ಮೈಸೂರು: ಹಳೇ ಮೈಸೂರಿ (Old Mysuru) ನ ನಾಲ್ಕು ಜಿಲ್ಲೆಗಳಲ್ಲಿ ಮೋದಿ ಇವತ್ತು (ಭಾನುವಾರ) ಮಿಂಚಿನ ಸಂಚಾರ ನಡೆಸಲಿದ್ದಾರೆ. ಅಮಿತ್ ಶಾ (Amitshah) ಬಂದು ಹೋದ ಬಳಿಕ ಓಲ್ಡ್ ಮೈಸೂರಿಗೆ ಮೋದಿ ಎಂಟ್ರಿಯಾಗ್ತಿದ್ದು, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ರೋಡ್ ಶೋ ಮಾಡಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಬೇಟೆ ಮಾಡಲಿದ್ದಾರೆ. ಜೆಡಿಎಸ್ (JDS) ಭದ್ರ ಕೋಟೆಗಳಲ್ಲಿ ನಮೋ ಭರ್ಜರಿ ಕ್ಯಾಂಪೇನ್ ಮಾಡಲಿದ್ದು, ಜೆಡಿಎಸ್ ಕೋಟೆಗಳಲ್ಲಿ ಬಿಜೆಪಿ ಮತಕೀಳಲು ಮೋದಿ (Narendra Modi) ರಣತಂತ್ರ ನಡೆಸಲಿದ್ದಾರೆ. ಇದನ್ನೂ ಓದಿ: ಜೆ.ಪಿ.ನಡ್ಡಾ ರೋಡ್ ಶೋನಲ್ಲಿ ಜೂನಿಯರ್ ಮೋದಿ ಮೋಡಿ
50:50 ಇರೋ ಕ್ಷೇತ್ರಗಳಲ್ಲಿ ಮೋದಿ ಸೂತ್ರದ ಮೂಲಕ ಗೆಲ್ಲಲು ಬಿಜೆಪಿ (BJP) ತಂತ್ರ ನಡೆಸಿದ್ದು, ಓಲ್ಡ್ ಮೈಸೂರಿನಲ್ಲಿ ಸದ್ಯ ಬಿಜೆಪಿ ಬಲ 11 ಕ್ಷೇತ್ರ ಮಾತ್ರ. ಈ ಸಲ ಟಾರ್ಗೆಟ್ 25 ಟಾಸ್ಕ್ ಇಟ್ಟುಕೊಂಡು ಬಿಜೆಪಿಯಿಂದ ನಾನಾ ತಂತ್ರಗಾರಿಕೆ ಪ್ರಯೋಗ ನಡೆಸಲಿದ್ದಾರಂತೆ. ಚುನಾವಣೆ ಸಮೀಪ ಬಂದಾಗ ಮೈಸೂರು ಕರ್ನಾಟಕ ಅಖಾಡಗಳಲ್ಲಿ ಮೋದಿಯೇ ಬಿಜೆಪಿ ಟ್ರೆಂಡ್ ಚೇಂಜರ್ ಮಾಡಲಿದ್ದು, ಆ ಮೂಲಕ ಹಳೇ ಮೈಸೂರಿನಲ್ಲಿ ಮೋದಿ ಪ್ರಚಾರದ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಎಂಬ ಸಂದೇಶ ರವಾನಿಸಲಿದ್ದಾರೆ.
ಬೆಂಗಳೂರು: ಕರ್ನಾಟಕ ಕುರುಕ್ಷೇತ್ರದಲ್ಲಿ (Karnataka Election) ಚುನಾವಣಾ ಪ್ರಚಾರ ಕಣ ಕಾವೇರಿದ್ದು ಏಪ್ರಿಲ್ 29 ರಿಂದ ಮೇ 7ರವರೆಗೆ ಮೋದಿ (PM Narendra Modi) ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ.
6 ದಿನಗಳಲ್ಲಿ 20ಕ್ಕೂ ಹೆಚ್ಚು ರೋಡ್ ಶೋ, ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ವಿಶೇಷವಾಗಿ ಬಿಜೆಪಿ (BJP) ಪ್ರಾಬಲ್ಯ ಕಡಿಮೆ ಇರುವ ಹಳೇ ಮೈಸೂರು (Old Mysuru) ಭಾಗದಲ್ಲಿ ಈ ಬಾರಿ ಮೋದಿ ಸಮಾವೇಶ ಆಯೋಜನೆ ಆಗುತ್ತಿರುವುದು ವಿಶೇಷ.
ಯಾವ ದಿನ ಎಲ್ಲೆಲ್ಲಿ ಕಾರ್ಯಕ್ರಮ ಏಪ್ರಿಲ್ 29 – ಹುಮ್ನಾಬಾದ್, ವಿಜಯಪುರ, ಕುಡಚಿ, ಬೆಂಗಳೂರು ಉತ್ತರ ಏಪ್ರಿಲ್ 30 – ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರು ಮೇ 2 – ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರಗಿ ಮೇ 3 – ಮೂಡುಬಿದಿರೆ, ಕಾರವಾರ, ಕಿತ್ತೂರು ಮೇ 6 – ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾ., ಬೆಂಗಳೂರು ದಕ್ಷಿಣ ಮೇ 7 – ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಕೇಂದ್ರ ಇದನ್ನೂ ಓದಿ: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ: ಬಿಜೆಪಿ ವಿರುದ್ಧ ದೇಮ ಕಿಡಿ
ಮೈಸೂರು: ಹಳೆ ಮೈಸೂರು (Old Mysuru) ಭಾಗಕ್ಕೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru Mysuru Expressway) ನಮಗೆ ದೊಡ್ಡ ಶಕ್ತಿಯಾಗಿದೆ. ಅದಕ್ಕಾಗಿ ಮಂಡ್ಯದಲ್ಲೇ (Mandya) ಅದರ ಉದ್ಘಾಟನೆ ನೆರವೇರಿಸಿದ್ದೇವೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಾವುಟ ಹಾರಿಸುತ್ತೇವೆ. ಹಳೆ ಮೈಸೂರು ಭಾಗಕ್ಕೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ದೊಡ್ಡ ಶಕ್ತಿಯಾಗಿದೆ. ಅದಕ್ಕಾಗಿಯೇ ಪ್ರತಿ ಪಕ್ಷಗಳಿಂದ ಅಷ್ಟೊಂದು ಅಪಸ್ವರ ಕೇಳಿಬರುತ್ತಿದೆ. ಇದರೊಂದಿಗೆ ನರೇಂದ್ರ ಮೋದಿ (Narendra Modi) ಅವರ ಜಲಜೀವನ್ ಮಿಷನ್, ಕಿಸಾನ್ ಸಮ್ಮಾನ್ ಯೋಜನೆಗಳು ನಮ್ಮ ಪಕ್ಷಕ್ಕೆ ಬಲ ತುಂಬಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Mood Of Karnataka – `ಪಬ್ಲಿಕ್’ ಸರ್ವೆಯಲ್ಲಿ ಕರ್ನಾಟಕ ಕುರುಕ್ಷೇತ್ರ ಅತಂತ್ರ
ಮಂಡ್ಯದಲ್ಲಿ ಈ ಬಾರಿ ಬಿಜೆಪಿ ಧ್ವಜ (BJP Flag) ಹಾರಬೇಕು ಅನ್ನೋ ಕಾರಣಕ್ಕೆ ಎಕ್ಸ್‌ಪ್ರೆಸ್‌ವೇ ಅಲ್ಲಿಯೇ ಉದ್ಘಾಟಿಸಿದ್ದೇವೆ. ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ಹಳೆ ಮೈಸೂರು ಭಾಗದಲ್ಲಿ 15 ಸ್ಥಾನಗಳನ್ನು ಗೆಲ್ಲುವ ಗುರಿಯಿದೆ. ಕನಿಷ್ಠ 10 ಸ್ಥಾನಗಳನ್ನು ಈ ಭಾಗದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಶಪಥ ಮಾಡಿದ್ದಾರೆ. ಇದನ್ನೂ ಓದಿ: Mood Of Karnataka – ಮಲೆನಾಡು, ಮಧ್ಯ ಕರ್ನಾಟಕದಲ್ಲಿ ಹಿನ್ನಡೆಯಾದರೂ ಬಿಜೆಪಿಯೇ ದೊಡ್ಡ ಪಕ್ಷ
ಇದೇ ವೇಳೆ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಿ.ಎಸ್ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತೆ. ಯಾರೇ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ನಾನು ಪಕ್ಷದ ಕಾರ್ಯಕರ್ತನಾಗಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ದುಡಿಯುತ್ತೇನೆ ಎಂದು ನುಡಿದಿದ್ದಾರೆ.
ಚಿಕ್ಕಬಳ್ಳಾಪುರ: ಬಿಜೆಪಿ (BJP) ತೊರೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Kalyana Rajya Pragati Paksha) ಸ್ಥಾಪನೆ ಮಾಡಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhana Reddy) ಬಾಗೇಪಲ್ಲಿಯಲ್ಲಿ (Bagepalli) ಭಾನುವಾರ ಭರ್ಜರಿ ರೋಡ್ ಶೋ (Road Show) ನಡೆಸಿದ್ದಾರೆ.
ಬಾಗೇಪಲ್ಲಿಯ ಸುಂಕಲಮ್ಮ ದೇವಾಲಯದ ಬಳಿ ಪಕ್ಷದ ಮುಖಂಡ ಅರಿಕೆರೆ ಕೃಷ್ಣಾರೆಡ್ಡಿಯವರು ಜನಾರ್ದನ ರೆಡ್ಡಿಯವರನ್ನು ಸ್ವಾಗತಿಸಿಕೊಂಡರು. ರಾಷ್ಟ್ರೀಯ ಹೆದ್ದಾರಿ 44ರಲ್ಲಿ ರೆಡ್ಡಿಯವರ ಬೆಂಬಲಿಗ ನಾರಾಯಣಸ್ವಾಮಿ ನೇತೃತ್ವದಲ್ಲಿ ನೂರಾರು ಮಂದಿಯಿಂದ ಬೈಕ್ ರ್ಯಾಲಿ ನಡೆಯಿತು. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ
ನಗರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿದ ಜನಾರ್ದನ ರೆಡ್ಡಿ, ಅಂಬೇಡ್ಕರ್ ಹಾಗೂ ವಾಲ್ಮೀಕಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ನಗರದ ಹೊರವಲಯದ ಕೆಎಸ್‍ಆರ್‌ಟಿಸಿ (KSRTC) ಬಸ್ ಡಿಪೋ ರಸ್ತೆಯಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡರು. ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯ ಮಹಿಳೆಯರು ಸೇರಿದ್ದರು.
ಬೆಂಗಳೂರು: ಹಳೆ ಮೈಸೂರು (Old Mysuru) ಭಾಗವನ್ನ ಬಿಜೆಪಿ (BJP) ಕಬ್ಜ ಮಾಡಲು ಹೈಕಮಾಂಡ್ ಕೊಟ್ಟಿದ್ದ ಟಾಸ್ಕ್‌ನಲ್ಲಿ ರಾಜ್ಯ ಬಿಜೆಪಿ ನಾಯಕರು ಠುಸ್ ಆಗಿದ್ದಾರೆ.
6 ತಿಂಗಳ ಹಿಂದೆ ಟಾಸ್ಕ್ ಕೊಟ್ಟಾಗಲೇ ಮಂಡ್ಯ ಉಸ್ತುವಾರಿ ಸಚಿವರ ಫೈನಲ್ ಮಾಡುವಂತೆ ಸಿಎಂ (CM Basavaraj Bommai) ಅಮಿತ್ ಶಾ ಸೂಚಿಸಿದ್ದರು. ಆದರೆ ಸುಮ್ಮನಿದ್ದ ಸಿಎಂ ಇತ್ತೀಚಿಗೆ ಅಮಿತ್ ಶಾ (Amit Shah) ಮಂಡ್ಯಕ್ಕೆ ಬರುವ ಮುನ್ನ ಗೋಪಾಲಯ್ಯರನ್ನು ಬದಲಿಸಿ ಅಶೋಕ್‍ಗೆ ಹೊಣೆ ಕೊಟ್ಟಿದ್ದರು. ಮಂಡ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದು ಅಶೋಕ್ ಹಿಂದೆ ಸರಿದರು. ಇದನ್ನೂ ಓದಿ: ಕರ್ಮ ಯಾರನ್ನೂ ಬಿಡಲ್ಲ, ನಾನು ದೇವರನ್ನು ನಂಬ್ತೀನಿ: ಕುಸುಮಾ
ಸಿಎಂ ಇಂದಿಗೂ ಹೊಸ ಉಸ್ತುವಾರಿಯನ್ನು ನೇಮಿಸಲು ಆಗದೇ ಪರದಾಡುತ್ತಿದ್ದಾರೆ. ಹಿಂದಿನ ಉಸ್ತುವಾರಿ ಸಚಿವರಾದ ಗೋಪಾಲಯ್ಯ, ನಾರಾಯಣಗೌಡ ಪದೇ ಪದೇ ಬಲಾವಣೆಯಾಗಿರುವ ಮಂಡ್ಯ ಉಸ್ತುವಾರಿ ಪಡೆಯಲು ಹಿಂದೇಟು ಹಾಕಿದ್ದರೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕೂಡ ಚುನಾವಣೆ ಸಂದರ್ಭ ನನಗೆ ಯಾಕೆ ಉಸಾಬರಿ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರ ಮೂಲಕ ರಾಮ ಮಂದಿರ (Ram Temple) ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ರಾಜ್ಯ ಬಿಜೆಪಿ ಮುಂದಾಗಿದೆ.
ಹಳೆ ಮೈಸೂರು ಭಾಗದಲ್ಲಿ ಭರ್ಜರಿ ಮತ ಫಸಲು ತೆಗೆಯಲು ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆಯನ್ನು ಬಜೆಟ್ (Budget) ಮೂಲಕ ಮಾಡಿದೆ. ಇದನ್ನು ಇಷ್ಟಕ್ಕೆ ಸೀಮಿತಗೊಳಿಸದೇ, ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ಗುದ್ದಲಿ ಪೂಜೆಗೆ ಬಿಜೆಪಿ ಮುಂದಾಗಿದೆ. ಇದನ್ನೂ ಓದಿ: 42.63 ಕೋಟಿ ಆಸ್ತಿ ತೆರಿಗೆ ಬಾಕಿ – ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ತಂಡ ದಾಳಿ
ಮಾರ್ಚ್ ಮೊದಲ ವಾರದಲ್ಲಿ ಹಿಂದೂತ್ವ ಫೈರ್ ಬ್ರ್ಯಾಂಡ್, ಯುಪಿ ಸಿಎಂ ಯೋಗಿ ಆದಿತ್ಯನಾಥರನ್ನು ಕರೆಯಿಸಿ ಅವರ ಮೂಲಕವೇ ರಾಮಮಂದಿರಕ್ಕೆ ಅಡಿಗಲ್ಲು ಹಾಕಿಸಲು ಕೇಸರಿ ಪಡೆ ಪ್ಲಾನ್ ಮಾಡಿದ್ದು ಈ ಬೆಳವಣಿಗೆ ವಿಪಕ್ಷಗಳನ್ನು ಚಿಂತೆಗೀಡು ಮಾಡಿದಂತೆ ಕಾಣುತ್ತಿದೆ. ಇದನ್ನೂ ಓದಿ: 42.63 ಕೋಟಿ ಆಸ್ತಿ ತೆರಿಗೆ ಬಾಕಿ – ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ತಂಡ ದಾಳಿ.
ರಾಮ ಮಂದಿರ ವಿಚಾರ ಮುಂದಿನ ದಿನಗಳಲ್ಲಿ ರಾಮನಗರ ಹಾಗೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೆಳವಣಿಗೆಗೆ ಪೂರಕವಾಗಬಹುದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಬಿಜೆಪಿ (BJP) ಹಳೇ ಮೈಸೂರು (Old Mysuru) ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗುತ್ತಿದೆ. ತುಮಕೂರು ಮಹಾನಗರದಲ್ಲಿ ಯುವ ಸಮಾವೇಶ ನಡೆಸಿದರೆ, ಗುಬ್ಬಿಯಲ್ಲಿ ಮಹಿಳಾ ಸಮಾವೇಶ ನಡೆಸುತ್ತೇವೆ. ತುರುವೇಕೆರೆಯಲ್ಲಿ ರೈತ ಸಮಾವೇಶವಾದರೆ, ಅಲ್ಲಿಗೆ ಜಿಲ್ಲೆಯ ಎಲ್ಲ ಕಾರ್ಯಕರ್ತರು ಬರಲಿದ್ದಾರೆ. ಮೋರ್ಚಾಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕೇಂದ್ರ-ರಾಜ್ಯಗಳ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕೆಂದು ನಿರ್ಧರಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ನೇಮಕ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ: ಅಶ್ವಥ್ ನಾರಾಯಣ್
ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಸಂಚಾಲಕ, ಸಹ ಸಂಚಾಲಕರ ನೇಮಕವಾಗಿದ್ದು, ಇವತ್ತು ಸಭೆ ನಡೆಯುತ್ತಿದೆ. ಇದೇ 16ರಂದು ಎಲ್ಲ ಮೋರ್ಚಾಗಳ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ರಾಜ್ಯದ ಚುನಾವಣೆ ಪ್ರಕ್ರಿಯೆ ಬಳಿಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಐತಿಹಾಸಿಕ ಗೆಲುವು ಬಿಜೆಪಿಯದ್ದಾಗಲು ನಮ್ಮೆಲ್ಲ ಮೋರ್ಚಾಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಮೋರ್ಚಾ ಸಮಾವೇಶಗಳು ಬಿಜೆಪಿ ಗೆಲುವಿಗೆ ಪೂರಕ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭೆ ಉಪಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ಪಕ್ಷಕ್ಕೆ ಐತಿಹಾಸಿಕ ಗೆಲುವು ಲಭಿಸಿತ್ತು. ಹಳೆ ಮೈಸೂರು ಭಾಗಕ್ಕೆ ಪಕ್ಷ ಒತ್ತು ಕೊಡುತ್ತಿದೆ. ಫೆ.20ರಂದು ಯುವ ಮೋರ್ಚಾದ ಮೊದಲ ಸಮಾವೇಶವು ಮಂಡ್ಯ ನಗರದಲ್ಲಿ ನಡೆಯಲಿದೆ. ಕೇಂದ್ರದ ನಾಯಕರು ಬರುವ ನಿರೀಕ್ಷೆ ಇದೆ. ಕೇಂದ್ರ ನಾಯಕ ಅಮಿತ್ ಶಾ (Amit Shah) ಅವರು ಈಗಾಗಲೇ ಮಂಡ್ಯ ಭಾಗಕ್ಕೆ ಬಂದು ಹೋಗಿದ್ದಾರೆ. ಇದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ ಎಂದು ವಿವರಿಸಿದರು. ಇದನ್ನೂ ಓದಿ: ಮೋದಿ-ಅದಾನಿಯ ಪ್ರೀತಿ ಷಹಜಹಾನ್ – ಮಮ್ತಾಝ್‌ನಂತೆ, ಇದನ್ನ ಜನಕ್ಕೆ ತಿಳಿಸಬೇಕು – ನಲಪಾಡ್
50 ಲಕ್ಷ ಮತದಾರರ ಸದಸ್ಯತ್ವ ನೋಂದಣಿ
ಸಮಾವೇಶಗಳ ಮೂಲಕ 2 ಕೋಟಿ ಮತದಾರರನ್ನು ತಲುಪುವುದು, 50 ಲಕ್ಷ ಹೊಸ ಮತದಾರರನ್ನು ಸದಸ್ಯರನ್ನಾಗಿ ನೋಂದಣಿ ಮಾಡುವ ಗುರಿ ಇದೆ. ಪಕ್ಷದಲ್ಲಿರುವ 7 ಮೋರ್ಚಾಗಳಾದ ಯುವ ಮೋರ್ಚಾ, ಎಸ್ಸಿ ಮೋರ್ಚಾ, ಎಸ್ಟಿ ಮೋರ್ಚಾ, ಒಬಿಸಿ ಮೋರ್ಚಾ, ಮಹಿಳಾ ಮೋರ್ಚಾ, ರೈತ ಮೋರ್ಚಾ ಮತ್ತು ಅಲ್ಪಸಂಖ್ಯಾತ ಮೋರ್ಚಾಗಳನ್ನು ಸಕ್ರಿಯಗೊಳಿಸುವ ಗುರಿಯನ್ನು ಸಮಾವೇಶಗಳು ಹೊಂದಿವೆ. ಈ ಸಂದರ್ಭದಲ್ಲಿ ಪ್ರಧಾನಿಯವರ ಅಮೃತ್ ಕಾಲ್ ಯೋಜನೆಯನ್ನು ಸಾಕಾರಗೊಳಿಸಲು ಹಾಗೂ ದೇಶ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಳ್ಳಲು ಬಯಸುವ ಯುವಜನತೆಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
ಕೇಂದ್ರ ಹಾಗೂ ರಾಜ್ಯದ ಸರ್ಕಾರಗಳ ಸಾಧನೆಗಳನ್ನು ಜನತೆಯ ಮುಂದಿಡುವ ಮೂಲಕ ಅವರಿಗೆ ಅಭಿವೃದ್ಧಿಯ ವಿಚಾರವಾಗಿ ಪಕ್ಷ ಹೊಂದಿರುವ ದೂರದೃಷ್ಟಿತ್ವವನ್ನು ಮನದಟ್ಟು ಮಾಡುವುದು ನಮ್ಮ ಉದ್ದೇಶ ಎಂದರು. ಸಮಾವೇಶಗಳ ರಾಜ್ಯ ಸಹ ಸಂಚಾಲಕ ಜಗದೀಶ್ ಹಿರೇಮನಿ ಹಾಗೂ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
Live Tv
[brid partner=56869869 player=32851 video=960834 autoplay=true]
– ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಕಾಪ್ಟರ್ ಬಂದಿಳಿಯುತ್ತಾ?
ಬೆಂಗಳೂರು: ಓಲ್ಡ್ ಮೈಸೂರು (Old Mysuru) ಲಾಸ್ಟ್ ಗೇಮ್, ಫಸ್ಟ್ ಚಾನ್ಸ್ ಎಂಬ ತಂತ್ರ ಬಿಜೆಪಿಯದ್ದು (BJP). ಹಳೇ ಮೈಸೂರು ಭಾಗದಲ್ಲಿ ಮತ ಗಟ್ಟಿ ಮಾಡಿಕೊಳ್ಳಲು ನಾನಾ ಕಸರತ್ತು ನಡೆದಿದೆ. ಅದಕ್ಕೆ ಬಿಜೆಪಿ ಹೈಕಮಾಂಡ್ ಮೋದಿ (Narendra Modi) ಮೆಗಾ ಶೋ ನಡೆಸಲು ಪ್ಲ್ಯಾನ್ ಮಾಡುತ್ತಿದೆ.
ಬಿಜೆಪಿ ಡಬಲ್ ಎಂಜಿನ್ ಸರ್ಕಾರವು ಬೆಂಗಳೂರು (Bengaluru) – ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೆ ವಿಭಿನ್ನ ರೀತಿಯಲ್ಲಿ ಸಿದ್ಧತೆ ಮಾಡುತ್ತಿದೆ. ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಕಾಪ್ಟರ್‌ನಲ್ಲಿ ಬಂದಿಳಿಯುವ ಬಗ್ಗೆ ಬ್ಲೂಪ್ರಿಂಟ್ ರೆಡಿ ಆಗಿದೆ. ಅಷ್ಟೇ ಅಲ್ಲ ಎಕ್ಸ್‌ಪ್ರೆಸ್ ವೇನಲ್ಲಿ ಎಲೆಕ್ಟ್ರಿಕ್ ಕಾರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ಮೂಲಕ ವಿಭಿನ್ನವಾಗಿ ಕಾರಿಡಾರ್ ಉದ್ಘಾಟನೆಗೆ ಪ್ಲ್ಯಾನ್ ಮಾಡಿದ್ದಾರೆ.
ಎಕ್ಸ್‌ಪ್ರೆಸ್ ವೇ ಮಧ್ಯಭಾಗದಲ್ಲಿ ಹೆಲಿಕಾಪ್ಟರ್‌ನಲ್ಲಿ ಮೋದಿ ಬಂದಿಳಿಯಲು ಜಾಗವನ್ನು ಫೈನಲ್ ಮಾಡುತ್ತಿದ್ದಾರೆ. ರಾಮನಗರದ ಸಮೀಪ ಮೋದಿ ಹೆಲಿಕಾಪ್ಟರ್ ಇಳಿದ್ರೆ, ಅಲ್ಲಿಂದ ಎಲೆಕ್ಟ್ರಿಕ್ ವೆಹಿಕಲ್ ಮೂಲಕ ಒಂದು ಗಂಟೆಗಳ ಕಾಲ ಪ್ರಯಾಣ ಮಾಡುವ ಬಗ್ಗೆ ಸಿದ್ಧತೆ ನಡೆದಿದೆ.
ಅಂದಹಾಗೆ ಚುನಾವಣಾ ಸನಿಹದಲ್ಲಿ ಹಳೇ ಮೈಸೂರು ಭಾಗವನ್ನ ಗಮನದಲ್ಲಿಟ್ಟುಕೊಂಡು 4 ಜಿಲ್ಲೆಗಳ ಮೇಲೆ ಬಿಜೆಪಿ ಹೈಕಮಾಂಡ್ ಕಣ್ಣಿಟ್ಟಿದೆ. ಎಕ್ಸ್‌ಪ್ರೆಸ್ ವೇನಲ್ಲಿ ಎಲೆಕ್ಟ್ರಿಕ್ ವೆಹಿಕಲ್‌ನಲ್ಲಿ ಪ್ರಯಾಣಿಸಿ ಮೋದಿ ಮೈಸೂರಿನಲ್ಲೇ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವ ಬಗ್ಗೆ ಬ್ಲೂ ಪ್ರಿಂಟ್ ತಯಾರಾಗಿದೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ ಮೋದಿಯಿಂದಲೇ ಚುನಾವಣೆ ಕಹಳೆ ಊದಿಸಲು ಮೆಗಾ ಪ್ಲ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ವಿಧಾನಮಂಡಲ ಜಂಟಿ ಅಧಿವೇಶನ ಇಂದಿನಿಂದ ಆರಂಭ – ಸರ್ಕಾರದ ಸಾಧನೆ ಬಣ್ಣಿಸಿದ ರಾಜ್ಯಪಾಲ ಗೆಹ್ಲೋಟ್
ರಾಜ್ಯ ಸರ್ಕಾರವನ್ನೊಳಗೊಂಡಂತೆ ಪಕ್ಷ ಮತ್ತು ಸರ್ಕಾರಿ ಕಾರ್ಯಕ್ರಮಗಳು ಆಗುವಂತೆ ಸಿದ್ಧತೆ ನಡೆಸಿದ್ದು, ಮತಬೇಟೆಯ ಅಸಲಿ ಗೇಮ್ ಆರಂಭವಾಗ್ತಿದೆ. ಈ ನಡುವೆ ಬಿಜೆಪಿಯ ಪ್ಲ್ಯಾನ್‌ಗೆ ಪ್ರಧಾನಿ ಕಚೇರಿಯಿಂದ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಫೆಬ್ರವರಿ ಕಡೇ ವಾರದಲ್ಲಿ ಪ್ರಧಾನಿ ಕಚೇರಿಯಿಂದ ಒಪ್ಪಿಗೆ ಸಿಗುವ ವಿಶ್ವಾಸದಲ್ಲಿ ಬಿಜೆಪಿ ನಾಯಕರಿಂದ ಭರ್ಜರಿ ಸಿದ್ಧತೆ ನಡೆದಿದ್ದು, ಓಲ್ಡ್ ಮೈಸೂರು ಭಾಗದಲ್ಲಿ ಮೋದಿಯಿಂದಲೇ ಚುನಾವಣೆ ಕಹಳೆ ಊದಿಸುವ ಪ್ಲ್ಯಾನ್ ಸಕ್ಸಸ್ ಆಗುತ್ತಾ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ನಾನು ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ – ಶಿವಲಿಂಗೇಗೌಡರ ಮತ್ತೊಂದು ಆಡಿಯೋ ವೈರಲ್
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಹಳೇ ಮೈಸೂರು (Old Mysuru) ಭಾಗದ ಯಾತ್ರೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿಯೇ (HD Kumaraswamy) ಟಾರ್ಗೆಟ್ ಎನ್ನಲಾಗಿದೆ. ಉತ್ತರ ಕರ್ನಾಟಕದಲ್ಲಿ ಒಂದು ಲೆಕ್ಕ ಮಂಡ್ಯ, ಮೈಸೂರಲ್ಲಿ ಇನ್ನೊಂದು ಲೆಕ್ಕ ಎಂಬ ತಂತ್ರಗಾರಿಕೆ. ಸಿದ್ದರಾಮಯ್ಯ (Siddaramaiah) ಟಾರ್ಗೆಟ್ ಹೆಚ್‌ಡಿಕೆ. ಹಳೇ ಆಟದಲ್ಲಿ ಸಿದ್ದರಾಮಯ್ಯ ಸ್ವಲ್ಪ ಚೇಂಜ್ ಆಗ್ಬಿಟ್ರಾ ಎಂಬ ಚರ್ಚೆ ಜೋರಾಗಿದೆ. ಹೆಚ್‌ಡಿಕೆ ವಿರುದ್ಧ, ಗೌಡರ ಕುಟುಂಬದ ವಿರುದ್ಧ ಮೌನಾಸ್ತ್ರ ಪ್ರಯೋಗಿಸಿದ್ದ ಸಿದ್ದು ಬದಲಾದ್ರಾ ಎಂಬ ಪ್ರಶ್ನೆಗಳು ಎದ್ದಿವೆ.
ಅಂದಹಾಗೆ ಮುಸ್ಲಿಂ ಮತ ವಿಭಜನೆ ತಡೆಯಲು ಗುರು ಶಿಷ್ಯರಿಂದ ಮೌನಾಸ್ತ್ರ ಕೆಳಗಿಟ್ಟು ಯುದ್ಧ ಶುರು ಮಾಡಿದ್ದಾರೆ ಎಂಬುದು ಕಾಂಗ್ರೆಸ್ ಮೂಲಗಳ ಮಾಹಿತಿ. ಈಗಾಗಲೇ ಹೈದರಾಬಾದ್ ಕರ್ನಾಟಕದಲ್ಲಿ ನಿಂತು ಹೆಚ್‌ಡಿಕೆಗೆ ಗುದ್ದು ಕೊಟ್ಟಿದ್ದ ಸಿದ್ದು, ಜಮೀರ್ (Zameer Ahmed Khan) ಹಳೇ ಮೈಸೂರು ಭಾಗದ ಬಸ್ ಯಾತ್ರೆ ವೇಳೆ ಹೆಚ್‌ಡಿಕೆಯನ್ನೇ ಟಾರ್ಗೆಟ್ ಮಾಡಲು ಭರ್ಜರಿ ತಯಾರಿ ನಡೆಸಿದ್ದಾರಂತೆ. ಗೌಡರ ವಿರುದ್ಧ ಮಾತನಾಡದೇ ಹೆಚ್‌ಡಿಕೆಯನ್ನೇ ಗುರಿಯಾಗಿಸಿ ರಾಜಕೀಯ ದಾಳ ಉರುಳಿಸಲು ಪ್ಲ್ಯಾನ್ ನಡೆದಿದೆ. ಇದನ್ನೂ ಓದಿ: ಹೆಚ್‌ಡಿಕೆಗೆ ಚಕ್ರವ್ಯೂಹ, ಪುತ್ರ ನಿಖಿಲ್‌ಗೆ ಪದ್ಮವ್ಯೂಹ – ಏನಿದು ಬಿಜೆಪಿ ಗೇಮ್?
ಈಗಾಗಲೇ ಮುಸ್ಲಿಂ ಮತಗಳು (Muslims Votes) ವಿಭಜನೆ ಪ್ರಯತ್ನಿಸಿ ಹೆಚ್‌ಡಿಕೆ ಆರ್‌ಎಸ್‌ಎಸ್, ಬಿಜೆಪಿ ಮೇಲೆ ಮುಗಿಬೀಳುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ಕೊಡಬಾರದೆಂದು ಸಿದ್ದರಾಮಯ್ಯ ಖಡಕ್ ಸಂದೇಶ. ಜಮೀರ್ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಸಮಾಲೋಚನೆ ವೇಳೆ ಸಂದೇಶ ರವಾನಿಸಿದ್ದಾರೆ. ಹಾಗಾಗಿ ಅಹಿಂದ ಮತಗಳ ಮೇಲೆ ಕಣ್ಣು, ಹೆಚ್‌ಡಿಕೆ ಹಳೇ ಮೈಸೂರು ಟಾರ್ಗೆಟ್ ಸಕ್ಸಸ್ ಆಗುತ್ತಾ ಎಂಬ ಕುತೂಹಲವಿದೆ. ಹಾಗಾದ್ರೆ ಗುರು ಶಿಷ್ಯರ ಅಸ್ತ್ರವನ್ನ ಹೆಚ್‌ಡಿಕೆ ಒಬ್ಬರೇ ಎದುರಿಸ್ತಾರಾ? ಓಲ್ಡ್ ಮೈಸೂರಲ್ಲಿ ಓಲ್ಡ್ ಫೈಟ್ ಶುರುನಾ ಎಂಬುದನ್ನು ಕಾದುನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿಯ (BJP) ಆಪರೇಷನ್ ಕಮಲ ಕಾರ್ಯಾಚರಣೆಗೆ ಮತ್ತಷ್ಟು ಬಲ ಬಂದಿದೆ. ಆಪರೇಷನ್ ಕಮಲದ ಭಾಗವಾಗಿ ಸೋಮವಾರ ಹಾಸನ, ಮೈಸೂರು ಹಾಗೂ ರಾಮನಗರ ಭಾಗದ ಹಲವರು ಬಿಜೆಪಿ ಸೇರಿದ್ದಾರೆ.
ಬೆಂಗಳೂರಿನ (Bengaluru) ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel), ಸಚಿವ ಗೋಪಾಲಯ್ಯ ಸಮ್ಮುಖದಲ್ಲಿ ಹಲವರು ಸೋಮವಾರ ಪಕ್ಷ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಯುವ ಮುಖಂಡ ಕವೀಶ್‌ಗೌಡ ವಾಸು, ಜೆಡಿಎಸ್ ತಾಲೂಕು ಘಟಕದ ಮಾಜಿ ಅಧ್ಯಕ್ಷ ಸೋಮಶೇಖರ್, ಕಾಂಗ್ರೆಸ್ ಮಾಜಿ ಪದಾಧಿಕಾರಿ ವೆಂಕಟೇಶ್, ರೈತ ಸಂಘಟನೆ ಜಿಲ್ಲಾ ಅಧ್ಯಕ್ಷ ದಿವಾಕರ್ ಗೌಡ, ಕಾಂಗ್ರೆಸ್ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿವಿ ರಾಜಪ್ಪ, ಜೆಡಿಎಸ್ ಪರಾಜಿತ ಅಭ್ಯರ್ಥಿ ಗಿರೀಶ್ ನಾಶಿ, ಪುಣ್ಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಡಾ.ಪುಣ್ಯವತಿ ನಾಗರಾಜ್ ಅವರು ಬಿಜೆಪಿ ಸೇರಿದರು. ಬಿಜೆಪಿ ಸೇರ್ಪಡೆಗೊಂಡವರಿಗೆ ಪಕ್ಷದ ಬಾವುಟ ನೀಡಿ, ಶಾಲು ಹೊದಿಸಿ ಬರಮಾಡಿಕೊಳ್ಳಲಾಯಿತು.
ಕಾಂಗ್ರೆಸ್‌ನ ಮಾಜಿ ಶಾಸಕ ವಾಸು ಅವರ ಪುತ್ರ ಕವೀಶ್ ಗೌಡ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇವರು ಚಾಮುಂಡೇಶ್ವರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ ಎನ್ನಲಾಗಿದೆ. ಹುಣಸೂರು ಕ್ಷೇತ್ರದ ಪರಾಜಿತ ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಸಕಲೇಶಪುರದ ನಿವೃತ್ತ ಎಂಜಿನಿಯರ್ ವೆಂಕಟೇಶ್, ಅರಕಲಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವಾಕರ್ ಗೌಡ, ಹಾಸನದ ಕಾಂಗ್ರೆಸ್ ಮುಖಂಡ ಸಿವಿ ರಾಜಪ್ಪ, ಮಹಾಲಕ್ಷ್ಮಿ ಲೇಔಟ್‌ನ ಜೆಡಿಎಸ್ ಮುಖಂಡ ಗಿರೀಶ್ ನಾಶಿ ಹಾಗೂ ರಾಮನಗರದ ಡಾ. ಪುಣ್ಯವತಿ ನಾಗರಾಜ್ ಬಿಜೆಪಿ ಸೇರ್ಪಡೆಯಾದ ಪ್ರಮುಖರು. ಗಿರೀಶ್ ನಾಶಿಯವರು ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪರಾಜಿತ ಅಭ್ಯರ್ಥಿಯಾಗಿದ್ದರು.
ಬಿಜೆಪಿ ಸೇರಿದ ಬಳಿಕ ಮಾತಾಡಿದ ಕವೀಶ್ ಗೌಡ ವಾಸು, ನಾನು ಮೈಸೂರಿನ ಮಾಜಿ ಶಾಸಕ ವಾಸು ಅವರ ಪುತ್ರ. ವಿದ್ಯಾವಿಕಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟೀ ಸದಸ್ಯ. ನನ್ನ ತಂದೆಯವರ ಕ್ಷೇತ್ರದಲ್ಲಿ ರಾಜಕೀಯ, ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದೆ. ವಾಸು ಅವರು ಕಳೆದ 35 ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದಾರೆ. ಕಳೆದ ಸಲ ನಮ್ಮ ತಂದೆ ಸೋತಿದ್ದರು. ನಾನು ಬಿಜೆಪಿ, ತಂದೆ ಕಾಂಗ್ರೆಸ್ ಹೇಗೆ ಎನ್ನುವ ಪ್ರಶ್ನೆ ಸಹಜವಾಗಿ ಏಳುತ್ತದೆ. ಆದರೆ ನಾನು ಸೈದ್ಧಾಂತಿಕವಾಗಿ ಬಿಜೆಪಿ ಮೆಚ್ಚಿ, ಮೋದಿಯವರ ಕೆಲಸಗಳನ್ನು ಒಪ್ಪಿ ಬಿಜೆಪಿ ಸೇರಿದ್ದೇನೆ. ಪಕ್ಷವು ನನಗೆ ಏನೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಪಕ್ಷದ ಚಟುವಟಿಕೆಗಳಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಭಾಗವಹಿಸುತ್ತೇನೆ ಎಂದರು. ಇದನ್ನೂ ಓದಿ: ಬಿಜೆಪಿಗೆ ಸಿದ್ದರಾಮಯ್ಯ, ಖರ್ಗೆ, ಡಿಕೆಶಿ ಮಕ್ಕಳು ಬರ್ತಾರೆ: ಕಟೀಲ್
ಬಳಿಕ ಮಾತಾಡಿದ ಸಚಿವ ಗೋಪಾಲಯ್ಯ, ಮೈಸೂರು, ಹಾಸನ, ಬೆಂಗಳೂರಿನ ಅನೇಕರು ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಎಲ್ಲರಿಗೂ ಇಲ್ಲಿ ಉತ್ತಮ ಭವಿಷ್ಯ ಇದೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದೆ. ನಾನು ಸ್ವಇಚ್ಛೆಯಿಂದ ಬಿಜೆಪಿಗೆ ಬಂದೆ. ಪಕ್ಷ ನಮಗೆ ಎಲ್ಲಾ ಸ್ಥಾನಮಾನ ಕೊಟ್ಟಿದೆ. 2013 ರಲ್ಲಿ ಬಿಜೆಪಿ ಇಬ್ಭಾಗ ಆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಇಲ್ಲದಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ. ನಾವೆಲ್ಲಾ ಬಿಜೆಪಿಯಲ್ಲಿ ಒಂದಾಗಿದ್ದೇವೆ, 150+ ಸ್ಥಾನ ಗೆಲ್ಲುತ್ತೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನ ನಮ್ಮ ಪಕ್ಷ ಸೇರುತ್ತಾರೆ ಎಂದು ಗೋಪಾಲಯ್ಯ ತಿಳಿಸಿದರು.
ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತಾಡಿ, ಇದೀಗ ಹಳೆ ಮೈಸೂರು (Old Mysuru) ಭಾಗದ ಇತರ ಪಕ್ಷಗಳ ಹತ್ತಾರು ಪ್ರಮುಖರು ಬಿಜೆಪಿ ಸೇರಿದ್ದಾರೆ. ಪರಿವಾರ ವಾದ, ಕುಟುಂಬ ವಾದದಿಂದ ರಾಷ್ಟ್ರೀಯ ವಾದಕ್ಕೆ ಬಂದ ನಿಮಗೆಲ್ಲರಿಗೂ ಸ್ವಾಗತ. ದೇಶವನ್ನು ಸರ್ವತೋಮುಖ ಅಭಿವೃದ್ಧಿಯತ್ತ ಮುನ್ನಡೆಸುವ ನರೇಂದ್ರ ಮೋದಿಯವರ ಚಿಂತನೆಗೆ ಅನುಗುಣವಾಗಿ ಕ್ಷೇತ್ರ, ಮತಗಟ್ಟೆಗಳಲ್ಲಿ ನೀವು ಕೆಲಸ ಮಾಡುತ್ತೀರೆಂದು ಆಶಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯದ ಅಬಕಾರಿ ಸಚಿವ ಕೆ ಗೋಪಾಲಯ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್‌ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮೈಸೂರು ಜಿಲ್ಲೆ ಅಧ್ಯಕ್ಷ ಶ್ರೀವತ್ಸ, ಹಾಸನ ಜಿಲ್ಲೆ ಅಧ್ಯಕ್ಷ ಹೆಚ್‌ಕೆ ಸುರೇಶ್, ಮೈಸೂರು ಮಹಾಪೌರ ಶಿವಕುಮಾರ್, ಮಾಜಿ ಶಾಸಕ ಹೆಚ್ ವಿಶ್ವನಾಥ್ ಅವರು ಭಾಗವಹಿಸಿದ್ದರು. ಇದನ್ನೂ ಓದಿ: ಟಿಕೆಟ್ ಕೊಡಲು ‘ತ್ರೀ’ ಸೂತ್ರಕ್ಕೆ ಬಿಜೆಪಿ ಮೊರೆ
Live Tv
[brid partner=56869869 player=32851 video=960834 autoplay=true]