Tag: officers

  • ಶಿವಮೊಗ್ಗ | ದೇವರ ಹುಂಡಿ ಹಣಕ್ಕೂ ಖನ್ನಾ ಹಾಕಿದ್ರಾ ಅಧಿಕಾರಿಗಳು?

    ಶಿವಮೊಗ್ಗ | ದೇವರ ಹುಂಡಿ ಹಣಕ್ಕೂ ಖನ್ನಾ ಹಾಕಿದ್ರಾ ಅಧಿಕಾರಿಗಳು?

    ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ (Thirthahalli) ತಾಲೂಕಿನ ಭಾವೈಕ್ಯತೆ ಕೇಂದ್ರವಾಗಿರುವ ಹಣಗೆರೆಕಟ್ಟೆಯ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದ ಹುಂಡಿ ಎಣಿಕೆಯ ಹಣಕ್ಕೂ ಅಧಿಕಾರಿಗಳು ಖನ್ನಾ ಹಾಕಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಗುರುವಾರ (ನ.7) ರಂದು ನಡೆದ ಹುಂಡಿ ಎಣಿಕೆಯಲ್ಲಿ ದೋಖಾ ನಡೆದಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೊಮ್ಮೆ ಮರು ಎಣಿಕೆ ಮಾಡಲಾಯಿತು. ಮರು ಎಣಿಕೆ ವೇಳೆ 77,000 ರೂ. ಹಣ ವ್ಯತ್ಯಾಸ ಕಂಡುಬಂದಿದೆ.ಇದನ್ನೂ ಓದಿ: ಅಬಕಾರಿ ಪೊಲೀಸರ ಭರ್ಜರಿ ಬೇಟೆ – 40,000ಕ್ಕೂ ಅಧಿಕ ಕಲಬೆರಕೆ ಮದ್ಯ ಜಪ್ತಿ

    ಹುಂಡಿಯ ಹಣ ಎಣಿಕೆಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಹಣಗೆರೆಕಟ್ಟೆ ದೇವಸ್ಥಾನದ ಆಡಳಿತ ಮಂಡಳಿ ತಹಶೀಲ್ದಾರ್‌ಗೆ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಗುರುವಾರವೇ ಮೇಲ್ನೋಟಕ್ಕೆ ಹಣದ ಕಂತುಗಳನ್ನು ಎಣಿಸಿದಾಗ ಹೆಚ್ಚುವರಿ ನೋಟುಗಳು ಕಂಡು ಬಂದಿದ್ದವು. ನಂತರ ಆ ಹಣವನ್ನು ತಾಲ್ಲೂಕು ಕಚೇರಿಯ ಖಜಾನೆಯಲ್ಲಿ ಇಡಲಾಗಿತ್ತು.

    ಶುಕ್ರವಾರ ಬೆಳಗ್ಗೆ ತಹಶೀಲ್ದಾರ್, ಡಿವೈಎಸ್‌ಪಿ ಸಮ್ಮುಖದಲ್ಲಿ ಬಿಗಿ ಬಂದೋಬಸ್ತ್ ಮೂಲಕ ಹಣವನ್ನು ಹಣಗೆರೆಕಟ್ಟೆಯ ದೇವಸ್ಥಾನಕ್ಕೆ ಸಾಗಿಸಿ ಮರುಎಣಿಕೆ ನಡೆಸಲಾಯಿತು. ಒಟ್ಟು 66 ಲಕ್ಷದ 4 ಸಾವಿರದ 950 ರೂ. ಹಣ ಕಾಣಿಕೆ ರೂಪದಲ್ಲಿ ದೇವಸ್ಥಾನಕ್ಕೆ ಸಂದಾಯವಾಗಿದೆ. ಹಣದ ಕಂತೆಯಲ್ಲಿ ಸರಿಯಾಗಿ ಎಣಿಕೆ ಮಾಡದ ಹಿನ್ನೆಲೆಯಲ್ಲಿ ಮೊದಲು ಎಣಿಸಿದ ಹಣಕ್ಕಿಂತ 77,930 ರೂಪಾಯಿ ಹಣ ಜಾಸ್ತಿ ಬಂದಿದೆ. ಈ ಸಂಬಂಧ ತಹಶೀಲ್ದಾರ್ ಅವರ ಮುಂದಿನ ನಡೆ ಏನಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

    ಇಂತಹ ಕೃತ್ಯ ನಡೆಸಿದ ಹಾಗೂ ಅದಕ್ಕೆ ಸಹಕಾರ ನೀಡಿದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಆಡಳಿತ ಮಂಡಳಿಯಿಂದ ಧಾರ್ಮಿಕ ದತ್ತಿ ಇಲಾಖೆ ಆಯುಕ್ತಕರಿಗೆ ದೂರು ನೀಡಲು ತೀರ್ಮಾನಿಸಿದ್ದು, ಒಟ್ಟಿನಲ್ಲಿ ಹುಂಡಿ ಹಣದ ಮರು ಎಣಿಕೆ ಪ್ರಕರಣದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಇನ್ನು ಯಾವ ತಿರುವು ಪಡೆಯಲಿದೆ ಎಂದು ಕಾದು ನೋಡಬೇಕಿದೆ.ಇದನ್ನೂ ಓದಿ: ಬಲ್ಲಾಳದೇವ ರಾಣಾ ಜೊತೆ ಕಾಂತಾರದ ಶಿವ

  • ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ – ರಾಜ್ಯದ 90 ಕಡೆ ಏಕಕಾಲದಲ್ಲಿ ದಾಳಿ

    ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ – ರಾಜ್ಯದ 90 ಕಡೆ ಏಕಕಾಲದಲ್ಲಿ ದಾಳಿ

    ಬೆಂಗಳೂರು: ಭ್ರಷ್ಟರನ್ನು ಬೇಟೆಯಾಡುವ ಸಲುವಾಗಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ರಾಜ್ಯದ 90 ಕಡೆ ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆದಿದೆ.

    17 ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಒಟ್ಟು 17 ಅಧಿಕಾರಿಗಳಿಗೆ ಸಂಬಂಧಿಸಿದಂತೆ ಒಟ್ಟು 75 ಕಡೆ ದಾಳಿ ಮಾಡಲಾಗಿದೆ. ಒಟ್ಟು 250 ಅಧಿಕಾರಿಗಳು ತಂಡದಿಂದ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ನೆರೆಮನೆಯಾತ ಸೀರೆ ಎಳೆದಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

    ಬೆಂಗಳೂರಿನ ಕೆಆರ್‌ಪುರದಲ್ಲಿ ಆರ್‌ಟಿಓ ಅಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು (Officers) ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಯ ಮನೆ, ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮೂರು ಕಡೆಗಳಲ್ಲೂ ಪರಿಶೀಲನೆ ಮುಂದುವರಿಯುತ್ತಿದೆ. ಇದನ್ನೂ ಓದಿ: ಆಂಧ್ರದಲ್ಲಿ ರೈಲು ದುರಂತ – 12 ರೈಲುಗಳ ಸಂಚಾರ ರದ್ದು

    ಚಂದ್ರಪ್ಪ ಪಾಲಿಕೆ ಎಆರ್‌ಓ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಚಂದ್ರಪ್ಪಗೆ ಸೇರಿದ ಮೂರು ಸ್ಥಳಗಳ ದಾಳಿ ನಡೆಸಲಾಗಿದೆ. ಇಬ್ಬರು ಎಸ್‌ಪಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದು, ವಂಶಿ ಕೃಷ್ಣ, ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇದನ್ನೂ ಓದಿ: ನಾಗರ ಹಾವು ಓಡಿಸಲು ಹೊಗೆ ಹಾಕಿದ ಕುಟುಂಬ- ಇಡೀ ಮನೆ ಭಸ್ಮ

    ಆರ್‌ಆರ್ ನಗರ ವಲಯ ಹೆಗ್ಗನಹಳ್ಳಿ ವಾರ್ಡ್ ಎಆರ್‌ಓ ಚಂದ್ರಪ್ಪ 30ನೇ ತಾರೀಕಿನಂದು ಲಂಚ (Bribe) ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಈ ಹಿನ್ನೆಲೆ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಸ್ಫೋಟ ಪ್ರಕರಣ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

    ಇನ್ನು ಕಾರ್ಮಿಕ ಇಲಾಖೆ ಡೆಪ್ಯೂಟಿ ಡೈರೆಕ್ಟರ್ ಶ್ರೀನಿವಾಸ್ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ಬೆಂಗಳೂರು ಹಾಗೂ ಕೊಳ್ಳೆಗಾಲ ಮನೆ ಮೇಲೆ ದಾಳಿ ನಡೆಸಿದ್ದು,ಲೋಕಾಯುಕ್ತ ಅಧಿಕಾರಿಗಳಿಂದ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಲಾಗಿದೆ. ಶ್ರೀನಿವಾಸ್‌ಗೆ ಸಂಬಂಧಿಸಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: ಬದಲಾಗುತ್ತಾ ನಮ್ಮ ಮೆಟ್ರೋ ಹೆಸರು?

    ದಾಳಿ ವೇಳೆ ಶ್ರೀನಿವಾಸ್ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆಯಾಗಿದೆ. ಶ್ರೀನಿವಾಸ್‌ಗೆ ಸೇರಿ ಉಪ್ಕಾರ್ ರೆಸಿಡೆನ್ಸಿ ಉಲ್ಲಾಳ್ ಮನೆಯಲ್ಲಿ ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿದ್ದು, ಶ್ರಿನಿವಾಸ್ ಮನೆ ಸೇರಿದಂತೆ ನಗರದ 9 ಕಡೆ ದಾಳಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಅದೇ ರೀತಿ ರಾಜ್ಯದ ಅನೇಕ ಜಿಲ್ಲೆಗಳಲ್ಲೂ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭೀಕರ ರೈಲು ದುರಂತ ಪ್ರಕರಣ- ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆ.28 ರಿಂದ 30 ರವರೆಗೆ ಮೈಸೂರು ಜಿಲ್ಲಾಡಳಿತ ಅಧಿಕಾರಿಗಳು ರಜೆ ಹಾಕುವಂತಿಲ್ಲ: ಜಿಲ್ಲಾಧಿಕಾರಿ ಸೂಚನೆ

    ಆ.28 ರಿಂದ 30 ರವರೆಗೆ ಮೈಸೂರು ಜಿಲ್ಲಾಡಳಿತ ಅಧಿಕಾರಿಗಳು ರಜೆ ಹಾಕುವಂತಿಲ್ಲ: ಜಿಲ್ಲಾಧಿಕಾರಿ ಸೂಚನೆ

    ಮೈಸೂರು: ಭಾನುವಾರದಿಂದ ಸಿಎಂ ಸಿದ್ದರಾಮಯ್ಯ (Siddaramaih) ಮೈಸೂರು (Mysuru) ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆ, ಆಗಸ್ಟ್ 28 ರಿಂದ 30 ರವರೆಗೆ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು (DC) ಸೂಚಿಸಿದ್ದಾರೆ.

    ಭಾನುವಾರದಿಂದ ಸಿಎಂ ಸಿದ್ದರಾಮಯ್ಯ ಮೈಸೂರು (Mysuru) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 27 ರಿಂದ 30 ರ ತನಕ ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದು, ಸೋಮವಾರ ಮೈಸೂರಿನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ. ಆ.30ರಂದು ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಚಾಲನೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಅಪರೇಷನ್ ಹಸ್ತ ಚರ್ಚೆ ಬೆನ್ನಲ್ಲೇ ರಹಸ್ಯವಾಗಿ ಸಿಎಂ ಭೇಟಿಯಾದ ಮತ್ತೊಬ್ಬ ಬಿಜೆಪಿ ಶಾಸಕ

    ದಿನಾಂಕ 27 ರಿಂದ 30 ರ ತನಕ 3 ದಿನಗಳ ಕಾಲ ಮೈಸೂರಿನಲ್ಲೇ ಸಿಎಂ ವಾಸ್ತವ್ಯ ಹೂಡಲಿರುವ ಕಾರಣ ದಿನಾಂಕ 28 ರಿಂದ 30 ರ ತನಕ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಅನಿವಾರ್ಯ ಕಾರಣಕ್ಕೆ ರಜೆ ಬೇಕಾದಲ್ಲಿ ಜಿ.ಪಂ ಸಿಇಒ ಮತ್ತು ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಇಸ್ರೋ ವಿಜ್ಞಾನಿಗಳ ಭೇಟಿಗೆ ಸೀಮಿತವಾದ ಪ್ರಧಾನಿ ಭೇಟಿ 

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫೇಕ್ ನ್ಯೂಸ್‌ಗಳ ಮೂಲ ಪತ್ತೆಹಚ್ಚಿ- ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

    ಫೇಕ್ ನ್ಯೂಸ್‌ಗಳ ಮೂಲ ಪತ್ತೆಹಚ್ಚಿ- ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ಫೇಕ್ ನ್ಯೂಸ್ (Fake News) ಹಾವಳಿ ಮಿತಿ ಮೀರಿದೆ. ಈ ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

    ಮಂಗಳವಾರ ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದರು. ಇದನ್ನೂ ಓದಿ: ಲಂಚ ಮುಕ್ತ ಕರ್ನಾಟಕ ಮಾಡುತ್ತೇವೆ: ಡಿಕೆಶಿ ಶಪಥ

    ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ (BJP) ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು  ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಾಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ ಮತ್ತು ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ – ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

    ಈ ಹಿಂದೆ ಬೆಂಗಳೂರು (Bengaluru) ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್‌ಚೆಕ್ (Fact Check) ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್‌ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು (Cyber Police) ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ಧವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬಿ.ಎಲ್ ಸಂತೋಷ್ ಬುಟ್ಟಿಯಲ್ಲಿ ಇಂತಹ ಚೇಳುಗಳೇ ಬಹಳ ಇರಬೇಕು: ಎಂಬಿ ಪಾಟೀಲ್

  • ಯೋಧನ ಗುಂಡಿನ ದಾಳಿಗೆ ಇಬ್ಬರು ಅಧಿಕಾರಿಗಳು ಸಾವು

    ಯೋಧನ ಗುಂಡಿನ ದಾಳಿಗೆ ಇಬ್ಬರು ಅಧಿಕಾರಿಗಳು ಸಾವು

    ಚಂಡೀಗಢ: ಗುಂಡಿನ ದಾಳಿಗೆ ಇಬ್ಬರು ಸೇನಾ ಅಧಿಕಾರಿಗಳು ಬಲಿಯಾಗಿರುವ ಘಟನೆ ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಭಾರತೀಯ ಸೇನೆಗೆ ಸೇರಿದ ಯೋಧನೇ ಇಬ್ಬರು ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಗ್ನಿಪಥ್‌ಗೆ ಭರ್ಜರಿ ಪ್ರತಿಕ್ರಿಯೆ – 4 ದಿನಕ್ಕೆ 94 ಸಾವಿರ ಅರ್ಜಿ

    ಅಧಿಕಾರಿಗಳು ಮಲಗಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 60 ಕಿ.ಮೀ ಒಳಗಿನ ಎಲ್ಲ ಟೋಲ್ ತೆರವಿಗೆ ಸೂಚಿಸಿದ್ರೂ ದ.ಕನ್ನಡ ಜಿಲ್ಲೆಯಲ್ಲಿದೆ 48 ಕಿ.ಮೀನಲ್ಲಿ 4 ಟೋಲ್

    ಯೋಧನೇ ಅಧಿಕಾರಿಗಳಿಗೆ ಗುಂಡು ಹಾರಿಸಿರುವ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

    Live Tv

  • ರಾಯರ ಹುಂಡಿಗೆ ಹರಿದು ಬಂತು ಕೋಟ್ಯಂತರ ರೂ. ಕಾಣಿಕೆ

    ರಾಯರ ಹುಂಡಿಗೆ ಹರಿದು ಬಂತು ಕೋಟ್ಯಂತರ ರೂ. ಕಾಣಿಕೆ

    ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

    ಮೇ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 2,27,42,499 ರೂ. ಸಂಗ್ರಹವಾಗಿದೆ. ಇನ್ನೂ ಸಂಗ್ರಹವಾದ ಕಾಣಿಕೆಯಲ್ಲಿ 5,14,735 ರೂಪಾಯಿ ನಾಣ್ಯಗಳು ಹಾಗೂ 2,22,27,764 ರೂಪಾಯಿ ನೋಟುಗಳಿವೆ. ಇದನ್ನೂ ಓದಿ: ದೇಶದ ಒಳಿತಿಗಾಗಿ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದವರಿಗೆ ಕೊಡುವ ಬೆಲೆ ಇದೆಯೇ?: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಪ್ರಶ್ನೆ

    31 ಗ್ರಾಂ ಬಂಗಾರ, 1660 ಗ್ರಾಂ ಬೆಳ್ಳಿಯಿದೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಇದನ್ನೂ ಓದಿ: ಸಚಿವ ಬಿ.ಸಿ ನಾಗೇಶ್ ಮನೆ ಮೇಲೆ NSUI ದಾಳಿ

    /p>

  • ಬೀದರ್‌ನಲ್ಲಿ ಇಂದು ಸಚಿವ ಆರ್ ಅಶೋಕ್ ಗ್ರಾಮವಾಸ್ತವ್ಯ

    ಬೀದರ್‌ನಲ್ಲಿ ಇಂದು ಸಚಿವ ಆರ್ ಅಶೋಕ್ ಗ್ರಾಮವಾಸ್ತವ್ಯ

    ಬೀದರ್: ಗಡಿ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿಂದು ರಾತ್ರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

    ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು ಸಾವಿರಾರು ಜನರ ಅಹವಾಲುಗಳನ್ನು ಸ್ವೀಕಾರ ಮಾಡಲಿದ್ದಾರೆ. ಈಗಾಗಲೇ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಿಕ್ಕೆ ಕಲಾ ತಂಡಗಳು, ಅಲಂಕೃತ ಎತ್ತಿನ ಬಂಡಿ ಸಿದ್ದವಾಗಿವೆ. ಇದನ್ನೂ ಓದಿ: ಬಟದ್ರವ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಮುಖ ಆರೋಪಿ ಅರೆಸ್ಟ್

    ಜಿಲ್ಲೆಯಾದ್ಯಂತ 25 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಸೇರುವ ನಿರೀಕ್ಷೆಯಿದೆ. ಆರ್ ಅಶೋಕ್ ಅವರ ಅಷ್ಟೇ ಅಲ್ಲದೇ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸರಿಗಮಪ ಖ್ಯಾತಿಯ ಹನುಮಂತ ಲಂಬಾಣಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಡಲಾಗುತ್ತಿದೆ. ಇದನ್ನೂ ಓದಿ: ತಲೆಗೆ ಕಲರ್ ಹಾಕೋ ರೇಟ್ ವಿಚಾರಕ್ಕೆ ಜಗಳ- ಕತ್ತರಿಯಿಂದ ಇರಿದು ಗ್ರಾಹಕನ ಕೊಲೆ

  • ಪ್ರಾದೇಶಿಕ ಅರಣ್ಯಾಧಿಕಾರಿಗಳ ಎರಡು ಮನೆಗಳ ಮೇಲೆ ಎಸಿಬಿ ದಾಳಿ

    ಪ್ರಾದೇಶಿಕ ಅರಣ್ಯಾಧಿಕಾರಿಗಳ ಎರಡು ಮನೆಗಳ ಮೇಲೆ ಎಸಿಬಿ ದಾಳಿ

    ಬೀದರ್: ನಗರದಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಎಸಿಬಿ ದಾಳಿ ಮಾಡಿದ್ದು, ಪ್ರಾದೇಶಿಕ ಅರಣ್ಯಾಧಿಕಾರಿಯೊಬ್ಬರ ಎರಡು ನಿವಾಸಗಳ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.

    ಸದ್ಯ ಯಾದಗಿರಿಯಲ್ಲಿ ಅರಣ್ಯ ಇಲಾಖೆಯ ಪ್ರಾದೇಶಿಕ ಅರಣ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ರಮೇಶ್ ಕನಕಟ್ಟಿ ನಿವಾಸಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಓಲ್ಡ್ ಆದರ್ಶ ಕಾಲೋನಿ ಹಾಗೂ ಚಿಟಗುಪ್ಪಾ ತಾಲೂಕಿನಲ್ಲಿರುವ ಉಡಬಾಳ ಗ್ರಾಮದಲ್ಲಿರುವ ನಿವಾಸದ ಮೇಲೆಯೂ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಹಿರಿಯ ವಕೀಲರು ಕಾಂಗ್ರೆಸ್ ಸಂಸ್ಕೃತಿಯ ವ್ಯಕ್ತಿಯಲ್ಲ: ಕಪಿಲ್ ಸಿಬಲ್ ವಿರುದ್ಧ ಗೆಹ್ಲೋಟ್ ಕಿಡಿ

    ಅಕ್ರಮ ಆಸ್ತಿಯನ್ನು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿಯ ಕಚೇರಿ ಸೇರಿದಂತೆ ಏಕಕಾಲಕ್ಕೆ ಮೂರು ಕಡೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಸಿಬಿ ಎಸ್‍ಪಿ ಅಮರನಾಥ ರೆಡ್ಡಿ ಮಾರ್ಗದರ್ಶನದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದು, ಅಕ್ರಮ ಆಸ್ತಿಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ.  ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಏಕಕಾಲದಲ್ಲಿ ಎಸಿಬಿ ದಾಳಿ

  • ಅಧಿಕಾರಿಗಳಿಗೆ ಹೆಂಡ್ತಿಗಿಂತ ಫೈಲ್ ಮೇಲೆ ಪ್ರೀತಿ ಜಾಸ್ತಿ: ಪ್ರತಾಪ್ ಸಿಂಹ

    ಅಧಿಕಾರಿಗಳಿಗೆ ಹೆಂಡ್ತಿಗಿಂತ ಫೈಲ್ ಮೇಲೆ ಪ್ರೀತಿ ಜಾಸ್ತಿ: ಪ್ರತಾಪ್ ಸಿಂಹ

    ಮೈಸೂರು: ಅಧಿಕಾರಿಗಳಿಗೆ ಹೆಂಡ್ತಿಗಿಂತ ಫೈಲ್ ಮೇಲೆ ಪ್ರೀತಿ ಜಾಸ್ತಿ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.

    ಇಂದು ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಸಂಸದರು ಗರಂ ಆದರು. ಅಧಿಕಾರಿಗಳಿಗೆ ಫೈಲ್ ಮೇಲೆ ಪ್ರೀತಿ ಜಾಸ್ತಿ ಇದೆ. ಆ ಪ್ರೀತಿಗಾಗಿ ತಮ್ಮ ಟೇಬಲ್‍ನಿಂದ ಫೈಲ್ ನಾ ಮುಂದಕ್ಕೆ ಕಳಿಸೋದೆ ಇಲ್ಲ. ಫೈಲ್ ಇಡ್ಕೊಂಡು ಕೂತು ಬಿಡುತ್ತಾರೆ. ಏನ್ ಕೆಲಸ ಮಾಡಿದ್ದೀರಾ ಅಂತಾ ಕೇಳಿದ್ರೆ, ಬರೀ ಹಳೆ ಸ್ಟೋರಿ ಹೇಳೋಕೆ ಶುರು ಮಾಡುತ್ತಾರೆ ಎಂದರು.

    ಇದೇ ವೇಳೆ ಕಾಂಗ್ರೆಸ್ ಶಾಸಕ ಎಚ್.ಪಿ. ಮಂಜುನಾಥ್ ಅವರು ಜೆಡಿಎಸ್ ಶಾಸಕ ಸಾರಾ ಮಹೇಶ್ ಕಾಲೆಳೆದರು. ಏ.. ಮಂಜು ವಿಧಾನಸೌಧದಲ್ಲಿ ಚರ್ಚೆ ಮಾಡೋಕೆ ನೀವು ಬಿಡಲ್ಲ. ಕೆಡಿಪಿ ಸಭೆಯಲ್ಲಿ ಚರ್ಚೆ ಮಾಡಿದ್ರೆ ಸರ್ಕಾರಕ್ಕೆ ಮುಟ್ಟಲ್ಲ. ನಾವು ಏನ್ ಮಾಡಬೇಕಪ್ಪ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸೂಕ್ಷ್ಮತೆ ಕಳೆದುಕೊಂಡ ಪಕ್ಷ: ಅಶ್ವಥ್ ನಾರಾಯಣ

    ಇನ್ನು ಸೀಮೆಎಣ್ಣೆ ನೀಡುವುದನ್ನು ಕೆ.ಆರ್. ನಗರ ಕ್ಷೇತ್ರಕ್ಕೆ ನಿಲ್ಲಿಸಿರುವುದನ್ನು ಸಾರಾ ಮಹೇಶ್ ಪ್ರಶ್ನಿಸಿದರು. ಜಿಲ್ಲೆಯ ಮೂರು ತಾಲೂಕುಗಳಿಗೆ ಮಾತ್ರ ಸೀಮೆಎಣ್ಣೆ ಕೊಡಲಾಗುತ್ತದೆ. ಉಳಿದ ತಾಲೂಕುಗಳಲ್ಲಿ ಸೀಮೆಎಣ್ಣೆ ನೀಡಲಾಗುತ್ತಿಲ್ಲ. ಕೆಆರ್ ನಗರ ಕ್ಷೇತ್ರದಲ್ಲಿ ಬಡವರು ಇಲ್ವಾ? ಪ.ಜಾತಿ, ಪ. ಪಂಗಡದವರು ಇಲ್ವಾ ಎಂದು ಕಿಡಿಕಾರಿದರು. ಈ ವೇಳೆ ಅಧಿಕಾರಿ, ಗ್ಯಾಸ್ ಬಳಕೆ ಹೆಚ್ಚಿರುವ ಕಾರಣ ಸೀಮೆಎಣ್ಣೆ ವಿತರಣೆ ನಿಲ್ಲಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಗಿಣಿಮೂಗಿನ ಹುಡುಗಿ ಜತೆ ಸಲ್ಲು ಸೀಕ್ರೆಟ್ ಮದುವೆ: ಫೋಟೋ ನೋಡಿ ನಕ್ಕರಾ ಸೋನಾಕ್ಷಿ ಸಿನ್ಹಾ

  • ಜಾರ್ಖಂಡ್ ದೋಣಿ ದುರಂತದಲ್ಲಿ 14 ಮಂದಿ ಸಾವು – ಸಿಎಂನಿಂದ 4 ಲಕ್ಷ ಪರಿಹಾರ ಘೋಷಣೆ

    ಜಾರ್ಖಂಡ್ ದೋಣಿ ದುರಂತದಲ್ಲಿ 14 ಮಂದಿ ಸಾವು – ಸಿಎಂನಿಂದ 4 ಲಕ್ಷ ಪರಿಹಾರ ಘೋಷಣೆ

    ರಾಂಚಿ: ಜಾರ್ಖಂಡ್‍ನ ಜಮ್ತಾರಾ ಜಿಲ್ಲೆಯ ಬಳಿಯ ನದಿಯಲ್ಲಿ ಇತ್ತೀಚೆಗಷ್ಟೇ ಪ್ರಯಾಣಿಕ ದೋಣಿ ಮುಳುಗಡೆಗೊಂಡಿದ್ದು, ಸೋಮವಾರ ಎನ್‌ಡಿಆರ್‌ಎಫ್ ತಂಡ ಆರು ಶವಗಳನ್ನು ಹೊರತೆಗೆದಿದ್ದಾರೆ ಮತ್ತು ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದೀಗ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜಾರ್ಖಂಡ್‍ನ ಜಮ್ತಾರಾದ ದಾಮೋದರ್ ನದಿಯ ಬಾರ್ಬೆಂಡಿಯಾ ಸೇತುವೆಯ ಬಳಿ ಶುಕ್ರವಾರ ದೋಣಿ ಮುಳುಗಿ ಈ ದುರಂತ ಸಂಭವಿಸಿದೆ. ಇದನ್ನೂ ಓದಿ:  ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ಬಯಲು- 1000 ಕೋಟಿಗೂ ಅಧಿಕ ಅಕ್ರಮ ಪತ್ತೆ

    ಸೋಮವಾರ ಆರು ಮೃತದೇಹಗಳು ಪತ್ತೆಯಾಗಿದ್ದು, ಭಾನುವಾರ ಎಂಟು ಮಂದಿ ಶವ ಪತ್ತೆಯಾಗಿತ್ತು. ಇನ್ನೂ ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಒಟ್ಟು ಈವರೆಗೂ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಜಮ್ತಾರಾ ಉಪ ಆಯುಕ್ತ ಫೈಜ್ ಅಹ್ಮದ್ ಮುಮ್ತಾಜ್ ತಿಳಿಸಿದ್ದಾರೆ.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಡೈವರ್‌ಗಳ ಹುಡುಕಾಟ ಬಹುತೇಕ ಮುಗಿದಿದೆ ಎಂದು ಅವರು ಹೇಳಿದರು. ಈ ಘಟನೆ ಕುರಿತಂತೆ ವಿಧಾನಸಭೆಯಲ್ಲಿ ನಿರ್ಸಾದ ಬಿಜೆಪಿ ಶಾಸಕಿ ಅಪರ್ಣಾ ಸೇನ್‍ಗುಪ್ತಾ ಅವರು ಕೇಳಿದ ಪ್ರಶ್ನೆಗೆ ಹೇಮಂತ್ ಸೋರೆನ್ ಅವರು, ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬದವರಿಗೆ ವಿಪತ್ತು ನಿರ್ವಹಣಾ ಇಲಾಖೆಯಿಂದ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ – ಭಕ್ತರಲ್ಲಿ ಸಂಭ್ರಮ

    ನದಿಗೆ ಅಡ್ಡಲಾಗಿರುವ ಬಾರ್ಬೆಂಡಿಯಾ ಸೇತುವೆ ಕಾರ್ಯರೂಪಕ್ಕೆ ತಂದಿದ್ದರೆ ಘಟನೆಯನ್ನು ತಪ್ಪಿಸಬಹುದಿತ್ತು ಎಂದು ವಿರೋಧ ಪಕ್ಷಗಳ ಹಲವಾರು ನಾಯಕರು ಆಡಳಿತ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ ಸೇತುವೆಯ ದುರಸ್ತಿ ಕಾರ್ಯಗಳು ಪೂರ್ಣಗೊಳ್ಳದ ಕಾರಣ ಜನರು ನದಿ ದಾಟಲು ನದಿ ಮಾರ್ಗದ ಮೂಲಕ ಹೋಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.