ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್ (Illegal Online Betting) ಪ್ರಕರಣ ಸಂಬಂಧ ಚಿತ್ರದುರ್ಗ (Chitradurga) ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು (Veerendra Puppy) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಸಾವಿರಾರು ಕೋಟಿ ಹಣ ಹೂಡಿಕೆ ಮತ್ತು ವರ್ಗಾವಣೆ ಆರೋಪದಲ್ಲಿ ಇಡಿ ಅಧಿಕಾರಿಗಳಿಂದ ಬಂಧನವಾಗಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ವೀರೇಂದ್ರ ಪಪ್ಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿತು. ಇದನ್ನೂ ಓದಿ: ಅಕ್ರಮ ಆನ್‌ಲೈನ್ ಬೆಟ್ಟಿಂಗ್ – ಅಲ್ಪಾವಧಿಯಲ್ಲಿ 2,000 ಕೋಟಿ ರೂ. ಲಾಭಗಳಿಸಿದ ವೀರೇಂದ್ರ ಪಪ್ಪಿ
ಈ ಹಿಂದೆ ವೀರೇಂದ್ರ ಪಪ್ಪಿಗೆ ಸೇರಿದ ಹಲವು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ವಹಿವಾಟಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಲ್ಲಿ ಬಂಧಿಸಿದ್ದ ಇಡಿ ಅಧಿಕಾರಿಗಳು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಸಿಕ್ಕ ಹಲವು ಮಾಹಿತಿ ಆಧಾರದ ಮೇಲೆ ಮತ್ತೆ ಎರಡು ಬಾರಿ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಈ ವೇಳೆ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಹಣ ಹೂಡಿಕೆ ಮತ್ತು ವರ್ಗಾವಣೆ ಮಾಡಿದ್ದ ಬಗ್ಗೆ ದಾಖಲೆಗಳು ಲಭ್ಯವಾಗಿತ್ತು. ಇಡಿ ಅಧಿಕಾರಿಗಳ ತನಿಖೆಯಲ್ಲಿ ವೀರೇಂದ್ರ ಪಪ್ಪಿ ಸುಮಾರು ಏಳು ಸಾವಿರ ಕೋಟಿ ಅಕ್ರಮ ವ್ಯವಹಾರ ನಡೆಸಿರೋ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಮುಂದುವರೆದು ಸುಮಾರು ಇಪ್ಪತ್ತು ಸಾವಿರ ಕೋಟಿ ಅಕ್ರಮ ವ್ಯವಹಾರದ ಬಗ್ಗೆ ತನಿಖೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ – 55 ಕೋಟಿ ರೂ. ನಗದು ಫ್ರೀಜ್ ಮಾಡಿದ ಇ.ಡಿ
ಚಿತ್ರದುರ್ಗ: ಜನಪ್ರತಿನಿಧಿ ಅಂದ್ರೆ ಜನಸಾಮಾನ್ಯರಿಗೆ ಮಾದರಿಯಾಗಿರಬೇಕು. ಆದರೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿ (KC Veerendra Puppy) ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ (Online Betting) ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆಂಬ ಮಾಹಿತಿ ಇಡಿ (ED) ದಾಳಿ ವೇಳೆ ಬಯಲಾಗಿದೆ.
ಚಿತ್ರದುರ್ಗ ಕಾಂಗ್ರೆಸ್ ಶಾಸಕ ಹಾಗೂ ಸಿನಿಮಾ ನಟ ದೊಡ್ಡಣ್ಣನ ಅಳಿಯ ಕೆಸಿ ವೀರೇಂದ್ರ ಪಪ್ಪಿ ಹಿಂದಿನಿಂದಲೂ ಕ್ಯಾಸಿನೋ ದೊರೆ ಅಂತಾನೇ ಫೇಮಸ್. ಗೋವಾ, ಶ್ರೀಲಂಕಾ ಸೇರಿದಂತೆ ವಿವಿದೆಡೆಗಳಲ್ಲಿ ಕ್ಯಾಸಿನೋ ನಡೆಸುತ್ತಿರುವ ಕೆಸಿ ವೀರೇಂದ್ರ, ನಾವು ಹಿಂದಿನಿಂದಲೂ ಕೋಟ್ಯಾಧೀಶ್ವರರು, ನಮಗೆ ಜನಸಾಮಾನ್ಯರು ಹಾಗೂ ಸರ್ಕಾರದ ಹಣ ಬೇಕಿಲ್ಲ, ನಾನು ಜನಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆಂದು 2023ರ ವಿಧಾನಸಭೆ ಚುನಾವಣೆ ವೇಳೆ ಭರ್ಜರಿ ಪ್ರಚಾರ ಗಿಟ್ಟಿಸಿದ್ದರು. ಚಿತ್ರದುರ್ಗ ಕ್ಷೇತ್ರದಲ್ಲಿ ಹಣದಹೊಳೆ ಹರಿಸಿ ಕಾಂಗ್ರೆಸ್ ಶಾಸಕರಾಗಿ ಗೆದ್ದಿದ್ದಾರೆ. ಆದರೆ ಶಾಸಕ ವೀರೇಂದ್ರ ಹೇಗೆ ಕೋಟ್ಯಾಧಿಪತಿ ಆದ ಎನ್ನೋದನ್ನ ಶಾಸಕರ ತವರೂರಾದ ಚಳ್ಳಕೆರೆ, ಬೆಂಗಳೂರು, ಪಣಜಿ, ಗ್ಯಾಂಗ್ಟಾಕ್, ಜೋಧಪುರ, ಹುಬ್ಬಳ್ಳಿ ಮತ್ತು ಮುಂಬೈ ಸೇರಿದಂತೆ 31 ಕಡೆಗಳಲ್ಲಿ ದಾಳಿ ನಡೆಸಿದ್ದ ಅಧಿಕಾರಿಗಳು ಶಾಸಕರ ಅಸಲಿ ಬಂಡವಾಳವನ್ನು ಬಯಲುಮಾಡಿದ್ದಾರೆ. ಇದನ್ನೂ ಓದಿ: ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ – 55 ಕೋಟಿ ರೂ. ನಗದು ಫ್ರೀಜ್ ಮಾಡಿದ ಇ.ಡಿ
ಶಾಸಕ ವೀರೇಂದ್ರನ ಅಸಲಿ ಬಂಡವಾಳದ ಬೆನ್ನತ್ತಿರುವ ಇಡಿ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿದ್ದ ಕಿಂಗ್ 567, ರಾಜಾ 567, ಲಯನ್ 567 ಸೇರಿದಂತೆ ಇತ್ಯಾದಿಗಳ ಹೆಸರಿನಲ್ಲಿ ನಡೆಸುತ್ತಿರುವ ಆನ್‌ಲೈನ್ ಬೆಟ್ಟಿಂಗ್ ತಾಣಗಳನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ ಹಣ ವರ್ಗಾವಣೆಗೆ ವೆಬ್‌ಸೈಟ್, ರೂಟಿಂಗ್ ಮಾಡಲು ಹಲವು ಗೇಟ್‌ವೇಗಳನ್ನು ಬಳಕೆ ಮಾಡಿದ್ದು, ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿರುವ ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಈ ದಂಧೆಗೆ ಶಾಸಕವೀರೇಂದ್ರ ಪಪ್ಪಿಯ ಸಹೋದರ ಕೆಸಿ ತಿಪ್ಪೆಸ್ವಾಮಿ ಪ್ರಮುಖ ಕಿಂಗ್‌ಪಿನ್ ಆಗಿದ್ದು, ದುಬೈನಿಂದ 3 ವ್ಯಾಪಾರ ಘಟಕಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಡೈಮಂಡ್ ಸಾಫ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಹೆಸರಲ್ಲಿ ಶಾಸಕ ಕೆಸಿ ವೀರೇಂದ್ರ ಸಹೋದರನಾದ ಕೆಸಿ ತಿಪ್ಪೆಸ್ವಾಮಿ ಹಾಗೂ ಕೆಸಿ ನಾಗರಾಜ್ ಪುತ್ರ ಪೃಥ್ವಿ ಎನ್ ರಾಜ್, ಅನಿಲ್ ಗೌಡ ಸೇರಿದಂತೆ ಇತರರ ಸಹಭಾಗಿತ್ವದಲ್ಲಿ ಅಕ್ರಮ ದಂಧೆ ನಡೆಸುತ್ತಿದ್ದಾರೆ. ಜೊತೆಗೆ ಈ ವಹಿವಾಟುಗಳಲ್ಲಿ ಗೇಟ್‌ವೇಗಳು ಮತ್ತು ಟಿಎಸ್‌ಪಿಗಳ ಎಸ್ಕ್ರೊ ಖಾತೆಗಳ ಮೂಲಕವೂ ಆಟಗಾರರ ಹಣದ ಠೇವಣಿ ಮಾಡುತ್ತಿದ್ದು, ಈ ಹಣವನ್ನು ಹವಾಲಾ ವಹಿವಾಟುಗಳು ಸೇರಿದಂತೆ ವಿವಿಧ ರೀತಿಯಲ್ಲಿ ಹೂಡಿಕೆ ಮಾಡಿದ್ದಾರೆಂದು ಇಡಿ ಶೋಧಕಾರ್ಯದಲ್ಲಿ ಬಹಿರಂಗಪಡಿಸಿದೆ. ಇದನ್ನೂ ಓದಿ: ‘ಕೈ’ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇ.ಡಿ ದಾಳಿ – ಆರು ಐಷಾರಾಮಿ ಕಾರುಗಳು ವಶಕ್ಕೆ
ಇನ್ನು ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಮನೆ ಮೇಲೆ ಆಗಸ್ಟ್ 29ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಿಂದ ಕರೆತಂದು ಬಂಧಿಸಿದ್ದರು. ಬೆಳಗಿನ ಜಾವ 5:30ರಿಂದ ಮಧ್ಯರಾತ್ರಿ 12:45 ರವರೆಗೆ ಶಾಸಕ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರಾದ ಕೆಸಿ ತಿಪ್ಪೇಸ್ವಾಮಿ ಹಾಗೂ ನಾಗರಾಜ್ ಮನೆಯಲ್ಲೂ ಸಹ ತೀವ್ರ ಶೋಧ ನಡೆಸಿ ಕೊನೆಗೆ ದಾಖಲೆಯೊಂದಿಗೆ ಅಧಿಕಾರಿಗಳು ವಾಪಸ್ ಹೋಗಿದ್ದರು. ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳಿಗೆ 12 ಕೋಟಿ ರೂ. ನಗದು, 1 ಕೋಟಿ ವಿದೇಶ ಕರೆನ್ಸಿ, 6 ಕೋಟಿ ಬೆಲೆ ಬಾಳುವ ಚಿನ್ನಾಭರಣ ಮತ್ತು 10 ಕೆಜಿ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ 5 ಐಷಾರಾಮಿ ವಾಹನಗಳನ್ನು ಕೂಡ ಇಡಿ ಅಧಿಕಾರಿಗಳು ಸೀಜ್ ಮಾಡಿದ್ದು, ಶಾಸಕ ಪಪ್ಪಿ ಅವರಿಗೆ ಸೇರಿದ 17 ಬ್ಯಾಂಕ್ ಅಕೌಂಟ್ ಹಾಗೂ 2 ಲಾಕರ್‌ಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ವೀರೇಂದ್ರ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಫ್ರೀಜ್ ಮಾಡಿದೆ. ಇದನ್ನೂ ಓದಿ: ಮಣಿಪುರ ಮಾತುಕತೆ ಸಫಲ; ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ
ಒಟ್ಟಾರೆ ಹಾಸಿಗೆ ಇದ್ದಷ್ಟು ಕಾಲು ಚಾಚಬೇಕೆಂಬ ಮಾತಿದೆ. ಆದರೆ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯಿಂದ ಅಲ್ಪಾವಧಿಯಲ್ಲೇ 2,000 ಕೋಟಿ ರೂ. ಲಾಭಗಳಿಸಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಹವಾಲದಲ್ಲು ತನ್ನ ವಹಿವಾಟು ನಡೆಸಿರುವ ಪರಿಣಾಮ ಇಡಿ ಕಸ್ಟಡಿಯಲ್ಲಿರುವ ವೀರೇಂದ್ರಗೆ ದಿನದಿಂದ ದಿನಕ್ಕೆ ಮತ್ತಷ್ಟು ಸಂಕಷ್ಟ ಎದುರಾಗೋದು ಗ್ಯಾರಂಟಿ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ
ಇನ್ನು ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು 4 ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು ಇಡಿ ಕಸ್ಟಡಿ ಅವಧಿ ಅಂತ್ಯಗೊಂಡ ಬೆನ್ನಲ್ಲೇ ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಪೊಲೀಸ್ ಕಸ್ಟಡಿ ವೇಳೆ ಕೆಲವೊಂದು ನಿಯಮಗಳನ್ನು ಪಾಲಿಸಲು ಕೋರ್ಟ್ ಸೂಚನೆ ಕೊಟ್ಟಿದೆ. ರಾತ್ರಿ 9 ಗಂಟೆವರೆಗೆ ಮಾತ್ರ ವಿಚಾರಣೆ ನಡೆಸುವಂತೆ ಸೂಚಿಸಿದೆ. ಉತ್ತಮ ಆಹಾರ, ವೈದ್ಯಕೀಯ ಸೇವೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಆದೇಶ ಕೊಟ್ಟಿದೆ. ಸೆಪ್ಟೆಂಬರ್ 8ರಂದು ಸಂಜೆ 5 ಗಂಟೆಗೆ ಕೋರ್ಟ್ ಮುಂದೆ ವೀರೇಂದ್ರ ಪಪ್ಪಿಯನ್ನು ಹಾಜರುಪಡಿಸಲು ಸೂಚನೆ ನೀಡಿದೆ. ಇದನ್ನೂ ಓದಿ: ಅಪಾಯ ಮಟ್ಟ ಮೀರಿದ ಯಮುನಾ ನದಿ – ದೆಹಲಿ ಸಚಿವಾಲಯಕ್ಕೂ ನುಗ್ಗಿದ ಪ್ರವಾಹ ನೀರು
55 ಕೋಟಿ ರೂ. ನಗದು ಫ್ರೀಜ್:
ಈಗಾಗಲೇ ಪಪ್ಪಿ ಬ್ಯಾಂಕ್ ಖಾತೆಯಿಂದ 55 ಕೋಟಿ ನಗದು ಫ್ರೀಜ್ ಮಾಡಿರುವುದಾಗಿ ಇಡಿ ಪ್ರಕಟಣೆ ಹೊರಡಿಸಿತ್ತು. ಅಲ್ಲದೇ ಕೆ.ಸಿ ವೀರೇಂದ್ರ ಅವರ 9 ಬ್ಯಾಂಕ್ ಖಾತೆಗಳಲ್ಲಿ ಅಂದಾಜು 40.69 ಕೋಟಿ ನಗದು ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. (ಅಂದಾಜು) ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ.
ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ (Online Betting) ಜಾರಿ ನಿರ್ದೇಶನಾಲಯದಿಂದ (ED) ಶಾಸಕ ಕೆ ಸಿ ವಿರೇಂದ್ರ (KC Veerendra Pappi) ಬಂಧನ ಪ್ರಕರಣ ಸಂಬಂಧ ಬರೋಬ್ಬರಿ 55 ಕೋಟಿ ರೂ. ನಗದು ಫ್ರೀಜ್ ಮಾಡಲಾಗಿದೆ.
ಈ ಬಗ್ಗೆ ಇಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಂಗಳವಾರ ಚಳ್ಳಕೆರೆ, ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ವೀರೆಂದ್ರಗೆ ಸೇರಿದ ಕೋಟ್ಯಂತರ ರೂ. ಹಣ ಹಾಗೂ ಐಷಾರಾಮಿ ಐದು ಕಾರುಗಳನ್ನ ಫ್ರೀಜ್ ಮಾಡಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: Bengaluru| ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ
ಚಿತ್ರದುರ್ಗ: ಇ.ಡಿ (ED) ವಶದಲ್ಲಿರುವ ಚಿತ್ರದುರ್ಗದ (Chitradurga) ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ (KC Veerendra Pappi) ಮನೆ ಮೇಲೆ ಇಡಿ ಅಧಿಕಾರಿಗಳು ಮತ್ತೆ ಇಂದು ದಾಳಿಯನ್ನು ನಡೆಸಿದ್ದು, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ಶಾಸಕ ಕೆ.ಸಿ. ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಆರು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅವರ ಮನೆಯಲ್ಲಿರುವ ಐಶಾರಾಮಿ ಕಾರುಗಳ ಬಗ್ಗೆ ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಮನೆ ಮಾತ್ರವಲ್ಲದೇ ಶಾಸಕ ವೀರೇಂದ್ರ ಪಪ್ಪಿಯ ಬ್ಯಾಂಕ್ ಖಾತೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಸಂತಾನಹರಣ ಚಿಕಿತ್ಸೆ ವೇಳೆ ತಾಯಿ ಸಾವು – ಅನಸ್ತೇಶಿಯಾ ನೀಡದೇ ಶಸ್ತ್ರಚಿಕಿತ್ಸೆ ಮಾಡಿದ್ದಾಗಿ ಕುಟುಂಬಸ್ಥರ ಆರೋಪ
ಚಳ್ಳಕೆರೆ ನಗರದ ಕೋಟೆಕ್ ಮಹೇಂದ್ರ ಬ್ಯಾಂಕ್ ಹಾಗೂ ಆಕ್ಸಿಸ್ ಬ್ಯಾಂಕ್‌ಗೆ ಇ.ಡಿ ಅಧಿಕಾರಿಗಳು ತೆರಳಿದ್ದರು. ಆ ಬ್ಯಾಂಕ್‌ನಲ್ಲಿ ವೀರೇಂದ್ರ ಪಪ್ಪಿ ಹಾಗೂ ಅವರ ಕುಟುಂಬ ಸದಸ್ಯರ ಹಣ ವರ್ಗಾವಣೆ ಬಗ್ಗೆ ಮಾಹಿತಿ, ದಾಖಲೆಯನ್ನ ಕೂಡ ಕಲೆ ಹಾಕಿದ್ದು, 17 ಬ್ಯಾಂಕ್ ಖಾತೆಗಳ ಮೂಲಕ ಆಗಿರುವ ಹಣಕಾಸು ವರ್ಗಾವಣೆ ಬಗ್ಗೆ ಮಾಹಿತಿ, ದಾಖಲೆಯನ್ನು ಸಂಗ್ರಹಿಸಿದ್ದಾರೆ. ಜೊತೆಗೆ ಬೆಟ್ಟಿಂಗ್ (Online Betting) ಆಪ್‌ಗಳ ಮೂಲಕ ಗಳಿಸಿದ ಹಣವನ್ನು ಈ ಬ್ಯಾಂಕ್ ಖಾತೆಗಳ ಮೂಲಕ ವರ್ಗಾವಣೆ ಮಾಡುವ ಮೂಲಕ ಅಕ್ರಮ ವ್ಯವಹಾರ ನಡೆಸಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್ – ʻಕೈʼ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ
ಆಗಸ್ಟ್ 22ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ಮುಂಜಾನೆ 5 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಅಂದು ಪಪ್ಪಿ ಮನೆಯಲ್ಲಿ ಕೋಟಿ ಕೋಟಿ ಹಣ ಜೊತೆ ಚಿನ್ನಾಭರಣ ವಿದೇಶಿ ಕರೆನ್ಸಿಯನ್ನ ಇಡಿ ವಶಕ್ಕೆ ಪಡೆದಿತ್ತು. ಇದನ್ನೂ ಓದಿ: ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್
ಸತತ 18 ಗಂಟೆಗೂ ಹೆಚ್ಚು ಕಾಲ ಇಡಿ ಅಧಿಕಾರಿಗಳು ಪಪ್ಪಿ ಕೋಟೆಯನ್ನು ಜಾಲಾಡಿದ್ದರು. ಈ ವೇಳೆ 1 ಕೋಟಿ ರೂ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ರೂ ನಗದು ಪತ್ತೆ ಆಗಿತ್ತು. 6 ಕೋಟಿ ರೂ. ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ, 4 ವಾಹನಗಳು, 17 ಬ್ಯಾಂಕ್ ಅಕೌಂಟ್ಸ್ ಮತ್ತು 2 ಲಾಕರ್ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಬಳ್ಳಾರಿಯಿಂದ ಪದೇ ಪದೇ ಕರೆತರಲು ಸಾಧ್ಯವಿಲ್ಲ: ದರ್ಶನ್ ಪರ ವಕೀಲ
VIDEO | Delhi: Former Indian cricketer Suresh Raina appeared before the Enforcement Directorate (ED) for questioning in an alleged illegal betting app-linked money laundering case.
The federal probe agency will record his statement under the Prevention of Money Laundering Act… pic.twitter.com/OcTueUS121
ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ (ಆ.12) ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ನೋಟಿಸ್ ನೀಡಿ, ಬುಧವಾರ (ಆ.13) ವಿಚಾರಣೆ ಹಾಜರಾಗುವಂತೆ ತಿಳಿಸಿತ್ತು. ಅದರಂತೆ ದೆಹಲಿಯಲ್ಲಿರುವ ಇಡಿ ಕಚೇರಿಗೆ ಆಗಮಿಸಿ, ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ವಿಚಾರಣೆ ವೇಳೆ ರೈನಾ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ.
ಹೈದರಾಬಾದ್: ತೆಲಂಗಾಣದಲ್ಲಿ ಬೆಟ್ಟಿಂಗ್ ಆಪ್ ಪ್ರಕರಣ ಸಂಚಲನ ಸೃಷ್ಟಿಸಿದೆ. ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ರಾಣಾ ದಗ್ಗುಬಾಟಿ (RanaDaggubati) ಇಡಿ (ED) ವಿಚಾರಣೆಗೆ ಹಾಜರಾಗಿದ್ದಾರೆ. ಹೈದರಾಬಾದ್‌ನ (Hyderabad) ಬಶೀರ್‌ಬಾಗ್‌ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
#WATCH | Hyderabad, Telangana: Actor Rana Daggubati appears before the ED officials at Hyderabad Zonal ED office in connection with an illegal betting apps case inquiry. pic.twitter.com/9Ypct3Ml59
ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ (Online Betting) ಹಾಗೂ ಗ್ಯಾಂಬ್ಲಿಂಗ್‌ಗೆ (Gambling) ಅಂಕುಶ ಹಾಕಲು ಸರ್ಕಾರ ಮುಂದಾಗಿದೆ. ಸರ್ಕಾರದಿಂದ ಹೊಸ ತಿದ್ದುಪಡಿ ಮಸೂದೆ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಲಾಗಿದೆ.
ಮುಂಬರುವ ಅಧಿವೇಶನದಲ್ಲಿ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಸ್ತಾಪಿತ ಕಾನೂನು ಪ್ರಕಾರ ಗೇಮ್ ಆಫ್ ಚಾನ್ಸ್ ಅಂದ್ರೆ ಯಾವುದೇ ಆಟ, ಸ್ಪರ್ಧೆಯ ಫಲಿತಾಂಶಗಳು ಅದೃಷ್ಟದಿಂದ ಅವಲಂಬಿತವಾಗಿರುವ, ಅನಿಶ್ಚಿತತೆಗಳಿಂದ ಕೂಡಿರುವ ಆನ್‌ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ಅಥವಾ ಪಂತ ಕಟ್ಟುವ ಚಟುವಟಿಕೆಗಳು ನಿಷಿದ್ಧ. ಪಂಥ ಕಟ್ಟುವುದು, ಹಣ ಇಡುವುದು, ಟೋಕನ್, ವರ್ಚುವಲ್ ಕರೆನ್ಸಿ ಅಥವಾ ಇ-ಫಂಡುಗಳನ್ನು ಇಟ್ಟು ಅಂತರ್ಜಾಲ, ಮೊಬೈಲ್ ಆಪ್ ಅಥವಾ ಇತರೆ ಡಿಜಿಟಲ್ ವೇದಿಕೆಗಳ ಮೂಲಕ ಆಡುವ ಆಟಗಳ ನಿಷೇಧ. ನೋಂದಾಯಿತವಲ್ಲದ ವೇದಿಕೆಗಳ ಮೂಲಕ ಇಂಥ ಆನ್ ಲೈನ್ ಬೆಟ್ಟಿಂಗ್, ಗ್ಯಾಮ್ಲಿಂಗ್ ಸೇವೆ ಕೊಡುವುದು ಸಹ ನಿಷೇಧಿಸಲು ಅವಕಾಶ ಇದೆ. ಇದನ್ನೂ ಓದಿ: ಕೆಡಿ ಟೀಸರ್ ಡೇಟ್ ಘೋಷಣೆ – ಪ್ರಚಾರದ ವೈಖರಿಯಲ್ಲಿದೆ ಮಿಸ್ಟರಿ!
ಈ ಪ್ರಾಧಿಕಾರಕ್ಕೆ ಕಾನೂನು, ಸಾರ್ವಜನಿಕ ಆಡಳಿತ, ತಂತ್ರಜ್ಞಾನದ ಅನುಭವ ಹೊಂದಿರುವವರನ್ನು ರಾಜ್ಯ ಸರ್ಕಾರ ಅಧ್ಯಕ್ಷರಾಗಿ ನೇಮಿಸಲು ಅವಕಾಶ ಇದೆ. ಜೊತೆಗೆ ಮೂವರು ಸದಸ್ಯರನ್ನು ನೇಮಕ ಮಾಡಲಾಗುತ್ತದೆ. ಇನ್ನೂ ಹೊಸ ಮಸೂದೆ ಪ್ರಕಾರ ನಿಯಮ ಉಲ್ಲಂಘಿಸಿದ್ರೆ 3 ವರ್ಷ ಜೈಲು, 5 ಲಕ್ಷ ದಂಡದ ಶಿಕ್ಷೆ ಗೊಳಪಡಿಸಬಹುದಾಗಿದೆ. ಇದನ್ನೂ ಓದಿ: ಹಾವಿನ ದ್ವೇಷ 12 ವರುಷ – ಹಾಗೇ ಪ್ರೀತಿಯೂ ಪುರಾಣದಿಂದಲೇ ಹುಟ್ಟಿದ್ದಾ?
ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳ (Online Betting Apps) ಹಾವಳಿ ಹೆಚ್ಚಾಗಿದೆ. ಬಹುತೇಕ ಯುವಕರು ಮತ್ತು ಮಧ್ಯಮ ವರ್ಗದ ಜನರು ಈ ಬೆಟ್ಟಿಂಗ್ ಆ್ಯಪ್ ಮಾರುಹೋಗಿ, ದುಡ್ಡು ಕಳಿದುಕೊಂಡು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇದೆಲ್ಲವನ್ನ ಅರಿತ ಬಾಗಲಕೋಟೆಯ (Bagalkot) ಇಳಕಲ್ ನಗರದ ನಿವಾಸಿ ನೇಕಾರ ಮೇಘರಾಜ್ ಗುದ್ದಟ್ಟಿ ಆನ್‌ಲೈನ್ ಆ್ಯಪ್‌ಗಳನ್ನು ನಿಷೇಧಿಸಿ ಎಂದು ವಿಭಿನ್ನ ಅಭಿಯಾನ ಹಮ್ಮಿಕೊಂಡಿದ್ದಾರೆ.
ಈ ಹಿಂದೆ ಮೇಘರಾಜ್, ಇಳಕಲ್ ಸೀರೆಯಲ್ಲಿ ಆಯೋಧ್ಯೆಯ ಶ್ರೀರಾಮ ಮಂದಿರ, ಸೂರ್ಯಯಾನ-3 ಯಶಸ್ವಿಯಾದಾಗ ವಿಜ್ಞಾನಿಗಳಿಗೆ ಶುಭಾಶಯ ತಿಳಿಸಿದ್ದರು. ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಶತದಿನ ಆಚರಿಸಲಿ ಎಂದು ಸೀರೆಯಲ್ಲಿ ನೇಯ್ದು ಶುಭಹಾರೈಸಿದ್ದರು.
ಬೆಂಗಳೂರು: ಸ್ವಿಗ್ಗಿ (Swiggy) ಕಂಪನಿಯ ಹಣದಲ್ಲಿ (Money) ಆನ್‌ಲೈನ್ ಬೆಟ್ಟಿಂಗ್ (Online Betting) ಆಡಿ, ಸುಮಾರು 7 ಕೋಟಿ ರೂ. ವಂಚಿಸಿದ (Fraud Case) ಉದ್ಯೋಗಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶ್ರೀಕಾಂತ್ (23) ಎಂದು ಗುರುತಿಸಲಾಗಿದೆ. ಒಂದು ವರ್ಷದಿಂದ ಆರೋಪಿ ಕಂಪನಿಯ ಹಣಕಾಸು ವ್ಯವಹಾರ ನೋಡಿಕೊಳ್ಳುತ್ತಿದ್ದ ಅರ್ನಸ್ಟ್ ಅಂಡ್ ಯಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆತ ಪ್ರತಿ ತಿಂಗಳು ಸ್ವಿಗ್ಗಿ ಖಾತೆಯಿಂದ 1 ರಿಂದ 2 ಕೋಟಿ ರೂ. ಹಣವನ್ನು ಎಗರಿಸುತ್ತಿದ್ದ ಎಂದು ತಿಳಿದು ಬಂದಿದೆ.
ಕಂಪನಿಯ ಹಿರಿಯ ಅಧಿಕಾರಿ ಶೋರಿ ರಾಜನ್ ನೀಡಿದ ದೂರಿನ ಪ್ರಕಾರ, ಅರ್ನಸ್ಟ್ ಅಂಡ್ ಯಂಗ್ ಕಂಪನಿ ಸ್ವಿಗ್ಗಿ ಸೇರಿದಂತೆ ಅನೇಕ ಕಂಪನಿಗಳಿಗೆ ಲೆಕ್ಕಪತ್ರ ನಿರ್ವಹಣೆ ಸೇವೆ ಒದಗಿಸುತ್ತಿದೆ. ಅದರಂತೆ ಕಂಪನಿಯ ಸಹಾಯಕ ಲೆಕ್ಕಧಿಕಾರಿ ಶ್ರೀಕಾಂತ್ ಅವರನ್ನ ಸ್ವಿಗ್ಗಿ ಕಂಪನಿಯ ಕಚೇರಿಯ ವಿದ್ಯುತ್ ಬಿಲ್ ಕಟ್ಟಲು ನೇಮಕ ಮಾಡಿಕೊಳ್ಳಲಾಗಿತ್ತು. ಆದ್ರೆ ಶ್ರೀಕಾಂತ್ ಪ್ರತಿ ತಿಂಗಳು ಸ್ವಿಗ್ಗಿ ಬ್ಯಾಂಕ್ ಖಾತೆಯಿಂದ 1 ಕೋಟಿ ರೂ. ನಿಂದ 2 ಕೋಟಿ ರೂ. ವಂಚಿಸಿದ್ದಾನೆ ಎಂದು ತಿಳಿಸಿದ್ದಾರೆ.
ಶ್ರೀಕಾಂತ್ ಅವರು 2024ರ ಜೂನ್‌ನಿಂದ ಡಿಸೆಂಬರ್ ತಿಂಗಳ ಅವಧಿಯಲ್ಲಿ ಒಟ್ಟು 6,86,51,160 ರೂ.ಗಳನ್ನ ಬಿಟಿಎನ್‌ಎಕ್ಸ್‌ಚೆಂಜ್ 247.ಕಾಂ (BetinExchange247.com) ಕಂಪನಿಗೆ ಹಾಕಿರುವುದು ಸ್ವಿಗ್ಗಿ ಕಂಪನಿಯ ಲೆಕ್ಕಪರಿಶೋಧನೆ ವೇಳೆ ಗೊತ್ತಾಗಿದೆ. ಈ ವಿಷಯವನ್ನು ಆಡಳಿತ ಮಂಡಳಿ ಹಿರಿಯ ಸಿಬ್ಬಂದಿ ಗಮನಕ್ಕೆ ತಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಳಿಕ ಈ ಬಗ್ಗೆ ಶ್ರೀಕಾಂತ್ ಅವರನ್ನು ವಿಚಾರಿಸಿದಾಗ, ಬಿಟಿಎನ್ ಕಂಪನಿಯು ಈ ಹಣವನ್ನು ಬೆಟ್ಟಿಂಗ್ ಆ್ಯಪ್‌ನಲ್ಲಿ ಠೇವಣಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನಮ್ಮ ಕಂಪನಿಗೆ ನಂಬಿಕೆ ದ್ರೋಹ ಮಾಡಿ, 7 ಕೋಟಿ ರೂ. ವಂಚನೆ ಮಾಡಿರುವ ಶ್ರೀಕಾಂತ್ ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.