Tag: Om Prakash Rawat

  • ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನಿಲ್ ಅರೋರಾ ನೇಮಕ

    ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನಿಲ್ ಅರೋರಾ ನೇಮಕ

    ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನಿಲ್ ಅರೋರಾ ಅವರನ್ನು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ನೇಮಿಸಿದ್ದಾರೆ.

    ಓಂ ಪ್ರಕಾಶ್ ರಾವತ್ ಅವರ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಸುನಿಲ್ ಅರೋರಾ ಅವರನ್ನು ನೇಮಕ ಮಾಡಲಾಗಿದೆ. ಸುನಿಲ್ ಅವರಿಗೆ ಇಂದು ಅಧಿಕಾರ ಹಸ್ತಾಂತರಿಸಲಾಗಿದ್ದು, ಅಕ್ಟೋಬರ್ 2021ರವೆರೆಗೆ ಕಾರ್ಯನಿರ್ವಹಿಸಲಿದ್ದಾರೆ. ಸುನಿಲ್ ಅರೋರಾ ಅವರು 2017 ಆಗಸ್ಟ್ 31ರಂದು ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದರು.

    ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಜಮ್ಮು-ಕಾಶ್ಮೀರ, ಓಡಿಶಾ, ಮಹಾರಾಷ್ಟ್ರ, ಹರಿಯಾಣ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

    ಸುನಿಲ್ ಅರೋರಾ ಅವರು 1980ರ ಬ್ಯಾಚ್‍ನ ರಾಜಸ್ಥಾನದ ಐಎಎಸ್ ಅಧಿಕಾರಿಯಾಗಿದ್ದಾರೆ. 1993-1998ರವರೆಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕೇಂದ್ರ ಹಣಕಾಸು, ಯೋಜನಾ ಆಯೋಗ ಹಾಗೂ ಜವಳಿ ಸೇರಿದಂತೆ ವಿವಿಧ ಸಚಿವಾಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೌಶಲ್ಯಾಭಿವೃದ್ಧಿ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

    ಅಧಿಕಾರ ಸ್ವೀಕರಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸುನಿಲ್ ಅರೋರಾ ಅವರು, 2019ರ ಲೋಕಸಭಾ ಚುನಾವಣೆಗಾಗಿ ಆಂತರಿಕ ಸಿದ್ಧತೆಗಳನ್ನು ಆಯೋಗ ಆರಂಭಿಸಿದೆ. ಪ್ರತಿಯೊಬ್ಬರೂ ಮತದಾನ ಮಾಡುವ ಹಕ್ಕನ್ನು ಹೊಂದುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಏಕಕಾಲದಲ್ಲಿ ಚುನಾವಣೆ ಸದ್ಯಕ್ಕೆ ಅಸಾಧ್ಯ: ಓಂ ಪ್ರಕಾಶ್ ರಾವತ್

    ಏಕಕಾಲದಲ್ಲಿ ಚುನಾವಣೆ ಸದ್ಯಕ್ಕೆ ಅಸಾಧ್ಯ: ಓಂ ಪ್ರಕಾಶ್ ರಾವತ್

    ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಚುನಾವಣೆ ಆಯೋಗದ ಅಧ್ಯಕ್ಷ ಓಂ ಪ್ರಕಾಶ್ ರಾವತ್ ಹೇಳಿದ್ದಾರೆ.

    ‘ಒಂದು ದೇಶ, ಒಂದೇ ಚುನಾವಣೆ’ ಎನ್ನುವ ಅಭಿಪ್ರಾಯವನ್ನು ಬಿಜೆಪಿ ವ್ಯಕ್ತಪಡಿಸಿತ್ತು. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಏಕಕಾಲದಲ್ಲಿ ನಡೆಯಬೇಕು ಎನ್ನುವುದು ಬಿಜೆಪಿಯ ಉದ್ದೇಶವಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಓಂ ಪ್ರಕಾಶ್, ಏಕಕಾಲದಲ್ಲಿ ಚುನಾವಣೆ ಸಾಧ್ಯವೇ ಇಲ್ಲ. ಅಲ್ಲದೆ ಇದಕ್ಕೆ ಕಾನೂನು ರಚನೆಯಾಗಬೇಕು ಎಂದಿದ್ದಾರೆ.

    2019ರ ಏಪ್ರಿಲ್-ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಅದೇ ವೇಳೆ ಮಧ್ಯಪ್ರದೇಶ, ಛತ್ತೀಸ್‍ಘಡ, ರಾಜಸ್ಥಾನ ಮತ್ತು ಮಿಜೋರಂ ವಿಧಾನಸಭೆ ಚುನಾವಣೆ ಅವಧಿ ಬರುತ್ತದೆ. ಹೀಗಾಗಿ ಇದೇ ವರ್ಷದ ಅಂತ್ಯದಲ್ಲಿ ಈ ರಾಜ್ಯಗಳ ಚುನಾವಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv