ಮುಂಬೈ/ವಾಷಿಂಗ್ಟನ್: 128 ವರ್ಷಗಳ ಬಳಿಕ ಒಲಿಂಪಿಕ್ಸ್ (Olympics) ಕ್ರೀಡಾಕೂಟಕ್ಕೆ ಕ್ರಿಕೆಟ್ ಮರಳಿದ್ದು, 2028ರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರ ಎರಡೂ ವಿಭಾಗಗಳಲ್ಲಿ ತಲಾ 6 ತಂಡಗಳು ಸ್ಪರ್ಧೆ ಮಾಡಲಿವೆ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (IOC) ಖಚಿತಪಡಿಸಿದೆ. ಆದ್ರೆ ಯಾವ ತಂಡಗಳು ಎಂಬ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Niccolo Campriani
(LA Sports Director) on Virat Kohli –
Virat Kohli is one of the main reason behind the inclusion of cricket in 2028 Los Angeles Olympics🐐 pic.twitter.com/ROaThRfmKo
ಇತ್ತೀಚೆಗೆ ಸ್ಕ್ವಾಷ್, ಫ್ಲ್ಯಾಗ್ ಫುಟ್‌ಬಾಲ್, ಬೇಸ್‌ಬಾಲ್/ಸಾಫ್ಟ್‌ಬಾಲ್ ಮತ್ತು ಲ್ಯಾಕ್ರೋಸ್ ಜೊತೆಗೆ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಸೇರಿಸಲಾದ 5 ಹೊಸ ಕ್ರೀಡೆಗಳಲ್ಲಿ ಕ್ರಿಕೆಟ್ ಒಂದಾಗಿದೆ. ಆದ್ರೆ ಟೆಸ್ಟ್, ಏಕದಿನ ಕ್ರಿಕೆಟ್‌ಗಿಂತಲೂ ಟಿ20 ಕ್ರಿಕೆಟ್ ವಿಭಿನ್ನವಾಗಿದೆ. ಸುಮಾರು 100 ರಾಷ್ಟ್ರಗಳು ಕ್ರಿಕೆಟ್ ಆಡುತ್ತವೆ. ಹೀಗಾಗಿ ಒಲಿಂಪಿಕ್ಸ್ ಕ್ರಿಕೆಟ್ (Olympics Cricket) ಟಿ20 ಮಾದರಿಯಲ್ಲಿ ನಡೆಯಲಿದೆ ಐಒಸಿ ತಿಳಿಸಿದೆ. ಆದ್ರೆ ಕ್ರಿಕೆಟ್‌ಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು ಇನ್ನಷ್ಟೇ ನಿಗದಿಯಾಗಬೇಕಿದೆ.
2028ರ ಒಲಿಂಪಿಕ್ಸ್ ಕ್ರೀಡಾಕೂಟವು 351 ಪದಕ ಕ್ರೀಡೆಗಳನ್ನು ಒಳಗೊಂಡಿರಲಿದೆ. 10,500 ಅಥ್ಲಿಟ್‌ಗಳು ಪಾಲ್ಗೊಳ್ಳಲಿದ್ದಾರೆ, ಜೊತೆಗೆ 5 ಹೊಸ ಕ್ರೀಡೆಗಳಿಂದ ಹೆಚ್ಚುವರಿ 698 ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: IPL 2025 – ಜಿಯೋದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಚಿತ ಇಂಟರ್ನೆಟ್
ಈ ಹಿಂದೆ 1990ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಯಾಗಿತ್ತು. ಆಗ ಇಂಗ್ಲೆಂಡ್-ಫ್ರಾನ್ಸ್ ಪುರುಷರ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿತ್ತು. 2022ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್ ಒಂದು ಭಾಗವಾಗಿತ್ತು. ಅಲ್ಲದೇ 2023ರಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ 9 ಮಹಿಳಾ ತಂಡಗಳು ಮತ್ತು 14 ಪುರುಷರ ತಂಡಗಳು ಕ್ರಿಕೆಟ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಟೀಂ ಇಂಡಿಯಾ ಎರಡೂ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿತ್ತು. ಇದನ್ನೂ ಓದಿ: ಐಪಿಎಲ್ 2025: ಪಂಜಾಬ್ ಆಲ್‌ರೌಂಡರ್ ಮ್ಯಾಕ್ಸ್‌ವೆಲ್‌ಗೆ ಪಂದ್ಯದ 25% ದಂಡ
ಪ್ರಯಣನಗರಿ ಪ್ಯಾರಿಸ್‌ನಲ್ಲೀಗ ಒಲಿಂಪಿಕ್ಸ್ ಕ್ರೀಡಾಕೂಟ (Olympics 2024) ಸಂಭ್ರಮ ಮನೆ ಮಾಡಿದೆ. ಅದ್ಧೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ದಾಖಲೆ ಸಂಖ್ಯೆಯ ಕ್ರೀಡಾಪಟುಗಳು ಅಖಾಡದಲ್ಲಿ ಸೆಣಸಲು ತೊಡೆ ತಟ್ಟಿ ನಿಂತಿದ್ದಾರೆ. ಒಲಿಂಪಿಕ್ಸ್ ವೇದಿಕೆಯಲ್ಲಿ ವಿಶ್ವದ ಅಗ್ರ ಕ್ರೀಡಾಪಟುಗಳು ಒಬ್ಬರನ್ನೊಬ್ಬರು ಸೆಣಸುವುದನ್ನು ಇಡೀ ವಿಶ್ವವೇ ಉಸಿರು ಬಿಗಿಹಿಡಿದು ನೋಡುತ್ತಿರುತ್ತದೆ. ಇಲ್ಲಿ ಪದಕ ಗಳಿಸುವ ಹುರಿಯಾಳುಗಳ ಸಾಧನೆ, ಮಾನವೀಯತೆಗೆ ಸವಾಲೊಡ್ಡುವ ದೃಶ್ಯಗಳೂ ಹೆಮ್ಮೆಯಿಂದ ಎದೆ ಉಬ್ಬಿಸುವಂತೆ ಮಾಡುತ್ತದೆ. ಇದು ಕೇವಲ ಒಲಿಂಪಿಕ್ಸ್ ಅಲ್ಲ, ಇಡೀ ವಿಶ್ವವೇ ಆಚರಿಸುವ ಅದ್ಧೂರಿ ಕ್ರೀಡಾಜಾತ್ರೆ. ಕಣದಲ್ಲಿರುವ ವಿಶ್ವಚೇತನಗಳನ್ನ ತಟ್ಟಿ ಎಬ್ಬಿಸಿ, ದಾಖಲೆ ಮುಟ್ಟುವಂತೆ ಪ್ರೇರೇಪಿಸುವ ಅದ್ಬುತ ಅಂಗಳವೂ ಇದಾಗಿದೆ. ಅದರಲ್ಲೂ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಅತ್ಯಂತ ವಿಶೇಷವೆಂದೇ ಹೇಳಬಹುದು. ಏಕೆಂದರೆ 1900ರಲ್ಲಿ ಆಧುನಿಕ ಯುಗದ ಒಲಿಂಪಿಕ್ಸ್ ಕೂಟಕ್ಕೆ ನಾಂದಿ ಹಾಡಿದ್ದ ಪ್ಯಾರಿಸ್‌ನಲ್ಲಿ (Paris) ಈಗ 3ನೇ ಐತಿಹಾಸಿಕ ಒಲಿಂಪಿಕ್ಸ್ ಮೇಳ ನಡೆಯುತ್ತಿರುವುದು ಮತ್ತೊಂದು ವಿಶೇಷ.
ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ವಿಶ್ವದ ಎಲ್ಲಾ ಕ್ರೀಡಾಪಟುಗಳು (Athletes) ಈಗಾಗಲೇ ಪ್ಯಾರಿಸ್ ಅಂಗಳ ತಲುಪಿದ್ದು, ಜುಲೈ 26ರಂದು (ಶುಕ್ರವಾರ) ಅಧಿಕೃತ ಚಾಲನೆ ದೊರೆಯಲಿದೆ. ಭಾರತದಿಂದ ಈ ಬಾರಿ 117 ಕ್ರೀಡಾಪಟುಗಳು ಹಾಗೂ 140 ಮಂದಿ ಕ್ರೀಡಾ ಸಿಬ್ಬಂದಿ ಪಾಲ್ಗೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಒಲಿಂಪಿಕ್ಸ್ ಜಾತ್ರೆಯ ಇತಿಹಾಸ ತಿಳಿಯುವುದು ಅತೀ ಮುಖ್ಯ. ಮೊದಲ ಒಲಿಂಪಿಕ್ಸ್ ಯಾವಾಗ ಶುರುವಾಯ್ತು ಅಂದ್ರೆ ಎಲ್ಲರೂ ಹೇಳೋದು 1896ರಲ್ಲಿ ಗ್ರೀಸ್‌ನ ರಾಜಧಾನಿ ಅಥೆನ್ಸ್ ನಗರದಲ್ಲಿ ಶುರುವಾಯಿತು ಎಂದು. ಆದ್ರೆ ಕ್ರೀಸ್ತಪೂರ್ವದಲ್ಲೇ ಒಲಿಂಪಿಕ್ಸ್ ಶುರುವಾಗಿತ್ತು ಎಂಬುದಕ್ಕೆ ಪುರಾವೆಗಳು ಇವೆ. ಈ ಬಗ್ಗೆ ತಿಳಿಯುವ ಕುತೂಹಲ ನಿಮಗಿದೆಯೇ? ಹಾಗಿದ್ದರೆ ಮುಂದೆ ಓದಿ…
ಕ್ರಿಸ್ತಪೂರ್ವದಲ್ಲಿ ಹುಟ್ಟಿದ ಒಲಿಂಪಿಕ್ಸ್
ಹೌದು. ಕೆಲ ದಾಖಲೆಯ ಪ್ರಕಾರ ಮೊದಲ ಒಲಿಂಪಿಕ್ಸ್ ನಡೆದಿದ್ದು, ಕ್ರಿ.ಪೂರ್ವ 776ರಲ್ಲಿ, ಈ ಒಲಿಂಪಿಕ್ಸ್ ಸ್ಪರ್ಧೆಯಲ್ಲಿ ಗೆದ್ದುಕೊಂಡ ಮೊದಲ ಓಟಗಾರ ಒಬ್ಬಬಾಣಸಿಗ. ಅಚ್ಚರಿಯಾದರೂ ನೀವು ಇದನ್ನು ನಂಬಲೇಬೇಕು. ಎಲಿಸ್ ದ್ವೀಪದ ʻಕೊರೋಬಸ್ʼ ಎಂಬ ಹೆಸರಿನ ಈ ಬಾಣಸಿಗ, ʻಸ್ಟೇಡ್ʼ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ. ಆ ಕಾಲದಲ್ಲಿ ಮೊದಲು ಬಂದವರಿಗಷ್ಟೇ ಮನ್ನಣೆ ಸಿಗುತ್ತಿತ್ತು. ಹಾಗಾಗಿ ಬಹುಮಾನವಾಗಿ ಅವನ ತಲೆಯ ಮೇಲೆ ʻಕೋಟಿನೋಸ್ʼ (ಕಾಡು ಆಲಿವ್ ಮರದ ಎಲೆಗಳನ್ನು ಸೇರಿಸಿ ಮಾಡಿದ ವೃತ್ತಾಕಾರದ ಕಿರೀಟ) ಇಟ್ಟು ಗೌರವಿಸಲಾಗುತ್ತಿತ್ತು.
ʻಒಲಿಂಪಿಯಾ ಬೆಟ್ಟʼದ ಕ್ರೀಡೆ
ಹೌದು. ಕ್ರಿಸ್ತಪೂರ್ವದಲ್ಲಿ ಒಲಿಂಪಿಕ್ಸ್ ಕ್ರೀಡೆ ನಡೆಯುತ್ತಿದ್ದದ್ದು ʻಒಲಿಂಪಿಯಾ’ ಎಂಬ ಬೆಟ್ಟದಲ್ಲಿ. ಆ ಕಾಲದಲ್ಲಿ ಇದು ಗ್ರೀಸ್‌ನ ಧಾರ್ಮಿಕ ಕೇಂದ್ರವಾಗಿತ್ತು. ಬೆಟ್ಟದ ಮೇಲಿನ ಜೀಯಸ್‌ನ ಪ್ರಾರ್ಥನಾ ಮಂದಿರ, ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾಗಿತ್ತು ಎಂದೂ ಸಹ ಹೇಳಲಾಗಿದೆ. ಒಲಿಂಪಿಯಾದ ಕ್ರೀಡಾಂಗಣ 40 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಷ್ಟು ವಿಶಾಲವಾಗಿತ್ತು. ಈ ಕ್ರೀಡಾಂಗಣದ ಸುತ್ತ ಕ್ರೀಡಾಳುಗಳ ತರಬೇತಿಗಾಗಿ ಭವ್ಯ ಕಟ್ಟಡಗಳಿದ್ದವು. ದಂತಕಥೆಗಳ ಪ್ರಕಾರ ಜೀಯಸ್‌ನ ಮಗ ಹರ್ಕ್ಯುಲಸ್ (ಹೆರಾಕ್ಲಿಸ್) ಈ ಕ್ರೀಡಾಕೂಟ ಆರಂಭಿಸಿದರು ಎಂದು ಹೇಳಲಾಗಿದೆ. ಹೆರಾಕ್ಲಿಸ್ ಈ ಕ್ರೀಡೋತ್ಸವಕ್ಕಾಗಿ ದೇವತೆ ಅಥೆನಾಳ ನೆರವಿನಲ್ಲಿ ಬೆಟ್ಟದ ಮೇಲೆ ಒಲಿಂಪಿಯಾ ದೇವಾಲಯ ಮತ್ತು ವಿಶಾಲ ಕ್ರೀಡಾಂಗಣ ನಿರ್ಮಿಸಿದ.
ಒಲಿಂಪಿಕ್ಸ್‌ನಲ್ಲಿ ಒಂದೇ ಓಟ
ಆರಂಭದ ಒಲಿಂಪಿಕ್ಸ್‌ನಲ್ಲಿ ʻಸ್ಟೇಡ್ʼ ಎಂಬ ಓಟದ ಸ್ಪರ್ಧೆ ಮಾತ್ರ ನಡೆಯಿತು. ಪುರುಷರು ಮತ್ತು ಹುಡುಗರಿಗೆ ಮಾತ್ರ ಮೀಸಲಾಗಿತ್ತು. ಈ ಓಟದ ದೂರವನ್ನು ಸ್ವತಃ ಹರ್ಕ್ಯುಲಸ್ ನಿಗದಿ ಮಾಡಿದ್ದ. ಮುಂದೆ ಪೆಂಟಾಥಾನ್ ಅಂದ್ರೆ ಜಾವೆಲಿನ್ ಎಸೆತ, ದೂರ ನೆಗೆತ, ಡಿಸ್ಕಸ್ ಎಸೆತ, ಓಟ ಮತ್ತು ಕುಸ್ತಿ ಐದು ಸ್ಪರ್ಧೆಗಳು, ಚಾರಿಯಟ್ ರೇಸ್ (ರಥಗಳ ಓಟ) ಮತ್ತು ಮುಷ್ಟಿಯುದ್ಧ ಸ್ಪರ್ಧೆಗಳನ್ನು ಒಲಿಂಪಿಕ್ಸ್‌ನಲ್ಲಿ ಸೇರಿಸಲಾಗಿತ್ತು. ಗ್ರೀಸ್‌ನ ಹಲವು ರಾಜ್ಯಗಳ ನಡುವೆ ಆಗಾಗ್ಗೆ ಯುದ್ಧ ನಡೆಯುತ್ತಿತ್ತು. ಆದ್ರೆ ಒಲಿಂಪಿಕ್ಸ್ ಸಂದರ್ಭದಲ್ಲಿ ಶಾಂತಿ ಪಾಲನೆ ನಿಯಮವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದರು. ಗ್ರೀಕ್ ಭಾಷೆ ಅರಿತ ಯಾವ ಸ್ವತಂತ್ರ ನಾಗರಿಕನೂ ಇಲ್ಲಿ ಭಾಗವಹಿಸಬಹುದಿತ್ತು. ಯಾವುದೇ ತಾರತಮ್ಯವೂ ಇರಲಿಲ್ಲ. ಕ್ರೀಡಾಂಗಣದಲ್ಲಿ ಸ್ಪರ್ಧಿಗಳು ಮೈಮೇಲೆ ಬಟ್ಟೆ ತೊಡುತ್ತಿರಲಿಲ್ಲ. ಹೀಗಾಗಿ ವಿವಾಹಿತ ಮಹಿಳೆಯರಿಗೆ ಈ ಕ್ರೀಡಾಂಗಣದೊಳಗೆ ಪ್ರವೇಶ ನಿಷಿದ್ಧವಾಗಿತ್ತು. ಆದ್ದರಿಂದ ರಾಜ ಪೆಲೋಪ್ಸ್ನ ಮಡದಿ ಹಿಪ್ಪೋಡಾಮಿಯಾ ಮಹಿಳೆಯರಿಗಾಗಿ ಪ್ರತ್ಯೇಕ ಹೇರಿಯಾ ಕ್ರೀಡೆಗಳನ್ನು ಆರಂಭಿಸಿದಳು. ಈ ಓಟಗಳಲ್ಲಿ ಮಹಿಳಾ ಸ್ಪರ್ಧಿಗಳಿಗೆ ಮಾತ್ರ ಅವಕಾಶ ಇತ್ತು.
ಕಣ್ಮರೆಯಾಯ್ತು ಒಲಿಂಪಿಯಾ ಪಟ್ಟಣ
ಕಾಲಕ್ರಮೇಣ ಗ್ರೀಕ್ ಯುವಕರು ಆಟೋಟಗಳಿಂದ ದೂರವಾದರು. ಕ್ರಿಸ್ತಪೂರ್ವ 146ರ ಸುಮಾರಿಗೆ ರೋಮನ್ನರು ಗ್ರೀಸ್ ದೇಶವನ್ನು ಕಬಳಿಸಿದ ಬಳಿಕ ಒಲಿಂಪಿಕ್ಸ್‌ನ ಸ್ವರೂಪವೇ ಬದಲಾಯಿತು. ಒಲಿಂಪಿಕ್ಸ್ ಜೊತೆ ಸೇರಿದ್ದ ಧಾರ್ಮಿಕ ಸಂಪ್ರದಾಯಗಳು ಕಾಣೆಯಾಗಿ ರೋಮನ್ನರ ವಿಕೃತ ಕ್ರೀಡೆಗಳು ಆರಂಭವಾದವು. ಗ್ಲಾಡಿಯೇಟರ್‌ಗಳು, ಗುಲಾಮರು ಮತ್ತು ಕ್ರೂರ ಪ್ರಾಣಿಗಳ ನಡುವೆ ರಕ್ತಪಾತದ ಕ್ರೀಡೆಗಳು ಸ್ಟೇಡಿಯಮ್‌ಗಳಲ್ಲಿ ನಡೆದವು. ಕ್ರಿಶ್ಚಿಯನ್ ಧರ್ಮ ಸ್ವೀಕರಿಸಿದ್ದ ಥಿಯೋಡೋಸಿಯಸ್ ರೋಮ್‌ನ ಗದ್ದುಗೆ ಏರಿದ. ಬಳಿಕ ಕ್ರಿ.ಶ. 394ರಲ್ಲಿ ಈ ಕ್ರೀಡೆಗಳಿಗೆ ಶಾಶ್ವತ ಬಹಿಷ್ಕಾರ ಹಾಕಿದ. ಅಲ್ಲಿಗೆ ಸುಮಾರು 1,200 ವರ್ಷಗಳ ಇತಿಹಾಸದ ಒಲಿಂಪಿಕ್ಸ್ ಪರಿಸಮಾಪ್ತಿಯಾಯಿತು. ಕಾಲಾಂತರದಲ್ಲಿ ಒಲಿಂಪಿಕ್ಸ್ ಬರೀ ನೆನಪಾಗಿ ಉಳಿಯಿತು. ಮುಂದಿನ ಶತಮಾನಗಳಲ್ಲಿ ಒಲಿಂಪಿಯಾ ಪಟ್ಟಣವೇ ಕಣ್ಮರೆಯಾಯಿತು. ʻಒಲಿಂಪಿಯಾ’ ಎಂದರೆ, ಒಂದು ಕಾಲ್ಪನಿಕ ಸ್ಥಳ, ತಮ್ಮ ಪುರಾಣಗಳಲ್ಲಿ ಬರುವ ಒಂದು ದಂತಕಥೆ ಮಾತ್ರ ಎಂದು ಗ್ರೀಕರು ನಂಬತೊಡಗಿದರು.
ಒಲಿಂಪಿಕ್ಸ್‌ಗೆ ಮರುಜೀವ
18ನೇ ಶತಮಾನದ ವೇಳೆಗೆ ಗ್ರೀಸ್ ದೇಶ ಟರ್ಕಿಯ ಒಟ್ಟೋಮನ್ ಸಾಮ್ರಾಜ್ಯದ ಸಾಮಂತ ರಾಷ್ಟ್ರವಾಗಿತ್ತು. ಒಟ್ಟೋಮನ್‌ಗಳ ವಿರುದ್ಧ ಗ್ರೀಕರು ಸ್ವಾತಂತ್ರ್ಯ ಹೋರಾಟ ನಡೆಸಿದ್ದರು. ಆ ಕಾಲದಲ್ಲಿ ʻಪೆಲೋಪೊನೀಸ್’ ಎಂಬ ದ್ವೀಪದ ನಡುವೆ ಮರಳಿನಲ್ಲಿ ಒಂದು ಪುರಾತನ ಸ್ತಂಭದ ಅವಶೇಷ ಪತ್ತೆಯಾಗಿತ್ತು. ಜರ್ಮನಿಯ ಆರ್ನ್ಸ್ ಕರ್ಟಿಯಸ್ (1814-1896) ಎಂಬ ಪುರಾತತ್ತ್ವ ಶೋಧಕ, ಈ ಸ್ತಂಭದ ಕೆಳಗೆ ಗ್ರೀಸ್‌ನ ಗತಕಾಲದ ಇತಿಹಾಸ ಇರಬೇಕು ಎಂದು ಲೆಕ್ಕ ಹಾಕಿದ್ದ. ಅವನ ಸತತ ಪ್ರಯತ್ನದ ಫಲವಾಗಿ ಮಣ್ಣಿನ ಅಡಿಯಲ್ಲಿ ಹೂತು ಹೋಗಿದ್ದ ಒಲಿಂಪಿಯಾ ಪಟ್ಟಣ ಮೇಲೆದ್ದು ಬಂತು. ʻಒಲಿಂಪಿಯಾ’ ಎಂಬ ಜಾಗ ನಿಜಕ್ಕೂ ಇತ್ತು ಎಂದು ತಿಳಿದಾಗ ಜಗತ್ತೇ ಬೆರಗಾಗಿತ್ತು.
ಒಲಿಂಪಿಕ್ಸ್‌ನ ಅವಶೇಷಗಳ ನಡುವೆ ʻಪಾನಥಿನಾಯ್ಯೋಸ್’ ಎಂಬ ಪ್ರಾಚೀನ ಕ್ರೀಡಾಂಗಣ ಬೆಳಕಿಗೆ ಬಂತು. ಇವಾಂಜೆಲೋಸ್ ಜಾಪ್ಪಾಸ್ ಎಂಬ ಧನಿಕ ಗ್ರೀಕ್ ವ್ಯಾಪಾರಿ 1859ರಲ್ಲಿ ಈ ಸ್ಟೇಡಿಯಮ್‌ನ ಪುನರುತ್ಥಾನ ಮಾಡಿ, ಅಲ್ಲಿ ಮೊಟ್ಟಮೊದಲ ಅಂತಾರಾಷ್ಟ್ರೀಯ ಕ್ರೀಡಾಕೂಟ ನಡೆಸಿದ. ಈ ಬಗ್ಗೆ ಐರೋಪ್ಯ ಪತ್ರಿಕೆಗಳು ವರದಿ ಮಾಡಿದ್ದವು. ಈ ಕ್ರೀಡೋತ್ಸವದ ಯಶಸ್ಸಿನಿಂದ ಉತ್ತೇಜಿತನಾದ ಜಾಪ್ಪಾಸ್ 1870 ಮತ್ತು 1875ರಲ್ಲಿ ಒಲಿಂಪಿಕ್ಸ್‌ನಲ್ಲಿ ಇನ್ನೆರಡು ಅಂತಾರಾಷ್ಟ್ರೀಯ ಕ್ರೀಡಾಮೇಳಗಳನ್ನು ನಡೆಸಿದ. ಫ್ರಾನ್ಸ್‌ನ ಗಣ್ಯ ಬ್ಯಾರನ್ ಪಿಯರೆ ಡಿ ಕೂಬರ್ಟಿನ್ ಈ ಸುದ್ದಿಯಿಂದ ಪ್ರೇರಣೆ ಪಡೆದಿದ್ದ. ಯುವಕರ ಮನಸ್ಸನ್ನು ಕ್ರೀಡೆಯತ್ತ ತಿರುಗಿಸಿದರೆ ಮಾತ್ರ ಜಗತ್ತಿನಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯ, ಜಗತ್ತು ಒಂದುಗೂಡುತ್ತದೆ ಎಂಬುದನ್ನ ಮನಗಂಡ. ಹಾಗಾಗಿ ಕೂಬರ್ಟಿನ್ 1893ರಲ್ಲಿ ಒಂಬತ್ತು ದೇಶಗಳ 79 ಪ್ರತಿನಿಧಿಗಳನ್ನು ಸೇರಿಸಿ ಒಲಿಂಪಿಕ್ಸ್ ಮತ್ತೆ ಆರಂಭಿಸುವ ಬಗ್ಗೆ ತಿಳಿಸಿದ. ʻಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ’ (IOA) ಇಲ್ಲಿ ಹುಟ್ಟಿಕೊಂಡಿತು ಎನ್ನಲಾಗಿದೆ.
ಗ್ರೀಸ್‌ನ ಐತಿಹಾಸಿಕ ರಾಜಧಾನಿ ಅಥೆನ್ಸ್‌ನಲ್ಲಿ ಮೊದಲ ಒಲಿಂಪಿಕ್ಸ್ ನಡೆಸಬೇಕೆಂಬ ತೀರ್ಮಾನ ಕೂಡ ಅಲ್ಲೇ ತೆಗೆದುಕೊಳ್ಳಲಾಗಿತ್ತು. ಅದರಂತೆ 1896ರಲ್ಲಿ ಗ್ರೀಸ್‌ನ ಅಥೆನ್ಸ್ ನಗರದಲ್ಲಿ ಆಧುನಿಕ ಯುಗದ ಮೊದಲ ಅದ್ಧೂರಿ ಕ್ರೀಡಾ ಜಾತ್ರೆ ನಡೆಯಿತು. ಇಂದಿಗೂ ಅದು ಮುಂದುವರಿದಿದೆ. 2024ರ ಕ್ರೀಡಾಕೂಟಕ್ಕೆ ವಿಶ್ಚ ವೇದಿಕೆ ಪ್ಯಾರಿಸ್‌ನಲ್ಲಿ ಸಜ್ಜಾಗಿದೆ.
ನವದೆಹಲಿ: 2028ರ ಒಲಿಂಪಿಕ್ಸ್ (Olympic Games) ಕ್ರೀಡೆಗಳ ಪಟ್ಟಿಗೆ ಈಗ ಕ್ರಿಕೆಟ್ ಕೂಡ ಸೇರ್ಪಡೆಯಾಗಿದೆ. 2028 ರಲ್ಲಿ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ (Los Angles) ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ಗೂ (Cricket) ಅವಕಾಶ ಕಲ್ಪಿಸಲಾಗಿದೆ. 123 ವರ್ಷಗಳ ಬಳಿಕ ಕ್ರಿಕೆಟ್‌ಗೆ ಈ ಸ್ಥಾನ ಲಭಿಸಿದೆ.
ಟಿ20 ಮಾದರಿಯಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಕ್ರೀಡಾಕೂಟ ನಡೆಯಲಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (IOC)ಯ 141ನೇ ಅಧಿವೇಶನದಲ್ಲಿ ಸ್ಕ್ವಾಷ್, ಬೇಸ್‌ಬಾಲ್/ಸಾಫ್ಟ್‌ಬಾಲ್, ಲ್ಯಾಕ್ರೋಸ್ ಮತ್ತು ಫ್ಲ್ಯಾಗ್ ಫುಟ್‌ಬಾಲ್ ಕ್ರೀಡೆಗಳಿಗೂ ಅನುಮೋದನೆ ನೀಡಲಾಗಿದೆ. ಮುಂದಿನ ಒಲಿಂಪಿಕ್ಸ್‌ನಲ್ಲಿ ಈ ಕ್ರೀಡೆಗಳೂ ಸಹ ಇರಲಿವೆ. ಇದನ್ನೂ ಓದಿ: ಸಿಕ್ಸರ್ ಗುಟ್ಟು ಬಿಚ್ಚಿಟ್ಟ ರೋಹಿತ್ ಶರ್ಮಾ
Baseball/softball, cricket (T20), flag football, lacrosse (sixes) and squash have been officially included as additional sports on the programme for the Olympic Games @LA28.
ಮತದಾನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಐಒಸಿ ಅಧ್ಯಕ್ಷ ಥಾಮಸ್ ಬಾಚ್ ಅವರು, ಒಲಿಂಪಿಕ್ಸ್‌ನಲ್ಲಿ ಇತರೆ ಕ್ರೀಡೆಗಳೊಂದಿಗೆ ಕ್ರಿಕೆಟ್ ಸೇರ್ಪಡೆ ಕುರಿತು ಘೋಷಣೆ ಮಾಡಿದರು.
ಲಾಸ್ ಏಂಜಲೀಸ್ 2028 ರ ಸಂಘಟನಾ ಸಮಿತಿಯು ಶಿಫಾರಸು ಮಾಡಿದ ಐದು ಕ್ರೀಡೆಗಳನ್ನು ಸೇರಿಸುವ ಪ್ರಸ್ತಾಪಕ್ಕೆ 99 IOC ಸದಸ್ಯ ರಾಷ್ಟ್ರಗಳ ಪೈಕಿ ಎರಡು ರಾಷ್ಟ್ರಗಳು ಮಾತ್ರ ಅಸಮ್ಮತಿ ಸೂಚಿಸಿವೆ.
ವಿಶ್ವದಾದ್ಯಂತ ಅಂದಾಜು 2.5 ಶತಕೋಟಿ ಅಭಿಮಾನಿಗಳನ್ನು ಹೊಂದಿರುವ ವಿಶ್ವದ ಎರಡನೇ ಅತ್ಯಂತ ಜನಪ್ರಿಯ ಕ್ರೀಡೆಯನ್ನು ಸ್ವಾಗತಿಸಲು ನಾವು ರೋಮಾಂಚನಗೊಂಡಿದ್ದೇವೆ ಎಂದು ಥಾಮಸ್ ಬಾಚ್ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ಕ್ರಿಕೆಟಿಗರಿಗೆ ಜೈ ಶ್ರೀರಾಮ್ ಘೋಷಣೆ: ಉದಯನಿಧಿ ಆಕ್ಷೇಪ
ಮುಂಬೈ/ವಾಷಿಂಗ್ಟನ್: ಅಮೆರಿಕದ ಲಾಸ್ ಏಂಜಲಿಸ್ನಲ್ಲಿ 2028ಕ್ಕೆ (Olympics 2028) ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಆಟ (Cricket Sports) ಸೇರ್ಪಡೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ.
ಲಾಸ್ ಏಂಜಲಿಸ್ ಒಲಿಂಪಿಕ್ಸ್ (Los Angeles Olympics Games) ಸಂಘಟನಾ ಸಮಿತಿ, ಈಗಾಗಲೆ ಕ್ರಿಕೆಟ್ ಜೊತೆಗೆ ಫ್ಲ್ಯಾಗ್ ಫುಟ್‌ಬಾಲ್, ಬೇಸ್‌ಬಾಲ್ ಮತ್ತು ಸಾಫ್ಟ್‌ಬಾಲ್ ಕ್ರೀಡೆಗಳನ್ನು ಹೊಸದಾಗಿ ಒಲಿಂಪಿಕ್ಸ್‌ಗೆ ಸೇರ್ಪಡೆಗೊಳಿಸಲು ಈಗಾಗಲೇ ನಿರ್ಧರಿಸಿದ್ದು, ಅ.15, 16 ರಂದು ಅಧಿಕೃತ ಘೋಷಣೆ ಹೊರಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: T20 WorldCup-2024 ಟೂರ್ನಿಯ ದಿನಾಂಕ ಬಹಿರಂಗ – USA, ವಿಂಡೀಸ್ ಆತಿಥ್ಯ
ಲಾಸ್ ಏಂಜಲಿಸ್ ಮತ್ತು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಂಸ್ಥೆಯ ಆಯೋಗವು ಮುಂದಿನ ಭಾನುವಾರದಿಂದ ಮುಂಬೈನಲ್ಲಿ ನಡೆಯಲಿರುವ 141ನೇ IOC (ಭಾರತೀಯ ಒಲಿಂಪಿಕ್ಸ್ ಸಮಿತಿ) ಸಭೆಯಲ್ಲೂ ಈ ವಿಷಯವನ್ನು ತಿಳಿಸಲಿದೆ ಎನ್ನಲಾಗಿದೆ.
ಕ್ರಿಕೆಟ್ ಈ ಮುನ್ನ 1990ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಸ್ಪರ್ಧೆಯಾಗಿತ್ತು. ಆಗ ಇಂಗ್ಲೆಂಡ್-ಫ್ರಾನ್ಸ್ ಪುರುಷರ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿತ್ತು. ಕಳೆದ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲೂ ಮಹುಳಾ ಕ್ರಿಕೆಟ್ ಒಂದು ಭಾಗವಾಗಿತ್ತು. ಆದರೆ 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್‌ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್ ವಿಭಾಗದಲ್ಲಿ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ತಂಡಗಳು ಭಾಗವಹಿಸಲಿವೆ. ಇದನ್ನೂ ಓದಿ: World Cup 2023: ಅ.14 ರಂದು ಪಾಕ್ ವಿರುದ್ಧ ಹೈವೋಲ್ಟೇಜ್ ಕದನ – ಗಿಲ್ ಕಣಕ್ಕಿಳಿಯೋದು ಡೌಟ್
ಕ್ರಿಕೆಟ್ (Cricket) ಹೆಚ್ಚಿನ ಜನಪ್ರಿಯತೆ ಹೊಂದಿರುವ ಭಾರತ ಉಪಖಂಡದ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಲಾಸ್ ಏಂಜಲಿಸ್ ಒಲಿಂಪಿಕ್ಸ್ ಆಯೋಜಕರು, ಇದರಿಂದಾಗಿ ನೇರಪ್ರಸಾರ ಹಕ್ಕಿನಿಂದ 1,526 ಕೋಟಿ ರೂ. ಹೆಚ್ಚುವರಿ ಆದಾಯ ಬರುವ ಲೆಕ್ಕಾಚಾರ ಹೊಂದಿದ್ದಾರೆ. ಅದಕ್ಕಾಗಿ ಅಮೆರಿಕ, ವೆಸ್ಟ್ ಇಂಡೀಸ್ ಜೊತೆಗೆ ವಿಶ್ವಕಪ್ ಜಂಟಿ ಆತಿಥ್ಯ ವಹಿಸಿದೆ. ಇದನ್ನೂ ಓದಿ: ICC ಮಾಸ್ಟರ್ ಪ್ಲ್ಯಾನ್ – ಹೊಸ ಮಾದರಿಯಲ್ಲಿ 2024ರ T20 ವಿಶ್ವಕಪ್
ಮಾಹಿತಿ ಪ್ರಕಾರ, 2024ರ T20 ವಿಶ್ವಕಪ್ ಟೂರ್ನಿಯು ಮುಂದಿನ ಜೂನ್ 4 ರಿಂದ ಜೂನ್ 30ರ ವರೆಗೆ ನಡೆಯಲಿದೆ. ಈಗಾಗಲೇ ಐಸಿಸಿ ಅಧಿಕಾರಿಗಳು ಅಮೆರಿಕದಲ್ಲಿ ಆತಿಥ್ಯ ವಹಿಸುವ ಸಂಭಾವ್ಯ ಸ್ಥಳಗಳ ಪರಿಶೀಲನೆ ನಡೆಸಿದ್ದಾರೆ. ಒಟ್ಟಾರೆ ಕೆರೆಬಿಯನ್ ಮತ್ತು ಯುಎಸ್‌ನ 10 ಸ್ಥಳಗಳಲ್ಲಿ ವಿಶ್ವಕಪ್ ಟೂರ್ನಿ ಜರುಗಲಿದ್ದು, ಯುನೈಟೆಡ್ ಸ್ಟೇಟ್ಸ್‌ನ ಲಾಡರ್ ಹಿಲ್, ಮೋರಿಸ್ವಿಲ್ಲೆ, ಡಲ್ಲಾಸ್, ನ್ಯೂಯಾರ್ಕ್ ಜೊತೆಗೆ ಫ್ಲೋರಿಡಾದಲ್ಲಿಯೂ ಪಂದ್ಯಗಳನ್ನ ಆಯೋಜಿಸಲಾಗುತ್ತಿದೆ ಎಂದು ತಿಳಿಬಂದಿದೆ.