Tag: one nation one election

  • ಒಂದು ದೇಶ ಒಂದು ಚುನಾವಣೆ- ಜಾಣ್ಮೆಯ ಹೆಜ್ಜೆಯಿಟ್ಟ ಕೇಂದ್ರ

    ಒಂದು ದೇಶ ಒಂದು ಚುನಾವಣೆ- ಜಾಣ್ಮೆಯ ಹೆಜ್ಜೆಯಿಟ್ಟ ಕೇಂದ್ರ

    ನವದೆಹಲಿ/ಬೆಳಗಾವಿ: ಒಂದು ದೇಶ ಒಂದು ಚುನಾವಣೆ (One Nation One Election) ವಿಚಾರವಾಗಿ ಕೇಂದ್ರ ಸರ್ಕಾರ ಜಾಣ್ಮೆಯ ಹೆಜ್ಜೆ ಇಟ್ಟಿದೆ. ಇದಕ್ಕೆ ಹಂತ ಹಂತವಾಗಿ ಅನುಮೊದನೆ ಪಡೆಯಲು ನಿರ್ಧಾರ ಮಾಡಿದಂತಿದೆ.

    ಸಂಪುಟ ಸಭೆಯಲ್ಲಿ ಕೋವಿಂದ್ (Ram Nath Kovind) ಸಮಿತಿ ಶಿಫಾರಸುಗಳ ಪೈಕಿ ಸಾಂವಿಧಾನಿಕ ತಿದ್ದುಪಡಿ ಅಗತ್ಯವಿರುವ ಮಸೂದೆಯನ್ನು ಪರಿಗಣಿಸಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವನ್ನು ಪಕ್ಕಕ್ಕೆ ಇಟ್ಟಿರುವ ಕೇಂದ್ರ ಸರ್ಕಾರ, ಸದ್ಯಕ್ಕೆ ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಮಸೂದೆ ಮಂಡಿಸಲು ತೀರ್ಮಾನಿಸಿದೆ. ಇದಕ್ಕೆ ಅರ್ಧದಷ್ಟು ರಾಜ್ಯಗಳು ಅನುಮೋದನೆ ನೀಡುವ ಅಗತ್ಯ ಇರುವುದಿಲ್ಲ. ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ; ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿಯ 11 ಶಿಫಾರಸುಗಳೇನು?

    ಸ್ಥಳೀಯ ಚುನಾವಣೆಗಳ (Election) ಜೊತೆಗೆ ಲೋಕಸಭೆ, ಅಸೆಂಬ್ಲಿ ಚುನಾವಣೆ ನಡೆಸುವುದಾದರೆ ಮಾತ್ರ ಸಂವಿಧಾನಿಕ ತಿದ್ದುಪಡಿ ಮತ್ತು 50% ರಾಜ್ಯಗಳ ಒಪ್ಪಿಗೆ ಪಡೆಯಬೇಕಿದೆ. ಕೇಂದ್ರದ ನಡೆಗೆ ವಿಪಕ್ಷಗಳಿಂದ ವಿರೋಧ ವ್ಯಕ್ತವಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಇದು ವಿರೋಧ. ಇದನ್ನು ನಮ್ಮ ರಾಷ್ಟ್ರೀಯ ನಾಯಕರು ವಿರೋಧ ಮಾಡಿದ್ದಾರೆ. ಸಣ್ಣ ಹಾಗೂ ಪ್ರಾದೇಶಿಕ ಪಕ್ಷಗಳನ್ನ ಮುಗಿಸಲು ಸಂಚು ಮಾಡಿದ್ದಾರೆ. ಇದು ಬಿಜೆಪಿಯ ಅಜೆಂಡಾ ಎಂದು ಆರೋಪಿಸಿದ್ದಾರೆ.

    ಇದೇ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಆದಾನಿ ಪ್ರಕರಣ, ಸೆಬಿ, ರೂಪಾಯಿ ಮೌಲ್ಯ ಕುಸಿತದ ಬಗ್ಗೆ ಚರ್ಚೆಗೆ ರೆಡಿ ಇಲ್ಲ. ಇದೆಲ್ಲದರ ಗಮನ ಬೇರೆಡೆ ಸೆಳೆಯಲು ನೀಲಿ ನಕ್ಷೆಯನ್ನ ರೆಡಿ ಮಾಡಿದ್ದಾರಾ? ಇದಕ್ಕೆ ಬೇಕಾದ ಸಿಬ್ಬಂದಿ ಇವಿಎಂ ಮಷಿನ್ ಎಲ್ಲಾ ಇದೆಯಾ ಎಂದು ಪ್ರಶ್ನಿಸಿದ್ದಾರೆ.

    ಸಚಿವ ಸಂತೋಷ್ ಲಾಡ್ ಮಾತನಾಡಿ, ಒನ್ ನೇಷನ್ ಒನ್ ಎಲೆಕ್ಷನ್‍ಗೆ ನೆಹರು ಪ್ರಯತ್ನ ಮಾಡಿದ್ದರು. ಆದು ಸಾಧ್ಯವಾಗಲ್ಲ ಎಂದು ಆಗಲೇ ಗೋತ್ತಾಗಿದೆ. ಇದು ನನ್ನ ವಯಕ್ತಿಕ ಅಭಿಪ್ರಾಯ, ನಾನು ಇದನ್ನ ವಿರೋಧಿಸುತ್ತೇನೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದು ಸಾಧ್ಯವಾಗಲ್ಲ. ಇದರಿಂದ ಯುವಕರಿಗೇನು ಲಾಭವಗಲ್ಲ ಎಂದರು. ಇದನ್ನೂ ಓದಿ: ಸರಿಯಾಗಿ ಹಣ ನೀಡದ್ದಕ್ಕೆ ಕಾಂಗ್ರೆಸ್‌ ಸದಸ್ಯರಿಂದಲೇ ಗಲಾಟೆ: ಅಶೋಕ್‌ ಕಿಡಿ

  • `ಒಂದು ದೇಶ ಒಂದು ಚುನಾವಣೆ’, ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರ: ಬೊಮ್ಮಾಯಿ

    `ಒಂದು ದೇಶ ಒಂದು ಚುನಾವಣೆ’, ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರ: ಬೊಮ್ಮಾಯಿ

    ನವದೆಹಲಿ: `ಒಂದು ದೇಶ ಒಂದು ಚುನಾವಣೆ’ (One Nation, One Election) ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ (Parliament Session) ಮಂಡಿಸುವ ವಿಚಾರ ಇದೆ. ಇದು ಬಹಳ ಪ್ರಮುಖವಾದದ್ದು, ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ.

    ಈ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಲೇ ಇರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

    ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರುತ್ತದೆ. ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯ. ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಆದ್ದರಿಂದ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿತ್ರು. ನಮ್ಮ ಪ್ರಧಾನಮಂತ್ರಿಗಳು ಒಂದು ದಿಟ್ಟ ನಿರ್ಧಾರ ಮಾಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಈ ದೇಶಕ್ಕೆ ಒಳ್ಳೆಯ ದಾಗುವಂತಹ ನಿರ್ಧಾರ. ಇದಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ.

    ಇದಕ್ಕೆ ಎಲ್ಲರೂ ಚರ್ಚೆ ಮಾಡಬೇಕು, ಸ್ವಾಗತ ಮಾಡಬೇಕು. ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

  • `ಒಂದು ದೇಶ ಒಂದು ಚುನಾವಣೆ’ – ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ಲ್ಯಾನ್‌ – ಡಿಕೆಶಿ

    `ಒಂದು ದೇಶ ಒಂದು ಚುನಾವಣೆ’ – ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ಲ್ಯಾನ್‌ – ಡಿಕೆಶಿ

    ವಿಜಯಪುರ: ಪ್ರಾದೇಶಿಕ ಪಕ್ಷಗಳ ಮುಗಿಸಲು ಬಿಜೆಪಿ (BJP) ಪ್ಲ್ಯಾನ್‌ ಮಾಡುತ್ತಿದೆ, ಇದು ಬಿಜೆಪಿಯವರ ಅಜೆಂಡಾ ಎಂದು `ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಕಿಡಿಕಾರಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ (One Nation One Election) ಎನ್ನುವುದು ಕಾಂಗ್ರೆಸ್ (Congress) ಪಕ್ಷದ ಸಿದ್ಧಾಂತಕ್ಕೆ ವಿರೋಧವಾಗಿದೆ. ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧ ಮಾಡಿದ್ದಾರೆ ಬಿಜೆಪಿ ಈ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸಲು ಪ್ಲ್ಯಾನ್‌ ಹಾಕಿಕೊಂಡಿದೆ. ಇತ್ತೀಚಿಗೆ ಸಣ್ಣ ಪಕ್ಷಗಳಿಗೆ ಹೆಚ್ಚು ನಂಬರ್ಸ್ ಬರುತ್ತಿದೆ. ಹಾಗಾಗಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಪ್ಲ್ಯಾನ್‌ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಚಿಕ್ಕಬಳ್ಳಾಪುರ | ರಾಜ್ಯಕ್ಕೂ ತಟ್ಟಿದ ಸೈಕ್ಲೋನ್ ಎಫೆಕ್ಟ್ – ಚುಮುಚುಮು ಚಳಿಯೊಂದಿಗೆ ತುಂತುರು ಮಳೆ!

    ಕೃಷ್ಣಾ ನದಿಗಾಗಿ 40,000 ಕೋಟಿ ರೂ. ಕೊಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ ಎರಡು ವರ್ಷ ಕಳೆದರೂ ಸರ್ಕಾರ ಬಿಡಿಗಾಸನ್ನು ಕೊಟ್ಟಿಲ್ಲ. ಜೊತೆಗೆ 5 ವರ್ಷದಲ್ಲಿ ರಾಜ್ಯಕ್ಕೆ 2 ಲಕ್ಷ ಕೋಟಿ ರೂ. ಹಾಗೂ ಅದರಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ 75 ಸಾವಿರ ಕೋಟಿ ರೂ. ಕೊಡುವುದಾಗಿ ಸರ್ಕಾರ ತಿಳಿಸಿತ್ತು. ಇದುವರೆಗೂ ಯೋಜನೆಗೆ ಬಿಡಿಗಾಸನ್ನು ಕೊಟ್ಟಿಲ್ಲ ಎಂದು ಕೇಳಿದಾಗ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ ಎಂದು ಹೇಳಿ ಜಾರಿಕೊಂಡರು.

    ಆಲಮಟ್ಟಿ ಸಂತ್ರಸ್ತರ ಹೋರಾಟ ವಿಚಾರವಾಗಿ ಮಾತನಾಡಿದ ಅವರು, 524 ಮೀ ಎತ್ತರವಿದೆ ಏನು ಮಾಡಬೇಕು ಅದನ್ನು ನಾವು ಮಾಡುತ್ತೇವೆ. ಅದರ ಭೂಸ್ವಾಧೀನ ನೋಟಿಫಿಕೇಷನ್ ಆಗಬೇಕಿದೆ. ನೋಟಿಫಿಕೇಷನ್ ಮುಂಚೆಯೇ ಅಲ್ಲಿ ಕೆಲಸ ಮಾಡಬೇಕಾ? ಬೇಡವಾ? ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರಿನಲ್ಲಿ ಇಷ್ಟೊಂದು ಬೆಲೆ ಇಲ್ಲ. ಭೂಸ್ವಾಧೀನಕ್ಕೆ ಈ ಮೊದಲು ಬೊಮ್ಮಾಯಿ ಸರ್ಕಾರ ಕೊಟ್ಟ ರೇಟ್‌ಗೆ ತಕರಾರಿಲ್ಲ, ನಾವು ಕೊಡಲು ಸಿದ್ಧರಿದ್ದೇವೆ. ಇದೇ ವಿಚಾರಕ್ಕೆ ಬರುವ ಸೋಮವಾರ ಸಿಎಂ ಅವರು ಸಂಬಂಧಿಸಿದ ಕೆಲವರನ್ನು ಕರೆದಿದ್ದಾರೆ, ಅವರು ಅದರ ವಿಚಾರ ಮಾಡುತ್ತಾರೆ. ಸಂತ್ರಸ್ತರು ನೂರು ಬೇಡಿಕೆ ಇಡಲಿ, ಆದರೆ ಕಾನೂನು ಚೌಕಟ್ಟಿನಲ್ಲಿ ಏನು ಮಾಡಲು ಸಾಧ್ಯವಿದೆಯೊ ಅದನ್ನು ನಾವು ಮಾಡುತ್ತೇವೆ. ಅದಕ್ಕೂ ಮೊದಲು ಕೇಂದ್ರ ಗೆಜೆಟ್ ನೋಟಿಫಿಕೇಷನ್ ಮಾಡಬೇಕಿದೆ. ಕೇಂದ್ರ 16 ಸಾವಿರ ಕೋಟಿ ರೂ. ಮಾತ್ರ ಕೊಟ್ಟಿದೆ ಎಂದು ಹೇಳಿದರು.ಇದನ್ನೂ ಓದಿ: ಅಂಜನಾದ್ರಿಯಲ್ಲಿ ಇಂದು ಹನುಮಮಾಲಾ ವಿಸರ್ಜನೆ – ದೇಶದ ನಾನಾ ಭಾಗಗಳಿಂದ ಭಕ್ತರ ದಂಡು

  • ಒಂದು ದೇಶ, ಒಂದು ಚುನಾವಣೆ; ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿಯ 11 ಶಿಫಾರಸುಗಳೇನು?

    ಒಂದು ದೇಶ, ಒಂದು ಚುನಾವಣೆ; ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿಯ 11 ಶಿಫಾರಸುಗಳೇನು?

    ನವದೆಹಲಿ: ಒಂದು ದೇಶ, ಒಂದು ಚುನಾವಣೆ ಜಾರಿಗೆ (One Nation, One Election) ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ನೇತೃತ್ವದ ಸಮಿತಿಯು 11 ಶಿಫಾರಸುಗಳನ್ನು ಮಾಡಿದೆ.

    ಏನದು 11 ಶಿಫಾರಸುಗಳು?
    1. ಪ್ರತಿ ವರ್ಷ ಆಗಾಗ್ಗೆ ಚುನಾವಣೆಗಳನ್ನು ನಡೆಸುವುದು ಆರ್ಥಿಕತೆ, ರಾಜಕೀಯ ಮತ್ತು ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಸಮಿತಿಯು ತೀರ್ಮಾನಿಸಿದೆ. ಈ ಹೊರೆಯನ್ನು ತಗ್ಗಿಸಲು ಏಕಕಾಲಿಕ ಚುನಾವಣೆಗಳನ್ನು ಮರುಸ್ಥಾಪಿಸಲು ಶಿಫಾರಸು ಮಾಡಿದೆ.

    2. ಮೊದಲ ಹಂತವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣಾ ದಿನಾಂಕಗಳನ್ನು ನಿಗದಿಪಡಿಸುವುದನ್ನು ಒಳಗೊಂಡಿರುತ್ತದೆ. ಇದಾದ 100 ದಿನದೊಳಗೆ ಪುರಸಭೆ ಮತ್ತು ಪಂಚಾಯತ್ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು.

    3. ಸಾರ್ವತ್ರಿಕ ಚುನಾವಣೆಯ ನಂತರ, ರಾಷ್ಟ್ರಪತಿ ಲೋಕಸಭೆಯು ಸೇರುವ ದಿನಾಂಕವನ್ನು ‘ನೇಮಿತ ದಿನಾಂಕ’ ಎಂದು ಘೋಷಿಸುವ ಅಧಿಸೂಚನೆಯನ್ನು ಹೊರಡಿಸಬಹುದು.

    4. ಮುಂದಿನ ಸಾರ್ವತ್ರಿಕ ಚುನಾವಣೆಗಳಿಗೆ ಹೊಂದಿಕೆಯಾಗುವಂತೆ ಹೊಸದಾಗಿ ರಚನೆಯಾದ ರಾಜ್ಯ ವಿಧಾನಸಭೆಗಳು ಕಡಿಮೆ ಅವಧಿಯನ್ನು ಹೊಂದಿರುತ್ತವೆ.

    5. ಸಮಿತಿಯ ಶಿಫಾರಸುಗಳ ಅನುಷ್ಠಾನಕ್ಕಾಗಿ ಸಮಿತಿ ರಚಿಸಬೇಕು.

    6. ಪಂಚಾಯಿತಿಗಳು ಮತ್ತು ಪುರಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಸುಗಮಗೊಳಿಸಲು ಅನುಚ್ಛೇದ 324A ಅನ್ನು ಪರಿಚಯಿಸುವುದು. ಎಲ್ಲಾ ಚುನಾವಣೆಗಳಿಗೆ ಏಕೀಕೃತ ಮತದಾರರ ಪಟ್ಟಿ ಮತ್ತು ಫೋಟೋ ಗುರುತಿನ ಚೀಟಿಯನ್ನು ರಚಿಸಲು 325 ನೇ ವಿಧಿಗೆ ತಿದ್ದುಪಡಿ ತರಬೇಕಿದೆ.

    7. ಅತಂತ್ರ ಲೋಕಸಭೆ ನಿರ್ಮಾಣವಾದರೆ ಅಥವಾ ಸರ್ಕಾರ ಬಹುಮತ ಕಳೆದುಕೊಂಡರೆ ಹೊಸದಾಗಿ ಚುನಾವಣೆ ನಡೆಸಬೇಕು. ಹೊಸದಾಗಿ ಚುನಾವಣೆ ನಡೆದ ಬಳಿಕ ಅಧಿಕಾರಕ್ಕೇರುವ ಸರ್ಕಾರದ ಅವಧಿಯು ಲೋಕಸಭೆಯ ಇನ್ನುಳಿದ ಅವಧಿಗೆ ಮಾತ್ರ ಇರಲಿದೆ.

    8. ಮೊದಲ ಹಂತದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು. ಎರಡನೇ ಹಂತದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ನಡೆದ 100 ದಿನಗಳ ಒಳಗಾಗಿ ಪುರಸಭೆ ಮತ್ತು ಪಂಚಾಯತ್ ಚುನಾವಣೆ ನಡೆಸುವುದು.

    9. ಅತಂತ್ರ ಲೋಕಸಭೆ ಅಥವಾ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ಸಮಿತಿಯು ಹೊಸ ಚುನಾವಣೆಗಳನ್ನು ಪ್ರತಿಪಾದಿಸುತ್ತದೆ. ಹೊಸದಾಗಿ ಚುನಾಯಿತವಾದ ಲೋಕಸಭೆಯು ಹಿಂದಿನ ಉಳಿದ ಅವಧಿಯನ್ನು ಪೂರೈಸುತ್ತದೆ. ಆದರೆ ಲೋಕಸಭೆಯ ಅವಧಿ ಮುಗಿಯುವ ವರೆಗೆ ರಾಜ್ಯ ವಿಧಾನಸಭೆಗಳು ಮುಂದುವರಿಯುತ್ತವೆ, ಹೊರತು ಮೊದಲೇ ವಿಸರ್ಜನೆಯಾಗುವುದಿಲ್ಲ.

    10. ಸಮರ್ಥ ಚುನಾವಣಾ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಇವಿಎಂಗಳು ಮತ್ತು ವಿವಿಪ್ಯಾಟ್‌ಗಳಂತಹ ಅಗತ್ಯ ಉಪಕರಣಗಳ ಖರೀದಿಗೆ ಪೂರ್ವಭಾವಿಯಾಗಿ ಯೋಜಿಸಲು ಚುನಾವಣಾ ಆಯೋಗಕ್ಕೆ ಸೂಚಿಸುವುದು.

    11. ಸಮಿತಿಯು ಎಲ್ಲಾ ಚುನಾವಣೆಗಳಿಗೆ ಏಕೀಕೃತ ಮತದಾರರ ಪಟ್ಟಿ ಮತ್ತು ಗುರುತಿನ ಚೀಟಿ ವ್ಯವಸ್ಥೆಯನ್ನು ಪ್ರಸ್ತಾಪಿಸುತ್ತದೆ. ಇದು ರಾಜ್ಯಗಳ ಅನುಮೋದನೆಗೆ ಒಳಪಟ್ಟು ಸಾಂವಿಧಾನಿಕ ತಿದ್ದುಪಡಿಯ ಅಗತ್ಯವಿರುತ್ತದೆ.

  • ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಮೋದಿ ಸಂಪುಟ ಅನುಮೋದನೆ

    ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಮೋದಿ ಸಂಪುಟ ಅನುಮೋದನೆ

    – ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

    ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಮಹತ್ವದ ಮಸೂದೆಯನ್ನು ಗುರುವಾರ ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ.

    ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಡಿ.14ರಂದು ʻಮಹಾʼ ಸಂಪುಟ ವಿಸ್ತರಣೆ – ಪ್ರಧಾನಿ ಮೋದಿ ಭೇಟಿಯಾದ ಸಿಎಂ ಫಡ್ನವಿಸ್‌

    ಆಡಳಿತಾರೂಢ ಬಿಜೆಪಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯು ಐತಿಹಾಸಿಕ ಎಂದು ಬಣ್ಣಿಸಿದೆ. ಈ ಕ್ರಮವು ಚುನಾವಣಾ ವೆಚ್ಚ ಮತ್ತು ಆಡಳಿತ ಸ್ನೇಹಿಯಾಗಿದೆ ಎಂದು ಹೇಳಿಕೊಂಡಿದೆ.

    ಹಲವಾರು ಸಂದರ್ಭಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಚುನಾವಣೆ ನಡೆಸುವ ಪರಿಕಲ್ಪನೆಯನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ – ಟೆಕ್ಕಿ ಅತುಲ್ ಆತ್ಮಹತ್ಯೆ ಕುರಿತು ಕಂಗನಾ ಪ್ರತಿಕ್ರಿಯೆ

    ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು.

  • ʻಒಂದು ರಾಷ್ಟ್ರ ಒಂದು ಚುನಾವಣೆʼ ಸನ್ನಿಹಿತನಾ? – ಈ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಪ್ಲಾನ್!

    ʻಒಂದು ರಾಷ್ಟ್ರ ಒಂದು ಚುನಾವಣೆʼ ಸನ್ನಿಹಿತನಾ? – ಈ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಪ್ಲಾನ್!

    ನವದೆಹಲಿ: ʻಒಂದು ದೇಶ-ಒಂದು ಚುನಾವಣೆʼ ಮಸೂದೆಯನ್ನು (One Nation One Election Bill) ಪ್ರಸಕ್ತ ಅಧಿವೇಶನದಲ್ಲೇ ಮಂಡಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

    ʻಒಂದು ದೇಶ ಒಂದು ಚುನಾವಣೆʼ ಕುರಿತ ರಾಮನಾಥ್‌ ಕೋವಿಂದ್ ಸಮಿತಿಯ (Ram Nath Kovind Committee )ವರದಿಗೆ ಸಂಪುಟ ಈಗಾಗಲೇ ಅನುಮೋದನೆ ನೀಡಿದೆ. ಸರ್ಕಾರವು ಈಗ ಮಸೂದೆಯ ಬಗ್ಗೆ ಒಮ್ಮತವನ್ನು ರೂಪಿಸಲು ಬಯಸಿದೆ ಮತ್ತು ಅದನ್ನು ವಿವರವಾದ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿ (JPC)ಗೆ ಕಳುಹಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ ಎನ್ನಲಾಗಿದೆ. ಇದನ್ನೂ ಓದಿ: ಎರಡೂವರೆ ತಿಂಗಳಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಪದೋನ್ನತಿ: ಮಧು ಬಂಗಾರಪ್ಪ

    ಜಂಟಿ ಸಂಸದೀಯ ಸಮಿತಿ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದೆ. ಈ ಪ್ರಕ್ರಿಯೆಯಲ್ಲಿ ಇತರ ಮಧ್ಯಸ್ಥಗಾರರೂ ಭಾಗಿಯಾಗಲಿದ್ದಾರೆ. ದೇಶದಾದ್ಯಂತ ಇರುವ ಬುದ್ಧಿಜೀವಿಗಳು, ರಾಜಕೀಯ ತಜ್ಞರು ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭಾ ಸ್ಪೀಕರ್‌ಗಳನ್ನು ಚರ್ಚೆಗೆ ಕರೆಯಲಿದೆ. ಸಾಮಾನ್ಯ ಜನರ ಅಭಿಪ್ರಾಯವನ್ನೂ ಸಮಿತಿ ಸಂಗ್ರಹಿಸಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಕೃಷಿ ವಿಸ್ತೀರ್ಣಾಧಿಕಾರಿಯಿಂದ ಭಾರಿ ವಂಚನೆ – ಬರೋಬ್ಬರಿ 40 ಲಕ್ಷ ಪಂಗನಾಮ

    ʻಒಂದು ರಾಷ್ಟ್ರ, ಒಂದು ಚುನಾವಣೆʼ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಸಂಸತ್ತಿನಲ್ಲಿ 3ನೇ ಎರಡರಷ್ಟು ಬಹುಮತದ ಅವಶ್ಯಕತೆಯಿದೆ. ರಾಜ್ಯಸಭೆಯ 245 ಸ್ಥಾನಗಳಲ್ಲಿ ಎನ್‌ಡಿಎ 112, ವಿರೋಧ ಪಕ್ಷಗಳು 85 ಸ್ಥಾನಗಳನ್ನು ಒಳಗೊಂಡಿವೆ. 3ನೇ ಎರಡರಷ್ಟು ಬಹುಮತಕ್ಕೆ ಸರ್ಕಾರಕ್ಕೆ ಕನಿಷ್ಠ 164 ಮತಗಳ ಅಗತ್ಯವಿದೆ. ಇನ್ನೂ ಲೋಕಸಭೆಯಲ್ಲಿ ಎನ್‌ಡಿಎ 545 ಸ್ಥಾನಗಳಲ್ಲಿ 292 ಸ್ಥಾನಗಳನ್ನು ಹೊಂದಿದೆ. 3ನೇ ಎರಡರಷ್ಟು ಬಹುಮತಕ್ಕೆ 364 ಮತಗಳ ಅಗತ್ಯವಿದೆ. ಪ್ರಸ್ತುತ ಚುನಾವಣಾ ವ್ಯವಸ್ಥೆಯು ಹಣ, ಸಮಯ ಹಾಗೂ ಶ್ರಮವನ್ನು ವ್ಯರ್ಥ ಮಾಡುತ್ತಿವೆ. ಹಾಗಾಗಿ ಒಂದು ರಾಷ್ಟ್ರ ಒಂದು ಚುನಾವಣೆ ಕಾನೂನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ತಿಳಿಸಿದೆ.

    ಇನ್ನೂ ಸಂಸತ್‌ನಲ್ಲಿ ಅದಾನಿ ವಿಚಾರದ ಚರ್ಚೆಗೆ ಪಟ್ಟು ಹಿಡಿದಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸದನದ ಹೊರಗೆ ಹೋರಾಟ ಮುಂದುವರೆಸಿವೆ. ಇವತ್ತು ಇನ್ನೊಂದು ಹೆಜ್ಜೆ ಮುಂದೆ ಹೋದ ರಾಹುಲ್ ಗಾಂಧಿ, ಅದಾನಿ-ಮೋದಿ ಮುಖವಾಡ ಧರಿಸಿದವರ ಅಣಕು ಸಂದರ್ಶನ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಬಿಜೆಪಿ ಕೌಂಟರ್ ಕೊಟ್ಟಿದೆ. ಭಾರತ ವಿರೋಧಿ ನಿಲುವು ಹೊಂದಿರುವ ಅಮೆರಿಕ ಉದ್ಯಮಿ ಸೊರೊಸ್ ಸಂಸ್ಥೆಯ ಜೊತೆ ಸೋನಿಯಾ ಗಾಂಧಿ ಕೈಜೋಡಿಸಿದ್ದಾರೆ ಎಂದು ಪುನರ್ ಆರೋಪ ಮಾಡಿದೆ.

    ಭಾರತ ವಿರೋಧಿ ಶಕ್ತಿಗಳ ಜೊತೆ ಕೆಲಸ ಮಾಡುವವರ ವಿರುದ್ಧ ಎಲ್ಲಾ ಪಕ್ಷಗಳು ಒಂದಾಗಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಕರೆ ನೀಡಿದ್ದಾರೆ. ಈ ವಿಚಾರ ಸಂಸತ್‌ನಲ್ಲಿ ಗದ್ದಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: New Delhi | ಬಡ ವ್ಯಾಪಾರಿಗಳ ತಳ್ಳುಗಾಡಿಗಳ ಮೇಲೆ ಕೇಸರಿ ಧ್ವಜ ನೆಟ್ಟ ಬಿಜೆಪಿ ಕೌನ್ಸಿಲರ್!

  • ಒಂದು ರಾಷ್ಟ್ರ, ಒಂದು ಚುನಾವಣೆಗೆ ನಟ ವಿಜಯ್‌ ದಳಪತಿ ಪಕ್ಷ ವಿರೋಧ

    ಒಂದು ರಾಷ್ಟ್ರ, ಒಂದು ಚುನಾವಣೆಗೆ ನಟ ವಿಜಯ್‌ ದಳಪತಿ ಪಕ್ಷ ವಿರೋಧ

    – ವಕ್ಫ್‌ ತಿದ್ದುಪಡಿ ಮಸೂದೆ ಜಾರಿಗೆ ಮುಂದಾದ ಬಿಜೆಪಿ, ಕೇಂದ್ರದ ವಿರುದ್ಧ ವಾಗ್ದಾಳಿ

    ಟ ಕಮ್ ರಾಜಕಾರಣಿ ವಿಜಯ್ ದಳಪತಿ (Vijay Thalapathy) ಅವರ ಪಕ್ಷ ತಮಿಳಗ ವೆಟ್ರಿ ಕಳಗಂ (TVK) ಬಿಜೆಪಿಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯೋಜನೆ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದೆ.

    ‘ಒಂದು ರಾಷ್ಟ್ರ, ಒಂದು ಚುನಾವಣೆ’ (One Nation, One Election) ಯೋಜನೆಯು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ತತ್ವಗಳಿಗೆ ವಿರುದ್ಧವಾಗಿದೆ ಎಂದು ಟಿವಿಕೆ ನಿರ್ಣಯದಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಜಮ್ಮು & ಕಾಶ್ಮೀರದ ಪ್ರವಾಸೋದ್ಯಮ ಕಚೇರಿ ಬಳಿ ಗ್ರೆನೇಡ್ ದಾಳಿ – 10 ಮಂದಿಗೆ ಗಾಯ

    ಪಕ್ಷವು ನೀಟ್ ವಿಚಾರದಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಶಿಕ್ಷಣವನ್ನು ರಾಜ್ಯ ಪಟ್ಟಿಗೆ ತರಬೇಕೆಂದು ಒತ್ತಾಯಿಸಿದೆ. ರಾಜ್ಯ ಸ್ವಾಯತ್ತ ನೀತಿಯ ನಮ್ಮ ಬೇಡಿಕೆಯ ಪ್ರಕಾರ, ಶಿಕ್ಷಣವು ರಾಜ್ಯ ಪಟ್ಟಿಗೆ ಸೇರಿದೆ. ಕೇಂದ್ರ ಸರ್ಕಾರವು ಶಿಕ್ಷಣವನ್ನು ರಾಜ್ಯ ಪಟ್ಟಿಗೆ ವರ್ಗಾಯಿಸಿದರೆ, ರಾಜ್ಯ ಸರ್ಕಾರವು ತಾನೇ NEET ಅನ್ನು ರದ್ದುಗೊಳಿಸಬಹುದು. ನಮ್ಮ ಪಕ್ಷದ ಕಾರ್ಯಕಾರಿ ಸಮಿತಿಯು, ಇದಕ್ಕೆ ಕೇಂದ್ರ ಸರ್ಕಾರದ ಅಡಚಣೆಯನ್ನು ವಿರೋಧಿಸುತ್ತದೆ. ತಮಿಳುನಾಡು ಜನರನ್ನು ನಕಲಿ ಭರವಸೆಗಳೊಂದಿಗೆ ವಂಚಿಸುತ್ತಿರುವ ರಾಜ್ಯ ಡಿಎಂಕೆ ಸರ್ಕಾರವನ್ನೂ ವಿರೋಧಿಸುತ್ತದೆ ಎಂದು ಟೀಕಿಸಿದೆ.

    ಕಾನೂನು ಮತ್ತು ಸುವ್ಯವಸ್ಥೆ, ಮದ್ಯ ಮಾರಾಟ ಮತ್ತು ಔಷಧಗಳ ವಿಚಾರವಾಗಿ ಆಡಳಿತಾರೂಢ ಡಿಎಂಕೆಯನ್ನು ಟಿವಿಕೆ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರಿ ಸ್ವಾಮ್ಯದ ಮದ್ಯದ ಅಂಗಡಿಗಳನ್ನು ಹಂತ ಹಂತವಾಗಿ ಮುಚ್ಚುವಂತೆ ಒತ್ತಾಯಿಸಿದೆ. ಇದನ್ನೂ ಓದಿ: ಮಣಿಪುರ | ಇನ್ಸ್‌ಪೆಕ್ಟರ್‌ನನ್ನು ಗುಂಡಿಕ್ಕಿ ಹತ್ಯೆಗೈದ ಕಾನ್ಸ್‌ಟೇಬಲ್‌!

    ವಿಜಯ್‌ ದಳಪತಿ ಪಕ್ಷವು ಸಾಮಾಜಿಕ ನ್ಯಾಯಕ್ಕಾಗಿ ಡಿಎಂಕೆಯ ಘೋಷಣೆಯನ್ನು ಲೇವಡಿ ಮಾಡಿದೆ. ಆಡಳಿತ ಪಕ್ಷವು ಜಾತಿ ಗಣತಿಗೆ ಒತ್ತಾಯಿಸುವ ಬದಲು ಜಾತಿ ಸಮೀಕ್ಷೆಯನ್ನು ನಡೆಸಬೇಕು ಎಂದು ಹೇಳಿದೆ.

    ವಕ್ಫ್‌ ತಿದ್ದುಪಡಿ ಮಸೂದೆ 2024 ಅನ್ನು ಒಕ್ಕೂಟ ವ್ಯವಸ್ಥೆ ವಿರುದ್ಧದ ದಾಳಿ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರವನ್ನು ಟಿವಿಕೆ ತರಾಟೆಗೆ ತೆಗೆದುಕೊಂಡಿದೆ. ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆಯು ಮುಸ್ಲಿಮರ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಈ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ವಿಜಯ್‌ ಪಕ್ಷ ಒತ್ತಾಯಿಸಿದೆ.

  • ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಮೋದಿ

    ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಮೋದಿ

    – ಏಕತಾ ದಿನದಂದು ಪ್ರಧಾನಿ ಭಾಷಣ

    ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

    ಗುಜರಾತ್‌ನ (Gujarat) ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು. ರಾಷ್ಟ್ರೀಯ ಏಕತೆಗೆ ಕರೆ ನೀಡಿದ ಪ್ರಧಾನಿ ಮೋದಿ, ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವಲ್ಲಿ ಅದರ ಮೌಲ್ಯವನ್ನು ಒತ್ತಿ ಹೇಳಿದರು.ಇದನ್ನೂ ಓದಿ: ಮಗನನ್ನು ನೋಡಲು ವಿಜಯಲಕ್ಷ್ಮಿ ಮನೆಗೆ ಆಗಮಿಸಿದ ಮೀನಾ ತೂಗುದೀಪ

    ಬಳಿಕ ಮಾತನಾಡುತ್ತಾ, ರಾಷ್ಟ್ರೀಯ ಏಕತಾ ದಿವಸ್ ಹಾಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಪ್ರಪಂಚದ ಹಲವಾರು ದೇಶಗಳಲ್ಲಿ ದೀಪಾವಳಿ ಆಚರಿಸಲಾಗುತ್ತಿದೆ. ಈ ಹಬ್ಬವು ಭಾರತವನ್ನು ಇಡೀ ವಿಶ್ವದೊಂದಿಗೆ ಜೋಡಿಸಿದೆ. ದೇಶಗಳಲ್ಲಿ ಇದನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಹೊತ್ತಿನಲ್ಲೇ ಏಕತಾ ದಿವಸ್ ಆಚರಣೆ ಮಾಡುತ್ತಿರುವುದು ವಿಶಿಷ್ಟ ಸಂಗತಿ ಎಂದು ಶ್ಲಾಘಿಸಿದರು.

    ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಯನ್ನು ಈಗಾಗಲೇ ಈ ವರ್ಷದ ಆರಂಭದಲ್ಲಿ ಕ್ಯಾಬಿನೆಟ್‌ನಲ್ಲಿ ಅಂಗೀಕರಿಸಲಾಗಿದ್ದು, ಮುಂದಿನ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಸದ್ಯ ನಾವು ಇದಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಇದು ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜೊತೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಧಿಸುವಲ್ಲಿ ಸಹಕಾರಿಯಗುತ್ತದೆ ಎಂದರು.

    2019ರಲ್ಲಿ ಆರ್ಟಿಕಲ್ 370 ರದ್ದತಿ ಬಗ್ಗೆ ಮಾತನಾಡಿದ್ದ ಪ್ರಧಾನಿ, ಇದೀಗ ಅದನ್ನು ಶಾಶ್ವತವಾಗಿ ಸಮಾಧಿ ಮಾಡಲಾಗಿದೆ. ಭಾರತಕ್ಕೆ ಸ್ವಾತಂತ್ರ‍್ಯ ಬಂದು 70 ವರ್ಷಗಳ ನಂತರ ದೇಶದಲ್ಲಿ ಒಂದೇ ಸಂವಿಧಾನ ಎಂಬ ಸಂಕಲ್ಪ ಈಡೇರಿದೆ ಎಂದರು.ಇದನ್ನೂ ಓದಿ: ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ – ಡಿಕೆಶಿ ಸ್ಪಷ್ಟನೆ

  • ಒಂದು ದೇಶ ಒಂದು ಚುನಾವಣೆಯಿಂದ ಕೋಟ್ಯಂತರ ಹಣ ಉಳಿತಾಯ: ಅಶೋಕ್

    ಒಂದು ದೇಶ ಒಂದು ಚುನಾವಣೆಯಿಂದ ಕೋಟ್ಯಂತರ ಹಣ ಉಳಿತಾಯ: ಅಶೋಕ್

    – ವಿಪಕ್ಷಗಳಿಗೆ ಮೋದಿಯವರ ಭಯ ಇದೆ

    ಬೆಂಗಳೂರು: ಒಂದು ದೇಶ ಒಂದು ಚುನಾವಣೆಯಿಂದ (One Nation One Election) ಅನಗತ್ಯ ವೆಚ್ಚ ಉಳಿಯಲಿದೆ. ಬಹಳ ಹಿಂದೆಯೇ ಈ ತೀರ್ಮಾನ ಮಾಡಬೇಕಿತ್ತು. ಈಗಲಾದರೂ ಈ ನಿರ್ಧಾರ ಮಾಡಲಾಗಿದೆ. ಇದನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok) ಹೇಳಿದ್ದಾರೆ.

    ಒಂದು ದೇಶ ಒಂದು ಚುನಾವಣೆಗೆ ಕೇಂದ್ರದಿಂದ ಒಪ್ಪಿಗೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆಗೆ ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ. ಮುಂದಿನ ಅಧಿವೇಶನದಲ್ಲಿ ಇದರ ಮಸೂದೆ ಮಂಡನೆ ಆಗಲಿದೆ. ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತ ಮಾಡುತ್ತೇವೆ. ಇದರಿಂದ ಕೋಟ್ಯಂತರ ಹಣ ಉಳಿತಾಯ ಆಗಲಿದೆ ಎಂದರು. ಇದನ್ನೂ ಓದಿ: ನವೀಕರಿಸಬಹುದಾದ ಇಂಧನ ವಲಯದಲ್ಲಿ ಆಸಕ್ತಿ ಒಂದು ಆಯ್ಕೆಯಲ್ಲ, ಅನಿವಾರ್ಯ – ಜಗದೀಪ್ ಧನಕರ್

    ವಿಪಕ್ಷಗಳು ಒಂದು ದೇಶ ಒಂದು ಚುನಾವಣೆ ವಿರೋಧ ಮಾಡುತ್ತಿವೆ. ವಿಪಕ್ಷಗಳಿಗೆ ಮೋದಿಯವರ ಭಯ ಇದೆ. ಮತ್ತೆ ಮೋದಿಯವರೇ ಗೆದ್ದು ಬರುತ್ತಾರೆ ಅಂತ ಭಯ. ಹೀಗಾಗಿ ವಿಪಕ್ಷಗಳು ವಿರೋಧ ಮಾಡುತ್ತಿವೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

  • ಮೋದಿ 3.0 ಅವಧಿಯಲ್ಲೇ ಒಂದು ದೇಶ, ಒಂದು ಚುನಾವಣೆ ಜಾರಿ?

    ಮೋದಿ 3.0 ಅವಧಿಯಲ್ಲೇ ಒಂದು ದೇಶ, ಒಂದು ಚುನಾವಣೆ ಜಾರಿ?

    ನವದೆಹಲಿ: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯೊಂದನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಒಂದು ದೇಶ ಒಂದು ಚುನಾವಣೆ (One Nation, One Election) ಬಿಲ್ ಅನ್ನು ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ‌.

    ಕಳೆದ ಮಾರ್ಚ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಒಂದು ದೇಶ ಒಂದು ಚುನಾವಣೆ ಕಾರ್ಯಸಾಧ್ಯತೆ ಬಗ್ಗೆ ವರದಿಯನ್ನು ನೀಡಿತ್ತು. ಯಾವಗಿಂದ ಆರಂಭಿಸಬೇಕು ಎಂದು ತಿಳಿಸದೇ ಈ ಇದನ್ನು ಹೇಗೆ ಅನುಷ್ಠಾನಕ್ಕೆ ತರಬಹುದು ಎಂದು ವರದಿಯಲ್ಲಿ ವಿವರಿಸಿತ್ತು. ಸದ್ಯ ವರದಿಯನ್ನು ಅಧ್ಯಯನ ಮಾಡಿರುವ ಸರ್ಕಾರ ಇದನ್ನು ಬಿಲ್ ಮೂಲಕ ಸಂಸತ್‌ನಲ್ಲಿ ಮಂಡಿಸಲು ಸಿದ್ಧತೆ ಆರಂಭಿಸಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಭಾರತದ ನಂ.1 ಭಯೋತ್ಪಾದಕ: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ

    ಕಳೆದ ಆಗಸ್ಟ್ 15 ರಂದು ಕೆಂಪು ಕೋಟೆಯಿಂದ ಭಾಷಣ ಮಾಡಬೇಕಿದ್ದಾಗಲೂ ಪ್ರಧಾನಿ ಮೋದಿ, ಒಂದು ದೇಶ ಒಂದು ಚುನಾವಣೆಯ ಅಗತ್ಯವನ್ನು ಒತ್ತಿ ಹೇಳಿದ್ದರು. ಒಂದು ದೇಶ ಒಂದು ಚುನಾವಣೆಯ ಜೊತೆಗೆ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಬಿಲ್ ಕೂಡಾ ಮಂಡನೆಯಾಗಲಿದೆ ಎನ್ನಲಾಗಿದೆ.