Tag: Olympics 2028

  • Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ

    Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ

    – ಕಂಬಳ, ಎತ್ತಿನ ಬಂಡಿ, ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ

    ಬೆಂಗಳೂರು: ʻಗುರಿ-ಒಲಿಂಪಿಕ್ ಪದಕʼ (Target Olympics Medal) ಯೋಜನೆ ಅಡಿಯಲ್ಲಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, 2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು 3 ವರ್ಷಗಳ ವರೆಗೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದರು.

    ದಾಖಲೆಯ 16ನೇ ಬಜೆಟ್‌ ಮಂಡಿಸಿದ ಅವರು ಈ ಬಾರಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಬಂಪರ್‌ ಕೊಡುಗೆಗಳನ್ನ ಘೋಷಣೆ ಮಾಡಿದ್ದಾರೆ. ಅದರಂತೆ ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ (Olympics 2028) ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನ ಮೂರು ವರ್ಷ ನೀಡಲಾಗುವುದು. ಅದಕ್ಕಾಗಿ ಪ್ರಸಕ್ತ ವರ್ಷಕ್ಕೆ 6 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು


    ಬಜೆಟ್‌ ಘೋಷಣೆಗಳೇನು?

    ಅಲ್ಲದೇ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು. ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಪ್ರತಿ ವಷ ಕ್ರೀಡಾಕೂಟ ಆಯೋಜಿಸಲಾಗುವುದು. 2025-26ನೇ ಸಾಲಿನಲ್ಲಿ ಈ ಉದ್ದೇಶಕ್ಕೆ 2 ಕೋಟಿ ರೂ. ಒದಗಿಸಲಾಗುವುದು.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ. ಒದಗಿಸಲಾಗುವುದು. ನಿವೇಶನ ಲಭ್ಯವಿರುವ 12 ತಾಲ್ಲೂಕು ಕೇಂದ್ರಗಳಿಗೆ ತಲಾ 2 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಟ್ಟು 12 ಕೋಟಿ ರೂ ಒದಗಿಸಲಾಗುವುದು.

    ಯಲಬುರ್ಗಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು ಕ್ರೀಡಾಂಗಣ ಹಾಗೂ ಟಿ.ನರಸೀಪುರ ತಾಲ್ಲೂಕು ಕ್ರೀಡಾಂಗಣವನ್ನು 6 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿಗೊಳಿಸಲಾಗುವುದು. ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದರಂತೆ ಜಿಲ್ಲಾ ಕ್ರೀಡಾಂಗಣಗಳಲ್ಲಿ ಶೂಟಿಂಗ್ ರೇಂಜ್ ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದನ್ನೂ ಓದಿ: ಅಬಕಾರಿ ಇಲಾಖೆಗೆ 40,000 ಕೋಟಿ ತೆರಿಗೆ ಸಂಗ್ರಹ ಟಾರ್ಗೆಟ್‌

    ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 3 ಕೋಟಿ ರೂ. ಒದಗಿಸಲಾಗುವುದು. ಯಾದಗಿರಿಯ ಶಹಾಪುರದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ಶಾಲೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುವುದು. ಮೈಸೂರು ಮತ್ತು ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು 7 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

    ಬೆಂಗಳೂರಿನ ವಿದ್ಯಾನಗರದಲ್ಲಿರುವ ಈಜುಕೊಳವನ್ನು ಹೀಟಿಂಗ್ ಮತ್ತು ಡೈವಿಂಗ್ ಪೂಲ್ ವ್ಯವಸ್ಥೆಗಳನ್ನೊಳಗೊಂಡು ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗುವುದು. ಚಾಮರಾಜನಗರದಲ್ಲಿ ಒಲಿಂಪಿಕ್ಸ್‌ ಮಾದರಿಯ (50 ಮೀಟರ್) ಈಜುಕೊಳವನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್, ಖೋಖೋ ಅಕಾಡೆಮಿಗಳನ್ನು ಸ್ಥಾಪಿಸಲು 2 ಕೋಟಿ ರೂ. ಒದಗಿಸಲಾಗುವುದು.

    ಕ್ರೀಡಾಪಟುಗಳು ತರಬೇತಿ ಪಡೆಯಲು ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಹಕಾರಿಯಾಗುವಂತೆ ಶಾಲಾ-ಕಾಲೇಜುಗಳ (ವೃತ್ತಿಪರ ಕಾಲೇಜುಗಳು ಸೇರಿದಂತೆ) ವಾರ್ಷಿಕ ಹಾಜರಾತಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗಿನ ಕ್ರೀಡಾಪಟುಗಳಿಗೆ ಶೇ.15 ರಷ್ಟು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಶೇ.25ರಷ್ಟು ಹಾಜರಾತಿ ವಿನಾಯಿತಿ ನೀಡಲಾಗುವುದು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಶೇ.5ರಷ್ಟು ಕೃಪಾಂಕವನ್ನು ವೃತ್ತಿಪರ, ಪದವಿ ಮತ್ತು ಉನ್ನತ ಶಿಕ್ಷಣದ ಪ್ರವೇಶದಲ್ಲಿ ನೀಡಲಾಗುವುದು. ಇದನ್ನೂ ಓದಿ: ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

    ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಲು ತಲಾ 5 ಲಕ್ಷ ರೂ. ವರೆಗೆ ನೆರವು ನೀಡಲಾಗುವುದು. ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಮಾಸಾಶನವನ್ನು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ 6,000 ರೂ.ಗಳಿಗೆ, ರಾಷ್ಟ್ರ ಮಟ್ಟದ ಕುಸ್ತಿಪಟುಗಳಿಗೆ 5,000 ರೂ.ಗಳಿಗೆ ಹಾಗೂ ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ 4,500 ರೂ. ಗಳಿಗೆ ಹೆಚ್ಚಿಸಲಾಗುವುದು.

    ಒಲಿಂಪಿಕ್ಸ್‌, ಕಾಮನ್ ವೆಲ್ತ್ ಹಾಗೂ ಏಷಿಯನ್ ಗೇಮ್ಸ್‌ಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳ ಸೇವೆಯನ್ನು ವಿವಿಧ ಕ್ರೀಡಾ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಪಡೆಯಲಾಗುವುದು.

     

  • Breaking: ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್​ಗೆ ಕ್ರಿಕೆಟ್‌ ಸೇರ್ಪಡೆ

    Breaking: ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್​ಗೆ ಕ್ರಿಕೆಟ್‌ ಸೇರ್ಪಡೆ

    ಮುಂಬೈ: ಅಮೆರಿಕದ ಲಾಸ್‌ ಏಂಜಲಿಸ್‌ನಲ್ಲಿ 2028ಕ್ಕೆ ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ (Olympics Games) ಕೊನೆಗೂ ಕ್ರಿಕೆಟ್‌ (Cricket)ಸೇರ್ಪಡೆಯಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (IOC) ನಿರ್ವಾಹಕರು ಒಲಿಂಪಿಕ್ಸ್‌ ಕ್ರೀಡೆಯಲ್ಲಿ ಕ್ರಿಕೆಟ್‌ ಸೇರ್ಪಡೆಗೊಳಿಸಿರುವುದಾಗಿ ಘೋಷಣೆ ಮಾಡಿದ್ದಾರೆ.

    ಮುಂಬೈನಲ್ಲಿ ಒಲಿಂಪಿಕ್ಸ್‌ ಸಮಿತಿಯ ಕಾರ್ಯಕಾರಿ ಮಂಡಳಿ ಸಭೆ ನಡೆದ 2 ದಿನಗಳ ಬಳಿಕ ಮಾತನಾಡಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ ಅಧ್ಯಕ್ಷ, ಥಾಮಸ್ ಬಾಚ್, ಬೇಸ್‌ಬಾಲ್/ಸಾಫ್ಟ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್ (Flag football)  ಜೊತೆಗೆ 5 ಹೊಸ ಕ್ರೀಡೆಗಳನ್ನು ಒಲಿಂಪಿಕ್ಸ್‌ಗೆ ಸೇರ್ಪಡೆಗೊಳಿಸಲಾಗಿದೆ. ಇದರಲ್ಲಿ ಕ್ರಿಕೆಟ್‌ ಸಹ ಒಂದು. ಕ್ರಿಕೆಟ್‌ ಸೇರ್ಪಡೆಗೊಳಿಸುವ ಪ್ರಸ್ತಾವನೆಯನ್ನು ಲಾಸ್‌ ಏಂಜಲಿಸ್‌ನ ಸಂಘಟಕ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂಬುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ: Olympics 2028: ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್​ಗೆ ಕ್ರಿಕೆಟ್‌ ಸೇರ್ಪಡೆ ಖಚಿತ – ಅಧಿಕೃತ ಘೋಷಣೆಯಷ್ಟೇ ಬಾಕಿ

    1990ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಪದಕ ಸ್ಪರ್ಧೆಯಾಗಿತ್ತು. ಆಗ ಇಂಗ್ಲೆಂಡ್ -ಫ್ರಾನ್ಸ್ ಪುರುಷರ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿತ್ತು. ಕಳೆದ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್ ಒಂದು ಭಾಗವಾಗಿತ್ತು. ಆದರೆ 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್ ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್ ವಿಭಾಗದಲ್ಲಿ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ತಂಡಗಳು ಭಾಗವಹಿಸಲಿವೆ. ಇದನ್ನೂ ಓದಿ: ಇಂಡೋ-ಪಾಕ್‌ ಕದನ: 10 ಸೆಕೆಂಡ್‌ ಜಾಹೀರಾತಿನ ಬೆಲೆ ಕೇಳಿದ್ರೆ ಎದೆ ಬಡಿತ ಹೆಚ್ಚಿಸುತ್ತೆ..!

    ಮಾಹಿತಿ ಪ್ರಕಾರ, 2024ರ ಟಿ20 ವಿಶ್ವಕಪ್ ಟೂರ್ನಿಯು ಮುಂದಿನ ಜೂನ್ 4 ರಿಂದ ಜೂನ್ 30ರ ವರೆಗೆ ನಡೆಯಲಿದೆ. ಈಗಾಗಲೇ ಐಸಿಸಿ ಅಧಿಕಾರಿಗಳು ಅಮೆರಿಕದಲ್ಲಿ ಆತಿಥ್ಯ ವಹಿಸುವ ಸಂಭಾವ್ಯ ಸ್ಥಳಗಳ ಪರಿಶೀಲನೆ ನಡೆಸಿದ್ದಾರೆ. ಒಟ್ಟಾರೆ ಕೆರೆಬಿಯನ್ ಮತ್ತು ಯುಎಸ್‌ನ 10 ಸ್ಥಳಗಳಲ್ಲಿ ವಿಶ್ವಕಪ್ ಟೂರ್ನಿ ಜರುಗಲಿದ್ದು, ಯುನೈಟೆಡ್ ಸ್ಟೇಟ್ಸ್‌ನ ಲಾಡರ್ ಹಿಲ್, ಮೋರಿಸ್ವಿಲ್ಲೆ, ಡಲ್ಲಾಸ್, ನ್ಯೂಯಾರ್ಕ್ ಜೊತೆಗೆ ಫ್ಲೋರಿಡಾದಲ್ಲಿಯೂ ಪಂದ್ಯಗಳನ್ನ ಆಯೋಜಿಸಲಾಗುತ್ತಿದೆ. ಇದನ್ನೂ ಓದಿ: ಭಾರತ, ಹಿಂದೂ ಧರ್ಮ ಅವಹೇಳನ – ಗಡಿಪಾರಾದ ಬಳಿಕ ಕ್ಷಮೆ ಕೇಳಿದ ಪಾಕ್‌ ನಿರೂಪಕಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Olympics 2028: ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್​ಗೆ ಕ್ರಿಕೆಟ್‌ ಸೇರ್ಪಡೆ ಖಚಿತ – ಅಧಿಕೃತ ಘೋಷಣೆಯಷ್ಟೇ ಬಾಕಿ

    Olympics 2028: ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್​ಗೆ ಕ್ರಿಕೆಟ್‌ ಸೇರ್ಪಡೆ ಖಚಿತ – ಅಧಿಕೃತ ಘೋಷಣೆಯಷ್ಟೇ ಬಾಕಿ

    ಮುಂಬೈ/ವಾಷಿಂಗ್ಟನ್‌: ಅಮೆರಿಕದ ಲಾಸ್​ ಏಂಜಲಿಸ್​ನಲ್ಲಿ 2028ಕ್ಕೆ (Olympics 2028) ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್​ಗೆ ಟಿ20 ಕ್ರಿಕೆಟ್​ ಆಟ (Cricket Sports) ಸೇರ್ಪಡೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ.

    ಲಾಸ್‌ ಏಂಜಲಿಸ್​ ಒಲಿಂಪಿಕ್ಸ್ (Los Angeles Olympics Games)​ ಸಂಘಟನಾ ಸಮಿತಿ, ಈಗಾಗಲೆ ಕ್ರಿಕೆಟ್​ ಜೊತೆಗೆ ಫ್ಲ್ಯಾಗ್​ ಫುಟ್ಬಾಲ್​, ಬೇಸ್​ಬಾಲ್​ ಮತ್ತು ಸಾಫ್ಟ್​​ಬಾಲ್​ ಕ್ರೀಡೆಗಳನ್ನು ಹೊಸದಾಗಿ ಒಲಿಂಪಿಕ್ಸ್​ಗೆ ಸೇರ್ಪಡೆಗೊಳಿಸಲು ಈಗಾಗಲೇ ನಿರ್ಧರಿಸಿದ್ದು, ಅ.15, 16 ರಂದು ಅಧಿಕೃತ ಘೋಷಣೆ ಹೊರಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: T20 WorldCup-2024 ಟೂರ್ನಿಯ ದಿನಾಂಕ ಬಹಿರಂಗ – USA, ವಿಂಡೀಸ್‌ ಆತಿಥ್ಯ

    ಲಾಸ್​ ಏಂಜಲಿಸ್​ ಮತ್ತು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಂಸ್ಥೆಯ ಆಯೋಗವು ಮುಂದಿನ ಭಾನುವಾರದಿಂದ ಮುಂಬೈನಲ್ಲಿ ನಡೆಯಲಿರುವ 141ನೇ IOC (ಭಾರತೀಯ ಒಲಿಂಪಿಕ್ಸ್‌ ಸಮಿತಿ) ಸಭೆಯಲ್ಲೂ ಈ ವಿಷಯವನ್ನು ತಿಳಿಸಲಿದೆ ಎನ್ನಲಾಗಿದೆ.

    ಕ್ರಿಕೆಟ್​ ಈ ಮುನ್ನ 1990ರ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಸ್ಪರ್ಧೆಯಾಗಿತ್ತು. ಆಗ ಇಂಗ್ಲೆಂಡ್​-ಫ್ರಾನ್ಸ್​ ಪುರುಷರ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿತ್ತು. ಕಳೆದ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲೂ ಮಹುಳಾ ಕ್ರಿಕೆಟ್‌ ಒಂದು ಭಾಗವಾಗಿತ್ತು. ಆದರೆ 2028ರ ಲಾಸ್​ ಏಂಜಲಿಸ್​ ಒಲಿಂಪಿಕ್ಸ್​ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್​ ವಿಭಾಗದಲ್ಲಿ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ತಂಡಗಳು ಭಾಗವಹಿಸಲಿವೆ. ಇದನ್ನೂ ಓದಿ: World Cup 2023: ಅ.14 ರಂದು ಪಾಕ್‌ ವಿರುದ್ಧ ಹೈವೋಲ್ಟೇಜ್‌ ಕದನ – ಗಿಲ್‌ ಕಣಕ್ಕಿಳಿಯೋದು ಡೌಟ್‌

    ಕ್ರಿಕೆಟ್ (Cricket)​ ಹೆಚ್ಚಿನ ಜನಪ್ರಿಯತೆ ಹೊಂದಿರುವ ಭಾರತ ಉಪಖಂಡದ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಲಾಸ್​ ಏಂಜಲಿಸ್​ ಒಲಿಂಪಿಕ್ಸ್​ ಆಯೋಜಕರು, ಇದರಿಂದಾಗಿ ನೇರಪ್ರಸಾರ ಹಕ್ಕಿನಿಂದ 1,526 ಕೋಟಿ ರೂ. ಹೆಚ್ಚುವರಿ ಆದಾಯ ಬರುವ ಲೆಕ್ಕಾಚಾರ ಹೊಂದಿದ್ದಾರೆ. ಅದಕ್ಕಾಗಿ ಅಮೆರಿಕ, ವೆಸ್ಟ್‌ ಇಂಡೀಸ್‌ ಜೊತೆಗೆ ವಿಶ್ವಕಪ್‌ ಜಂಟಿ ಆತಿಥ್ಯ ವಹಿಸಿದೆ. ಇದನ್ನೂ ಓದಿ: ICC ಮಾಸ್ಟರ್ ಪ್ಲ್ಯಾನ್‌ – ಹೊಸ ಮಾದರಿಯಲ್ಲಿ 2024ರ T20 ವಿಶ್ವಕಪ್

    ಮಾಹಿತಿ ಪ್ರಕಾರ, 2024ರ T20 ವಿಶ್ವಕಪ್‌ ಟೂರ್ನಿಯು ಮುಂದಿನ ಜೂನ್‌ 4 ರಿಂದ ಜೂನ್‌ 30ರ ವರೆಗೆ ನಡೆಯಲಿದೆ. ಈಗಾಗಲೇ ಐಸಿಸಿ ಅಧಿಕಾರಿಗಳು ಅಮೆರಿಕದಲ್ಲಿ ಆತಿಥ್ಯ ವಹಿಸುವ ಸಂಭಾವ್ಯ ಸ್ಥಳಗಳ ಪರಿಶೀಲನೆ ನಡೆಸಿದ್ದಾರೆ. ಒಟ್ಟಾರೆ ಕೆರೆಬಿಯನ್‌ ಮತ್ತು ಯುಎಸ್‌ನ 10 ಸ್ಥಳಗಳಲ್ಲಿ ವಿಶ್ವಕಪ್‌ ಟೂರ್ನಿ ಜರುಗಲಿದ್ದು, ಯುನೈಟೆಡ್ ಸ್ಟೇಟ್ಸ್‌ನ ಲಾಡರ್‌ ಹಿಲ್‌, ಮೋರಿಸ್ವಿಲ್ಲೆ, ಡಲ್ಲಾಸ್, ನ್ಯೂಯಾರ್ಕ್ ಜೊತೆಗೆ ಫ್ಲೋರಿಡಾದಲ್ಲಿಯೂ ಪಂದ್ಯಗಳನ್ನ ಆಯೋಜಿಸಲಾಗುತ್ತಿದೆ ಎಂದು ತಿಳಿಬಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೊಚ್ಚಲ ಏಷ್ಯನ್‌ ಗೇಮ್ಸ್‌ಗೆ ಟೀಂ ಇಂಡಿಯಾ ರೆಡಿ

    ಚೊಚ್ಚಲ ಏಷ್ಯನ್‌ ಗೇಮ್ಸ್‌ಗೆ ಟೀಂ ಇಂಡಿಯಾ ರೆಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asian Games 2023ಗೆ ಟೀಂ ಇಂಡಿಯಾ ರೆಡಿ – ರಿಂಕುಗೆ ಕೊನೆಗೂ ಸಿಕ್ತು ಚಾನ್ಸ್, ಫಸ್ಟ್ ರಿಯಾಕ್ಷನ್ ಏನು?

    Asian Games 2023ಗೆ ಟೀಂ ಇಂಡಿಯಾ ರೆಡಿ – ರಿಂಕುಗೆ ಕೊನೆಗೂ ಸಿಕ್ತು ಚಾನ್ಸ್, ಫಸ್ಟ್ ರಿಯಾಕ್ಷನ್ ಏನು?

    ಮುಂಬೈ: ಮುಂದಿನ ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಚೀನಾದ ಹ್ಯಾಂಗ್‌ಜೂನಲ್ಲಿ ನಡೆಯುವ ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) ಪಾಲ್ಗೊಳ್ಳಲು ಭಾರತ ತಂಡ ಸಜ್ಜಾಗಿದ್ದು, ಬಿಸಿಸಿಐ ತಂಡದ ಪಟ್ಟಿ ಪ್ರಕಟಿಸಿದೆ. ಏಷ್ಯನ್ ಗೇಮ್ಸ್‌ನಲ್ಲಿ ಮಹಾರಾಷ್ಟ್ರ ಮೂಲದ ಬ್ಯಾಟರ್ ಋತುರಾಜ್ ಗಾಯಕ್ವಾಡ್ (Ruturaj Gaikwad ಟೀಂ ಇಂಡಿಯಾ (Team India) ನಾಯಕತ್ವ ವಹಿಸುತ್ತಿದ್ದಾರೆ.

    ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಕ್ರಿಕೆಟ್ ಕೂಡ ಸ್ಪರ್ಧೆಯ ಭಾಗವಾಗಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 8ರ ವರೆಗೆ ಟಿ20 ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತದ ಮಹಿಳಾ ಹಾಗೂ ಪುರುಷರ ತಂಡವನ್ನ ಕಣಕ್ಕಿಳಿಸಲು ಬಿಸಿಸಿಐನ (BCCI) ಅಪೆಕ್ಸ್ ಕೌನ್ಸಿಲ್ ಒಪ್ಪಿಗೆ ಸೂಚಿಸಿದ ನಂತರ ತಂಡದ ಪಟ್ಟಿ ಪ್ರಕಟಿಸಲಾಗಿದೆ.

    2010 ಮತ್ತು 2014ರ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಭಾರತ ಭಾಗವಹಿಸಲು ನಿರಾಕರಿಸಿತ್ತು. ಆದ್ರೆ 2028ಕ್ಕೆ ಅಮೆರಿಕದ (USA) ಲಾಸ್ ಏಂಜಲೀಸ್‌ನಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ (Olympics) ಕ್ರಿಕೆಟ್ ಸೇರ್ಪಡೆಗೊಳಿಸಲು ಬಿಸಿಸಿಐ, ಐಸಿಸಿ ಒತ್ತಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲು ಅನುಮತಿಸಿದೆ.

    2010ರ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಬಾಂಗ್ಲಾದೇಶ, 2014ರ ಆವೃತ್ತಿಯಲ್ಲಿ ಶ್ರೀಲಂಕಾ ಪುರುಷರ ತಂಡ ಚಿನ್ನದ ಪದಕಗಳನ್ನ ಗೆದ್ದಿತ್ತು. ಮಹಿಳಾ ವಿಭಾಗದಲ್ಲಿ ಪಾಕಿಸ್ತಾನ (Pakistana) ತಂಡ 2 ಬಾರಿ ಚಿನ್ನದ ಪದಕ ಬಾಚಿಕೊಂಡಿದೆ. ಇದನ್ನೂ ಓದಿ: ICC WorldCup 2023: ಈಡನ್‌ ಗಾರ್ಡನ್ಸ್‌ನ ಲೀಗ್‌, ಸೆಮಿಫೈನಲ್‌ ಪಂದ್ಯಗಳಿಗೆ ಟಿಕೆಟ್‌‌ ದರ ನಿಗದಿ

    ಟೀಂ ಇಂಡಿಯಾದಲ್ಲಿ ರಿಂಕುಗೆ ಚಾನ್ಸ್:
    ಇದೇ ಮೊದಲಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವ ಟೀಂ ಇಂಡಿಯಾ ಕ್ರಿಕೆಟ್ ತಂಡದಲ್ಲಿ ಹೊಸಬರಿಗೆ ಅವಕಾಶ ನೀಡಲಾಗಿದೆ. 2023ರ ಐಪಿಎಲ್ ಆವೃತ್ತಿಯಲ್ಲಿ ಮಿಂಚಿದ ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್, ಜಿತೇಶ್ ಶರ್ಮಾ, ತಿಲಕ್ ವರ್ಮಾ ಮೊದಲಾದವರಿಗೆ ಚಾನ್ಸ್ ನೀಡಲಾಗಿದೆ. ಅಲ್ಲದೇ ಐಪಿಎಲ್ ವೇಳೆ ಕೆಕೆಆರ್ ತಂಡದಲ್ಲಿ ಫಿನಿಶರ್ ಖ್ಯಾತಿ ಪಡೆದಿದ್ದ ರಿಂಕು ಸಿಂಗ್‌ಗೂ ಟೀಂ ಇಂಡಿಯಾದಲ್ಲಿ ಸ್ಥಾನ ನೀಡಲಾಗಿದೆ. ಈ ಸಂತಸವನ್ನ ರಿಂಕು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2028ರ ಒಲಿಂಪಿಕ್ಸ್‌ನಲ್ಲಿ T20 ಕ್ರಿಕೆಟ್‌ ಸೇರ್ಪಡೆ – ಐಸಿಸಿ ವಿಶ್ವಾಸ

    ಭಾರತ ಪುರುಷರ ತಂಡ:
    ಋತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮದ್, ರವಿ ಬಿಷ್ಣೋಯಿ, ಅವೇಶ್ ಖಾನ್, ಅರ್ಷ್ದೀಪ್ ಸಿಂಗ್, ಮುಕೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಭಸಿಮ್ರನ್ ಸಿಂಗ್ (ವಿಕೆಟ್ ಕೀಪರ್). ಎಕ್ಸ್ಟ್ರಾ ಪ್ಲೇಯರ್: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್.

    ಭಾರತ ಮಹಿಳಾ ತಂಡ:
    ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್, ಅಮನ್‌ಜೋತ್ ಕೌರ್, ದೇವಿಕಾ ವೈದ್ಯ, ಅಂಜಲಿ ಸರವಣಿ, ಟೈಟಸ್ ಸಾಧು, ರಾಜೇಶ್ವರಿ ಗಾಯಕವಾಡ್, ಮಿನ್ನು ಮಣಿ, ಕನಿಕಾ ಅಹುಜಾ, ಉಮಾ ಚೆಟ್ರಿ (ವಿಕೆಟ್ ಕೀಪರ್), ಅನುಷಾ ಬಾರೆಡ್ಡಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2028ರ ಒಲಿಂಪಿಕ್ಸ್‌ನಲ್ಲಿ T20 ಕ್ರಿಕೆಟ್‌ ಸೇರ್ಪಡೆ – ಐಸಿಸಿ ವಿಶ್ವಾಸ

    2028ರ ಒಲಿಂಪಿಕ್ಸ್‌ನಲ್ಲಿ T20 ಕ್ರಿಕೆಟ್‌ ಸೇರ್ಪಡೆ – ಐಸಿಸಿ ವಿಶ್ವಾಸ

    ದುಬೈ: 2028ಕ್ಕೆ ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ (Olympics 2028) ಟಿ20 ಮಾದರಿಯ ಕ್ರಿಕೆಟ್‌ ಸೇರ್ಪಡೆಗೊಳಿಸುವ ವಿಶ್ವಾಸವಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಸಿಇಒ ಜಿಯೋಫ್‌ ಅಲ್ಲಾರ್ಡಿಸ್‌ ತಿಳಿಸಿದ್ದಾರೆ.

    ಯುಎಸ್‌ನ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಕ್ರಿಕೆಟ್‌ ಸೇರ್ಪಡೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಕ್ರಿಕೆಟ್‌ನ (T20 Cricket) ವ್ಯಾಪ್ತಿಯನ್ನು ವಿಸ್ತರಿಸಲು ಜಾಗತಿಕ ವೇದಿಕೆ ಬಳಸಿಕೊಳ್ಳಲಾಗುತ್ತಿದ್ದು ಟಿ20 ಮಾದರಿಯ ಸೇರ್ಪಡೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದೇವೆ. 2028ರ ಒಲಿಂಪಿಕ್‌ ಕೂಟದಲ್ಲಿ ಕ್ರಿಕೆಟ್‌ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಐಸಿಸಿ ಪ್ರಯತ್ನಗಳು ಯಶಸ್ವಿಯಾದರೆ 2028ರ ಒಲಿಂಪಿ‌ಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆಯಾಗುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಲಿದೆ ಎಂದು ಹೇಳಿದರು.

    ಇದೇ ವೇಳೆ ಅಮೆರಿಕದಲ್ಲಿ (USA) ನಡೆಯುತ್ತಿರುವ ಮೇಜರ್‌ ಕ್ರಿಕೆಟ್‌ ಲೀಗ್‌ಗೆ (MCL) ಅಧಿಕೃತವಾಗಿ ಚಾಲನೆ ನೀಡಲಾಯಿತು. 6 ಫ್ರಾಂಚೈಸಿಗಳು ಈ ಲೀಗ್‌ನಲ್ಲಿ ಪಾಲ್ಗೊಂಡಿವೆ. ಲಾಸ್‌ ಏಂಜಲೀಸ್‌ನ ತಂಡವನ್ನು ಕೋಲ್ಕತ್ತಾ ನೈಟ್‌ ರೈಡರ್ಸ್‌, ನ್ಯೂಯಾರ್ಕ್‌ ಬಳಗವನ್ನು ಮುಂಬೈ ಇಂಡಿಯನ್ಸ್‌, ಸಿಯಾಟಲ್‌ ಒರಾಕಸ್‌ ತಂಡವನ್ನ ಡೆಲ್ಲಿ ಕ್ಯಾಪಿಟಲಗ್ಸ್‌ ಹಾಗೂ ಟೆಕ್ಸಾಸ್‌ ಸೂಪರ್‌ ಕಿಂಗ್ಸ್‌ ಫ್ರಾಂಚೈಸಿಯನ್ನ ಚೆನ್ನೈ ಸೂಪರ್‌ ಕಿಂಗ್ಸ್‌ ಖರೀದಿಸಿದೆ. ಇದನ್ನೂ ಓದಿ: ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಹಲವು ದಾಖಲೆ ಮುರಿದ ಯಶಸ್ವಿ ಜೈಸ್ವಾಲ್‌

    ಬಿಸಿಸಿಐ ಸಹ ಕಳೆದ ಕೆಲ ವರ್ಷಗಳಿಂದ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆಗೊಳಿಸಲು ಒತ್ತಾಯಿಸುತ್ತಿದೆ. ಅದಕ್ಕಾಗಿಯೇ ಈ ಬಾರಿ ಮೊಟ್ಟ ಮೊದಲಬಾರಿಗೆ ಏಷ್ಯನ್‌ ಗೇಮ್ಸ್‌ನಲ್ಲೂ ಪಾಲ್ಗೊಳ್ಳಲು ಅನುಮತಿ ನೀಡಿದೆ. ಇದನ್ನೂ ಓದಿ: PublicTV Explainer: ಇಂಡೋ-ಪಾಕ್‌ ಕದನ ಯಾಕಿಷ್ಟು ರಣರೋಚಕ – ನೀವು ತಿಳಿಯಲೇಬೇಕಾದ ಸಂಗತಿಗಳಿವು..

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]