Tag: one nation one election

  • One Nation One Election | ಒಂದೇ ಚುನಾವಣೆಯಿಂದ ದೇಶಕ್ಕೆ ಒಳಿತು – ಬಿಜೆಪಿಯಿಂದ ವಿಚಾರ ಸಂಕಿರಣ

    One Nation One Election | ಒಂದೇ ಚುನಾವಣೆಯಿಂದ ದೇಶಕ್ಕೆ ಒಳಿತು – ಬಿಜೆಪಿಯಿಂದ ವಿಚಾರ ಸಂಕಿರಣ

    ಬೆಂಗಳೂರು: ಒಂದು ದೇಶ ಒಂದು ಚುನಾವಣೆಯು (One Nation One Election) ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದೆ. ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದರು.

    ಮಲ್ಲೇಶ್ವರದ (Malleshwara) ಹವ್ಯಕ ಭವನದಲ್ಲಿ ಇಂದು (ಸೆ.7) ಏರ್ಪಡಿಸಿದ್ದ ಒಂದು ದೇಶ ಒಂದು ಚುನಾವಣೆ ಕುರಿತು ವಿದ್ಯಾರ್ಥಿ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಆಡಳಿತ ಸುಧಾರಣೆ ಜೊತೆಗೆ ಸಾವಿರಾರು ಕೋಟಿ ಹಣವನ್ನು ಉಳಿಸುವ ಕ್ರಮ ಇದು ಎಂದು ಮೆಚ್ಚುಗೆ ಸೂಚಿಸಿದರು.ಇದನ್ನೂ ಓದಿ: ಮೋದಿಜಿ ಯಿಂದ ಮಾತ್ರ ಭಾರತ ಮುನ್ನಡೆಸಲು ಸಾಧ್ಯ ಅಂತ ಜನ ಒಪ್ಪಿದ್ದಾರೆ: ವಿಜಯೇಂದ್ರ

    ಕೆಟ್ಟ ವಿಚಾರಗಳು ಬಹಳ ಬೇಗ ಜನರನ್ನು ತಲುಪುತ್ತವೆ. ಒಳ್ಳೆಯ ವಿಚಾರ ಜನರನ್ನು ತಲುಪಲು ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ನಾವು ನಮ್ಮ ಜಿಲ್ಲೆ, ವಿಧಾನಸಭಾ ಕ್ಷೇತ್ರಗಳಲ್ಲಿ ಈ ಒಳ್ಳೆಯ ವಿಚಾರದ ಕುರಿತು ಜಾಗೃತಿ ಮೂಡಿಸಬೇಕು. ವಿವಿಧ ಕ್ಷೇತ್ರಗಳ ಸಮಾಜದ ಗಣ್ಯರ ಮಧ್ಯೆ ಚರ್ಚೆ ಮಾಡಬೇಕು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವೆ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದರು.

    ಪ್ರಧಾನಿ ನರೇಂದ್ರ ಮೋದಿಜೀ ಅವರ ದಿಟ್ಟ ನಾಯಕತ್ವದಲ್ಲಿ ಭಾರತವು ಅತ್ಯಂತ ವೇಗದಲ್ಲಿ ಬೆಳವಣಿಗೆ ಸಾಧಿಸುತ್ತಿದೆ. ಕೆಲವೇ ಕೆಲವು ವರ್ಷಗಳಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿ ಜಗತ್ತಿನ ಎರಡನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ. ಇದನ್ನು ಮತ್ತು ಭಾರತದ ಏಳಿಗೆಯನ್ನು ಅಮೆರಿಕ ಸಹಿಸಿಕೊಳ್ಳದಿದ್ದರೆ ಒಪ್ಪಬಹುದು. ಆದರೆ, ಈ ದೇಶದ ಮಣ್ಣಿನ ಋಣ, ಅನ್ನದ ಋಣ ಪಡೆದ ರಾಹುಲ್ ಗಾಂಧಿ, ನಮ್ಮ ಮುಖ್ಯಮಂತ್ರಿಯವರಿಗೆ ಇದನ್ನು ಸಹಿಸಲು ಆಗುತ್ತಿಲ್ಲ ಎಂದರೆ ಇದು ಈ ದೇಶದ ದುರಂತ ಎಂದು ಟೀಕಿಸಿದರು.

    ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು ಮಾತನಾಡಿ, ಒಂದೇ ಚುನಾವಣೆ ಕುರಿತು ಅಧ್ಯಯನ ನಡೆಸಿ ವರದಿ ಪಡೆಯಲಾಗಿದೆ. ಇದು ಅನುಷ್ಠಾನಕ್ಕೆ ಯೋಗ್ಯ ಎಂಬ ವರದಿ ಲಭಿಸಿದೆ. 370ನೇ ವಿಧಿಯನ್ನು ತಾತ್ಕಾಲಿಕ ನೆಲೆಯಲ್ಲಿ ಹೇರಲಾಗಿತ್ತು. ಮತಬ್ಯಾಂಕ್, ತುಷ್ಟೀಕರಣದ ಸಲುವಾಗಿ ಅದನ್ನು ಖಾಯಂ ಮಾಡಿದ್ದರು. ಬಿಜೆಪಿ, 370ನೇ ವಿಧಿಯನ್ನು ತನ್ನ ಆಶ್ವಾಸನೆಯಂತೆ ರದ್ದು ಮಾಡಿತು. ಇನ್ನೂ ಜಿಎಸ್‌ಟಿ ಸರಳೀಕರಣದ ಮಹತ್ವದ ನಿರ್ಧಾರವನ್ನು ಮೋದಿಜೀ ಅವರ ಮಾರ್ಗದರ್ಶನದಡಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತೆಗೆದುಕೊಂಡಿದ್ದಾರೆ ಎಂದರು.ಇದನ್ನೂ ಓದಿ: Lunar Eclipse: ಚಂದ್ರನೇಕೆ ಕೆಂಪು ಕೆಂಪಾಗಲಿದ್ದಾನೆ?; ಗ್ರಹಣ ವೀಕ್ಷಣೆಗೆ ಎಲ್ಲೆಲ್ಲಿ ವ್ಯವಸ್ಥೆ?

    ಈ ಮೊದಲು ದೇಶದಲ್ಲಿ ಒಂದು ರಾಷ್ಟ್ರ ಒಂದೇ ಚುನಾವಣೆ ಪದ್ಧತಿ ಇತ್ತು. ಆದರೆ, ಕಾಂಗ್ರೆಸ್ಸಿನ ಇಂದಿರಾ ಗಾಂಧಿಯವರು ಅನೇಕ ರಾಜ್ಯಗಳಲ್ಲಿ ಚುನಾಯಿತ ಸರ್ಕಾರವನ್ನು ರದ್ದು ಮಾಡಿ, ರಾಷ್ಟ್ರಪತಿ ಆಳ್ವಿಕೆ ಹೇರಿ ಈ ಗಿಟಾರ್‌ನ ತಂತಿ ಕಡಿದು ಹಾಕಿದರು ಎಂದು ಟೀಕಿಸಿದರು.

    ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಮಾತನಾಡಿ, ವಿವಿಧತೆಯಲ್ಲಿ ಏಕತೆ ಮತ್ತು ಒಗ್ಗಟ್ಟಿನ ಸಂದೇಶವನ್ನು ನಾವು ಒಂದು ರಾಷ್ಟ್ರ- ಒಂದು ಚುನಾವಣೆ ಎಂಬ ಸುಧಾರಣೆ ಮೂಲಕ ನೀಡಲು ಸಾಧ್ಯವಿದೆ. ಇದಕ್ಕೆ ಹೆಚ್ಚಿನ ಒತ್ತು ನೀಡಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು. ಇದೊಂದು ಅಭಿಯಾನ ಆಗಬೇಕಿದೆ ಎಂದು ತಿಳಿಸಿದರು.ಇದನ್ನೂ ಓದಿ: ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿ – ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

  • ಏಕಕಾಲದಲ್ಲಿ ಚುನಾವಣೆ ನಡೆಸುವುದು ಸಂವಿಧಾನದ ಮೂಲ ರಚನೆಯನ್ನ ಉಲ್ಲಂಘಿಸುವುದಿಲ್ಲ: ಡಿ.ವೈ ಚಂದ್ರಚೂಡ್

    ಏಕಕಾಲದಲ್ಲಿ ಚುನಾವಣೆ ನಡೆಸುವುದು ಸಂವಿಧಾನದ ಮೂಲ ರಚನೆಯನ್ನ ಉಲ್ಲಂಘಿಸುವುದಿಲ್ಲ: ಡಿ.ವೈ ಚಂದ್ರಚೂಡ್

    – ಒಂದು ದೇಶ ಒಂದು ಚುನಾವಣೆ ಬೆಂಬಲಿಸಿದ ನಿವೃತ್ತ ಸಿಜೆಐ

    ನವದೆಹಲಿ: ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ. ಅಲ್ಲದೇ ಹೆಚ್ಚಿನ ಸ್ಪಷ್ಟತೆಗಾಗಿ ಮಸೂದೆಯ ಕೆಲವು ನಿಬಂಧನೆಗಳನ್ನು, ವಿಶೇಷವಾಗಿ ಚುನಾವಣಾ ಆಯೋಗದ ಅಧಿಕಾರಗಳು ಮತ್ತು ತುರ್ತು ಪರಿಸ್ಥಿತಿಗಳ ಬಗ್ಗೆ ಪರಿಶೀಲನೆಯಾಗಬೇಕು ಎಂದು ನಿವೃತ್ತ ಸಿಜೆಐ ಡಿ.ವೈ ಚಂದ್ರಚೂಡ್ (DY Chandrachud) ಹೇಳಿದ್ದಾರೆ.

    ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ ಏರ್ಪಡಿಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಅಸಮಕಾಲಿಕ ಅಥವಾ ಏಕಕಾಲಿಕವಲ್ಲದ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗೆ ಅತ್ಯಗತ್ಯ ಸ್ಥಿತಿಯಲ್ಲ. ಆದ್ದರಿಂದ ಇದನ್ನು ಸಂವಿಧಾನದ ಮೂಲ ಚೌಕಟ್ಟಿನ ಭಾಗವಾಗಿ ನೋಡಲಾಗುವುದಿಲ್ಲ. ವಾಸ್ತವವಾಗಿ, ಗಣರಾಜ್ಯದ ಆರಂಭಿಕ ವರ್ಷಗಳಲ್ಲಿ ಸಂವಿಧಾನದ ಮೂಲ ವಿನ್ಯಾಸವು ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ಗುನ್ನಾ – ವಾರ್ಷಿಕ 40 ಲಕ್ಷ ವಹಿವಾಟು ಮೀರಿದ್ರೆ GST ಫಿಕ್ಸ್

    ವಿಧಾನಿಕ ಮಿತಿಯೊಳಗೆ ಚುನಾವಣೆಗಳನ್ನು ನಡೆಸಿದರೆ, ವಿಧಾನಸಭೆಯ ಅಧಿಕಾರಾವಧಿಯನ್ನು ಮೊಟಕುಗೊಳಿಸಿದರೂ ಮತದಾರರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಹಕ್ಕನ್ನು ಉಲ್ಲಂಘಿಸುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: Air India Crash | ವಿಮಾನ ದುರಂತಕ್ಕೂ ಮುನ್ನವೇ ಏರ್‌ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು ಅಮೆರಿಕ

    ಏಕಕಾಲದಲ್ಲಿ ಚುನಾವಣೆಗಳು ಸ್ಥಳೀಯ ಸಮಸ್ಯೆಗಳನ್ನು ಮರೆಮಾಡಬಹುದು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಭಾಷಾ ಸಂಬAಧಿತ ಉದಾಹರಣೆಯನ್ನು ಉಲ್ಲೇಖಿಸಿದರು. ಅವು ಸಾಮಾನ್ಯವಾಗಿ ಸ್ಥಳೀಯವಾಗಿರುತ್ತವೆ. ಆದರೆ ರಾಷ್ಟ್ರೀಯ ಚುನಾವಣಾ ಚರ್ಚೆಯ ಭಾಗವಾಗಿ ಹೊರ ಹೊಮ್ಮಬಹುದು ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ದುಪ್ಪಟ್ಟು ಹಣ ವಸೂಲಿ – ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋ ಸೀಜ್

    ರಾಜಕೀಯ ಸ್ಥಿರತೆಯ ಕುರಿತು ಮಾತನಾಡಿದ ಅವರು, ಸುಗಮ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಅವಿಶ್ವಾಸ ನಿರ್ಣಯಗಳ ಮೇಲೆ ಮಿತಿಗಳನ್ನು ಹಾಕಬಹುದು. ಇದಕ್ಕೆ ಸಾಂವಿಧಾನಿಕ ತಿದ್ದುಪಡಿ ಅಗತ್ಯವಿಲ್ಲ. ಸದನದ ನಿಯಮಗಳಲ್ಲಿ ಬದಲಾವಣೆಗಳ ಮೂಲಕ ಇದನ್ನು ಕಾರ್ಯಗತಗೊಳಿಸಬಹುದು ಎಂದು ಹೇಳಿದ್ದಾರೆ.

    ಈ ವೇಳೆ ಉಪಸ್ಥಿತರಿದ್ದ ಮಾಜಿ ಸಿಜೆಐ ಜೆ.ಎಸ್.ಖೇಹರ್ (JS Khehar) ಅವರು ಮಾತನಾಡಿ, ಮಸೂದೆಯು ಸಂವಿಧಾನದ ಮೂಲ ತತ್ವಗಳನ್ನು ಉಲ್ಲಂಘಿಸುವುದಿಲ್ಲ ಎಂದು ವಿಧಾನಸಭೆಗೆ ಚುನಾವಣೆಗಳನ್ನು ಯಾವಾಗ ನಡೆಸಬೇಕೆಂದು ನಿರ್ಧರಿಸುವಲ್ಲಿ ಚುನಾವಣಾ ಆಯೋಗಕ್ಕೆ ವ್ಯಾಪಕ ವಿವೇಚನೆಯನ್ನು ನೀಡುವ ಮಸೂದೆಯ ಸೆಕ್ಷನ್ 82ಂ(5)ರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

  • ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಬೆಂಬಲಿಸಿದ ನಿವೃತ್ತ ಸಿಜೆಐ ಚಂದ್ರಚೂಡ್‌

    ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಬೆಂಬಲಿಸಿದ ನಿವೃತ್ತ ಸಿಜೆಐ ಚಂದ್ರಚೂಡ್‌

    ನವದೆಹಲಿ: ಸುಪ್ರೀಂ ಕೋರ್ಟ್‌ (Supreme Court) ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ (Ex-CJI Chandrachud) ಅವರು ಒಂದು ರಾಷ್ಟ್ರ, ಒಂದು ಚುನಾವಣೆಯ (One Nation, One Election) ಪರವಾಗಿ ಅಭಿಪ್ರಾಯ ಮಂಡಿಸಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.

    ಈ ವರ್ಷದ ಏಪ್ರಿಲ್‌ನಲ್ಲಿ ವಿವರವಾದ ಟಿಪ್ಪಣಿಯನ್ನು ಸಂಸದೀಯ ಸಮಿತಿಗೆ ಡಿ.ವೈ. ಚಂದ್ರಚೂಡ್ ಸಲ್ಲಿಸಿದ್ದಾರೆ. ಇದರಲ್ಲಿ ಅವರು ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಿದರೆ ಸಂವಿಧಾನ ಮೂಲ ರಚನೆಯ ಸಿದ್ಧಾಂತವನ್ನು ಉಲ್ಲಂಘಿಸುತ್ತದೆ ಎಂಬ ವಾದಗಳನ್ನು ತಳ್ಳಿಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಒಂದು ರಾಷ್ಟ್ರ, ಒಂದು ಚುನಾವಣೆಯ ಪರವಾಗಿ ಮಾತನಾಡಿದರೂ ಲೋಕಸಭೆಯಲ್ಲಿ ಮಂಡಿಸಲಾದ ಮಸೂದೆಗಳಲ್ಲಿ ಚುನಾವಣಾ ಆಯೋಗಕ್ಕೆ ನೀಡಲಾದ ಅನಿರ್ದಿಷ್ಟ ಮತ್ತು ವ್ಯಾಪಕ ಅಧಿಕಾರಗಳನ್ನು ಅವರು ವಿರೋಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಜೀವನ ತುಂಬಾ ಆಕರ್ಷಕ: ವರ್ಗಾವಣೆ ವಿರೋಧಿಸಿ ವೈದ್ಯರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

    ನಿವೃತ್ತ ನ್ಯಾ. ಚಂದ್ರಚೂಡ್, ಮಾಜಿ ಮುಖ್ಯ ನ್ಯಾ.ಜೆ ಕೆಹರ್ ಮತ್ತು ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ ಮತ್ತು ಇ ಎಂ ಸುದರ್ಶನ ನಾಚಿಯಪ್ಪನ್ ಅವರನ್ನು ಒಂದು ದೇಶ ಒಂದು ಚುನಾವಣೆ ಸಂಬಂಧ ರಚನೆಯಾಗಿರುವ ಜಂಟಿ ಸಂಸದೀಯ ಸಮಿತಿ ಜುಲೈ 11 ರಂದು ಸಂವಾದಕ್ಕೆ ಆಹ್ವಾನಿಸಿದೆ.

    ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ಸಂವಿಧಾನದ ಮೂಲ ಲಕ್ಷಣವಾಗಿದೆ. ಹಾಗೆಂದ ಮಾತ್ರಕ್ಕೆ ಏಕಕಾಲದಲ್ಲಿ ಚುನಾವಣೆ ನಡೆಸದಿದ್ದರೆ ಮಾತ್ರ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಯುತ್ತದೆ ಎಂದು ಹೇಳಲು ಬರುವುದಿಲ್ಲ ಎಂಬ ಅಭಿಪ್ರಾಯವನ್ನು ನಿವೃತ್ತ ನ್ಯಾಯಮೂರ್ತಿಗಳು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿದ್ದ ಮಾತ್ರಕ್ಕೆ ವಿನಾಯ್ತಿ ಇಲ್ಲ: ಪತ್ನಿ ಕೊಂದಿದ್ದ ಕಮಾಂಡೋಗೆ ಸುಪ್ರೀಂ ತರಾಟೆ

    ಭಾರತೀಯ ಮತದಾರರು ಮುಗ್ಧರು. ಅವರನ್ನು ಸುಲಭವಾಗಿ ಹೇಗೆ ಬೇಕಾದರೂ ಪ್ರಭಾವಿಸಬಹುದು ಎಂಬ ವಾದವನ್ನು ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ವಿರೋಧಿಸುವವರು ಮುಂದಿಡುತ್ತಾರೆ. ಆದರೆ ಸಾರ್ವತ್ರಿಕ ವಯಸ್ಕ ಮತದಾನವು ಸಾಂವಿಧಾನಿಕ ಬದ್ಧತೆಯಾಗಿದೆ. ಪರಿಶೀಲಿಸದ ಊಹೆಯ ಆಧಾರದಲ್ಲಿ ಸಾಂವಿಧಾನಿಕ ಚೌಕಟ್ಟನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ.

    ರಾಷ್ಟ್ರೀಯ ಮತ್ತು ರಾಜ್ಯ ಚುನಾವಣೆಗಳಲ್ಲಿ ಜನರು ವಿಭಿನ್ನವಾಗಿ ಮತ ಚಲಾಯಿಸುತ್ತಾರೆ ಎಂಬ ಸಲಹೆಗಳನ್ನು ತಳ್ಳಿಹಾಕಿದ ಅವರು, ಜನರು ತಮ್ಮ ಸ್ಥಳೀಯ ಮತ್ತು ರಾಜ್ಯ ಹಿತಾಸಕ್ತಿಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಬೇಕೆಂದಿದ್ದರೆ ಸ್ಥಳೀಯ ವಿಷಯಗಳ ಮೇಲೆ ರಾಷ್ಟ್ರೀಯ ಚುನಾವಣೆಗೆ ಮತ ಚಲಾಯಿಸಬಹುದಲ್ಲವೇ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

     

  • ಪ್ರಿಯಾಂಕಾ Vs ಬಾನ್ಸುರಿ ಸ್ವರಾಜ್‌ – ʼNational Herald Ki Lootʼ ಕೈಚೀಲ ಹೊತ್ತು ಸಭೆಗೆ ಹಾಜರ್‌

    ಪ್ರಿಯಾಂಕಾ Vs ಬಾನ್ಸುರಿ ಸ್ವರಾಜ್‌ – ʼNational Herald Ki Lootʼ ಕೈಚೀಲ ಹೊತ್ತು ಸಭೆಗೆ ಹಾಜರ್‌

    – ಒಂದು ದೇಶ ಒಂದು ಚುನಾವಣೆ, JPC ಸಭೆ ಆರಂಭ
    – ಇಂದು ನಾಲ್ವರು ನ್ಯಾಯಾಂಗ ತಜ್ಞರೊಂದಿಗೆ ಸಂವಾದ

    ನವದೆಹಲಿ: ಚುನಾವಣೆಯ ವೇಳೆ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಣೆ ಮಾಡಿದಂತೆ ಬಹು ನಿರೀಕ್ಷೆಯ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ ಒಂದು ದೇಶ, ಒಂದು ಚುನಾವಣೆಗೆ (One Nation One Election) ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯ (JPC) ಸಭೆ ಆರಂಭಗೊಂಡಿದೆ.

    ಈ ಸಭೆಗೆ ಮಾಜಿ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್‌ ಪುತ್ರಿ, ದೆಹಲಿ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ (Bansuri Swaraj) ಅವರು ʼNational Herald Ki Lootʼ ಎಂದು ಬರೆದಿರುವ ಬ್ಯಾಗ್‌ ಹೊತ್ತುಕೊಂಡು ಸಂಸತ್ತಿನ ಅನೆಕ್ಸ್ ಕಟ್ಟಡಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.

    ಡಿಸೆಂಬರ್‌ನಲ್ಲಿ ಪ್ರಿಯಾಂಕಾ ವಾದ್ರಾ (Priyanka Wadra) ಅವರು ʼಪ್ಯಾಲೆಸ್ತೀನ್‌ʼಎಂದು ಬರೆದಿರುವ ಬ್ಯಾಗ್‌ ಹಾಕಿಕೊಂಡು ಬಂದಿದ್ದು ಬಹಳ ಚರ್ಚೆಯಾಗಿತ್ತು. ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಯಾಗುತ್ತಿದ್ದರೂ ಅವರ ನೋವಿಗೆ ಮಿಡಿಯದ ಪ್ರಿಯಾಂಕಾ ಮುಸ್ಲಿಮರ ವೋಟ್‌ ಬ್ಯಾಂಕ್‌ಗಾಗಿ ʼಪ್ಯಾಲೆಸ್ತೀನ್‌ʼ ಎಂದು ಬರೆದಿರುವ ಬ್ಯಾಗ್‌ ಧರಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.

    ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಇತ್ತಿಚೇಗೆ ಇಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಇದರಲ್ಲಿ ಎಐಸಿಸಿ ಮಾಜಿ ಅಧ್ಯಕ್ಷರುಗಳಾದ ಸೋನಿಯಗಾಂಧಿ ಮತ್ತು ರಾಹುಲ್‌ಗಾಂಧಿ ಸೇರಿ ಹಲವು ಕಾಂಗ್ರೇಸ್ ನಾಯಕರನ್ನು ಆರೋಪಿಗಳನ್ನಾಗಿಸಿದೆ. ಈ ಬೆಳವಣಿಗೆ ಬೆನ್ನಲೆ ಬನ್ಸೂರಿ ನ್ಯಾಷನಲ್ ಹೆರಾಲ್ಡ್ ಕಿ ಲೂಟ್ ಸಂದೇಶವಿರುವ ಬ್ಯಾಗ್ ಧರಿಸುವ ಮೂಲಕ ಗಮನ ಸೆಳೆದಿದ್ದಾರೆ.

    ಈ ಬಗ್ಗೆ ಮಾತನಾಡಿರುವ ಬಾನ್ಸುರಿ ಸ್ವರಾಜ್‌, ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಮಾಧ್ಯಮದಲ್ಲಿ ಮೊದಲ ಬಾರಿಗೆ ಭ್ರಷ್ಟಾಚಾರವು ಒಳನುಗ್ಗಿದೆ. ಇಡಿಯ ಚಾರ್ಜ್‌ಶೀಟ್ ಪ್ರಕಾರ, ಕಾಂಗ್ರೆಸ್ ಪಕ್ಷವು ಸಾರ್ವಜನಿಕ ಸೇವೆಗಾಗಿ ಮೀಸಲಾದ ಸಂಸ್ಥೆಗಳನ್ನು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದೆ. ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ಕಾಂಗ್ರೆಸ್ ಪಕ್ಷ ಮತ್ತು ಅದರ ಉನ್ನತ ನಾಯಕತ್ವವು ಇದಕ್ಕೆ ಜವಾಬ್ದಾರರಾಗಿರಬೇಕು ಎಂದು ಆರೋಪಿಸಿದರು

    ಸಂಜೆ 5 ಗಂಟೆಯವರೆಗೆ ಸಭೆ:
    ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೂ ನಾಲ್ಕು ಹಂತಗಳಲ್ಲಿ ನ್ಯಾಯಾಂಗ ತಜ್ಞರೊಂದಿಗೆ ಇಂದು ಜೆಪಿಸಿ ಸಭೆ ನಡೆಯಲಿದೆ. ಮೊದಲ ಅಧಿವೇಶನದಲ್ಲಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಹೇಮಂತ್ ಗುಪ್ತಾ, ಎರಡನೇ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್‌ಎನ್ ಝಾ ಅವರೊಂದಿಗೆ ಸಂವಾದ ನಡೆಯಲಿದೆ.
    ಮೂರನೇ ಅಧಿವೇಶನದಲ್ಲಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಮತ್ತು ಭಾರತದ 21 ನೇ ಕಾನೂನು ಆಯೋಗದ ಅಧ್ಯಕ್ಷರಾದ ಡಾ. ನ್ಯಾಯಮೂರ್ತಿ ಬಿ.ಎಸ್. ಚೌಹಾಣ್ ಭಾಗವಹಿಸಲಿದ್ದಾರೆ.

    ಅಂತಿಮ ಅಧಿವೇಶನದಲ್ಲಿ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಮತ್ತು ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರೊಂದಿಗೆ ನಡೆಯಲಿದೆ. ಹೊಸ ಕಾನೂನಿನ ಸಾಧಕ ಬಾಧಕಗಳ ಬಗ್ಗೆ ಕಾನೂನು ತಜ್ಞರಿಂದ ಅಭಿಪ್ರಾಯ ಸಂಗ್ರಹವಾಗಲಿದೆ.

    ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ (Law Minister Arjun Meghwal) ಡಿಸೆಂಬರ್‌ನಲ್ಲಿ ಸಂವಿಧಾನ (ನೂರ ಇಪ್ಪತ್ತೊಂದನೇಯ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು ಮಂಡಿಸಿದ್ದರು. ಮಸೂದೆ ಮಂಡನೆಯ ಬೆನ್ನಲ್ಲೇ INDIA ಒಕ್ಕೂಟದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ವಿರೋಧ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ಹೆಚ್ಚಿನ ಚರ್ಚೆ ನಡೆಸಲು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಿತ್ತು. ಇದನ್ನೂ ಓದಿ:1 ಲಕ್ಷ ರೂ. ದಾಟಿದ ಚಿನ್ನದ ಬೆಲೆ – ಸಾರ್ವಕಾಲಿಕ ದಾಖಲೆ

    ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ನೇತೃತ್ವದ ಉನ್ನತ ಮಟ್ಟದ ಸಮಿತಿ 2014ರ ಮಾರ್ಚ್‌ 14 ರಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಸಲ್ಲಿಸಿತ್ತು.

    191 ದಿನಗಳ ಸಮಯವನ್ನು ತೆಗೆದುಕೊಂಡು ಅಧ್ಯಯನ ನಡೆಸಿದ್ದ ಸಮಿತಿ 18,000 ಕ್ಕೂ ಅಧಿಕ ಪುಟಗಳ ವರದಿಯನ್ನು ತಯಾರಿಸಿತ್ತು. ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆಯನ್ನು ಸಂಗ್ರಹಿಸಿತ್ತು. ಇದನ್ನೂ ಓದಿ: ಖರ್ಗೆ ಕಾರ್ಯಕ್ರಮಕ್ಕೆ ಬಾರದ ಜನ – ಪಕ್ಷದಿಂದಲೇ ಜಿಲ್ಲಾಧ್ಯಕ್ಷ ಅಮಾನತು

    ಭಾರತದಲ್ಲಿ ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಹಾಲಿ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ವಿಸರ್ಜನೆಯಾದಾಗ ಪ್ರತ್ಯೇಕವಾಗಿ ನಡೆಯುತ್ತಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ಹಿಂದಿನಿಂದಲೂ ಒಂದು ರಾಷ್ಟ್ರ, ಒಂದು ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಿದ್ದಾರೆ. ಕೋವಿಂದ್ ನೇತೃತ್ವದ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಹಿರಿಯ ವಕೀಲ ಹರೀಶ್ ಸಾಳ್ವೆ ಇದ್ದರು.

  • ಒಂದು ದೇಶ, ಒಂದು ಚುನಾವಣೆ ಹಿಂದೆ ‘ನಂಬರ್‌ ಗೇಮ್’‌ – ಬಿಲ್‌ ಪಾಸ್‌ ಆಗುತ್ತಾ?

    ಒಂದು ದೇಶ, ಒಂದು ಚುನಾವಣೆ ಹಿಂದೆ ‘ನಂಬರ್‌ ಗೇಮ್’‌ – ಬಿಲ್‌ ಪಾಸ್‌ ಆಗುತ್ತಾ?

    ಪ್ರಸ್ತುತ ದೇಶದಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಬಹು ಚರ್ಚೆಯಲ್ಲಿದೆ. ದೇಶದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಮಸೂದೆ ಇದಾಗಿದೆ. ಈ ಬಿಲ್ ಜಾರಿಗೆ ಪರ-ವಿರೋಧದ ಮಾತು ಜೋರಾಗಿದೆ. ಬಿಜೆಪಿಯ ಪ್ರಮುಖ ಕಾರ್ಯಸೂಚಿಯನ್ನು ಜಾರಿ ತರಲು ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದಲ್ಲೇ ಒಮ್ಮತದ ಅಭಿಪ್ರಾಯ ಮೂಡಿಲ್ಲ. ಮಂಗಳವಾರ ಕೇಂದ್ರ ಸರ್ಕಾರ ಈ ಮಸೂದೆಯನ್ನು ಮಂಡಿಸಿತು. ಆದರೆ, ಅಂಗೀಕಾರಕ್ಕೆ ಬೇಕಾದ ಬಹುಮತ ಮಾತ್ರ ಸಿಗಲಿಲ್ಲ. ಇದರಿಂದ ‘ಒನ್ ನೇಷನ್ ಒನ್ ಎಲೆಕ್ಷನ್’ ವಿವಾದಿತ ಬಿಲ್ ಆಗಿ ದೇಶದಲ್ಲಿ ಚರ್ಚೆ ಹುಟ್ಟುಹಾಕಿದೆ.

    ಮಸೂದೆ ಮೂಲಕ ಕೇಂದ್ರ ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಮುಂದಾಗಿದೆ. ಆದರೆ, ಸಂಖ್ಯಾಬಲದ ಕೊರತೆಯಿಂದ ತನ್ನ ಕನಸನ್ನು ಸಾಕಾರಗೊಳಿಸಲು ಸಾಧ್ಯವಾಗಿಲ್ಲ. ನಿರೀಕ್ಷೆಯಂತೆ ಲೋಕಸಭೆಯಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ಡಿಎಂಕೆ, ಅಸಾದುದ್ದೀನ್ ಓವೈಸಿ ಎಐಎಂಐಎಂ ಸೇರಿದಂತೆ ಸಣ್ಣ ಪಕ್ಷಗಳು ಕೂಡ ಬಿಲ್‌ಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಬಿಜೆಪಿಯ ಇಬ್ಬರು ಮಿತ್ರಪಕ್ಷಗಳಾದ ಆಂಧ್ರದ ಆಡಳಿತಾರೂಢ ತೆಲುಗು ದೇಶಂ ಪಕ್ಷ ಹಾಗೂ ಮಹಾರಾಷ್ಟçದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ಮಾತ್ರ ಮಸೂದೆಗೆ ಬೆಂಬಲ ವ್ಯಕ್ತಪಡಿಸಿವೆ. ಒಟ್ಟಾರೆಯಾಗಿ ‘ಒಂದು ದೇಶ, ಒಂದು ಚುನಾವಣೆ’ ಜಾರಿ ಹಿಂದೆ ನಂಬರ್ ಗೇಮ್ ಶುರುವಾಗಿದೆ.

    ‘ಒಎನ್‌ಒಪಿ’ ನಂಬರ್ ಗೇಮ್!
    ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಶಿಫಾರಸು ಮಾಡಿರುವ ಸಂವಿಧಾನ ತಿದ್ದುಪಡಿಗಳಿಗೆ ಲೋಕಸಭೆಯಲ್ಲಿ ಅಂಗೀಕಾರ ಸಿಗಲು ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಮಸೂದೆ ಮಂಡಿಸುವಾಗ ಮತ ಚಲಾಯಿಸಿದ ಸಂಸದರ ಸಂಖ್ಯೆಯನ್ನು ಆಧರಿಸಿ ನೋಡಿದರೆ, ಬಿಜೆಪಿಗೆ ಬಹುಮತವಿಲ್ಲ ಎಂದು ತೋರುತ್ತದೆ.

    ಮತ ವಿಭಜನೆಗೆ ಹಾಕಿದಾಗ ಏನಾಯ್ತು?
    ಡಿ.17 ರಂದು ಲೋಕಸಭೆಯಲ್ಲಿ ವಿಪಕ್ಷಗಳು ಮತ ವಿಭಜನೆಗೆ ಪಟ್ಟು ಹಿಡಿದವು. ಆಗ, ಮಸೂದೆಯನ್ನು ಸದನದಲ್ಲಿ ಮಂಡಿಸಬಹುದೇ ಎಂದು ಪ್ರಶ್ನಿಸಿ ಮತಕ್ಕೆ ಹಾಕಲಾಯಿತು. ಪರವಾಗಿ 269 ಮತಗಳು ಹಾಗೂ ವಿರುದ್ಧವಾಗಿ 198 ಮತಗಳು ಬಿದ್ದವು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರುವ, ‘ಸಂವಿಧಾನ (129ನೇ ತಿದ್ದುಪಡಿ) ಮಸೂದೆ-2024’ ಅಂಗೀಕಾರಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು. ಆದರೆ, ಮಸೂದೆ ಮಂಡನೆ ಪರವಾಗಿ ಬಿದ್ದ ಮತಗಳ ಮತಗಳ ಪ್ರಮಾಣ ಮೂರನೇ ಎರಡರಷ್ಟು ಬಹುಮತಕ್ಕಿಂತ ಕಡಿಮೆ ಇದೆ.

    ನಂಬರ್ ಲೆಕ್ಕಾಚಾರ ಹೇಗಿದೆ?
    ಎನ್‌ಡಿಎ ಮೈತ್ರಿಕೂಟ – 293, ಇಂಡಿಯಾ ಮೈತ್ರಿಕೂಟ – 236, ಅಕಾಲಿದಳ 1, ಎಎಸ್‌ಪಿ (ಕಾನ್ಶಿರಾಮ್) 1, ಎಐಎಂಐಎಂ 1, ವೈಎಸ್‌ಆರ್ ಕಾಂಗ್ರೆಸ್ 4, ವಿಒಟಿಟಿಪಿ 1, ಝಡ್‌ಪಿಎಂ 1, ಪಕ್ಷೇತರ 4 ಲೋಕಸಭಾ ಸದಸ್ಯರಿದ್ದಾರೆ.

    ಮೂರನೇ ಎರಡರಷ್ಟು ಬೆಂಬಲಕ್ಕ ಎಷ್ಟು ನಂಬರ್ ಬೇಕು?
    543 ಸದಸ್ಯ ಬಲದ ಲೋಕಸಭೆಯಲ್ಲಿ ಒಂದು ಸ್ಥಾನ ಖಾಲಿಯಿದೆ. ಸದನವು ಪೂರ್ಣ ಬಲದಲ್ಲಿದ್ದಾಗ ಮೂರನೇ ಎರಡರಷ್ಟು ಬಹುಮತಕ್ಕೆ 362 ಮತಗಳ ಅಗತ್ಯವಿದೆ. ಮತ ವಿಭಜನೆ ಆಧಾರದಲ್ಲಿ ಮಸೂದೆ ಮಂಡನೆಗೆ ಕೇಳಿದ ಸಂದರ್ಭದಲ್ಲಿ ಸಂಸತ್‌ನಲ್ಲಿ 461 ಸಂಸದರಿದ್ದರು. ಆ ಸಂದರ್ಭದಲ್ಲಿ ಮಸೂದೆ ಪರವಾಗಿ 307 ಮತಗಳ (ಮೂರನೇ ಎರಡರಷ್ಟು ಬಹುಮತಕ್ಕೆ) ಅಗತ್ಯವಿತ್ತು. ಆದರೆ, ಬಿಜೆಪಿಯ ಮಸೂದೆ ಪರವಾಗಿ ಬಿದ್ದಿದ್ದು 269 ಮತಗಳು. ಹೀಗಾಗಿ, ಮಸೂದೆ ಮಂಡನೆಗೂ ಬಿಜೆಪಿಗೆ ಬಹುಮತ ಸಿಗಲಿಲ್ಲ.

    9 ಸಂಸದರನ್ನು ಹೊಂದಿರುವ ಆರು ಪಕ್ಷಗಳು ಯಾವುದೇ ಮೈತ್ರಿಕೂಟಕ್ಕೆ ಬೆಂಬಲವನ್ನು ಸೂಚಿಸಿಲ್ಲ. ಇವುಗಳ ಪೈಕಿ ಅಕಾಲಿದಳ, ಎಐಎಂಐಎಂ ಮತ್ತು ಎಎಸ್‌ಪಿ (ಕಾನ್ಶಿರಾಮ್) ಪಕ್ಷಗಳ ಸಂಸದರು ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಈ ಹಿಂದೆ ವೈಎಸ್‌ಆರ್ ಕಾಂಗ್ರೆಸ್ ಏಕಕಾಲದಲ್ಲಿ ನಡೆಸುವ ಚುನಾವಣೆಗೆ ಬೆಂಬಲ ಸೂಚಿಸಿತ್ತು. ಆ ಪಕ್ಷದಲ್ಲಿ ನಾಲ್ಕು ಮಂದಿ ಸಂಸದರಿದ್ದಾರೆ. ಇತ್ತ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದರೂ ಟಿಡಿಪಿಯು ಬಿಜೆಪಿ ಜೊತೆ ಅಂತರ ಕಾಯ್ದುಕೊಂಡಿದೆ. ಮಸೂದೆ ವಿಚಾರದಲ್ಲಿ ಈ ಪಕ್ಷ ತನ್ನ ನಿಲುವು ಬದಲಿಸುವ ಸಾಧ್ಯತೆ ಇದೆ. ಎನ್‌ಡಿಎ ಮೈತ್ರಿಕೂಟದ ಸಂಖ್ಯಾಬಲ (292)ದ ಲೆಕ್ಕಾಚಾರದಲ್ಲಿ ನೋಡುವುದಾದರೆ, ಸಂಸತ್‌ನಲ್ಲಿ ಪೂರ್ಣ ಪ್ರಮಾಣದಲ್ಲಿ ಸದಸ್ಯರು ಹಾಜರಾದರೆ ಬಿಜೆಪಿಗೆ ಹೆಚ್ಚುವರಿಯಾಗಿ 64 ಸಂಸದರ ಬೆಂಬಲ ಬೇಕಾಗುತ್ತದೆ.

    ಜೆಪಿಸಿ ರಚನೆ
    ಒಂದು ದೇಶ, ಒಂದು ಚುನಾವಣೆ ಮಸೂದೆ ಪರಾಮರ್ಶೆಗೆ 39 ಸದಸ್ಯರನ್ನೊಳಗೊಂಡ ಜಂಟಿ ಸಂಸದೀಯ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇದ್ದಾರೆ. ಸಮಿತಿಯಲ್ಲಿ ಲೋಕಸಭೆಯ 27 ಹಾಗೂ ರಾಜ್ಯ ಸಭೆಯ 12 ಸದಸ್ಯರಿದ್ದಾರೆ. ಪ್ರಿಯಾಂಕಾ ಗಾಂಧಿ ಜೊತೆಗೆ ಪ್ರಮುಖರಾದ ಮನೀಶ್ ತೆವಾರಿ, ಧರ್ಮೇಂದ್ರ ಯಾದವ್, ಕಲ್ಯಾಣ್ ಬ್ಯಾನರ್ಜಿ, ಸುಪ್ರಿಯಾ ಸುಳೆ, ಶ್ರೀಕಾಂತ್ ಏಕನಾಥ್ ಶಿಂಧೆ, ಸಂಬಿತ್ ಪತ್ರಾ, ಅನಿಲ್ ಬಲುನಿ, ಅನುರಾಗ್ ಸಿಂಗ್ ಠಾಕೂರ್ ಇದ್ದಾರೆ.

    ಏನಿದು ಒಎನ್‌ಒಪಿ ಮಸೂದೆ?
    ದೇಶದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದೇ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ. 2024ರಲ್ಲಿ ಲೋಕಸಭೆಯೊಂದಿಗೆ ನಾಲ್ಕು ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ನಡೆಯಿತು. ಏಪ್ರಿಲ್-ಜೂನ್ ವರೆಗೆ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಒಡಿಶಾ ರಾಜ್ಯಗಳಿಗೆ ಹಾಗೂ ಅಕ್ಟೋಬರ್-ನವೆಂಬರ್ ವರೆಗೆ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಿಗೆ ಚುನಾವಣೆ ನಡೆಯಿತು. ಕಳೆದ ವರ್ಷ ಬೇರೆ ಬೇರೆ ತಿಂಗಳಲ್ಲಿ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಚುನಾವಣೆ ನಡೆದಿತ್ತು. 2025 ಕ್ಕೆ ದೆಹಲಿ ಮತ್ತು ಬಿಹಾರ ರಾಜ್ಯಗಳು ವಿಧಾನಸಭೆ ಚುನಾವಣೆ ಎದುರಿಸಲು ಸಜ್ಜಾಗಿವೆ.

    ಮಸೂದೆ ಬಗ್ಗೆ ಬಿಜೆಪಿ ನಿಲುವೇನು?
    ಭಾರತ ಪ್ರತಿ ವರ್ಷ ಚುನಾವಣೆಗಳಿಗೆ ಸಾಕ್ಷಿಯಾಗುತ್ತಲೇ ಇರುತ್ತದೆ. ಇದರಿಂದ ಭಾರೀ ಹಣ ಖರ್ಚಾಗುತ್ತಿದೆ. ಜೊತೆಗೆ ಪ್ರತಿ ವರ್ಷ ಚುನಾವಣೆಗೆ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಅಭಿವೃದ್ಧಿ ಕಾರ್ಯಗಳಿಗೂ ಹಿನ್ನಡೆಯಾಗಲಿದೆ. ಈ ಕಾರಣಕ್ಕೆ ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆ ಅಗತ್ಯ ಎಂಬುದನ್ನು ಬಿಜೆಪಿ ಒತ್ತಿ ಹೇಳಿದೆ.

    ವಿಪಕ್ಷಗಳ ವಿರೋಧ ಯಾಕೆ?
    ಈ ಮಸೂದೆಯು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಅಲ್ಲದೇ ಸರ್ವಾಧಿಕಾರಕ್ಕೆ ಅನುವು ಮಾಡಿಕೊಡುತ್ತದೆ. ಪ್ರಸ್ತಾವಿತ ಮಸೂದೆಯು ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ. ಹೊಸ ಸರ್ಕಾರಗಳ ಅವಧಿ ಕೂಡ ಇದರಿಂದ ಮೊಟಾಗುತ್ತದೆ ಎಂಬುದು ವಿಪಕ್ಷಗಳ ನಿಲುವು.

    ಒಎನ್‌ಒಪಿ ಹೊಸ ಪದ್ಧತಿಯೇ?
    ಭಾರತದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದೇನು ಹೊಸಪದ್ಧತಿಯಲ್ಲ. ಸ್ವಾತಂತ್ರ್ಯ ಬಂದು ಸಂವಿಧಾನ ಅಂಗೀಕಾರ ಆದ ಬಳಿಕ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲೇ ಚುನಾವಣೆಗಳು ನಡೆದಿದ್ದವು. 1951 ರಿಂದ 1967ರ ಅವಧಿ ವರೆಗೂ ನಾಲ್ಕು ಸಾರ್ವತ್ರಿಕ ಚುನಾವಣೆಗಳು ಏಕಕಾಲದಲ್ಲೇ ನಡೆದಿವೆ. ಆ ಬಳಿಕ ರಾಜ್ಯ ವಿಧಾನಸಭೆಗಳ ವಿಸರ್ಜನೆ, ಲೋಕಸಭೆ ವಿಸರ್ಜನೆ, ತುರ್ತು ಪರಿಸ್ಥಿತಿ ಮೊದಲಾದ ಬೆಳವಣಿಗೆಗಳಿಂದಾಗಿ ಏಕಕಾಲದಲ್ಲಿ ಚುನಾವಣೆಗಳು ನಡೆಯಲು ಸಾಧ್ಯವಾಗಲಿಲ್ಲ. ಈಗ ಮತ್ತೆ ಅದೇ ಪದ್ಧತಿಯನ್ನು ಜಾರಿಗೆ ತರಲು ಬಿಜೆಪಿ ಮುಂದಾಗಿದೆ.

  • ʼಒಂದು ದೇಶ, ಒಂದು ಚುನಾವಣೆʼ ಪರಿಶೀಲನೆಗೆ JPC ರಚನೆ – ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ

    ʼಒಂದು ದೇಶ, ಒಂದು ಚುನಾವಣೆʼ ಪರಿಶೀಲನೆಗೆ JPC ರಚನೆ – ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ

    ನವದೆಹಲಿ: ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಪರಿಶೀಲಿಸುವ ಹೊಸ ಜಂಟಿ ಸಂಸದೀಯ ಸಮಿತಿಯ ಭಾಗವಾಗಿದ್ದಾರೆ.

    ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಅನಿಲ್ ಬಲುನಿ ಕೂಡ ಜೆಪಿಸಿಯಲ್ಲಿ ಇದ್ದಾರೆ. ಜೆಪಿಸಿ, ಲೋಕಸಭೆಯಿಂದ 21 ಸಂಸದರನ್ನು ಮತ್ತು ರಾಜ್ಯಸಭೆಯಿಂದ 10 ಸಂಸದರನ್ನು ಹೊಂದಿದೆ.

    ಹೊಸ ಜೆಪಿಸಿ ಮುಂದಿನ ಅಧಿವೇಶನದ ಕೊನೆಯ ವಾರದ ಮೊದಲ ದಿನದೊಳಗೆ ಸಂಸತ್ತಿಗೆ ವರದಿಯನ್ನು ನೀಡಬೇಕು.

    ಸಂಬಿತ್ ಪಾತ್ರ, ಸುಪ್ರಿಯಾ ಸುಲೆ, ಶ್ರೀಕಾಂತ್ ಏಕನಾಥ್ ಶಿಂಧೆ, ಮನೀಶ್ ತಿವಾರಿ ಮತ್ತು ಕಲ್ಯಾಣ್ ಬ್ಯಾನರ್ಜಿ ಇತರರು ಸಮಿತಿಯಲ್ಲಿದ್ದಾರೆ. ಲೋಕಸಭೆ ಮತ್ತು ವಿಧಾನಸಭೆಗಳ ಚುನಾವಣೆಯನ್ನು ಏಕಕಾಲದಲ್ಲಿ ನಡೆಸಲು ಸಂವಿಧಾನಕ್ಕೆ ತಿದ್ದುಪಡಿ ತರಬಹುದೇ ಎಂಬುದನ್ನು ನಿರ್ಧರಿಸಲು ಜೆಪಿಸಿ ರಚಿಸಲಾಗಿದೆ.

  • `ಒಂದು ದೇಶ ಒಂದು ಚುನಾವಣೆ’ ಜಾರಿ ಅಗತ್ಯವಿದೆ – ಮಸೂದೆಗೆ ರಾಜ್ಯ ಬಿಜೆಪಿ ಸಂಸದರ ಬೆಂಬಲ

    `ಒಂದು ದೇಶ ಒಂದು ಚುನಾವಣೆ’ ಜಾರಿ ಅಗತ್ಯವಿದೆ – ಮಸೂದೆಗೆ ರಾಜ್ಯ ಬಿಜೆಪಿ ಸಂಸದರ ಬೆಂಬಲ

    ನವದೆಹಲಿ: ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು ಎಂದು ಎಲ್ಲ ಪಕ್ಷಗಳು ಹೇಳುತ್ತವೆ. ಆದರೆ ಈ ತನಕ ಸರಿಯಾಗಿ ಪ್ರಯತ್ನ ಆಗಿರಲಿಲ್ಲ, ʻಒನ್ ನೇಷನ್ ಒನ್ ಎಲೆಕ್ಷನ್ʼ ಮಸೂದೆ (One Nation One Election Bill) ತರುವ ಮೂಲಕ ಮೋದಿ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗರ್ತಾಹ ಬೆಳವಣಿಗೆ ಎಂದು ಸಂಸದ ಸಂಸದ ಜಗದೀಶ್ ಶೆಟ್ಟರ್ “(Jagadish Shettar) ಹೇಳಿದ್ದಾರೆ.

    ನವದೆಹಲಿಯಲ್ಲಿ (New Delhi) ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ ವ್ಯವಸ್ಥೆಯ ಅಗತ್ಯವಿದೆ. ಇದರಿಂದ ಸಮಯದ ಉಳಿತಾಯಯಾಗಲಿದೆ, ಅಭಿವೃದ್ಧಿ ಕೆಲಸಗಳಿಗೆ ವೇಗ ಸಿಗಲಿದೆ. ವಿರೋಧ ಪಕ್ಷಗಳು ಕೇವಲ ವಿರೋಧಕ್ಕಾಗಿ ವಿರೋಧ ಮಾಡುತ್ತಿವೆ. ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆ ಆಗಬೇಕು ಎಂದಿದ್ದಾರೆ. ಇದನ್ನೂ ಓದಿ: 20 ದಿನದ ಮಗು ಕೊಲ್ಲುವುದಾಗಿ ಬೆದರಿಕೆ – ಪತ್ನಿಯ ಸಹೋದರರಿಂದಲೇ ಪತಿ ಹತ್ಯೆ

    ಈ ಮಸೂದೆ ಜಾರಿಯಾದರೆ ಎರಡೇ ಹಂತಗಳಲ್ಲಿ ಚುನಾವಣೆ ನಡೆಯಲಿದೆ, ಒಂದನೇ ಹಂತದಲ್ಲಿ ಲೋಕಸಭೆ ಹಾಗು ವಿಧಾನಸಭಾ ಚುನಾವಣೆ, ಎರಡನೇ ಹಂತದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಡೆಯಲಿದೆ. ನಮ್ಮ ಗಮನ ಪೂರ್ತಿ ಚುನಾವಣೆ ಮೇಲೆ ಇರುತ್ತೆ, ಅಭಿವೃದ್ಧಿಗೆ ಸಮಯ ಇರೋದೇ ಇಲ್ಲ ಇದರಿಂದ ಭವಿಷ್ಯದಲ್ಲಿ ಅಭಿವೃದ್ಧಿಗೆ ಸಮಯ ಸಿಗಲಿದೆ ಎಂದರು.

    ಹೊಸ ಚುನಾವಣಾ ವ್ಯವಸ್ಥೆಯಿಂದ ರಾಜ್ಯಗಳಿಗೆ, ಇತರೆ ಪಕ್ಷಗಳಿಗೆ ಅನ್ಯಾಯವಾಗುವುದಿಲ್ಲ, ಮತದಾರರು ದಡ್ಡರಲ್ಲ ಯಾವ ಚುನಾವಣೆಯಲ್ಲಿ ಯಾರನ್ನು ಆಯ್ಕೆ ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ, ಹಿಂದೆ ಒಟ್ಟಿಗೆ ಚುನಾವಣೆ ನಡೆದರು ಜನರ ತೀರ್ಪು ಬೇರೆ ಬೇರೆಯಾಗಿ ಬಂದಿದೆ ವಿಪಕ್ಷಗಳ ಆರೋಪದಲ್ಲಿ ಸತ್ಯಾಂಶ ಇಲ್ಲ ಎಂದರು. ಇದನ್ನೂ ಓದಿ: ಹೊಸ ವರ್ಷಕ್ಕೆ ಸ್ಟೋರ್ ಮಾಡಲಾಗಿದ್ದ 24 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್!

    ಸಂಸದ ಗೋವಿಂದ್ ಕಾರಜೋಳ ಪ್ರತಿಕ್ರಿಯಿಸಿ, ಇದು ದೂರದೃಷ್ಟಿ ಕಲ್ಪನೆಯಿಂದ ತಂದಿರುವ ಬಿಲ್, ಚುನಾವಣೆ ಪಾವಿತ್ರ್ಯತೆ ಕಾಪಾಡಲು ತರಲಾಗಿದೆ. ಯಾರಿಗೆ ತೋಳಬಲ, ಹಣ ಬಲ, ಜಾತಿ ಬಲ ಇದೆ ಅವರು ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ ಇದು ಅಪಾಯಕಾರಿ ಬೆಳವಣಿಗೆ, ಸಮಾಜಸೇವೆ ಮಾಡುವ ಜನರಿಗೆ ಚುನಾವಣೆ ವ್ಯವಸ್ಥೆಯಲ್ಲಿ ಗೆಲ್ಲಬೇಕಿದೆ. ಆದರೆ ಇಂದು ಚುನಾವಣೆ ವ್ಯವಸ್ಥೆ ಕಲುಷಿತಗೊಂಡಿದೆ ಈ ಬಿಲ್ ಅನ್ನು ಎಲ್ಲರೂ ಒಪ್ಪಬೇಕು, ಪಾಸ್ ಮಾಡಬೇಕು ಎಂದರು‌.

    ಸಂಸದ ಈರಣ್ಣ ಕಡಾಡಿ ಮಾತನಾಡಿ, ಒಂದೇ ಚುನಾವಣೆಯಿಂದ ಪ್ರಜಾತಂತ್ರ ಗಟ್ಟಿಗೊಳ್ಳಲಿದೆ, ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆಯಾಗಲಿದೆ ಮೋದಿ ಸರಕಾರದ ಐತಿಹಾಸಿಕ ನಿರ್ಧಾರ ಮಾಡಿದೆ. ಒಂದೆ ಬಾರಿ ಚುನಾವಣೆಯಿಂದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು. ಇದನ್ನೂ ಓದಿ: ಹೊಸ ಪ್ರತಿಭೆಗಳ ಜೊತೆ ಕೈ ಜೋಡಿಸಿದ ಶ್ರೀಮುರಳಿ- ಬರ್ತ್‌ಡೇಗೆ ‘ಪರಾಕ್’ ಸಿನಿಮಾ ಅನೌನ್ಸ್

  • ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ

    ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ

    ನವದೆಹಲಿ: ಚುನಾವಣೆಯ ವೇಳೆ  ಪ್ರಣಾಳಿಕೆಯಲ್ಲಿ ಬಿಜೆಪಿ  ಘೋಷಣೆ ಮಾಡಿದಂತೆ ಬಹು ನಿರೀಕ್ಷೆಯ  ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ ಒಂದು ದೇಶ, ಒಂದು ಚುನಾವಣೆ (One Nation One Election) ಮಸೂದೆ ಇಂದು ಲೋಕಸಭೆಯಲ್ಲಿ (Lok Sabha) ಮಂಡನೆಯಾಗಿದೆ.

    ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ (Law Minister Arjun Meghwal) ಇಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಇಪ್ಪತ್ತೊಂದನೇಯ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನುಮಂಡಿಸಿದರು.

    ಮಸೂದೆ ಮಂಡನೆಯ ಬೆನ್ನಲ್ಲೇ INDIA ಒಕ್ಕೂಟದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿದರು. ಸಂಸದ ಮನೀಶ್‌ ತಿವಾರಿ, ಕೇಂದ್ರ ಮತ್ತು ರಾಜ್ಯದ ಅವಧಿಯನ್ನು ಹೇಗೆ ಏಕ ಕಾಲದಲ್ಲಿ ಮಾಡಲು ಸಾಧ್ಯ? ಭಾರತ ಒಕ್ಕೂಟ ದೇಶ, ಕೇಂದ್ರೀಕರಣ ಮಾಡುವುದು ಸರಿಯಲ್ಲ. ಇದು ಸಂವಿಧಾನ ವಿರೋಧಿ ತಿದ್ದುಪಡಿ ಎಂದು ಕಿಡಿಕಾರಿದರು.

    ಎಲ್ಲ ರಾಜ್ಯಗಳು ಬೇರೆ ಬೇರೆ ವೈವಿಧ್ಯತೆ ಹೊಂದಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಒಕ್ಕೂಟ ವ್ಯವಸ್ಥೆ ಮಾಡಿದರು. ಎಂಟು ವಿಧಾನಸಭೆ ಕ್ಷೇತ್ರಗಳ ವಿಧಾನಸಭೆ ಚುನಾವಣೆಯನ್ನು ಒಟ್ಟಿಗೆ ಮಾಡಲು ಸಾಧ್ಯವಾಗಲಿಲ್ಲ. ನಾಲ್ಕು ರಾಜ್ಯಗಳ ಚುನಾವಣೆ ಒಟ್ಟಿಗೆ ಮಾಡಲು ಸಾಧ್ಯವಾಗಲಿಲ್ಲ. ಈಗ ಇಡೀ ದೇಶದಲ್ಲಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದೀರಿ ಎಂದು ಎಂದು ಎಸ್‌ಪಿ ಸಂಸದ ಧರ್ಮೇಂದ್ರ ಯಾದವ್ ವಿರೋಧ ವ್ಯಕ್ತಪಡಿಸಿದರು.

    ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಾತನಾಡಿ, ಇದು ರಾಜ್ಯದ ಅಧಿಕಾರವನ್ನು ಕಿತ್ತುಕೊಳ್ಳುವುದಿಲ್ಲ. ಒಕ್ಕೂಟ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗುವುದಿಲ್ಲ. ಭಾರತದ ಒಕ್ಕೂಟ ವ್ಯವಸ್ಥೆಯಿಂದ ಹೊರ ಹೋಗಲು ರಾಜ್ಯಗಳಿಗೆ ಅಧಿಕಾರ ಇಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಈ ಮಸೂದೆ ಆಕಸ್ಮಿಕವಾಗಿ ಬಂದಿಲ್ಲ. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ವಿಸ್ತೃತ ಚರ್ಚೆ ಮಾಡಿ ಶಿಫಾರಸ್ಸು ನೀಡಿದೆ. 21 ವರ್ಷದಿಂದ ಈ ವಿಷಯ ಬಾಕಿ ಉಳಿದಿದ್ದು ಯಾರು ಈ ಬಗ್ಗೆ ಗಮನ ಹರಿಸಿಲ್ಲ. ನರೇಂದ್ರ ಮೋದಿ ಅವರು ಈ ಬಗ್ಗೆ ಗಮನಹರಿಸಿದ್ದು ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ನೀಡಲು ಇಚ್ಛಿಸುತ್ತೇವೆ ಎಂದು ತಿಳಿಸಿದರು.

    ಮಸೂದೆ ಮಂಡನೆಯ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಕಾಂಗ್ರೆಸ್‌, ಟಿಡಿಪಿ ಸೇರಿದಂತೆ ಎನ್‌ಡಿಎ ಮಿತ್ರ ಪಕ್ಷಗಳು ಸದಸ್ಯರಿಗೆ ವಿಪ್‌ ಜಾರಿ ಮಾಡಿವೆ.

  • ಇಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ ಒಂದು ದೇಶ ಒಂದು ಚುನಾವಣೆ ಮಸೂದೆ

    ಇಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ ಒಂದು ದೇಶ ಒಂದು ಚುನಾವಣೆ ಮಸೂದೆ

    ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ ಒಂದು ದೇಶ, ಒಂದು ಚುನಾವಣೆ (One Nation One Election) ಮಸೂದೆ ಇಂದು ಲೋಕಸಭೆಯಲ್ಲಿ (Lok Sabha) ಮಂಡನೆಯಾಗುವ ಸಾಧ್ಯತೆಯಿದೆ.

    ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಮಂಡಿಸುವ ನಿರೀಕ್ಷೆಯಿದೆ. ಮಸೂದೆ ಮಂಡಿಸಿದ ನಂತರ, ವ್ಯಾಪಕ ಸಮಾಲೋಚನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ (JPC) ಶಿಫಾರಸು ಮಾಡುವಂತೆ ಮೇಘವಾಲ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್ – ಮಹಿಳಾ ಕಾರ್ಮಿಕರು ಸಿಗದೇ ರೈತರ ಪರದಾಟ

     

    ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಜಂಟಿ ಸದನ ಸಮಿತಿಯನ್ನು ರಚಿಸಲಾಗುತ್ತದೆ. ಲೋಕಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ (BJP) ಸಮಿತಿಯ ಅಧ್ಯಕ್ಷ ಸ್ಥಾನ ದೊರೆಯಲಿದ್ದು, ಹಲವು ಪಕ್ಷಗಳ ಸಂಸದರು ಸದಸ್ಯರಾಗಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಇದನ್ನೂ ಓದಿ: 30,000 ಕೊಟ್ರೆ ಕೆಲಸ, 40,000 ಕೊಟ್ರೆ ಟ್ರ‍್ಯಾಕ್ ಟೆಸ್ಟ್ ಪಾಸ್ – KSRTC ಚಾಲಕರ ಹೊರಗುತ್ತಿಗೆ ನೌಕರಿಯಲ್ಲೂ ಗೋಲ್ಮಾಲ್?

    ಕಳೆದ ವಾರ ಕೇಂದ್ರ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿತ್ತು.

    ಸಂವಿಧಾನ ಜಾರಿಗೆ 75 ವರ್ಷ ಪೂರ್ಣ ಹಿನ್ನಲೆ ರಾಜ್ಯಸಭೆಯಲ್ಲಿ ನಡೆಯುತ್ತಿರುವ ವಿಶೇಷ ಚರ್ಚೆಯಲ್ಲಿ ಪ್ರಧಾನಿ ಮೋದಿ ಇಂದು ಭಾಗಿಯಾಗಲಿದ್ದು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

  • ಲೋಕಸಭೆಯಲ್ಲಿ ಡಿ.16 ಕ್ಕೆ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡನೆ

    ಲೋಕಸಭೆಯಲ್ಲಿ ಡಿ.16 ಕ್ಕೆ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡನೆ

    ನವದೆಹಲಿ: ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇದೇ ಡಿ.16 ರಂದು ಒಂದು ದೇಶ, ಒಂದು ಚುನಾವಣೆ (One Nation One Election) ಮಸೂದೆ ಮಂಡಿಸಲಿದ್ದಾರೆಂದು ಮೂಲಗಳು ತಿಳಿಸಿವೆ.

    ಮಸೂದೆ ಮಂಡನೆ ನಂತರ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗುವುದು. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ- ಜಾಣ್ಮೆಯ ಹೆಜ್ಜೆಯಿಟ್ಟ ಕೇಂದ್ರ

    ಅರ್ಜುನ್ ರಾಮ್ ಮೇಘವಾಲ್ ಅವರು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ, 2024 ಅನ್ನು ಸಹ ಮಂಡಿಸಲಿದ್ದಾರೆ. ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಕಾಯಿದೆ, 1963, ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶ ಕಾಯ್ದೆ, 1991 ಮತ್ತು ಜಮ್ಮುಗೆ ತಿದ್ದುಪಡಿ ಮಾಡಲು ಮತ್ತಷ್ಟು ಮಸೂದೆಯನ್ನು ಪರಿಚಯಿಸಲು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ಮಸೂದೆಯನ್ನು ಮಂಡನೆ ಮಾಡಲಿದ್ದಾರೆ.

    ಪ್ರಧಾನಿ ಮೋದಿ ನೇತೃತ್ವದ ಸಂಪುಟ ಈಚೆಗೆ ಮಸೂದೆಗೆ ಒಪ್ಪಿಗೆ ನೀಡಿತ್ತು. ಒಪ್ಪಿಗೆ ಬೆನ್ನಲ್ಲೇ ಈಗ ಬಿಲ್‌ ಮಂಡಿಸಲು ತಯಾರಿ ನಡೆಸಲಾಗುತ್ತಿದೆ. ಇದನ್ನೂ ಓದಿ: ಕಿವಿ ಗಡಚಿಕ್ಕುವಂತೆ ಲೌಡ್‌ ಸ್ಪೀಕರ್‌ ಬಳಸಿದ್ದಕ್ಕೆ ಮಸೀದಿಗೆ ಬಿತ್ತು 2 ಲಕ್ಷ ದಂಡ