ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಭಾರತ ಎರಡನೇ ಪದಕವನ್ನು ಪಡೆದುಕೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಮನು ಭಾಕರ್ (Manu Bhaker) ಮತ್ತು ಸರಬ್ಜೋತ್ ಸಿಂಗ್ (Sarabjot Singh) ಕಂಚಿನ ಪದಕ ಗೆದ್ದಿದ್ದಾರೆ.
ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮನು ಭಾಕರ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದರು. ಈಗ ಮಿಶ್ರ ವಿಭಾಗದಲ್ಲೂ ಮನುಭಾಕರ್ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಒಂದೇ ಒಲಿಂಪಿಕ್ಸ್ (Olympics Games) ಕ್ರೀಡಾಕೂಟದಲ್ಲಿ ಎರಡು ಪದಕ ಪಡೆದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ದಕ್ಷಿಣ ಕೊರಿಯಾದ ಜೋಡಿಯನ್ನು ಸೋಲಿಸಿ ಭಾರತಕ್ಕೆ 2 ನೇ ಪದಕವನ್ನು ಗೆದ್ದುಕೊಟ್ಟಿದ್ದಾರೆ.
ಮುಂಬೈ: ಅಮೆರಿಕದ ಲಾಸ್ ಏಂಜಲಿಸ್‌ನಲ್ಲಿ 2028ಕ್ಕೆ ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ (Olympics Games) ಕೊನೆಗೂ ಕ್ರಿಕೆಟ್ (Cricket)ಸೇರ್ಪಡೆಯಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (IOC) ನಿರ್ವಾಹಕರು ಒಲಿಂಪಿಕ್ಸ್ ಕ್ರೀಡೆಯಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಿರುವುದಾಗಿ ಘೋಷಣೆ ಮಾಡಿದ್ದಾರೆ.
ಮುಂಬೈನಲ್ಲಿ ಒಲಿಂಪಿಕ್ಸ್ ಸಮಿತಿಯ ಕಾರ್ಯಕಾರಿ ಮಂಡಳಿ ಸಭೆ ನಡೆದ 2 ದಿನಗಳ ಬಳಿಕ ಮಾತನಾಡಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಅಧ್ಯಕ್ಷ, ಥಾಮಸ್ ಬಾಚ್, ಬೇಸ್‌ಬಾಲ್/ಸಾಫ್ಟ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್ (Flag football) ಜೊತೆಗೆ 5 ಹೊಸ ಕ್ರೀಡೆಗಳನ್ನು ಒಲಿಂಪಿಕ್ಸ್‌ಗೆ ಸೇರ್ಪಡೆಗೊಳಿಸಲಾಗಿದೆ. ಇದರಲ್ಲಿ ಕ್ರಿಕೆಟ್ ಸಹ ಒಂದು. ಕ್ರಿಕೆಟ್ ಸೇರ್ಪಡೆಗೊಳಿಸುವ ಪ್ರಸ್ತಾವನೆಯನ್ನು ಲಾಸ್ ಏಂಜಲಿಸ್‌ನ ಸಂಘಟಕ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂಬುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ: Olympics 2028: ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆ ಖಚಿತ – ಅಧಿಕೃತ ಘೋಷಣೆಯಷ್ಟೇ ಬಾಕಿ
1990ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಪದಕ ಸ್ಪರ್ಧೆಯಾಗಿತ್ತು. ಆಗ ಇಂಗ್ಲೆಂಡ್ -ಫ್ರಾನ್ಸ್ ಪುರುಷರ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿತ್ತು. ಕಳೆದ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್ ಒಂದು ಭಾಗವಾಗಿತ್ತು. ಆದರೆ 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್ ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್ ವಿಭಾಗದಲ್ಲಿ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ತಂಡಗಳು ಭಾಗವಹಿಸಲಿವೆ. ಇದನ್ನೂ ಓದಿ: ಇಂಡೋ-ಪಾಕ್ ಕದನ: 10 ಸೆಕೆಂಡ್ ಜಾಹೀರಾತಿನ ಬೆಲೆ ಕೇಳಿದ್ರೆ ಎದೆ ಬಡಿತ ಹೆಚ್ಚಿಸುತ್ತೆ..!
ಮಾಹಿತಿ ಪ್ರಕಾರ, 2024ರ ಟಿ20 ವಿಶ್ವಕಪ್ ಟೂರ್ನಿಯು ಮುಂದಿನ ಜೂನ್ 4 ರಿಂದ ಜೂನ್ 30ರ ವರೆಗೆ ನಡೆಯಲಿದೆ. ಈಗಾಗಲೇ ಐಸಿಸಿ ಅಧಿಕಾರಿಗಳು ಅಮೆರಿಕದಲ್ಲಿ ಆತಿಥ್ಯ ವಹಿಸುವ ಸಂಭಾವ್ಯ ಸ್ಥಳಗಳ ಪರಿಶೀಲನೆ ನಡೆಸಿದ್ದಾರೆ. ಒಟ್ಟಾರೆ ಕೆರೆಬಿಯನ್ ಮತ್ತು ಯುಎಸ್‌ನ 10 ಸ್ಥಳಗಳಲ್ಲಿ ವಿಶ್ವಕಪ್ ಟೂರ್ನಿ ಜರುಗಲಿದ್ದು, ಯುನೈಟೆಡ್ ಸ್ಟೇಟ್ಸ್‌ನ ಲಾಡರ್ ಹಿಲ್, ಮೋರಿಸ್ವಿಲ್ಲೆ, ಡಲ್ಲಾಸ್, ನ್ಯೂಯಾರ್ಕ್ ಜೊತೆಗೆ ಫ್ಲೋರಿಡಾದಲ್ಲಿಯೂ ಪಂದ್ಯಗಳನ್ನ ಆಯೋಜಿಸಲಾಗುತ್ತಿದೆ. ಇದನ್ನೂ ಓದಿ: ಭಾರತ, ಹಿಂದೂ ಧರ್ಮ ಅವಹೇಳನ – ಗಡಿಪಾರಾದ ಬಳಿಕ ಕ್ಷಮೆ ಕೇಳಿದ ಪಾಕ್ ನಿರೂಪಕಿ