Tag: Online Portal

  • ನ್ಯೂಸ್‌ಕ್ಲಿಕ್ ಆನ್‌ಲೈನ್ ಪೋರ್ಟಲ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

    ನ್ಯೂಸ್‌ಕ್ಲಿಕ್ ಆನ್‌ಲೈನ್ ಪೋರ್ಟಲ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

    ನವದೆಹಲಿ: ಚೀನಾ (China) ಜೊತೆಗೆ ಆರ್ಥಿಕ ಸಂಬಂಧ ಹೊಂದಿರುವ ಆರೋಪದ ಮೇಲೆ ನ್ಯೂಸ್‌ಕ್ಲಿಕ್ (NewsClick) ಆನ್‌ಲೈನ್ ಪೋರ್ಟಲ್‌ಗೆ (Online Portal) ಸಂಬಂಧಿಸಿದ ಪತ್ರಕರ್ತರು (Journalist) ಮತ್ತು ಉದ್ಯೋಗಿಗಳ ಮನೆಗಳ ಮೇಲೆ ಮಂಗಳವಾರ ಬೆಳಗ್ಗೆ ದೆಹಲಿ ಪೊಲೀಸರ ವಿಶೇಷ ತಂಡ ದಾಳಿ (Raid) ನಡೆಸಿದೆ. 100ಕ್ಕೂ ಹೆಚ್ಚು ಸ್ಥಳಗಳಲ್ಲಿ 500ಕ್ಕೂ ಹೆಚ್ಚು ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

    ಅಕ್ಟೋಬರ್ 2 ರಂದು ದೆಹಲಿ ಪೊಲೀಸ್ (Delhi Police) ವಿಶೇಷ ಕೋಶದ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಪ್ರಕರಣವನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ನಿರ್ಧರಿಸಿತ್ತು. ಅಂತಯೇ ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮತ್ತು ಮುಂಬೈನ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಸಮರ – ಮತ್ತೆ 800ಕ್ಕೂ ಅಧಿಕ ಮಂದಿಯ ಬಂಧನ

    ಮೂಲಗಳ ಪ್ರಕಾರ ದಾಳಿಗೆ ಒಳಗಾದವರ ಹೆಸರುಗಳನ್ನು ಎ, ಬಿ, ಸಿ ಎಂದು ವರ್ಗಗಳಾಗಿ ವಿಂಗಡಿಸಲಾಗಿತ್ತು. ಎ ವರ್ಗಕ್ಕೆ ಸೇರಿದವರನ್ನು ಬಂಧಿಸಲಾಗಿದೆ. ಬಿ ಮತ್ತು ಸಿ ನ್ಯೂಸ್ ಪೋರ್ಟಲ್‌ನ ಪತ್ರಕರ್ತರ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳಿಂದ ಡೇಟಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ವಿಚಾರಣೆಗಾಗಿ ದೆಹಲಿ ಪೊಲೀಸ್ ವಿಶೇಷ ಸೆಲ್ ಕಚೇರಿಗೆ ಕರೆತರಲಾಯಿತು. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ

    ಆಗಸ್ಟ್ 17ರಂದು ಕಟ್ಟುನಿಟ್ಟಾದ ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣವನ್ನು ಆಧರಿಸಿ ದೆಹಲಿಯ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದೆಹಲಿ ಮತ್ತು ನೋಯ್ಡಾ ಮತ್ತು ಗಾಜಿಯಾಬಾದ್‌ನ ನೆರೆಯ ಪ್ರದೇಶಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ದಾಳಿ ನಡೆಸಿತು. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ

    ಮೂರು ವರ್ಷಗಳ ಅವಧಿಯಲ್ಲಿ ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ 38.05 ಕೋಟಿ ರೂ.ಗಳನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಹೀಗೆ ಸ್ವೀಕರಿಸಿದ ಹಣವನ್ನು ಗೌತಮ್ ನವ್ಲಾಖಾ ಮತ್ತು ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಸಹಚರರು ಸೇರಿದಂತೆ ಹಲವಾರು ವಿವಾದಾತ್ಮಕ ಪತ್ರಕರ್ತರಿಗೆ ಹಂಚಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಕಾಂಗ್ರೆಸ್‌ ಮುಕ್ತ ಅವಕಾಶ ಕೊಟ್ಟಿದೆ; ಉದಯಪುರ ಟೈಲರ್‌ ಹತ್ಯೆ ಖಂಡಿಸಿದ ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದರಸಾಗಳು ಹಣಕಾಸಿನ ಮೂಲವನ್ನು ಬಹಿರಂಗಪಡಿಸುವಂತೆ ಪೊಲೀಸರ ಸೂಚನೆ

    ಮದರಸಾಗಳು ಹಣಕಾಸಿನ ಮೂಲವನ್ನು ಬಹಿರಂಗಪಡಿಸುವಂತೆ ಪೊಲೀಸರ ಸೂಚನೆ

    ದಿಸ್ಪುರ್: ಮದರಸಾಗಳು ತಮ್ಮ ಹಣಕಾಸಿನ ಮೂಲಗಳನ್ನು ಬಹಿರಂಗಪಡಿಸುವಂತೆ ಅಸ್ಸಾಂ ಪೊಲೀಸರು ಇಂದು ಸೂಚಿಸಿದ್ದಾರೆ.

    ರಾಜ್ಯದಲ್ಲಿ ಜಿಹಾದಿ ಚಟುವಟಿಕೆಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿರುವ ಭಾಗವಾಗಿ ಈ ನಿರ್ದೇಶನ ನೀಡಲಾಗಿದೆ. ಕಾನೂನುಬಾಹಿರ ಚಟುವಟಿಕೆ ತಡೆಯುವ ಸಲುವಾಗಿ ಶೀಘ್ರದಲ್ಲೇ ಆನ್‌ಲೈನ್ ಪೋರ್ಟಲ್ ತೆರೆಯಲಾಗುತ್ತಿದೆ. ಈ ಪೂರ್ಟಲ್‌ನಲ್ಲೇ ಹಣಕಾಸಿನ ಮೂಲ ಹಾಗೂ ಮದರಸಾದ ವಿವರಗಳನ್ನು ಬಹಿರಂಗಪಡಿಸುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ತಿಂಗಳಿಗೊಮ್ಮೆ ಗೊಂಬೆ ಕುಣಿಸಲು ಬರ್ತಾರ – ಹೆಚ್‌ಡಿಕೆ ವ್ಯಂಗ್ಯ 

    ASSAM MADARASA MADRASA

    ಭಯೋತ್ಪಾದಕ ಸಂಘಟನೆಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಇತ್ತೀಚೆಗೆ ಮೂರು ಮದರಸಾಗಳನ್ನು ನೆಲಸಮಗೊಳಿಸಲಾಯಿತು. ಈ ಸಂಬಂಧವಾಗಿ ಡಿಜಿಪಿ ಭಾಸ್ಕರ್ ಜ್ಯೋತಿ ಮಹಂತ ಇಂದು ಮುಸ್ಲಿಂ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳೊಂದಿಗೆ ಸಭೆ ನಡೆಸಿದರು. ಇದನ್ನೂ ಓದಿ: CPI(M) ಪಕ್ಷ ವಿರೋಧ ಹಿನ್ನೆಲೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನಿರಾಕರಿಸಿದ ಕೆ.ಕೆ ಶೈಲಜಾ

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಹಿತಿ ಪ್ರಕಾರ ರಾಜ್ಯದಲ್ಲಿ 1 ಸಾವಿರ ಖಾಸಗಿ ಮದರಸಾಗಳಿವೆ. ಅವುಗಳಲ್ಲಿ ಕೆಲವು ನೋಂದಾಯಿಸಿಲ್ಲ. ಹಾಗಾಗಿ ಮುಸ್ಲಿಂ ಸಂಘಟನೆಗಳ ಪ್ರತಿನಿಧಿಗಳನ್ನು ಹೊಂದಿರುವ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಈ ಸಮಿತಿ ಮದರಸಾಗಳು ತಮ್ಮ ವಿವರ, ಜಮೀನು, ಶಿಕ್ಷಕರು ಮತ್ತು ಹಣಕಾಸಿನ ಮೂಲಗಳ ವಿವರಗಳನ್ನು ಬಹಿರಂಗಪಡಿಸುವಂತೆ ನೋಡಿಕೊಳ್ಳಲಿದೆ. ಇನ್ನು 6 ತಿಂಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

    madrasas

    ಈ ಹಿಂದೆಯೂ ಬಿಜೆಪಿ ನೇತೃತ್ವದ ಸರ್ಕಾರ ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 800 ಮದರಸಾಗಳನ್ನು ಮುಚ್ಚಿಸಿತ್ತು. ಕಳೆದ ಮಾರ್ಚ್ ತಿಂಗಳಿನಿಂದ 37 ಮಂದಿ ಮದರಸಾ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]