Tag: Ollie Pope

  • ಕೇವಲ 4 ರನ್‍ಗಳಿಂದ ಡಬಲ್ ಸೆಂಚುರಿ ಮಿಸ್; ಆದ್ರೂ ದಾಖಲೆ ಬರೆದ ಒಲೀ ಪೋಪ್!

    ಕೇವಲ 4 ರನ್‍ಗಳಿಂದ ಡಬಲ್ ಸೆಂಚುರಿ ಮಿಸ್; ಆದ್ರೂ ದಾಖಲೆ ಬರೆದ ಒಲೀ ಪೋಪ್!

    ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಂ ಇಂಡಿಯಾ (Team India) ಹಾಗೂ ಇಂಗ್ಲೆಂಡ್ (England)  ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಒಲೀ ಪೋಪ್ (Ollie Pope)  ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅವರು 278 ಎಸೆತಗಳಲ್ಲಿ 196 ರನ್‍ಗಳನ್ನು ಗಳಿಸಿದ್ದಾರೆ.

    163 ರನ್‍ಗಳಿಗೆ 5 ವಿಕೆಟ್ ನಷ್ಟ ಅನುಭವಿಸಿದ್ದ ಇಂಗ್ಲೆಂಡ್‍ಗೆ ಆಸರೆಯಾಗಿ ನಿಂತ ಪೋಪ್ 3ನೇ ದಿನದಾಟದಲ್ಲಿ 154 ಎಸೆತಗಳಲ್ಲಿ ಶತಕ ಬಾರಿಸಿದ್ದರು. ನಾಲ್ಕನೇ ದಿನದಾಟದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 196 ರನ್‍ಗಳಿಸಿ ವಿಕೆಟ್ ಒಪ್ಪಿಸಿದ ಅವರು, ಕೇವಲ 4 ರನ್‍ಗಳಿಂದ ದ್ವಿಶತಕ ವಂಚಿತರಾದರು. ಇದನ್ನೂ ಓದಿ: ‘ಜೈ ಶ್ರೀರಾಮ್‌ ಇಂಡಿಯಾ’: ವಿಶೇಷ ಪೋಸ್ಟ್‌ ಮೂಲಕ ರಾಮಮಂದಿರ ಪ್ರಾಣ ಪ್ರತಿಷ್ಠೆ ಆಚರಿಸಿದ ಡೇವಿಡ್‌ ವಾರ್ನರ್‌

    ಇನ್ನೂ ಈ ಮೊದಲು ಭಾರತದ ನೆಲದಲ್ಲಿ ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯಧಿಕ ರನ್‍ಗಳಿಸಿದ ಇಂಗ್ಲೆಂಡ್ ಬ್ಯಾಟರ್ ಅಲಿಸ್ಟರ್ ಕುಕ್ ಹೆಸರಿನಲ್ಲಿದ್ದ ದಾಖಲೆಯನ್ನು ಒಲೀ ಪೋಪ್ ಮುರಿದಿದ್ದಾರೆ. 2012 ರಲ್ಲಿ ಅಹಮದಾಬಾದ್‍ನಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಬ್ಯಾಟರ್ ಕುಕ್ 176 ರನ್ ಬಾರಿಸಿದ್ದರು. ಇದು ದಾಖಲೆಯಾಗಿತ್ತು. ಇದೀಗ ಪೋಪ್ ಆ ದಾಖಲೆಯನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ.

    ಆತಿಥೇಯ ಭಾರತ ತಂಡದ ವಿರುದ್ಧ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ ನಾಲ್ಕನೇ ಬ್ಯಾಟರ್ ಎಂಬ ದಾಖಲೆಯನ್ನು ಪೋಪ್ ಇದೀಗ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕ್ರಮವಾಗಿ ಆ್ಯಂಡಿ ಫ್ಲವರ್ (232), ಬ್ರೆಂಡನ್ ಮೆಕಲಂ (225) ಹಾಗೂ ಗ್ಯಾರಿ ಸೋಬರ್ಸ್ (198) ಇದ್ದಾರೆ. ಇದೀಗ 196 ರನ್ ಗಳಿಸುವ ಮೂಲಕ ಒಲೀ ಪೋಪ್ ನಾಲ್ಕನೆಯವರಾಗಿ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: IND vs ENG, 1st Test:‌ ಟೆಸ್ಟ್ ಸರಣಿ ಮೊದಲ ದಿನದಾಟ ಅಂತ್ಯ – ಟೀಂ ಇಂಡಿಯಾ ಸ್ಪಿನ್ನರ್ಸ್ ಮಿಂಚು, ಜೈಸ್ವಾಲ್‌ ಫಿಫ್ಟಿ

  • ಟೀಂ ಇಂಡಿಯಾಗೆ ಮಾರಕವಾಗಿದ್ದ ಬೆನ್ ಸ್ಟೋಕ್ಸ್ 2ನೇ ಟೆಸ್ಟ್‌ಗೆ ಅಲಭ್ಯ

    ಟೀಂ ಇಂಡಿಯಾಗೆ ಮಾರಕವಾಗಿದ್ದ ಬೆನ್ ಸ್ಟೋಕ್ಸ್ 2ನೇ ಟೆಸ್ಟ್‌ಗೆ ಅಲಭ್ಯ

    ಲಂಡನ್: ಬರ್ಮಿಂಗ್‍ಹ್ಯಾಮ್ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಪಡೆದು ಇಂಗ್ಲೆಂಡ್ ಗೆಲುವಿಗೆ ಕಾರಣರಾಗಿದ್ದ ಬೆನ್ ಸ್ಟೋಕ್ಸ್ 2ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

    ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಮದ್ಯ ಸೇವಿಸಿ ಬೀದಿ ಜಗಳದಲ್ಲಿ ಭಾಗಿಯಾಗಿದ್ದ ಆರೋಪ ಪ್ರಕರಣದಲ್ಲಿ ಸ್ಟೋಕ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಹೀಗಾಗಿ ಸ್ಟೋಕ್ಸ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವುದು ಅನಿವಾರ್ಯವಾಗಿದ್ದು 2ನೇ ಟೆಸ್ಟ್ ಪಂದ್ಯಕ್ಕೆ ಅಭ್ಯರಾಗಲಿದ್ದಾರೆ.

    ಒಂದೊಮ್ಮೆ ನ್ಯಾಯಾಲಯ ಪ್ರಕರಣದ ವಿಚಾರಣೆ ಮುಂದೂಡಿದರೆ ಸ್ಟೋಕ್ಸ್ ಪಂದ್ಯದಲ್ಲಿ ಭಾಗವಹಿಸಬಹುದಾಗಿದೆ. ಅಂದಹಾಗೇ ಸ್ಟೋಕ್ಸ್ ಬ್ರಿಸ್ಟಾಲ್ ಕ್ರೌನ್ ನ್ಯಾಯಾಲಯದಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಬೆನ್ ಸ್ಟೋಕ್ಸ್ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ಹಾಗೂ 2ನೇ ಇನ್ನಿಂಗ್ಸ್ ನಲ್ಲಿ ಕೊಹ್ಲಿ ವಿಕೆಟ್ ಸೇರಿದಂತೆ 4 ವಿಕೆಟ್ ಪಡೆದು ಮಿಂಚಿದ್ದರು. ಸ್ಟೋಕ್ಸ್ ಅಲಭ್ಯರಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್ ವೋಕ್ಸ್ ಇಂಗ್ಲೆಂಡ್ ಪರ ಆಡಲಿದ್ದಾರೆ.

    ಇಂಗ್ಲೆಂಡ್ ತಂಡದಲ್ಲಿ 2 ಟೆಸ್ಟ್ ಪಂದ್ಯಕ್ಕೆ ಮತ್ತೊಂದು ಬದಲಾವಣೆ ಮಾಡಲಾಗಿದ್ದು, ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಮಲಾನ್ ಸ್ಥಾನದಲ್ಲಿ ಆಲಿ ಪೋಪ್ ಆಯ್ಕೆ ಮಾಡಲಾಗಿದೆ. ಕೌಂಟಿ ಕ್ರಿಕೆಟ್ ನಲ್ಲಿ ಸರ್ರೆ ತಂಡದ ಪರ 20 ವರ್ಷದ ಆಲಿ ಪೋಪ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಆಲಿ ಪೋಪ್ 1,012 ರನ್ ಗಳಿಸಿದ್ದಾರೆ. ಅಲ್ಲದೇ ಪಂದ್ಯವೊಂದರಲ್ಲಿ ಅಜೇಯ 158 ರನ್ ಗಳಿಸಿದ ಹೆಗ್ಗಳಿಕೆಯನ್ನ ಪಡೆದಿದ್ದಾರೆ.

    ಕ್ರಿಕೆಟ್ ಕಾಶಿ ಲಾಡ್ರ್ಸ್ ಮೈದಾನದಲ್ಲಿ ಆಗಸ್ಟ್ 9 ರಿಂದ ಇಂಗ್ಲೆಂಡ್ ಹಾಗೂ ಟೀಂ ಇಂಡಿಯಾ ನಡುವಿನ 2ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews