Tag: online game

  • ಆನ್‌ಲೈನ್  ಗೇಮಿಂಗ್ ನಿಷೇಧ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು?

    ಆನ್‌ಲೈನ್ ಗೇಮಿಂಗ್ ನಿಷೇಧ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು?

    ಗಿನ ತಂತ್ರಜ್ಞಾನ ಯುಗದಲ್ಲಿ ಜನರು ಕಷ್ಟಪಟ್ಟು ದುಡಿದು ಹಣ ಗಳಿಸುವುದಕ್ಕಿಂತ ಹೆಚ್ಚಾಗಿ ಆನ್ಲೈನ್ ಮೂಲಕ ಹಣ ಗಳಿಸುವಲ್ಲಿ ತೊಡಗಿದ್ದಾರೆ. ಅದರಲ್ಲಿ ಎಷ್ಟೋ ಜನ ಹಣದಾಸೆಗೆ ಬಿದ್ದು ಕೋಟ್ಯಂತರ ರೂಪಾಯಿ ನಷ್ಟ ಮಾಡಿಕೊಂಡವರು ಇದ್ದಾರೆ. ಜೊತೆಗೆ ಹಣ ಗಳಿಸುವ ಆಮೀಷವನ್ನು ತೋರಿಸಿ ಅಥವಾ ಹಣವನ್ನು ಹೂಡಿಕೆ ಮಾಡುವಂತೆ ಕೆಲವು ಆನ್ಲೈನ್ ಗೇಮ್ಗಳು ಜನರನ್ನ ಪ್ರಚೋದನೆ ಮಾಡುತ್ತವೆ. ಹೀಗಾಗಿ ಈ ಸಂಬಂಧ ಕೇಂದ್ರ ಸರ್ಕಾರ ಆನ್ಲೈನ್ ಗೇಮ್ ಗಳನ್ನು ನಿಷೇಧಿಸುವ ಕಾಯಿದೆಯೊಂದನ್ನು ಜಾರಿ ಮಾಡಿದೆ.

    ಹೌದು, ಈ ಬಾರಿಯ ಲೋಕಸಭೆಯ ಅಧಿವೇಶನದಲ್ಲಿ ಹಣ ಕಟ್ಟಿ ಆಡಲಾಗುವ ಆನ್ಲೈನ್ ಗೇಮ್ ಗಳನ್ನು ನಿಷೇಧಿಸುವ ಮಸೂದೆಯು ಅಂಗೀಕಾರಗೊಂಡಿತ್ತು. 2025ರ ಆಗಸ್ಟ್ 20ರಂದು ಲೋಕಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗಿ, ಆಗಸ್ಟ್ 21ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿ ಕೊನೆಗೆ ಆಗಸ್ಟ್ 22ರಂದು ಈ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಅಂಕಿತ ಹಾಕಿದ್ದಾರೆ. ಈ ಮೂಲಕ ಈ ಕಾನೂನು ಹಣ ಕಟ್ಟಿ ಆಡಲಾಗುವ ಎಲ್ಲಾ ಆನ್ಲೈನ್ ಗೇಮ್ ಗಳನ್ನು ನಿಷೇಧಿಸುತ್ತದೆ.

    ಇದರ ಹಿಂದಿನ ಕಾರಣವೇನು?
    ಆನ್ಲೈನ್ ಗೇಮ್ ಒಂದು ವ್ಯಸನ ವಾಗಿ ಮಾರ್ಪಟ್ಟಿದೆ. ಇದಕ್ಕೆ ಮಾರುಹೋಗುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದಲ್ಲದೆ ಗೇಮಿಂಗ್ ಆಪ್ ಗಳ ಮೂಲಕ ಹಣ ಅಕ್ರಮ ವರ್ಗಾವಣೆ ಆಗುತ್ತಿದೆ. ಜೊತೆಗೆ ಹಣಕಾಸು ವಂಚನೆ ಪ್ರಕರಣಗಳು ಕೂಡ ಹೆಚ್ಚುತ್ತಿವೆ. ಹೀಗಾಗಿ ಇವುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಮಸೂದೆಯನ್ನು ರೂಪಿಸಿದೆ.

    ಈ ಕಾನೂನಿನಲ್ಲಿ ಏನಿದೆ?
    * ಆನ್ಲೈನ್ ಗೇಮ್ ಗಳಂತಹ ಚಟುವಟಿಕೆಗಳನ್ನ ಇದು ನಿಷೇಧಿಸುತ್ತದೆ. ಜೊತೆಗೆ ಈ ಗೇಮ್ ಗಳನ್ನು ಉತ್ತೇಜಿಸುವ ಹಾಗೂ ಜಾಹೀರಾತುಗಳನ್ನ ಪ್ರಕಟಿಸುವುದನ್ನು ಇದು ನಿಷೇಧಿಸುತ್ತದೆ.
    * ಆನ್ಲೈನ್ ಗೇಮ್ ಗಳಲ್ಲಿ ಕೆಲವು ಆಟಗಳು ಮನರಂಜನೆ ನೀಡುತ್ತವೆ. ಇವುಗಳನ್ನು ಸೇರಿಸಿ ಆನ್ಲೈನ್ ಜೂಜಾಟ ಹಾಗೂ ಲಾಟರಿಗಳಂತಹ ಆಟಗಳನ್ನು ಕೂಡ ಇದು ನಿಷೇಧಿಸುತ್ತದೆ
    * ಈ ಕಾನೂನಿನಡಿಯಲ್ಲಿ ಆನ್ಲೈನ್ ಗೇಮ್ ಆಡುವುದಕ್ಕೆ ಅವಕಾಶ ಹಾಗೂ ಪ್ರೋತ್ಸಾಹ ನೀಡುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಒಂದು ಕೋಟಿ ರೂ. ದಂಡ ವಿಧಿಸಲಾಗುವುದು.
    * ಜೊತೆಗೆ ಇಂತಹ ಆಟಗಳ ಕುರಿತು ಜಾಹೀರಾತು ಪ್ರಕಟಿಸಿದರೆ ಎರಡು ವರ್ಷಗಳವರೆಗೆ ಶಿಕ್ಷೆ ಮತ್ತು ಐವತ್ತು ಲಕ್ಷ ರೂ. ದಂಡ ವಿಧಿಸಲಾಗುವುದು.
    * ಇನ್ನು ಅಪರಾಧಗಳ ಪುನರಾವರ್ತನೆಯ ಆದರೆ ಮೂರರಿಂದ ಐದು ವರ್ಷ ಜೈಲು ಹಾಗೂ ಎರಡು ಕೋಟಿ ರೂ. ವರೆಗೆ ದಂಡ ವಿಧಿಸಲಾಗುವುದು

    * ಮೂಲಗಳ ಪ್ರಕಾರ, ಆನ್ಲೈನ್ ಗೇಮ್ಗಳಿಂದಾಗಿ ಭಾರತೀಯರು ಪ್ರತಿ ವರ್ಷ 15,000 ಕೋಟಿ ರೂ. ಯನ್ನು ಕಳೆದುಕೊಳ್ಳುತ್ತಿದ್ದಾರೆ. ಇನ್ನು ಕಳೆದ 31 ತಿಂಗಳಲ್ಲಿ ಈ ಆನ್ಲೈನ್ ಗೇಮ್ ವ್ಯಸನದಿಂದಾಗಿ ಕರ್ನಾಟಕದಲ್ಲಿ 32 ಜನರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಈ ಆನ್ಲೈನ್ ಗೇಮ್ ನಿಷೇಧದಿಂದಾಗಿ 400ಕ್ಕೂ ಅಧಿಕ ಕಂಪನಿಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

    ಆನ್ಲೈನ್ ಗೇಮ್ ಗಳಲ್ಲಿ ಮೂರು ವಿಭಾಗಗಳಿವೆ:
    – ರಿಯಲ್ ಮನಿ ಗೇಮ್ಸ್
    – ಇ ಸ್ಪೋರ್ಟ್ಸ್
    – ಸೋಶಿಯಲ್ ಗೇಮಿಂಗ್

    ಈ ಆಟಗಳ ಪೈಕಿ ನಿಜವಾದ ಹಣ ಹೂಡಿಕೆ ಮಾಡಿ ಆಡುವ ಆಟಗಳನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ. ಇನ್ನು ಇ-ಸ್ಪೋರ್ಟ್ಸ್ ಗಳಂತಹ ಆಟಗಳನ್ನು ಅನುಮತಿ ಪಡೆದು ಆಡಲು ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಸೋಶಿಯಲ್ ಗೇಮ್ಸ್ ಗಳು ಹಣವಿಲ್ಲದೆ ಆಡುವ ಆಟಗಳಿಗೆ ಅನುಮತಿ ನೀಡಲಾಗಿದೆ. ಜೊತೆಗೆ ಈ ಆಟಗಳನ್ನು ಆಡುವಾಗ ಬ್ಯಾಂಕ್ ಅಥವಾ ಪೇಮೆಂಟ್ ಆಪ್ ಮೂಲಕ ಹಣ ಕಳಿಸುವುದನ್ನು ನಿಷೇಧಿಸಲಾಗಿದೆ. ಗೂಗಲ್ ಜಾಹೀರಾತುಗಳು, ಮೆಟಾ ಜಾಹೀರಾತುಗಳ ಮೂಲಕ ಇಂತಹ ಗೇಮ್ ಗಳನ್ನ ಪ್ರಚಾರ ಮಾಡುವುದಕ್ಕೆ ನಿಷೇಧಿಸಲಾಗಿದೆ.

    ಇನ್ನು ಈ ಕಾಯ್ದೆಯು ಕೇಂದ್ರ ಸರ್ಕಾರಕ್ಕೆ ಆನ್ಲೈನ್ ಗೇಮ್ ಗಳನ್ನು ಗುರುತಿಸಲು, ವರ್ಗಿಕರಿಸಲು ಸಹಾಯಮಾಡುತ್ತದೆ. ಇದರಿಂದ ಸರ್ಕಾರವು ಅನಧಿಕೃತ ಆಪ್ ಗಳನ್ನು ಬ್ಲಾಕ್ ಮಾಡುವ ಹಾಗೂ ಸರ್ವರ್ ಗಳನ್ನು ಬ್ಲಾಕ್ ಮಾಡುವ ಅಧಿಕಾರವಿರುತ್ತದೆ. ಒಂದು ವೇಳೆ ಅಗತ್ಯವಿದ್ದರೆ ವಾರೆಂಟ್ ಇಲ್ಲದೆಯೂ ಕೂಡ ಬಂಧಿಸುವ ಅಧಿಕಾರವಿರುತ್ತದೆ.

    ಇನ್ನುಳಿದಂತೆ ಗೇಮಿಂಗ್ ಕಂಪನಿಗಳು ಕೆಲವು ಕಡ್ಡಾಯ ನಿಯಮಗಳನ್ನು ಜಾರಿಗೆ ತರುವಂತೆ ಸೂಚನೆ ನೀಡಲಾಗಿದೆ. ಈ ಪೈಕಿ 18 ವರ್ಷಕ್ಕಿಂತ ಕಡಿಮೆ ಕಡಿಮೆ ಇರುವವರು ಈ ಗೇಮ್ ಗಳನ್ನು ಆಡುವುದಕ್ಕೆ ಪೋಷಕರ ಅನುಮತಿ ಪಡೆಯಬೇಕು. ದೀರ್ಘಕಾಲ ಆಡುವುದಕ್ಕೆ ತಡೆ ಹಿಡಿಯಲಾಗಿದೆ ಮತ್ತು ಬಳಕೆದಾರರು ದೂರು ಸಲ್ಲಿಸಲು ಅವಕಾಶ ನೀಡುವಂತೆ ಸೂಚಿಸಲಾಗಿದೆ.

    ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಗೇಮಿಂಗ್ ಉದ್ಯಮ ತೀವ್ರವಾಗಿ ಬೆಳೆಯುತ್ತಿದ್ದು, 2025ರ ಹೊತ್ತಿಗೆ ಎಂಟು ಬಿಲಿಯನ್ ಡಾಲರ್ ನಷ್ಟು ಆಗುವ ಸಾಧ್ಯತೆ ಇದೆ. ಹೀಗಾಗಿ ಇವುಗಳಿಂದ ಜನರಲ್ಲಿ ಆರ್ಥಿಕ ಸಮಸ್ಯೆ, ಸಾಲ, ಆತ್ಮಹತ್ಯೆ, ಮೋಸ, ಕ್ರಮ ಹಣ ಹೂಡಿಕೆಯಂತಹ ತೊಂದರೆಗಳನ್ನು ತಂದು ಹಾಕುತ್ತದೆ. ಇಂತಹ ಸಮಸ್ಯೆಗಳಿಂದ ಜನರನ್ನ ರಕ್ಷಿಸಲು, ಯುವಕರನ್ನ ಸರಿದಾರಿಯತ್ತ ಕರೆದುಕೊಂಡು ಹೋಗುವುದು ಹಾಗೂ ಇಂತಹ ಆಟಗಳಲ್ಲಿ ಸ್ಪಷ್ಟ ನಿಯಮಗಳನ್ನ ರೂಪಿಸುವ ಮೂಲ ಉದ್ದೇಶವನ್ನು ಈ ಕಾನೂನು ಹೊಂದಿದೆ.

    ಈ ಕಾನೂನು ಜಾರಿ ಬಳಿಕ ಕೆಲವು ವಿಷಯಗಳು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಗೇಮ್ಗಳ ನಿಷೇಧದಿಂದಾಗಿ ಸಾವಿರಾರು ಜನರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಅದಲ್ಲದೆ ಸದ್ಯಕ್ಕೆ ಆನ್ಲೈನ್ ಗೇಮ್ ಗಳನ್ನು ನಿಷೇಧದಿಂದಾಗಿ ಕೆಲವರು ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

  • ಆನ್‌ಲೈನ್‌ ಗೇಮಿಂಗ್‌ ಮಸೂದೆ ಪಾಸ್‌ – ಪ್ರಚಾರ ಮಾಡಿದ್ರೂ ಜೈಲು ಶಿಕ್ಷೆ ಫಿಕ್ಸ್‌!

    ಆನ್‌ಲೈನ್‌ ಗೇಮಿಂಗ್‌ ಮಸೂದೆ ಪಾಸ್‌ – ಪ್ರಚಾರ ಮಾಡಿದ್ರೂ ಜೈಲು ಶಿಕ್ಷೆ ಫಿಕ್ಸ್‌!

    – ಲೋಕಸಭೆಯಲ್ಲಿ ಮಸೂದೆ ಮಂಡಿಸಿದ ಅಶ್ವಿನಿ ವೈಷ್ಣವ್‌
    – ಭಾರತದ ಯುವಕರನ್ನು ರಕ್ಷಿಸಲು ಮಸೂದೆ

    ನವದೆಹಲಿ: ಲೋಕಸಭೆಯಲ್ಲಿ ಆನ್‌ಲೈನ್‌ ಗೇಮಿಂಗ್‌ ಮಸೂದೆ (Online Gaming Bill, 2025) ಅಂಗೀಕಾರವಾಗಿದೆ. ವಿಪಕ್ಷಗಳ ಗದ್ದಲದ ನಡುವೆಯೂ ಈ ಮಸೂದೆಯನ್ನು ಸರ್ಕಾರ ಧ್ವನಿ ಮತದಿಂದ ಪಾಸ್‌ ಮಾಡಿಸುವಲ್ಲಿ ಯಶಸ್ವಿಯಾಗಿದೆ.

    ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡಿಸಿದರು. ಈ ಆಟಗಳಲ್ಲಿ ಹೆಚ್ಚುತ್ತಿರುವ ವ್ಯಸನ, ಹಣ ವರ್ಗಾವಣೆ ಮತ್ತು ಆರ್ಥಿಕ ವಂಚನೆಯ ಘಟನೆಗಳನ್ನು ತಡೆಯಲು ಮಸೂದೆ ಮಂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.

    ಈ ಮಸೂದೆಯು ಇ-ಸ್ಪೋರ್ಟ್ಸ್ ಮತ್ತು ಆನ್‌ ಲೈನ್ ಸಾಮಾಜಿಕ ಆಟಗಳನ್ನು ಪ್ರೋತ್ಸಾಹಿಸುತ್ತದೆ. ಆದರೆ ಹಾನಿಕಾರಕ ಆನ್‌ಲೈನ್ ಹಣದ ಗೇಮಿಂಗ್ ಸೇವೆಗಳು, ಅವುಗಳ ಜಾಹೀರಾತುಗಳು ಮತ್ತು ಹಣಕಾಸು ವ್ಯವಹಾರಗಳನ್ನು ನಿಷೇಧಿಸುತ್ತದೆ. ಆನ್‌ ಲೈನ್ ಫ್ಯಾಂಟಸಿ ಸ್ಪೋರ್ಟ್ಸ್‌ನಿಂದ ಹಿಡಿದು ಆನ್‌ ಲೈನ್ ಜೂಜು (ಪೋಕರ್, ರಮ್ಮಿ ಮತ್ತು ಇತರ ಕಾರ್ಡ್ ಆಟಗಳು) ಹಾಗೂ ಆನ್‌ ಲೈನ್ ಲಾಟರಿಗಳವರೆಗೆ ಎಲ್ಲಾ ಆನ್‌ ಲೈನ್ ಬೆಟ್ಟಿಂಗ್ ಮತ್ತು ಜೂಜಿನ ಚಟುವಟಿಕೆಗಳನ್ನು ಈ ಮಸೂದೆ ಕಾನೂನುಬಾಹಿರಗೊಳಿಸುತ್ತದೆ.

    ಹಣವನ್ನು ಮರುಪಾವತಿ ಮಾಡುತ್ತೇವೆ ಎಂದು ಭರವಸೆ ನೀಡಿ ಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗುವ ಈ ಗೇಮಿಂಗ್‌ ಆಟಗಳಿಂದ ಭಾರತದ ಯುವಕರನ್ನು ರಕ್ಷಿಸಲು ಈ ಮಸೂದೆಯನ್ನು ಸಿದ್ಧಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ


    ವರ್ಗೀಕರಣ, ನೋಂದಣಿ, ದೂರುಗಳ ಮೇಲ್ವಿಚಾರಣೆ ಮತ್ತು ಆಟವು ಹಣದ ಆಟವಾಗಿ ಅರ್ಹತೆ ಪಡೆಯುತ್ತದೆಯೇ ಎಂಬುದನ್ನು ನಿರ್ಧರಿಸುವುದು ಸೇರಿದಂತೆ ಆನ್‌ಲೈನ್ ಆಟಗಳನ್ನು ನಿಯಂತ್ರಿಸಲು ರಾಷ್ಟ್ರೀಯ ಪ್ರಾಧಿಕಾರವನ್ನು ಸ್ಥಾಪಿಸಲಾಗುತ್ತದೆ.

    ಪ್ರಸ್ತಾವಿತ ಮಸೂದೆಯಲ್ಲಿ ಮೂರು ಪ್ರಮುಖ ಅಂಶಗಳಿದೆ. ಒಂದನೇಯದ್ದು ಬೆಟ್ಟಿಂಗ್‌ನಂತ ಚಟುವಟಿಕೆಗಳನ್ನು ತಡೆಯುವುದು. ಎರಡನೇಯದ್ದು ಅಂತಹ ವೇದಿಕೆಗಳಿಗೆ ಜಾಹೀರಾತು ಮಾಡುವುದು ಅಥವಾ ಪ್ರಚಾರ ಮಾಡುವುದಕ್ಕೆ ನಿರ್ಬಂಧ. ಮೂರನೇಯದ್ದು ಬ್ಯಾಂಕುಗಳು ಮತ್ತು ಪಾವತಿ ವ್ಯವಸ್ಥೆಗಳು ಆನ್‌ಲೈನ್‌ ಗೇಮ್‌ಗಳಿಗೆ ಸಂಬಂಧಿಸಿದಂತೆ ಹಣವನ್ನು ವರ್ಗಾವಣೆಗೆ ನಿಷೇಧ ಹೇರುತ್ತದೆ.

    ಶಿಕ್ಷೆ ಏನು?
    ಅಕ್ರಮ ಹಣದ ಗೇಮಿಂಗ್ ಮಾಡಿದ್ದು ಸಾಬೀತಾದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು / ಅಥವಾ 1 ಕೋಟಿ ರೂ.ವರೆಗೆ ದಂಡವನ್ನು ಎದುರಿಸಬೇಕಾಗುತ್ತದೆ. ಆನ್‌ಲೈನ್‌ ಗೇಮ್‌ಗಳಿಗೆ ಜಾಹೀರಾತು ಮಾಡಿದವರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು / ಅಥವಾ 50 ಲಕ್ಷ ರೂ.ವರೆಗೆ ದಂಡವನ್ನು ವಿಧಿಸಬಹುದು. ಸಂಬಂಧಿತ ವಹಿವಾಟುಗಳಲ್ಲಿ ಭಾಗಿಯಾಗಿರುವ ಹಣಕಾಸು ಸಂಸ್ಥೆಗಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು/ ಅಥವಾ 1 ಕೋಟಿ ರೂ.ವರೆಗೆ ದಂಡವನ್ನು ಎದುರಿಸಬೇಕಾಗುತ್ತದೆ.

    ಒಂದು ವೇಳೆ ಮತ್ತೊಮ್ಮೆ ಈ ಅಪರಾಧ ಎಸಗಿದ್ದಲ್ಲಿ ದೀರ್ಘಾವಧಿಯ ಜೈಲು ಶಿಕ್ಷೆ ಮತ್ತು ಹೆಚ್ಚಿನ ದಂಡ ಸೇರಿದಂತೆ ಕಠಿಣ ಶಿಕ್ಷೆಗಳನ್ನು ಎದುರಿಸಬೇಕಾಗುತ್ತದೆ.

    ಈ ಅಪರಾಧ ಎಸಗಿದ್ದಲ್ಲಿ ಜಾಮೀನು ಸಿಗುವುದಿಲ್ಲ. ಶಂಕಿತ ಪ್ರಕರಣಗಳಲ್ಲಿ ತನಿಖೆ ಮಾಡಲು, ಶೋಧಿಸಲು ಮತ್ತು ಆಸ್ತಿಯನ್ನು ವಶಪಡಿಸಿಕೊಳ್ಳಲು ಮತ್ತು ವಾರಂಟ್ ಇಲ್ಲದೆ ಬಂಧಿಸಲು ಅಧಿಕಾರಿಗಳಿಗೆ ಅಧಿಕಾರ ನೀಡಲಾಗುತ್ತದೆ.

    ಆನ್‌ಲೈನ್‌ ಗೇಮ್‌ ಆಡಿದವರನ್ನು ಅಪರಾಧಿಗಳೆಂದು ಪರಿಗಣಿಸುವುದಿಲ್ಲ. ಬದಲಾಗಿ ಇವರನ್ನು ಬಲಿಪಶುಗಳು ಎಂದು ಪರಿಗಣಿಸಲಾಗುವುದು ಎಂದು ಸರ್ಕಾರ ಹೇಳಿದೆ.

    ನಾವು ‘ಸೂಕ್ತ ಜಾಗರೂಕತೆ’ ವಹಿಸಿದ್ದೇವೆ ಎಂದು ಸಾಬೀತುಪಡಿಸದ ಹೊರತು, ಈ ಕಾಯ್ದೆಯ ಅಡಿಯಲ್ಲಿ ಬರುವ ಅಪರಾಧಗಳಿಗೆ ಕಂಪನಿಗಳು ಮತ್ತು ಅವುಗಳ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಭಾಗಿಯಾಗಿರದ ಸ್ವತಂತ್ರ ನಿರ್ದೇಶಕರು ಅಥವಾ ಕಾರ್ಯನಿರ್ವಾಹಕೇತರ ನಿರ್ದೇಶಕರಿಗೆ ರಕ್ಷಣೆ ನೀಡಲಾಗಿದೆ.

     

    ಇ-ಸ್ಪೋರ್ಟ್ಸ್ ಕಾರ್ಯಕ್ರಮಗಳನ್ನು ಆಯೋಜಿಸಲು ಬೇಕಾದ ಮಾರ್ಗಸೂಚಿಗಳು ಮತ್ತು ಮಾನದಂಡಗಳನ್ನು ಕ್ರೀಡಾ ಸಚಿವಾಲಯದಿಂದ ರೂಪಿಸಲಾಗುತ್ತದೆ. ಇ-ಸ್ಪೋರ್ಟ್ಸ್‌ನ ಪ್ರಗತಿಗಾಗಿ ತರಬೇತಿ ಅಕಾಡೆಮಿಗಳು, ಸಂಶೋಧನಾ ಕೇಂದ್ರಗಳು ಮತ್ತು ತಂತ್ರಜ್ಞಾನ ವೇದಿಕೆಗಳನ್ನು ಸ್ಥಾಪನೆ ಮಾಡಲಾಗುತ್ತದೆ.

  • ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ಕಳೆದುಕೊಂಡ ಯುವಕ – ವಿಡಿಯೋ ಮಾಡಿಟ್ಟು ನೇಣಿಗೆ ಶರಣು

    ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ಕಳೆದುಕೊಂಡ ಯುವಕ – ವಿಡಿಯೋ ಮಾಡಿಟ್ಟು ನೇಣಿಗೆ ಶರಣು

    ದಾವಣಗೆರೆ: ಆನ್‍ಲೈನ್ ಗೇಮ್‍ನಲ್ಲಿ (Online Game) ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ.

    ಮೃತನನ್ನು ಸರಸ್ವತಿ ನಗರದ ಶಶಿ ಕುಮಾರ್ (25) ಎಂದು ಗುರುತಿಸಲಾಗಿದೆ. ಯುವಕ ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ನೊಂದು ಆನ್‍ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ. ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ಯುವಕ ನೋವು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: RTO ಕಣ್ತಪ್ಪಿಸಿ ಓಡಾಡ್ತಿದ್ದ ಫೆರಾರಿ ಕಾರು ಸೀಜ್‌ – 1.58 ಕೋಟಿ ತೆರಿಗೆ ಕಟ್ಟಲು ಸಂಜೆವರೆಗೆ ಡೆಡ್‌ಲೈನ್‌ ಫಿಕ್ಸ್‌

    ಡೆತ್‍ನೋಟ್‍ನಲ್ಲಿ ಗೇಮ್‍ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ. ನನ್ನಂತೆ ಹಣ ಕಳೆದುಕೊಂಡು ನೋವು ಅನುಭವಿಸುವುದು ಕಡಿಮೆಯಾಗಲಿ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.

    ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಸ್ಲೋ ಪಾಯ್ಸನ್ ನೀಡಿ ಪತಿಯ ಹತ್ಯೆ ಆರೋಪ – ವಿಡಿಯೋ ಸಾಕ್ಷಿ ಇದ್ರೂ ಪತ್ನಿಯನ್ನು ಬಂಧಿಸದ ಪೊಲೀಸರು

  • ಆನ್‌ಲೈನ್ ಗೇಮ್‌ನಲ್ಲಿ 20 ಸಾವಿರ ರೂ. ನಷ್ಟ – ಬುದ್ಧಿ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ

    ಆನ್‌ಲೈನ್ ಗೇಮ್‌ನಲ್ಲಿ 20 ಸಾವಿರ ರೂ. ನಷ್ಟ – ಬುದ್ಧಿ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ

    ತುಮಕೂರು: ಆನ್‌ಲೈನ್ ಗೇಮ್ (Online Game)ಆಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ತುಮಕೂರು (Tumkuru) ನಗರದ ಹೊರಪೇಟೆಯಲ್ಲಿ ನಡೆದಿದೆ.

    ನೇಣಿಗೆ ಶರಣಾದ ಯುವಕನನ್ನು ಟಿ.ಎಸ್.ಭರತ್ (24) ಎಂದು ಗುರುತಿಸಲಾಗಿದೆ. ಯುವಕ ಇತ್ತೀಚೆಗೆ ಆನ್‌ಲೈನ್ ಗೇಮ್‌ನಲ್ಲಿ 20 ಸಾವಿರ ರೂ. ಹಣ ಕಳೆದುಕೊಂಡಿದ್ದ. ಈ ವಿಚಾರ ಆತನ ತಾಯಿಗೆ ಗೊತ್ತಾಗಿ ಇನ್ನೂ ಆನ್‌ಲೈನ್ ಗೇಮ್ ಆಡಬೇಡ ಎಂದು ಬುದ್ಧಿ ಹೇಳಿದ್ದರು. ಇದೇ ವಿಚಾರಕ್ಕೆ ಯುವಕ ತನ್ನ ಮನೆ ಬಳಿಯ ಹಳೆ ಹೆಂಚಿನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

  • ಆನ್‌ಲೈನ್ ಗೇಮ್ ಹುಚ್ಚಾಟದಿಂದ ಲಕ್ಷ ಲಕ್ಷ ಸಾಲ – ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

    ಆನ್‌ಲೈನ್ ಗೇಮ್ ಹುಚ್ಚಾಟದಿಂದ ಲಕ್ಷ ಲಕ್ಷ ಸಾಲ – ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

    ಬೀದರ್: ಆನ್‌ಲೈನ್ ಗೇಮ್ ಹುಚ್ಚಾಟದಿಂದ ಲಕ್ಷಾಂತರ ರೂ. ಸಾಲ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ (Bhalki) ತಾಲೂಕಿನ ಜ್ಯೋತಿ ತಾಂಡದಲ್ಲಿ ನಡೆದಿದೆ.

    ಮೃತ ಯುವಕನನ್ನು 25 ವರ್ಷದ ವಿಜಯ್‌ಕುಮಾರ್ ಜಗನ್ನಾಥ ಹೊಳ್ಳೆ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಫಲಿಸಿತು ಅಪ್ಪನ ತ್ಯಾಗ – ಮಗನಿಗಾಗಿ ಸರ್ಕಾರಿ ಉದ್ಯೋಗ ತೊರೆದಿದ್ದ ನಿತೀಶ್‌ ರೆಡ್ಡಿ ತಂದೆ!

    ಎರಡು ದಿನಗಳ ಹಿಂದೆ ಮೈಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಎರಡೂ ದಿನಗಳ ಕಾಲ ನರಳಾಡಿ ಇಂದು (ಡಿ.28) ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.

    ಮೃತ ಯುವಕ ಬಿ.ಫಾರ್ಮಸಿ ಪದವೀಧರನಾಗಿದ್ದು, ಆನ್ಲೈನ್ ಗೇಮ್ ಹುಚ್ಚಿಗೆ ಬಿದ್ದು 5 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ. ಇದಕ್ಕೂ ಮುನ್ನ 10 ಲಕ್ಷ ರೂ. ಸಾಲ ಮಾಡಿದ್ದ, ಅದನ್ನು ಆತನ ಕುಟುಂಬಸ್ಥರು ತೀರಿಸಿದ್ದರು. ಅದಾದ ಬಳಿಕ ಮತ್ತೆ 5 ಲಕ್ಷ ರೂ. ಸಾಲ ಮಾಡಿದ್ದನು. ಈ ವಿಷಯ ಮನೆಯಲ್ಲಿ ಗೊತ್ತಾದರೆ ತೊಂದರೆ ಆಗುತ್ತದೆ ಎಂದು ಆತ್ಮಹತ್ಯೆಗೆ ಯತ್ನಿಸಿದ್ದನು. ಈ ಕುರಿತು ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ 6 ಮಂದಿ ವಿರುದ್ಧ ಎಫ್‍ಐಆರ್

  • ಗದಗ | ಆನ್‌ಲೈನ್ ಗೇಮ್‌ಗೆ ಮನನೊಂದು ಯುವಕ ನೇಣಿಗೆ ಶರಣು

    ಗದಗ | ಆನ್‌ಲೈನ್ ಗೇಮ್‌ಗೆ ಮನನೊಂದು ಯುವಕ ನೇಣಿಗೆ ಶರಣು

    ಗದಗ: ಆನ್‌ಲೈನ್ ಗೇಮ್‌ನಿಂದ (Online game) ಹಣ ಕಳೆದುಕೊಂಡು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ (Gadag) ನಗರದ ಹಳೆ ಜಿಲ್ಲಾಧಿಕಾರಿ ಕಚೇರಿಯ ವೃತ್ತದ ಬಳಿಯ ಲಾಡ್ಜ್‌ವೊಂದರಲ್ಲಿ ನಡೆದಿದೆ.

    ಮೃತ ಯುವಕನನ್ನು ಶಿರಹಟ್ಟಿ ಮೂಲದ 37 ವರ್ಷದ ಜಗದೀಶ್ ಹಳೆಮನಿ ಎಂದು ಗುರುತಿಸಲಾಗಿದ್ದು, ನೇಣಿಗೆ ಶರಣಾಗಿದ್ದಾನೆ.ಇದನ್ನೂ ಓದಿ: ಬಿಜೆಪಿ ಬಣ ಫೈಟ್‌ – ಶಾಸಕ ಯತ್ನಾಳ್‌ಗೆ ಹೈಕಮಾಂಡ್ ನೋಟಿಸ್‌

    ಮೃತ ಜಗದೀಶ್ ದೊಡ್ಡ ವ್ಯಾಪಾರಸ್ಥನಾಗಿದ್ದು, ಹಲವಾರು ತಿಂಗಳಿಂದ ಆನ್‌ಲೈನ್ ಗೇಮ್‌ನಲ್ಲಿ ಮಗ್ನನಾಗಿದ್ದ. ಆನ್‌ಲೈನ್ ಗೇಮ್‌ನಲ್ಲಿ ಆಟವಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ. ನಿನ್ನೆ (ನ.30) ರಾತ್ರಿ 10:30ರ ಸುಮಾರಿಗೆ ಶಿರಹಟ್ಟಿಯಿಂದ ಗದಗನಲ್ಲಿರುವ ಲಾಡ್ಜ್‌ವೊಂದಕ್ಕೆ ಬಂದಿದ್ದ. ಬಳಿಕ ಕಂಠಪೂರ್ತಿ ಕುಡಿದು, ಸ್ವಲ್ಪ ಊಟ ಮಾಡಿದ್ದಾನೆ. ನಂತರ ನಶೆಯಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಈ ಡೆತ್‌ನೋಟ್‌ನಲ್ಲಿ ಆನ್‌ಲೈನ್ ಗೇಮ್ ಬ್ಯಾನ್ ಮಾಡಬೇಕೆಂದು ಉಲ್ಲೇಖಿಸಿದ್ದಾನೆ. ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅವರು ಅಧಿವೇಶನದಲ್ಲಿ ಚರ್ಚೆ ಮಾಡಬೇಕು. ನನ್ನಂತೆ ಬಹಳ ಜನರು ಹಾಳಾಗಿದ್ದಾರೆ. ದಯವಿಟ್ಟು ಆನ್‌ಲೈನ್ ಗೇಮ್ ಬ್ಯಾನ್ ಮಾಡುವಂತೆ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಡೆತ್‌ನೋಟ್‌ನಲ್ಲಿ ಮನವಿ ಮಾಡಿಕೊಂಡಿದ್ದಾನೆ.

    ಇಂದು (ಡಿ.1) ಮಧ್ಯಾಹ್ನವಾದರೂ ರೂಮ್‌ನಿಂದ ಯುವಕ ಹೊರಬರದ ಕಾರಣ ಲಾಡ್ಜ್‌ನವರಿಗೆ ಅನುಮಾನ ವ್ಯಕ್ತವಾಗಿದ್ದು, ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ಕುಟುಂಬಸ್ಥರ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಯತ್ನಾಳ್ ಒಬ್ಬ ಜೋಕರ್, ಮಾನಸಿಕ ರೋಗಿ: ಈಶ್ವರ್ ಖಂಡ್ರೆ

  • ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ ನಷ್ಟ – ಮಹಾರಾಣಿ ವಿವಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

    ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ ನಷ್ಟ – ಮಹಾರಾಣಿ ವಿವಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

    ಬೆಂಗಳೂರು: ನಗರದ ಮಹಾರಾಣಿ ವಿವಿಯ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿಯೊಬ್ಬಳು ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ, ನಷ್ಟಕ್ಕೆ ಒಳಗಾಗಾದ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

    ನೇಣಿಗೆ ಶರಣಾದ ವಿದ್ಯಾರ್ಥಿನಿಯನ್ನು ಪಾವನಾ (19) ಎಂದು ಗುರುತಿಸಲಾಗಿದೆ. ಆಕೆ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಾಂಗ ಮಾಡುತ್ತಿದ್ದಳು. ಆಕೆ ನೇಣಿಗೆ ಶರಣಾದ ರೂಮ್ ನಂಬರ್ 17ರಲ್ಲಿ ಡೆತ್‍ನೋಟ್ ಪತ್ತೆಯಾಗಿದೆ. ಅದರಲ್ಲಿ ಆನ್‍ಲೈನ್ ಆಪ್‍ನಲ್ಲಿ 15,000 ರೂ. ಹೂಡಿಕೆ ಮಾಡಿರುವುದಾಗಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: NIA ದಾಳಿ- ಶಿರಸಿಯ ಅಬ್ದುಲ್ ಶುಕ್ಕೂರ್ ಮೇಲಿದೆ ಶಿವಮೊಗ್ಗ ಸ್ಫೋಟದ ಸಂಚಿನ ಆರೋಪ

    ಆನ್‍ಲೈನ್‍ನಲ್ಲಿ ಹಣ ಹೂಡಿಕೆ ಮಾಡಿ ಗೇಮ್‍ನಲ್ಲಿ 15 ಸಾವಿರ ರೂ. ನಷ್ಟ ಅನುಭವಿಸಿದ್ದಾಳೆ. ಇದಕ್ಕಾಗಿ ಆಕೆ ಸ್ನೇಹಿತರ ಬಳಿ ಸಾಲಮಾಡಿದ್ದು, 10 ಸಾವಿರ ರೂ. ಹೊಂದಿಸಿದ್ದ ಯುವತಿ, ಉಳಿದ 5 ಸಾವಿರ ರೂ. ಹೊಂದಿಸಲು ಆಗದೆ ಚಿಂತೆಗೆ ಒಳಗಾಗಿದ್ದಳು. ಕೊನೆಗೆ ಸಾಲ ತೀರಸಲು ಆಗದೆ ಆತಂಕದಿಂದ ಭಾನುವಾರ ರಾತ್ರಿ ಡೆತ್‍ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

    ಜೂ.16ರ ರಾತ್ರಿ 11:30ಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗುವ ವೇಳೆ ಚೇರ್ ಬಿದ್ದ ಶಬ್ದ ಕೇಳಿ ಬಂದಿತ್ತು. ಈ ವೇಳೆ ಪಕ್ಕದ ರೂಮ್‍ನ ವಿದ್ಯಾರ್ಥಿನಿಯರು ಬಂದು ನೋಡಿದಾಗ, ಆಕೆ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಪಾವನಾ ಗೆಳತಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಪ್ರತಿದಿನ ಸರಾಸರಿ 27 ಸೈಬರ್ ವಂಚನೆ ಪ್ರಕರಣ – 25,000 ಕೋಟಿ ರೂ. ಕಳೆದುಕೊಂಡ ಭಾರತೀಯರು

  • ಆನ್‌ಲೈನ್‌ ಜೂಜಿಗೆ ದಾಸನಾಗಿ ಹಣಕ್ಕಾಗಿ ಕಿಡ್ನಾಪ್‌ ನಾಟಕವಾಡಿದ!

    ಆನ್‌ಲೈನ್‌ ಜೂಜಿಗೆ ದಾಸನಾಗಿ ಹಣಕ್ಕಾಗಿ ಕಿಡ್ನಾಪ್‌ ನಾಟಕವಾಡಿದ!

    ಬೆಂಗಳೂರು: ಆನ್‌ಲೈನ್‌ ಜೂಜಿಗೆ (Online Game) ದಾಸನಾಗಿದ್ದವನು ಹಣಕ್ಕಾಗಿ ಕಿಡ್ನಾಪ್‌ ಮಾಡಿ ಇದೀಗ ಸಿಕ್ಕಿಬಿದ್ದ ಪ್ರಸಂಗವೊಂದು ಸಿಲಿಕಾನ್‌ ಸಿಟಿ ಬೆಂಗಳೂರಿನಲಿ ನಡೆದಿದೆ.

    ಆರೋಪಿಯನ್ನು ಜೀವನ್ ಎಂದು ಗುರುತಿಸಲಾಗಿದೆ. ಈತ ಆಕ್ಸ್‌ಫರ್ಡ್ ಕಾಲೇಜು ವಾರ್ಡನ್ ಆಗಿದ್ದು, ದುಡ್ಡಿಗಾಗಿ ಹೈಡ್ರಾಮಾ ಸೃಷ್ಠಿಸಿ ಇದೀಗ ಪೊಲೀಸರ ಅಥಿತಿಯಾಗಿದ್ದಾನೆ. ಇದನ್ನೂ ಓದಿ: ಗೋಬಿ, ಕಾಟನ್ ಕ್ಯಾಂಡಿ ಆಯ್ತು ಈಗ ಕಬಾಬ್, ಪಾನಿಪುರಿ ಟೆಸ್ಟ್‌ಗೆ ಪ್ಲಾನ್!

    ಜೀವನ್‌ ಚಿಕ್ಕಮ್ಮ ಸುನಂದಾ ಕೂಡ ಅದೇ ಕಾಲೇಜಿನಲ್ಲಿ ಕೆಲಸ ಮಾಡ್ತಿದ್ದರು. ಇತ್ತ ತಲೆಯ ಮೇಲೆ ಟೊಮೆಟೋ ಸಾಸ್ ಚೆಲ್ಲಿಕೊಂಡು ಜೀವನ್‌ ತನ್ನ ಚಿಕ್ಕಮ್ಮನಿಗೆ ಫೋಟೋಗಳನ್ನು ಕಳಿಸಿದ್ದಾನೆ. ಮಗನ ಮಾತು ಕೇಳಿದ ಕೂಡಲೇ ಗಾಬರಿಗೊಂಡಿರುವ ಸುನಂದಾ ಅವರು ಬೊಮ್ಮನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಜೀವನ್ ಹಣಕ್ಕಾಗಿ ಗೆಳೆಯರೊಂದಿಗೆ ಸೇರಿ ಕಿಡ್ನಾಪ್ ನಾಟಕವಾಡಿರೋದು ಬೆಳಕಿಗೆ ಬಂದಿದೆ.

    ಗೋಲ್ಡ್ 369 ಎಂಬ ಆನ್‌ಲೈನ್ ಆಪ್ ನಲ್ಲಿ‌ ಜೂಜಾಡಿ ಜೀವನ್ ಹಣ ಕಳೆದುಕೊಂಡಿದ್ದಾನೆ. ಮತ್ತೆ ಜೂಜಾಡಲು ಹಣವಿಲ್ಲದಿದ್ದಾಗ ಗೆಳೆಯರೊಂದಿಗೆ ಸೇರಿ ಕಿಡ್ನಾಪ್ ಆಗಿದ್ದೇನೆಂದು ನಾಟಕವಾಡಿದ್ದ. ಅಲ್ಲದೇ ಕಿಡ್ನಾಪ್ ಕಥೆ ಕಟ್ಟುವ ಮೂಲಕ 20 ಸಾವಿರ ಹಣವನ್ನ ಅಕೌಂಟ್ ಗೆ ಹಾಕಿಸಿಕೊಂಡಿದ್ದನು.

    ಸದ್ಯ ಬೊಮ್ಮನಹಳ್ಳಿ ಪೊಲೀಸರಿಂದ ಆರೋಪಿ ಜೀವನ್, ವಿನಯ್, ಪೂರ್ಣೇಶ್, ಪ್ರೀತಮ್ ಹಾಗೂ ರಾಜುವನ್ನು ಪೊಲೀಸರು ಬಂಧನ ಮಾಡಿದ್ದಾರೆ.
    ಆನೇಕಲ್ ನ ಬಿಂಗಿಪುರ ಮನೆಯೊಂದರಲ್ಲಿ ವಾಸವಾಗಿ ಆನ್‌ಲೈನ್‌ ಜೂಜಾಡ್ತಿದ್ದ ವೇಳೆ ಬಂಧಿಸಲಾಗಿದೆ.

  • ಡಬಲ್ ಹಣದ ಆಸೆಗೆ ಆನ್‌ಲೈನ್ ಗೇಮ್‌ನಲ್ಲಿ 79 ಲಕ್ಷ ರೂ. ಕಳೆದುಕೊಂಡ ಯುವಕ

    ಡಬಲ್ ಹಣದ ಆಸೆಗೆ ಆನ್‌ಲೈನ್ ಗೇಮ್‌ನಲ್ಲಿ 79 ಲಕ್ಷ ರೂ. ಕಳೆದುಕೊಂಡ ಯುವಕ

    – 18 ಎಕರೆ ಜಮೀನು ಮಾರಾಟ

    ರಾಯಚೂರು: ಡಬಲ್ ಹಣದ ಆಸೆಗೆ ಆನ್‌ಲೈನ್ ಗೇಮ್ (Online Game) ಆ್ಯಪ್‌ಗಳಿಂದ ಯುವಕನೋರ್ವ ಲಕ್ಷಾಂತರ ರೂ. ಹಣ ಕಳೆದುಕೊಂಡಿರುವ ಘಟನೆ ರಾಯಚೂರು (Raichur) ಜಿಲ್ಲೆಯಲ್ಲಿ ನಡೆದಿದೆ.

    ರಾಯಚೂರಿನ ಲಿಂಗಸುಗೂರಿನ ಮುದಗಲ್ ನಿವಾಸಿ ಸಹದೇವಪ್ಪ ಹಣ ಕಳೆದುಕೊಂಡ ಯುವಕ. ಅತಿ ಆಸೆಗೆ ಸುಮಾರು 79 ಲಕ್ಷ ರೂ. ಕಳೆದುಕೊಂಡಿದ್ದು, 18 ಎಕರೆ ಜಮೀನು ಸಹ ಮಾರಾಟಮಾಡಿದ್ದಾನೆ. ಕ್ರೈನೈನ್ ಡೇಸ್, ಅಪೆಕ್ಸ್ ನೈನ್, ರಾಧಾ ಎಕ್ಸಚೇಂಜ್, ಬೆಟ್ 365 ಆ್ಯಪ್‌ಗಳಲ್ಲಿ ಹಣ ಮಾಯಾವಾಗಿದೆ. ರಮ್ಮಿ, ಕ್ರಿಕೆಟ್, ಕ್ಯಾಸಿನೋ ಸೇರಿ ಇತರೆ ಆಟಗಳಿಗೆ ದುಡ್ಡು ಕಟ್ಟಿ ದಿವಾಳಿಯಾಗಿದ್ದು, ಆನ್‌ಲೈನ್ ಆ್ಯಪ್‌ಗಳು ಹಾಗೂ ಅವುಗಳ ಡೀಲರ್‌ಗಳಿಂದ ವಂಚನೆಗೆ ಒಳಗಾಗಿದ್ದಾನೆ. ಆ್ಯಪ್ ಡೀಲರ್ ಮೈನುದ್ದೀನ್, ಚನ್ನಬಸವ, ರುದ್ರಗೌಡ, ಹನುಮನಗೌಡ ಎಂಬವರಿಂದ ವಂಚನೆಯಾಗಿದೆ (Fraud) ಎಂದು ಆರೋಪಿಸಿದ್ದಾನೆ. ಇದನ್ನೂ ಓದಿ: ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರ ದಾರುಣ ಸಾವು

    ಹಣ ಪಡೆದು ಲಾಗಿನ್ ಐಡಿ, ಪಾಸ್ ವರ್ಡ್ ಕೊಡುತ್ತಿದ್ದ ಡೀಲರ್‌ಗಳು ಹಣ ದುಪ್ಪಟ್ಟು ಮಾಡಿಕೊಡುವ ಆಸೆ ತೋರಿಸಿ ವಂಚನೆ ಮಾಡಿದ್ದಾರೆ. 2014ರಿಂದ ಇಲ್ಲಿಯವರೆಗೆ ಆನ್‌ಲೈನ್ ಗೇಮ್‌ಗಳ ಮೇಲೆ ಲಕ್ಷಾಂತರ ರೂ. ಸುರಿದ ಯುವಕ ನ್ಯಾಯಕ್ಕಾಗಿ ರಾಯಚೂರು ಎಸ್‌ಪಿಗೆ ದೂರು ನೀಡಿದ್ದಾನೆ. ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆಯ ದೊಡ್ಡ ಜಾಲದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾನೆ. ಇದನ್ನೂ ಓದಿ: ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ – ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆನ್‍ಲೈನ್ ಗೇಮ್‍ನಲ್ಲಿ 5 ಕೋಟಿ ಗೆದ್ದು, 58 ಕೋಟಿ ಕಳೆದುಕೊಂಡ ಉದ್ಯಮಿ!

    ಆನ್‍ಲೈನ್ ಗೇಮ್‍ನಲ್ಲಿ 5 ಕೋಟಿ ಗೆದ್ದು, 58 ಕೋಟಿ ಕಳೆದುಕೊಂಡ ಉದ್ಯಮಿ!

    – ವಂಚಿಸಿದವನ ಮನೆಯಲ್ಲಿ ಸಿಕ್ತು 14 ಕೋಟಿ ನಗದು, 4 ಕೆಜಿ ಚಿನ್ನ

    ಮುಂಬೈ: ಉದ್ಯಮಿಯೊಬ್ಬರು ಆನ್‍ಲೈನ್ ಜೂಜಾಟದಲ್ಲಿ 5 ಕೋಟಿ ಗೆದ್ದು, ಬರೋಬ್ಬರಿ 58 ಕೋಟಿ ರೂ. ಕಳೆದುಕೊಂಡ ಅಚ್ಚರಿಯ ಘಟನೆಯೊಂದು ಮಹಾರಾಷ್ಟ್ರದ (Maharastra) ನಾಗ್ಪುರದಲ್ಲಿ ನಡೆದಿದೆ.

    ನಾಗ್ಪುರದ ಉದ್ಯಮಿಯೊಬ್ಬರು ಆನ್‍ಲೈನ್ ಜೂಜಾಟದಲ್ಲಿ (Online Game)  58 ಕೋಟಿ ಕಳೆದುಕೊಂಡರು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಶಂಕಿತ ವ್ಯಕ್ತಿಯೊಬ್ಬನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆಗ 14 ಕೋಟಿ ರೂಪಾಯಿ ನಗದು, 4 ಕೆಜಿ ಚಿನ್ನ ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ.

    ಆರೋಪಿಯನ್ನು ಅನಂತ್ ಅಲಿಯಾಸ್ ಸೊಂತು ನವರತನ್ ಜೈನ್ ಎಂದು ಗುರುತಿಸಲಾಗಿದೆ. ನಾಗ್ಪುರದಿಂದ 160 ಕಿಮೀ ದೂರದಲ್ಲಿರುವ ಗೊಂಡಿಯಾ ಸಿಟಿಯಲ್ಲಿರುವ ಈತನ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ಇದಕ್ಕೂ ಮುನ್ನವೇ ಜೈನ್ ದುಬೈಗೆ ಹಾರಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಉದ್ಯಮಿಗೆ ಪರಿಚಯವಾದ ಜೈನ್ ಆನ್‍ಲೈನ್ ಜೂಜಾಟದಿಂದ ಹಣ ಗಳಿಸಬಹುದೆಂದು ಪ್ರೇರೇಪಿಸಿದ್ದಾರೆ. ಆರಂಭದಲ್ಲಿ ನಿರಾಕರಿಸಿದ ಉದ್ಯಮಿ ಅಂತಿಮವಾಗಿ ಜೈನ್ ಮನವೊಲಿಕೆಗೆ ಒಪ್ಪಿಕೊಂಡರು. ಅಲ್ಲದೆ ಹವಾಲಾ ವ್ಯಾಪಾರಿಯ ಮೂಲಕ 8 ಲಕ್ಷವನ್ನು ವರ್ಗಾಯಿಸಿದ್ದಾರೆ ಎಂದು ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಹೇಳಿದರು.

    ಈ ಆಟವಾಡುತ್ತಾ ಉದ್ಯಮಿ ಬರೋಬ್ಬರಿ 58 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾನೆ. ಆದರೆ ಯಾವುದೇ ಹಣ ಬಂದಿಲ್ಲ. ಈ ವೇಳೆ ಈತನಿಗೆ ಕೇವಲ 5 ಕೋಟಿ ರೂ. ಮಾತ್ರ ಲಾಭದ ರೀತಿಯಲ್ಲಿ ಗೇಮ್ ಮೂಲಕ ವಾಪಸ್ ಬಂದಿದೆ. ಇದರಿಂದ ಅನುಮಾನಗೊಂಡ ಉದ್ಯಮಿ ಹಣ ವಾಪಸ್ ನೀಡುವಂತೆ ಆರೋಪಿಗೆ ಕೇಳಿದ್ರೆ ಇದಕ್ಕೆ ಆತ ಒಪ್ಪಲಿಲ್ಲ. ಹೀಗಾಗಿ ಹಣ ಕಳೆದುಕೊಂಡ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದಾರೆ.

    ದೂರಿನ ಆಧಾರದ ಮೇಲೆ ಆರೋಪಿ ಜೈನ್ ಮನೆಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿ 14 ಕೋಟಿ ರೂಪಾಯಿ ನಗದು, 4 ಕೆ.ಜಿ ಬಂಗಾರ ಪತ್ತೆಯಾಗಿದೆ. ಹಣ, ಚಿನ್ನ ಸಿಗುತ್ತಿದ್ದಂತೆ ಆರೋಪಿಯು ದುಬೈಗೆ ಎಸ್ಕೇಪ್ ಆಗಿದ್ದಾನೆ ಎಂದು ಹೇಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]