Tag: Open Heart Surgery

  • 5 ರೂ. ಡಾಕ್ಟರ್ ಶಂಕರೇಗೌಡರಿಗೆ ಓಪನ್ ಹಾರ್ಟ್ ಸರ್ಜರಿ

    5 ರೂ. ಡಾಕ್ಟರ್ ಶಂಕರೇಗೌಡರಿಗೆ ಓಪನ್ ಹಾರ್ಟ್ ಸರ್ಜರಿ

    ಬೆಂಗಳೂರು: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ರೂಪಾಯಿ ಡಾಕ್ಟರ್ ಎಂದೇ ಫೇಮಸ್ ಆಗಿದ್ದ ಶಂಕರೇಗೌಡ ಅವರಿಗೆ ಇಂದು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಓಪನ್ ಹಾರ್ಟ್ ಸರ್ಜರಿ ಮಾಡಲಾಗಿದೆ.

    ನಗರದ ಪೋರ್ಟೀಸ್ ಆಸ್ಪತ್ರೆಯಲ್ಲಿ ಬೆಳಗ್ಗೆ 8 ಗಂಟೆಗೆ ಶಂಕರೇಗೌಡರನ್ನು ಆಪರೇಷನ್ ಥೇಟರ್‍ಗೆ ಕರೆದುಕೊಂಡು ಹೋದ 8 ಮಂದಿ ನುರಿತ ವೈದ್ಯರ ತಂಡ ಸರ್ಜರಿ ಮಾಡಿದೆ. ಕಳೆದ ಒಂದು ತಿಂಗಳ ಹಿಂದೆ ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿತ್ತು. ಈ ಹಿನ್ನೆಲೆ ಮೈಸೂರಿನ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದರಿಂದ ತಾತ್ಕಾಲಿಕವಾಗಿ ಸ್ಟಂಟ್ ಅಳವಡಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಬೈಪಾಸ್ ಸರ್ಜರಿ ಮಾಡುವುದಾಗಿ ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದರು. 5ರೂ. ಡಾಕ್ಟರ್ ಎಂದೇ ಫೇಮಸ್ ಆಗಿದ್ದ ಶಂಕರೇಗೌಡಗೆ ಹೃದಯಾಘಾತ

    ಇಷ್ಟು ದಿನ ಲವಲವಿಕೆಯಿಂದ ಚಿಕಿತ್ಸೆಗೆ ಸ್ಪಂದಿಸಿ ಆರಾಮವಾಗಿದ್ದ ಶಂಕರೇಗೌಡ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡ ಹಿನ್ನೆಲೆ ಮೇ 30ರಂದು ಡಿಸ್ಚಾರ್ಜ್ ಆಗಿದ್ದರು. ಹೃದ್ರೋಗ ತಜ್ಞರ ಸಲಹೆ ಮೇರೆಗೆ ಇದೀಗ ಶಂಕರೇಗೌಡರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದಾರೆ.

    Live Tv