್ನಾನ

    ವಿದ್ಯಾರ್ಥಿನಿಯು ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಕಾಲೇಜು ಆಡಳಿತ ಮಂಡಳಿ ಆರೋಪಿಸಿದ್ದು, ಈ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಿದೆ.

    ಭುವನೇಶ್ವರ ಡಿಸಿಪಿ ಪಿನಕ್ ಮಿಶ್ರಾ ಮಾಧ್ಯಮಗಳೊಂದಿಗೆ ಮಾತನಾಡಿ, ಆತ್ಮಹತ್ಯೆ ಪ್ರಚೋದನೆಯಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿ ವಿದ್ಯಾರ್ಥಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತನ ಮೊಬೈಲ್, ಲ್ಯಾಪ್‌ಟಾಪ್ ಮತ್ತು ಇನ್ನಿತರ ಇಲೆಕ್ಟ್ರಾನಿಕ್‌ ಉಪಕರಣಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ : 10ಕ್ಕೂ ಹೆಚ್ಚು ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ – ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

    ವಿದ್ಯಾರ್ಥಿನಿ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ, ಕೆಲವು ನೇಪಾಳಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ನ್ಯಾಯಕ್ಕಾಗಿ ಒತ್ತಾಯಿಸಿದರು. ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಿ ವಾತಾವರಣ ತಿಳಿಗೊಳಿಸಿದೆ ಎಂದು ಕಳಿಂಗ ವಿವಿ ತಿಳಿಸಿದೆ.

  • ಇಂದಿರಾ ಗಾಂಧಿ ಮುಕ್ತ ವಿವಿ ಪರೀಕ್ಷೆ ಬರೆದ 100ಕ್ಕೂ ಹೆಚ್ಚು ನಕ್ಸಲರು!

    ಇಂದಿರಾ ಗಾಂಧಿ ಮುಕ್ತ ವಿವಿ ಪರೀಕ್ಷೆ ಬರೆದ 100ಕ್ಕೂ ಹೆಚ್ಚು ನಕ್ಸಲರು!

    ಭುವನೇಶ್ವರ: ಜೀವನದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲು ಇಚ್ಛಿಸಿರುವ 100 ಕ್ಕೂ ಅಧಿಕ ನಕ್ಸಲರು ಪೊಲೀಸರಿಗೆ ಶರಣಾಗಿ ತಮ್ಮ ಶಿಕ್ಷಣ ಮುಂದುವರಿಸಲು ಇಂದಿರಾ ಗಾಂಧಿ ಮುಕ್ತ ವಿವಿ (ಇಗ್ನೋ) ನಡೆಸುವ ಪರೀಕ್ಷೆಯನ್ನು ಬರೆದಿದ್ದಾರೆ.

    ಇವರೆಗೂ ಒಡಿಸ್ಸಾದಲ್ಲಿ 120ಕ್ಕೂ ಅಧಿಕ ನಕ್ಸಲರು ಪೊಲೀಸರಿಗೆ ಶರಣಾಗಿದ್ದು, ಅದರಲ್ಲಿ 107 ಮಂದಿ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಜೂನ್ 21 ರಂದು ನಡೆದಿದ್ದು, ಬ್ಯಾಚುಲರ್ ಪ್ರಿಪರೇಟರಿ ಯೋಜನೆ (ಬಿಬಿಪಿ) ಅಡಿಯಲ್ಲಿ ಎಲ್ಲರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಈ ಪರೀಕ್ಷೆಯಲ್ಲಿ ಅವರು ಉತ್ತೀರ್ಣರಾದರೆ ಪದವಿಗೆ ಸೇರಲು ಅರ್ಹತೆ ಪಡೆಯುತ್ತಾರೆ ಎಂದು ಪರೀಕ್ಷಾ ಅಧಿಕಾರಿಗಳು ತಿಳಿಸಿದ್ದಾರೆ.

    ಯುವ ಜನತೆ ಉತ್ತಮ ಜೀವನ ರೂಪಿಸಿಕೊಳ್ಳಲು ಅವಕಾಶ ನೀಡುವ ಉದ್ದೇಶಕ್ಕಾಗಿ ಜಿಲ್ಲಾ ಆಡಳಿತವೇ ಅಭ್ಯರ್ಥಿಗಳ ಪರೀಕ್ಷಾ ವೆಚ್ಚವನ್ನು ಪಾವತಿಸಿತ್ತು. ಪರೀಕ್ಷೆ ಎದುರಿಸಿದ ಯುವಕ ಈ ವೇಳೆ ಪ್ರತಿಕ್ರಿಯೆ ನೀಡಿದ್ದು, ತಾವು ಸಮಾಜದ ಒಂದು ಭಾಗವಾಗಿರಲು ಇಚ್ಛಿಸುತ್ತೇವೆ. ಅದ್ದರಿಂದಲೇ ಪರೀಕ್ಷೆ ಬರೆಯುತ್ತಿದ್ದೇವೆ ಎಂದು ತಿಳಿಸಿದರು.

    ಛತ್ತೀಸ್‍ಗಢ ಹಾಗೂ ಒಡಿಶಾ ರಾಜ್ಯಗಳಲ್ಲಿ ನಕ್ಸಲ್ ಸಮಸ್ಯೆ ಹೆಚ್ಚಾಗಿದ್ದು, ಇತ್ತೀಚಿಗೆ ಹಲವರು ಪೊಲೀಸರಿಗೆ ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಯಾಗಿದ್ದರು. ಸದ್ಯ ಇವರಿಗೆ ಪುನರ್ ವಸತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಪೂರಕ ಯೋಜನೆಗಳನ್ನು ರೂಪಿಸಿದೆ. ಆದರೆ ಕಳೆದ ಕೆಲ ದಿನಗಳ ಹಿಂದೆ ಛತ್ತೀಸ್‍ಗಢದ ಸುಕ್ಮಾ ಪ್ರದೇಶದಲ್ಲಿ ಸಿಆರ್ ಪಿಎಫ್ ಯೋಧರ ವಾಹನವನ್ನ ನಕ್ಸಲರು ಬಾಂಬ್ ಇಟ್ಟು ಸ್ಫೋಟಿಸಿದ್ದರು. ಈ ವೇಳೆ 9 ಯೋಧರು ಮೃತಪಟ್ಟಿದ್ದರು. ಈ ಘಟನೆ ಬಳಿಕ ಕೇಂದ್ರ ಸರ್ಕಾರ ನಕ್ಸಲ್ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿತ್ತು.

  • ಶಾಸಕನನ್ನು ಮದ್ವೆಯಾಗಿದ್ದೀನೆಂದು ಒಡಿಶಾ ವಿಧಾನಸಭೆ ಮುಂಭಾಗ ಫಿನಾಯಿಲ್ ಕುಡಿದು ಮಹಿಳೆ ಆತ್ಮತ್ಯೆಗೆ ಯತ್ನ

    ಶಾಸಕನನ್ನು ಮದ್ವೆಯಾಗಿದ್ದೀನೆಂದು ಒಡಿಶಾ ವಿಧಾನಸಭೆ ಮುಂಭಾಗ ಫಿನಾಯಿಲ್ ಕುಡಿದು ಮಹಿಳೆ ಆತ್ಮತ್ಯೆಗೆ ಯತ್ನ

    ಭುವನೇಶ್ವರ: ಒಡಿಶಾದ ವಿಧಾನಸಭೆಯ ಮುಂಭಾಗ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

    ವಾರದ ಹಿಂದಷ್ಟೇ ಇದೇ ಮಹಿಳೆ ಒಡಿಶಾ ಸಿಎಂ ನಿವಾಸದ ಎದುರು ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಇಂದು ಮತ್ತೆ ವಿಧಾಸಭೆಯ ಮುಂಭಾಗ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

    ಆತ್ಮಹತ್ಯೆ ಯತ್ನಿಸಿದ ಮಹಿಳೆಯನ್ನು ಸೊನಾಲಿಕಾ ಮೊಹಂತಿ ಎಂದು ಗುರುತಿಸಲಾಗಿದ್ದು, ಈಕೆ ಬಿಜೆಡಿ ಶಾಸಕ ಬ್ರಾಜಾ ಕಿಶೋರ್ ಪ್ರಧಾನ್ ಅವರ ಹೆಂಡತಿ ಎಂದು ಹೇಳಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಕಿಶೋರ್ ಪ್ರಧಾನ್ ಅವರೊಂದಿಗೆ ಗುಟ್ಟಾಗಿ ಮದುವೆಯಾಗಿರುವುದಾಗಿ ಹೇಳಿದ್ದಾರೆ. ಆದರೆ ಶಾಸಕರಾದ ಕಿಶೋರ್ ಮಹಿಳೆಯ ಆರೋಪವನ್ನು ನಿರಾಕರಿಸಿದ್ದು, ಆಕೆಯನ್ನು ಮದುವೆಯಾಗಿಲ್ಲ ಎಂದು ಹೇಳಿದ್ದಾರೆ.

    ಸದನವನ್ನು ಮುಂದೂಡಲ್ಪಟ್ಟಿದ್ದ ವೇಳೆ ವಿಧಾನಸಭೆಯ ಗೇಟ್ ಬಳಿ ಆಗಮಿಸಿದ ಮೊಹಂತಿ, ಫಿನಾಯಿಲ್ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಕ್ಯಾಪಿಟಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.

    ಸೆಪ್ಟೆಂಬರ್ 7ರಂದು ಮೊಹಂತಿ, ಸಿಎಂ ನಿವಾಸದ ಎದುರು ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮೇ 17 ರಂದು ಶಾಸಕರ ಮನೆಯ ಗೇಟ್‍ನ ಕಂಬಿಗಳನ್ನ ಮುರಿದು ಒಳಗೆ ನುಗ್ಗಿದ್ದರು. ಅದಕ್ಕೂ ಮುಂಚೆ ಶಾಸಕರ ತವರು ಜಿಲ್ಲೆ ಅಂಗುಲ್‍ನಲ್ಲಿರುವ ಶಾಸಕರ ಮನೆ ಮುಂದೆ ಧರಣಿ ನಡೆಸಿದ್ದರು ಎಂದು ವರದಿಯಾಗಿದೆ.

    ಅಲ್ಲದೆ ಮೊಹಂತಿ ಅವರು ಶಾಸಕರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಜೊತೆಗೆ ಎಸ್‍ಡಿಜೆಎಮ್ ಕೋರ್ಟ್‍ನಲ್ಲಿ ಇದೇ ವರ್ಷ ಮೇ ನಲ್ಲಿ ಪ್ರಧಾನ್ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

  • ಬೆಂಗಳೂರು: ನಾಲಿಗೆಯನ್ನಷ್ಟೇ ಅಲ್ಲ ಯುವಕನ ಮರ್ಮಾಂಗವನ್ನೂ ಕತ್ತರಿಸಿದ್ರು!

    ಬೆಂಗಳೂರು: ನಾಲಿಗೆಯನ್ನಷ್ಟೇ ಅಲ್ಲ ಯುವಕನ ಮರ್ಮಾಂಗವನ್ನೂ ಕತ್ತರಿಸಿದ್ರು!

    ಬೆಂಗಳೂರು: ದುಷ್ಕರ್ಮಿಗಳು ಯುವಕನೊಬ್ಬನ ನಾಲಿಗೆ ಮತ್ತು ಮರ್ಮಾಂಗವನ್ನು ಕತ್ತರಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಒಡಿಸ್ಸಾ ಮೂಲದ 20 ವರ್ಷದ ಬಿಜು ನಾಯಕ್ ಹಲ್ಲೆಗೊಳಗಾದ ಯುವಕ. ಸದ್ಯ ಬಿಜು ನಗರದ ವೈದೇಹಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಗುರುವಾರ ರಾತ್ರಿ ಬಿಜು ನಾಯಕ್ ಮನೆಯಿಂದ ಹೊರಬಂದು ಮೂತ್ರ ವಿಸರ್ಜನೆ ಮಾಡುವಾಗ ಮುಸುಕು ಹಾಕಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಇಮ್ಮಡಿಹಳ್ಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಾಲಿಗೆ ಮತ್ತು ಮರ್ಮಾಂಗವನ್ನು ಕತ್ತರಿಸಿದ್ದಾರೆ. ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

    ಹಲ್ಲೆಗೊಳಗಾದ ಯುವಕ ರಾತ್ರಿಯಿಡೀ ಸ್ಥಳದಲ್ಲೇ ನರಳಾಡಿದ್ದು, ಬೆಳಗ್ಗೆ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಯುವಕ ಬಿಜುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    https://www.youtube.com/watch?v=vS_zZ4-wGLs

  • ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಯುವಕನ ನಾಲಿಗೆ ಕಟ್!

    ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಯುವಕನ ನಾಲಿಗೆ ಕಟ್!

    ಬೆಂಗಳೂರು: ದುಷ್ಕರ್ಮಿಗಳು ಯುವಕನೊಬ್ಬನ ನಾಲಿಗೆ ಕತ್ತರಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ.

    ಒಡಿಸ್ಸಾ ಮೂಲದ 20 ವರ್ಷದ ಯುವಕ ಬಿಜು ನಾಯಕ್‍ನನ್ನು ದುಷ್ಕರ್ಮಿಗಳು ಬಲವಂತವಾಗಿ ಕರೆದುಕೊಂಡು ಹೋಗಿ ನಾಲಿಗೆ ಕತ್ತರಿಸಿದ್ದಾರೆ. ಇದರಿಂದ ರಾತ್ರಿಯಿಡೀ ನೋವಿನಿಂದ ನರಳಾಡಿದ್ದ ಬಿಜು, ಬೆಳಗ್ಗೆ ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಸದ್ಯ ಆಸ್ಪತ್ರೆಯಲ್ಲಿ ಬಿಜು ಚಿಕಿತ್ಸೆ ಪಡೆಯುತ್ತಿದ್ದಾನೆ.

    ಈ ಕೃತ್ಯಕ್ಕೆ ಕಾರಣವೇನೆಂಬುದು ಸದ್ಯಕ್ಕೆ ತಿಳುದುಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.